Tag: ಮೈಸೂರು ನಗರ ಪೊಲೀಸ್‌

  • ಮೈಸೂರಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ & ಮರ್ಡರ್; ಆರೋಪಿ ಗುರುತು ಪತ್ತೆ

    ಮೈಸೂರಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ & ಮರ್ಡರ್; ಆರೋಪಿ ಗುರುತು ಪತ್ತೆ

    ಮೈಸೂರು: ನಗರದಲ್ಲಿ 10 ವರ್ಷದ ಬಾಲಕಿ ಮೇಲೆ ರೇಪ್ ಅಂಡ್ ಮರ್ಡರ್ (Rape And Murder) ಆಗಿದೆ. ವಿರೂಪಗೊಂಡ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಬಿದ್ದಿದ್ದ ಹಿನ್ನೆಲೆ ಇದು ರೇಪ್ ಅಂಡ್ ಮರ್ಡರ್ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ದಸರಾ (Dasara) ವೇಳೆ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬಗಳು ಬಂದಿವೆ. ಬುಧವಾರ ತಡರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಅಪ್ರಾಪ್ತೆಯ ಹತ್ಯೆಯಾಗಿದೆ. ಇದನ್ನೂ ಓದಿ: ವಿಜಯಪುರ | SBI ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಗಳು ಅರೆಸ್ಟ್‌

    ಕೇವಲ ಎರಡೇ ದಿನಗಳ ಅಂತರದಲ್ಲಿ ಒಂದೇ ಜಾಗದಲ್ಲಿ ಎರಡು ಮರ್ಡರ್ ಆದಂತಾಗಿದೆ. ಎರಡು ದಿನಗಳ ಹಿಂದೆ ಇದೇ ಜಾಗದಲ್ಲಿ ರೌಡಿ ಶೀಟರ್‌ನ ಸಹರ್ವತಿಯ ಬರ್ಬರ ಹತ್ಯೆ ಆಗಿತ್ತು. ಅದೇ ಜಾಗದಲ್ಲಿ ನೆನ್ನೆ ರಾತ್ರಿ ಅಪ್ರಾಪ್ತ ಬಾಲಕಿ ಮರ್ಡರ್ ಆಗಿದೆ. ಸದ್ಯ ವಿಚಾರಣೆಗಾಗಿ ವ್ಯಾಪಾರಕ್ಕೆ ಆಗಮಿಸಿದ್ದ 50 ಹಕ್ಕಿಪಿಕ್ಕಿ ಕುಟುಂಬಸ್ಥರನ್ನ ಪೊಲೀಸರು ಕರೆದೊಯ್ದಿದ್ದಾರೆ. ನಜರಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಕೊಲೆ ಆರೋಪಿ ಗುರುತು ಪತ್ತೆ
    ಘಟನೆ ತಿಳಿಯುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ನಜರಬಾದ್‌ ಠಾಣಾ ಪೊಲೀಸರು ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ. ರೆಡ್‌ ಶರ್ಟ್‌, ಜೀನ್ಸ್‌ ಪ್ಯಾಂಡ್‌ ಧರಸಿದ್ದ ಕೊಲೆ ಆರೋಪಿಯ ಫೋಟೋ ಸಿಸಿಟಿವಿಯಲ್ಲಿ ಲಭ್ಯವಾಗಿದೆ. ಕೃತ್ಯ ಎಸಗುವ ವೇಳೆ ಆರೋಪಿ ಕಾಲಿಗೆ ಚಪ್ಪಲಿ ಕೂಡ ಧರಿಸಿರಲಿಲ್ಲ ಎಂಬುದೂ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಗೊತ್ತಾಗಿದೆ. ಇದನ್ನೂ ಓದಿ: ದಾವಣಗೆರೆ | ರಾಮಜ್ಯೋತಿ ರಥಯಾತ್ರೆ ದುರಂತಕ್ಕೆ 35 ವರ್ಷ – ಫೈರಿಂಗ್‌ನಲ್ಲಿ ಮೃತಪಟ್ಟವರ ಬ್ಯಾನರ್‌ ತೆರವಿಗೆ ಭಾರೀ ವಿರೋಧ

