Tag: ಮೇಘ ಸ್ಫೋಟ

  • ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ದುರ್ಮರಣ

    ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ದುರ್ಮರಣ

    ಶ್ರೀನಗರ: ರಾಂಬನ್ ಮತ್ತು ರಿಯಾಸಿ ಜಿಲ್ಲೆಗಳ ರಾಜ್‌ಗಢ ಮತ್ತು ಮಹೋರ್ ಪ್ರದೇಶಗಳಲ್ಲಿ ಶನಿವಾರ ಮಧ್ಯರಾತ್ರಿ ಎರಡು ಬಾರಿ ಮೇಘಸ್ಫೋಟ ಸಂಭವಿಸಿದ್ದು, ಒಂದೇ ಕುಟುಂಬದ ಏಳು ಸದಸ್ಯರು ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಒಬ್ಬರು ಕಾಣೆಯಾಗಿದ್ದಾರೆ.

    ಶನಿವಾರ ಮಧ್ಯರಾತ್ರಿ 12:30 ರ ಸುಮಾರಿಗೆ ರಾಜ್‌ಗಢದಲ್ಲಿ ಮೇಘಸ್ಫೋಟ ಸಂಭವಿಸಿದೆ. ಎರಡು ಮನೆಗಳು ಮತ್ತು ಒಂದು ಶಾಲಾ ಕಟ್ಟಡಕ್ಕೆ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಮೇಘಸ್ಫೋಟ – 6 ಜನ ಸಾವು, 11 ಮಂದಿ ನಾಪತ್ತೆ

    ಜಮ್ಮು-ಕಾಶ್ಮೀರದ ರಿಯಾಸಿಯ ಮಹೋರ್ ಪ್ರದೇಶದ ಬದ್ದರ್ ಗ್ರಾಮದಲ್ಲಿ ಭಾರಿ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಮೇಘಸ್ಫೋಟದಿಂದಾಗಿ ಅವರು ಮಣ್ಣಿನ ಮನೆ ಅವಶೇಷಗಳ ಅಡಿಯಲ್ಲಿ ಹೂತು ಮೃತಪಟ್ಟಿದ್ದಾರೆ. ಸ್ಥಳೀಯ ಗ್ರಾಮಸ್ಥರು ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಏಳು ಶವಗಳನ್ನು ಹೊರತೆಗೆದರು. ಮೃತರನ್ನು ನಜೀರ್ ಅಹ್ಮದ್, ವಜೀರಾ ಬೇಗಂ, ಬಿಲಾಲ್ ಅಹ್ಮದ್, ಮೊಹಮ್ಮದ್ ಮುಸ್ತಫಾ, ಮೊಹಮ್ಮದ್ ಆದಿಲ್, ಮೊಹಮ್ಮದ್ ಮುಬಾರಕ್ ಮತ್ತು ಮೊಹಮ್ಮದ್ ವಾಸಿಂ ಎಂದು ಗುರುತಿಸಲಾಗಿದೆ.

    ಮತ್ತೊಂದು ಘಟನೆಯಲ್ಲಿ ರಂಬನ್ ಜಿಲ್ಲೆಯ ರಾಜ್‌ಗಡ್ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ. ಇಂದು 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಸ್ತುತ ಪ್ರದೇಶದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಘಟನೆಯಲ್ಲಿ ಸಾವನ್ನಪ್ಪಿದ ಮೂವರ ಶವಗಳನ್ನು ರಕ್ಷಣಾ ಕಾರ್ಯಕರ್ತರು ಹೊರತೆಗೆದಿದ್ದಾರೆ. ಇದನ್ನೂ ಓದಿ: ದೆಹಲಿಯ ಕಲ್ಕಾಜಿ ದೇಗುಲದಲ್ಲಿ ಪ್ರಸಾದ ವಿಚಾರಕ್ಕೆ ಗಲಾಟೆ – 15 ವರ್ಷಗಳಿಂದ ಸೇವಕನಾಗಿದ್ದ ವ್ಯಕ್ತಿಯ ಹತ್ಯೆ

    ಉತ್ತರಾಖಂಡದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಚಮೋಲಿ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಐದು ಸ್ಥಳಗಳಲ್ಲಿ ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ಜೋಶಿಮಠ ಮತ್ತು ಅನಿಮಮಠ ಬಳಿ ಸಂಭವಿಸಿದ ಬೃಹತ್ ಪರ್ವತ ಕುಸಿತವು ರಸ್ತೆಗೆ ಅವಶೇಷಗಳನ್ನು ತಂದು ಹಾಕಿದೆ. ಯಾತ್ರಾರ್ಥಿಗಳು ಮತ್ತು ಸ್ಥಳೀಯರ ಸಂಚಾರವನ್ನು ಸ್ಥಳಿಯ ಆಡಳಿತ ಕಡಿತಗೊಳಿಸಿತು. ರಾಜ್ಯಾದ್ಯಂತ ಮೇಘಸ್ಫೋಟ ಮತ್ತು ಭೂಕುಸಿತಗಳು ವ್ಯಾಪಕ ವಿನಾಶಕ್ಕೆ ಕಾರಣವಾಗಿ ರಾಜ್ಯದ್ಯಾಂರ ಆರು ಜನರು ಸಾವನ್ನಪ್ಪಿದರು. 11 ಜನರು ನಾಪತ್ತೆಯಾಗಿದ್ದಾರೆ.

