Tag: ಮೇಕೆದಾಟು ಪಾದಾಯಾತ್ರೆ

  • ಕಾಂಗ್ರೆಸ್ಸಿಗರು ಮಾಡ್ತಿರೋದು ಪಾದಯಾತ್ರೆ ಅಲ್ಲ, ಪಾಪಗಳ ಪ್ರಾಯಶ್ಚಿತ ಯಾತ್ರೆ: ರವಿಕುಮಾರ್

    ಕಾಂಗ್ರೆಸ್ಸಿಗರು ಮಾಡ್ತಿರೋದು ಪಾದಯಾತ್ರೆ ಅಲ್ಲ, ಪಾಪಗಳ ಪ್ರಾಯಶ್ಚಿತ ಯಾತ್ರೆ: ರವಿಕುಮಾರ್

    ಚಿಕ್ಕಬಳ್ಳಾಪುರ: ಕಾಂಗ್ರೆಸ್‍ನಿಂದ ಹಮ್ಮಿಕೊಂಡಿರುವುದು ಮೇಕೆದಾಟು ಪಾದಯಾತ್ರೆಯಲ್ಲ ಬದಲಿಗೆ ಕಾಂಗ್ರೆಸ್ಸಿನ ಮತ ಯಾತ್ರೆ ಹಾಗೂ ಪಾಪಗಳ ಪ್ರಾಯಶ್ಚಿತ ಯಾತ್ರೆ ಎಂದು ವಿಧಾನಪರಿಷತ್ ಸದಸ್ಯ ರವಿಕುಮಾರ್ ಟೀಕಿಸಿದ್ದಾರೆ.

    ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಿದಲ್ಲಿದ್ದಾಗ ಯೋಜನೆಯನ್ನು ಅನುಷ್ಠಾನಕ್ಕೆ ತರುವುದನ್ನು ಬಿಟ್ಟು ವಿನಾಕಾರಣ ಕಾಲಹರಣ ಮಾಡಿದರು. ಈಗ ಮತಕ್ಕಾಗಿ ಮೇಕೆದಾಟು ಪಾದಯಾತ್ರೆಯನ್ನು ನಡೆಸುತ್ತಿದೆ. ಸಜ್ಜನರು ಆಗಿರುವ ಸಚಿವ ಗೋವಿಂದ್ ಕಾರಜೋಳ ಬಗ್ಗೆ ಕಾಂಗ್ರೆಸ್ ಮುಖಂಡರು ಏಕವಚನದಲ್ಲಿ ಮಾತಾಡಿರುವುದು ಖಂಡನೀಯವಾಗಿದೆ ಎಂದು ಕಿಡಿಕಾರಿದರು.

    ಮೇಕೆದಾಟು ಯೊಜನೆ ಪ್ರಾರಂಭವಾಗಿದ್ದು ಕಾಂಗ್ರೆಸ್ ಸರ್ಕಾರವಿದ್ದಾಗ ಅಲ್ಲ, ನಮ್ಮ ಕಾಲದಲ್ಲಿ ಎಂದ ಅವರು ತಮಿಳುನಾಡಿನಲ್ಲಿ ಸ್ಟಾಲಿನ್‍ಗೆ ಸಹಕಾರ ನೀಡಿ ಸರ್ಕಾರ ಮಾಡಿದ್ದೀರಿ. ಈಗ ಅವರ ಮನೆಯ ಮುಂದೆ ಹೋಗಿ ಪ್ರತಿಭಟನೆ ನಡೆಸಿ ಎಂದು ಸವಾಲು ಹಾಕಿದರು.  ಇದನ್ನೂ ಓದಿ: ಸ್ಲಂ ಬೋರ್ಡ್‍ನಿಂದ ಕೈಗೆತ್ತಿಕೊಂಡಿರುವ 50 ಮನೆಗಳನ್ನು ಜ.30 ರೊಳಗೆ ಪೂರ್ಣಗೊಳಿಸಬೇಕು: ಗೋಪಾಲಯ್ಯ

