Tag: ಮೈಕ್ರೋ ಫೈನಾನ್ಸ್

  • Tumakuru| 4.66 ಲಕ್ಷಕ್ಕೆ 7.20 ಲಕ್ಷ ಬಡ್ಡಿ – ಹೃದಯಾಘಾತದಿಂದ ವ್ಯಕ್ತಿ ಸಾವು

    Tumakuru| 4.66 ಲಕ್ಷಕ್ಕೆ 7.20 ಲಕ್ಷ ಬಡ್ಡಿ – ಹೃದಯಾಘಾತದಿಂದ ವ್ಯಕ್ತಿ ಸಾವು

    ತುಮಕೂರು: ಮೈಕ್ರೋ ಫೈನಾನ್ಸ್‌ನಿಂದ (Micro Finance) ಸಾಲ ಪಡೆದಕ್ಕಿಂತ ಹೆಚ್ಚು ಬಡ್ಡಿಯನ್ನೇ (Interest) ಕಟ್ಟಿ ಹೃದಯಾಘಾತದಿಂದ (Heart Attack) ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ತುಮಕೂರು ನಗರದ ಲೇಬರ್ ಕಾಲೋನಿಯ ಸೈಯದ್ ಸಮಿವುಲ್ಲಾ ಸಾವಿಗಿಡಾದ ವ್ಯಕ್ತಿ. ಇವರು ಫೈಸ್ ಸ್ಟಾರ್ ಫೈನಾನ್ಸ್‌ನಿಂದ 2019ರಲ್ಲಿ 4.66 ಮನೆ ಸಾಲ ಪಡೆದಿದ್ದರು. 2024 ಮೇವರೆಗೆ ಬರೊಬ್ಬರಿ 7.20 ಲಕ್ಷ ಬಡ್ಡಿ ಕಟ್ಟಿದ್ದರು. ಆದರೆ ಅಸಲು ಹಾಗೆಯೇ ಉಳಿದಿತ್ತು. ಮತ್ತೆ ಅಸಲು ಕಟ್ಟುವಂತೆ ಫೈನಾನ್ಸ್‌ನವರು ಕಿರುಕುಳ ಕೊಡುತ್ತಿದ್ದರು. ಈ ಕಿರುಕುಳ ತಾಳಲಾರದೆ ಹೃದಯಾಘಾತದಿಂದ ಸಮೀವುಲ್ಲಾ ಮೇ ತಿಂಗಳಲ್ಲಿ ಸಾವಿಗೀಡಾಗಿದ್ದಾರೆ. ಇವರಿಗೆ ಸುಮಾರು 24.55 % ಬಡ್ಡಿ ಹಾಕಲಾಗಿತ್ತು. ಇದನ್ನೂ ಓದಿ: Kolar| ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಾ ಸರ್ಕಾರಿ ಬಸ್ ಚಾಲನೆ – ವೀಡಿಯೋ ವೈರಲ್

    ಈಗ ಫೈನಾನ್ಸ್‌ನವರು ಸಮೀವುಲ್ಲಾ ಮನೆಗೆ ಬಂದು ಅವರ ಪತ್ನಿ ಬಳಿ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ. ಪತಿಯಂತೆ ನಾನೂ ಮಕ್ಕಳೊಂದಿಗೆ ಸಾಯಬೇಕಾಗುತ್ತದೆ ಎಂದು ಪತ್ನಿ ತಬಸಮ್ ಬಾನು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರು| ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಬೆಂಕಿ ಅವಘಡ

     

  • ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ – ಡಿಸಿ, ಎಸ್ಪಿಗಳಿಗೆ ಕೃಷ್ಣಬೈರೇಗೌಡ ಸೂಚನೆ

    ಮೈಕ್ರೋ ಫೈನಾನ್ಸ್ ಕಿರುಕುಳದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ – ಡಿಸಿ, ಎಸ್ಪಿಗಳಿಗೆ ಕೃಷ್ಣಬೈರೇಗೌಡ ಸೂಚನೆ

    ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಇನ್ನೊಂದು ವಾರದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಜೊತೆ ಸಭೆ ಮಾಡಿ ಎಚ್ಚರಿಕೆ ಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ಡಿಸಿ-ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ.

    ವಿಕಾಸಸೌಧದಲ್ಲಿ ಸಿಎಂ ಸೂಚನೆ ಮೇರೆಗೆ ಎಲ್ಲಾ ಡಿಸಿ ಹಾಗೂ ಎಸ್ಪಿಗಳ ಜೊತೆ ಸಚಿವರು ಸಭೆ ನಡೆಸಿ, ಡಿಸಿ-ಎಸ್ಪಿಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.ಇದನ್ನೂ ಓದಿ: ಕಾದುನೋಡಿ.. ಸುದೀಪ್‌ ಸರ್‌ ಇಲ್ಲದೇ ‘ಬಿಗ್‌ ಬಾಸ್‌’ ಇಲ್ಲ: ಶೋ ನಿರ್ದೇಶಕ ಪ್ರಕಾಶ್‌

    ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ಗೆ ಕಿರುಕುಳ ಕಡಿವಾಣ ಹಾಕಲು ಸಿಎಂ ಸೂಚನೆ ಕೊಟ್ಟಿದ್ದರು. ಹೀಗಾಗಿ ಈ ವಾರದಲ್ಲಿ ಡಿಸಿ, ಎಸ್ಪಿಗಳು ಫೈನಾನ್ಸ್ ಸಂಸ್ಥೆಗಳ ಜೊತೆ ಅವರ ಜೊತೆ ಸಭೆ ಮಾಡಬೇಕು ಎಂದು ತಿಳಿಸಿದ್ದರು. ಆರ್‌ಬಿಐ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಎಚ್ಚರ ಕೊಡಬೇಕು. ಅತಿರೇಕದ ಸಾಲ ಪಾವತಿ ಕ್ರಮ ತೆಗೆದುಕೊಂಡರೇ ಕೇಸ್ ದಾಖಲು ಮಾಡುವಂತೆ ಸೂಚನೆ ನೀಡಬೇಕು ಎಂದು ಹೇಳಿದರು.

    ಫೈನಾನ್ಸ್ ಕಂಪನಿಗಳು ಯದ್ವಾತದ್ವಾ ಸಾಲ ಕೊಡುತ್ತಿದ್ದಾರೆ. 2 ಲಕ್ಷ ರೂ. ಮೇಲ್ಪಟ್ಟು ಸಾಲ ಕೊಡಬಾರದು. ಇದು ಆರ್‌ಬಿಐ ನಿಯಮ. ಬೇಜವಾಬ್ದಾರಿಯಾಗಿ ಸಾಲ ಕೊಡುವುದು ನಿಯಂತ್ರಣ ಮಾಡಬೇಕು ಎಂದು ಸೂಚನೆ ನೀಡಿದ್ದೇವೆ. ಆರ್‌ಬಿಐ ನಿಯಮ ಪಾಲನೆಗೆ ಫೈನಾನ್ಸ್ ಅವರಿಗೆ ಸೂಚನೆ ಕೊಡುವಂತೆ ತಿಳಿಸಲಾಗಿದೆ. ಆರ್‌ಬಿಐ ಅವರು ನಮಗೆ ಯಾವುದೇ ಅಧಿಕಾರ ಕೊಟ್ಟಿಲ್ಲ. ಹೀಗಾಗಿ ಇಂತಹ ಕಿರುಕುಳ ಕೊಡದಂತೆ ತಡೆಯಲು ಕ್ರಮಕ್ಕೆ ನಾವು ಮುಂದಾಗಿದ್ದೇವೆ. ಇದನ್ನು ಕಟ್ಟುನಿಟ್ಟಾಗಿ ಫೈನಾನ್ಸ್ ಅವರಿಗೆ ಸೂಚನೆ ಕೊಡಲು ತಿಳಿಸಲಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: MUDA Case | ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ – ಸಿಎಂ ಪತ್ನಿ ಪಾರ್ವತಿಗೆ ತಾತ್ಕಾಲಿಕ ರಿಲೀಫ್

  • ಮೈಕ್ರೋ ಫೈನಾನ್ಸ್‌ನಿಂದ ಕಿರುಕುಳ – ದೂರು ಕೊಟ್ಟರೆ ತಕ್ಷಣ ಹಿಡಿದು ಒಳಗೆ ಹಾಕುವಂತೆ ಸೂಚನೆ ಕೊಟ್ಟಿದ್ದೇವೆ: ಪರಮೇಶ್ವರ್

    ಮೈಕ್ರೋ ಫೈನಾನ್ಸ್‌ನಿಂದ ಕಿರುಕುಳ – ದೂರು ಕೊಟ್ಟರೆ ತಕ್ಷಣ ಹಿಡಿದು ಒಳಗೆ ಹಾಕುವಂತೆ ಸೂಚನೆ ಕೊಟ್ಟಿದ್ದೇವೆ: ಪರಮೇಶ್ವರ್

    ಯಾದಗಿರಿ: ಮೈಕ್ರೋ ಫೈನಾನ್ಸ್‌ನಿಂದ ಕಿರುಕುಳ ಸಂಬಂಧ ಮೊನ್ನೆ ಅಷ್ಟೇ ಸಿಎಂ ಜೊತೆಗೆ ಮೀಟಿಂಗ್ ಮಾಡಿದ್ದೇವೆ. ಕಿರುಕುಳ ಸಂಬಂಧ ಯಾವುದೇ ದೂರು ಬಂದರೂ ಅಂಥವರನ್ನ ತಕ್ಷಣ ಹಿಡಿದು ಒಳಗೆ ಹಾಕುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G.Parameshwar) ಹೇಳಿದರು.

