Tag: ಮೇಯರ್

  • ಮಾಜಿ ಮೇಯರ್ ಮನೆಯಲ್ಲಿ 1.29 ಕೋಟಿ ರೂ. ಮೌಲ್ಯದ ವಸ್ತುಗಳ ಕಳ್ಳತನ

    ಮಾಜಿ ಮೇಯರ್ ಮನೆಯಲ್ಲಿ 1.29 ಕೋಟಿ ರೂ. ಮೌಲ್ಯದ ವಸ್ತುಗಳ ಕಳ್ಳತನ

    ಬೆಂಗಳೂರು: ಮಾಜಿ ಮೇಯರ್ (Former Mayor) ಮನೆಯಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ (Theft) ಮಾಡಿರುವ ಘಟನೆ ಬೆಂಗಳೂರಿನ (Bengaluru) ಸಂಜಯನಗರದಲ್ಲಿ (Sanjay Nagar) ನಡೆದಿದೆ.

    ನಗರದ ಆರ್‌ಎಂವಿ 2ನೇ ಹಂತದಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯ ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿಯಿಂದ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಿಂದ ಸುಮಲತಾ ದೂರ; ಹೆಚ್‌ಡಿಕೆ ಪರ ಪ್ರಚಾರಕ್ಕಿಳಿಯದ ಸಂಸದೆ – ಬರ್ತಾರೆ ನೋಡೋಣ ಎಂದ ಮಾಜಿ ಸಿಎಂ

    ಒಟ್ಟು 1,29,17,000 ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಚ್‌ಗಳು ಹಾಗೂ ನಗದು ಕಳ್ಳತನ ಮಾಡಲಾಗಿದೆ. 99,75,000 ರೂ. ಮೌಲ್ಯದ 1,425 ಗ್ರಾಂ ಚಿನ್ನಾಭರಣ, 18,92,000 ರೂ. ಮೌಲ್ಯದ 22 ಕೆಜಿ ಬೆಳ್ಳಿ ವಸ್ತುಗಳು, 6.50 ಲಕ್ಷ ರೂ. ಮೌಲ್ಯದ 3 ವಾಚ್‌ಗಳು ಹಾಗೂ 4 ಲಕ್ಷ ರೂ. ನಗದು ಹಣ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಆರ್.ನಾರಾಯಣಸ್ವಾಮಿ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸೆಕ್ಯೂರಿಟಿ ಗಾರ್ಡ್ ನರಬಹದ್ದೂರ ಶಾಯಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇಂದು, ನಾಳೆ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಮಳೆ ಮುನ್ಸೂಚನೆ

  • ಮೇಯರ್‌ ಚುನಾವಣೆಯಲ್ಲಿ ಸೋಲು- ಗಳಗಳನೇ ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

    ಮೇಯರ್‌ ಚುನಾವಣೆಯಲ್ಲಿ ಸೋಲು- ಗಳಗಳನೇ ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

    – ಸಮಾಧಾನ ಮಾಡ್ತಿರೋ ಕುಟುಂಬಸ್ಥರ ವೀಡಿಯೋ ವೈರಲ್‌

    ಚಂಡೀಗಢ: ಮೇಯರ್ ಚುನಾವಣೆಯ ಫಲಿತಾಂಶದದಲ್ಲಿ ಬಿಜೆಪಿ ವಿರುದ್ಧ ಎಎಪಿ (AAP) ಅಭ್ಯರ್ಥಿ ಕುಲದೀಪ್ ಕುಮಾರ್ (Kuldeep Kumar) ಸೋಲು ಕಂಡಿದ್ದಾರೆ. ಈ ಸೋಲನ್ನು ಅರಗಿಸಿಕೊಳ್ಳಲು  ಆಗದೇ ಕುಲದೀಪ್‌ ಕಣ್ಣೀರು ಹಾಕಿದ್ದಾರೆ.

    ಮೇಯರ್‌ ಚುನಾವಣೆಯಲ್ಲಿ ಕುಲದೀಪ್‌ ಅವರು ಬಿಜೆಪಿಯ ಮನೋಜ್ ಸೋಂಕರ್ (Manoj Sonkar) ವಿರುದ್ಧ ಸೋಲು ಕಂಡಿದ್ದಾರೆ. ಸದ್ಯ ಕುಲದೀಪ್‌ ಅವರು ಕಣ್ಣೀರು ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

    ವೀಡಿಯೋದಲ್ಲೇನಿದೆ..?: ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಕುಲದೀಪ್‌ ಅವರು ಗಳಗಳನೇ ಅತ್ತಿದ್ದಾರೆ. ಈ ವೇಳೆ ಕುಟುಂಬಸ್ಥರು ಬಂದು ಅವರನ್ನು ಸಮಾಧಾನ ಪಡಿಸಿದ್ದಾರೆ. ಜೊತೆಗೆ ಹಲವರು ಅವರಿಗೆ ಸಮಾಧಾನ ಮಾಡುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಕಮಲೋತ್ಪತ್ತಿ – I.N.D.I.A ಒಕ್ಕೂಟಕ್ಕೆ ಭಾರೀ ಮುಖಭಂಗ

    ಈ ಚುನಾವಣೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ (Congress) ಕೇವಲ 12 ಮತಗಳನ್ನು ಪಡೆದುಕೊಂಡರೆ, ಬಿಜೆಪಿ (BJP) 16 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೊದಲ ಪರೀಕ್ಷೆಯಲ್ಲಿಯೇ ವಿಫಲವಾದ ಕಾರಣ ಬಿಜೆಪಿ ಪಕ್ಷವು ಕೇಂದ್ರಾಡಳಿತ ಪ್ರದೇಶದಲ್ಲಿ ಎಎಪಿ ಮತ್ತು ಕಾಂಗ್ರೆಸ್‌ಗೆ ಗಂಭೀರ ಹೊಡೆತವನ್ನು ನೀಡಿದೆ.

    ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ನಿರ್ದೇಶನದ ಮೇರೆಗೆ ಈ ಚುನಾವಣೆ ನಡೆದಿದೆ. ಕಳೆದ ಎಂಟು ವರ್ಷಗಳಿಂದ ಮೇಯರ್ ಹುದ್ದೆಯನ್ನು ಹೊಂದಿರುವ ಬಿಜೆಪಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರತಿಪಕ್ಷ INDIA ಬ್ಲಾಕ್ ಸದಸ್ಯರಾದ ಕಾಂಗ್ರೆಸ್ ಮತ್ತು ಎಎಪಿ ಕೈಜೋಡಿಸುವುದರೊಂದಿಗೆ ಮಹತ್ವ ಪಡೆದುಕೊಂಡಿದೆ. ಮೈತ್ರಿಯ ಭಾಗವಾಗಿ, ಎಎಪಿ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದರೆ, ಕಾಂಗ್ರೆಸ್ ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತು.

  • ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಮಾಲೆ: ಭಾರತ ವಿರೋಧಿ ನಿಲುವು ತೆಳೆದು, ಚೀನಾ ಪರ ವಾಲಿರುವ ಮಾಲ್ಡೀವ್ಸ್ (Maldives) ಅಧ್ಯಕ್ಷ ಮೊಹಮ್ಮದ್ ಮುಯಿಝು (Mohamed Muizzu) ಅವರ ಪಕ್ಷಕ್ಕೆ ಮೇಯರ್‌ ಚುನಾವಣೆಯಲ್ಲಿ ಭಾರೀ ಮುಖಭಂಗವಾಗಿದ್ದು, ಭಾರತದ ಪರ ನಿಲುವು ಹೊಂದಿರುವ ಪಕ್ಷ ಜಯಗಳಿಸಿದೆ.

    ಮಾಲೆಯ ಮೇಯರ್‌ ಚುನಾವಣೆಯಲ್ಲಿ ಸದ್ಯ ವಿರೋಧ ಪಕ್ಷವಾಗಿರುವ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (MDP) ಭರ್ಜರಿ ಜಯ ಸಾಧಿಸಿದೆ.

    https://twitter.com/MayorAdamAzim/status/1746609631437500766

     

    ಈ ಮೊದಲು ಮೊಹಮ್ಮದ್ ಮುಯಿಝು ಅವರು ಮೇಯರ್‌ ಆಗಿ ಆಯ್ಕೆಯಾಗಿದ್ದರು. ಅಧ್ಯಕ್ಷರಾಗಿ ನೇಮಕವಾದ ಬಳಿಕ ಮೇಯರ್‌ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಉಪ ಚುನಾವಣೆ ನಡೆದಿತ್ತು.

    ಎಂಡಿಪಿ ಅಭ್ಯರ್ಥಿ ಅಜೀಂ 5,303 ಮತಗಳನ್ನು ಪಡೆದರೆ ಪ್ರತಿಸ್ಪರ್ಧಿ ಮುಯಿಝು ಅವರ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (PNP) ಪಕ್ಷದ ಐಶಾತ್ ಅಜಿಮಾ ಶಕೂರ್ ಅವರು 3,301 ಮತಗಳನ್ನು ಪಡೆದಿದ್ದಾರೆ. ಭಾರತದ ವಿರೋಧಿ ನಿಲುವು ತಳೆದಿದ್ದಕ್ಕೆ ಪಿಎನ್‌ಪಿ ಅಭ್ಯರ್ಥಿಗೆ ಸೋಲಾಗಿದೆ ಎಂದೇ ವಿಶ್ಲೇಷಿಸಲಾಗುತ್ತದೆ.  ಇದನ್ನೂ ಓದಿ: #BoycottMaldives ಯಶಸ್ವಿ – EaseMyTripನಿಂದ ಮಾಲ್ಡೀವ್ಸ್‌ ಫ್ಲೈಟ್‌ ಬುಕ್ಕಿಂಗ್‌ ರದ್ದು

    ಚೀನಾ ಪ್ರವಾಸ ಮುಗಿಸಿ ಬಂದಿರುವ ಮೊಹಮ್ಮದ್ ಮುಯಿಝು ಅವರು ಮಾಲ್ಡೀವ್ಸ್‌ನಿಂದ ಭಾರತೀಯ ಸೈನಿಕರನ್ನು (Indian Army) ವಾಪಸ್‌ ಕರೆಸಿಕೊಳ್ಳಬೇಕು ಎಂದು ಭಾರತ ಸರ್ಕಾರ ಸರ್ಕಾರಕ್ಕೆ ಸೂಚಿಸಿದ್ದಾರೆ. ಇದನ್ನೂ ಓದಿ: ಲಕ್ಷದ್ವೀಪಕ್ಕೆ ಮೋದಿ ಭೇಟಿ: ಮಾಲ್ಡೀವ್ಸ್‌ಗೆ ಬಿಗ್‌ ಶಾಕ್‌

    ಮಾರ್ಚ್‌ 15 ರ ಮುಂಚೆಗೆ ಭಾರತೀಯ ಸೇನೆಯನ್ನು ದ್ವೀಪ ರಾಷ್ಟ್ರದಿಂದ (ಮಾಲ್ಡೀವ್ಸ್‌) ಹಿಂತೆಗೆದುಕೊಳ್ಳಬೇಕು ಎಂದು ಮಾಲ್ಡೀವ್ಸ್‌ ಅಧ್ಯಕ್ಷರು ಹೇಳಿದ್ದಾರೆ. ಮಾಲ್ಡೀವ್ಸ್‌ನಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿಗಳು ಮತ್ತು ಮಾಲೆಯಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ನಡುವಿನ ಸಭೆಯ ನಂತರ ಈ ಹೇಳಿಕೆ ಬಂದಿದೆ.

