Tag: ಮೆಹಬೂಬ ಮುಫ್ತಿ

  • ಮುಸ್ಲಿಮರ ಮನೆ, ಬದುಕು ಕಸಿಯಲು ಬಿಜೆಪಿ ನಾಯಕರಲ್ಲೇ ಪೈಪೋಟಿ: ಮುಫ್ತಿ

    ಮುಸ್ಲಿಮರ ಮನೆ, ಬದುಕು ಕಸಿಯಲು ಬಿಜೆಪಿ ನಾಯಕರಲ್ಲೇ ಪೈಪೋಟಿ: ಮುಫ್ತಿ

    ಶ್ರೀನಗರ: ಮಧ್ಯಪ್ರದೇಶದ ಖರ್ಗೋನ್‌ನಲ್ಲಿ ರಾಮನವಮಿ ವೇಳೆ ನಡೆದ ಹಿಂಸಾಚಾರ ಖಂಡಿಸಿ ಬಿಜೆಪಿ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ.

    ಭಾರತದ ಸಂವಿಧಾನವನ್ನು ನಾಶಪಡಿಸುವ ಬಿಜೆಪಿಯವರ ಪ್ರತಿಕಾರವು ಈಗ ಅಲ್ಪಸಂಖ್ಯಾತರ ಮನೆಗಳನ್ನು ತಲುಪಿದೆ. ಬಿಜೆಪಿ ನಾಯಕರು ಮುಸ್ಲಿಮರ ಮನೆ, ಬದುಕು ಮತ್ತು ಘನತೆ ಎಲ್ಲವನ್ನೂ ಕಸಿದುಕೊಳ್ಳುವಲ್ಲಿ ಒಬ್ಬರನ್ನೊಬ್ಬರು ಮೀರಿಸುತ್ತಿದ್ದಾರೆ ಎಂದು ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ?

    ಕಾಶ್ಮೀರಿ ಪಂಡಿತರು ವಲಸೆ ಹೋಗಲು ಒತ್ತಾಯಿಸಿದಾಗ ಕಾಶ್ಮೀರಿ ಮುಸ್ಲಿಮರಾದ ನಾವು ಮೂಕ ಪ್ರೇಕ್ಷಕರಾಗಿದ್ದೆವು ಎಂದು ಆರೋಪಿಸಲಾಗಿತ್ತು. ಭಾರತದ ಕಲ್ಪನೆಯನ್ನು ಬಿಜೆಪಿ ಧ್ವಂಸಗೊಳಿಸುತ್ತಿರುವುದು ಈ ಸಂದರ್ಭದಲ್ಲಿ ಬಹುಸಂಖ್ಯಾತ ಸಮುದಾಯದ ಕ್ರಿಮಿನಲ್ ಮೌನವು ಆತಂಕಕಾರಿಯಾಗಿದೆ ಎಂದು ಟ್ವೀಟ್‌ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ.

    ರಾಮನವಮಿ ವೇಳೆ ಖಾರ್ಗೋನ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಹತ್ತಾರು ಮನೆಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ರಾಮನವಮಿ ವೇಳೆ ದಾಳಿ ನಡೆಸಿದ್ದಾರೆಂದು ಆರೋಪಿಸಿ ಜಿಲ್ಲಾಡಳಿತ ಮತ್ತು ಪೊಲೀಸರು, ಹಲವರ ಮನೆಗಳನ್ನು ನೆಲಸಮಗೊಳಿಸಿದರು. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್

  • ಜಮ್ಮು-ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಗೃಹ ಬಂಧನ

    ಜಮ್ಮು-ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಗೃಹ ಬಂಧನ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕ್ಷೇತ್ರ ಪುನರ್‌ ವಿಂಗಡಣಾ ಆಯೋಗದ ಕರಡು ಪ್ರಸ್ತಾವವನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ತಡೆಯುವುದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

    ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್‌ ಅಬ್ದುಲ್ಲಾ, ಮೆಹಬೂಬ ಮುಫ್ತಿ, ಓಮರ್‌ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಅವರು ವಾಸವಾಗಿರುವ ಶ್ರೀನಗರದ ಗುಪ್ಕರ್‌ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಎಲ್‌ಪಿಜಿ ಬಳಕೆದಾರರಿಗೆ ಶುಭಸುದ್ದಿ – ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 102.5 ರೂ. ಕಡಿತ

    ರಾಜಕೀಯ ಮುಖಂಡರ ಮನೆಗಳ ಹೊರಗೆ ಪೊಲೀಸರು ಭದ್ರತಾ ಟ್ರಕ್‌ಗಳನ್ನು ನಿಯೋಜಿಸಿದ್ದು, ಅಲ್ಲಿಂದ ಯಾರಿಗೂ ಒಳ ಹೋಗಲು ಅಥವಾ ಹೊರ ಬರಲು ಅವಕಾಶ ನೀಡುತ್ತಿಲ್ಲ.

    ಜಮ್ಮು ಪ್ರಾಂತ್ಯದಲ್ಲಿ ಆರು, ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಒಂದು ವಿಧಾನಸಭಾ ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಸೇರ್ಪಡೆ ಮಾಡುವ ಕರಡು ಪ್ರಸ್ತಾವವನ್ನು ವಿರೋಧಿಸಿ ಪ್ರತಿಭಟನೆ ನಡೆಸುವುದಾಗಿ ಗುಪ್ಕಾರ್‌ ಅಲಯನ್ಸ್‌ನ ನೇತೃತ್ವ ವಹಿಸಿರುವ ಫಾರೂಕ್‌ ಅಬ್ದುಲ್ಲಾ ಅವರು ಘೋಷಿಸಿದ್ದರು.

    ಮಾಜಿ ಸಿಎಂ ಓಮರ್‌ ಅಬ್ದುಲ್ಲಾ ಅವರು ಫೋಟೀ ಸಹಿತ ಟ್ವೀಟ್‌ ಮಾಡಿದ್ದು, ತಮ್ಮ ಹಾಗೂ ತಂದೆ, ಸಹೋದರಿಯರ ಮನೆಗೆ ಬೀಗ ಹಾಕಲಾಗಿದೆ. ಗೇಟ್‌ಗಳ ಹೊರಗೆ ಭದ್ರತಾ ಟ್ರಕ್‌ಗಳನ್ನು ನಿಯೋಜಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಜನರನ್ನು ಸಜ್ಜುಗೊಳಿಸಬೇಕಾದ ಸಚಿವರು, ಶಾಸಕರಿಗೆ ಸೋಂಕು ತಗುಲಿರುವುದು ಆತಂಕಕಾರಿ: ಅಜಿತ್‌ ಪವಾರ್‌

    ಕ್ಷೇತ್ರ ಪುನರ್‌ ವಿಂಗಡಣಾ ಆಯೋಗದ ಕರಡು ಪ್ರಸ್ತಾವವನ್ನು ರಾಜಕೀಯ ನಾಯಕರಷ್ಟೇ ಅಲ್ಲ, ಇಲ್ಲಿನ ಎಲ್ಲ ವರ್ಗದ ಜನರು ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷಗಳ ನಿಲುವಾಗಿದೆ.

  • ಭಾರತದೊಳಗೆ ನುಸುಳುತ್ತಿದ್ದ ಆರು ಉಗ್ರರನ್ನು ಸೆದೆಬಡಿದ ಭಾರತೀಯ ಸೇನೆ

    ಭಾರತದೊಳಗೆ ನುಸುಳುತ್ತಿದ್ದ ಆರು ಉಗ್ರರನ್ನು ಸೆದೆಬಡಿದ ಭಾರತೀಯ ಸೇನೆ

    ಶ್ರೀನಗರ: ಭಾತರದೊಳಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ ಆರು ಜನ ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

    ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೆರನ್ ಸೆಕ್ಟರ್ ನಲ್ಲಿ ಒಳ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಆರು ಜನ ಭಯೋತ್ಪಾದಕರನ್ನು ಭಾರತೀಯ ಸೇನೆ ಮಟ್ಟ ಹಾಕುವಲ್ಲಿ ಯಶಸ್ವಿಯಾಗಿದೆ.

    ಕಳೆದ ಎರಡು ದಿನಗಳ ಹಿಂದೆ ಶ್ರೀನಗರದಿಂದ 94 ಕಿಮೀ ದೂರದಲ್ಲಿರುವ ಕೆರನ್ ಸೆಕ್ಟರ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಇನ್ನೋರ್ವ ಯೋಧ ಗಾಯಗೊಂಡಿದ್ದರು. ಸ್ಥಳದಲ್ಲಿ ಸೈನಿಕರು ಪಹರೆ ನಡೆಸುತ್ತಿದ್ದ ವೇಳೆ ಒಳ ನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರು ಯೋಧರ ಗುಂಡಿಗೆ ಬಲಿಯಾಗಿದ್ದಾರೆ.

    ಸೇನಾ ಪಡೆಗಳು ಇನ್ನೂ ಸ್ಥಳದಲ್ಲಿಯೇ ಪಹರೆ ಕಾಯುತ್ತಿದ್ದು, ಅಡಗಿಕೊಂಡಿರುವ ಭಯೋತ್ಪಾದಕರಿಗಾಗಿ ಶೋಧ ನಡೆಸುತ್ತಿದ್ದಾರೆ. ಕಳೆದ ಎರಡು ವಾರಗಳಲ್ಲಿ ಇಂದು ಹತರಾದ 6 ಜನ ಭಯೋತ್ಪಾದಕರನ್ನು ಒಳಗೊಂಡಂತೆ ಒಟ್ಟು 21 ಉಗ್ರರು ಹತರಾಗಿದ್ದಾರೆ.

    ಕಳೆದರೆಡು ದಿನಗಳ ಹಿಂದೆಯಷ್ಟೇ ಕೇಂದ್ರ ಗೃಹ ಮಂತ್ರಿ ರಾಜನಾಥ ಸಿಂಗ್ ಸೇರಿದಂತೆ ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಹಾಗೂ ಪ್ರಧಾನಮಂತ್ರಿ ಕಚೇರಿಯ ರಾಜ್ಯ ಮಂತ್ರಿ ಜಿತೇಂದ್ರ ಸಿಂಗ್ ಕುಪ್ವಾರಾ ಜಿಲ್ಲೆಗೆ ಭೇಟಿ ನೀಡಿ ಗಡಿ ಪ್ರದೇಶದ ಜನರನ್ನು ಭೇಟಿಯಾಗಿದ್ದರು.

    ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದಲ್ಲಿ ರಂಜಾನ್ ಒಪ್ಪಂದ ಮಾಡಿಕೊಂಡರು ಭಯೋತ್ಪಾದಕರ ದಾಳಿಗಳು ಇನ್ನೂ ನಿಂತಿಲ್ಲ. ಹಾಗಾಗಿ ರಂಜಾನ್ ಸಂದರ್ಭದಲ್ಲಿ ಈ ದಾಳಿಗಳು ನಡೆದಲ್ಲಿ ಸೇನೆ ಸಮರ್ಥವಾಗಿ ಮುಕ್ತವಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಿ ಎಂದು ರಾಜನಾಥ್ ಸಿಂಗ್ ಆದೇಶಿಸಿದ್ದಾರೆ.