    ಫೋಟೋ ಲಭ್ಯವಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯ ಹಿನ್ನೆಲೆಯನ್ನು ಪತ್ತೆಹಚ್ಚಿದ್ದಾರೆ. ಆರೋಪಿಯನ್ನ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಎಂದು ಗುರುತಿಸಲಾಗಿದೆ. 2 ವರ್ಷ ಜೈಲು ವಾಸ ಅನುಭವಿಸಿದ್ದ ಕಾರ್ತಿಕ್‌ 4 ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಊರು ಸೇರದೇ ಎಲ್ಲೆಂದರಲ್ಲಿ ಕುಡಿದು ಅಲೆಯುತ್ತಿದ್ದ ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

  • ಮೈಸೂರಲ್ಲಿ ಸಿಕ್ಕ ಮಾದಕ ವಸ್ತುಗೆ ಮಹಾರಾಷ್ಟ್ರ ನಂಟು – MDMA ತಯಾರಿಕೆಗೆ ಸೇಫ್‌ ಜೋನ್‌ ಆಗ್ತಿದಿಯಾ ನಗರ?

    ಮೈಸೂರಲ್ಲಿ ಸಿಕ್ಕ ಮಾದಕ ವಸ್ತುಗೆ ಮಹಾರಾಷ್ಟ್ರ ನಂಟು – MDMA ತಯಾರಿಕೆಗೆ ಸೇಫ್‌ ಜೋನ್‌ ಆಗ್ತಿದಿಯಾ ನಗರ?

    ಮೈಸೂರು: ಡ್ರಗ್ಸ್ (Drugs) ಮಾಫಿಯಾದ ಕೇಂದ್ರ ಸ್ಥಾನ ಆಗ್ತಿದ್ದೆಯಾ ಮೈಸೂರು ಎಂಬ ಪ್ರಶ್ನೆಯೊಂದು ಈಗ ಎದ್ದಿದೆ. ಕಾರಣ ಮೈಸೂರಲ್ಲಿ ಶನಿವಾರ (ಜು.26) ರಾತ್ರಿ ಭಾರೀ ಪ್ರಮಾಣದ ಎಂಡಿಎಂಎ ಯನ್ನು ಪೊಲೀಸರು (Mysuru Police) ವಶಕ್ಕೆ ಪಡೆದಿದ್ದಾರೆ.

    ಮಹಾರಾಷ್ಟ್ರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಮೈಸೂರು (Mysuru) ಹೊರವಲಯದ ರಿಂಗ್ ರಸ್ತೆ ಬಳಿಯಲ್ಲಿ ಮಾದಕ ಪದಾರ್ಥಗಳ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಭಾರೀ ಪ್ರಮಾಣದ ಎಂಡಿಎಂಎ (MDMA) ವಶಕ್ಕೆ ಪಡೆದಿದ್ದಾರೆ. 50 ಕೆಜಿಗೂ ಹೆಚ್ಚು ಪ್ರಮಾಣದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಇದು ಈಗ ಮೈಸೂರನ್ನೇ ಬೆಚ್ಚಿ ಬೀಳಿಸಿದೆ. ಇದನ್ನೂ ಓದಿ: ಮೆಜೆಸ್ಟಿಕ್ ರೈಲ್ವೆ ಸ್ಟೇಷನ್‌ನಲ್ಲಿ ಟಿಕೆಟ್ ದಂಧೆ – ಹಣ ಕೊಟ್ರೆ ವೇಟಿಂಗ್ ಲಿಸ್ಟ್ ಇದ್ರೂ ಕನ್ಫರ್ಮ್ ಆಗುತ್ತೆ!

    ಈ ದಾಳಿಯ ಮೂಲಕ ಮೈಸೂರು ಸೀರಿಯಸ್ ಟ್ರಬಲ್‌ನಲ್ಲಿ ಇದೆಯಾ ಅನ್ನಿಸಿದೆ. ಮಹಾರಾಷ್ಟ್ರದಲ್ಲಿ ಸೆರೆಯಾದ ಡ್ರಗ್ ಪೆಡ್ಲರ್ ನೀಡಿದ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು ಮೈಸೂರು ಪೊಲೀಸರ ಸಹಕಾರದಿಂದ ಈ ಕಾರ್ಯಾಚರಣೆ ಮಾಡಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ತಯಾರಿಸಿ ಮಹಾರಾಷ್ಟ್ರ ಸೇರಿ ದೇಶದ ವಿವಿಧ ಭಾಗಗಳು, ವಿದೇಶಗಳಿಗೆ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ರಿಲೀಸ್ – ಮುಳುಗಡೆ ಭೀತಿಯಲ್ಲಿ ಹಂಪಿ ಸ್ಮಾರಕಗಳು