     

  • ಸೀತೆ ಭಾರತದ ಮಗಳಲ್ಲ: ‘ಆದಿಪುರುಷ’ ಸಿನಿಮಾ ಡೈಲಾಗ್ ವಿರುದ್ಧ ಕಠ್ಮಂಡು ಮೇಯರ್ ಗರಂ

    ಸೀತೆ ಭಾರತದ ಮಗಳಲ್ಲ: ‘ಆದಿಪುರುಷ’ ಸಿನಿಮಾ ಡೈಲಾಗ್ ವಿರುದ್ಧ ಕಠ್ಮಂಡು ಮೇಯರ್ ಗರಂ

    ಪ್ರಭಾಸ್ ನಟನೆಯ ಆದಿಪುರುಷ (Adipurusha) ಸಿನಿಮಾ ಎಲ್ಲ ಕಡೆ ತುಂಬಿದ ಪ್ರದರ್ಶನ ಕಾಣುತ್ತಿದೆ. ಜಗತ್ತಿನಾದ್ಯಂತ ರಿಲೀಸ್ ಆಗಿರುವ ಚಿತ್ರದ ಒಂದು ಡೈಲಾಗ್ ಬಗ್ಗೆ ಕಠ್ಮಂಡು (Kathmandu)  ಮೇಯರ್ ಗರಂ ಆಗಿದ್ದಾರೆ. ವಿವಾದಿತ  ಆ ಡೈಲಾಗ್ ತಗೆಯದಿದ್ದರೆ ಸಿನಿಮಾವನ್ನು ಬ್ಯಾನ್ ಮಾಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ, ಮೂರು ದಿನ ಗಡುವು ಕೂಡ ನೀಡಿದ್ದಾರೆ.

    ಆದಿಪುರುಷ ಸಿನಿಮಾ ಮೊದಲಿನಿಂದಲೂ ವಿವಾದಕ್ಕೀಡು ಆಗುತ್ತಲೇ ಇದೆ. ಸಿನಿಮಾದ ಗ್ರಾಫಿಕ್ಸ್, ರಾವಣನ ಪಾತ್ರ, ತಿರುಪತಿಯಲ್ಲಿ ನಟಿಗೆ ಮುತ್ತಿಟ್ಟ ನಿರ್ದೇಶಕ ಹೀಗೆ ನಾನಾ ಕಾರಣಗಳಿಂದ ಸಿನಿಮಾ ಸುದ್ದಿಯಾಗುತ್ತಿದೆ. ಈ ಬಾರಿ ಡೈಲಾಗ್ ವೊಂದು ಹಲವು ಜನರ ಭಾವನೆಗೆ ಸಂಚಕಾರ ತಂದಿದೆಯಂತೆ. ಇದನ್ನೂ ಓದಿ: ಮಂಡ್ಯದಲ್ಲಿ ಟೀ ಕುಡಿದ ಅಭಿಷೇಕ್: ಥೇಟ್ ಅಪ್ಪನಂತೆ ಮಗ ಎಂದ ಫ್ಯಾನ್ಸ್

    ಈ ಸಿನಿಮಾದಲ್ಲಿ ‘ಸೀತಾ ಭಾರತದ ಮಗಳು..’ ಎಂದು ಡೈಲಾಗ್ ಹೇಳಿಸಲಾಗಿದೆ. ಈ ಮಾತಿಗೆ ಕಠ್ಮುಂಡು ಮೇಯರ್ (Mayor) ಆಕ್ಷೇಪನೆಯನ್ನು ಎತ್ತಿದ್ದಾರೆ. ರಾಮಾಯಣದ ಪ್ರಕಾರ ಸೀತೆಯು ನೇಪಾಳದ ಜಾನಕ್ ಪುರದಲ್ಲಿ ಜನಿಸಿದ್ದಾರೆ. ಇಲ್ಲಿಗೆ ಶ್ರೀರಾಮ ಬಂದು ಸೀತೆಯನ್ನು ಮದುವೆ ಆಗಿರುವ ಉಲ್ಲೇಖ ಕೂಡ ಇದೆ. ಆದರೆ, ಸಿನಿಮಾದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಮತ್ತು ಸುಳ್ಳು ಹೇಳಲಾಗಿದೆ ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

    ಈಗಾಗಲೇ ನೇಪಾಳದಲ್ಲಿ ಈ ಸಿನಿಮಾದ ಸೆನ್ಸಾರ್ ಅನ್ನು ತಡೆಹಿಡಿಯಲಾಗಿದೆ. ಆದರೆ, ಉಳಿದ ಕಡೆ ಸಿನಿಮಾ ಪ್ರದರ್ಶನವಾಗುತ್ತಿದೆ. ಎಲ್ಲೆಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆಯೋ ಅಲ್ಲಲ್ಲಿ, ಈ ಡೈಲಾಗ್ ತಗೆಯಲೇಬೇಕು ಎಂದು ಮೇಯರ್ ಒತ್ತಾಯಿಸಿದ್ದಾರೆ. ಸಿನಿಮಾವನ್ನು ನೇಪಾಳದಲ್ಲಿ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