    ಯಾದಗಿರಿಯಲ್ಲಿ (Yadagiri) ನಗರ ಠಾಣಾ ಉದ್ಘಾಟನೆ ಬಳಿಕ ಸಚಿವರು ಮಾತನಾಡಿ, ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಎಂಬ ಕಂಪನಿಗಳು ಹುಟ್ಟಿಕೊಂಡಿವೆ. ಐವತ್ತು ಲಕ್ಷ ರೂ. ಕೊಟ್ಟು ಗೂಂಡಾಗಳನ್ನು ಬಿಟ್ಟು ಗಲಾಟೆ ಮಾಡಿ, ಸಾಲ ತೆಗೆದುಕೊಂಡವರ ಮರ್ಯಾದೆಯನ್ನು ಹರಾಜು ಹಾಕುತ್ತಿದ್ದಾರೆ. ಮೊನ್ನೆ ಅಷ್ಟೇ ನಾವು ಸಿದ್ದರಾಮಯ್ಯ ಅವರು ಈ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಕಿರುಕುಳ ನೀಡುವ ಸಿಬ್ಬಂದಿಯನ್ನು ತಕ್ಷಣ ಹಿಡಿದು ಒಳಗೆ ಹಾಕುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇವೆ. ಹೊಸದಾಗಿ ಕಾನೂನು ಮಾಡುವ ಅವಶ್ಯಕತೆ ಇದ್ದರೆ ಅದನ್ನು ಮಾಡುತ್ತೇವೆ. ಸಾಲಗಾರರು ದೂರು ಕೊಟ್ಟರೆ ಕಂಪ್ಲೆಂಟ್ ತೆಗೆದುಕೊಳ್ಳಿ, ಇಲ್ಲದಿದ್ದರೆ ನೀವೇ ಸುಮೋಟೋ ಕೇಸ್ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.ಇದನ್ನೂ ಓದಿ: ಗೃಹ ಮಂಡಳಿ ಫ್ಲ್ಯಾಟ್‌ ಬೇಕಾ? – ಕೋಟಿ ಕೋಟಿ ಹಣ ಇರಬೇಕು!

    ಬಳಿಕ ಸಿಎಂ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ಇಡಿ ನೋಟಿಸ್ ನೀಡಿದ ವಿಚಾರವಾಗಿ ಮಾತನಾಡಿದ ಸಚಿವರು, ಅದಕ್ಕೆ ತಕ್ಕ ಉತ್ತರ ಅವರು ಕೊಡ್ತಾರೆ. ಇಡಿ ನೋಟಿಸ್‌ಗೆ ಏನು ಉತ್ತರ ಬೇಕೋ ಅದನ್ನು ಕೊಡ್ತಾರೆ. ಇಡಿ ಅವರು ಅಪೇಕ್ಷೆ ಪಟ್ಟಂತೆ ಉತ್ತರ ಕೊಡುತ್ತಾರೆ ಎಂದು ಅಸಮಾಧಾನ ಹೊರಹಾಕಿದರು.

    ಕೋರ್ಟ್ ಆದೇಶ ಮತ್ತು ಇಡಿ ನೋಟಿಸ್ ತನಿಖೆ ನಡೆಯುವಾಗ ನಾವು ಏನು ಹೇಳೋಕೆ ಆಗಲ್ಲ. ಸಬ್ ಜ್ಯೂಡಿಸ್ ಆಗುತ್ತೆ ಹೀಗಾಗಿ ನಾವು ಏನು ಹೇಳೋಕೆ ಆಗಲ್ಲ. ಕೆಪಿಸಿಸಿ ಅಧ್ಯಕ್ಷರು ಸೇರಿ ಎಲ್ಲರೂ ಮೊದಲೇ ರಾಜಕೀಯ ಪ್ರೇರಿತ ಅಂತ ಹೇಳಿದ್ದಾರೆ. ಮುಡಾ ಪ್ರಕರಣ ರಾಜಕೀಯ ಪ್ರೇರಿತ ಅಂತ ಮೊದಲಿಂದ ಹೇಳಿದ್ದೇವೆ. ಈಗಲೂ ಅದನ್ನೇ ಹೇಳುತ್ತಿದ್ದೇವೆ ಎಂದರು.

    ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ ವಿಚಾರವಾಗಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಸಾವಿರಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಬರುತ್ತಿದೆ. ಕರ್ನಾಟಕದಲ್ಲೂ ಬಾಂಬ್ ಬೆದರಿಕೆ ಬಂದಿದೆ. ಹಿಂದೆನೂ ಬಂದಿದೆ. ಈಗಲೂ ಬರ್ತಿದೆ ದಿನನಿತ್ಯವೂ ಬರುತ್ತದೆ ಎಂದು ಹೇಳಿದರು.

    ನಾವು ಪರಿಶೀಲನೆ ಮಾಡುತ್ತೇವೆ. ಯಾವುದೋ ದೇಶದಲ್ಲಿ ಕುಳಿತುಕೊಂಡು ಪೋಸ್ಟಿಂಗ್ ಮಾಡಿರುತ್ತಾನೆ. ನಾವು ಬ್ಯಾಕ್ ಟ್ರಾಕ್ ಮಾಡಿ ಪತ್ತೆ ಹಚ್ಚುತ್ತೇವೆ. ನಮ್ಮಲ್ಲಿ ಸೈಬರ್ ಟಿಂ ಬಹಳ ಚೆನ್ನಾಗಿದೆ. ಇಡೀ ದೇಶದಲ್ಲಿ ಸೈಬರ್‌ನಲ್ಲಿ ಪರಿಣಿತರಿರೋದು ಕರ್ನಾಟಕದಲ್ಲಿ ಮಾತ್ರ. ವೆರಿಫೈ ಮಾಡಿದಾಗ ಬೇರೆಬೇರೆ ದೇಶದ ಪೋಸ್ಟಿಂಗ್ ಇರುತ್ತವೆ. ಅವರ ಅಡ್ರೇಸ್, ಅಕೌಂಟ್ ಯಾವುದು ನಮಗೆ ಸಿಗೋದಿಲ್ಲ. ಆದ್ದರಿಂದ ನಾವು ಇದನ್ನ ಗಂಭೀರವಾಗಿ ತೆಗೆದುಕೊಳ್ತೀವೆ. ಏಕೆಂದರೆ ಒಂದು ವೇಳೆ ಇದು ನಿಜಾನೇ ಆಗಿದ್ದರೆ ಏನು ಮಾಡೋದು. ಆದ್ದರಿಂದ ಇದನ್ನು ವೆರಿಫೈ ಮಾಡ್ತೇವೆ ಎಂದು ಭರವಸೆ ನೀಡಿದರು.ಇದನ್ನೂ ಓದಿ: ಶಿವಣ್ಣ ಗಟ್ಟಿಯಾಗಿ ವಾಪಸ್ ಬಂದಿದ್ದಾರೆ: ಡಾಲಿ ಧನಂಜಯ

