Tag: ಮೇಖಳಿ

  • ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಮೇಖಳಿಯ ಸ್ವಾಮೀಜಿ ಅರೆಸ್ಟ್‌, ಜೈಲುಪಾಲು

    ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಮೇಖಳಿಯ ಸ್ವಾಮೀಜಿ ಅರೆಸ್ಟ್‌, ಜೈಲುಪಾಲು

    ಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ (Rape) ಎಸಗಿದ ಆರೋಪದಡಿ ಕಾಮುಕ ಸ್ವಾಮೀಜಿಯನ್ನು ಅರೆಸ್ಟ್ ಮಾಡಲಾಗಿದೆ.

    ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರದ (Ram Mandir) ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್‌ (Pocso Case) ದಾಖಲಾಗಿದ್ದು ಪೊಲೀಸರು ಈಗ ಜೈಲಿಗಟ್ಟಿದ್ದಾರೆ.

    ಬಾಗಲಕೋಟೆ (Bagalkote) ನಗರದ ಲಾಡ್ಜ್‌ನಲ್ಲಿ ಅತ್ಯಾಚಾರ ಎಸಗಿ ಬಳಿಕ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಡಲಾಗಿತ್ತು. ಬಾಗಲಕೋಟೆಯ ನವನಗರದ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ನಂತರ ಬೆಳಗಾವಿಯ ಮೂಡಲಗಿಗೆ ವರ್ಗಾವಣೆಯಾಗಿತ್ತು. ಇದನ್ನೂ ಓದಿ: ಭಾರತದಲ್ಲಿ ಐಫೋನ್‌ ತಯಾರಿಸಿದರೆ 25% ಸುಂಕ – ಆಪಲ್‌ಗೆ ಟ್ರಂಪ್‌ ವಾರ್ನಿಂಗ್‌

     

    ಏನಿದು ಕೇಸ್‌?
    ಬಾಲಕಿಗೆ 17 ವರ್ಷ ಆಗಿದ್ದು ಆಕೆ ಹುಷಾರಿಲ್ಲದೇ ಇದ್ದಾಗ ಪೋಷಕರು ಆಕೆಯನ್ನು ಆಗಾಗ ಮಠಕ್ಕೆ ತಂದು ಬಿಟ್ಟು ಹೋಗುತ್ತಿದ್ದರು. ವಾರಗಟ್ಟಲೇ ಮಗಳನ್ನು ಸ್ವಾಮೀಜಿಯ ಸುಪರ್ದಿಗೆ ಒಪ್ಪಿಸಿ ಮಠದಲ್ಲೇ ಬಿಡುತ್ತಿದ್ದರು.

    ಹೀಗೆ ಮಠಕ್ಕೆ ಬಂದಿದ್ದ ಬಾಲಕಿಯನ್ನು ಆಕೆಯ ಮನೆಗೆ ಬಿಡಲು ಲೋಕೇಶ್ವರ ಸ್ವಾಮೀಜಿ ತೀರ್ಮಾನಿಸಿದ್ದ. ಮೇ 13 ರಂದು ಇಬ್ಬರು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ರಾಯಚೂರಿನಲ್ಲಿ 2 ದಿನ ಇದ್ದ ಇವರು ಮೇ15 ರಂದು ಬಾಗಲಕೋಟೆಗೆ ಬಂದಿದ್ದಾರೆ.

    ಈ ಎರಡು ಕಡೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಎಸಗಿದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನು ಹಾಕಿ ಮೇ 16 ರಂದು ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಟ್ಟು ತೆರಳಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌

    ಮೇ17 ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗುತ್ತದೆ. ವಿಚಾರಣೆಗೆ ಒಳಪಡಿಸಿದಾಗ ಬಾಲಕಿ ನಡೆದ ಎಲ್ಲಾ ಘಟನೆಗಳನ್ನು ವಿವರಿಸಿದ್ದಾಳೆ. ಕೇಸ್‌ ದಾಖಲಾದ ಬಳಿಕ ಪ್ರಕರಣ ಬೆಳಗಾವಿಯ ಮೂಡಲಗಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.

    2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.