ತಿರುವನಂತಪುರಂ: ಕೇರಳದ ತಿರುವನಂತಪುರಂನ ಮೇಯರ್ ಆರ್ಯ ರಾಜೇಂದ್ರನ್ ಬಲುಸ್ಸೆರಿಯ ಶಾಸಕ ಸಚಿನ್ ದೇವ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿಶೇಷವೆಂದರೆ ಆರ್ಯ ರಾಜೇಂದ್ರನ್ ಭಾರತದ ಅತ್ಯಂತ ಕಿರಿಯ ಮೇಯರ್ ಆಗಿದ್ದು, ಸಚಿನ್ ದೇವ್ ಕೇರಳ ವಿಧಾನಸಭೆಯ ಅತ್ಯಂತ ಕಿರಿಯ ಎಂಎಲ್‌ಎ ಆಗಿದ್ದಾರೆ.
ಭಾನುವಾರ ಈ ಜೋಡಿ ಕೇರಳದ ತಿರುವನಂತಪುರಂನಲ್ಲಿರುವ ಎಕೆಜಿ ಸೆಂಟರ್‌ನಲ್ಲಿ ತಮ್ಮ ಕುಟುಂಬದ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆರ್ಯ ರಾಜೇಂದ್ರನ್ ತಮ್ಮ 21ನೇ ವಸ್ಸಿನಲ್ಲಿ ಮೇಯರ್ ಆಗಿದ್ದರು. ಕಳೆದ ತಿಂಗಳಿನಲ್ಲಿ ಈ ಜೋಡಿ ಮದುವೆಯಾಗುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಯುದ್ಧವನ್ನು 6 ಗಂಟೆಗಳ ಕಾಲ ನಿಲ್ಲಿಸೋದು ಸಾಮಾನ್ಯದ ಮಾತಾ!: ಹಾಲಪ್ಪ
ಈ ಜೋಡಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್ವಾದಿ)ದ ವಿದ್ಯಾರ್ಥಿ ವಿಭಾಗದ ಬಾಲಸಂಘದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಪರಸ್ಪರ ಪರಿಚಯವಾಗಿದ್ದರು. ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಜೋಡಿ ಮದುವೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಮಹಿಳಾ ದಿನಾಚರಣೆ – ಸೀರೆ, ಶೂ ತೊಟ್ಟು ಮಹಿಳೆಯರ ಓಟ
ಮೈಸೂರು: ಶಾಸಕ ರಾಮದಾಸ್ ವರ್ಸಸ್ ಸಂಸದ ಪ್ರತಾಪಸಿಂಹ ಫೈಟ್‍ಗೆ ಕೊನೇ ಕೌನ್ಸಿಲ್ ಸಭೆ ಬಲಿಯಾಗಿದೆ. ಅಲ್ಲದೆ ಮೇಯರ್ ಸುನಂದಾ ಪಾಲನೇತ್ರ ಕಣ್ಣೀರು ಹಾಕಿದ್ದಾರೆ.
ಕೇಂದ್ರ ಸರ್ಕಾರದ ಮನೆಗಳಿಗೆ ನೇರ ಗ್ಯಾಸ್ ಪೈಪ್‍ಲೈನ್ ಮತ್ತು ಕೇಬಲ್ ಅಳವಡಿಕೆಗೆ ಶಾಸಕ ರಾಮದಾಸ್ ವಿರೋಧಿಸಿದ್ದಾರೆ. ಕೆ.ಆರ್. ಕ್ಷೇತ್ರದಲ್ಲಿ ಉತ್ತಮ ರಸ್ತೆ ಮಾಡಿದ್ದೇವೆ. ಈಗ ಅದನ್ನು ಅಗೆದು ಅನಿಲ ಪೈಪ್‍ಲೈನ್ ಹಾಕುವುದು ಬೇಡ. ಜನರ ಹಿತದೃಷ್ಟಿಯಿಂದ ಗ್ಯಾಸ್ ಪೈಪ್‍ಲೈನ್‍ಗೆ ಅನುಮತಿ ಕೊಡಬಾರದು ಅಂತ ಮೈಸೂರು ಪಾಲಿಕೆ ಆಯುಕ್ತರಿಗೆ ರಾಮದಾಸ್ ಪತ್ರ ಬರೆದಿದ್ದರು.
