Tag: ಮೇರಿ ಮಿಲಬೆನ್‌

  • ಓಂ ಜೈ ಜಗದೀಶ್‌ ಹರೇ ಭಕ್ತಿಗೀತೆ ಹಾಡಿದ 75ನೇ ಸ್ವಾತಂತ್ರ್ಯೋತ್ಸವದ ಅತಿಥಿ ಅಮೆರಿಕ ಗಾಯಕಿ – ವೀಡಿಯೋ ವೈರಲ್‌

    ಓಂ ಜೈ ಜಗದೀಶ್‌ ಹರೇ ಭಕ್ತಿಗೀತೆ ಹಾಡಿದ 75ನೇ ಸ್ವಾತಂತ್ರ್ಯೋತ್ಸವದ ಅತಿಥಿ ಅಮೆರಿಕ ಗಾಯಕಿ – ವೀಡಿಯೋ ವೈರಲ್‌

    ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಆಫ್ರಿಕಾ ಮೂಲದ ಅಮೆರಿಕ ಗಾಯಕಿ ಮೇರಿ ಮಿಲಬೆನ್‌ ಅವರು, ಭಕ್ತಿ ಗೀತೆ ʼಓಂ ಜೈ ಜಗದೀಶ್ ಹರೇ‌ʼ ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ವೀಡಿಯೋ ವೈರಲ್‌ ಆಗಿದೆ.

    ಮೇರಿ ಮಿಲಬೆನ್‌ ಅವರು ಭಾರತದ ರಾಷ್ಟ್ರಗೀತೆ ʼಜನ ಗಣ ಮನʼ ಹಾಗೂ ಭಕ್ತಿ ಗೀತೆ ʼಓಂ ಜೈ ಜಗದೀಶ್‌ ಹರೇʼ ಗೀತೆಗಳನ್ನು ಸೊಗಸಾಗಿ ಹಾಡುತ್ತಾರೆ. ಈ ಗೀತೆಗಳ ಮೂಲಕವೇ ಅವರು ಭಾರತಕ್ಕೆ ಹೆಚ್ಚು ಚಿರಪರಿಚಿತರಾಗಿದ್ದಾರೆ. ಅವರನ್ನು ಭಾರತೀಯ ಸಾಂಸ್ಕೃತಿಕ ಸಂಬಂಧಿ ಕೌನ್ಸಿಲ್‌ (ಐಸಿಸಿಆರ್‌) ಅತಿಥಿಯಾಗಿ ಆಹ್ವಾನಿಸಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಇನ್ನು ಭಾರತದ ಧ್ವಜ ಮಾತ್ರ ಹಾರುತ್ತದೆ, ಪಾಕ್ ಧ್ವಜ ಇತಿಹಾಸ ಮಾತ್ರ: ಮನೋಜ್ ಸಿನ್ಹಾ

    ಸ್ವಾತಂತ್ರ್ಯೋತ್ಸವಕ್ಕೆ ಅತಿಥಿಯಾಗಿ ಆಗಮಿಸುತ್ತಿರುವುದಕ್ಕೆ ಮಿಲಬೆನ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಅವರನ್ನು ಸಹ ಹಾಡಿ ಹೊಗಳಿದ್ದಾರೆ. ʼಪ್ರಧಾನಿ ಮೋದಿ ಅವರು ಮಹಿಳಾ ಸಬಲೀಕರಣದಲ್ಲಿ ದೂರದೃಷ್ಟಿಯುಳ್ಳ ನಾಯಕರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಭಾರತದ ರಾಷ್ಟ್ರಪತಿಯಾಗುವ ಅವಕಾಶವನ್ನು ಕಲ್ಪಿಸಿದ್ದಾರೆ. ಅದಕ್ಕಾಗಿ ಅವರನ್ನು ಗೌರವಿಸುತ್ತೇನೆʼ ಎಂದು ಹೇಳಿದ್ದಾರೆ.

    ಬುಡಕಟ್ಟು ಸಮುದಾಯದಿಂದ ಬಂದಿರುವ ದ್ರೌಪದಿ ಮುರ್ಮು ಅವರು ಭಾರತದ ರಾಷ್ಟ್ರಪತಿಯಾಗಿದ್ದಾರೆ. ಅವರು ಭಾರತದ ಹೆಣ್ಣುಮಕ್ಕಳಿಗಷ್ಟೇ ಅಲ್ಲ, ಪ್ರಪಂಚದಾದ್ಯಂತ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹರ್‌ಘರ್ ತಿರಂಗ ಅಭಿಯಾನ – ಮಕ್ಕಳಿಗೆ ರಾಷ್ಟ್ರಧ್ವಜ ಹಂಚಿ ಸಂತಸಗೊಂಡ ಮೋದಿ ತಾಯಿ