  • ಮೈಸೂರು| ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ!

    ಮೈಸೂರು| ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ!

    ಮೈಸೂರು: ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು (Nanjangud) ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.

    ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ (Micro Finance) ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ಸಾಲ ಪಡೆದಿದ್ದರು. ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಈ ಹಿನ್ನೆಲೆ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: BBK 11 Finale| 50 ಲಕ್ಷದಲ್ಲಿ ಹನುಮಂತಗೆ ಎಷ್ಟು ಹಣ ಸಿಗುತ್ತೆ?

    ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಂತರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿದೆ. ಇದನ್ನೂ ಓದಿ: ಕಬ್ಬಿಣದ ಪೈಪ್ ತುಂಬಿದ್ದ ಲಾರಿ ಪಲ್ಟಿ; ತುಮಕೂರು – ಬೆಂಗಳೂರು ಹೈವೇಯಲ್ಲಿ ಭಾರೀ ಟ್ರಾಫಿಕ್

  • ಧರ್ಮಸ್ಥಳ ಸಂಘ ಮೈಕ್ರೋ ಫೈನಾನ್ಸ್‌ ವ್ಯಾಪ್ತಿಗೆ ಬರಲ್ಲ: ಕೆ.ಎನ್‌ ರಾಜಣ್ಣ

    ಧರ್ಮಸ್ಥಳ ಸಂಘ ಮೈಕ್ರೋ ಫೈನಾನ್ಸ್‌ ವ್ಯಾಪ್ತಿಗೆ ಬರಲ್ಲ: ಕೆ.ಎನ್‌ ರಾಜಣ್ಣ

    – ಧರ್ಮಸ್ಥಳದ ಹಣ ಅನ್ನುತ್ತಿದ್ದಂತೆ ಯಾರೂ ಉಳಿಸಿಕೊಳ್ಳಲ್ಲ ಎಂದ ಸಚಿವ

    ಹಾಸನ: ಧರ್ಮಸ್ಥಳ ಸಂಘ (Dharmasthala Association)ಮೈಕ್ರೋ ಫೈನಾನ್ಸ್‌ ವ್ಯಾಪ್ತಿಗೆ ಬರಲ್ಲ ಅಂತ ಸಚಿವ ಕೆ.ಎನ್‌ ರಾಜಣ್ಣ (KN Rajanna) ಹೇಳಿದ್ದಾರೆ.

    ಹಾಸನದಲ್ಲಿ (Hassan) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಧರ್ಮಸ್ಥಳ ಸಂಘದ ಸಾಲ ಸೌಲಭ್ಯದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಸಿಎಂ ಆಗಿರೋರಿಗೆ ಮೂರ‍್ನಾಲ್ಕು ಸೈಟ್ ಯಾವ ಲೆಕ್ಕ – ಮುಡಾ ಕೇಸ್ ಬಗ್ಗೆ ಕೆ.ಎನ್ ರಾಜಣ್ಣ ರಿಯಾಕ್ಷನ್

    ಮೈಕ್ರೋ ಫೈನಾನ್ಸ್ (Micro Finance) ವ್ಯಾಪ್ತಿಯಲ್ಲಿ ಧರ್ಮಸ್ಥಳ ಸಂಘ ಬರಲ್ಲ. ಅವರು ಗ್ರಾಮೀಣ ಯೋಜನೆ ಅಂತ ಮಾಡಿಕೊಂಡಿದ್ದಾರೆ. ಸ್ವ-ಸಹಾಯ ಸಂಘ ಮಾಡಿ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ವ-ಸಹಾಯ ಸಂಘಗಳಿಗೆ ಅವರು ಸಾಲ ಕೊಡ್ತಾರೆ. ಧರ್ಮಸ್ಥಳದ ಹಣ ಅನ್ನುತ್ತಿದ್ದಂತೆ ಯಾರೂ ಸಹ ಉಳಿಸಿಕೊಳ್ಳಲ್ಲ. ಅವರು ಹೀಗೆ ಕಿರುಕುಳ ನೀಡಿದ್ದಾರೆ ಅಂತ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಹರಿಹರ ಶಾಸಕರಿಗೆ ತಲೆ ಕೆಟ್ಟಿರಬೇಕು – ಬಿ.ಪಿ ಹರೀಶ್ ವಿರುದ್ಧ ಎಸ್.ಎಸ್ ಮಲ್ಲಿಕಾರ್ಜುನ್ ಕಿಡಿ

