Tag: ಮೇವು ಹಗರಣ

  • ಮೇವು ಹಗರಣ – ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು

    ಮೇವು ಹಗರಣ – ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು

    ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ 5ನೇ ಪ್ರಕರಣದಲ್ಲಿ (ಡೊರಂಡ ಖಜಾನೆ ಪ್ರಕರಣ) ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌ ಅವರಿಗೆ ಜಾರ್ಖಂಡ್‌ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

    ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಲಯ ಯಾದವ್‌ ಅವರನ್ನು ದೋಷಿ ಎಂದು ಪರಿಗಣಿಸಿ 5 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲದ ಕಾರಣ ಜಾರ್ಖಂಡ್‌ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ನವಾಬ್‌ ಮಲಿಕ್‌ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

    ಆರೋಗ್ಯ ಸಮಸ್ಯೆ ಕಾರಣದಿಂದಾಗಿ ಅವರಿಗೆ ಜಾಮೀನು ನೀಡಲಾಗಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. 1 ಲಕ್ಷ ರೂ. ಶ್ಯೂರಿಟಿ ಮೊತ್ತ ಮತ್ತು 10 ಲಕ್ಷ ರೂ. ದಂಡವಾಗಿ ಠೇವಣಿ ಮಾಡಬೇಕಾಗುತ್ತದೆ ಎಂದು ಯಾದವ್‌ ಪರ ವಕೀಲ ತಿಳಿಸಿದ್ದಾರೆ.

    ಅವಿಭಜಿತ ಬಿಹಾರದಲ್ಲಿ ನಡೆದಿದ್ದ 950 ಕೋಟಿ ರೂ. ಮೊತ್ತದ ಮೇವು ಹಗರಣದಲ್ಲಿ, ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿತ್ತು. ಡೊರಂಡ ಜಿಲ್ಲಾ ಸರ್ಕಾರಿ ಖಜಾನೆಯಿಂದ 139 ಕೋಟಿ ರೂ. ಕ್ರಮವಾಗಿ ಪಡೆಯಲಾಗಿತ್ತು. ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನಗಳ ಕಂಪನಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ನಿತಿನ್ ಗಡ್ಕರಿ

    ಇದೇ ಮೇವು ಹಗರಣದ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಂದ ಹಣ ಪಡೆದುಕೊಂಡ ನಾಲ್ಕು ಪ್ರಕರಣಗಳಲ್ಲೂ ಲಾಲೂ ಅವರಿಗೆ ಜೈಲು ಶಿಕ್ಷೆ, ದಂಡ ವಿಧಿಸಲಾಗಿತ್ತು.

  • ಮೇವು ಹಗರಣ – ಲಾಲು ಪ್ರಸಾದ್‌ ಯಾದವ್‌ಗೆ 5 ವರ್ಷ ಜೈಲು, 60 ಲಕ್ಷ ದಂಡ

    ಮೇವು ಹಗರಣ – ಲಾಲು ಪ್ರಸಾದ್‌ ಯಾದವ್‌ಗೆ 5 ವರ್ಷ ಜೈಲು, 60 ಲಕ್ಷ ದಂಡ

    ನವದೆಹಲಿ: ಬಹುಕೋಟಿ ಮೇವು ಹಗರಣದ ಪ್ರಮುಖ ಅಪರಾಧಿ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ನಾಯಕ ಹಾಗೂ ಬಿಹಾರ್‌ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ)ದ ವಿಶೇಷ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ 60 ಲಕ್ಷ ರೂ. ದಂಡ ವಿಧಿಸಿದೆ.

    ಫೆ.15 ರಂದು ಆರ್‌ಜೆಡಿ ಮುಖ್ಯಸ್ಥರನ್ನು ಈ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲು ನಿರ್ಧರಿಸಲಾಗಿತ್ತು. ಯಾದವ್‌ ಅವರು ಡೊರಾಂಡಾ ಖಜಾನೆಯಿಂದ 139 ಕೋಟಿ ಹಣವನ್ನು ಅಕ್ರಮವಾಗಿ ಪಡೆದಿದ್ದರು. ಇದನ್ನೂ ಓದಿ: ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್‌ ದೋಷಿ – CBI ಕೋರ್ಟ್‌