  • ದೆಹಲಿ ಪಾಲಿಕೆ ಚುಕ್ಕಾಣಿ ಹಿಡಿದ ಆಮ್ ಆದ್ಮಿ – ಶೆಲ್ಲಿ ಒಬೆರಾಯ್ ಮೇಯರ್ ಆಗಿ ಆಯ್ಕೆ

    ದೆಹಲಿ ಪಾಲಿಕೆ ಚುಕ್ಕಾಣಿ ಹಿಡಿದ ಆಮ್ ಆದ್ಮಿ – ಶೆಲ್ಲಿ ಒಬೆರಾಯ್ ಮೇಯರ್ ಆಗಿ ಆಯ್ಕೆ

    ನವದೆಹಲಿ : ಮಹಾನಗರ ಪಾಲಿಕೆ ಮೇಯರ್ (Delhi Mayor) ಚುನಾವಣೆ ಅಂತ್ಯವಾಗಿದ್ದು, ಆಮ್ ಆದ್ಮಿ ಅಭ್ಯರ್ಥಿ ಶೆಲ್ಲಿ ಒಬೆರಾಯ್ (Shelly Oberoi) ಮೇಯರ್ ಆಗಿ ಆಯ್ಕೆಯಾಗಿದ್ದಾರೆ‌. ಒಟ್ಟು 150 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ರೇಖಾ ಗುಪ್ತಾ ಅವರನ್ನು 34 ಮತಗಳ ಅಂತರದಿಂದ ಸೋಲಿಸಿದರು‌.

    ನಾಮನಿರ್ದೇಶಿತ ಸದಸ್ಯರಿಗೆ ಮತದಾನಕ್ಕೆ ಅವಕಾಶ ನೀಡುವ ವಿಚಾರವಾಗಿ ಬಿಜೆಪಿ (BJP) ಮತ್ತು ಆಪ್ (AAP) ತಿಕ್ಕಾಟದಿಂದ ಮೂರು ಬಾರಿ ಮೇಯರ್ ಚುನಾವಣೆ ಮುಂದೂಡಿಕೆಯಾಗಿತ್ತು. ಬಳಿಕ ಆಪ್ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸದಂತೆ ಸೂಚನೆ ನೀಡಿ ಕೂಡಲೇ ಚುನಾವಣೆ ನಡೆಸಬೇಕು ಎಂದು ಸೂಚನೆ ನೀಡಿತ್ತು.

    ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಇಂದು ಮೇಯರ್ ಆಯ್ಕೆಗೆ ಚುನಾವಣೆ ನಡೆದಿತ್ತು. 266 ಮತಗಳಲ್ಲಿ ರೇಖಾ ಗುಪ್ತಾ 116 ಮತಗಳನ್ನು ಪಡೆದರೆ, ಶೆಲ್ಲಿ ಒಬೆರಾಯ್ 150 ಮತಗಳನ್ನು ಪಡೆಯುವ ಮೂಲಕ ಗೆಲವು ಸಾಧಿಸಿದರು. ಬಳಿಕ ಮಾತನಾಡಿದ ಅವರು, ನಾನು ಈ ಸದನವನ್ನು ಸಾಂವಿಧಾನಿಕ ರೀತಿಯಲ್ಲಿ ನಡೆಸುತ್ತೇನೆ ಎಂದು ಭರವಸೆ ನೀಡುತ್ತೇನೆ. ನೀವೆಲ್ಲರೂ ಸದನದ ಘನತೆಯನ್ನು ಕಾಪಾಡುತ್ತೀರಿ ಮತ್ತು ಅದರ ಸುಗಮ ಕಾರ್ಯನಿರ್ವಹಣೆಯಲ್ಲಿ ಸಹಕರಿಸುತ್ತೀರಿ ಎಂದು ನಾನು ನಿರೀಕ್ಷಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಗ್ರಾಮಗಳ ಆಸ್ತಿ ಸರ್ವೆಗೆ ಡ್ರೋಣ್ ಸರ್ವೆ ಪ್ರಕ್ರಿಯೆ ನಡೆಯುತ್ತಿದೆ: ಅಶೋಕ್

    ಮೇಯರ್ ಆಯ್ಕೆ ಬಳಿಕ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia), ಸೌರಭ್ ಭಾರದ್ವಾಜ್ ಟ್ವೀಟ್ ಮಾಡಿ ಶೆಲ್ಲಿ ಒಬೆರಾಯ್ ಅವರಿಗೆ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್‌ನಿಂದ ಮೃತರಾದ ಕುಟುಂಬಕ್ಕೆ 446 ಕೋಟಿ ಪರಿಹಾರ ನೀಡಲಾಗಿದೆ: ಆರ್ ಅಶೋಕ್

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿಯಾಗಿ ಘೋಷಣೆ

    ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿಯಾಗಿ ಘೋಷಣೆ

    ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಮೇಯರ್ (MCD Mayor) ಅಭ್ಯರ್ಥಿಗಳ ಪಟ್ಟಿಯನ್ನು ಆಪ್ ಬಿಡುಗಡೆ ಮಾಡಿದೆ. ಶೆಲ್ಲಿ ಒಬೆರಾಯ್ (Shelly Oberoi) ಅವರನ್ನ ಮೇಯರ್ ಅಭ್ಯರ್ಥಿಯಾಗಿ ಹಾಗೂ ಆಲೆ ಮೊಹಮ್ಮದ್ ಇಕ್ಬಾಲ್ ಅವರನ್ನ ಉಪಮೇಯರ್ ಅಭ್ಯರ್ಥಿಗಳಾಗಿ ಆಪ್ ಘೋಷಣೆ ಮಾಡಿದೆ.