    ಇನ್ನೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿ, ಹೀಗೆ ಕಿರುಕುಳ ಕೊಡೋರಿಗೆ ಕಠಿಣ ಶಿಕ್ಷೆ ಆಗಬೇಕು. ಹಾಸನ ಜಿಲ್ಲೆಯಲ್ಲೂ ಈ ಸಮಸ್ಯೆ ಸಾಕಷ್ಟಿದೆ. ಕೆಲ ಸಂಸ್ಥೆಗಳು ಆರ್‌ಬಿಐ ಅನುಮತಿ ಪಡೆದು ಫೈನಾನ್ಸ್‌ ನಡೆಸುತ್ತಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ಕೊಟ್ಟಾಗ ನಾವು ಕ್ರಮ ಕೈಗೊಳ್ಳಬಹುದು. ಹಾಗಾಗಿ ಸಿಎಂ ಸಭೆ ಮಾಡಿ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಇಂತಹ ಕಿರುಕುಳ ತಡೆಗೆ ಹೊಸ ಕಾಯ್ದೆ ತರುವ ಬಗ್ಗೆಯೂ ಚರ್ಚೆ ಆಗಿದೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಕಾಯ್ದೆ ಮಂಡನೆ ಆಗಲಿದೆ. ನಿನ್ನೆ ಸಿಎಂ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಅದಕ್ಕಾಗಿ ನಿನ್ನೆ ರಜೆ ಇದ್ದರೂ ಸಿಎಂ ಅಧಿಕಾರಿಗಳು ಹಾಗೂ ಸಚಿವರೊಟ್ಟಿಗೆ ಸಭೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

    ಯಾರೆಲ್ಲ ಜನರಿಗೆ ತೊಂದರೆ ಕೊಡುತ್ತಾರೆ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಮೀಟರ್ ಬಡ್ಡಿ ದಂಧೆ ಹಾಗೂ ಮೈಕ್ರೋ ಫೈನಾನ್ಸ್ ಹಾವಳಿಗೆ ಬ್ರೇಕ್ ಬೀಳುತ್ತೆ ಅನ್ನೋ ವಿಶ್ವಾಸ ನನಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: 5 ವರ್ಷ ನಾವೇ ಅಧಿಕಾರದಲ್ಲಿರುತ್ತೇವೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ, ನಾನೇ ಸಿಎಂ ಎಂದಿಲ್ಲ: ಡಿ.ಸುಧಾಕರ್

  • ಸಿಎಂ ಆಗಿರೋರಿಗೆ ಮೂರ‍್ನಾಲ್ಕು ಸೈಟ್ ಯಾವ ಲೆಕ್ಕ – ಮುಡಾ ಕೇಸ್ ಬಗ್ಗೆ ಕೆ.ಎನ್ ರಾಜಣ್ಣ ರಿಯಾಕ್ಷನ್

    ಸಿಎಂ ಆಗಿರೋರಿಗೆ ಮೂರ‍್ನಾಲ್ಕು ಸೈಟ್ ಯಾವ ಲೆಕ್ಕ – ಮುಡಾ ಕೇಸ್ ಬಗ್ಗೆ ಕೆ.ಎನ್ ರಾಜಣ್ಣ ರಿಯಾಕ್ಷನ್

    ಹಾಸನ: ಮುಡಾ ಪ್ರಕರಣ (MUDA Case) ಬಿಜೆಪಿಯ ಸೃಷ್ಟಿ ಅಷ್ಟೇ. ಸಿಎಂ ಆಗಿರೋರಿಗೆ ಮೂರ‍್ನಾಲ್ಕು ಸೈಟ್ ಯಾವ ಲೆಕ್ಕ ಹೇಳಿ ಅಂತ ಸಹಕಾರ ಸಚಿವ ಕೆ.ಎನ್ ರಾಜಣ್ಣ (KN Rajanna) ಹೇಳಿದ್ದಾರೆ.

    ಹಾಸನದಲ್ಲಿ (Hassan) ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮುಡಾ ಹಗರಣದಲ್ಲಿ ಸಿಎಂ ಪಾತ್ರ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊಸ ಕಾನೂನು – ಸುಗ್ರೀವಾಜ್ಞೆ ಮೂಲಕ ಅಂಕುಶ: ಸಿಎಂ