    ಮೇವು ಹಗರಣದ ಐದನೇ ಪ್ರಕರಣದಲ್ಲಿ ಯಾದವ್‌ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಕಳೆದ ವಾರ ಅನಾರೋಗ್ಯದ ಕಾರಣದಿಂದಾಗಿ ಯಾದವ್‌ ಅವರನ್ನು ಹೊತ್ವಾರ್‌ ಜೈಲಿನಿಂದ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅವರನ್ನು ಸ್ಥಳಾಂತರಿಸಲಾಗಿತ್ತು. ದುಮ್ಕಾಗೆ ಸಂಬಂಧಿಸಿದ ಇತರ ನಾಲ್ಕು ಪ್ರಕರಣಗಳಲ್ಲಿ ಈ ಹಿಂದೆ 14 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

    jail

    ಡೊರಾಂಡಾ ಖಜಾನೆ ಹಗರಣ ಪ್ರಕರಣದಲ್ಲಿ ಒಟ್ಟು 170 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಇವರಲ್ಲಿ 55 ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಸರ್ಕಾರಿ ಸಾಕ್ಷಿಗಳಾಗಿದ್ದಾರೆ. 6 ಮಂದಿ ತಲೆಮರೆಸಿಕೊಂಡಿದ್ದಾರೆ. ಇಬ್ಬರು ತಮ್ಮ ವಿರುದ್ಧದ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ. ಯಾದವ್‌ ಸೇರಿದಂತೆ ಉಳಿದ 99 ಆರೋಪಿಗಳಲ್ಲಿ 24 ಮಂದಿ ಖುಲಾಸೆಗೊಂಡಿದ್ದಾರೆ. ಉಳಿದ 46 ಮಂದಿಯನ್ನು ದೋಷಿಗಳು ಎಂದು ಘೋಷಿಸಿ, ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ನಾನು ಇಂತಹ ರಾಜಕೀಯದ ವಿರುದ್ಧ ಸತ್ತಿದ್ದೇನೆ: ಕಮಲ್ ಹಾಸನ್

  • ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್‌ ದೋಷಿ – CBI ಕೋರ್ಟ್‌

    ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್‌ ದೋಷಿ – CBI ಕೋರ್ಟ್‌

    ರಾಂಚಿ: ಡೊರಾಂಡಾ ಮೇವು ಹಗರಣದ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಕೂಡಾ ದೋಷಿ ಎಂದು ಘೋಷಿಸಲಾಗಿದೆ. ಜಾರ್ಖಂಡ್ ರಾಜಧಾನಿ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ಈ ಪ್ರಕರಣದ ತೀರ್ಪು ನೀಡಿದೆ.

    ಪ್ರಕರಣದಲ್ಲಿ 36 ಮಂದಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಪ್ರಮುಖ ಆರೋಪಿ ಲಾಲೂ ಪ್ರಸಾದ್ ಯಾದವ್ ಶಿಕ್ಷೆಯನ್ನು ಫೆಬ್ರವರಿ 21 ರಂದು ಪ್ರಕಟಿಸಲಾಗುವುದು ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು ಲಾಲೂ ದೋಷಿ ಎಂದು ಘೋಷಿಸಿದ ಬೆನ್ನಲ್ಲೇ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರನ್ನು ಜೈಲಿಗೆ ಕಳುಹಿಸುವ ಬದಲು ರಿಮ್ಸ್‌ಗೆ ಕಳುಹಿಸುವಂತೆ ಅವರ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಮಧ್ಯಾಹ್ನದ ನಂತರ ನ್ಯಾಯಾಲಯ ಈ ಕುರಿತು ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಹಿಜಬ್ ಧರಿಸಿ ಬರಲು ಬಿಡಲ್ಲ: ಸಚಿವ ಅಶ್ವತ್ಥ ನಾರಾಯಣ