    Live Tv
    [brid partner=56869869 player=32851 video=960834 autoplay=true]

  • 75ನೇ ಸ್ವಾತಂತ್ರ್ಯೋತ್ಸವಕ್ಕೆ ಅಮೆರಿಕದ ಗಾಯಕಿ ಮೇರಿ ಮಿಲಬೆನ್‌ ಅತಿಥಿ

    75ನೇ ಸ್ವಾತಂತ್ರ್ಯೋತ್ಸವಕ್ಕೆ ಅಮೆರಿಕದ ಗಾಯಕಿ ಮೇರಿ ಮಿಲಬೆನ್‌ ಅತಿಥಿ

    ನವದೆಹಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವಕ್ಕೆ ಅತಿಥಿಯಾಗಿ ಆಫ್ರಿಕಾ ಮೂಲದ ಅಮೆರಿಕದ ಗಾಯಕಿ ಮೇರಿ ಮಿಲಬೆನ್‌ ಅವರು ಭಾರತಕ್ಕೆ ಆಗಮಿಸಲಿದ್ದಾರೆ.

    ಈ ಬಗ್ಗೆ ಮಿಲಬೆನ್‌ ಮಾತನಾಡಿ, ಭಾರತದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಆಚರಣೆಗೆ ಸಾಂಸ್ಕೃತಿಕ ರಾಯಭಾರಿಯಾಗಿ ಅಮೆರಿಕವನ್ನು ಪ್ರತಿನಿಧಿಸಲು ನನಗೆ ಹೆಮ್ಮೆಯಿದೆ ಎಂದು ತಿಳಿಸಿದ್ದಾರೆ.

    ಭಾರತದ ಸ್ವಾತಂತ್ರ್ಯೋತ್ಸವದ ಈ ಪ್ರಮುಖ ಆಚರಣೆಯ ಸಂದರ್ಭದಲ್ಲಿ ಅಮೆರಿಕ ಮತ್ತು ಭಾರತದ ನಡುವಿನ ಪ್ರಮುಖ ಪ್ರಜಾಸತ್ತಾತ್ಮಕ ಮೈತ್ರಿಯನ್ನು ಎಲ್ಲರಿಗೂ ತಿಳಿಸುತ್ತೇನೆ ಎಂದ ಅವರು, ನಾನು ಇತರ ದೇಶಗಳಿಗೆ ಪ್ರವಾಸಕ್ಕಾಗಿ ಹೋಗಬಹುದು ಆದರೆ ಭಾರತಕ್ಕೆ ಯಾತ್ರಾರ್ಥಿಯಾಗಿ ಹೋಗುತ್ತಿದ್ದೇನೆ ಎಂದರು. ಇದನ್ನೂ ಓದಿ: ಲಿಂಗನಮಕ್ಕಿ ಜಲಾಶಯದಲ್ಲಿ ಹೆಚ್ಚಿದ ನೀರು- ಶರಾವತಿ ತೀರ ಪ್ರದೇಶದ ಜನರಿಗೆ ಅಲರ್ಟ್‌

    ರಾಷ್ಟ್ರಗೀತೆ ಜನ ಗಣಮನ ಹಾಗೂ ಭಕ್ತಿಗೀತೆ ಓ ಜೈ ಜಗದೀಶ್ ಹರೇ ಗೀತೆಗಳಿಂದ ಪರಿಚಿತರಾಗಿರುವ ಮಿಲಬೆನ್‌ ಅವರು, ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ (ಐಸಿಸಿಆರ್) ಆಹ್ವಾನದ ಮೇರೆಗೆ ಈ ಪ್ರವಾಸವನ್ನು ಕೈಗೊಂಡಿದ್ದಾರೆ. 40 ವರ್ಷದ ಮಿಲಬೆನ್‌ ಅವರು ಸ್ವಾತಂತ್ರ್ಯ ದಿನಾಚರಣೆಗೆ ಐಸಿಸಿಆರ್‌ನಿಂದ ಭಾರತಕ್ಕೆ ಆಹ್ವಾನಿಸಲ್ಪಟ್ಟ ಮೊದಲ ಅಮೆರಿಕದ ಕಲಾವಿದರಾಗಿದ್ದಾರೆ. ಇದನ್ನೂ ಓದಿ: CWG 2022: ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಅವಿನಾಶ್ ಸಬ್ಲೆ, ಪ್ರಿಯಾಂಕಾ ಗೋಸ್ವಾಮಿ

    Live Tv
    [brid partner=56869869 player=32851 video=960834 autoplay=true]