    ಕಾಂಗ್ರೆಸ್ ಅವರು ಮಾಡುತ್ತಿರುವ ಪಾದಯಾತ್ರೆ ಅತ್ಯಂತ ಬೇಜಾವ್ದಾರಿತನದಿಂದ ಕೂಡಿದೆ. ನಾವು ನಿಮ್ಮ ವಿರುದ್ಧ ಸಾವಿರಾರು ಜನರನ್ನು ಸೇರಿಸಿ ಪ್ರತಿಭಟನೆ ಮಾಡಬಹುದು. ಆದರೆ ನಮಗೆ ಜವಬ್ದಾರಿ ಇರುವುದರಿಂದ ಈ ರೀತಿ ಕೆಲಸ ಮಾಡುವುದಿಲ್ಲ ಎಂದು ಹೇಳಿದರು.

    ಪಾದಾಯಾತ್ರೆಯಲ್ಲಿ ಭಾಗವಿಸಿದವರು ಟೆಸ್ಟ್ ಮಾಡಿಸಿಕೊಳ್ಳಬೇಕು. ಶಿಸ್ತು, ಕಾಳಜಿ ಇದ್ದರೆ ಡಿ.ಕೆ. ಶಿವಕುಮಾರ್ ಅವರು ಸ್ವತಃ ಕೋವಿಡ್ ಟೆಸ್ಟ್‍ಗೆ ಒಳಪಡುತ್ತಾರೆ. ಇಲ್ಲವಾದರೆ ನಿಮ್ಮನ್ನು ಬೇಜಾವಬ್ದಾರಿತನದ ಅಧ್ಯಕ್ಷ ಅಂತ ಕರೆಯಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕೋವಿಡ್ ಮುಗಿದ ನಂತರ ಮೇಕೆದಾಟಿನಲ್ಲೇ ಬಿದ್ದು ಒದ್ದಾಡಿ, ಯಾರು ಬೇಡ ಅಂತಾರೆ: ಈಶ್ವರಪ್ಪ

    ಕಾಂಗ್ರೆಸ್ ಅವರಿಗೆ ಕೋವಿಡ್ ಎಷ್ಟೇ ಹೆಚ್ಚಾದರೂ ಅದರ ಬಗ್ಗೆ ಯೋಚನೆ ಇಲ್ಲ. ಅವರಿಗೆ ತಮ್ಮ ಪಾದಯಾತ್ರೆ ಯಶಸ್ವಿ ಆಗುವುದಷ್ಟೇ ಮುಖ್ಯವಾಗಿದೆ. ಆದರೆ ಡಿ.ಕೆ. ಶಿವಕುಮಾರ್ ಇಂತಹ ಒಂದಲ್ಲ ನೂರು ಪಾದಯಾತ್ರೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ: ಕಟೀಲ್

    ನಾಯಕತ್ವಕ್ಕಾಗಿ ಡಿಕೆಶಿಯಿಂದ ಪಾದಯಾತ್ರೆ ಡ್ರಾಮಾ: ಕಟೀಲ್

    ಮಂಗಳೂರು: ಸರ್ಕಾರ ಜಾರಿಗೆ ತಂದಿರುವ ಕಾನೂನುಗಳಿಗೆ ಕಾಂಗ್ರೆಸ್ ಗೌರವ ನೀಡದೆ, ಕೇವಲ ನಾಯಕತ್ವಕ್ಕಾಗಿ ಡಿ.ಕೆ. ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಎಂಬ ಡ್ರಾಮಾ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಅನೇಕ ಕಾನೂನುಗಳನ್ನು ಕೈಗೊಂಡಿದೆ. ಆದರೆ ಕಾಂಗ್ರೆಸ್ ಇದ್ಯಾವುದಕ್ಕೂ ಗೌರವ ನೀಡುತ್ತಿಲ್ಲ. ಇದೆಲ್ಲವನ್ನು ರಾಜ್ಯದ ಜನ ಎಲ್ಲವನ್ನು ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಸೂಕ್ತ ಉತ್ತರವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಲಿದ್ದಾರೆ ಎಂದರು.

