Tag: ಮೇಲುಕೋಟೆ ಪೊಲೀಸ್

  • ಮೇಲುಕೋಟೆ | ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ – ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

    ಮೇಲುಕೋಟೆ | ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ – ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

    ಮಂಡ್ಯ: ಮಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಹತ್ಯೆ ಮಾಡಿದ್ದ ಆರೋಪಿಯ ತಂದೆಯನ್ನು ಶಿಕ್ಷಕಿಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಪಾಂಡವಪುರ (Pandavapura) ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದ್ದು, ಅದರ ಸಿಸಿಟಿವಿ ಫೂಟೇಜ್ ಈಗ ಪೊಲೀಸರಿಗೆ ಲಭ್ಯವಾಗಿದೆ.

    ನರಸಿಂಹೇಗೌಡ ಅವರ ಪುತ್ರ ನಿತೀಶ್, ವೆಂಕಟೇಶ್ ಅವರ ಪುತ್ರಿ ದೀಪಿಕಾಳನ್ನ ಕೊಲೆ ಮಾಡಿದ್ದ. 16 ತಿಂಗಳು ಕಾದು ಮಗಳ ಸಾವಿಗೆ ಪ್ರತೀಕಾರವಾಗಿ ಆಕೆಯ ತಂದೆ ವೆಂಕಟೇಶ್ ಆರೋಪಿ ನಿತೀಶ್‌ನ ತಂದೆಯನ್ನ ಹತ್ಯೆ ಮಾಡಿದ್ದ. ಇದನ್ನೂ ಓದಿ: ಮಗಳ ಸಾವಿಗೆ ಪ್ರತೀಕಾರ – ‘ತಮ್ಮ’ನ ಅಪ್ಪನನ್ನು ಬರ್ಬರವಾಗಿ ಕೊಂದ ತಂದೆ

    ಎಡಕ್ಕೆ ಕೊಲೆಯಾದ ದೀಪಿಕಾ ಬಲಕ್ಕೆ ಇಂದು ಕೊಲೆಯಾದ ನರಸಿಂಹೇಗೌಡ

    ಇದೇ ತಿಂಗಳ ಮೇ 6ರಂದು ಮಾಣಿಕ್ಯನಹಳ್ಳಿ (Manikyanahalli) ಗೇಟ್‌ ಬಳಿ ನರಸಿಂಹೇಗೌಡ ಟೀ ಕುಡಿಯಲು ಹೋಗಿದ್ದ, ಈ ವೇಳೆ ಸಹವಾಗಿಯೇ ಬಂದ ದೀಪಕಾಳ ತಂದೆ ನರಸಿಂಹನಿಗೆ ಚಾಕುವಿನಿಂದ ಚುಚ್ಚಿ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದ. ನನ್ನ ಮಗಳನ್ನ ಕೊಂದುಬಿಟ್ಟೆ ಅಲ್ವಾ? ನಿನ್ನ ಮಗಳ ಮದುವೆಯನ್ನ ಹೆಂಗೆ ಖುಷಿಯಾಗಿ ಮಾಡ್ತೀಯಾ? ನಿನ್ನನ್ನ ಬಿಡಲ್ಲ, ಮಗಳ ಕೊಂದ ನಿನ್ನ ಮಗನನ್ನೂ ಬಿಡಲ್ಲ ಎನ್ನುತ್ತಲೇ ಮನಸ್ಸೋ ಇಚ್ಚೆ ಚಾಕುವಿನಿಂದ ಇರಿದು, ಚುಚ್ಚಿ ಹತ್ಯೆ ಮಾಡಿದ್ದ. ಈ ಭೀಕರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಳೆದ ರಾತ್ರಿ ಪೊಲೀಸರಿಗೆ ಲಭ್ಯವಾಗಿದೆ. ಇದನ್ನೂ ಓದಿ: ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

    ಏನಿದು ಪ್ರಕರಣ?
    ಟೀಚರ್ ದೀಪಿಕಾ ಮತ್ತು ನಿತೀಶ್ ಇಬ್ಬರು ಸ್ನೇಹ ಹಾಗೂ ಸಲುಗೆಯಿಂದಿದ್ದರು. ಇದನ್ನು ಗಮನಿಸಿದ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ನಿತೀಶ್‌ಗೆ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ದೀಪಿಕಾ ಬಳಿ ಪ್ರಶ್ನಿಸಿದಾಗ ಆತ ನನಗೆ ತಮ್ಮ ಇದ್ದಂತೆ ಎಂದು ಹೇಳಿದ್ದಳು. ಕುಟುಂಬಸ್ಥರ ಎಚ್ಚರಿಕೆಯ ಬಳಿಕ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೂ ಓದಿ: ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

    ದೀಪಿಕಾ ಜೊತೆ ಒಡನಾಟವಿಲ್ಲದೇ ನಿತೀಶ್ ಕೋಪಗೊಂಡಿದ್ದ. ಬಳಿಕ 2024 ಜ. 22ರಂದು ನಿತೀಶ್ ಬರ್ತ್ಡೇ ನೆಪದಲ್ಲಿ ದೀಪಿಕಾಳನ್ನು ಬೆಟ್ಟದ ತಪ್ಪಲಿಗೆ ಕರೆಸಿಕೊಂಡಿದ್ದ. ದೀಪಿಕಾ ಆತನಿಗೆ ಶರ್ಟ್ ಗಿಫ್ಟ್ ಕೊಡಲು ಹೋಗಿದ್ದಳು. ಈ ವೇಳೆ ಇಬ್ಬರ ನಡುವೆ ಜಗಳ ಆರಂಭವಾಗಿ, ಕೊಲೆಯಲ್ಲಿ ಅಂತ್ಯವಾಗಿತ್ತು. ಮಂಡ್ಯ ಪೊಲೀಸರು ಕೊಲೆ ಆರೋಪಿ ನಿತೀಶ್‌ನನ್ನು ಬಂಧಿಸಿದ್ದರು.

    ಜೈಲು ಸೇರಿದ್ದ ನಿತೀಶ್ ಜಾಮೀನಿನ ಮೇಲೆ ಹೊರ ಬಂದಿದ್ದ. ತನ್ನ ಮಗಳನ್ನು ಕೊಲೆ ಮಾಡಿದ್ದ ನಿತೀಶ್‌ನನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂದು ದೀಪಿಕಾ ತಂದೆ ವೆಂಕಟೇಶ್ ಹೊಂಚು ಹಾಕುತ್ತಿದ್ದ. ಇದೇ ಭಾನುವಾರ ಧರ್ಮಸ್ಥಳದಲ್ಲಿ ನಿತೀಶ್ ತಂಗಿ ಮದುವೆ ನಿಶ್ಚಯವಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ವೆಂಕಟೇಶ್ ನಿತೀಶ್ ತಂದೆ ನರಸಿಂಹೇಗೌಡರನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಅಕ್ಕ ಅಕ್ಕ ಅಂತಾನೇ ಮೂಹೂರ್ತ ಇಟ್ಟನಾ?

    ಕೊಲೆ ಮಾಡುವ ವೇಳೆ ನನ್ನ ಮಗಳನ್ನು ಕೊಲೆ ಮಾಡಿ ನಿನ್ನ ಮಗಳ ಮದುವೆ ಮಾಡ್ತಾ ಇದ್ದೀರಾ ಎಂದು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ (Melukote Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆ ಆರೋಪಿ ವೆಂಕಟೇಶ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.  ಇದನ್ನೂ ಓದಿ: ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣ – ಆರೋಪಿ ಅರೆಸ್ಟ್

  • ಮಗಳ ಸಾವಿಗೆ ಪ್ರತೀಕಾರ – ‘ತಮ್ಮ’ನ ಅಪ್ಪನನ್ನು ಬರ್ಬರವಾಗಿ ಕೊಂದ ತಂದೆ

    ಮಗಳ ಸಾವಿಗೆ ಪ್ರತೀಕಾರ – ‘ತಮ್ಮ’ನ ಅಪ್ಪನನ್ನು ಬರ್ಬರವಾಗಿ ಕೊಂದ ತಂದೆ

    ಮಂಡ್ಯ: ಮಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಹತ್ಯೆ ಮಾಡಿದ್ದ ಆರೋಪಿಯ ತಂದೆಯನ್ನು ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ(Mandya) ಜಿಲ್ಲೆಯ ಪಾಂಡವಪುರ(Pandavapura) ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.

