Tag: ಮೈಸೂರು ಜಿಲ್ಲಾಧಿಕಾರಿ

  • ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

    ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

    ಮೈಸೂರು: ಮುಡಾ ಹಗರಣ (MUDA Scam) ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ (K.V.Rajendra) ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

    ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ (Mysuru DC) ಲಕ್ಷ್ಮಿಕಾಂತ ರೆಡ್ಡಿ ಅವರನ್ನು ನಿಯೋಜಿಸಲಾಗಿದೆ. ರೆಡ್ಡಿ ಅವರು ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಈಗ ಮೈಸೂರು ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಇದನ್ನೂ ಓದಿ: MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್‌

    ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಧಿಕಾರಿ ವರ್ಗಾವಣೆಯಾಗಿರುವುದು ಚರ್ಚೆ ಹುಟ್ಟುಹಾಕಿದೆ. ರಾಜೇಂದ್ರ ಅವರು 2022ರ ಅ.27 ರಂದು ಡಿಸಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಎರಡು ವರ್ಷಕ್ಕೂ ಮುನ್ನವೇ ಅವರನ್ನು ವರ್ಗಾವಣೆ ಮಾಡಲಾಗಿದೆ.

    ಮುಡಾಕ್ಕೆ ಅಧ್ಯಕ್ಷರನ್ನು ನೇಮಿಸುವವರೆಗೂ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ನಿವೇಶನ ಹಂಚಿಕೆ ವಿವಾದ- ಮುಡಾ ಆಯುಕ್ತರಿಗೆ 15 ಪತ್ರ ಬರೆದಿದ್ದ ಮೈಸೂರು ಡಿಸಿ

  • ಮೈಸೂರಲ್ಲಿ ಕೊರೊನಾ ಡೆತ್ ರೇಟ್ ಹೆಚ್ಚಾಗೋಕೆ ಕಾರಣ ತಿಳಿಸಿದ ಡಿಸಿ ಬಗಾದಿ ಗೌತಮ್

    ಮೈಸೂರಲ್ಲಿ ಕೊರೊನಾ ಡೆತ್ ರೇಟ್ ಹೆಚ್ಚಾಗೋಕೆ ಕಾರಣ ತಿಳಿಸಿದ ಡಿಸಿ ಬಗಾದಿ ಗೌತಮ್

    ಮೈಸೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸಾವು ಹೆಚ್ಚಳದ ವಿಚಾರದ ಬಗ್ಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ವಿವರವಾದ ಸ್ಪಷ್ಟನೆ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಡೆತ್ ಜಾಸ್ತಿಯಾಗಿರುವುದರ ಕಾರಣ ತಿಳಿಸಿದ್ದಾರೆ.

    ಈ ಕುರಿತು ವಿವರಿಸಿದರುವ ಅವರು, ಸಿಟಿ ಸ್ಕ್ಯಾನ್‍ನಲ್ಲಿ ಕೋವಿಡ್ ಪಾಸಿಟಿವ್ ಲಕ್ಷಣವಿದ್ದರೆ ರಿಪೋರ್ಟ್ ಮಾಡುವುದನ್ನು ಈಗ ಸ್ಟಾಪ್ ಮಾಡಿದ್ದೇವೆ. ಅಲ್ಲದೆ ಆರ್‍ಟಿಪಿಸಿಆರ್ ಟೆಸ್ಟ್ ಜಾಸ್ತಿ ಮಾಡುತ್ತಿದ್ದೇವೆ. ಹೀಗಾಗಿ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. ಎಲ್ಲ ಕೊರೊನಾ ಡೆತ್ ಗಳ ಸಂಖ್ಯೆ ಸಿಗಬೇಕು ಎಂಬ ಉದ್ದೇಶದಿಂದ ಡಿಸ್‍ಚಾರ್ಜ್ ಆದ ನಂತರ ಕೆಲವರು ಡೆತ್ ಆಗುತ್ತಿದ್ದಾರೆ. ಇದರ ಸಂಖ್ಯೆಯನ್ನು ಸಹ ಕೊಡಲಾಗುತ್ತಿದೆ ಎಂದು ವಿವರಿಸಿದರು.