    ಮೇಕೆದಾಟು ಯೋಜನೆಯ ವಿರುದ್ಧ ಕೋರ್ಟ್ ನಲ್ಲಿರುವ ದಾವೆ ಇತ್ಯರ್ಥವಾದ ತಕ್ಷಣ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ವಿವಾದ ಕೋರ್ಟ್ ನಲ್ಲಿರುವ ವಿಷಯ ಗೊತ್ತಿದ್ದರೂ, ಜನತೆಗೆ ತಪ್ಪು ಸಂದೇಶ ನೀಡಲು ಪ್ರಯತ್ನಿಸುತ್ತಿದೆ. ಆದರೆ ನಿಮ್ಮ ರಾಜಕೀಯ ಉದ್ದೇಶದ ಅರಿವು ಜನತೆಗಿದೆ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷಕ್ಕೆ ಜನರ ಬಗ್ಗೆ ಕಾಳಜಿ ಇದ್ದರೆ ತಮಿಳುನಾಡಿನಲ್ಲಿರುವ ತಮ್ಮವರ ಜೊತೆ ಮಾತುಕತೆ ನಡೆಸಿ ವಿವಾದ ಇತ್ಯರ್ಥಪಡಿಸಿಬಹುದಲ್ವಾ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭ 2014 ರಿಂದ 2018ರ ವರೆಗೆ ಯೋಜನೆಯ ಡಿಪಿಆರ್ ನ್ನು ಯಾಕೆ ಸುಮ್ಮನೆ ಇಟ್ಟುಕೊಂಡಿದ್ದೀರಿ?. ಈ ಬಗ್ಗೆ ರಾಜ್ಯದ ಜನತೆಗೆ ಡಿಕೆಶಿ ಉತ್ತರಿಸಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ನೆಲದ ಕಾನೂನಿನ ಬಗ್ಗೆ ಗೌರವವಿಲ್ಲ: ಕೊರೊನಾ ಸೋಂಕು ವ್ಯಾಪಕವಾಗಿ ಹರಡದಂತೆ ಹಾಗೂ ಜನರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ನಾನಾ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಈ ಹಿಂದೆ ರಾಜ್ಯವನ್ನು ಆಡಳಿತ ನಡೆಸಿದ ನಾಯಕರೇ ಈ ನೆಲದ ಕಾನೂನನ್ನು ಉಲ್ಲಂಘಿಸಿ ಕಾನೂನಿಗೆ ಗೌರವ ನೀಡದೆ, ಗೂಂಡಾಗಿರಿ, ದರ್ಪ ಪ್ರದರ್ಶಿಸುತ್ತಿರುವುದು ಕಾಂಗ್ರೆಸ್ ಸಂಸ್ಕøತಿಯನ್ನು ತೋರಿಸುತ್ತದೆ. ಜನರ ಆರೋಗ್ಯದ ಬಗ್ಗೆ, ಹಿತಾಸಕ್ತಿಯ ಬಗ್ಗೆ ಕೊಂಚ ಕಾಳಜಿ ಇಲ್ಲದ ಕಾಂಗ್ರೆಸ್ ಮುಂದೆ ರಾಜ್ಯದಲ್ಲಿ ನಿರ್ಣಾಮವಾಗುವುದರಲ್ಲಿ ಸಂಶಯವಿಲ್ಲ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಸರ್ಕಾರ ಬದುಕಿದ್ಯಾ, ಸತ್ತಿದ್ಯಾ ಅನ್ನೋದನ್ನ ತೋರಿಸ್ತೀವಿ: ಸಚಿವ ಸುಧಾಕರ್

    ರಾಜ್ಯದ ಹಿತದೃಷ್ಟಿ, ಇಲ್ಲಿನ ನಾಗರಿಕರ ಬಗ್ಗೆ ಕಾಳಜಿ ಇದ್ದರೆ ಕೊರೊನಾ ನಿಯಂತ್ರಣಕ್ಕೆ ಪೂರಕವಾಗಿ ವರ್ತಿಸಲಿ. ಬದಲಾಗಿ ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಹೆಸರಿನಲ್ಲಿ ಜನರನ್ನು ಸೇರಿಸಿ ಕೊರೊನಾ ವ್ಯಾಪಕವಾಗಿ ಹರಡುವಂತೆ ಮಾಡಿದರೆ, ಅದಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.

  • ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ: ಸಿದ್ದರಾಮಯ್ಯ ಕಿಡಿ

    ಸರ್ಕಾರ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ: ಸಿದ್ದರಾಮಯ್ಯ ಕಿಡಿ

    ಬೆಂಗಳೂರು: ಸರ್ಕಾರ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುವುದರ ಜೊತೆಗೆ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

    ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ ಅವರು, ಇಂದಿನಿಂದ ಜ.19ರವರೆಗೆ ಪಾದಯಾತ್ರೆ ನಡೆಯುತ್ತದೆ. ಪಾದಯಾತ್ರೆಯ ಬಗ್ಗೆ ಡಿಕೆಶಿ ಹಾಗೂ ನಾನು ಸೇರಿ ವಿವಿಧ ಮುಖಂಡರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಂಡಿದ್ದೆವು. ಈ ಬಗ್ಗೆ 2 ತಿಂಗಳ ಹಿಂದೆಯೇ ಘೋಷಣೆ ಮಾಡಿದ್ದೆವು. ಆದರೆ ಈ ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ಬಹಳ ಪ್ರಯತ್ನ ಮಾಡುತ್ತಿದೆ. ಅದಕ್ಕೆ ಕಫ್ರ್ಯೂವನ್ನು ಜಾರಿಗೊಳಿಸಿದೆ ಎಂದು ವಾಗ್ದಾಳಿ ನಡೆಸಿದರು.

    ಬಿಜೆಪಿ ಅಧಿಕಾರಕ್ಕೆ ಬಂದು 2 ವರ್ಷವಾಗಿದೆ. ಆದರೆ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿದೆ. ಜೊತೆಗೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಏನೂ ಮಾಡಿಲ್ಲ ಎಂದು ತಪ್ಪು ಮಾಹಿತಿ ನೀಡಿ, ಇದರಿಂದಲೇ ಮೇಕೆದಾಟು ಯೋಜನೆ ವಿಳಂಬವಾಗಿದೆ ಎಂದು ಜಾಹೀರಾತು ನೀಡುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ಬಿಎಸ್‍ವೈ, ಜಗದೀಶ್ ಶೆಟ್ಟರ್, ಸದಾನಂದಗೌಡ ಸಿಎಂ ಆಗಿದ್ದರು. ಆಗ ಅದನ್ನು ಕೈಗೆತ್ತಿಕೊಳ್ಳಲಿಲ್ಲ, ಪ್ರಾರಂಭವನ್ನು ಮಾಡಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮೇಕೆದಾಟು ಯೋಜನೆಯನ್ನು ಕೈಗೆತ್ತುಕೊಂಡೆವು. 2013ರಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆ ಸಭೆ ಮಾಡಿ ಡಿಪಿಆರ್ ತಯಾರು ಮಾಡಬೇಕು ಎಂದು ತೀರ್ಮಾನ ಮಾಡಿದೆವು. ಎಲ್ಲಾ ಪ್ರಕ್ರಿಯೆ ಮುಗಿದ ಮೇಲೆ ಡಿಪಿಆರ್ ತಯಾರು ಆಯಿತು. ಆಗಿನ ಜಲಸಂನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ರಿವೈಸ್ಡ್ ಡಿಪಿಆರ್ ಸಲ್ಲಿಸಿದ್ದಾರೆ. ನಮ್ಮ ಕಾಲದಲ್ಲಿ ಎಲ್ಲೂ ಸಹ ವಿಳಂಬವಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಜನಸಾಮಾನ್ಯರಿಗೊಂದು, ಕಾಂಗ್ರೆಸ್‍ಗೆ ಒಂದು ಕಾನೂನು ಇಲ್ಲ: ಆರಗ ಜ್ಞಾನೇಂದ್ರ

    ಮೇಕೆದಾಟು ಯೋಜನೆ ಕೋರ್ಟ್‍ನಲ್ಲಿ ವಿಚಾರಣೆಗಿದೆ. ಹಾಗಾಗಿ ಏನು ಮಾಡಲು ಆಗುವುದಿಲ್ಲ ಎಂದು ನಿರಾವರಿ ಸಚಿವ ಗೋವಿಂದ ಕಾರಜೋಳ ಹೇಳುತ್ತಿದ್ದಾರೆ. ಆದರೆ 2 ವರ್ಷದಿಂದ ಕ್ಲಿಯರೆನ್ಸ್ ತೆಗೆದುಕೊಂಡಿಲ್ಲ ಅಂದರೆ ಜನರಿಗೆ ಮಾಡಿರುವ ದ್ರೋಹವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:  ಯಾರನ್ನಾದರೂ ಮುಟ್ಟಲಿ ನೋಡೋಣ, ನಾವು ಪಾದಯಾತ್ರೆ ಮಾಡಿಯೇ ಮಾಡುತ್ತೇವೆ: ಡಿಕೆಶಿ

    ಕುಡಿಯುವ ನೀರಿಗೆ ಪಾದಯಾತ್ರೆ ಮಾಡುತ್ತಿದ್ದೇವೆ. ಈ ಯೋಜನೆ ಜಾರಿಯಾದರೆ ಇನ್ನು 50 ವರ್ಷದವರೆಗೆ ಕುಡಿಯುವ ನೀರಿಗೆ ಸಮಸ್ಯೆ ಇರಲ್ಲ. ಇದರಿಂದಾಗಿ ಎರಡೂವರೆ ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

    ತಮಿಳುನಾಡಿಗೆ ತಕರಾರು ತೆಗಿಯಲು ಯಾವುದೇ ಆಧಾರವಿಲ್ಲ. ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಈ ರೀತಿ ಮಾಡುತ್ತಿದೆ. ಬಿಜೆಪಿ ಅಧ್ಯಕ್ಷ ಅಣ್ಣಮಲೈ, ಸಿ.ಟಿ.ರವಿ ಕರ್ನಾಟಕದವರು ಎಂದು ಅವರು ಬೆಂಬಲ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಸರ್ಕಾರದ ನಿಯಮಕ್ಕೆ ಗೌರವ ಕೊಡಬೇಕು. ನಮಗೂ ಜವಬ್ದಾರಿ ಇದೆ. ಆ ಜವಾಬ್ದಾರಿಯನ್ನು ನಿರ್ವಹಿಸಿ ಪಾದಯಾತ್ರೆ ನಡೆಸುತ್ತಿದ್ದೇವೆ. ಬಿಜೆಪಿ ಎಷ್ಟೇ ತಡೆಯಲು ಪ್ರಯತ್ನಿಸಿದರೂ ನಾವು ನಿಲ್ಲಲ್ಲ. ಬೇರೆ ಬೇರೆ ಜಿಲ್ಲೆಯವರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ನಾಳೆ ಚಾಮರಾಜನಗರ, ನಾಡಿದ್ದು ಮೈಸೂರಿನವರು ಬರುತ್ತಾರೆ ಎಂದು ತಿಳಿಸಿದರು.

    ಇದೆ ಸಂದರ್ಭದಲ್ಲಿ ಪಾದಾಯಾತ್ರೆಯಲ್ಲಿ ಪಾಲ್ಗೊಂಡಿರುವ ಚಲನಚಿತ್ರ ವಾಣಿಜ್ಯ ಮಂಡಳಿ, ಸ್ವಾಮೀಜಿ, ರೈತ ಸಂಘ ಹಾಗೂ ಬೇರೆ ಬೇರೆ ಕ್ಷೇತ್ರದವರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು.