    ದೆಹಲಿ ವಿಶ್ವವಿದ್ಯಾನಿಲಯದ (Delhi University) ನಿವೃತ್ತ ಪ್ರಧ್ಯಾಪಕಿ ಆಗಿರುವ ಶೆಲ್ಲಿ ಒಬೆರಾಯ್ ಈ ಬಾರಿ ನಡೆದ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ (BJP) ಭದ್ರಕೋಟೆಯನ್ನ ಭೇದಿಸಿ ಕೌನ್ಸಿಲರ್ ಆಗಿದ್ದಾರೆ. ಇದನ್ನೂ ಓದಿ: ಹಿಜಬ್ ಸೂಚನೆ ಕಡೆಗಣನೆ, ಮಹಿಳೆಯರು ಮದುವೆಗೆ ಹೋಗುವ ಉಡುಪು ಧರಿಸುತ್ತಾರೆ: ತಾಲಿಬಾನ್ ಸಮರ್ಥನೆ

    ಇನ್ನೂ ದೆಹಲಿಯಲ್ಲಿ 6 ಬಾರಿ ಶಾಸಕರಾಗಿದ್ದ ಶೋಯೆಬ್ ಇಕ್ಬಾಲ್ ಅವರ ಪುತ್ರ ಆಲೆ ಮೊಹಮ್ಮದ್ ಇಕ್ಬಾಲ್ 17 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನಿಗೆ ಕಾರು ನೀಡದೇ ಕಿರಿಕ್‌- ನಲಪಾಡ್‌ ವಿರುದ್ಧ ದೂರು

    ಇದೇ ತಿಂಗಳ ಡಿಸೆಂಬರ್ 8 ರಂದು ನಡೆದ ದೆಹಲಿ ನಗರಪಾಲಿಕೆ ಚುನಾವಣೆಯಲ್ಲಿ (MCD Election) ಆಮ್ ಆದ್ಮಿ ಪಕ್ಷ ಗೆದ್ದು, ಬಿಜೆಪಿಯ 15 ವರ್ಷಗಳ ಪ್ರಾಬಲ್ಯವನ್ನು ಕೊನೆಗೊಳಿಸಿತು. ಓಟ್ಟು 250 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನ ಗೆದ್ದರೆ, ಎಎಪಿ 134 ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್ ಕೇವಲ 9 ಸ್ಥಾನ ಗೆದ್ದು ತೀವ್ರ ಮುಖಭಂಗ ಅನುಭವಿಸಿತು. ಇದನ್ನೂ ಓದಿ: ಮಂಡ್ಯದಲ್ಲಿ ಜಾಮಿಯಾ ಮಸೀದಿ ವಿವಾದ ಕೆಣಕಿ ಬಿಜೆಪಿ ರಾಜಕೀಯ -ಹೆಚ್‌ಡಿಕೆ

    Live Tv
    [brid partner=56869869 player=32851 video=960834 autoplay=true]

  • ಶಿವಮೊಗ್ಗ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮೀ ಶಂಕರನಾಯ್ಕ್ ಆಯ್ಕೆ

    ಶಿವಮೊಗ್ಗ ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಆಗಿ ಲಕ್ಷ್ಮೀ ಶಂಕರನಾಯ್ಕ್ ಆಯ್ಕೆ

    ಶಿವಮೊಗ್ಗ: ಮಹಾನಗರ (Shivamogga City Corporation) ಪಾಲಿಕೆ ಮೇಯರ್‌ (Mayor) ಆಗಿ ಶಿವಕುಮಾರ್‌ ಮತ್ತು ಉಪ ಮೇಯರ್‌ (Deputy Mayor) ಆಗಿ ಲಕ್ಷ್ಮೀ ಶಂಕರನಾಯ್ಕ್‌ ಆಯ್ಕೆಯಾಗಿದ್ದಾರೆ.

    ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಿತು. ಮೇಯರ್ ಸ್ಥಾನ ಎಸ್‌ಸಿ ಸಮುದಾಯಕ್ಕೆ ಹಾಗೂ ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿ (BJP) ಬಹುಮತ ಹೊಂದಿರುವ ಪಾಲಿಕೆಯಲ್ಲಿ ಮೇಯರ್ ಆಗಿ ಎಸ್.ಶಿವಕುಮಾರ್ ಮತ್ತು ಉಪಮೇಯರ್ ಆಗಿ ಲಕ್ಷ್ಮೀ ಶಂಕರನಾಯ್ಕ್ ಆಯ್ಕೆಯಾದರು. ಇದನ್ನೂ ಓದಿ: ಸಿದ್ದು, ಡಿಕೆಶಿಗೆ ಖರ್ಗೆಯ ಭಯ ಶುರುವಾಗಿದೆ: ಕಟೀಲ್

    ಪಾಲಿಕೆಯ ಒಟ್ಟು 35 ಸದಸ್ಯರಲ್ಲಿ 23 ಸದಸ್ಯರು ಬಿಜೆಪಿಯ ಶಿವಕುಮಾರ್ ಪರ ಮತದಾನ ಹಾಕಿದ್ದಾರೆ. ಅದರಂತೆ ಮಾಜಿ ಸಚಿವ ಹಾಗೂ ಶಿವಮೊಗ್ಗ ನಗರ ಶಾಸಕ ಈಶ್ವರಪ್ಪ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್ ನಾಯ್ಕ್, ಎಂಎಲ್ಸಿ ಆಯನೂರು ಮಂಜುನಾಥ್ ಸಹ ಮತ ಚಲಾಯಿಸುವ ಮೂಲಕ 26 ಮತಗಳನ್ನ ಪಡೆದರು. ಇವರ ಪ್ರತಿ ಸ್ಪರ್ಧಿ ಆರ್‌.ಸಿ.ನಾಯ್ಕ್ 11 ಮತ ಪಡೆದರು.