    ಟೆಸ್ಟ್ ಗೆ ಕೊಟ್ಟು ವರದಿಗೆ ಮುನ್ನ ಸತ್ತವರ ಸಂಖ್ಯೆ ಕೂಡ ಕಯಾಜ್ ಮೂಲಕ ಸೇರಿಸುತ್ತಿದ್ದೇವೆ. ಗ್ರಾಮೀಣ ಭಾಗದ ಆಸ್ಪತ್ರೆಯಲ್ಲಿ ತಡವಾಗಿ ಬೆಳಕಿಗೆ ಬರುವ ಡೆತ್ ಪ್ರಕರಣಗಳನ್ನೂ ಲೀಸ್ಟ್‍ಗೆ ಸೇರಿಸುತ್ತಿದ್ದೇವೆ. ಈ ಎಲ್ಲ ಕಾರಣಗಳಿಂದ ಡೆತ್ ರೇಟ್ ಜಾಸ್ತಿ ಆಗಿದೆ.

    ಅಲ್ಲದೆ ಮೈಸೂರಿನಲ್ಲಿ ಡೆತ್‍ರೇಟ್ ಹೆಚ್ಚದೆಯೇ ಹೊರತು ಡೆತ್ ಹೆಚ್ಚಾಗಿಲ್ಲ. ಸಂಖ್ಯೆ ನೋಡಿ ಜನರು ಗಾಬರಿ ಆಗುವುದು ಬೇಡ. ಈ ವರೆಗೆ ಡೆತ್ ಡಾಟಾವನ್ನು ಸಂಪೂರ್ಣವಾಗಿ ಮಾಡಿಲ್ಲ. ಒಂದು ತಿಂಗಳಿನಿಂದ ಮಾಡುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದರು. ಡಿಸಿ ಸ್ಪಷ್ಟನೆ ವೇಳೆ ಮಧ್ಯೆ ಪ್ರವೇಶ ಮಾಡಿದ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಾವಿನ ಸಂಖ್ಯೆಯನ್ನು ಜಿಲ್ಲಾಡಳಿತ ಮುಚ್ಚಿಡುವುದಿಲ್ಲ. ಇದರಲ್ಲಿ ಬ್ಲಾಕ್ ಅಂಡ್ ವೈಟ್ ಯಾವುದೂ ಇಲ್ಲ, ಎಲ್ಲ ವೈಟ್ ಎಂದು ತಿಳಿಸಿದರು.

  • ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ವರ್ಗಾವಣೆ ಆದೇಶಕ್ಕೆ ತಡೆ

    ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಶರತ್ ವರ್ಗಾವಣೆ ಆದೇಶಕ್ಕೆ ತಡೆ

    ಮೈಸೂರು: ಜಿಲ್ಲಾಧಿಕಾರಿ ಬಿ.ಶರತ್ ವರ್ಗಾವಣೆಯ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ತಡೆ ನೀಡಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆ ಆಗಿದೆ. ಬಿ.ಶರತ್ ಅವರ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನ ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿತ್ತು.

    ಬಿ ಶರತ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ಮರು ನೇಮಕ ಮಾಡಬೇಕು. ಡಿಸೆಂಬರ್ 22ರೊಳಗೆ ಈ ಸಂಬಂಧ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ತಿಳಿಸಲು ಅಡ್ವೊಕೇಟ್ ಜನರಲ್ ಗೆ ಸಿಎಟಿ ನಿರ್ದೇಶನ ನೀಡಿದೆ. ಒಂದು ವೇಳೆ ತಪ್ಪಿದ್ದಲ್ಲಿ ಸಿಎಟಿ ಈ ಬಗ್ಗೆ ಆದೇಶ ಹೊರಡಿಸಲಿದೆ ಎಂದು ಸೂಚಿಸಿದೆ. ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ತಿಂಗಳಲ್ಲಾದ ಬಿ.ಶರತ್ ತಮ್ಮ ವರ್ಗಾವಣೆಯನ್ನ ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದರು.

    ಕೆಲ ದಿನಗಳಿಂದ ಮೈಸೂರಿನ ಜನಪ್ರತಿನಿಧಿಗಳು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಜನಪರ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದಾರೆ ಎಂದು ಬೇಸರ ಹೊರಹಾಕಿದ್ದರು. ಇನ್ನು ಸಚಿವ ಆರ್.ಅಶೋಕ್ ಸಹ ಬಹಿರಂಗವಾಗಿ ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು.

    ವರ್ಗಾವಣೆ ಆಗಿದ್ದೇಕೆ?: ಶರತ್ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಒಂದು ತಿಂಗಳಿನಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಯಾವುದೇ ಪ್ಲಾನ್ ಮಾಡಿಕೊಂಡಿರಲಿಲ್ಲ. ಸಾವಿನ ಸಂಖ್ಯೆ, ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಲು ಜಿಲ್ಲಾಧಿಕಾರಿ ಶರತ್ ಮುಂದಾಗಿರಲಿಲ್ಲ ಅನ್ನೋ ಆರೋಪಗಳು ಬಿ.ಶರತ್ ಅವರ ವಿರುದ್ಧ ಕೇಳಿ ಬಂದಿದ್ದವು. ಕೊರೊನಾ ಏರಿಕೆ ನಡುವೆ ಅತಿ ಸರಳ ದಸರಾ ಆಚರಣೆ ಸರ್ಕಾರಕ್ಕೆ ದೊಡ್ಡ ಸವಾಲು ಆಗಿತ್ತು. ದಸರಾ ಸಮೀಪಿಸಿದ್ದರೂ ಆಚರಣೆ ಯೋಜನೆಯನ್ನ ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆ ಶರತ್ ಅವರ ವರ್ಗಾವಣೆ ಆಗಿದೆ ಎನ್ನಲಾಗಿತ್ತು.

    ವರ್ಗಾವಣೆ ಬಳಿಕ ಶರತ್ ಅವರಿಗೆ ಕರೆ ಮಾಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ, ಬೇರೆ ಸೂಕ್ತ ಸ್ಥಳ ನೀಡುತ್ತೇವೆ. ಕಾನೂನು ತೊಡಕು ಮಾಡಿಕೊಳ್ಳಬೇಡಿ ಎಂದು ಹೇಳಿದ್ದರು ಎನ್ನಲಾಗಿದೆ. ಶರತ್ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನೇ ನೇಮಿಸಬೇಕೆಂದು ಸಿಎಂ ಮೇಲೆ ಒತ್ತಡ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.

  • ನಾಳೆ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ – ರೋಹಿಣಿ ಸಿಂಧೂರಿ ಆದೇಶ

    ನಾಳೆ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ – ರೋಹಿಣಿ ಸಿಂಧೂರಿ ಆದೇಶ

    ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥೋತ್ಸವ ಹಿನ್ನೆಲೆಯಲ್ಲಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧವನ್ನು ಹೇರಲಾಗಿದೆ.

    ಇಂದು ಸಂಜೆ 6 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸುವಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

    ಅಕ್ಟೋಬರ್ 29ರಂದು ನಡೆಯಲಿರುವ ಚಾಮುಂಡಿ ರಥೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ದಸರಾ ಉತ್ಸವಕ್ಕೆ ಗ್ರಾಮಸ್ಥರು ಮತ್ತು ಅಧಿಕಾರಿಗಳಿಗೆ ಮಾತ್ರ ಪ್ರವೇಶ ವಿನಾಯಿತಿ ಇರುತ್ತದೆ. ಜನಸಮೂಹವನ್ನು ಒಳಗೊಂಡಂತೆ ನಡೆಯುತ್ತಿದ್ದ ದಸರಾ ರಥೋತ್ಸವ ಈ ಬಾರಿ ಭಕ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅವಕಾಶವಿಲ್ಲ. ಸಾಂಪ್ರದಾಯಿಕವಾಗಿ ಸರಳವಾಗಿ ಉತ್ಸವ ನಡೆಯಲಿದೆ.

    ಮೈಸೂರು ದಸರಾ ಪ್ರಮುಖ ಆಕರ್ಷಣೆ ಎಂದರೆ ಜಂಬೂ ಸವಾರಿ. ದೇಶ ಮಾತ್ರವಲ್ಲ, ವಿದೇಶಗಳಲ್ಲೂ ಕಣ್ಮನ ಸೆಳೆಯುತ್ತದೆ. ಜಂಬೂ ಸವಾರಿ ಇದೇ ಮೊದಲ ಬಾರಿಗೆ ಇಷ್ಟೊಂದು ಸರಳವಾಗಿ ನಡೆದಿದೆ. ಕೊರೊನಾದಿಂದ ಈ ಬಾರಿ ಮೈಸೂರು ದಸರಾ ಉತ್ಸವ ಸರಳವಾಗಿ ನಡೆದಿದೆ. ದಸರಾ ಹಬ್ಬ ಯಶಸ್ವಿಯಾಗಿ ನಡೆಯಲೆಂದು ರೋಹಿಣಿ ಸಿಂಧೂರಿ ಹರಕೆ ಹೊತ್ತಿದ್ದರು. ಈ ಹಿನ್ನೆಲೆಯಲ್ಲಿ ನವರಾತ್ರಿ ಒಂಬತ್ತನೇ ದಿನ ತಾವೇ ಸ್ವತಃ ರಥ ಎಳೆಯುವ ಮೂಲಕ ಹರಕೆ ತೀರಿಸಿದ್ದರು.

  • ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

    ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ

    -ಒಂದೇ ತಿಂಗಳಲ್ಲಿ ಡಿಸಿ ಶರತ್ ವರ್ಗಾವಣೆ

    ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಅವರನ್ನ ಒಂದೇ ತಿಂಗಳಲ್ಲಿ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ. ಶರತ್ ಜಾಗಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ವರ್ಗಾವಣೆ ಯಾಕೆ?: ಒಂದು ತಿಂಗಳ ಹಿಂದೆ ಶರತ್ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದ್ರೆ ಕಳೆದ ಒಂದು ತಿಂಗಳಿನಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಯಾವುದೇ ಪ್ಲಾನ್ ಮಾಡಿಕೊಂಡಿರಲಿಲ್ಲ. ಸಾವಿನ ಸಂಖ್ಯೆ, ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಲು ಜಿಲ್ಲಾಧಿಕಾರಿ ಶರತ್ ಮುಂದಾಗಿರಲಿಲ್ಲ. ಕೊರೊನಾ ಏರಿಕೆ ನಡುವೆ ಅತಿ ಸರಳ ದಸರಾ ಆಚರಣೆ ಸರ್ಕಾರಕ್ಕೆ ದೊಡ್ಡ ಸವಾಲು ಆಗಿದೆ. ಆದ್ರೆ ಇದುವರೆಗೂ ಜಿಲ್ಲಾಧಿಕಾರಿ ದಸರಾ ಆಚರಣೆ ಯೋಜನೆಯನ್ನ ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆ ಶರತ್ ಅವರ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ.

    ಇತ್ತ ಶರತ್ ಅವರಿಗೆ ಕರೆ ಮಾಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಬೇರೆ ಸೂಕ್ತ ಸ್ಥಳ ನೀಡುತ್ತೇವೆ. ಕಾನೂನು ತೊಡಕು ಮಾಡಿಕೊಳ್ಳಬೇಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಶರತ್ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನೇ ನೇಮಿಸಬೇಕೆಂದು ಸಿಎಂ ಮೇಲೆ ಒತ್ತಡ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.