Tag: ಮೇಘ

  • ಕಿರಣ್ ರಾಜ್ ‘ಮೇಘ’ ಚಿತ್ರಕ್ಕೆ ಚರಣ್ ನಿರ್ದೇಶನ

    ಕಿರಣ್ ರಾಜ್ ‘ಮೇಘ’ ಚಿತ್ರಕ್ಕೆ ಚರಣ್ ನಿರ್ದೇಶನ

    ನ್ನಡತಿ ಧಾರಾವಾಹಿ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ (Kiran Raj) ನಾಯಕನಾಗಿ ನಟಿಸಿರುವ, ಚರಣ್ ನಿರ್ದೇಶನದ “ಮೇಘ” (Megha) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಗೀತರಚನೆಕಾರ ವಿ.ನಾಗೇಂದ್ರ ಪ್ರಸಾದ್ ಮೇಘ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮೇಘ ಚಿತ್ರದ ಕುರಿತು ಮಾತನಾಡಿದರು.

    ನಾನು ಮೂಲತಃ ಐಟಿ ಉದ್ಯೋಗಿ. ಕೋವಿಡ್ ನಂತರ ಐಟಿ ಕೆಲಸ ಬಿಟ್ಟು ವಿ.ನಾಗೇಂದ್ರಪ್ರಸಾದ್ ಅವರ ಬಳಿ ಸಿನಿಮಾ ಕೆಲಸ ಕಲಿಯಲು ಆರಂಭಿಸಿದೆ. ಇನ್ನು ಮೇಘ ನನ್ನ ಮೊದಲ ನಿರ್ದೇಶನದ ಚಿತ್ರ. ಮೇಘಗಳು ಆಕಾಶದಲ್ಲಿ ಯಾವಾಗಲೂ ಒಟ್ಟಾಗೆ ಚಲಿಸುತ್ತದೆ. ಆದರೆ ಮಳೆಯನ್ನು ಎಲ್ಲೋ ಸುರಿಸುತ್ತದೆ. ಇದನ್ನೇ ಇಟ್ಟುಕೊಂಡು ಪ್ರೇಮ ಕಥೆ ಸಿದ್ದಮಾಡಿಕೊಂಡೆ. ನಮ್ಮ ಸಿನಿಮಾದಲ್ಲಿ ಮೇಘ ಎಂದರೆ ಪ್ರೀತಿ ಅಂತ. ಕಿರಣ್ ರಾಜ್ ಹಾಗೂ ಕಾಜಲ್ ಕುಂದರ್ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ರಾಜೇಶ್ ನಟರಂಗ ಸೇರಿದಂತೆ ಅನೇಕ ಹಿರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಪ್ರೀತಿ, ಸ್ನೇಹ, ಸೆಂಟಿಮೆಂಟ್ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಜೋಯಲ್ ಸಕ್ಕರಿ ಸಂಗೀತ ಸಂಯೋಜಿಸಿರುವ ಐದು ಸುಮಧುರ ಹಾಡುಗಳು ಈ ಚಿತ್ರದಲ್ಲಿದ್ದು, ಎರಡು ಹಾಡುಗಳನ್ನು ಗುರುಗಳಾದ ನಾಗೇಂದ್ರ ಪ್ರಸಾದ್ ಅವರು, ಬಾಕಿ ಮೂರು ಹಾಡುಗಳನ್ನು ನಾನು ಬರೆದಿದ್ದೇನೆ. ಯತೀಶ್ ಹೆಚ್ ಆರ್ ಅವರು ನಿರ್ಮಾಣ ಮಾಡಿದ್ದಾರೆ.  ಚಿತ್ರ ಬಿಡುಗಡೆಯ ಹಂತದಲ್ಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