    ಯಾರು ದೂರು ಕೊಟ್ಟು ಹೇಳಿಕೆ ಕೊಡ್ತಿದ್ದಾರೋ ಅವರದ್ದೇ ಪಾತ್ರ ಇದ್ದಂತಿದೆ. ಇನ್ನು ಸ್ವಲ್ಪದಿನ, ಎಲ್ಲವೂ ಆಚೆ ಬರುತ್ತದೆ. ಯಾರದ್ದು ಎಷ್ಟು ಸೈಟು ಇದೆ, ಎಲ್ಲವೂ ಆಚೆ ಬರುತ್ತೆ. ಮುಡಾ ಇರಲಿ, ಬಿಡಿಎ ಇರಲಿ, ಎಲ್ಲೇ ಕಾನೂನು ಬಾಹಿರ ಚಟುವಟಿಕೆ ಆಗಿದ್ದರೂ ಶಿಕ್ಷೆ ಆಗಬೇಕು. ಸಾರ್ವಜನಿಕ ಆಸ್ತಿಯನ್ನು ಯಾರೇ ಲಪಟಾಯಿಸಿದ್ರೂ ಅದು ಮೋಸದ ಕೆಲಸ. ಹಾಗೆ ಮಾಡಿದವರಿಗೆ ಶಿಕ್ಷೆಯಾಗಬೇಕು ಅನ್ನುವವನು ಅಂತ ಸಚಿವರು ಹೇಳಿದ್ದಾರೆ.

    ಲೋಕಾಯುಕ್ತ ವರದಿಯಲ್ಲಿ ಸಿಎಂ ಹಾಗೂ ಪತ್ನಿಗೆ ಕ್ಲೀನ್‌ಚಿಟ್ ವಿಚಾರ ಕುರಿತು ಮಾತನಾಡಿದ ಸಚಿವರು, ಜ.25ರ ಒಳಗೆ ವರದಿ ನೀಡಬೇಕಿತ್ತು ಅನ್ನೋದು ಸರ್ಕಾರದ ನಿರ್ದೇಶನ ಅಲ್ಲ. ಅದು ಕೋರ್ಟ್ ನಿರ್ದೇಶನ, ಹಾಗಾಗಿ ವರದಿ ನೀಡಿದ್ದಾರೆ. ವರದಿ ಹೊರಗೆ ಬಂದ ನಂತರ ಪ್ರತಿಕ್ರಿಯೆ ಕೊಡೋಣ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ 7.80 ಲಕ್ಷ ದೂರುಗಳು ಬರುವವರೆಗೂ ಬಾಳೆಹಣ್ಣು ತಿನ್ನುತ್ತಿದ್ರಾ?: ಎನ್.ರವಿಕುಮಾರ್ ಆಗ್ರಹ

    ಇನ್ನೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿ, ಹೀಗೆ ಕಿರುಕುಳ ಕೊಡೋರಿಗೆ ಕಠಿಣ ಶಿಕ್ಷೆ ಆಗಬೇಕು. ಹಾಸನ ಜಿಲ್ಲೆಯಲ್ಲೂ ಈ ಸಮಸ್ಯೆ ಸಾಕಷ್ಟಿದೆ. ಕೆಲ ಸಂಸ್ಥೆಗಳು ಆರ್‌ಬಿಐ ಅನುಮತಿ ಪಡೆದು ಫೈನಾನ್ಸ್‌ ನಡೆಸುತ್ತಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ಕೊಟ್ಟಾಗ ನಾವು ಕ್ರಮ ಕೈಗೊಳ್ಳಬಹುದು. ಹಾಗಾಗಿ ಸಿಎಂ ಸಭೆ ಮಾಡಿ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಇಂತಹ ಕಿರುಕುಳ ತಡೆಗೆ ಹೊಸ ಕಾಯ್ದೆ ತರುವ ಬಗ್ಗೆಯೂ ಚರ್ಚೆ ಆಗಿದೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಕಾಯ್ದೆ ಮಂಡನೆ ಆಗಲಿದೆ. ನಿನ್ನೆ ಸಿಎಂ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಅದಕ್ಕಾಗಿ ನಿನ್ನೆ ರಜೆ ಇದ್ದರೂ ಸಿಎಂ ಅಧಿಕಾರಿಗಳು ಹಾಗೂ ಸಚಿವರೊಟ್ಟಿಗೆ ಸಭೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

  • ದಾವಣಗೆರೆ | ಮೈಕ್ರೋ ಫೈನಾನ್ಸ್‌ನಿಂದ ಮಹಿಳೆಗೆ ಕಿರುಕುಳ

    ದಾವಣಗೆರೆ | ಮೈಕ್ರೋ ಫೈನಾನ್ಸ್‌ನಿಂದ ಮಹಿಳೆಗೆ ಕಿರುಕುಳ

    ದಾವಣಗೆರೆ: ರಾಜ್ಯದಲ್ಲಿ ದಿನೇದಿನೇ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಹೆಚ್ಚಾಗುತ್ತಿದ್ದು, ಇದೀಗ ದಾವಣಗೆರೆಯಲ್ಲೂ (Davanagere) ಮಹಿಳೆಯೊಬ್ಬರಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.

    ಚನ್ನಮ್ಮ ತಾಲೂಕಿನ ಕತ್ತಲಗೆರೆ ಗ್ರಾಮದ ರೇಣುಕಮ್ಮ ಎಂಬ ಮಹಿಳೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ತೀರಿಸುವಂತೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ.ಇದನ್ನೂ ಓದಿ: ಶಿವಣ್ಣ ನಮ್ಮ ರಾಜ್ಯದ ಆಸ್ತಿ: ಕೃಷ್ಣ ಬೈರೇಗೌಡ

    ಈ ಹಿಂದೆ ರೇಣುಕಮ್ಮ ಫೈನಾನ್ಸ್ ಕಂಪನಿ ಒಂದರಲ್ಲಿ ಸಾಲ ಮಾಡಿದ್ದರು. ನಂತರ ಫೈನಾನ್ಸ್ ಕಂಪನಿ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತು ಹಸು ಮಾರಿ ಸಾಲವನ್ನು ತೀರಿಸಿದ್ದರು. ಇದಾದ ಬಳಿಕ ಅನಾರೋಗ್ಯದ ಕಾರಣ ಆಸ್ಪತ್ರೆ ಖರ್ಚಿಗಾಗಿ ಮೈಕ್ರೋ ಫೈನಾನ್ಸ್ನಲ್ಲಿ ಮತ್ತೆ ಸಾಲ ಮಾಡಿದ್ದಾರೆ. ಇದೀಗ ಬಾಕಿ ಸಾಲ ಪಾವತಿ ಮಾಡುತ್ತಿದ್ದರೂ ಸಹ ಮೈಕ್ರೋ ಫೈನಾನ್ಸ್ ಸಿಬ್ಬಂದಿ ನಿತ್ಯ ಮಹಿಳೆಯ ಮನೆಗೆ ಬಂದು ಬೆದರಿಕೆ ಹಾಕಿ, ಸಾಲ ತೀರಿಸುವಂತೆ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ವೃದ್ಧ ದಂಪತಿಗಳು ಬೇಸತ್ತಿದ್ದಾರೆ.

    ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಉನ್ನತಮಟ್ಟದ ಸಭೆ ನಡೆಸಿ, ಹಲವು ಕ್ರಮಗಳನ್ನು ಕೈಗೊಂಡಿದ್ದರು. ಸಾಲಗಾರರ ಹಿತ ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡುವುದಾಗಿ ಘೋಷಣೆ ಮಾಡಿದ್ದರು.ಇದನ್ನೂ ಓದಿ: ಗಣರಾಜ್ಯೋತ್ಸವಕ್ಕೆ ಪಿವೋಟ್ ಚಿತ್ರದ ಸ್ನೀಕ್ ಪೀಕ್

     

  • ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊಸ ಕಾನೂನು – ಸುಗ್ರೀವಾಜ್ಞೆ ಮೂಲಕ ಅಂಕುಶ: ಸಿಎಂ

    ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊಸ ಕಾನೂನು – ಸುಗ್ರೀವಾಜ್ಞೆ ಮೂಲಕ ಅಂಕುಶ: ಸಿಎಂ

    ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತಮಟ್ಟದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಹಲವು ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಪ್ರಕಟಿಸಿದ್ದಾರೆ.

    ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ‌ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡುವುದಾಗಿ ಘೋಷಣೆ ಮಾಡಿದ್ದರು.

    ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ಇದೆ. ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

    ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ.‌ ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ. ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್‌ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು ಎಂದಿದ್ದಾರೆ.

    ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ. ಇಲ್ಲಿ ದೂರು ನೀಡಬಹುದು. ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚಿಸಲಾಗಿದೆ ಅಂದ್ರು.

    Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಸಾಲ ವಸೂಲಾತಿ ಕುರಿತಾಗಿ ಆರ್‌ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು. ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

  • ಮೈಕ್ರೋ ಫೈನಾನ್ಸ್ ಸಂಸ್ಥೆಗಳ‌ ಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸಿದ ಸಿಎಂ ಸಿದ್ದರಾಮಯ್ಯ, ಸಚಿವರಿಂದಲೂ ಆಕ್ರೋಶ

    ಮೈಕ್ರೋ ಫೈನಾನ್ಸ್ ಸಂಸ್ಥೆಗಳ‌ ಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸಿದ ಸಿಎಂ ಸಿದ್ದರಾಮಯ್ಯ, ಸಚಿವರಿಂದಲೂ ಆಕ್ರೋಶ

    ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಿಎಂ ಸಿದ್ದರಾಮಯ್ಯ ಬಿಸಿ ಮುಟ್ಟಿಸಿದ್ದಾರೆ. ಸಿಎಂ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಗರಂ ಆಗಿಯೇ ಪ್ರಶ್ನಿಸಿದ್ರು. ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ? ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಪ್ರಶ್ನಿಸಿದರು.

    ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ? ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು ಎಂದು ಸಾಲು ಸಾಲು ಪ್ರಶ್ನೆಗಳನ್ನ ಹಾಕಿ ಗರಂ ಆದರು.

    ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಅಂತಾ ಎಚ್ಚರಿಕೆ ಕೊಟ್ಟರು. ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಆರ್‌ಬಿಐ ಅಧಿಕಾರಿಗಳನ್ನೂ ಸಿಎಂ ಪ್ರಶ್ನಿಸಿದರು.

    ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿ (ಐಡಿ ಕಾರ್ಡ್‌ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ ಎಂದು ಕಂಪನಿಗಳಿಗೆ ಸಿಎಂ ಪ್ರಶ್ನೆ ಕೇಳಿದರು.

    ಆಗ ಆರ್‌ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ. ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎನ್ನುವ ಉತ್ತರ ಮೈಕ್ರೋ ಕಂಪನಿಯವರಿಂದ ಬಂತು. ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಹೆಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್‌ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ‌ ಗುಡುಗಿದರು.

  • ಬಡ್ಡಿ ಹಣಕ್ಕೆ ಮನಬಂದಂತೆ ಹಲ್ಲೆ – ಬೆತ್ತಲೆಗೊಳಿಸಿ ಚಿತ್ರಹಿಂಸೆ

    ಬಡ್ಡಿ ಹಣಕ್ಕೆ ಮನಬಂದಂತೆ ಹಲ್ಲೆ – ಬೆತ್ತಲೆಗೊಳಿಸಿ ಚಿತ್ರಹಿಂಸೆ

    – ಬೆಲ್ಟ್, ಕೇಬಲ್ ವಯರ್, ಲಾಠಿಯಿಂದ ಹೊಡೆತ

    ಗದಗ: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ (Micro Finance) ಹಾವಳಿ ಬೆನ್ನಲ್ಲೇ, ಮೀಟರ್ ಬಡ್ಡಿ ದಂಧೆಕೋರರ ಹಾವಳಿ ಹೆಚ್ಚಾಗಿದೆ. 1 ಲಕ್ಷ ರೂ ಸಾಲದ ಬಡ್ಡಿ ನೀಡದ್ದಕ್ಕೆ ಮನಬಂದಂತೆ ಹಲ್ಲೆ ಮಾಡಿರುವ ಅಮಾನವೀಯ ಘಟನೆ ನಗರದ ಬೆಟಗೇರಿಯಲ್ಲಿ (Gadag Betageri) ನಡೆದಿದೆ.

    ದಶರಥ ಬಳ್ಳಾರಿ ಮೇಲೆ ನಾಲ್ಕು ಜನ ಸೇರಿ ಮಾರಣಾಂತಿಕ ಮನಬಂದಂತೆ ಹಲ್ಲೆಮಾಡಿದ್ದಾರೆ. ಬೆಟಗೇರಿ ನಿವಾಸಿ ದಶರಥ ಅವರು ಮಂಜುನಾಥ ಹಂಸನೂರ ಎಂಬಾತನ ಬಳಿ ಎರಡು ವರ್ಷದ ಹಿಂದೆ 1 ಲಕ್ಷ ರೂ.ಹಣ ಪಡೆದಿದ್ದರು. ಈ ಸಾಲಕ್ಕೆ ಅವರಿಗೆ ಬಡ್ಡಿ ಸಹ ನೀಡುತ್ತಾ ಬಂದಿದ್ದರು.  ಇದನ್ನೂ ಓದಿ:ಮೀಟರ್ ಬಡ್ಡಿ ದಂಧೆಕೋರರ ಟಾರ್ಚರ್ – ಯುವಕ ನೇಣಿಗೆ ಶರಣು

    ಇತ್ತೀಚೆಗೆ ಕೆಲಸ ಇಲ್ಲದಕ್ಕೆ ಬಡ್ಡಿ ಹಣ ತುಂಬಲು ವಿಳಂಬ ಮಾಡಿದ್ದಾರೆ. ವಿಳಂಬ ಮಾಡಿದ್ದಕ್ಕೆ ಜ.21 ರಂದು ರಾತ್ರಿ ದಶರಥ ಅವರನ್ನು ಸೆಟಲ್ಮೆಂಟ್ ನಗರದ ಮನೆಯೊಂದರಲ್ಲಿ ಕರೆದೊಯ್ದ ಚಿತ್ರ ಹಿಂಸೆ ನೀಡಿದ್ದಾರೆ.

    ಮಂಜುನಾಥ ಹಂಸನೂರ, ಮಹೇಶ್ ಹಂಸನೂರ, ಡಿಸ್ಕವರಿ ಮಂಜು ಹಾಗೂ ಹನುಮಂತ ಕ್ರೌರ್ಯ ಮೆರೆದಿದ್ದಾರೆ. ದಶರಥ ಅವರನ್ನು ಕೂಡಿಹಾಕಿ ಬಟ್ಟೆ ಬಿಚ್ಚಿ, ಬಾಯಿ ಬಟ್ಟೆ ತುಂಬಿ ಕುಡಿಯುತ್ತಾ ರಾತ್ರಿ 10 ಗಂಟೆಗೆ ಹೊಡೆಯಲು ಆರಂಭಿಸಿದವರು ತಡರಾತ್ರಿ 3 ಗಂಟೆಯವರೆಗೆ ಹಲ್ಲೆ ಮಾಡಿದ್ದಾರೆ. ಬೆಲ್ಟ್, ಕೇಬಲ್ ವಯರ್, ಲಾಠಿಯಿಂದ ಮೈ, ಕೈ, ಕಾಲು, ಬೆನ್ನು, ಮುಖ, ತಲೆ ಎಲ್ಲಾ ಬಾಸುಂಡೆ ಬರುವಂತೆ ಚಿತ್ರ ಹಿಂಸೆ ಕೊಟ್ಟಿದ್ದಾರೆ.

    ನಸುಕಿನ ಜಾವ 3 ಗಂಟೆ ನಂತರ ಅವರನ್ನು ತಳ್ಳಿ ಬಾಗಿಲು ಹಾಕಿಕೊಂಡು ದಶರಥ ಮನೆಗೆ ಬಂದಿದ್ದಾರೆ. ಈಗ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಜ.23 ರಂದು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.