    ಉಪಮೇಯರ್ ಆಗಿ ಲಕ್ಷ್ಮೀ ಶಂಕರನಾಯ್ಕ್ 26 ಮತಗಳನ್ನು ಪಡೆದರೆ, ಇವರ ಪ್ರತಿಸ್ಪರ್ಧಿ ರೇಖಾ ರಂಗನಾಥ್ 11 ಮತ ಪಡೆದು ಸೋಲು ಅನುಭವಿಸಿದರು. ನೂತನ ಮೇಯರ್ ಹಾಗೂ ಉಪ ಮೇಯರ್‌ ಅವರನ್ನು ಮಾಜಿ ಸಚಿವ ಈಶ್ವರಪ್ಪ ಅಭಿನಂದಿಸಿದರು. ಇದನ್ನೂ ಓದಿ: ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್‌ಪೋರ್ಟ್‌ ನಿರ್ಮಾಣ: ಮುರುಗೇಶ್ ನಿರಾಣಿ

    Live Tv
    [brid partner=56869869 player=32851 video=960834 autoplay=true]

  • ಹು-ಧಾ ಮಹಾನಗರ ಪಾಲಿಕೆ ಸದಸ್ಯ, ಮೇಯರ್ ಗೌನ್ ಗುದ್ದಾಟ – ‘ಕೈ’ ಸದಸ್ಯರಿಗೆ ಹಿನ್ನಡೆ

    ಹು-ಧಾ ಮಹಾನಗರ ಪಾಲಿಕೆ ಸದಸ್ಯ, ಮೇಯರ್ ಗೌನ್ ಗುದ್ದಾಟ – ‘ಕೈ’ ಸದಸ್ಯರಿಗೆ ಹಿನ್ನಡೆ

    ಹುಬ್ಬಳ್ಳಿ: ರಾಜ್ಯದ ಮಹಾನಗರ ಪಾಲಿಕೆಗಳ ಮಹಾಪೌರರು ಪಾಲಿಕೆಯ ಸಭೆ ಹಾಗೂ ವಿಶೇಷ ಸಂದರ್ಭಗಳಲ್ಲಿ ಗೌನ್ (Gown)  ಧರಿಸುವುದು ಆಯಾ ಮಹಾನಗರ ಪಾಲಿಕೆಗಳ ಮಹಾಪೌರರ ವಿವೇಚನೆಗೆ ಬಿಟ್ಟ ವಿಷಯವಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದ್ದು, ಹು-ಧಾ ಮಹಾನಗರ ಪಾಲಿಕೆಯ ‘ಕೈ’ (Congress) ಸದಸ್ಯರಿಗೆ ಹಿನ್ನಡೆಯಾಗಿದೆ.

    ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಈ ಕುರಿತು ಸ್ಪಷ್ಟನೆ ನೀಡಿದ್ದು, ಗೌನ್ ಧರಿಸುವ ವಿಷಯದಲ್ಲಿ ಸ್ಪಷ್ಟನೆ ಕೋರಿ ಹು-ಧಾ ಮಹಾನಗರ ಪಾಲಿಕೆಯ ಮೇಯರ್ ಈರೇಶ್ ಅಂಚಟಗೇರಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪಾಲಿಕೆಯ ಸಾಮಾನ್ಯ ಸಭೆ ಅ. 28 ರಂದು ಧಾರವಾಡದಲ್ಲಿ (Dharwad) ನಡೆಯಲಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ಸ್ಪಷ್ಟನೆ ಮಹತ್ವ ಪಡೆದುಕೊಂಡಿದೆ. ಪಾಲಿಕೆಯ ಸೆಪ್ಟೆಂಬರ್ ಮಾಸಿಕ ಸಭೆಯಲ್ಲಿ ಮೇಯರ್ ಈರೇಶ್ ಅಂಚಟಗೇರಿ ಗೌನ್ ಧರಿಸದೆ ಪಾಲ್ಗೊಂಡಿದ್ದನ್ನು ಕಾಂಗ್ರೆಸ್ ಸದಸ್ಯರು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಸಭೆ ನಡೆಸಲು ಅವಕಾಶ ನೀಡಿರಲಿಲ್ಲ. ಬಳಿಕ ಸಭೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಗಿತ್ತು. ಇದನ್ನೂ ಓದಿ: ಭಾರತೀಯ ರೂಪಾಯಿ, ಏಮ್ಸ್ ಯೋಜನೆ ಬಗ್ಗೆ ಟೀಕೆ – ಬಿಜೆಪಿ ವಿರುದ್ಧ ಉದಯನಿಧಿ ಸ್ಟಾಲಿನ್ ವಾಗ್ದಾಳಿ