    ಏನಿದು ಪ್ರಕರಣ?
    ಈ ಪ್ರಕರಣವು ಡೊರಾಂಡಾ ಖಜಾನೆಯಿಂದ 139 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದೆ. 1990-92ರ ನಡುವೆ ಈ ಹಗರಣ ನಡೆದಿದ್ದು ಇದರಲ್ಲಿ ಅಧಿಕಾರಿಗಳು ಮತ್ತು ರಾಜಕಾರಣಿಗಳು ಭಾಗಿಯಾಗಿದ್ದಾರೆ. ಹರಿಯಾಣ ಮತ್ತು ದೆಹಲಿಯಿಂದ ರಾಂಚಿಗೆ 400 ಗೂಳಿಗಳನ್ನು ತರಲಾಗಿದೆ ಎಂದು ಸರ್ಕಾರಕ್ಕೆ ವರದಿ ನೀಡಲಾಗಿತ್ತು. ಇದಕ್ಕೆ ಬಳಸಿದ ವಾಹನಗಳ ಸಂಖ್ಯೆಯನ್ನು ಅಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ಇದಕ್ಕೆ ಬಳಸಿದ ಬಹುತೇಕ ವಾಹನಗಳು ಮೋಟರ್ ಬೈಕ್‍ಗಳದಾಗಿತ್ತು. ಇಷ್ಟು ಮಾತ್ರವಲ್ಲದೇ ಬೈಕ್‍ಗಳ ನಂಬರ್ ನೀಡಿ, ಆ ವಾಹನಗಳ ಮೂಲಕ ಜಾನುವಾರುಗಳಿಗೆ ಮೇವು ತರಲಾಗಿದೆ ಎಂದು ತಿಳಿಸಲಾಗಿತ್ತು.

    ಇದರ ತನಿಖೆ ನಡೆಸಿದ್ದ ಸಿಬಿಐ, ಇದೊಂದು ಬೃಹತ್ ಹಗರಣ ಎಂದು ಹೇಳಿತ್ತು. ರಾಜ್ಯ ಮುಖಂಡರು, ನೌಕರರು, ಉದ್ಯಮಿಗಳು ಎಲ್ಲರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದ ಅಧಿಕಾರಿಗಳು, ಈ ಪ್ರಕರಣದಲ್ಲಿ ಬಿಹಾರದ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಡಾ. ಜಗನ್ನಾಥ್ ಮಿಶ್ರಾ ಸೇರಿದಂತೆ ರಾಜ್ಯದ ಹಲವು ಸಚಿವರನ್ನು ಬಂಧಿಸಿತ್ತು. ಇದನ್ನೂ ಓದಿ: ಕೋರ್ಟ್ ತೀರ್ಪು ಬರುವವರೆಗೂ ಮಗಳು ಮನೆಯಲ್ಲೇ ಇರಲಿ: ಮಂಡ್ಯ ಪೋಷಕರು

    ನಾಲ್ಕು ಪ್ರಕರಣಗಳಲ್ಲಿ ಲಾಲುಗೆ ಶಿಕ್ಷೆ
    ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದ ಐದು ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್‍ಗೆ ಇದುವರೆಗೆ ಶಿಕ್ಷೆಯಾಗಿದೆ. ಮೇವು ಹಗರಣದ ನಾಲ್ಕು ಪ್ರಕರಣಗಳಲ್ಲಿ ಲಾಲು ಪ್ರಸಾದ್‍ಗೆ ಜಾಮೀನು ನೀಡಲಾಗಿದೆ.

  • ತುಮಕೂರಿನ 20 ಕೋಟಿಯ ಮೇವು ಹಗರಣಕ್ಕೆ ಮರುಜೀವ

    ತುಮಕೂರಿನ 20 ಕೋಟಿಯ ಮೇವು ಹಗರಣಕ್ಕೆ ಮರುಜೀವ

    -130 ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ

    ತುಮಕೂರು: ಜಿಲ್ಲೆಯ ಗೋ ಶಾಲೆಗಳಲ್ಲಿ ನಡೆದಿದೆ ಎನ್ನಲಾದ ಸುಮಾರು 20 ಕೋಟಿ ರೂ ಮೇವು ಹಗರಣಕ್ಕೆ ಮತ್ತೇ ಜೀವ ಪಡೆದುಕೊಂಡಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 130 ಅಧಿಕಾರಿಗಳ ವಿರುದ್ಧ ಇಲಾಖೆ ತನಿಖೆ ನಡೆಸುವಂತೆ ಸರ್ಕಾರ ಲೋಕಾಯುಕ್ತಕ್ಕೆ ನಿರ್ದೆಶನ ನೀಡಿದೆ. ತನಿಖೆಯಾದರೆ ಪಶು ಇಲಾಖೆಹಾಗೂ ಕಂದಾಯ ಇಲಾಖೆ ಐಎಎಸ್ ಅಧಿಕಾರಿಗಳಿಗೂ ಉರುಳಾಗುವ ಸಾಧ್ಯತೆ ಇದೆ.

    2017-18ರ ಸಾಲಿನಲ್ಲಿ ಭೀಕರ ಬರಗಾಲವಿತ್ತು. ಈ ವೇಳೆ ತುಮಕೂರು ಜಿಲ್ಲೆಯಲ್ಲಿ ತೆರೆಯಲಾದ 200ಕ್ಕೂ ಹೆಚ್ಚು ಗೋಶಾಲೆಗಳಲ್ಲಿ ಮೇವು ಹಗರಣ ನಡೆದಿರುವ ಬಗ್ಗೆ ವಾಸನೆ ಬಂದಿತ್ತು. ಜಾನುವಾರುಗಳಿಗೆ ನೀಡುವ ಒಣಹುಲ್ಲು, ಹಸಿ ಹುಲ್ಲಿನ ತೂಕದಲ್ಲಿ ವ್ಯತ್ಯಾಸ ಮಾಡಿ ಮೋಸ ಮಾಡಲಾಗ್ತಿದೆ ಎಂದು ಅಂದಿನ ಪಶುಸಂಗೋಪನಾ ಸಚಿವರಾದ ಟಿ.ಬಿ.ಜಯಚಂದ್ರರ ಮೇಲೆಯೂ ಆರೋಪ ಕೇಳಿಬಂದಿತ್ತು.

    ಈ ಬಗ್ಗೆ ಗುಬ್ಬಿ ತಾಲೂಕು ಚೇಳೂರಿನ ಮಲ್ಲಿಕಾರ್ಜುನ್ ಎಂಬವರು ಜಿಲ್ಲೆಯಲ್ಲಿ ಸುಮಾರು 20 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಲೋಕಾಯುಕ್ತ ಒಂದೂವರೆ ವರ್ಷಗಳ ಧೀರ್ಘ ಪರಿಶೀಲನೆ ಬಳಿಕ ಅವ್ಯವಹಾರ ನಡೆದಿರೋದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇದೇ ವರದಿ ಆಧರಿಸಿ ಸರ್ಕಾರ ಅವ್ಯವಹಾರದ ಹಣವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ಭರಿಸಿಕೊಳ್ಳುವಂತೆ ಸೂಚಿಸಿದೆ. ಸರ್ಕಾರದ ಆದೇಶ ಕೇಳಿ ಭ್ರಷ್ಟ ಅಧಿಕಾರಿಗಳು ನಡುಗಿ ಹೋಗಿದ್ದಾರೆ.

    ದೂರುದಾರ ಮಲ್ಲಿಕಾರ್ಜುನ್‍ಗೆ ಲೋಕಾಯುಕ್ತದಲ್ಲೂ ಸಂಪೂರ್ಣ ನ್ಯಾಯ ಸಿಗುವ ಭರವಸೆ ಇಲ್ಲದಾಗಿ ಹೈಕೋರ್ಟ್ ಮೂಲಕ ಸಿಬಿಐ ತನಿಖೆ ಮಾಡಿಸುವಂತೆ ಮೇಲ್ಮನವಿ ಸಲ್ಲಿಸಲು ತಯಾರಾಗಿದ್ದಾರೆ. ಒಟ್ಟಿನಲ್ಲಿ ಜಾನುವಾರುಗಳ ಮೇವನ್ನು ಬಿಡದ ಭ್ರಷ್ಟ ಅಧಿಕಾರಿಗಳು ಕೋಟಿ ಕೋಟಿ ಲೂಟಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪೆರೋಲ್ ಅವಧಿ ವಿಸ್ತರಿಸಿ: ಲಾಲೂ ಅರ್ಜಿ ತಿರಸ್ಕೃತ

    ಪೆರೋಲ್ ಅವಧಿ ವಿಸ್ತರಿಸಿ: ಲಾಲೂ ಅರ್ಜಿ ತಿರಸ್ಕೃತ

    ಪಾಟ್ನಾ: ಆಗಸ್ಟ್ 30 ರವರೆಗೆ ಪೆರೋಲ್ ಅವಧಿಯನ್ನು ಮುಂದುವರಿಸುವಂತೆ ಆರ್‍ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಮನವಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

    ಲಾಲು ಪ್ರಸಾದ್ ಅವರಿಗೆ ಏಷಿಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಂಚಿಯ ರಾಜೇಂದ್ರ ವೈದ್ಯಕೀಯ ಸಂಸ್ಥೆಯಲ್ಲಿ ಇರಿಸಿ ಚಿಕಿತ್ಸೆಯನ್ನು ಮುಂದುವರಿಸಲಾಗುವುದು ಎಂದು ಆರ್‍ಜೆಡಿ ಮುಖ್ಯ ವಕೀಲ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.

    ವೈದ್ಯಕೀಯ ಚಿಕಿತ್ಸೆ ಹಿನ್ನಲೆಯಲ್ಲಿ ಈ ಹಿಂದೆಯೂ ಆಗಸ್ಟ್ 10 ರಿಂದ ಆಗಸ್ಟ್ 20ರವರೆಗೆ ಪೆರೋಲ್ ವಿಸ್ತರಿಸಲಾಗಿತ್ತು. ಈಗ ಮತ್ತೆ 10 ದಿನ ಪೆರೋಲ್ ವಿಸ್ತರಿಸುವಂತೆ ಮನವಿ ಮಾಡಲಾಗಿತ್ತು.

    2013ರ ಮೇವು ಹಗರಣ ಪ್ರಕರಣ ಪ್ರಮುಖ ಆರೋಪಿಯಾಗಿದ್ದ ಲಾಲು ಪ್ರಸಾದ್ 2017ರಂದು ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಬಿಹಾರದ ಬಿರ್ಸಾ ಮುಂಡಾ ಜೈಲಿನಲ್ಲಿ ಇದ್ದಾಗ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿತ್ತು. ಹೀಗಾಗಿ ಅಲ್ಲಿಯೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಮನವಿ ಸಲ್ಲಿಸಿದ್ದರಿಂದ ಮುಂಬೈನಲ್ಲಿ ಏಷಿಯನ್ ಹಾರ್ಟ್ ಇನ್‍ಸ್ಟಿಟ್ಯೂಟ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ತುಮಕೂರಲ್ಲಿ ಮೇವು ಹಗರಣವಾಗಿಲ್ಲ: ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ವರದಿ ಸಲ್ಲಿಕೆ

    ತುಮಕೂರಲ್ಲಿ ಮೇವು ಹಗರಣವಾಗಿಲ್ಲ: ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ವರದಿ ಸಲ್ಲಿಕೆ

    ತುಮಕೂರು: ಜಿಲ್ಲೆಯ ಗೋ ಶಾಲೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಜಿಲ್ಲಾಧಿಕಾರಿ ಕೆಪಿ ಮೋಹನ್ ರಾಜ್ ಸರ್ಕಾರಕ್ಕೆ ವರದಿ ನೀಡಿದ್ದಾರೆ.

    ಅಕ್ರಮ ನಡದಿದೆ ಎಂಬ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರವೂ ಸುಳ್ಳು ಎಂದು ಜಿಲ್ಲಾಧಿಕಾರಿ ತಾವು ನೀಡಿದ ವರದಿಯಲ್ಲಿ ಹೇಳಿದ್ದಾರೆ. ಅಲ್ಲದೆ ಜಿಲ್ಲೆಯ 8 ತಾಲೂಕುಗಳಲ್ಲಿ 33 ಗೋ ಶಾಲೆ ಹಾಗೂ 2 ಮೇವು ಬ್ಯಾಂಕ್ ತೆರೆಯಲಾಗಿದೆ. ಟೆಂಡರ್ ಮೂಲಕವೇ ಮೇವು ಖರೀದಿ ಮಾಡಲಾಗಿದೆ. ಇಲ್ಲಿವರೆಗೆ 34 ಕೋಟಿ ರೂ. ಮಾತ್ರ ಖರ್ಚಾಗಿದ್ದು ಜಿಲ್ಲಾಡಳಿತ 15.75 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಟೆಂಡರ್‍ದಾರರಿಗೆ ಇನ್ನೂ 18.25 ಕೋಟಿ ರೂ. ಬಾಕಿ ನೀಡಬೇಕಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ವರದಿ ನೀಡಿದ್ದಾರೆ.

    ಈ ಮೂಲಕ ಜಿಲ್ಲೆಯೊಂದರಲ್ಲೇ ಗೋ ಶಾಲೆಯಲ್ಲಿ ಮೇವು ಖರೀದಿಯಲ್ಲಿ 22 ಕೋಟಿ ರೂ. ಅವ್ಯವಹಾರವಾಗಿದೆ ಎಂದು ದೃಢಪಡಿಸಿದ ಉಪಲೋಕಾಯುಕ್ತರ ವರದಿಯೇ ಸುಳ್ಳು ಅಂತ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

    ಏನಿದು ಪ್ರಕರಣ?: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ನಿವಾಸಿ ಮಲ್ಲಿಕಾರ್ಜುನ್ ಎನ್ನುವವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಉಪಲೋಕಾಯುಕ್ತ ನ್ಯಾ. ಅಡಿಯವರು ಬರಗಾಲದ ಹಿನ್ನಲೆಯಲ್ಲಿ ಪ್ರಾರಂಭಿಸಿದ ಗೋ ಶಾಲೆಗಳಿಗೆ ಖುದ್ದು ಭೆಟಿ ನೀಡಿ ಪರಿಶೀಲಿಸಿದ್ದರು. ಇಲ್ಲಿ ಭಾರಿ ಅಕ್ರಮ ನಡೆದಿರುವುದು ಪತ್ತೆಯಾಗಿತ್ತು. ಮೇವು ಖರಿದಿಸಿರುವ ರಸೀದಿಗಳಿಗೂ, ದಾಸ್ತಾನು ನಿರ್ವಹಣೆ ಪುಸ್ತಕದಲ್ಲಿರುವ ಮಾಹಿತಿಗೂ ವ್ಯತ್ಯಾಸ ಕಂಡುಬಂದಿತ್ತು.

    ತುಮಕೂರು ಜಿಲ್ಲೆಯ 7 ತಾಲೂಕುಗಳ ಗೋಶಾಲೆ ನಿರ್ವಹಣೆಗೆ ಬಿಡುಗಡೆ ಮಾಡಿದ 33.96 ಲಕ್ಷ ರೂ. ಅಕ್ರಮ ನಡೆದಿದೆ. ಅದೇ ರೀತಿ ಮೇವು ಖರೀದಿಯಲ್ಲೂ 21.98 ಕೋಟಿ ರೂ ದುರ್ಬಳಕೆ ಅಗಿದೆ. ಕಾನೂನು ಸಚಿವ ಟಿ.ಬಿ.ಜಯಚಂದ್ರರ ಸ್ವಕ್ಷೇತ್ರ ಶಿರಾದಲ್ಲಿ ಬರೋಬ್ಬರಿ 6.55 ಕೋಟಿ ರೂ. ಅಕ್ರಮವಾಗಿದೆ. ಉಳಿದಂತೆ ಗುಬ್ಬಿಯಲ್ಲಿ 1 ಕೋಟಿ, ಗೃಹಸಚಿವರ ಕ್ಷೇತ್ರ ಕೊರಟಗೆರೆಯಲ್ಲಿ 1.55 ಕೋಟಿ, ತಿಪಟೂರಲ್ಲಿ 2.99 ಕೋಟಿ, ತುರುವೇಕೆರೆಯಲ್ಲಿ 1.49 ಕೋಟಿ, ಪಾವಗಡದಲ್ಲಿ 3.10 ಕೋಟಿ, ಚಿಕ್ಕನಾಯಕನ ಹಳ್ಳಿಯಲ್ಲಿ 4.92 ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ಉಪಲೋಕಾಯುಕ್ತರ ವರದಿಯಲ್ಲಿ ಹೇಳಲಾಗಿದೆ.

  • ಸಿದ್ದರಾಮಯ್ಯ ಸರ್ಕಾರದಲ್ಲಿ ಮೇವು ಹಗರಣ- 22 ಕೋಟಿ ರೂ. ಲೂಟಿ, ಉಪಲೋಕಾಯುಕ್ತರ ತನಿಖೆಯಲ್ಲಿ ದೃಢ

    ಸಿದ್ದರಾಮಯ್ಯ ಸರ್ಕಾರದಲ್ಲಿ ಮೇವು ಹಗರಣ- 22 ಕೋಟಿ ರೂ. ಲೂಟಿ, ಉಪಲೋಕಾಯುಕ್ತರ ತನಿಖೆಯಲ್ಲಿ ದೃಢ

    ತುಮಕೂರು: ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ತುಮಕೂರು ಜಿಲ್ಲೆಯಲ್ಲೇ ಭಾರಿ ಮೇವು ಹಗರಣ ನಡೆದಿದೆ. ಮೇವು ವಿತರಣೆಯಲ್ಲಿ ಬರೊಬ್ಬರಿ 22 ಕೋಟಿ ರೂ. ಲೂಟಿ ಮಾಡಲಾಗಿದೆ ಎಂದು ಉಪ ಲೋಕಾಯುಕ್ತ ನ್ಯಾ.ಸುಭಾಷ್ ಅಡಿ ಅವರ ವರದಿಯಲ್ಲಿ ಬಹಿರಂಗವಾಗಿದೆ.

    ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ನಿವಾಸಿ ಮಲ್ಲಿಕಾರ್ಜುನ್ ಎನ್ನುವವರು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಉಪಲೋಕಾಯುಕ್ತ ನ್ಯಾ. ಅಡಿಯವರು ಬರಗಾಲದ ಹಿನ್ನಲೆಯಲ್ಲಿ ಪ್ರಾರಂಭಿಸಿದ ಗೋ ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದರು. ಇಲ್ಲಿ ಭಾರಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಮೇವು ಖರೀದಿಸಿರುವ ರಸೀದಿಗಳಿಗೂ, ದಾಸ್ತಾನು ನಿರ್ವಹಣೆ ಪುಸ್ತಕದಲ್ಲಿರುವ ಮಾಹಿತಿಗೂ ವ್ಯತ್ಯಾಸ ಕಂಡುಬಂದಿದೆ.

    ತುಮಕೂರು ಜಿಲ್ಲೆಯ 7 ತಾಲೂಕುಗಳ ಗೋಶಾಲೆ ನಿರ್ವಹಣೆಗೆ ಬಿಡುಗಡೆ ಮಾಡಿದ 33.96 ಲಕ್ಷ ರೂ. ಅಕ್ರಮ ನಡೆದಿದೆ. ಅದೇ ರೀತಿ ಮೇವು ಖರೀದಿಯಲ್ಲೂ 21.98 ಕೋಟಿ ರೂ ದುರ್ಬಳಕೆ ಅಗಿದೆ. ಕಾನೂನು ಸಚಿವ ಟಿ.ಬಿ.ಜಯಚಂದ್ರರ ಸ್ವಕ್ಷೇತ್ರ ಶಿರಾದಲ್ಲಿ ಬರೋಬ್ಬರಿ 6.55 ಕೋಟಿ ರೂ. ಅಕ್ರಮವಾಗಿದೆ. ಉಳಿದಂತೆ ಗುಬ್ಬಿಯಲ್ಲಿ 1 ಕೋಟಿ, ಗೃಹಸಚಿವರ ಕ್ಷೇತ್ರ ಕೊರಟಗೆರೆಯಲ್ಲಿ 1.55 ಕೋಟಿ, ತಿಪಟೂರಲ್ಲಿ 2.99 ಕೋಟಿ, ತುರುವೇಕೆರೆಯಲ್ಲಿ 1.49 ಕೋಟಿ, ಪಾವಗಡದಲ್ಲಿ 3.10 ಕೋಟಿ, ಚಿಕ್ಕನಾಯಕನ ಹಳ್ಳಿಯಲ್ಲಿ 4.92 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಉಪಲೋಕಾಯುಕ್ತರ ವರದಿಯಲ್ಲಿ ಹೇಳಲಾಗಿದೆ.

  • ಬಹುಕೋಟಿ ಮೇವು ಹಗರಣ: ಲಾಲೂ ವಿರುದ್ಧ ವಿಚಾರಣೆಗೆ ಸುಪ್ರೀಂ ಆದೇಶ

    ಬಹುಕೋಟಿ ಮೇವು ಹಗರಣ: ಲಾಲೂ ವಿರುದ್ಧ ವಿಚಾರಣೆಗೆ ಸುಪ್ರೀಂ ಆದೇಶ

    ನವದೆಹಲಿ: ಬಹುಕೋಟಿ ಮೇವು ಹಗರಣ ಸಂಬಂಧ ಆರ್‍ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್‍ ವಿಚಾರಣೆ ಎದುರಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

    ಲಾಲೂ ವಿರುದ್ಧದ ಆರೋಪಗಳನ್ನು ಜಾರ್ಖಂಡ್ ಹೈಕೋರ್ಟ್ ಕೈಬಿಟ್ಟಿದ್ದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಲಾಲೂ ವಿರುದ್ಧದ ಕ್ರಿಮಿನಲ್ ಸಂಚು ಆರೋಪ ಕೈ ಬಿಡಲು ಸಾಧ್ಯವಿಲ್ಲ. ಎಲ್ಲಾ ಆರೋಪಗಳ ತನಿಖೆಯನ್ನು ಪ್ರತ್ಯೇಕವಾಗಿ ಕೈಗೆತ್ತಿಕೊಳ್ಳುವಂತೆ ಸೂಚಿಸಿದೆ.

    ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಎಲ್ಲಾ ಆರೋಪಿಗಳು ಪ್ರತ್ಯೇಕ ವಿಚಾರಣೆ ಎದುರಿಸಬೇಕು ಅಷ್ಟೇ ಅಲ್ಲದೇ ಹಾಗೂ 9 ತಿಂಗಳೊಳಗೆ ಪ್ರಕರಣದ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಆದೇಶದಲ್ಲಿ ಹೇಳಿದೆ.

    ಏನಿದು ಪ್ರಕರಣ?
    20 ವರ್ಷಗಳ ಹಿಂದೆ ಬಿಹಾರದಲ್ಲಿ ಪಶುಗಳಿಗೆ ಮೇವು ಹಾಗೂ ಔಷಧಿ ಪೂರೈಸುವುದಾಗಿ ಚಾಯ್ಬಾಸ ಜಿಲ್ಲೆಯ ಸರ್ಕಾರಿ ಖಜಾನೆಯಿಂದ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಜಾನುವಾರುಗಳಿಗೆ ಮೇವು ಹಾಗೂ ಔಷಧ ಒದಗಿಸುವ ನೆಪದಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಸರ್ಕಾರದ ಹಣವನ್ನು ಲೂಟಿ ಮಾಡಿದ್ದರು. 900 ಕೋಟಿ ರೂ. ಮೊತ್ತದ ಮೇವು ಹಗರಣ ಸಂಬಂಧ ಒಟ್ಟು 53 ಪ್ರಕರಣಗಳು ದಾಖಲಾಗಿದ್ದವು. ಅದರಲ್ಲಿ 44 ಪ್ರಕರಣಗಳ ತೀರ್ಪು ಈಗಾಗಲೇ ಹೊರಬಿದ್ದಿದೆ. ಲಾಲೂ ಪ್ರಸಾದ್ ಯಾದವ್ ವಿರುದ್ಧ ಆರು ಪ್ರಕರಣಗಳು ದಾಖಲಾಗಿವೆ. ಛಾಯ್ ಬಾಸಾ ಖಜಾನೆಯಿಂದ 37 ಕೋಟಿ ರೂ. ಹಣವನ್ನು ಅಕ್ರಮವಾಗಿ ಪಡೆದ ಆರೋಪವನ್ನು ಲಾಲು ಎದುರಿಸುತ್ತಿದ್ದಾರೆ. 2013ರ ಸೆಪ್ಟೆಂಬರ್ 3ರಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲೂ ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ತೀರ್ಪು ನೀಡಿ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಎರಡೂವರೆ ತಿಂಗಳ ಕಾಲ ಬಿರ್ಸಾ ಮುಂಡಾ ಜೈಲಿನಲಿದ್ದ ಲಾಲೂ ಬಳಿಕ ಸುಪ್ರೀಂ ಕೋರ್ಟ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.