ಇದಕ್ಕೆ ಕೆಂಡಾಮಂಡಲ ಆಗಿರೋ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್-ಜೆಡಿಎಸ್‍ನವರೇ ವಿರೋಧಿಸಿಲ್ಲ. ನಮ್ಮದೇ ಶಾಸಕರು ವಿರೋಧಿಸ್ತಾರೆ. ರಾಮದಾಸ್ ಮೋದಿಗಿಂತ ಸೀನಿಯರ್ರಾ..? ಬುದ್ದಿವಂತರು, ಜ್ಞಾನಿಗಳಾ..? ಬ್ಯಾನರ್‍ನಲ್ಲಿ ಮೋದಿ ಫೋಟೋ ಹಾಕಿಕೊಂಡು ಉತ್ಸವ ಮಾಡಿದರೆ ಆಗಲ್ಲ. ಇದ್ಯಾವುದಕ್ಕೂ ನಾನು ಕೇರ್ ಮಾಡಲ್ಲ. ಯೋಜನೆಯನ್ನು ಪೂರ್ತಿ ಮಾಡುತ್ತೇನೆ ಅಂತ ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಕಾಗೆ ಕಾಟಕ್ಕೆ ಚಿತ್ರದುರ್ಗದ ಓಬಳಾಪುರ ಜನ ಸುಸ್ತು..!
ಅಲ್ಲದೆ ಕೆಲಸ ಕಾರ್ಯ ಬಿಟ್ಟು ಸಭೆಗೆ ಬಂದರೆ ಏಕಾಏಕಿ ಮೀಟಿಂಗ್ ಕ್ಯಾನ್ಸಲ್ ಮಾಡ್ತೀರಾ ಅಂತ ಮೇಯರ್‍ಗೆ ಗದರಿದ್ದಾರೆ. ಇದರಿಂದ ಕಣ್ಣೀರು ಹಾಕಿದ ಮೇಯರ್ ಸುನಂದಾ, ಕಾಂಗ್ರೆಸ್-ಜೆಡಿಎಸ್ ಸದಸ್ಯರು ಗೈರಾದ ಕಾರಣ ಕೋರಂ ಅಭಾವ ಆಗಿ ಸಭೆಯನ್ನು ಮುಂದೂಡಿದೆ. ಸದಸ್ಯರನ್ನು ಕೌನ್ಸಿಲ್‍ಗೆ ಬರಬೇಡಿ ಎಂದು ಯಾರು ಹೇಳಿದ್ದಾರೋ ಗೊತ್ತಿಲ್ಲ. ಇದು ನನಗೆ ಮಾಡಿದ ಅಪಮಾನವಲ್ಲ, ಮೇಯರ್ ಹುದ್ದೆಗೆ ಅಪಮಾನ ಅಂತ ಹೇಳಿದ್ದಾರೆ. ಇದನ್ನೂ ಓದಿ:ಲಂಚ ಕೊಡೋಕೆ ಹಣ ಇರ್ಲಿಲ್ಲ – ಅಮ್ಮನ ಹೊಟ್ಟೆಯಲ್ಲೇ ಮಗು ಸತ್ತೋಯ್ತು..!
ಮುಂಬೈ: ಕೊರೊನಾ ಸೋಂಕಿತರ ಸಂಖ್ಯೆ ಇಪ್ಪತ್ತು ಸಾವಿರದ ಗಡಿ ದಾಟಿದರೆ ಮುಂಬೈನಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ.
ಮುಂಬೈನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದರು. ಮುಂಬೈನಲ್ಲಿ ಸೋಮವಾರ 8000ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಇದು 2021 ರ ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತೀ ಹೆಚ್ಚು ಪ್ರಕರಣಗಳಾಗಿದೆ. ನಿತ್ಯ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ಜೊತೆಗೆ ಓಮಿಕ್ರಾನ್ ಕೂಡಾ ಹೆಚ್ಚು ಕಂಡು ಬರುತ್ತಿದ್ದು ಮಹಾರಾಷ್ಟ್ರದಲ್ಲಿ ಈವರೆಗೂ 500 ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಈ ಸಂಖ್ಯೆಯಲ್ಲಿ ಬಹುತೇಕ ಪ್ರಕರಣಗಳು ಮುಂಬೈ ಮೂಲದ್ದಾಗಿದೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ನೈಟ್ ಕರ್ಫ್ಯೂ ಜೊತೆಗೆ ಶಾಲಾ-ಕಾಲೇಜು ಬಂದ್
We will have to impose lockdown in Mumbai if daily COVID cases cross the 20,000-mark: Mumbai Mayor Kishori Pednekar pic.twitter.com/7AV7fMSjS0
ಮುಂಬೈನಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಈಗಾಗಲೇ 1 ರಿಂದ 9 ಮತ್ತು 11 ನೇ ತರಗತಿಗಳ ಎಲ್ಲಾ ಮಾಧ್ಯಮಗಳ ಶಾಲೆಗಳನ್ನು ಜನವರಿ 31 ರವರೆಗೆ ಮುಚ್ಚಲು ಪಾಲಿಕೆ ನಿರ್ಧರಿಸಿದೆ. ಆನ್ ಲೈನ್ ತರಗತಿಗಳಿಗೆ ಆದ್ಯತೆ ನೀಡಲು ಸೂಚಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್ ಬಂದ್
ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಅಪಾರ್ಟ್ ಮೆಂಟ್‍ಗಳಲ್ಲಿ 20% ಕ್ಕಿಂತ ಹೆಚ್ಚು ಸೋಂಕು ಪತ್ತೆಯಾದರೆ ಇಡೀ ಅಪಾರ್ಟ್ ಮೆಂಟ್ ಸೀಲ್ ಡೌನ್ ಮಾಡಲು ನಿರ್ಧರಿಸಿದೆ. ಒಂದು ವರದಿಯ ಪ್ರಕಾರ, ಪ್ರಕರಣಗಳ ಹೆಚ್ಚಳದಿಂದಾಗಿ ನಗರದಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಪ್ರಮಾಣ ಕಳೆದ ನಾಲ್ಕು ದಿನಗಳಲ್ಲಿ 15% ಹೆಚ್ಚಾಗಿದೆ ಎಂದು ಅವರು ಹೇಳಿದರು.