    ಪೂರ್ವ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಪೌರ ಸನ್ಮಾನ ಕಾರ್ಯಕ್ರಮದಲ್ಲೂ ಮೇಯರ್ ಗೌನ್ ಧರಿಸಿರಲಿಲ್ಲ. ಮುಖ್ಯಮಂತ್ರಿ ಅವರ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಹೀಗೆ ಮಾಡಿದ್ದೆ ಎಂದು ಮೇಯರ್ ತಿಳಿಸಿದ್ದರು. ಇದೀಗ ಸರ್ಕಾರವೇ ಲಿಖಿತವಾಗಿ ಸ್ಪಷ್ಟನೆ ನೀಡಿದೆ. ಆದರೆ, ಮೇಯರ್ ಗೌನ್ ಧರಿಸುವುದಿಲ್ಲ ಎಂಬುದು ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಧಾರವಾಗಬೇಕು ಎಂಬುದು ಕಾಂಗ್ರೆಸ್ ವಾದವಾಗಿದೆ. ಇನ್ನು ಮುಂದೆ ಪಾಲಿಕೆ ಸಭೆಗಳಲ್ಲಿ, ಮಹತ್ವದ ಕಾರ್ಯಕ್ರಮಗಳಲ್ಲಿ ಗೌನ್ ಧರಿಸುವುದಿಲ್ಲ ಎಂದು ಮೇಯರ್ ಈರೇಶ್ ಅಂಚಟಗೇರಿ ತಿಳಿಸಿದ್ದರು. ಇದನ್ನೂ ಓದಿ: ಕೆಲಸವಿಲ್ಲದವ ಮಂಗನ ಜೊತೆ ಆಡಲು ಹೊರಟಂತೆ ಸುನಿಲ್ ಕುಮಾರ್ ವಿವಾದ ಸೃಷ್ಟಿಸಲು ಹೊರಟಿದ್ದಾರೆ: ಕಾಂಗ್ರೆಸ್

    Live Tv
    [brid partner=56869869 player=32851 video=960834 autoplay=true]

  • ಮೆಕ್ಸಿಕೋದಲ್ಲಿ ಗುಂಡಿನ ದಾಳಿ – ಮೇಯರ್ ಸೇರಿ 18 ಮಂದಿ ಸಾವು

    ಮೆಕ್ಸಿಕೋದಲ್ಲಿ ಗುಂಡಿನ ದಾಳಿ – ಮೇಯರ್ ಸೇರಿ 18 ಮಂದಿ ಸಾವು

    ಮೆಕ್ಸಿಕೋ ಸಿಟಿ: ದಕ್ಷಿಣ ಮೆಕ್ಸಿಕೋದ (Mexico) ಸ್ಯಾನ್ ಮಿಗುಲ್ ಟೊಟೊಲಾಪನ್ ನಗರದ ಮುನ್ಸಿಪಲ್ ಹಾಲ್ ಹಾಗೂ ಮನೆಯೊಂದರಲ್ಲಿ ಬದೂಕುಧಾರಿಗಳು ದಾಳಿ (Shooting) ನಡೆಸಿ, ಮೇಯರ್ (Mayor) ಸೇರಿದಂತೆ 18 ಜನರ ಹತ್ಯೆ ನಡೆಸಿದ್ದಾರೆ.

    ವರದಿಗಳ ಪ್ರಕಾರ ಬಂದೂಕುಧಾರಿಗಳ ಗುಂಪು ಮುಖವಾಡಗಳನ್ನು ಹಾಕಿಕೊಂಡು 2 ಕಾರ್‌ಗಳಲ್ಲಿ ಮುನ್ಸಿಪಲ್ ಹಾಲ್ ಕಡೆಗೆ ಬಂದಿದ್ದಾರೆ. ಅಲ್ಲಿನ ಮೇಯರ್ ಕಾನ್ರಾಡೋ ಮೆಂಡೋಜಾ ಹಾಗೂ ಅವರ ತಂದೆ, ಮಾಜಿ ಮೇಯರ್ ಜುವಾನ್ ಮೆಂಡೋಜಾ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಥಾಯ್ಲೆಂಡ್‌ ಡೇ ಕೇರ್‌ ಸೆಂಟರ್‌ನಲ್ಲಿ ಮಕ್ಕಳ ಮಾರಣಹೋಮ – 34 ಮಂದಿಯನ್ನು ಹತ್ಯೆಗೈದ ಪಾಪಿ

    ಗುಂಡಿನ ದಾಳಿಗೆ ಬಲಿಯಾದ 18 ಜನರಲ್ಲಿ ಹೆಚ್ಚಿನವರು ಸ್ಥಳೀಯ ಸರ್ಕಾರದ ಸದಸ್ಯರಾಗಿದ್ದಾರೆ. ಘಟನೆಯಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ಶ್ವಾನ ನಿಧನ – ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಬರೆದಿದ್ದ ʻಪೆಬ್ಲೆಸ್‌ʼ

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿಯಲ್ಲೀಗ `PAY MAYOR’ ಅಭಿಯಾನ

    ಹುಬ್ಬಳ್ಳಿಯಲ್ಲೀಗ `PAY MAYOR’ ಅಭಿಯಾನ

    ಹುಬ್ಬಳ್ಳಿ: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿಗಳಿಗೆ (President of India) ಪೌರ ಸನ್ಮಾನ ಮಾಡುವ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿದ್ದ ಹುಬ್ಬಳ್ಳಿ (Hubballi) ಧಾರವಾಡ ಮಹಾನಗರ ಪಾಲಿಕೆ (City Corporation) ಮೇಲಿಗ ಗಂಭೀರ ಆರೋಪ ಕೇಳಿ ಬಂದಿದೆ.

    ರಾಷ್ಟ್ರಪತಿಗಳ (President Of India) ಕಾರ್ಯಕ್ರಮಕ್ಕೆ ಹಾಕಿದ್ದ ವೇದಿಕೆ ನಿರ್ಮಾಣದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಕೆಲ ಕಾಂಗ್ರೆಸ್ ಕಾರ್ಯಕರ್ತರು, ಪೇ ಸಿಎಂ (PayCM) ಅಭಿಯಾನದ ಮಾದರಿಯಲ್ಲಿ ಪೇ ಮೆಯರ್ (Pay Mayor) ಅಭಿಯಾನ ಆರಂಭಿಸಿದ್ದಾರೆ. ಈ ಪರಿಣಾಮ ಹುಬ್ಬಳ್ಳಿ ಪ್ರಮುಖ ವೃತ್ತಗಳಲ್ಲಿ ಪೇ ಮೇಯರ್ ಅಂತ ಈರೇಶ್ ಅಂಚಟಗೇರಿ ಅವರ ಪೋಸ್ಟರ್ ಹಾಕಲಾಗಿದೆ. ಇದನ್ನೂ ಓದಿ: ದಸರಾ ಸಂಭ್ರಮ – ಲಾರ್ಡ್ಸ್ ಪೆವಿಲಿಯನ್‌ನಲ್ಲಿ ನಿಂತು ತ್ರಿವರ್ಣ ಧ್ವಜ ಹಾರಿಸಿದ ಗಂಗೂಲಿ

    ಇದೇ ಸೆಪ್ಟೆಂಬರ್ 26ರಂದು ನಡೆದ ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮಕ್ಕಾಗಿ ದೇಶಪಾಂಡೆ ನಗರದ ಜೀಮ್ ಖಾನ್ ಮೈದಾನದಲ್ಲಿ 5 ಸಾವಿರ ಜನಕ್ಕೆ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಈ ವೇದಿಕೆ ಮತ್ತು ರಾಷ್ಟ್ರಪತಿಗಳ ಪೌರಸನ್ಮಾನಕ್ಕೆ ಬರೊಬ್ಬರಿ 1.5 ಕೋಟಿ ಖರ್ಚಾಗಿದೆ. ಈ ಖರ್ಚು ಮಾಡುವುದರಲ್ಲಿ ಪಾಲಿಕೆ ನಿಯಮ ಪಾಲನೆ ಮಾಡಿಲ್ಲ ಹಾಗೂ ಪೆಂಡಾಲ್ ಹಾಕಿಸಿದ ಬಳಿಕ ಕೊಟೇಶನ್ ಆಹ್ವಾನ ಮಾಡಲಾಗಿದೆ. ಇದರಿಂದಾಗಿ ಕಾರ್ಯಕ್ರಮದ ನಿರ್ವಹಣೆ ಖರ್ಚಿನಲ್ಲಿ ಬ್ರಹ್ಮಾಂಡದ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಮೇಯರ್ ಕೈವಾಡಯಿದೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರ ಆರೋಪವಾಗಿದೆ. ಆದ್ದರಿಂದ ಹುಬ್ಬಳ್ಳಿ ನಗರದ ಕೆಲವಡೆ ಪೇ ಮೇಯರ್ ಪೋಸ್ಟರ್ ಅಂಟಿಸಿ ಕಾಂಗ್ರೆಸ್ (Congress) ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್‌ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ

    ಕಾಂಗ್ರೆಸ್ ಕಾರ್ಯಕರ್ತರ ಈ ಅಭಿಯಾನಕ್ಕೆ ಮೇಯರ್ ಈರೇಶ್ ಅಂಚಟಗೇರಿ ಕೆಂಡಾಮಂಡಲರಾಗಿದ್ದಾರೆ. ರಾಷ್ಟ್ರಪತಿಗಳ ಕಾರ್ಯಕ್ರಮದ ಖರ್ಚಿನಲ್ಲಿ ಒಂದು ರೂಪಾಯಿ ಸಹ ಭ್ರಷ್ಟಾಚಾರವಾಗಿಲ್ಲ. ಇನ್ನೂ ಕಾರ್ಯಕ್ರಮದ ನಿರ್ವಹಣೆಯಲ್ಲಿ ಮೇಯರ್ ಪಾತ್ರವೇ ಬರುವುದಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದರಿಂದ ಒಂದು ಕಡೆ ರಾಷ್ಟ್ರಪತಿಗಳಿಗೆ ಅಪಮಾನ ಮಾಡಿದಂತಾದ್ರೆ ಮತ್ತೊಂದು ಕಡೆ ಮೇಯರ್ ಸ್ಥಾನ ಘನತೆಯನ್ನು ಹಾಳು ಮಾಡುವ ಹುನ್ನಾರ ಇದಾಗಿದೆ. ಹೀಗಾಗಿ ಪೋಸ್ಟರ್ ಅನ್ನು ಸಾಮಾಜಿಕ ತಾಣದಲ್ಲಿ ಶೇರ್ ಮಾಡಿದವರ ಮತ್ತು ಪೊಸ್ಟ್ ಅಂಟಿಸಿದವರ ವಿರುದ್ಧ ಪೊಲೀಸ್ ಕಮಿಷನರ್‌ (Police Commissioner Hubballi) ಗೆ ದೂರು ನೀಡಿರುವುದಾಗಿ ಮೇಯರ್ ಮಾಧ್ಯಮಗಳ ಮುಂದೆ ಅಸಮಾಧಾನ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]