    ನನಗೆ ಸಿನಿಮಾ ರಂಗ ಹೊಸತು. ನಿರ್ಮಾಪಕರಾದ ಎಂ.ಜಿ.ರಾಮಮೂರ್ತಿ ಹಾಗೂ ತ್ರಿವಿಕ್ರಮ ಸಾಫಲ್ಯ ಅವರ ಮಾರ್ಗದರ್ಶನದಲ್ಲಿ ಕೃಷಿ ಪ್ರೊಡಕ್ಷನ್ಸ್ ಮೂಲಕ ಈ ಚಿತ್ರವನ್ನು ನಿರ್ಮಿಸಿರುವುದಾಗಿ ನಿರ್ಮಾಪಕ ಯತೀಶ್ ಹೆಚ್ ಆರ್ ಹೇಳಿದರು. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಮೇಘ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಪ್ರೇಮ ಕಥಾನಕವಾಗಿದ್ದರೂ ಚಿತ್ರದ ಎಮೋಷನ್  ಎಲ್ಲರ ಗಮನ ಸೆಳೆಯುತ್ತದೆ. ಉದಾಹರಣೆಗೆ ನಾನು ಈ ಚಿತ್ರದ ಕಥೆ ಕೇಳಿ, ನನ್ನ ಅಪ್ಪನಿಗೆ ಬುಲೆಟ್ ಕೊಡಿಸಿದ್ದೇನೆ. ಈಗಿನ ಪೀಳಿಗೆಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ ಎಂದರು ನಾಯಕ ಕಿರಣ್ ರಾಜ್.

    ಈ ಚಿತ್ರದ ವಿಶೇಷವೆಂದರೆ ನನ್ನ ಹಾಗೂ ನಾಯಕ ಇಬ್ಬರ ಹೆಸರು ಮೇಘ ಎಂದು. ಉತ್ತಮ ಕಥೆಯ ಈ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಾಯಕಿ ಕಾಜಲ್ ಕುಂದರ್.  ಚಿತ್ರದ ಛಾಯಾಗ್ರಾಹಕ ಮತ್ತು ಸಂಕಲನಕಾರ ಗೌತಮ್ ನಾಯಕ್, ನಟಿ ಶ್ರೀವಿದ್ಯ ಹಾಗೂ ತ್ರಿವಿಕ್ರಮ ಸಾಫಲ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ನಟ ಚೇತನ್-ಮೇಘ ಜೋಡಿ ಮದ್ವೆಯಾದ ಪರಿಗೆ ಮನಸೋತ ಶಶಿ ತರೂರ್

    ನಟ ಚೇತನ್-ಮೇಘ ಜೋಡಿ ಮದ್ವೆಯಾದ ಪರಿಗೆ ಮನಸೋತ ಶಶಿ ತರೂರ್

    ನವದೆಹಲಿ: ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಎಲ್ಲರಿಗು ಗೊತ್ತಿದೆ. ಸರಳ ಹಾಗೂ ವಿಶಿಷ್ಟವಾಗಿ ಮದುವೆಯಾಗಿ ಚೇತನ್-ಮೇಘ ಜೋಡಿ ಎಲ್ಲರ ಗಮನ ಸೆಳೆದಿದ್ದರು. ಈಗ ಈ ಜೋಡಿಯ ವಿಶಿಷ್ಟ ಮದುವೆ ಬಗ್ಗೆ ತಿಳಿದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಟ್ವೀಟ್ ಮಾಡಿ ನವ ಜೋಡಿಗೆ ಶುಭಕೋರಿ ಭೇಷ್ ಎಂದಿದ್ದಾರೆ.

    ಫೆಬ್ರವರಿ 1ರಂದು ಸರಳವಾಗಿ ರಿಜಿಸ್ಟರ್ ಮದುವೆ ಮಾಡಿಕೊಂಡು ಗೆಳತಿ ಮೇಘರನ್ನ ಚೇತನ್ ವರಿಸಿದ್ದಾರೆ. ಫೆಬ್ರವರಿ 2ರಂದು ಕುಟುಂಬಸ್ಥರು ಮತ್ತು ಚಲನಚಿತ್ರ, ರಾಜಕೀಯ ಗಣ್ಯರಿಗಾಗಿ ವಿಶಿಷ್ಟವಾಗಿ ಆರತಕ್ಷತೆ ಮತ್ತು ಸಂತೋಷ ಕೂಟ ಆಯೋಜಿಸಿ ಚೇತನ್-ಮೇಘ ದಂಪತಿ ಎಲ್ಲರ ಗಮನ ಸೆಳೆದಿದ್ದರು. ಮದುವೆ ಹೇಗೆ ಸರಳವಾಗಿ ನಡೆಯಿತೋ ಅದೇ ರೀತಿ ಚೇತನ್ ಮತ್ತು ಮೇಘರ ಆರತಕ್ಷತೆ ಕೂಡ ನಡೆದಿತ್ತು. ಬೆಂಗಳೂರಿನ ವಲ್ಲಭ್ ನಿಕೇತನ ವಿನೋಬಾ ಭಾವೆ ಆಶ್ರಮದಲ್ಲಿ ಆರತಕ್ಷತೆ ನಡೆದಿತ್ತು. ಸರಳ ಮತ್ತು ಸುಂದರವಾಗಿ ನೆರವೇರಿದ ಆರತಕ್ಷತೆ ಮತ್ತು ಸಂತೋಷ ಕೂಟದಲ್ಲಿ ವಚನ ಗಾಯನ, ಸೂಫಿ ಗಾಯನ, ಕೊರಗ ನೃತ್ಯ, ಲಂಬಾಣಿ ನೃತ್ಯ, ಸಿದ್ಧಿ ನೃತ್ಯ ಏರ್ಪಡಿಸಲಾಗಿತ್ತು. ಇದನ್ನೂ ಓದಿ: ಅನಾಥ ಮಕ್ಕಳ ಜೊತೆ ನಟ ಚೇತನ್ ಪ್ರೀವೆಡ್ಡಿಂಗ್ ಫೋಟೋಶೂಟ್

    ನವ ದಂಪತಿ ಚೇತನ್ ಮತ್ತು ಮೇಘ ಜೋಡಿಗೆ ಶುಭ ಕೋರಿದ ಶಶಿ ತರೂರ್, ”ಇದೊಂದು ಸಾಮಾಜಿಕ ಪ್ರಜ್ಞೆಯ ಮದುವೆ. ವಿವಾಹಕ್ಕೆ ಬಂದವರಿಗೆ ಭಾರತೀಯ ಸಂವಿಧಾನದ ಪುಸ್ತಕಗಳನ್ನು ಉಡುಗೊರೆಯಾಗಿ ಚೇತನ್ ಮತ್ತು ಮೇಘ ಕೊಟ್ಟಿದ್ದಾರೆ. ಅಲ್ಲದೆ ಅದನ್ನು ತೃತೀಯ ಲಿಂಗಿಗಳ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಅವರಿಂದ ಓದಿಸಿ ಜೋಡಿ ಕೆಲವು ಪ್ರತಿಜ್ಞೆ ಮಾಡಿದ್ದಾರೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ನವ ಜೋಡಿಯ ಸಮಾಜಿಕ ಕಳಕಳಿ ಶಶಿ ತರೂರ್ ಅವರ ಮನ ಗೆದ್ದಿದೆ. ಇದನ್ನೂ ಓದಿ: ಭಾವಿ ಪತ್ನಿ ಜೊತೆ ಅನಾಥಾಶ್ರಮದ ಮಕ್ಕಳಿಗೆ ಹಾಸಿಗೆ ನೀಡಿದ ನಟ ಚೇತನ್

    ಚೇತನ್ ಮತ್ತು ಮೇಘ ಆರತಕ್ಷತೆ ಮತ್ತು ಸಂತೋಷ ಕೂಟದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ಪತ್ನಿ ಅಶ್ವಿನಿ ಪಾಲ್ಗೊಂಡು ನವ ಜೋಡಿಗೆ ಶುಭ ಹಾರೈಸಿದ್ದರು. ಈ ವೇಳೆ ಪುನೀತ್ ಚೇತನ್ ಅವರು ಕನ್ನಡದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

    ನಟ ಮಯೂರ್ ಪಟೇಲ್, ನಿರ್ದೇಶಕ ಪಿ.ಸಿ.ಶೇಖರ್, ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಚೇತನ್-ಮೇಘ ಆರತಕ್ಷತೆಯಲ್ಲಿ ಪಾಲ್ಗೊಂಡು ನವ ದಂಪತಿಗೆ ಆಶೀರ್ವದಿಸಿದ್ದರು. ಕೇವಲ ಸಿನಿಮಾ ಕಲಾವಿದರು ಮಾತ್ರವಲ್ಲ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪತ್ನಿ ಸಮೇತ ಚೇತನ್-ಮೇಘ ಆರತಕ್ಷತೆಗೆ ಬಂದು ನವ ಜೋಡಿಗೆ ಶುಭ ಹಾರೈಸಿದ್ದರು. ಹಾಗೆಯೇ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಆರತಕ್ಷತೆಗೆ ಬಂದು ಶುಭ ಕೋರಿದ್ದರು.