  • ಅಮರನಾಥ ದರ್ಶನಕ್ಕೆ ತೆರಳಿದ ಬೆಳಗಾವಿಯ 50ಕ್ಕೂ ಹೆಚ್ಚು ಜನ ಸೇಫ್..!

    ಅಮರನಾಥ ದರ್ಶನಕ್ಕೆ ತೆರಳಿದ ಬೆಳಗಾವಿಯ 50ಕ್ಕೂ ಹೆಚ್ಚು ಜನ ಸೇಫ್..!

    ಬೆಳಗಾವಿ: ಜಮ್ಮು ಕಾಶ್ಮೀರದ ಪವಿತ್ರ ಯಾತ್ರಾ ಸ್ಥಳ ಅಮರನಾಥ ದರ್ಶನಕ್ಕೆ ತೆರಳಿದ 50ಕ್ಕೂ ಹೆಚ್ಚು ಜನರು ಶೇಷನಾಗ ಎಂಬ ಪ್ರದೇಶದಲ್ಲಿ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ನಗರದ ಶಿವಾಜಿ ನಗರ, ಕಾಮತಗಲ್ಲಿ ಸೇರಿದಂತೆ ವಿವಿಧ ಕಡೆಗಳಿಂದ ಸುಮಾರು 55 ರಿಂದ 60 ಜನ ಅಮರನಾಥ ಯಾತ್ರೆಗೆ ಭಕ್ತರು ಪ್ರವಾಸ ಕೈಗೊಂಡಿದ್ದರು. ಆದರೆ ಅಮರನಾಥ ಪರ್ವತದಲ್ಲಿ ಮೇಘ ಸ್ಫೋಟ ಆಗಿ ದುರ್ಘಟನೆ ಸಂಭವಿಸಿದ್ದರಿಂದ ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿತು. ಸದ್ಯ ದರ್ಶನಕ್ಕೆ ತೆರಳಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.   ಇದನ್ನೂ ಓದಿ: ಮೈದುಂಬಿ ಧುಮ್ಮುಕ್ಕುತ್ತಿರುವ ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ

    ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯ ಶಿವಾಜಿ ಮಂಡೋಳಕರ ತಂಡದಲ್ಲಿ 32 ಜನರಿದ್ದು, ಅದನ್ನು ಹೊರತುಪಡಿಸಿ 20ಕ್ಕೂ ಹೆಚ್ಚು ಬೆಳಗಾವಿಗರು ದರ್ಶನ ಪಡೆದುಕೊಂಡು ವಾಪಸ್ ಬರುವಾಗ ಮೇಘ ಸ್ಟೋಟದಿಂದ ಅಮರನಾಥ ದೇವಸ್ಥಾನದಿಂದ 20ಕಿ.ಮೀ. ದೂರದಲ್ಲಿರುವ ಶೇಷನಾಗ ಎಂಬ ಪ್ರದೇಶದಲ್ಲಿ ಸುರಕ್ಷಿತವಾಗಿದ್ದಾರೆ.

    ದರ್ಶನಕ್ಕೆ ತೆರಳಿದ್ದ ಶಿವಾಜಿ ನೇತೃತ್ವದ ತಂಡ ಮೊದಲಿಗೆ ಜಮ್ಮುಕಾಶ್ಮೀರದಿಂದ ಚಂದನವಾಡಿ, ಪೆಹಲಗಾಮ್‍ಗೆ ಬಂದು ಅಲ್ಲಿಂದ ಪಾದಯಾತ್ರೆ ಆರಂಭಿಸಿದ್ದು, ಸದ್ಯ ಧಾರಾಕಾರ ಮಳೆಗೆ ಸಂಭವಿಸಿದ ದುರ್ಘಟನೆಯಿಂದ ಶೇಷನಾಗದಲ್ಲಿ ಉಳಿದುಕೊಂಡಿದ್ದಾರೆ. ಇಲ್ಲವಾಗಿದ್ದರೆ ಶುಕ್ರವಾರವೇ ದರ್ಶನ ಪಡೆದುಕೊಂಡು ವಾಪಸ್ ಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸದ್ಯ ಎಲ್ಲರು ಸೇಫ್ ಆಗಿದ್ದು ಅವರನ್ನು ಕರೆದುಕೊಂಡು ಬರಲು ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಅಮರನಾಥಕ್ಕೆ ರಾಜ್ಯದಿಂದ 100ಕ್ಕೂ ಹೆಚ್ಚು ಯಾತ್ರಿಕರು ಭೇಟಿ: ಎಲ್ಲ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ ಬೊಮ್ಮಾಯಿ

    ಅಮರನಾಥಕ್ಕೆ ರಾಜ್ಯದಿಂದ 100ಕ್ಕೂ ಹೆಚ್ಚು ಯಾತ್ರಿಕರು ಭೇಟಿ: ಎಲ್ಲ ಕನ್ನಡಿಗರ ರಕ್ಷಣೆಗೆ ಕ್ರಮ: ಸಿಎಂ ಬೊಮ್ಮಾಯಿ

    ಬೆಂಗಳೂರು: ಅಮರನಾಥದಲ್ಲಿ ಮೇಘ ಸ್ಪೋಟದಿಂದ 15 ಜನ ಸಾವನ್ನಪ್ಪಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ ನೂರಕ್ಕೂ ಹೆಚ್ಚು ಜನ ಕನ್ನಡಿಗರು ಅಮರನಾಥ ಯಾತ್ರೆಯಲ್ಲಿದ್ದಾರೆ. ಕನ್ನಡಿಗರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಅಮರನಾಥ ಯಾತ್ರ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ ಅಹಿತರಕರ ಸುದ್ದಿಯೂ ಬಂದಿಲ್ಲ. ಅಲ್ಲಿಯ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ. ರಕ್ಷಣಾ ಕಾರ್ಯಕ್ಕಾಗಿ ಸಹಾಯವಾಣಿಯನ್ನೂ ಸಹ ತೆರೆಯಲಾಗಿದೆ. ಈಗಾಗಲೇ 15-20 ಜನ ಕರೆ ಮಾಡಿ ತಾವು ಸಿಲುಕಿರುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಕಾರ್ಯವನ್ನು ಕೂಡಲೇ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಊರಿಗೆ ವಾಪಾಸಾಗಲು ಅನುಮತಿಗಾಗಿ ಕಾಯುತ್ತಿದ್ದೇವೆ – ಯಾತ್ರೆಯಿಂದಲೇ ಪಬ್ಲಿಕ್ ಟಿವಿಗೆ ಲೈವ್ ಕೊಟ್ಟ ಕನ್ನಡಿಗರು

    ಕೇಂದ್ರ ಸರ್ಕಾರ, ಗಡಿ ರಕ್ಷಣಾ ಪಡೆ, ಇಂಡಿಯನ್ ಟಿಬೆಟ್ ಫೋರ್ಸ್ ಎಲ್ಲರೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ನೇರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ. ತೊಂದರೆಗೆ ಸಿಲುಕಿರುವವರು ಸಹಾಯವಾಣಿಗೆ ಕರೆ ಮಾಡಿದರೆ ಕೂಡಲೇ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದರು.

    ಸಹಾಯವಾಣಿಯ ವಿವರ:
    ಎನ್.ಡಿ.ಆರ್.ಎಫ್: 011-23438252, 011-23438253
    ಕಾಶ್ಮೀರ್ ಡಿವಿಷನಲ್ ಹೆಲ್ಪ್ ಲ್ಲೈನ್: 0914- 2496240
    ದೇವಸ್ಥಾನ ಮಂಡಳಿಯ ಸಹಯಾವಾಣಿ: 0194-2313149
    ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ : 080-1070, 22340676

    ಸಹಾಯವಾಣಿ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಲಿದೆ

    Live Tv
    [brid partner=56869869 player=32851 video=960834 autoplay=true]

  • ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ಬೆಂಗಳೂರು: ಉತ್ತರಾಖಂಡ್‍ನಲ್ಲಿ ಸಂಭವಿಸಿದ ಮೇಘ ಸ್ಫೋಟಕ್ಕೆ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಈ ನಡುವೆ ಅಲ್ಲಿ ಕರ್ನಾಟಕದವರು ಕೂಡ ಅಪಾಯದಲ್ಲಿದ್ದರು. ಅಲ್ಲಿಂದ ಇದೀಗ ಸುರಕ್ಷಿತವಾಗಿ ಬೆಂಗಳೂರಿಗೆ ಬಂದಿಳಿದ ಕನ್ನಡಿಗರು, ನಾವು ಪರ್ವತದ ನೀರು ಕುಡಿದು ದೇವಾಲಯದಲ್ಲಿ ಕೊಟ್ಟ ಪ್ರಸಾದವನ್ನು ಸೇವಿಸಿ ಬದುಕುಳಿದೆವು ಎಂದು ಉತ್ತರಾಖಂಡ್‍ನ ಪ್ರವಾಹ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ.

    Uttarakhand Flood bengaluru kandigaru

    ಉತ್ತರಾಖಂಡ್‍ನ ಪ್ರವಾಹ ಪರಿಸ್ಥಿತಿಯಿಂದ ಪಾರಾಗಿ ಇದೀಗ ಬೆಂಗಳೂರಿಗೆ ಬಂದ 5 ಜನ ಕನ್ನಡಿಗರಿದ್ದ ಟೆಕ್ಕಿಗಳ ತಂಡ ಪಬ್ಲಿಕ್ ಟಿವಿ ಜೊತೆ ಅಲ್ಲಿನ ಪ್ರವಾಹ ಭೀಕರತೆಯ ಅನುಭವಗಳನ್ನು ಹಂಚಿಕೊಂಡಿದ್ದು, ನಮಗೆ ಅಲ್ಲಿನ ಒಂದೊಂದು ಅನುಭವವೂ ಮೈ ಜುಮ್ಮೆನ್ನಿಸುತ್ತದೆ. ಬದುಕಿ ಬಂದದ್ದೆ ಸಾಹಸ. ಎರಡು ದಿನ ಊಟವಿಲ್ಲ, ನೀರಿಲ್ಲ ಕಾರಿನಲ್ಲೇ ಐದು ಜನ ನಿದ್ದೆ ಮಾಡಿದ್ದೇವು. ಪರ್ವತದಿಂದ ಹರಿಯುತ್ತಿರುವ ನೀರು ಕುಡಿದು, ದೇವಾಲಯದಲ್ಲಿ ಕೊಟ್ಟ ಪ್ರಸಾದವನ್ನು ಸೇವಿಸಿ ಎರಡು ದಿನ ಹಗಲು, ರಾತ್ರಿ ಕಳೆದಿದ್ದೇವು. ಇದನ್ನೂ ಓದಿ: ಉತ್ತರಾಖಂಡ್ ಮೇಘ ಸ್ಫೋಟ – ಸಾವಿನ ಸಂಖ್ಯೆ 52ಕ್ಕೆ ಏರಿಕೆ 5 ಮಂದಿ ನಾಪತ್ತೆ

    60 ಕೀ.ಮೀ ಎತ್ತರದ ಗುಡ್ಡದಲ್ಲಿ ನಾವು ಸಿಲುಕಿಕೊಂಡಿದ್ದೇವು. ಕುಸಿದ ಗುಡ್ಡಗಳು, ಹಾಗೂ ರಸ್ತೆಗಳನ್ನು ದುರಸ್ತಿ ಮಾಡುತ್ತಲೇ ಜೆಸಿಬಿಗಳ ಮೂಲಕ ನಮ್ಮನ್ನು ರಕ್ಷಣೆ ಮಾಡಲಾಗಿದೆ. ನಾಮ್ಮ ತಂಡ ಅಕ್ಟೋಬರ್ 18 ರಂದು ಪಾತಾಳ ಭುವನೇಶ್ವರಿ ದೇವಾಲಯದ ದರ್ಶನಕ್ಕೆ ಹೋಗಿದ್ದೇವು. ನಂತರ ಬರುವಾಗ ಮಳೆ ಶುರುವಾಗಿತ್ತು. ರಸ್ತೆಯಲ್ಲಿ ಮೊದಲು ಕಲ್ಲುಗಳು ಬಿದ್ದಿತ್ತು. ಅದನ್ನು ಸರಿಸಿ ಬರುತ್ತಿದ್ದಂತೆ ಮುಂದೆ ನೂರಾರು ಕಡೆ ಗುಡ್ಡಕುಸಿತವಾಗಿತ್ತು. ನಾವು ಎರಡು ದಿನ ಗುಡ್ಡ ಕುಸಿತಗೊಂಡ ರಸ್ತೆ ಮಧ್ಯೆ ಸಿಲುಕಿದ್ದೇವು. ಬಳಿಕ ಕರ್ನಾಟಕ ರಾಜ್ಯ ಸರ್ಕಾರದ ಸಹಕಾರ ಮತ್ತು ದೇವರ ದಯೆಯಿಂದ ಸೇಫಾಗಿ ಬಂದಿದ್ದೇವೆ ಎಂದು ಸಾವಿನಂಚಿನಿಂದ ಪಾರಾಗಿ ಬಂದ ಕನ್ನಡಿಗರು ನೆನಪಿನ ಬುತ್ತಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ್ ಮಳೆ- ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ CM