ಲಕ್ನೋ: ಬಿಜೆಪಿ ಅಧಿಕಾರದಲ್ಲಿರುವ 12 ರಾಜ್ಯಗಳ ಮುಖ್ಯಮಂತ್ರಿಗಳು ವಾರಣಾಸಿಗೆ ಭೇಟಿ ನೀಡಿದ ಬೆನ್ನಲ್ಲೇ ಇದೀಗ ಭಾರತದ 100 ಮೇಯರ್‌ಗಳು ಕಾಶಿಗೆ ಭೇಟಿ ನೀಡಿದ್ದಾರೆ.
ಇಂದು ವಾರಣಾಸಿಯಲ್ಲಿ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಯ ಸಂಸದರಾದ ಬಳಿಕ ಕಾಶಿ ಬದಲಾಗಿ ಅಭಿವೃದ್ಧಿಯತ್ತ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಶಿ ಮಾದರಿ ಅಭಿವೃದ್ಧಿಯ ದರ್ಶನ ಮೇಯರ್‌ಗಳಿಗೆ ಆಗಬೇಕು ಹಾಗೂ ಅವರು ಕೂಡ ತಮ್ಮ ನಗರದಗಳಲ್ಲಿ ಈ ಮಾದರಿ ಅವಳಪಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಕಾಶಿಯಲ್ಲಿ ಮೇಯರ್‌ಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ: ಕಾಶಿಯಿಂದ ಕಾಶ್ಮೀರದವರೆಗೆ ಅಭಿವೃದ್ಧಿ – ಮೋದಿ ಅವಧಿಯಲ್ಲಿ ಯಾವೆಲ್ಲ ದೇವಾಲಯಗಳು ಜೀರ್ಣೋದ್ಧಾರಗೊಂಡಿದೆ?
PM Narendra Modi to inaugurate and address the All India Mayors’ Conference shortly via video conferencing.
The conference is being organised by the Department of Urban Development, Uttar Pradesh in Varanasi. Mayors from various states are participating in the conference. pic.twitter.com/fcO8Ez1aP0
ಕರ್ನಾಟಕದಿಂದ 5 ಮೇಯರ್: ವಾರಣಾಸಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಮೇಯರ್‌ಗಳ ಸಮ್ಮೇಳನದಲ್ಲಿ ರಾಜ್ಯದಿಂದ 5 ಮಂದಿ ಭಾಗವಹಿಸಲಿದ್ದಾರೆ. ಮೈಸೂರಿನ ಮೇಯರ್ ಸುನಂದಾ ಪಾಲನೇತ್ರ, ಶಿವಮೊಗ್ಗದ ಸುನೀತಾ ಅಪ್ಪಣ್ಣ, ಮಂಗಳೂರಿನ ಪ್ರೇಮಾನಂದ ಶೆಟ್ಟಿ, ದಾವಣಗೆರೆಯ ಎಸ್.ಟಿ ವೀರೇಶ, ತುಮಕೂರಿನ ಕೃಷ್ಣಪ್ಪ ಪಾಲ್ಗೊಂಡಿದ್ದಾರೆ. ಕಾಶಿ ವಿಶ್ವನಾಥನ ದರ್ಶನ ಜೊತೆಗೆ ಕಾಶಿ ಅಭಿವೃದ್ಧಿಯ ಕುರಿತು ಅರಿವು ನೀಡುವ ಕಾರ್ಯಕ್ರಮ ಇದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ಆಗಿ ಸಮ್ಮೇಳನಕ್ಕೆ ಚಾಲನೆ ನೀಡಿ ಭಾಷಣ ಮಾಡಲಿದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವ ಹರ್‍ದೀಪ್ ಸಿಂಗ್ ಪುರಿ ಅವರು ಸಹ ಈ ಸಭೆಯಲ್ಲಿ ಭಾಗವಹಿಸಿದ್ದಾರೆ.
ಕಲಬುರಗಿ: ಅಚ್ಚರಿಯ ಫಲಿತಾಂಶದೊಂದಿಗೆ ಅತಂತ್ರ ಸ್ಥಿತಿಯಲ್ಲಿರುವ ಕಲಬುರಗಿ ಮಹಾನಗರಪಾಲಿಕೆಯ ಮೇಯರ್ ಚುನಾವಣೆ ಕಗ್ಗಂಟು ಹಾಗೇಯೇ ಮುಂದುವರೆದಿದೆ. ತಮ್ಮ ಪಕ್ಷಕ್ಕೆ ಯಾರು ಮೇಯರ್ ಸ್ಥಾನ ಕೊಡುತ್ತಾರೋ ಆ ಪಕ್ಷಕ್ಕೆ ನಮ್ಮ ಬೆಂಬಲ ನೀಡುವುದಾಗಿ ಜನತಾ ದಳದ ಅಲ್ಪಸಂಖ್ಯಾತರ ರಾಜ್ಯ ಉಪಾಧ್ಯಕ್ಷರಾದ ಉಸ್ತಾದ್ ನಾಸೀರ್ ಹುಸೇನ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ಈ ಯಾವುದೇ ಪಕ್ಷಗಳು ಆಹ್ವಾನಕ್ಕೆ ಬಂದರು ಸ್ವಾಗತ, ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಬಿಟ್ರೆ ಕಾಂಗ್ರೆಸ್‍ನ ಯಾವ ನಾಯಕರು ಜೆಡಿಎಸ್‍ಗೆ ಸಂಪರ್ಕ ಮಾಡಿಲ್ಲ, ಆದರೆ ಬಿಜೆಪಿಯಿಂದ ಸಾಕಷ್ಟು ನಾಯಕರು ನಮ್ಮ ಸಂಪರ್ಕ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಸಹ ಮೇಯರ್ ಪಟ್ಟ ನಮ್ಮ ಪಕ್ಷಕ್ಕೆ ಯಾವ ಪಕ್ಷ ನೀಡುತ್ತದೆಯೋ ಆ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳೋಣ ಎಂದಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕಲಬುರಗಿ ಮೇಯರ್ ಚುನಾವಣೆ- ಜೆಡಿಎಸ್ ಮುಂದೆ ಮಂಡಿಯೂರಲು ಕಾಂಗ್ರೆಸ್ ಸಜ್ಜಾಗಿದ್ಯಾ?
ಚುನಾವಣೆಯ ಫಲಿತಾಂಶದ ಬಳಿಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಜೆಡಿಎಸ್ ಪಕ್ಷದ ನಾಲ್ವರು ಸದಸ್ಯರು ಕಲಬುರಗಿ ನಗರಕ್ಕೆ ಬಂದಿದ್ದಾರೆ. ನಿನ್ನೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ನಮ್ಮ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುವುದು ನಿಶ್ಚಿತ ಹಾಗೂ ಜೆಡಿಎಸ್ ಪಕ್ಷ ನಮಗೆ ಬೆಂಬಲಿಸುವ ಆತ್ಮವಿಶ್ವಾಸನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್‍ನ ಡಾ. ಶರಣಪ್ರಕಾಶ್ ಪಾಟೀಲ್ ಅವರು ಕೂಡ ನಮ್ಮ ಪಕ್ಷವೇ ಪಾಲಿಕೆಯಲ್ಲಿ ಅಧಿಕಾರ ನಡೆಸಲಿದೆ ಎಂದು ಹೇಳಿದ್ದು, ಎರಡು ಪಕ್ಷಗಳು ತಮ್ಮ ತಮ್ಮ ಪಕ್ಷದವರೇ ಮೇಯರ್ ಆಗುವುದಾಗಿ ಹೇಳಿಕೆ ನೀಡುತ್ತಿದ್ದಾರೆ.
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಅವರು ಆಯ್ಕೆಯಾಗಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.
ಬಹಳ ವರ್ಷದ ನಂತರ ಬಿಜೆಪಿಯವರು ಮೇಯರ್ ಆಗಿದ್ದಾರೆ. ಇದಕ್ಕೆ ಎಲ್ಲ ಪಾಲಿಕೆ ಸದಸ್ಯರಿಗೆ ಹಾಗೂ ಮೈಸೂರಿನ ಜನತೆಗೆ ಧನ್ಯವಾದಗಳು. ಇದಕ್ಕಾಗಿ ಶ್ರಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಅಶೋಕ್, ಶಾಸಕರಾದ ನಾಗೇಂದ್ರ, ರಾಮದಾಸ್, ಪಕ್ಷದ ಕಾರ್ಯಕರ್ತರು, ಅಧ್ಯಕ್ಷರು ಸೇರಿ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲು -ಮೈಸೂರು ಪಾಲಿಕೆಯಲ್ಲಿ ಬಿಜೆಪಿಗೆ ಮೇಯರ್ ಪಟ್ಟ
ದೆಹಲಿ ಪ್ರವಾಸ: ದೆಹಲಿಗೆ ಇಂದು ತೆರಳಿದ ಮುಖ್ಯಮಂತ್ರಿಗಳು ಸಂಜೆ ಕೇಂದ್ರ ಕೃಷಿ ಸಚಿವರು ಹಾಗೂ ಜಲಶಕ್ತಿ ಸಚಿವರನ್ನು ಭೇಟಿಯಾಲಿದ್ದಾರೆ. ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗುತ್ತೇನೆ. ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲು ಸಮಯ ಕೋರಿರುವುದಾಗಿ ಸಿಎಂ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.
– ತಂದೆ, ಗಾರ್ಡ್ ಮೇಲೆ ಹಲ್ಲೆ ನಡೆಸಿದ್ರು – ಜಗತ್ತಿಗೆ ಇವರ ಅಸಲಿ ಮುಖ ಅನಾವರಣ ಮಾಡ್ತೀನಿ
ಕಾಬೂಲ್: ತಾಲಿಬಾನಿಗಳು ನನ್ನನ್ನು ಹುಡುಕುತ್ತಾ ನಮ್ಮ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ನನ್ನ ತಂದೆ ಮತ್ತು ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ ಹೋಗಿದ್ದಾರೆ ಎಂದು ಅಫ್ಘಾನಿಸ್ತನದ ಮೊದಲ ಮಹಿಳಾ ಮೇಯರ್ ಜರೀಫಾ ಗಫ್ರಿ ಹೇಳಿದ್ದಾರೆ. ಸದ್ಯ ಜರೀಫಾ ಗಫರ್ ಜರ್ಮನಿಯಲ್ಲಿ ಸುರಕ್ಷಿತವಾಗಿದ್ದಾರೆ.
ಅಫ್ಘಾನಿಸ್ತಾನ ತಾಲಿಬಾನಿಗಳ ಕೈ ವಶವಾಗುತ್ತಿದ್ದ ಅಲ್ಲಿಯ ಮಕ್ಕಳು ಮತ್ತು ಮಹಿಳೆಯರ ಮುಂದಿನ ಭವಿಷ್ಯ ಏನು ಎಂಬುದರ ಪ್ರಶ್ನೆಗೆ ಉತ್ತರ ಸಿಗದಂತಾಗಿದೆ. ಇತ್ತ ತಾಲಿಬಾನಿಗಳು ಸಾಮಾಜಿಕ ಸೇವೆ ಮತ್ತು ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಮಹಿಳೆಯರ ಮನೆಗಳ ಮೇಲೆ ದಾಳಿ ನಡೆಸುತ್ತಿರುವ ಬಗ್ಗೆ ವರದಿಯಾಗ್ತಿದೆ.
20 ವರ್ಷ ಪಡೆದುಕೊಂಡಿದ್ದ ಸ್ವಾತಂತ್ರ್ಯ ಇಲ್ಲ:
ನ್ಯೂಸ್ ಏಜೆನ್ಸಿಗೆ ಸಂದರ್ಶನ ನೀಡಿರುವ ಜರೀಫಾ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ತಮಗೆ ಆಶ್ರಯ ನೀಡಿರುವ ಜರ್ಮನಿ ಸರ್ಕಾರಕ್ಕೂ ಧನ್ಯವಾದ ಸಲ್ಲಿಸಿದ್ದಾರೆ. ಅಫ್ಘಾನಿಸ್ತಾನದ ಜನರನನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ. ಅವರು ಯಾವುದಕ್ಕೂ ಹೆದರಲ್ಲ. ತಾಲಿಬಾನಿ ಉಗ್ರರು ಎಷ್ಟೇ ಜನರನ್ನು ಕೊಂದರೂ ನಮ್ಮ ಹೋರಾಟ ನಿಲ್ಲಲ್ಲ. ಕಳೆದ 20 ವರ್ಷಗಳಲ್ಲಿ ನಾವು ಪಡೆದುಕೊಂಡಿದ್ದು ಎಲ್ಲವೂ ನಮ್ಮೊಂದಿಗೆ ಇಲ್ಲ. ನನ್ನ ದೇಶದ ಮಣ್ಣು ಮಾತ್ರ ಬಳಿಯಲ್ಲಿದೆ ಎಂದು ಭಾವುಕರಾಗಿದ್ದಾರೆ.
ಪಾಕ್ ವಿರುದ್ಧ ಆಕ್ರೋಶ:
ಇಂದಿನ ಅಫ್ಘಾನಿಸ್ತಾನದ ಸ್ಥಿತಿಗೆ ಜನರು, ರಾಜಕೀಯ ಮುಖಂಡರು ಮತ್ತು ನಮ್ಮ ವಿಶ್ವವೇ ಕಾರಣ. ಸ್ಥಳೀಯ ಜನರು ಒಮ್ಮೆಯೂ ಒಗ್ಗಟ್ಟಾಗಿ ಉಗ್ರರ ವಿರುದ್ಧ ಧ್ವನಿ ಎತ್ತುವ ಪ್ರಯತ್ನ ಮಾಡಲಿಲ್ಲ. ಪಾಕಿಸ್ತಾನ ಏನು ಮಾಡಿದೆ ಅನ್ನೋ ವಿಷಯ ಅಫ್ಘಾನಿಸ್ತಾನದ ಪ್ರತಿ ಮಗುವಿಗೆ ಗೊತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು
ಅಫ್ಘಾನಿಸ್ತಾನ ನಮ್ಮದೇ:
ಇದು ನಮ್ಮ ದೇಶ, ಎಂದಿಗೂ ನಮ್ಮದೇ ಆಗಿರುತ್ತೆ. ಇಂದು ನನ್ನಂತಹ ಮಹಿಳೆಯರು ಅಫ್ಘಾನಿಸ್ತಾದಲ್ಲಿರುವ ಪರಿಸ್ಥಿತಿ ಇಲ್ಲ. ಬೇಟೆಗೂ ಮುನ್ನ ಹುಲಿ ಎರಡು ಹೆಜ್ಜೆ ಹಿಂದೆ ಹಾಕೋದು ಭಯದಿಂದಲ್ಲ. ತನ್ನ ಪೂರ್ಣ ಶಕ್ತಿಯನ್ನು ಪ್ರಯೋಗಿಸಲು ಎಂಬುದನ್ನ ಅಲ್ಲಿದ್ದವರು ಅರ್ಥ ಮಾಡಿಕೊಳ್ಳಬೇಕು. ಜರ್ಮನಿಯಲ್ಲಿರು ನಾವು ಶೇ.99 ಅಫ್ಘನ್ನರು ಮತ್ತು ಮಹಿಳೆಯರ ಧ್ವನಿಯಾಗಿರುತ್ತೇನೆ. ವಿಶ್ವದ ಮುಂದೆ ತಾಲಿಬಾನಿಗಳನ್ನು ಅನಾವರಣಗೊಳಿಸುವ ಕೆಲಸ ಮಾಡಲಿದ್ದೇನೆ. ಇಲ್ಲಿಂದಲೇ ನನ್ನ ಮುಂದಿನ ಕೆಲಸಗಳನ್ನು ಆರಂಭಿಸಲಿದು, ಅವರ ವಿರುದ್ಧ ಧ್ವನಿ ಎತ್ತುತ್ತೇನೆ ಎಂದು ಹೇಳಿದ್ದಾರೆ. ಇಂದು ನಾವು ಎರಡು ಹೆಜ್ಜೆ ಹಿಂದೆ ಬಂದಿರೋದು ಇದೇ ಕಾರಣ ಎಂದು ಹೇಳುವ ತಾಲಿಬಾನಿಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದರು. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!
ಕಳೆದ ವಾರ ಇಸ್ತಾಂಬುಲ್ ಗೆ ತೆರಳಿದ್ದ ಜರೀಫಾ ಈಗ ಜರ್ಮನಿಯಲ್ಲಿದ್ದಾರೆ. ಸದ್ಯ ಜರೀಫಾ ಜೊತೆ ಅವರ ಕುಟುಂಬ ಸದಸ್ಯರಿದ್ದಾರೆ. ತಾವು ನಿರಾಶ್ರಿತಳಾಗಿ ಜರ್ಮನಿಗೆ ಬಂದಿಲ್ಲ ಎಂದು ಹೇಳಿಕೊಂಡಿದ್ದಾರೆ. ಇತ್ತ ಜರ್ಮನಿಯಲ್ಲಿ ಅಫ್ಘನ್ನರಿಗೆ ಆಶ್ರಯ ನೀಡುವ ಕುರಿತಿ ಹಲವು ಸಮಸ್ಯೆಗಳು ಎದುರಾಗಿವೆ. ಇದನ್ನೂ ಓದಿ:ಕಾಬೂಲ್‍ನಿಂದ ಉಕ್ರೇನ್ ವಿಮಾನ ಹೈಜಾಕ್
ಚಾಮರಾಜನಗರ: ಮೇಯರ್ ಚುನಾವಣೆಯಲ್ಲಿ ಒಬ್ಬ ನಾಯಕರಿಗೆ ಹಿನ್ನೆಡೆ ಉಂಟು ಮಾಡಬೇಕೆಂದು ಸ್ವಪಕ್ಷದವರೇ ಮೇಯರ್ ಸ್ಥಾನವನ್ನು ಬೇರೆ ಪಕ್ಷಕ್ಕೆ ಬಿಟ್ಟುಕೊಟ್ಟರು ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದರು.
ನಗರದಲ್ಲಿ ಆರ್.ಧೃವನಾರಾಯಣ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ರೀತಿಯ ಭಿನ್ನಮತ ಚಟುವಟಿಕೆ ಮತ್ತೆ ಯಾವ ಜಿಲ್ಲೆಯಲ್ಲೂ ಮರುಕಳಿಸಬಾರದು. ಈ ರೀತಿಯ ಘಟನೆಗಳಾದರೆ ಪಕ್ಷದ ಒಗ್ಗಟ್ಟು ಒಡೆಯಲಿದೆ. ಕಾಂಗ್ರೆಸ್‍ನಲ್ಲಿ ಒಗ್ಗಟ್ಟಿಲ್ಲ ಎಂಬ ಭಾವನೆ ಜನರಲ್ಲಿ ಬರಬಾರದು ಎಂದು ಅವರು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಹಿಂದೂ ಧರ್ಮದ ವಿರೋಧಿ ಎಂದು ಚಿತ್ರಿಸಲಾಗುತ್ತಿದೆ. ರಾಜಕಾರಣ ಇರುವ ಹಿಂದುತ್ವವೇ ಬೇರೆ, ಎಲ್ಲರನ್ನೂ ಒಳಗೊಳ್ಳುವ ಹಿಂದೂ ಧರ್ಮವೇ ಬೇರೆ ಎಂಬುದನ್ನು ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ಹಿಂದುತ್ವದ ವಿರೋಧಿಯೇ ಹೊರತು ಹಿಂದೂ ಧರ್ಮದ ವಿರೋಧಿಯಲ್ಲ ಎಂಬುದನ್ನು ಜನರಿಗೆ ತಿಳಿ ಹೇಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ನಿರುದ್ಯೋಗ, ಜಿಡಿಪಿ ಕುಸಿತ, ನಿರಂತರ ಬೆಲೆ ಏರಿಕೆ ಬಿಸಿಯ ಬಗ್ಗೆ ಇದೇ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಯಾವುದೋ ಒಳಸಂಚಿನಿಂದಾಗಿ ಸೋತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುನಂದ ಅವರು, ಕೆ.ಆರ್ ಕ್ಷೇತ್ರ ಮತ್ತು ಪಕ್ಷಕ್ಕೆ ಪ್ರಥಮ ಮೇಯರ್ ಆಗುವ ನೀರಿಕ್ಷೆ ಇತ್ತು ಆದರೆ ಅದು ನಿರಾಸೆ ಆಗಿದೆ ಹಾಗಾಗಿ ತುಂಬಾ ಬೇಸರವಾಗಿದೆ ಎಂದು ತಿಳಿಸಿದರು.
ನಮ್ಮ ವಾರ್ಡ್‍ನಲ್ಲಿ ತುಂಬ ಧೈರ್ಯವಾಗಿ ಕೆಲಸ ನಿರ್ವಹಿಸುತ್ತಿದ್ದೆ. ಆದರೆ ಈ ಸೋಲು ನನ್ನನ್ನು ಮಾನಸಿಕವಾಗಿ ಕುಗ್ಗಿಸಿದೆ. ನಾನು ಮುಖ್ಯಮಂತ್ರಿಗಳಿಂದ ಫಂಡ್ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ವಿನಿಯೋಗಿಸಬೇಕೆಂದು ಅಂದುಕೊಂಡಿದ್ದೆ. ಆದರೆ ಅದು ನಿರಾಸೆ ಆಗಿರುವುದು ತುಂಬ ದುಃಖ ತರಿಸಿದೆ ಎಂದರು.
ನನಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ನನ್ನ ಸೋಲಿನಿಂದ ಎಲ್ಲರಿಗೂ ನೋವಾಗಿದೆ. ಪತ್ರಿಯೊಬ್ಬರೂ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡುತ್ತಿದ್ದಾರೆ. ನಮ್ಮ ಸಮುದಾಯದವರು ಪರಿಶ್ರಮ ಪಟ್ಟಿದ್ದರೆ ಗೆಲ್ಲುತ್ತಿದ್ದೆ. ಗೆದ್ದಿದ್ದರೆ ಮಹಾನಗರ ಪಾಲಿಕೆಯನ್ನು ಅಭಿವೃದ್ದಿಯತ್ತ ಕೊಂಡೊಯ್ಯಬೇಕೆಂಬ ಆಶಯ ಇತ್ತು. ಆದರೆ ಇದು ಸಾಧ್ಯವಾಗಿಲ್ಲ ಎಂಬ ಕೊರಗು ಇದೆ. ಪಕ್ಷದ ಸೋಲು ನನ್ನಿಂದ ಅಗಿಲ್ಲ ಆರೀತಿ ಆರೋಪ ಕೇಳಿಬಂದರೆ ಅದು ಪಿತೂರಿಯಿಂದಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಬಳಿ ಕ್ಷಮೆ ಕೇಳುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿಯಿಂದಾಗಿ ನಿನ್ನೆ ನಡೆದ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಮಹಾನಗರ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಮೈಸೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿಯಿಂದಾಗಿ ನಿನ್ನೆ ನಡೆದ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಮಹಾನಗರ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಸುನಂದ ಪಾಲನೇತ್ರ ಈ ಬಾರಿ ಪಾಲಿಕೆಯ ಪ್ರಬಲ ಮೇಯರ್ ಆಕಾಂಕ್ಷಿಯಾಗಿದ್ದರು. ಸುನಂದ ಪಾಲನೇತ್ರರನ್ನು ಮೇಯರ್ ಮಾಡಲು ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಅಖಾಡಕ್ಕಿಳಿದಿದ್ದರು. ಆದರೆ ಕೊನೆಕ್ಷಣದಲ್ಲಿ ನಡೆದ ರಾಜಕೀಯ ಹೈಡ್ರಾಮಾದಿಂದಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸುನಂದ ಅವರಿಗೆ ಮೇಯರ್ ಸ್ಥಾನ ಕೈತಪ್ಪುವಂವತಾಗಿತ್ತು. ಹಾಗಾಗಿ ಸುನಂದ ಕ್ಷೇತ್ರದಲ್ಲಿನ ರಾಜಕಾರಣಕ್ಕೆ ಮನನೊಂದು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಪತ್ರ ಬರೆಯುವ ಮೂಲಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಸೋತ ನನಗೆ ಬೇಸರ ಉಂಟಾಗಿದೆ. ಚುನಾವಣೆಯಲ್ಲಿ ಸೋತ ನಂತರವು ನನಗೆ ಪಾಲಿಕೆ ಸದಸ್ಯೆಯಾಗಿ ಕರ್ತವ್ಯ ನಿರ್ವಹಿಸಲು ಮಾನಸಿಕ ಹಿಂಸೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನನಗೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಸುನಂದ ಪಾಲನೇತ್ರ ಸಿಎಂಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ವಾರ್ಡ್ ನಂ 59ರಿಂದ ಪಾಲಿಕೆ ಸದಸ್ಯೆಯಾಗಿ ಆಯ್ಕೆಯಾಗಿದ್ದ ಸುನಂದ ಪಾಲನೇತ್ರ ಈ ಬಾರಿಯ ಮೇಯರ್ ಎಂದೇ ಬಿಂಬಿತವಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡರಿಗೆ ಬೆಂಬಲ ಸೂಚಿಸಿ ಮೇಯರ್ ಪಟ್ಟಕ್ಕೇರಿಸಿ, ಉಪಮೇಯರ್ ಆಗಿ ಕಾಂಗ್ರೆಸ್‍ನ ಅನ್ವರ್ ಬೇಗ್ ಅವರನ್ನು ಆಯ್ಕೆ ಮಾಡಿತ್ತು. ಇದರಿಂದ ನೊಂದ ಸುನಂದ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ.