Tag: ಮೈಕ್ರೋ ಫೈನಾನ್ಸ್

  • ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್

    ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್

    ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ತರಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.ಇದನ್ನೂ ಓದಿ: ಪಕ್ಷದ ವಿದ್ಯಮಾನ ಬೇಸರ ತರಿಸಿದೆ – ಅಧ್ಯಕ್ಷರ ಬದಲಾವಣೆ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಆರ್.ಅಶೋಕ್

    ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರಿಗೆ ಈಗಾಗಲೇ ಕರಡು ಕಳಿಸಲಾಗಿದೆ. ಇವತ್ತು ಸಹಿ ಹಾಕಬಹುದು ಎಂಬ ನಿರೀಕ್ಷೆ ಇದೆ. ರಾಜ್ಯಪಾಲರು ಅವರ ಕಾನೂನು ತಜ್ಞರ ಜೊತೆ ಮಾತನಾಡಿ ಅಂತಿಮವಾಗಿ ಸಹಿ ಹಾಕಬಹುದು. ಅವರು ಸಹಿ ಹಾಕಿದರೆ ಇವತ್ತು ಸುಗ್ರೀವಾಜ್ಞೆ ಜಾರಿಯಾಗಬಹುದು ಎಂದರು.

    ಬಿಲ್‌ನಲ್ಲಿ ಕೆಲ ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬದಲಾವಣೆಗೆ ರಾಜ್ಯಪಾಲರು ಸೂಚನೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ. ಸರ್ಕಾರಕ್ಕೆ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಒಂದು ವೇಳೆ ರಾಜ್ಯಪಾಲರು ಕೆಲ ಅಂಶಗಳ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡಿ ಕಳುಹಿಸುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ – ಯತ್ನಾಳ್ ಕಿಡಿ

     

  • ಮೈಕ್ರೋ ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು – ಸಿ.ಟಿ.ರವಿ ಅನುಮಾನ

    ಮೈಕ್ರೋ ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು – ಸಿ.ಟಿ.ರವಿ ಅನುಮಾನ

    ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ ರವಿ ಅನುಮಾನ (CT Ravi) ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ನನ್ನ ನೇತೃತ್ವದಲ್ಲಿ ಸಚಿವರ ನಿಯೋಗ ಹೈಕಮಾಂಡ್ ಭೇಟಿ ಸುದ್ದಿ ಸುಳ್ಳು: ಪರಮೇಶ್ವರ್

    ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜನರ ಸಮಸ್ಯೆ ಪರಿಹಾರ ಮಾಡುತ್ತಿದೆ. ಹೀಗೆ ಅನೇಕ ಸಂಸ್ಥೆಗಳು ಒಳ್ಳೆಯ ಕೆಲಸ ಮಾಡುತ್ತಿವೆ. ನಾವು ಮೊದಲು ಕಿರುಕುಳ ಕೊಡುವ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕು. ಕಡಿವಾಣ ಹಾಕಲು ರಾಜ್ಯದ ಕಾಯ್ದೆಯಲ್ಲಿ ಅವಕಾಶ ಇದೆ. ಆ ಕಾಯ್ದೆ ನಾವು ಬಳಸಿಕೊಳ್ಳೋಣ. ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ. ಅದನ್ನ ಬಳಕೆ ಮಾಡಿಕೊಳ್ಳೋಣ. ಬಳಕೆ ಆಗುವ ಮುನ್ನ ಶಸ್ತ್ರತ್ಯಾಗ ಮಾತು ಯಾಕೆ? ಎಂದು ತಿರುಗೇಟು ಕೊಟ್ಟಿದ್ದಾರೆ.

    ಇದಕ್ಕೆ ಹಿಂದೆಯೂ ಕಾಯ್ದೆ ಇತ್ತು. ಆಗ ಈ ಕಿರುಕುಳ ಇರಲಿಲ್ಲ. ಈಗ ಹಾವಳಿ ಜಾಸ್ತಿ ಆಗಿರುವ ಹಿಂದೆ ಕಾಣದ ಕೈಗಳು ಇರಬಹುದು. ಅಧಿಕಾರಿಗಳ ರೇಟ್ ಫಿಕ್ಸ್ ಮಾಡೋದ್ರಲ್ಲಿ ಕಾಣದ ಕೈಗಳು ಇವೆ. ಬೆಂಗಳೂರಿನಲ್ಲಿ ಅಡಿಗೆ 100 ರೂ. ಪ್ಲ್ಯಾನ್ ಸ್ಯಾಕ್ಷನ್ ಮಾಡುವುದರ ಹಿಂದೆ ಕಾಣದ ಕೈಗಳು ಇವೆ. ಮೈಕ್ರೋ ಫೈನಾನ್ಸ್ ಹಿಂದೆಯೂ ಕಾಣದ ಕೈಗಳು ಇರಬಹುದು ಎಂದರು.ಇದನ್ನೂ ಓದಿ: ಕಿಯೋನಿಕ್ಸ್ ವೆಂಡರ್ಸ್‌ಗಳ ಬಾಕಿ ಮೊತ್ತ ಬಿಡುಗಡೆಯಾಗುತ್ತಿದೆ – ಶರತ್ ಬಚ್ಚೇಗೌಡ

  • ಮೈಕ್ರೋ ಫೈನಾನ್ಸ್ ಹೆಸರಲ್ಲಿ ಕಿರುಕುಳ ಕೊಡುವವರಿಗೆ ಬಿಸಿ ಮುಟ್ಟಿಸಲು ಶಿಕ್ಷೆ ಪ್ರಮಾಣ ಹೆಚ್ಚಳ – ಪರಮೇಶ್ವರ್

    ಮೈಕ್ರೋ ಫೈನಾನ್ಸ್ ಹೆಸರಲ್ಲಿ ಕಿರುಕುಳ ಕೊಡುವವರಿಗೆ ಬಿಸಿ ಮುಟ್ಟಿಸಲು ಶಿಕ್ಷೆ ಪ್ರಮಾಣ ಹೆಚ್ಚಳ – ಪರಮೇಶ್ವರ್

    ಬೆಂಗಳೂರು: ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ಮುಟ್ಟಿಸಲು ಶಿಕ್ಷೆ ಪ್ರಮಾಣವನ್ನು ಹೆಚ್ಚಿಸಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.

    ನಗರದಲ್ಲಿ ಮಾತನಾಡಿದ ಅವರು, ಈ ಮೊದಲು ಬಿಲ್‌ನಲ್ಲಿ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನ 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ರೂ. ಮಾಡಿದ್ದೇವೆ. ಕಿರುಕುಳ ಕೊಡುವವರಿಗೆ ಕಾನೂನಿನ ಬಿಸಿ ತಟ್ಟಬೇಕು. ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲೋದಿಲ್ಲ. ಇದಕ್ಕಾಗಿ ದಂಡ ಮತ್ತು ಶಿಕ್ಷೆ ಜಾಸ್ತಿ ಮಾಡಿದ್ದೇವೆ. ಇಂತಹ ಕಠಿಣ ಕಾನೂನಿಂದ ಮಾತ್ರ ಕಿರುಕುಳ ನಿಲ್ಲುತ್ತದೆ. ಆ ಉದ್ದೇಶದಿಂದ ಶಿಕ್ಷೆ ಪ್ರಮಾಣ ಜಾಸ್ತಿ ಮಾಡಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ

    ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ಇವತ್ತು ಆಗುತ್ತಾ ಗೊತ್ತಿಲ್ಲ. ರಾಜ್ಯಪಾಲರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಅವರು ಬಂದು ನೋಡಿ ಸಹಿ ಆಗಿದೆ ಕೂಡಲೇ ಸುಗ್ರಿವಾಜ್ಞೆ ಜಾರಿ ಆಗಲಿದೆ ಎಂದರು.

    ಬಿಲ್ ವಿರುದ್ಧ ಮೈಕ್ರೋ ಫೈನಾನ್ಸ್ ಕಂಪನಿಗಳು ಕೋರ್ಟ್‌ಗೆ ಹೋಗಬಹುದು ಎಂದುಕೊಂಡು ಬಿಲ್ ಸಿದ್ದ ಮಾಡುವುದು ತಡವಾಗಿದೆ. ಮೊದಲ ಕರಡು ಸಿದ್ಧ ಮಾಡಿದಾಗ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಎಂದು ಚರ್ಚಿಸಿದ್ದೆವು. ಹೀಗಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಕಾನೂನು ಇಲಾಖೆಗೆ ಸೂಚನೆ ಕೊಟ್ಟಿದ್ದರು. ಇದಕ್ಕೆ ಎರಡು ದಿನ ತಡವಾಗಿದೆ. ಈಗ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕರಡು ಸಿದ್ಧ ಮಾಡಿದ್ದೇವೆ. ಕೋರ್ಟ್ಗೆ ಹೋದರೂ ಸರ್ಕಾರಕ್ಕೆ ಹಿನ್ನಡೆ ಆಗುವುದಿಲ್ಲ ಎಂದು ನಾವು ಅಂದುಕೊಂಡಿದ್ದೇವೆ ಎಂದು ಹೇಳಿದರು.ಇದನ್ನೂ ಓದಿ: ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ – ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

     

  • ಮೈಕ್ರೋ ಫೈನಾನ್ಸ್| ಶಿಕ್ಷೆಯ ಪ್ರಮಾಣ 3 ಅಲ್ಲ, 10 ವರ್ಷಕ್ಕೆ ಹೆಚ್ಚಿಸಿದ್ದೇವೆ: ಪರಮೇಶ್ವರ್

    ಮೈಕ್ರೋ ಫೈನಾನ್ಸ್| ಶಿಕ್ಷೆಯ ಪ್ರಮಾಣ 3 ಅಲ್ಲ, 10 ವರ್ಷಕ್ಕೆ ಹೆಚ್ಚಿಸಿದ್ದೇವೆ: ಪರಮೇಶ್ವರ್

    – ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲಲ್ಲ

    ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ (Micro Finance) ಕಂಪನಿಯ ಸಿಬ್ಬಂದಿ ವಿರುದ್ಧ 3 ವರ್ಷ ಇದ್ದ ಶಿಕ್ಷೆಯ ಅವಧಿಯನ್ನು 10 ವರ್ಷಕ್ಕೆ ಏರಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಹೇಳಿದರು.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕಿರುಕುಳ ನೀಡಿದವರಿಗೆ 3 ವರ್ಷ ಶಿಕ್ಷೆ ಇತ್ತು. ಈಗ ಅದನ್ನು 10 ವರ್ಷಕ್ಕೆ ಹೆಚ್ಚಳ ಮಾಡಿದ್ದೇವೆ. ದಂಡ ಕೂಡಾ 5 ಲಕ್ಷ ಮಾಡಿದ್ದೇವೆ. ಕಿರುಕುಳ ಕೊಡೋರಿಗೆ ಕಾನೂನಿನ ಬಿಸಿ ತಟ್ಟಬೇಕು ಎಂದರು.

    ಕಾಟಾಚಾರಕ್ಕೆ ಕಾನೂನು ಮಾಡಿದ್ರೆ ಇಂತಹ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ. ಇದಕ್ಕಾಗಿ ಫೈನ್ ಮತ್ತು ಶಿಕ್ಷೆ ಎರಡನ್ನೂ ಜಾಸ್ತಿ ಮಾಡಿದ್ದೇವೆ. ಇಂತಹ ಕಠಿಣ ಕಾನೂನಿಂದ ಕಿರುಕುಳ ನಿಲ್ಲುತ್ತದೆ. ಆ ಉದ್ದೇಶದಿಂದ ಶಿಕ್ಷೆ ಪ್ರಮಾಣ ಜಾಸ್ತಿ ಮಾಡಿದ್ದೇವೆ. ರಾಜ್ಯಪಾಲರಿಗೆ ಬಿಲ್ ಕಳಿಸಿದ್ದೇವೆ. ಇವತ್ತು ಆಗುತ್ತಾ ಗೊತ್ತಿಲ್ಲ. ರಾಜ್ಯಪಾಲರು ಊರಿಗೆ ಹೋಗಿದ್ದಾರೆ ಎನ್ನುತ್ತಿದ್ದಾರೆ. ಅವರು ಬಂದು ನೋಡಿ ಸಹಿ ಮಾಡಿದ ಕೂಡಲೇ ಸುಗ್ರೀವಾಜ್ಞೆ ಜಾರಿ ಆಗಲಿದೆ ಎಂದು ಹೇಳಿದರು.

    ಬಿಲ್ ವಿರುದ್ಧ ಮೈಕ್ರೋ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಅಂತನೇ ಬಿಲ್ ಸಿದ್ಧ ಮಾಡಲು ತಡವಾಯಿತು. ಮೊದಲ ಕರಡು ಸಿದ್ಧ ಮಾಡಿದಾಗ ಈ ಬಗ್ಗೆ ಚರ್ಚೆ ಮಾಡಿದ್ದೆವು. ಮೈಕ್ರೋ ಫೈನಾನ್ಸ್ ಕಂಪನಿಗಳು ಕೋರ್ಟ್ಗೆ ಹೋಗಬಹುದು ಎಂದು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಅಂತ ಸಿಎಂ ಸೂಚನೆ ನೀಡಿದ್ದರು. ಕಾನೂನು ಇಲಾಖೆಗೆ ಸೂಚನೆ ಕೊಟ್ಟರು ಸಹ ಎರಡು ದಿನ ತಡವಾಗಿದೆ. ಈಗ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕರಡು ಸಿದ್ಧ ಮಾಡಿದ್ದೇವೆ. ಕಂಪನಿಗಳು ಕೋರ್ಟ್ಗೆ ಹೋದರು ಸಹ ಸರ್ಕಾರಕ್ಕೆ ಹಿನ್ನಡೆ ಆಗುವುದಿಲ್ಲ ಎಂದು ನಾವು ಭಾವಿಸಿದ್ದೇವೆ ಎಂದು ನುಡಿದರು.

    ಹಸುಗಳನ್ನ ಕದ್ದವರನ್ನ ಗುಂಡಿಟ್ಟು ಕೊಲ್ಲುತ್ತೇನೆ ಎಂಬ ಸಚಿವ ಮಂಕಾಳ್ ವೈದ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದರ ಬಗ್ಗೆ ಗೊತ್ತಾಗಲಿಲ್ಲ. ಅವರು ವೈಯಕ್ತಿಕವಾಗಿ ಏನೋ ಹೇಳಿರುತ್ತಾರೆ ಎಂದರು.

    ಬೆಂಗಳೂರಿನಲ್ಲಿ ಕ್ಯೂಆರ್ ಕೋಡ್ ಮೂಲಕ ಮತಾಂತರ ಮಾಡುತ್ತಿದ್ದಾರೆ ಎಂಬ ಆರೋಪ ಬಗ್ಗೆ ಮಾತನಾಡಿ, ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮತಾಂತರದ ಬಗ್ಗೆ ಹಿಂದೆಯೇ ಕಾನೂನು ಮಾಡಿದ್ದೇವೆ. 2020-21ರಲ್ಲಿ ಕಾನೂನು ತಂದಿದ್ದರು. ಅದನ್ನು ವಿತ್ ಡ್ರಾ ಮಾಡುವ ಪ್ರಕ್ರಿಯೆ ಆಗಿತ್ತು. ಅದು ಯಾವ ಹಂತದಲ್ಲಿ ಇದೆ ಎಂದು ಕಾನೂನು ಇಲಾಖೆ ಬಳಿ ಕೇಳಬೇಕು. ಮತಾಂತರ ಮಾಡೋ ಬಗ್ಗೆ ನಮ್ಮ ಇಲಾಖೆಗೆ ದೂರು ಬಂದರೆ ಅಥವಾ ಬಲವಂತ ಮಾಡುತ್ತಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ವ್ಯಾಪ್ತಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತೇವೆ ಹೇಳಿದರು.

    ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಹಿಜಬ್‌ಗೆ ಅವಕಾಶ ನೀಡುವ ವಿಚಾರವಾಗಿ ಗೃಹ ಸಚಿವರ ಜೊತೆ ಸಭೆ ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ಬಗ್ಗೆ ಸುದೀರ್ಘವಾದ ಚರ್ಚೆ ಅವಶ್ಯಕತೆ ಇದೆ. ಚರ್ಚೆ ಮಾಡಿ ಆ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇನ್ನೂ ಒಂದು ತಿಂಗಳು ಪರೀಕ್ಷೆಗೆ ಸಮಯ ಇದೆ. ಸಭೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

    ಪರಮೇಶ್ವರ್ ನೇತೃತ್ವದಲ್ಲಿ ಹೈಕಮಾಂಡ್ ನಾಯಕರನ್ನು ಕೆಲ ಸಚಿವರು ಭೇಟಿ ಮಾಡುತ್ತಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಇದು ಸುಳ್ಳು ಸುದ್ದಿಯಾಗಿದೆ. ನನಗೇ ಈ ಬಗ್ಗೆ ಗೊತ್ತಿಲ್ಲ. ಯಾರು ಇಂತಹ ಸುದ್ದಿ ಹುಟ್ಟಿ ಹಾಕುತ್ತಾರೆ ಎನ್ನುವುದೇ ಗೊತ್ತಾಗುತ್ತಿಲ್ಲ. ನಾನು ಯಾವುದೇ ನಿಯೋಗವನ್ನು ಹೈಕಮಾಂಡ್ ಬಳಿ ತೆಗೆದುಕೊಂಡು ಹೋಗುತ್ತಿಲ್ಲ. ಅಂತಹ ಯಾವುದೇ ರಾಜಕೀಯ ಬೆಳವಣಿಗೆಯೂ ಇಲ್ಲ. ನಾನು ಮೊನ್ನೆಯೇ ಹೇಳಿದ್ದೇನೆ. ಇಲಾಖೆ ಕೆಲಸ ಇದ್ದಾಗ ಹೋಗುತ್ತೇನೆ ಬಿಟ್ಟರೆ ಬೇರೆ ವಿಚಾರಕ್ಕೆ ನಾನು ದೆಹಲಿಗೆ ಹೋಗುವುದಿಲ್ಲ. ದೆಹಲಿಗೆ ಹೋಗಬಾರದು ಅಂತ ಏನಿಲ್ಲ. ಬ್ಯಾನ್ ಆರ್ಡರ್ ಕೂಡಾ ಇಲ್ಲ. ದೆಹಲಿಗೆ ಹೋಗುವ ಅಗತ್ಯ ಇಲ್ಲ. ಅಗತ್ಯ ಬಿದ್ದಾಗ ಹೋಗುತ್ತೇನೆ ಎಂದು ಸ್ಪಷ್ಟನೆ ನೀಡಿದರು.

  • ಸಿದ್ದರಾಮಯ್ಯ ಕರಡು ಬಿಲ್ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿ: ಪರಮೇಶ್ವರ್

    ಸಿದ್ದರಾಮಯ್ಯ ಕರಡು ಬಿಲ್ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿ: ಪರಮೇಶ್ವರ್

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಕರಡು ಬಿಲ್ (Draft Bill) ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿ ಆಗಲಿದೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

    ಮೈಕ್ರೋ ಫೈನಾನ್ಸ್ (Micro Finance) ಕಿರುಕುಳ ತಡೆಗೆ ಸುಗ್ರಿವಾಜ್ಞೆ ಜಾರಿ ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಗ್ರಿವಾಜ್ಞೆ ಇವತ್ತು ಆಗಬಹುದು ಅನಿಸುತ್ತದೆ. ಸಿಎಂಗೆ ಆರೋಗ್ಯ ತೊಂದರೆ ಇದೆ. ಕರಡು ಬಿಲ್ ಸಿಎಂ ನೋಡಬೇಕು. ಅವರು ನೋಡಿ ಸಹಿ ಹಾಕಬೇಕು. ಅವರು ಸಹಿ ಮಾಡಿ ಡ್ರಾಫ್ಟ್ ಕಳುಹಿಸುತ್ತಾರೆ. ಅದಾದ ಮೇಲೆ ಸುಗ್ರಿವಾಜ್ಞೆ ಜಾರಿ ಆಗುತ್ತದೆ ಎಂದರು. ಇದನ್ನೂ ಓದಿ: ʻಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು.. ಗೋವಿಂದ ಗೋವಿಂದ..ʼ – ಎಂ. ಲಕ್ಷ್ಮಣ್‌ ಲೇವಡಿ

    ಈಗ ಇರೋ ಕಾನೂನಿಗೆ ಕೆಲವು ಕಾನೂನುಗಳನ್ನು ಸೇರಿಸೋ ಬಗ್ಗೆ ಚರ್ಚೆ ಆಗಿದೆ. ಹೊಸ ಕಾನೂನುಗಳನ್ನು ಸೇರ್ಪಡೆ ಮಾಡಿದ್ದೇವೆ. ಕರಡು ಪ್ರತಿ ನಾನು ನೋಡಿಲ್ಲ. ಸಿಎಂ ಸಹಿ ಆದ ಕೂಡಲೇ ಸುಗ್ರಿವಾಜ್ಞೆ ಫೈನಲ್ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಿಜಯೇಂದ್ರನ ಕರ್ಮಕಾಂಡದ ಬಗ್ಗೆ ವಿವರಿಸಲು ದೆಹಲಿಗೆ ಹೊರಟಿದ್ದೇವೆ – ಯತ್ನಾಳ್ ಲೇವಡಿ

  • ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಮಸೂದೆ – ಇನ್ನೆರಡು ದಿನದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಪ್ಲ್ಯಾನ್‌

    ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಹೊಸ ಮಸೂದೆ – ಇನ್ನೆರಡು ದಿನದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಪ್ಲ್ಯಾನ್‌

    ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು, ಕರ್ನಾಟಕ ಮೈಕ್ರೋ ಫೈನಾನ್ಸ್ (ದಬ್ಬಾಳಿಕೆ ಮತ್ತು ಅಮಾನವೀಯ ಕ್ರಮಗಳ ನಿಯಂತ್ರಣ) ಮಸೂದೆಯನ್ನು (Micro Finance Bill) ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸರ್ಕಾರ ಸರ್ಕಸ್ ನಡೆಸಿದೆ. ಗುರುವಾರ ನಡೆದ ಸಂಪುಟ ಸಭೆಯು ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ಸೂಚಿಸಿದೆ.

    ಈ ಬೆನ್ನಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ, ಮಸೂದೆಯ ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಲು, ಕೆಲವು ಬದಲಾವಣೆ ಮಾಡಲು ಕಾನೂನು ಮತ್ತು ಹಣಕಾಸು ಇಲಾಖೆಯ ನಾಲ್ವರು ಹಿರಿಯ ಅಧಿಕಾರಿಗಳ ತಂಡಕ್ಕೆ ಸೂಚಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಇನ್ನೆರಡು ದಿನಗಳಲ್ಲಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮಸೂದೆಯನ್ನು ಅಂಗೀಕರಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್‌.ಕೆ ಪಾಟೀಲ್‌ (HK Patil), ಕಳೆದ ಕೆಲ ದಿನಗಳಿಂದ ಮೈಕ್ರೋ ಫೈನಾನ್ಸ್ ತೊಂದರೆ ವಿಚಾರ ಚರ್ಚೆ ಆಗಿತ್ತು. ಸಾಲ ವಸೂಲಿ ಪ್ರಕ್ರಿಯೆಯ ಘಟನೆ ನೋಡಿದರೆ ಬಹಳ ಅಮಾನವೀಯವಾಗಿ ನಡೆದಿದೆ. ಇದರಿಂದ ಆತ್ಮಹತ್ಯೆ ಕೂಡ ನಡೆದಿದೆ. ಹಾಗಾಗಿ ಮೈಕ್ರೋ ಫೈನಾನ್ಸ್‌ಗೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತಿದ್ದೇವೆ. ಈಗಾಗಲೇ ಮಸೂದೆ ಸಿದ್ಧವಾಗಿದ್ದು, ಮಸೂದೆಯಲ್ಲಿ ಕೆಲವು ವಿಚಾರಗಳನನ್‌ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

    ಅಲ್ಲದೇ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿ ನಿಗದಿಪಡಿಸುವ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ರಾಮನಗರ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ.ಜಿ ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಗ್ರಾಮಗಳನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ  ಸೇರಿಸಲು ಸಂಪುಟದ ಅನುಮೋದನೆ ನೀಡಿತು ಎಂದು ಸಚಿವರು ವಿವರಿಸಿದರು.

    ಪ್ರಮುಖ ಕಾಮಗಾರಿಗಳಿಗೆ ಸಂಪುಟ
    ಗುರುವಾರ ನಡೆದ ಸಂಪುಟ ಸಭೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.

    * 83.72 ಕೋಟಿಗಳ ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಹಾಸನ-ಹೊಳೆನರಸೀಪುರ ರೈಲು ಮಾರ್ಗದ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿಗೆ ಅನುಮೋದನೆ.
    * ʻಹೊಂಬೆಳಕು ಯೋಜನೆʼಯಡಿ 25.00 ಕೋಟಿಗಳ ವೆಚ್ಚದಲ್ಲಿ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ಬೀದಿ ದೀಪ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
    * 44.50 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
    * ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ, 2024 ಹಿಂಪಡೆಯಲು ಸಂಪುಟ ನಿರ್ಧಾರ
    * ʻಅಪ್ಸರಕೊಂಡ-ಮುಗಲಿ ಕಡಲ ವನ್ಯಜೀವಿಧಾಮʼ ಎಂದು ಘೋಷಣೆ ಸೇರಿದಂತೆ ಇನ್ನಿತರ ಪ್ರಮುಖ ಕಾರ್ಯಕ್ರಮಗಳಿಗೆ ಒಪ್ಪಿಗೆ ಸೂಚಿಸಲಾಯಿತು.

  • ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆಯೇ ಸುಗ್ರೀವಾಜ್ಞೆ: ಪರಮೇಶ್ವರ್

    ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆಯೇ ಸುಗ್ರೀವಾಜ್ಞೆ: ಪರಮೇಶ್ವರ್

    ಬೆಂಗಳೂರು: ಮೈಕ್ರೋ ಫೈನಾನ್ಸ್ (Micro Finance) ಕಿರುಕುಳ ತಡೆಗೆ ಹೊಸ ಕಾನೂನು ನಾಳೆಯ ಕ್ಯಾಬಿನೆಟ್‌ನಲ್ಲಿ (Cabinet) ತರಲಿದ್ದು, ಸುಗ್ರೀವಾಜ್ಞೆ (Ordinance) ಮೂಲಕ ಕಾನೂನು ಜಾರಿಗೆ ತರುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ತಿಳಿಸಿದ್ದಾರೆ.

    ಸಿಎಂ ಸಭೆ ಮಾಡಿದ ಮೇಲೂ ಮೈಕ್ರೋ ಫೈನಾನ್ಸ್ ಕಂಪನಿಗಳು ಕಿರುಕುಳ ನೀಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಿರುಕುಳ ಆದರೆ ಪೊಲೀಸರಿಗೆ ದೂರು ಕೊಡಬೇಕು. ಆಗ ಪೊಲೀಸರು ತಕ್ಷಣ ಕ್ರಮ ತೆಗೆದುಕೊಳ್ಳುತ್ತಾರೆ. ಮೊನ್ನೆ ಸಿಎಂ ಸಭೆಯಲ್ಲಿ ಪೊಲೀಸರು ಇಂತಹ ಕೇಸ್ ಬಗ್ಗೆ ಸುಮೋಟೋ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದೇವೆ. ಇವತ್ತು ಮೈಕ್ರೋ ಫೈನಾನ್ಸ್ ಕಾನೂನು ಮಾಡುವ ಬಗ್ಗೆ ಸಭೆ ಕರೆದಿದ್ದೇವೆ. ಇವತ್ತು ಬಿಲ್ ಬಗ್ಗೆ ನಾನು, ಕಾನೂನು ಸಚಿವರು, ಕಂದಾಯ ಸಚಿವರು ಸಭೆ ಮಾಡಿ ಬಿಲ್ ಅಂತಿಮ ಮಾಡುತ್ತೇವೆ. ನಾಳೆಯ ಕ್ಯಾಬಿನೆಟ್ ನಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಕ್ರಮ ತೆಗೆದುಕೊಂಡು ರಾಜ್ಯಪಾಲರಿಗೆ ಕಳಿಸ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಮೋದಿ ಸರ್ಕಾರ

     

    ಈಗಾಗಲೇ SP-DCಗಳ ಸಭೆ ಮಾಡಿ ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಸಹಾಯವಾಣಿ ಕೂಡಾ ಪ್ರಾರಂಭ ಮಾಡಿದ್ದೇವೆ. ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಡುವುದು ಮತ್ತು ಇದಕ್ಕಾಗಿ ಒಂದು ಪ್ರತ್ಯೇಕ ವಿಂಗ್ ಪ್ರಾರಂಭ ಮಾಡೋದು ಬಿಲ್ ನಲ್ಲಿ ಅಂಶಗಳನ್ನ ಸೇರಿಸಿದ್ದೇವೆ ಎಂದರು.

    ಕೆಲವು ಮೈಕ್ರೋ ಫೈನಾನ್ಸ್ ಅವರು ಹಣ ವಸೂಲಿಗೆ ಔಟ್ ಸೋರ್ಸ್ ಕೊಟ್ಟಿರುತ್ತಾರೆ. ಅವರು ಬಂದು ಗುಂಡಾ ವರ್ತನೆ ಮಾಡೋ ಕೆಲಸ ಮಾಡ್ತಿದ್ದಾರೆ. ಆದರೆ ಅದನ್ನ ಮಾಡಿದ್ರೆ ಕ್ರಮ ತೆಗೆದುಕೊಳ್ಳುತ್ತೀವಿ. ಕಂಪನಿ ಅವರಿಗೂ ಈಗಾಗಲೇ ಸೂಚನೆ ಕೊಟ್ಟಿದ್ದೇವೆ‌. ಇವತ್ತು ಸುಗ್ರಿವಾಜ್ಞೆ ಹೊರಡಿಸೋ ಕಾನೂನು ಬಗ್ಗೆ ಸಭೆ ಮಾಡಿ ಇವತ್ತೇ ಕಾನೂನು ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು.

     

  • ಸಾಲ ಪಡೆದವರ ಮನೆಯ ಮೇಲೆ ಗೋಡೆ ಬರಹ ತಡೆಗಟ್ಟಬೇಕು: ಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಗೈಡ್‌ಲೈನ್ಸ್‌

    ಸಾಲ ಪಡೆದವರ ಮನೆಯ ಮೇಲೆ ಗೋಡೆ ಬರಹ ತಡೆಗಟ್ಟಬೇಕು: ಫೈನಾನ್ಸ್‌ ಹಾವಳಿ ನಿಯಂತ್ರಣಕ್ಕೆ ಗೈಡ್‌ಲೈನ್ಸ್‌

    – ಮೈಕ್ರೋ ಫೈನಾನ್ಸ್ ಕಂಪನಿಗೆ ಮೂಗುದಾರ ಹಾಕಲು ಮುಂದಾದ ಪೊಲೀಸರು

    ಬೆಂಗಳೂರು: ಮೈಕ್ರೋ ಫೈನಾನ್ಸ್‌ಗಳ (Micro Finance) ವಿರುದ್ಧ ಸಮರ ಸಾರಲು ಪೊಲೀಸರು ಮುಂದಾಗಿದ್ದಾರೆ. ಮೈಕ್ರೋ ಫೈ‌ನಾನ್ಸರ್ಸ್ ಹಾವಳಿಗೆ ಕಡಿವಾಣ ಹಾಕಲು ಪೊಲೀಸರು ಹೊಸ ಗೈಡ್‌ಲೈನ್ ಹೊರಡಿಸಿದ್ದಾರೆ.

    ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ಕಮಿಷನರ್ ಹಾಗೂ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕಠಿಣ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸರ್ಸ್‌ ಬಡವರ ರಕ್ತ ಹಿರುತ್ತಿದ್ದು, ಮರ್ಯಾದೆಗೆ ಅಂಜಿ ಹಲವರು ಊರು ಬಿಟ್ಟು ಹೋಗುತ್ತಿದ್ದಾರೆ. ಇನ್ನೂ ಕೆಲವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಹಾಗಾಗಿ, ಮೈಕ್ರೋ ಫೈನಾನ್ಸ್‌ ವಿರುದ್ಧ ಕ್ರಮಕೈಗೊಳ್ಳಲು ಸಂಬಂಧಪಟ್ಟ ಪೊಲೀಸರಿಗೆ ಹಿರಿಯ ಅಧಿಕಾರಿಗಳಿಂದ ಒಂದಷ್ಟು ಅಂಶಗಳನ್ನು ಒಳಗೊಂಡ ಹೊಸ ಗೈಡ್‌ಲೈನ್ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಫೈನಾನ್ಸ್ ಕಿರುಕುಳ: 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ – ಗುರುವಾರ ಸರ್ಕಾರದಿಂದ ಸುಗ್ರೀವಾಜ್ಞೆ

    ಮಾರ್ಗಸೂಚಿಯಲ್ಲೇನಿದೆ?
    * ಸಾಲ ಪಡೆದವರ ಮನೆಯ ಮೇಲೆ ಗೋಡೆ ಬರಹ ಬರೆಯವುದನ್ನ ತಡೆಗಟ್ಟಬೇಕು
    * ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಸಾಲ ಪಡೆದಿರೋ ಬಗ್ಗೆ ಗೋಡೆ ಬರಹ ಬರೆಯುವವರ ವಿರುದ್ಧ ಕ್ರಮ ವಹಿಸಬೇಕು
    * ಅಕ್ರಮವಾಗಿ ಮೈಕ್ರೋ ಫೈನಾನ್ಸ್ ವ್ಯವಹಾರ ಮಾಡುತ್ತಿರುವ ಫೈನಾನ್ಸರ್ಸ್‌ ವಿರುದ್ಧ ಕಾನೂನು ಕ್ರಮ ಜರಗಿಸಬೇಕು
    * ಫೈನಾನ್ಸರ್ಸ್ ಕಿರುಕುಳದಿಂದ ನೊಂದ ಜನರು ಪೊಲೀಸ್ ಠಾಣೆಗೆ ಬಂದರೆ ಪೊಲೀಸರು ಸ್ಪಂದಿಸಬೇಕು
    * ಆರ್‌ಬಿಐ ಮಾರ್ಗಸೂಚಿ ಉಲ್ಲಂಘನೆ ಮಾಡಿ ಸಾಲ ನೀಡಿರುವಂತಹ ಕಂಪನಿಗಳ ಪಟ್ಟಿ ಮಾಡಿ ಅಗತ್ಯ ಕ್ರಮ‌ಕೈಗೊಳ್ಳಬೇಕು
    * ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಸಭೆ ಕರೆದು ಮಾತನಾಡಲು ಸಂಬಂಧಪಟ್ಟ ಎಸ್ಪಿಗಳಿಗೆ ಸೂಚನೆ

    ಹೀಗೆ, ರಾಜ್ಯ ಸರ್ಕಾರದ ಮಟ್ಟದಲ್ಲಿ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನು ಕ್ರಮ ಜರಗಿಸುವ ಸೂಚನೆ ಕೊಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

  • ಫೈನಾನ್ಸ್ ಕಿರುಕುಳ: 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ – ಗುರುವಾರ ಸರ್ಕಾರದಿಂದ ಸುಗ್ರೀವಾಜ್ಞೆ

    ಫೈನಾನ್ಸ್ ಕಿರುಕುಳ: 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ – ಗುರುವಾರ ಸರ್ಕಾರದಿಂದ ಸುಗ್ರೀವಾಜ್ಞೆ

    ಬೆಂಗಳೂರು: ನಾಡಿದ್ದು ಗುರುವಾರ ಮೈಕ್ರೋ ಫೈನಾನ್ಸ್ (Micro Finance) ಬಿಲ್ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕ್ಯಾಬಿನೆಟ್ ಅಜೆಂಡಾದಲ್ಲಿ ಸುಗ್ರೀವಾಜ್ಞೆ ವಿಷಯ ಸೇರ್ಪಡೆ ಮಾಡಿದೆ. ಕಾನೂನು ಇಲಾಖೆಯಿಂದ ಕರ್ನಾಟಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಮತ್ತು ಲೇವಾದೇವಿ ನಿಯಂತ್ರಣ 2025ರ ಕರಡು ಬಿಲ್ ಸಿದ್ಧವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮೊದಲ ಆದ್ಯತಾ ವಿಷಯವಾಗಿ ಬಿಲ್ ಸುಗ್ರೀವಾಜ್ಞೆ ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

    ಈ‌ ಮೊದಲೇ ‘ಪಬ್ಲಿಕ್ ಟಿವಿ’ ವರದಿ ಪ್ರಸಾರ ಮಾಡಿದಂತೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗರಿಷ್ಠ 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ ವಿಧಿಸಲು ಕರಡು ಬಿಲ್‌ನಲ್ಲಿ ಕಾನೂನು ಅಡಕವಾಗಿದೆ. ಅಷ್ಟೇ ಅಲ್ಲದೆ ನೋಂದಣಿ ಪ್ರಾಧಿಕಾರದ ಮೂಲಕ ಮೈಕ್ರೋ ಫೈನಾನ್ಸ್ ಕಡ್ಡಾಯ ನೋಂದಣಿ ರೂಲ್ಸ್ ತರುತ್ತಿದ್ದು, ಆರ್‌ಬಿಐ ರೂಲ್ಸ್ ಪ್ರಕಾರ ಸಾಲ‌ಮಿತಿ, ಬಡ್ಡಿ ಮಿತಿಗಳನ್ನ ಪಾಲಿಸಬೇಕೆಂಬ ಷರತ್ತು ಸುಗ್ರೀವಾಜ್ಞೆಯಲ್ಲಿ ಇದೆ ಎನ್ನಲಾಗಿದೆ. ಸಾಲ ವಸೂಲಾತಿಗೂ ಕಠಿಣ ಷರತ್ತುಗಳನ್ನು ಹಾಕಲಾಗ್ತಿದ್ದು, ಕಿರುಕುಳಕ್ಕೆ ಮುಲಾಜಿಲ್ಲದೇ ಕ್ರಮಕ್ಕೆ ಸುಗ್ರೀವಾಜ್ಞೆ ತರಲಾಗ್ತಿದೆ. ಜ.30, ಗುರುವಾರ ಸುಗ್ರೀವಾಜ್ಞೆ ತರುತ್ತಿದ್ದು, ಕರಡು ಬಿಲ್ ಬಗ್ಗೆ ಚರ್ಚಿಸಿ ಕೆಲ ಸಣ್ಣಪುಟ್ಟ ಮಾರ್ಪಾಡುಗಳನ್ನೂ ಮಾಡುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

    ಮೈಕ್ರೋ ಫೈನಾನ್ಸ್ ಬಿಲ್ ಸುಗ್ರೀವಾಜ್ಞೆಯಲ್ಲಿ ಏನಿರಬಹುದು?
    * ಸಾಲಗಾರರಿಗೆ ಕಿರುಕುಳ ಕೊಟ್ಟರೆ ಮೂರು ವರ್ಷ ಜೈಲು
    * ಒಂದು ಲಕ್ಷದ ವರೆಗೆ ದಂಡ ವಿಧಿಸಲು ಪ್ಲ್ಯಾನ್
    * ಮಸೂದೆಯ ಪ್ರಕಾರ ಫೈನಾನ್ಸ್ ಕಂಪನಿ ಕಡ್ಡಾಯವಾಗಿ ನೋಂದಣಿ ಪ್ರಾಧಿಕಾರದ ಮೂಲಕ ನೋಂದಣಿ ಆಗಬೇಕು
    * ಎರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಲು ಮಾತ್ರ ಅನುಮತಿ, ನವೀಕರಣ ಮುಗಿದ 60 ದಿನಗಳಲ್ಲಿ ಮರು ನವೀಕರಣ ಮಾಡಿಕೊಳ್ಳಲು ಅವಕಾಶ
    * ಮೈಕ್ರೋ ಫೈನಾನ್ಸ್ ಕಂಪನಿಗಳು ಸರ್ಕಾರಕ್ಕೆ ಮುಚ್ಚಳಿಕೆ ಬರೆದುಕೊಡಬೇಕು
    * ಒಬ್ಬ ಸಾಲಗಾರ ಎರಡು ಸಂಸ್ಥೆಗಳಿಂದ ಮಾತ್ರ ಸಾಲ ಪಡೆಯಬಹುದು
    * ಒಬ್ಬ ಸಾಲಗಾರನಿಗೆ ಒಟ್ಟು ಸಾಲದ ಮೊತ್ತ ಎರಡು ಲಕ್ಷ ಮೀರುವಂತಿಲ್ಲ
    * ಸಾಲಗರನ ಆದಾಯ ಗಮನಿಸಬೇಕು, ಕೆವೈಸಿ‌ ಕಡ್ಡಾಯ
    * ಆರ್‌ಬಿಐ ರೂಲ್ಸ್‌ಗಳನ್ನ ಕಡ್ಡಾಯವಾಗಿ ಪಾಲಿಸಬೇಕು
    * ಬಡ್ಡಿ ದರದ ಸಹಿತ ಸಾಲದ ಮಂಜೂರಾತಿ ಕಾರ್ಡ್ ಅಥವಾ ಮಂಜೂರಾತಿ ಪತ್ರ ಕಡ್ಡಾಯ
    * ಸಾಲ ವಸೂಲಾತಿ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸಬೇಕು

  • Microfinance |  ಮನೆ, ಶಾಲೆಗೆ ಬಂದು ಟಾರ್ಚರ್‌ – ಶಿಕ್ಷಕಿಯ ಶವ ಎರಡು ದಿನದ ನಂತರ ಪತ್ತೆ

    Microfinance | ಮನೆ, ಶಾಲೆಗೆ ಬಂದು ಟಾರ್ಚರ್‌ – ಶಿಕ್ಷಕಿಯ ಶವ ಎರಡು ದಿನದ ನಂತರ ಪತ್ತೆ

    ದಾವಣಗೆರೆ: ಮೈಕ್ರೋ ಫೈನಾನ್ಸ್ (Microfinance) ಕಿರುಕುಳ ತಾಳಲಾರದೇ ತುಂಗಭದ್ರಾ ನದಿಗೆ (Tungabhadra River) ಹಾರಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯ ಶವ ಎರಡು ದಿನದ ನಂತರ ಪತ್ತೆಯಾಗಿದೆ.

    ಫೈನಾನ್ಸ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ (Teacher) ಪುಷ್ಪಲತಾ ಮೃತದೇಹ ಇಂದು ಬೆಳಗ್ಗೆ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದೆ.

    ಹೊನ್ನಾಳಿ ಪಟ್ಟಣದ ನಿವಾಸಿ ಪುಷ್ಪಲತಾ ಹಾಗೂ ಆಕೆಯ ಪತಿ ಶಿಕ್ಷಕ ಹಾಲೇಶ್ ಇಬ್ಬರು ಮನೆ ಕಟ್ಟಲು ಶಿವಮೊಗ್ಗ ಮೂಲದ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ಪಡೆದಿದ್ದರು.‌ ಒಂದು ಕಂತು ಬಾಕಿ ಇಟ್ಟುಕೊಂಡಿದ್ದಕ್ಕೆ ಫೈನಾನ್ಸ್‌ನವರ ಟಾರ್ಚರ್ ಹೆಚ್ಚಾಗಿತ್ತು.

     

    ಫೈನಾನ್ಸ್ ಸಿಬ್ಬಂದಿ ಮನೆ ಬಾಗಿಲಿಗೆ ಬರುತ್ತಿದ್ದರು. ಅಷ್ಟೇ ಅಲ್ಲದೇ ಶಾಲೆಯ ಬಳಿಗೂ ಬಂದು ಪೀಡಿಸುತ್ತಿದ್ದರು. ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಫೈನಾನ್ಸ್‌ನವರು ಪೊಲೀಸ್ ಸ್ಟೇಷನ್‌ನಲ್ಲಿ ಶಿಕ್ಷಕ ದಂಪತಿ ವಿರುದ್ದ ಕೇಸ್ ಕೂಡ ಹಾಕಿ ಇಬ್ಬರನ್ನು ಪೊಲೀಸ್ ಠಾಣೆಗೆ ಕರೆಸಿದ್ದರು.

    ಪೊಲೀಸ್‌ ಠಾಣೆಗೆ ಕರೆಸಿದ್ದಕ್ಕೆ ಪುಷ್ಪಲತಾ ಮನ ನೊಂದಿದ್ದರು. ಡಿ. 26 ರಂದು ಗಣರಾಜ್ಯೋತ್ಸವ ದಿನದಂದು ಶಾಲೆಯ ಕಾರ್ಯಕ್ರಮ ಮುಗಿಸಿ ನದಿಗೆ ಹಾರಿದ್ದರು. ತುಂಗಭದ್ರಾ ನದಿಯ ಬಳಿಯ ರಾಘವೇಂದ್ರ ಮಠದ ಬಳಿ ಅವರ ಬ್ಯಾಗ್ ಹಾಗೂ ಮೊಬೈಲ್ ಪತ್ತೆ ಆಗಿತ್ತು. ಘಟನೆ ನಡೆದು ಮೂರನೇ ದಿನಕ್ಕೆ ಶವ ಪತ್ತೆಯಾಗಿದೆ.

    ಸೋಮವಾರದಿಂದ ಈಜು ಪರಿಣಿತರು ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಶವಕ್ಕಾಗಿ ಶೋಧ ನಡೆಸುತ್ತಿದ್ದರು. ರಾಘವೇಂದ್ರ ಮಠದಿಂದ 1 ಕಿಲೋ ಮೀಟರ್ ದೂರದಲ್ಲಿ ಜಾಕ್‌ವೆಲ್ ಬಳಿ ತೆಲುತ್ತಿದ್ದ ಶವ‌ವನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ‌ ನೀಡಿದ್ದರು. ಇದನ್ನೂ ಓದಿ: Tumakuru| 4.66 ಲಕ್ಷಕ್ಕೆ 7.20 ಲಕ್ಷ ಬಡ್ಡಿ – ಹೃದಯಾಘಾತದಿಂದ ವ್ಯಕ್ತಿ ಸಾವು

    ತುಂಗಭದ್ರಾ ನದಿಗೆ ಪುಷ್ಪಲತಾ ಹಾರಲು ಹೊರಟಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿತ್ತು. ನದಿ ದಂಡೆಯ ಬಳಿ ಕುಳಿತು ಆಳವಾಗಿ ಯೋಚಿಸಿ ನದಿಗೆ ದುಮುಕಿದ್ದಾರೆ. ಈ ದೃಶ್ಯ ರಾಘವೇಂದ್ರಸ್ವಾಮಿ ಮಠದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.