    ಆರೋಪಿ ವೆಂಕಟೇಶ್‌

    ಮಾಣಿಕ್ಯನಹಳ್ಳಿ(Manikyanahalli) ಗ್ರಾಮದ ನರಸಿಂಹೇಗೌಡ ಕೊಲೆ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ ಕೊಲೆ ಆರೋಪಿ. ಇದನ್ನೂ ಓದಿ: ಹುಬ್ಬಳ್ಳಿ-ವಿಜಯಪುರ ರಾ.ಹೆದ್ದಾರಿಯಲ್ಲಿ ಭೀಕರ ಅಪಘಾತ – ಐವರು ದುರ್ಮರಣ

    ನರಸಿಂಹೇಗೌಡ ಅವರ ಪುತ್ರ ನಿತೀಶ್, ವೆಂಕಟೇಶ್ ಅವರ ಪುತ್ರಿ ದೀಪಿಕಾಳನ್ನು ಕೊಲೆ ಮಾಡಿದ್ದ. ಮಗಳ ಸಾವಿಗೆ ಪ್ರತೀಕಾರವಾಗಿ ಆಕೆಯ ತಂದೆ ವೆಂಕಟೇಶ್ ಆರೋಪಿ ನಿತೀಶ್‌ನ ತಂದೆಯನ್ನು ಹತ್ಯೆ ಮಾಡಿದ್ದಾನೆ. ಇದನ್ನೂ ಓದಿ:  ಅಭಿಮಾನಿ ಕಡೆ ಗನ್ ಇಟ್ಟ ದಳಪತಿ ವಿಜಯ್ ಬಾಡಿಗಾರ್ಡ್!

    ಏನಿದು ಪ್ರಕರಣ?
    ಟೀಚರ್ ದೀಪಿಕಾ ಮತ್ತು ನಿತೀಶ್ ಇಬ್ಬರು ಸ್ನೇಹ ಹಾಗೂ ಸಲುಗೆಯಿಂದಿದ್ದರು. ಇದನ್ನು ಗಮನಿಸಿದ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ನಿತೀಶ್‌ಗೆ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ದೀಪಿಕಾ ಬಳಿ ಪ್ರಶ್ನಿಸಿದಾಗ ಆತ ನನಗೆ ತಮ್ಮ ಇದ್ದಂತೆ ಎಂದು ಹೇಳಿದ್ದಳು. ಕುಟುಂಬಸ್ಥರ ಎಚ್ಚರಿಕೆಯ ಬಳಿಕ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೂ ಓದಿ: ದಿಢೀರ್‌ 35 ಸಾವಿರದಿಂದ 3 ಸಾವಿರ ಕ್ಯುಸೆಕ್‌ಗೆ ಇಳಿಕೆಯಾಯ್ತು ನೀರು – ಭಾರತದ ʼಜಲ ಬಾಂಬ್‌ʼಗೆ ಪಾಕ್‌ ತತ್ತರ

    ದೀಪಿಕಾ ಜೊತೆ ಒಡನಾಟವಿಲ್ಲದೇ ನಿತೀಶ್ ಕೋಪಗೊಂಡಿದ್ದ. ಬಳಿಕ 2024 ಜ. 22ರಂದು ನಿತೀಶ್ ಬರ್ತ್ಡೇ ನೆಪದಲ್ಲಿ ದೀಪಿಕಾಳನ್ನು ಬೆಟ್ಟದ ತಪ್ಪಲಿಗೆ ಕರೆಸಿಕೊಂಡಿದ್ದ. ದೀಪಿಕಾ ಆತನಿಗೆ ಶರ್ಟ್ ಗಿಫ್ಟ್ ಕೊಡಲು ಹೋಗಿದ್ದಳು. ಈ ವೇಳೆ ಇಬ್ಬರ ನಡುವೆ ಜಗಳ ಆರಂಭವಾಗಿ, ಕೊಲೆಯಲ್ಲಿ ಅಂತ್ಯವಾಗಿತ್ತು. ಮಂಡ್ಯ ಪೊಲೀಸರು ಕೊಲೆ ಆರೋಪಿ ನಿತೀಶ್‌ನನ್ನು ಬಂಧಿಸಿದ್ದರು.

    ಜೈಲು ಸೇರಿದ್ದ ನಿತೀಶ್ ಜಾಮೀನಿನ ಮೇಲೆ ಹೊರ ಬಂದಿದ್ದ. ತನ್ನ ಮಗಳನ್ನು ಕೊಲೆ ಮಾಡಿದ್ದ ನಿತೀಶ್‌ನನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂದು ದೀಪಿಕಾ ತಂದೆ ವೆಂಕಟೇಶ್ ಹೊಂಚು ಹಾಕುತ್ತಿದ್ದ. ಇದೇ ಭಾನುವಾರ ಧರ್ಮಸ್ಥಳದಲ್ಲಿ ನಿತೀಶ್ ತಂಗಿ ಮದುವೆ ನಿಶ್ಚಯವಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ವೆಂಕಟೇಶ್ ನಿತೀಶ್ ತಂದೆ ನರಸಿಂಹೇಗೌಡರನ್ನ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ವೇದಿಕೆಯಲ್ಲಿ ಸಮಂತಾ ಕಣ್ಣೀರಿಟ್ಟಿದ್ಯಾಕೆ?- ಪ್ರಚಾರದ ಗಿಮಿಕ್ ಎಂದವರಿಗೆ ನಟಿ ಸ್ಪಷ್ಟನೆ

    ಕೊಲೆ ಮಾಡುವ ವೇಳೆ ನನ್ನ ಮಗಳನ್ನು ಕೊಲೆ ಮಾಡಿ ನಿನ್ನ ಮಗಳ ಮದುವೆ ಮಾಡ್ತಾ ಇದ್ದೀರಾ ಎಂದು ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ(Melukote Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ಕೊಲೆ ಆರೋಪಿ ವೆಂಕಟೇಶ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

    ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್‌ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!

    ಮಂಡ್ಯ: ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ (Teacher) ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

    ರೀಲ್ಸ್‌ ಮಾಡಿಕೊಂಡು ಸೋಶಿಯಲ್‌ ಮೀಡಿಯಾದಲ್ಲಿ (Social Media) ಫುಲ್‌ ಆಕ್ಟೀವ್‌ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

    ಏನಿದು ಘಟನೆ?
    ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (Women) (ಶಿಕ್ಷಕಿಯೂ ಹೌದು) ಮೂರೇ ದಿನಗಳಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾವು – ಮಣ್ಣಿನಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಶವ ಪತ್ತೆ

    ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಸಂಜೆಯಾದರೂ ಮಗಳು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ತಂದೆ ವೆಂಕಟೇಷ್‌ ಮೇಲುಕೋಟೆ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಚೀನಾದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪನ – ದೆಹಲಿಯಲ್ಲೂ ಕಂಪಿಸಿದ ಭೂಮಿ, ಬೆಚ್ಚಿಬಿದ್ದ ಜನ

    ಈ ಸಂಬಂಧ ಪೊಲೀಸರು ಸಹ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಸೋಮವಾರ ಸಂಜೆ ಮೇಲುಕೋಟೆಯ ಬೆಟ್ಟದ ತಪ್ಪಲಿನಲ್ಲಿ ಹದ್ದು, ಕಾಗೆ ಹಾರಾಡುತ್ತಿರುವುದು, ದುರ್ವಾಸನೆ ಬೀರುತ್ತಿರುವುದನ್ನು ಕಂಡು ಸ್ಥಳೀಯರು ಸಂಶಯಗೊಂಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹೂತಿಟ್ಟಿದ್ದ ಶವವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ಹೊರತೆಗೆದಿದ್ದಾರೆ. ಬಳಿಕ ಮಂಡ್ಯದ ಎಸ್ಪಿ ಯತೀಶ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ.