Tag: ಮೈಸೂರು

  • Mysuru | ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

    Mysuru | ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

    ಮೈಸೂರು: ವಿದ್ಯುತ್ ತಂತಿ ತಗುಲಿ ತಾಯಿ-ಮಗ (Mother-Son) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು (Hunsur) ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದೆ. ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೊದಲು ತಾಯಿ ನೀಲಮ್ಮಗೆ ವಿದ್ಯುತ್ ಶಾಕ್ (Electric Shock) ಹೊಡೆದಿದೆ. ಈ ವೇಳೆ ತಾಯಿಯನ್ನು ರಕ್ಷಣೆ ಮಾಡಲು ಹೋದ ಮಗ ಕೂಡ ಬಲಿಯಾಗಿದ್ದಾನೆ. ಇದನ್ನೂ ಓದಿ: ಕ್ರಿಮಿನಲ್‌ ಕೇಸ್‌ಗಳಲ್ಲಿ ಆರೋಪಪಟ್ಟಿ ರೂಪಿಸಲು ವಿಳಂಬ – ಸುಪ್ರೀಂ ಕಳವಳ

    ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿದ್ಯುತ್ ಇಲಾಖೆ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಆರೋಪಿಸಲಾಗಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನವೆಂಬರ್ 14ರ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಸುರೇಶ್ ಗೌಡ

  • MUDA Case | ದಿನೇಶ್ ವಿಚಾರಣೆಯಿಂದ ಮತ್ತಷ್ಟು ಅಕ್ರಮ ಬಯಲು – ಇ.ಡಿಯಿಂದ 150 ಕೋಟಿ ಮೌಲ್ಯದ ಆಸ್ತಿ ಜಪ್ತಿ

    MUDA Case | ದಿನೇಶ್ ವಿಚಾರಣೆಯಿಂದ ಮತ್ತಷ್ಟು ಅಕ್ರಮ ಬಯಲು – ಇ.ಡಿಯಿಂದ 150 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಮೈಸೂರು: ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ (MUDA Case) ಪ್ರಕರಣದಲ್ಲಿ ಬಂಧನವಾಗಿರುವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ (Dinesh Kumar) ವಿಚಾರಣೆಯಿಂದ ಕೋಟಿ ಕೋಟಿ ಅಕ್ರಮದ ಕಥೆ ಬಯಲಾಗಿದೆ. ದಿನೇಶ್ ಕುಮಾರ್ ವಿಚಾರಣೆಯಿಂದ ಸಿಕ್ಕ ದಾಖಲೆ ಪ್ರಕಾರ ಒಟ್ಟು 150 ಕೋಟಿ ಮೌಲ್ಯದ ಅಕ್ರಮದ ಸೈಟ್‌ಗಳನ್ನು ಇಡಿ ಜಪ್ತಿ ಮಾಡಿದೆ. ಈ ಮೂಲಕ ಮುಡಾ  ಬ್ರಹ್ಮಾಂಡ ಭ್ರಷ್ಟಾಚಾರದ ಕಿಂಗ್‌ಪಿನ್ ದಿನೇಶ್ ಎಂಬ ತೀರ್ಮಾನಕ್ಕೆ ಇಡಿ (ED) ಬಂದಂತೆ ಇದೆ. ಇಡಿಯ ಡೆಪ್ಯೂಟಿ ಡೈರೆಕ್ಟರ್ ಬರೆದ ಅಧಿಕೃತ ಪತ್ರದಲ್ಲಿ ಮುಡಾದ ಇದುವರೆಗಿನ ಭ್ರಷ್ಟಾಚಾರದ ಬಗ್ಗೆ ಸಂಪೂರ್ಣ ಉಲ್ಲೇಖವಿದೆ.

    ಇ.ಡಿ ಸಿದ್ಧಪಡಿಸಿರುವ ಪಟ್ಟಿಯಲ್ಲಿರುವ ಸೈಟ್‌ಗಳ ವರ್ಗಾವಣೆ, ಮಾರಾಟ ಯಾವುದೂ ನಡೆಸುವಂತಿಲ್ಲ ಎಂದು ಎಲ್ಲಾ ಸಬ್ ರಿಜಿಸ್ಟರ್‌ಗಳಿಗೆ ಸೂಚನೆ ಪತ್ರ ರವಾನಿಸಿದೆ. ಈ ಪತ್ರದಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್, ದಿನೇಶ್ ಕುಮಾರ್ ಸಂಬಂಧಿಕರು ಹಾಗೂ ಸಿದ್ದರಾಮಯ್ಯ ಆಪ್ತ ಬೆಂಬಲಿಗ ಪಾಪಣ್ಣಗೆ ಸೇರಿದ ಅಕ್ರಮವಾಗಿ ಮಂಜೂರಾದ ನಿವೇಶನಗಳ ಪಟ್ಟಿ ಇದೆ. ಇದನ್ನೂ ಓದಿ: ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಮುಡಾ ಅಕ್ರಮಕ್ಕೆ ಮಾಜಿ ಆಯುಕ್ತ ದಿನೇಶ್ ಕುಮಾರ್ ತಮ್ಮ ಮನೆ ಮಂದಿಯನ್ನೆಲ್ಲ ಬಳಸಿಕೊಂಡಿದ್ದಾರೆ. ತಮ್ಮ ಹೆಂಡತಿ, ಹೆಂಡತಿಯ ತಮ್ಮ, ಹೆಂಡತಿಯ ಅಜ್ಜಿ, ಸಂಬಂಧಿಕರು, ಮಾವ, ಮನೆ ಕೆಲಸದವರು ಎಲ್ಲರ ಹೆಸರಿನಲ್ಲೂ ಬ್ಯಾಂಕ್ ಖಾತೆ ತೆರೆದು ತನ್ನ ಬಳಿ ಅದನ್ನು ಇಟ್ಟುಕೊಂಡು ಅವರ ಹೆಸರಿನಲ್ಲಿ ಎಲ್ಲಾ ಅವ್ಯವಹಾರ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ. ದಿನೇಶ್ ಕುಮಾರ್ ತಮ್ಮ ಮನೆ ಮಂದಿಯ ಹೆಸರಿನಲ್ಲೇ ಹಣ ವರ್ಗಾವಣೆ, ಜಮೀನು ಖರೀದಿ ಸೇರಿದಂತೆ ಭಾರಿ ಅಕ್ರಮ ನಡೆಸಿರುವುದು ಸಾಕ್ಷಿಗಳ ಹೇಳಿಕೆ ಮೂಲಕ ಸಾಬೀತಾಗಿದೆ. ಇ.ಡಿಯ ವರದಿಯಲ್ಲಿ ಸಾಕ್ಷಿಗಳ ಹೇಳಿಕೆ ಸೇರಿದಂತೆ ಎಲ್ಲವೂ ಉಲ್ಲೇಖವಿದೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ಚಾಮುಂಡೇಶ್ವರಿ ಸೌಹಾರ್ಧ ಸಹಕಾರ ಸಂಘ ಹೆಸರಿನಲ್ಲೇ ದಿನೇಶ್ ಬಹುದೊಡ್ಡ ಅಕ್ರಮ ನಡೆಸಿದ್ದಾರೆ. ಇದನ್ನೂ ಓದಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆಶಿ ಟಾಂಗ್‌

    ದಿನೇಶ್ ಕುಮಾರ್ ವಿಚಾರಣೆಯಿಂದ ಸಿಎಂ ಸಿದ್ದರಾಮಯ್ಯ ಪರಮಾಪ್ತನಿಗೆ ಸಂಕಷ್ಟ ಶುರುವಾಗಿದೆ. ಮೈಸೂರಿನ ಸಿಎಂ ಸಿದ್ದರಾಮಯ್ಯ ಅವರ ಬಹುಕಾಲಿನ ಪರಮಾಪ್ತ ಪಾಪಣ್ಣ, 50:50 ಅನುಪಾತದಲ್ಲಿ ಬಹುದೊಡ್ಡ ಫಲಾನುಭವಿ ಆಗಿದ್ದಾರೆ. ನ್ಯಾಯಾಲಯ ಪರಿಹಾರಕ್ಕೆ ಪಾಪಣ್ಣ ಅರ್ಹ ಅಲ್ಲ ಎಂದು ಆದೇಶಿಸಿದ್ದರೂ ಪರಿಹಾರದ ಮೂಲಕ ದಿನೇಶ್ ಕುಮಾರ್ ಇವರಿಗೆ ಸೈಟ್ ಕೊಟ್ಟಿದ್ದಾರೆ. ಪಾಪಣ್ಣಗೆ ಎಲ್ಲಾ ಕಾನೂನುಗಳನ್ನ ಗಾಳಿಗೆ ತೂರಿ ಒಟ್ಟು 31 ಸೈಟ್ ಅಕ್ರಮವಾಗಿ ನೀಡಲಾಗಿದೆ. ನ್ಯಾಯಾಲಯದ ಆದೇಶವನ್ನೇ ಉಲ್ಲಂಘಿಸಿ ಸಿಎಂ ಪರಮಾಪ್ತನಿಗೆ ಸಹಾಯ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ಆ ಎಲ್ಲಾ ಸೈಟ್‌ಗಳನ್ನು ಇ.ಡಿ ಜಪ್ತಿ ಮಾಡಿದೆ. ಇದನ್ನೂ ಓದಿ: 10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    ಒಟ್ಟಾರೆ ಇ.ಡಿ ನಿಧಾನವಾಗಿ ಇಡೀ ಹಗರಣದ ಮೂಲಕ್ಕೆ ಕೈ ಹಾಕಿ ಸಾಕ್ಷಿ ಸಮೇತ ಎಲ್ಲವನ್ನೂ ಬಯಲು ಮಾಡುತ್ತಿದೆ. ಪ್ರಕರಣದಲ್ಲಿ ಕೇಳಿ ಬಂದ ಇನ್ನಷ್ಟು ಅಧಿಕಾರಿಗಳ ಬಂಧನವಾದರೆ ಮತ್ತಷ್ಟು ಹಗರಣ ಬಯಲಿಗೆ ಬರುವುದು ನಿಶ್ಚಿತ. ಇದನ್ನೂ ಓದಿ: ದೆಹಲಿಯಲ್ಲಿ ಮೋಡ ಬಿತ್ತನೆ ಪ್ರಯೋಗ ವಿಫಲ – ತಾತ್ಕಲಿಕವಾಗಿ ಮುಂದೂಡಿಕೆ

  • Mysuru| ರೈತನ ಬಲಿ ಪಡೆದಿದ್ದ ಹುಲಿ ಸೆರೆ

    Mysuru| ರೈತನ ಬಲಿ ಪಡೆದಿದ್ದ ಹುಲಿ ಸೆರೆ

    ಮೈಸೂರು: ದನ ಮೇಯಿಸಲು ಹೋಗಿದ್ದ ವೇಳೆ ರೈತನನ್ನು (Farmer) ಬಲಿ ಪಡೆದಿದ್ದ ಹುಲಿಯನ್ನು (Tiger) ಅರಣ್ಯ ಇಲಾಖೆ (Forest Department) ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.

    ಸಾಕಾನೆಗಳ ಸಹಾಯದಿಂದ ಹುಲಿಯನ್ನು ಸೆರೆಹಿಡಿಯಲಾಗಿದೆ. ಸರಗೂರು (Saraguru) ತಾಲೂಕಿನ ಮುಳ್ಳೂರು ಬಳಿ ಹುಲಿ ಸೆರೆಯಾಗಿದೆ. ಯಡಿಯಾಲ ಅರಣ್ಯ ವಲಯದ ಮುಳ್ಳೂರು ಬಳಿ ಅರವಳಿಕೆ ನೀಡಿ ಹುಲಿಯನ್ನು ಸೆರೆಹಿಡಿಯಲಾಯಿತು. ಸೆರೆಹಿಡಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ. ಸದ್ಯ ಹುಲಿ ಸೆರೆಯಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಮೈಸೂರು| ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ

    ಘಟನೆ ಏನು?
    ದನ ಮೇಯಿಸಲು ಹೋಗಿದ್ದ ವೇಳೆ ರೈತ ಹುಲಿ ದಾಳಿಗೆ ಬಲಿಯಾದ ಘಟನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿತ್ತು. ರಾಜಶೇಖರ (58) ಮೃತ ರೈತ. ಘಟನೆ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದನ್ನೂ ಓದಿ: ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ ಕೇಸ್ – ಶವಾಗಾರಕ್ಕೆ ಆಗಮಿಸಿದ ಖಂಡ್ರೆಗೆ ರೈತರಿಂದ ಘೇರಾವ್

    ಸೋಮವಾರ (ಅ.27) ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮೃತ ರೈತನ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದ ವೇಳೆ ಸಚಿವ ಈಶ್ವರ್ ಖಂಡ್ರೆ ಆಗಮಿಸಿದ್ದರು. ಈ ವೇಳೆ ರೈತರು ಸಚಿವರಿಗೆ ಘೇರಾವ್ ಹಾಕಿ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ, ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಪ್ರಾಣಿ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡಬೇಕು. ಘಟನೆಗೆ ಕಾರಣೀಕರ್ತರಾದವರಿಗೆ ತಕ್ಷಣ ವಜಾ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಸರಗೂರಿನಲ್ಲಿ ಹುಲಿ ದಾಳಿಗೆ ರೈತ ಬಲಿ – ಅಧಿಕಾರಿಗಳ ನಿರ್ಲಕ್ಷ್ಯ ಇದ್ರೆ ಕ್ರಮ ಗ್ಯಾರಂಟಿ: ಈಶ್ವರ್‌ ಖಂಡ್ರೆ

    ಅಲ್ಲದೇ ಮೃತ ರೈತನ ಮೃತದೇಹವನ್ನು ಮೈಸೂರಿಗೆ ತಂದಿದಕ್ಕೆ ಆಕ್ಷೇಪ ಹೊರಹಾಕಿದ್ದರು. ಭಾನುವಾರ ಸರಗೂರಿನಲ್ಲಿದ್ದರೂ ಸಚಿವರು ಬರಲಿಲ್ಲ. ಘಟನಾ ಸ್ಥಳದಲ್ಲಿ ಗಲಾಟೆ ಆಗುತ್ತೆ ಅಂತ ಗೊತ್ತಿತ್ತು. ಅದಕ್ಕೆ ಮೈಸೂರಿಗೆ ಮೃತದೇಹ ತಂದಿದ್ದೀರಿ ಎಂದು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಮೈಸೂರು| ನಾಲೆಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಿ ತಾವೇ ಜಲಸಮಾಧಿಯಾದ ಇಬ್ಬರು ಸಹೋದರರು

  • ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ ಕೇಸ್ – ಶವಾಗಾರಕ್ಕೆ ಆಗಮಿಸಿದ ಖಂಡ್ರೆಗೆ ರೈತರಿಂದ ಘೇರಾವ್

    ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ ಕೇಸ್ – ಶವಾಗಾರಕ್ಕೆ ಆಗಮಿಸಿದ ಖಂಡ್ರೆಗೆ ರೈತರಿಂದ ಘೇರಾವ್

    ಮೈಸೂರು: ದನ ಮೇಯಿಸುವಾಗ ಹುಲಿ ದಾಳಿಯಿಂದಾಗಿ ರೈತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತನನ್ನು ನೋಡಲು ಶವಾಗಾರಕ್ಕೆ ಆಗಮಿಸಿದ್ದ ಸಚಿವ ಈಶ್ವರ್ ಖಂಡ್ರೆಗೆ (Eshwar Khandre) ರೈತರು ಘೇರಾವ್ ಹಾಕಿದ ಘಟನೆ ಮೈಸೂರಿನ (Mysuru) ಕೆ.ಆರ್ ಆಸ್ಪತ್ರೆಯಲ್ಲಿ (KR Hospital) ನಡೆದಿದೆ.

    ಮೃತ ರೈತನನ್ನು ರಾಜಶೇಖರ್ ಎಂದು ಗುರುತಿಸಲಾಗಿದ್ದು, ಭಾನುವಾರ (ಅ.26) ಹೆಚ್‌ಡಿ ಕೋಟೆ ಸರಗೂರು ತಾಲ್ಲೂಕಿನಲ್ಲಿ ದನ ಮೇಯಿಸುವಾಗ ಹುಲಿ ದಾಳಿಯಿಂದ ಸಾವನ್ನಪ್ಪಿದ್ದರು. ಇದನ್ನೂ ಓದಿ: ಮೈಸೂರು| ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ

    ಸೋಮವಾರ (ಅ.27) ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮೃತ ರೈತನ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಸಚಿವ ಈಶ್ವರ್ ಖಂಡ್ರೆ ಆಗಮಿಸಿದ್ದರು. ಈ ವೇಳೆ ರೈತರು ಸಚಿವರಿಗೆ ಘೇರಾವ್ ಹಾಕಿ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ, ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಪ್ರಾಣಿ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡಬೇಕು. ಘಟನೆಗೆ ಕಾರಣೀಕರ್ತರಾದವರಿಗೆ ತಕ್ಷಣ ವಜಾ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

    ಇನ್ನೂ ಇದೇ ವೇಳೆ ಮೃತ ರೈತನ ಮೃತದೇಹವನ್ನು ಮೈಸೂರಿಗೆ ತಂದಿದಕ್ಕೆ ಆಕ್ಷೇಪ ಹೊರಹಾಕಿದ್ದಾರೆ. ಭಾನುವಾರ ಸರಗೂರಿನಲ್ಲಿದ್ದರೂ ಸಚಿವರು ಬರಲಿಲ್ಲ. ಇವತ್ತು ಘಟನಾ ಸ್ಥಳದಲ್ಲಿ ಗಲಾಟೆ ಆಗುತ್ತೆ ಅಂತ ಗೊತ್ತಿತ್ತು. ಅದಕ್ಕೆ ಮೈಸೂರಿಗೆ ಮೃತದೇಹ ತಂದಿದ್ದೀರಿ ಎಂದು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಇದೇ ವೇಳೆ ಈಶ್ವರ್ ಖಂಡ್ರೆ ಮಾತನಾಡಿ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡುತ್ತೇವೆ, ಹೆಚ್ಚಿನ ಪರಿಹಾರಕ್ಕೂ ಪ್ರಯತ್ನಿಸುತ್ತೇವೆ. ಯಾರೇ ಅಕ್ರಮ ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎನ್ನುತ್ತಿದ್ದಂತೆ ಗಲಾಟೆ ಹೆಚ್ಚಾಗಿ ಯಾವುದೇ ಸ್ಪಷ್ಟ ನಿಲುವು ತಾಳದೆ ಸಚಿವರು ಹೊರಟು ಹೋಗಿದ್ದಾರೆ.

    ರೈತರ ಪ್ರಶ್ನೆಗಳಿಗೆ ಸಚಿವರು ಸರಿಯಾದ ಉತ್ತರ ನೀಡದ ಹಿನ್ನೆಲೆ ಶವಾಗಾರದ ಮುಂದೆ ರೈತರ ಧರಣಿ ನಡೆಸಿದ್ದಾರೆ.ಇದನ್ನೂ ಓದಿ:

  • ಮೈಸೂರು| ನಾಲೆಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಿ ತಾವೇ ಜಲಸಮಾಧಿಯಾದ ಇಬ್ಬರು ಸಹೋದರರು

    ಮೈಸೂರು| ನಾಲೆಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಿ ತಾವೇ ಜಲಸಮಾಧಿಯಾದ ಇಬ್ಬರು ಸಹೋದರರು

    – ಮೃತರಲ್ಲಿ ಒಬ್ಬ 15 ದಿನಗಳ ಹಿಂದೆಯಷ್ಟೇ ಪ್ರೀತಿಸಿದ ಯುವತಿ ಜೊತೆ ಮದುವೆಯಾಗಿದ್ದ

    ಮೈಸೂರು: ನೀರಿನಲ್ಲಿ ಜಲ ಸಮಾಧಿ ಆಗ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.

    ಮೈಸೂರಿನ ವರುಣಾ ನಾಲೆಯಲ್ಲಿ ಈ ದುರಂತ ಘಟನೆ ನಡೆದಿದೆ. ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ಮುಳುಗ ತೊಡಗಿದ್ದಾನೆ. ಇದೇ ವೇಳೆಗೆ ನಾಲೆಯ ಮೇಲ್ಗಡೆ ನಡೆದುಕೊಂಡು ಬರುತ್ತಿದ್ದ ಸಹೋದರರು ಬಾಲಕ ಮುಳುಗುವುದನ್ನು ನೋಡಿ ಆತನ ರಕ್ಷಣೆಗೆ ನಾಲೆಗೆ ಹಾರಿದ್ದಾರೆ. ಮುಳುಗುತ್ತಿದ್ದ ಬಾಲಕನನ್ನು ನೀರಿನಿಂದ ಮೇಲೆತ್ತಿದ್ದಾರೆ. ಆದರೆ, ಈ ಸಹೋದರರು ಅಷ್ಟರಲ್ಲಿ ಸುಸ್ತಾಗಿ ನೀರಿನಿಂದ ಮೇಲೆ ಬರಲು ಆಗದೆ ಜಲಸಮಾಧಿ ಆಗಿದ್ದಾರೆ.

    ಬಡಗಲಹುಂಡಿ ಗ್ರಾಮದ ರಮೇಶ್ ಪುತ್ರ ನವ ವಿವಾಹಿತ (25) ನಂದನ್ ಹಾಗೂ ಅವರ ಸಹೋದರನ ಪುತ್ರ ರಾಕೇಶ್ (20) ಮೃತಪಟ್ಟ ಸಹೋದರರು. ನಿನ್ನೆ ಸಂಜೆ ವರಣಾ ನಾಲೆಯಲ್ಲಿ ಈ ಘಟನೆ ನಡೆದಿದೆ. ನಾಲೆಯಲ್ಲಿ ಈಜಲು ತೆರೆಳಿದ್ದ ಬಾಲಕ ಮಂಜು, ನೀರಿನಲ್ಲಿ ಮುಳುಗುತ್ತಿದ್ದ. ಈ ವೇಳೆ ಗೊಬ್ಬರ ತೆಗೆದುಕೊಂಡು ನಾಲೆಯ ಮೇಲ್ಭಾಗದಲ್ಲಿ ಹೋಗುತ್ತಿದ್ದ ಈ ಸಹೋದರರು ನೀರಿನಲ್ಲಿ ಮುಳುಗಿದ್ದವನನ್ನು ರಕ್ಷಿಸಲು ಮುಂದಾಗಿ ಬಾಲಕನನ್ನು ರಕ್ಷಿಸಿದ್ದಾರೆ. ಆದರೆ ಅಷ್ಟರಲ್ಲಿ ಸುಸ್ತಾಗಿ ನೀರಿನಿಂದ ಮೇಲೆ ಬರಲಾಗದೆ ನಂದನ್, ರಾಕೇಶ್ ನೀರುಪಾಲಾಗಿದ್ದಾರೆ.

    ಮೃತ ನಂದನ್, ರಾಕೇಶ್ ಇಬ್ಬರೂ ಸಹೋದರರ ಮಕ್ಕಳು. ಹದಿನೈದು ದಿನಗಳ ಹಿಂದೆಯಷ್ಟೆ ನಂದನ್ ತಾನು ಪ್ರೀತಿಸುತ್ತಿದ್ದ ಚನ್ನಪಟ್ಟಣದ ಯುವತಿ ಜೊತೆ ಪೋಷಕರ ಒಪ್ಪಿಗೆಯೊಂದಿಗೆ ಮದುವೆಯಾಗಿದ್ದ.

  • ಮೈಸೂರು| ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ

    ಮೈಸೂರು| ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ

    ಮೈಸೂರು: ದನ ಮೇಯಿಸಲು ಹೋಗಿದ್ದ ರೈತ ಹುಲಿ ದಾಳಿಗೆ ಬಲಿಯಾಗಿರುವ ಘಟನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ.

    ರಾಜಶೇಖರ (58) ಮೃತ ವ್ಯಕ್ತಿ. ಇವರು ಜಮೀನಿನಲ್ಲಿ ದನ ಮೇಯಿಸುವಾಗ ಹುಲಿ ಏಕಾಏಕಿ ದಾಳಿ ನಡೆಸಿ ಕೊಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಬೆಣ್ಣೆಗೆರೆ ಗ್ರಾಮದ ಅರಣ್ಯದ ಬಳಿ ಹುಲಿ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಹುಲಿ ದಾಳಿ ಹೆಚ್ಚುತ್ತಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಅವರು, ಕಾಡಿಗೆ ದನ ಮೇಯಿಸಲು ಹೋಗುವವರು, ಕಾಡಿನಂಚಿನ ಗ್ರಾಮಗಳ ನಿವಾಸಿಗಳು ಮತ್ತು ತೋಟದ ಕೆಲಸಗಾರರು ಹುಲಿ, ಚಿರತೆ, ಆನೆ ಇತ್ಯಾದಿ ವನ್ಯಜೀವಿಗಳ ಸಂಚಾರದ ಮಾಹಿತಿ ಇದ್ದಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.

    ದನ ಮೇಯಿಸಲು ರಾಜಶೇಖರ ಎಂಬವರು ತೆರಳಿದ್ದ ವೇಳೆ ಹುಲಿ ದಾಳಿ ಮಾಡಿದೆ ಎನ್ನಲಾಗಿದ್ದು, ಇದೊಂದು ತೀವ್ರ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತರ ಕುಟುಂಬದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

    ಹುಲಿ ದಾಳಿ ನಡೆದಿರುವ ಸ್ಥಳಕ್ಕೆ ಕೂಡಲೇ ಧಾವಿಸಿ, ಮಾನವನ ರಕ್ತದ ರುಚಿ ಕಂಡಿರುವ ಹುಲಿಯ ಸೆರೆಗೆ ತುರ್ತು ಕ್ರಮ ವಹಿಸಲು ಮತ್ತು ಮೃತರ ಕುಟುಂಬದವರಿಗೆ ಪರಿಹಾರ ನೀಡಲು ಸೂಚಿಸಿರುವುದಾಗಿಯೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

  • Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು

    Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು

    ಮೈಸೂರು: ಬಾತ್‌ರೂಂನಲ್ಲಿ (Bathroom) ಗ್ಯಾಸ್ ಗೀಸರ್ (Gas Geyser) ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಅಕ್ಕ-ತಂಗಿ (Sisters) ಸಾವನ್ನಪ್ಪಿದ ಘಟನೆ ಮೈಸೂರು (Mysuru) ಜಿಲ್ಲೆ ಪಿರಿಯಾಪಟ್ಟಣ (Piriyapatna) ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ನಡೆದಿದೆ.

    ಗುಲ್ಫರ್ಮ್ ತಾಜ್ (23), ಸಿಮ್ರಾನ್ ತಾಜ್ (20) ಮೃತ ದುರ್ದೈವಿಗಳು. ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ (Carbon Monoxide) ಸೋರಿಕೆಯಾಗಿ ಘಟನೆ ಸಂಭವಿಸಿದೆ. ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಬಾತ್‌ರೂಂಗೆ ಹೋದಾಗ ಘಟನೆ ನಡೆದಿದೆ. ಬಹಳ ಹೊತ್ತು ಕಳೆದರು ಬಾತ್‌ರೂಂನಿಂದ ಅಕ್ಕ, ತಂಗಿ ಹೊರಬಾರದ ಹಿನ್ನೆಲೆ ತಂದೆ ಅಲ್ತಾಫ್ ಅನುಮಾನಗೊಂಡು ಬಾಗಿಲು ಬಡಿದಿದ್ದಾರೆ. ಆಗಲೂ ಬಾಗಿಲು ತೆಗೆದಿಲ್ಲ. ಈ ವೇಳೆ ಬಾಗಿಲು ಒಡೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿರೋದು ಗೊತ್ತಾಗಿದೆ. ಇದನ್ನೂ ಓದಿ: ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ರಸ್ತೆಗೆ ಬಿದ್ದ ಟೆಕ್ಕಿ – ಲಾರಿ ಹರಿದು ದುರ್ಮರಣ

    ತಕ್ಷಣವೇ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟುಹೊತ್ತಿಗಾಗಲೇ ಇಬ್ಬರೂ ಮೃತಪಟ್ಟಿದ್ದರು. ಕೋಣೆಯಲ್ಲಿ ಕಿಟಕಿ ಇರದ ಹಿನ್ನೆಲೆ ಉಸಿರುಗಟ್ಟಿದೆ ಎನ್ನಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಬೆಂಗಳೂರು ಲಿಂಕ್‌ – ಬಳ್ಳಾರಿಯಲ್ಲಿ ಚಿನ್ನ ಮಾರಾಟ ಮಾಡಿರೋ ಶಂಕೆ

  • ಸಂಸದ ಯದುವೀರ್‌ ಒಡೆಯರ್‌ ಅಜ್ಜ ನಿಧನ

    ಸಂಸದ ಯದುವೀರ್‌ ಒಡೆಯರ್‌ ಅಜ್ಜ ನಿಧನ

    ಮೈಸೂರು: ರಾಜವಂಶಸ್ಥ ಹಾಗೂ ಬಿಜೆಪಿ ಸಂಸದ ಯದುವೀರ್‌ ಒಡೆಯರ್‌ ಅವರ ಅಜ್ಜ ನಿಧನರಾಗಿದ್ದಾರೆ.

    ಮದನ್ ಗೋಪಾಲ್ ರಾಜ್ ಅರಸ್ (93) ಅವರು ವಯೋಸಹಜವಾಗಿ ನಿಧನ ಹೊಂದಿದ್ದಾರೆ. ಇಂದು ಸಂಜೆ 4 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೃತರ ಅಂತ್ಯಕ್ರಿಯೆ ನಡೆದಿದೆ.

    ಮೃತರ ಆತ್ಮಕ್ಕೆ ಸಂಸದ ಯದುವೀರ್ ಶಾಂತಿ ಕೋರಿದ್ದಾರೆ. ಅಜ್ಜನ ನಿಧನ ಹಿನ್ನೆಲೆ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದರು.

  • ಮೈಸೂರಲ್ಲಿ ಭ್ರೂಣ ಲಿಂಗ ಪತ್ತೆ ಜಾಲ ದಂಧೆ – ಖಾಸಗಿ ಆಸ್ಪತ್ರೆ ಮಾಲಕಿ ಸೇರಿ ಐವರ ಬಂಧನ

    ಮೈಸೂರಲ್ಲಿ ಭ್ರೂಣ ಲಿಂಗ ಪತ್ತೆ ಜಾಲ ದಂಧೆ – ಖಾಸಗಿ ಆಸ್ಪತ್ರೆ ಮಾಲಕಿ ಸೇರಿ ಐವರ ಬಂಧನ

    ಮೈಸೂರು: ಭ್ರೂಣ ಲಿಂಗ ಪತ್ತೆ ಪ್ರಕರಣದಲ್ಲಿ (Fetal Sex Determination) ಸ್ಫೋಟಕ ವಿಚಾರ ಬಹಿರಂಗವಾಗಿದ್ದು, ಖಾಸಗಿ ಆಸ್ಪತ್ರೆ ಮಾಲಕಿಯೇ ಈ ದಂಧೆಯ ಕಿಂಗ್‌ಪಿನ್ ಎಂಬುದು ಗೊತ್ತಾಗಿದೆ.

    ಬನ್ನೂರಿನ ಎಸ್.ಕೆ. ಆಸ್ಪತ್ರೆ ಮಾಲಕಿ ಶ್ಯಾಮಲಾ ಈ ಕೃತ್ಯದ ಕಿಂಗ್‌ಪಿನ್. ಶ್ಯಾಮಲಾ ತಮ್ಮ ಗೋವಿಂದರಾಜು ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದ. ಏಜೆಂಟ್ ಪುಟ್ಟರಾಜು ಮೂಲಕ ಗಿರಾಕಿಗಳನ್ನು ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆಸುತ್ತಿದ್ದರು. ಇದನ್ನೂ ಓದಿ: ತಾಯಿ ಬಳಿ ಮಲಗಿದ್ದ ಗಂಡು ಮಗು ಕಳ್ಳತನ – ಮಹಿಳೆ ಬಂಧನ

    ಈಗ ಪ್ರಕರಣದಲ್ಲಿ ಸಾಲಿಗ್ರಾಮ ತಾಲೂಕಿನ ಬೇರ್ಯ ಮೂಲದ ಶಿವಕುಮಾರ್, ಮೈಸೂರು ತಾಲೂಕಿನ ಡಿ.ಸಾಲುಂಡಿ ಗ್ರಾಮದ ಹರೀಶ್ ವಶಕ್ಕೆ ಪಡೆಯಲಾಗಿದೆ. ಮಧ್ಯವರ್ತಿ ಪುಟ್ಟರಾಜು ಎಸ್ಕೇಪ್ ಆಗಿದ್ದಾನೆ. ಒಂದು ಭ್ರೂಣಪತ್ತೆಗೆ 25 ರಿಂದ 35 ಸಾವಿರ ಚಾರ್ಜ್ ಮಾಡಲಾಗುತ್ತಿತ್ತು. ಆಸ್ಪತ್ರೆಯಿಂದ ಕಾರಿನಲ್ಲಿ ಸ್ಕ್ಯಾನಿಂಗ್ ಮಿಷಿನ್ ತಂದು ಭ್ರೂಣ ಪತ್ತೆ ಮಾಡಲಾಗುತ್ತಿತ್ತು. ಶ್ಯಾಮಲಾ ಮನೆಯಲ್ಲಿಯೇ ಸ್ಕ್ಯಾನಿಂಗ್ ಮಿಷಿನ್ ಕೂಡ ಇತ್ತು.

    ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿ ಲಿಂಗ ಭ್ರೂಣ ಪತ್ತೆ ನಡೆಸುತ್ತಿದ್ದ ಕೇಂದ್ರದ ಮೇಲೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಾಳಿ ಮಾಡಿದೆ. ಬನ್ನೂರು ಹೈವೇಗೆ ಬಳಿಯ ಹುಣಗನಹಳ್ಳಿ ವ್ಯಾಪ್ತಿಯ ಫಾರಂ ಹೌಸ್ ಒಂದರಲ್ಲಿ ಲಿಂಗ ಭ್ರೂಣ ಪತ್ತೆ ಮಾಡಲಾಗುತ್ತಿತ್ತು. ದಾಳಿ ವೇಳೆ 4 ಗರ್ಭಿಣಿಯರು ಭ್ರೂಣ ಲಿಂಗ ಪತ್ತೆಗೆ ಹಾಜರಿದ್ದರು. ಈ ಕೇಂದ್ರದಲ್ಲಿ ಸ್ಕ್ಯಾನಿಂಗ್ ಬಳಕೆ ಮಾಡುವ ಉಪಕರಣವು ಇತ್ತು. ಈ ಹಿನ್ನೆಲೆಯಲ್ಲಿ ಹೆರಿಗೆ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಸಿಎಂ ಉತ್ತರಾಧಿಕಾರಿನಾ? – ಪರ್ಯಾಯ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ

    ಭ್ರೂಣ ಲಿಂಗ ಪತ್ತೆ ಕೇಂದ್ರದ ಮೇಲೆ ದಾಳಿ ನಡೆಸಿದ್ದು, ಐವರನ್ನು ಬಂಧಿಸಲಾಗಿದೆ. ಈ ಕುರಿತು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕುಮಾರಸ್ವಾಮಿ ಮಾತನಾಡಿ, ಸ್ಕ್ಯಾನಿಂಗ್‌ಗೆ ಬರುವ ಗರ್ಭಿಣಿಯರನ್ನು ಮಾನಿಟರ್ ಮಾಡುವ ಮೂಲಕ ಈ ಕಾರ್ಯಾಚರಣೆ ಮಾಡಿದ್ದೇವೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ 5 ಜನರನ್ನು ಬಂಧಿಸಲಾಗಿದೆ. ದಾಳಿ ಮಾಡಿದ ವೇಳೆ ಇಬ್ಬರು ಗರ್ಭಿಣಿಯರು ಸ್ಕ್ಯಾನಿಂಗ್‌ಗೆ ಬಂದಿದ್ದರು. ಅವರ ಪೋಷಕರ ವಿರುದ್ಧವೂ ಕೇಸ್ ದಾಖಲಿಸಿದ್ದೇವೆ. ನರ್ಸ್ ಒಬ್ಬರ ಮುಂದಾಳತ್ವದಲ್ಲಿ ಸ್ಕ್ಯಾನಿಂಗ್ ಮಾಡಲಾಗುತ್ತಿತ್ತು. ಆಕೆ ಬನ್ನೂರಿನ ಎಸ್.ಕೆ. ಆಸ್ಪತ್ರೆ ಉದ್ಯೋಗಿ. ರೇಡ್ ನಡೆದ ಜಾಗದಲ್ಲಿ ಎಷ್ಟು ದಿನಗಳಿಂದ ಭ್ರೂಣ ಪತ್ತೆ ನಡೆಯುತ್ತಿತ್ತು. ಇಲ್ಲಿಯವರೆಗೆ ಎಷ್ಟು ಭ್ರೂಣ ಹತ್ಯೆ ಆಗಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

  • ತಾಯಿ ಬಳಿ ಮಲಗಿದ್ದ ಗಂಡು ಮಗು ಕಳ್ಳತನ – ಮಹಿಳೆ ಬಂಧನ

    ತಾಯಿ ಬಳಿ ಮಲಗಿದ್ದ ಗಂಡು ಮಗು ಕಳ್ಳತನ – ಮಹಿಳೆ ಬಂಧನ

    ಮೈಸೂರು: ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು (Railway Police) ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.

    ಬುಧವಾರ ರಾತ್ರಿ ಮಗುವಿನೊಂದಿಗೆ ಪೋಷಕರು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು. ಈ ವೇಳೆ ಮಹಿಳೆಯೊಬ್ಬಳು ಮಗುವನ್ನು ಕದ್ದುಕೊಂಡು ಹೋಗಿದ್ದಳು.  ಇದನ್ನೂ ಓದಿ:  ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ

     

    ನಿದ್ರೆಯಿಂದ ಪೋಷಕರು ಎಚ್ಚರಗೊಂಡ ಮೇಲೆ ಮಗು ಕಾಣೆಯಾಗಿರುವುದು ಗೊತ್ತಾಗಿದೆ. ತಾಯಿ (Mother) ಆಕ್ರಂದನ ಕಂಡ ರೈಲ್ವೆ ಪೊಲೀಸರು ವಿಚಾರಿಸಿದ್ದಾಗ ಮಗು ಕಾಣೆ ಆಗಿರುವ ವಿಚಾರವನ್ನು ತಿಳಿಸಿದ್ದಾರೆ.

    ತಕ್ಷಣವೇ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ ನಡು ವಯಸ್ಸಿನ ಮಹಿಳೆ ಮಗುವನ್ನು ಅಪಹರಿಸಿದ್ದು ಗೊತ್ತಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಮಹಿಳೆಯನ್ನು ಪತ್ತೆ ಹಚ್ಚಿದ್ದಾರೆ. ಹಾಸನ ಮೂಲದ 50 ವರ್ಷದ ನಂದಿನಿಯನ್ನು ಬಂಧಿಸಿದ ಪೊಲೀಸರು ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ:  ಇವಿ ಬಿಎಂಟಿಸಿ ಬಸ್ಸು ಚಾಲಕರಿಂದ ದಿಢೀರ್‌ ಪ್ರತಿಭಟನೆ