  • ರಾಜಕೀಯಕ್ಕಾಗಿ ಪಾದಯಾತ್ರೆ ಮಾಡ್ತಿಲ್ಲ: ಸಿದ್ದರಾಮಯ್ಯ

    ರಾಜಕೀಯಕ್ಕಾಗಿ ಪಾದಯಾತ್ರೆ ಮಾಡ್ತಿಲ್ಲ: ಸಿದ್ದರಾಮಯ್ಯ

    ರಾಮನಗರ: ಮೇಕೆದಾಟು ಪಾದಯಾತ್ರೆಯನ್ನು ರಾಜಕೀಯಕ್ಕಾಗಿ ಮಾಡುತ್ತಿಲ್ಲ. ಬದಲಾಗಿ ರಾಜ್ಯದ ಹಿತಕ್ಕಾಗಿ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.

    ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಕಾನೂನು ಉಲ್ಲಂಘನೆ ಮಾಡುವುದಿಲ್ಲ. ಕೋವಿಡ್ ನಿಯಮ ಪಾಲನೆ ಮಾಡಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ನೀರು ಬಳಸಿಕೊಳ್ಳಲು ನಾವು ಯಾಕೆ ತಮಿಳುನಾಡಿನವರನ್ನು ಕೇಳಬೇಕು ಎಂದು ವಾಗ್ದಾಳಿ ನಡೆಸಿದರು.

    ಕರ್ಫ್ಯೂ ವಿಚಾರವಾಗಿ ಮಾತನಾಡಿ, ನಾವು ಪಾದಯಾತ್ರೆ ಮಾಡುತ್ತಿರುವುದಕ್ಕೆ ಸರ್ಕಾರ ಕರ್ಫ್ಯೂ ವಿಧಿಸಿದೆ. ನಾವು ಎರಡು ತಿಂಗಳ ಹಿಂದೆಯೇ ಪಾದಯಾತ್ರೆ ಘೋಷಣೆ ಮಾಡಿದ್ದೆವು. ಆದರೆ ಇದನ್ನು ಮಾಡಬಾರದೆಂದು ಕರ್ಫ್ಯೂ ಹಾಕಿದ್ದಾರೆ. ರಾಜ್ಯದ ಹಿತ, ಬೆಂಗಳೂರಿನ ಜನರ ಹಿತಕ್ಕಾಗಿ ಈ ಪಾದಯಾತ್ರೆ ಮಾಡ್ತಿದ್ದೇವೆ. ನಮ್ಮ ನೀರು ನಾವು ಬಳಸಿಕೊಳ್ಳುತ್ತೇವೆ ಅಷ್ಟೆ. ಇದರಿಂದ ತಮಿಳುನಾಡಿಗೂ ಅನುಕೂಲ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಅಂಡರ್‌ಗ್ರೌಂಡ್‌ನಲ್ಲಿ ಕಂತೆ ಕಂತೆ ನೋಟು ಬಚ್ಚಿಟ್ಟಿದ್ದ ಉದ್ಯಮಿ – ಇವನ ಆಸ್ತಿ ಬಗ್ಗೆ ಮಾಹಿತಿ ನೀಡಿದ್ರೆ 10,000 ಬಹುಮಾನ

    ಹೆಚ್ಚು ಪೊಲೀಸರ ನಿಯೋಜನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುವುದಕ್ಕೆ ಹೆಚ್ಚು ಪೊಲೀಸ್‍ರನ್ನು ನಿಯೋಜಿಸಿದ್ದಾರೆ. ನಾವು ಯಾವುದೇ ಕಾನೂನು ಭಂಗ ಮಾಡುವುದಿಲ್ಲ. ಕಾನೂನು ಭಂಗ ಮಾಡದೇ ಪಾದಯಾತ್ರೆ ಮಾಡುತ್ತೇವೆ ಎಂದರು.  ಇದನ್ನೂ ಓದಿ: ಹಿಮದಲ್ಲಿ ದೃಢವಾಗಿ ನಿಂತ ಯೋಧನಿಗೆ ಒಂದು ಸೆಲ್ಯೂಟ್ – ವೀಡಿಯೋ ವೈರಲ್