    15 ದಿನಗಳ ಹಿಂದಷ್ಟೇ ಡ್ರಗ್ಸ್ ತಯಾರಿಕಾ ಘಟಕ ಮೈಸೂರಲ್ಲಿ ಶುರುವಾಗಿದೆ. ಮುಂದೆ ಕಾರ್ ಗ್ಯಾರೇಜ್ ಮಾಡಿಕೊಂಡು ಅದರ ಹಿಂದೆ ಡ್ರಗ್ಸ್ ತಯಾರಿಕಾ ಘಟಕ ನಿರ್ಮಿಸಿ ಕೊಳ್ಳಲಾಗಿತ್ತು. ಮೂರು ದೊಡ್ಡ ಕಂಟೇನರ್ ಇಟ್ಟು ದ್ರವದ ಆವಿಯಿಂದ ಡ್ರಗ್ ತಯಾರಿಕೆ ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. 15 ದಿನದಲ್ಲಿ 13 ಕೆಜಿ ಡ್ರಗ್ಸ್ ತಯಾರಿಸಲಾಗಿತ್ತು. 50 ಕೆಜಿ ಡ್ರಗ್ಸ್ ತಯಾರಿಕೆ ಪ್ರಕ್ರಿಯ ಅಂತಿಮ ಹಂತದಲ್ಲಿತ್ತು. ಇದನ್ನು ಈಗ ಪೊಲೀಸರು ಸ್ಹೀಜ್ ಮಾಡಿದ್ದಾರೆ.

    ಅಲ್ಲಿಗೆ ಮೈಸೂರು ನಿಧಾನವಾಗಿ ಡ್ರಗ್ಸ್ ಮಾಫಿಯಾದ ಕೇಂದ್ರ ಸ್ಥಾನವಾಗಿ ಬದಲಾಗುವ ಲಕ್ಷಣ ಕಂಡಿದ್ದು ಇದು ಇಡೀ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಹರಿದ್ವಾರ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ – 6 ಭಕ್ತರು ಸಾವು

  • ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ಇಬ್ಬರು ಮಹಿಳೆಯರು ಸೇರಿ 6 ಜನ ವಶಕ್ಕೆ

    ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ಇಬ್ಬರು ಮಹಿಳೆಯರು ಸೇರಿ 6 ಜನ ವಶಕ್ಕೆ

    – 30 ದಿನಗಳಿಗೊಮ್ಮೆ ಮನೆ ಬದಲಿಸಿ ವೇಶ್ಯಾವಾಟಿಕೆ

    ಮೈಸೂರು: ವೇಶ್ಯಾವಾಟಿಕೆ (Prostitution) ನಡೆಯುತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ 6 ಜನ ಪುರುಷರು, ಇಬ್ಬರು ಮಹಿಳೆಯರನ್ನ ವಶಕ್ಕೆ ಪಡೆದಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.

    ಮೈಸೂರು ತಾಲೂಕಿನ ದಾಸನಕೊಪ್ಪಲು ಗ್ರಾಮದ ಮನೆಯಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಈ ವೇಳೆ 6 ಜನ ಪುರುಷರು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ. ಮತ್ತೊಬ್ಬ ಮುಖ್ಯ ಆರೋಪಿ ಮಂಜು ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕಾಂತಾರ ಚಾಪ್ಟರ್‌-1 ಪೋಸ್ಟರ್‌ ವಿಶೇಷತೆ ಏನು? – ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಬಿಗ್‌ ಅಪ್ಡೇಟ್‌

    ಬಂಧಿತರು ಇಬ್ಬರು ಹೆಣ್ಣು ಮಕ್ಕಳನ್ನು ಕರೆದಂದು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳು 30 ದಿನಗಳಿಗೆ ಒಮ್ಮೆ ಮನೆ ಬದಲಾಯಿಸಿ ವೇಶ್ಯಾವಾಟಿಗೆ ದಂಧೆ ನಡೆಸುತ್ತಿದ್ದರು. ಬೇರೆ ಬೇರೆ ಕಡೆಗಳಿಂದ ಯುವತಿಯರಿಗೆ ಹಣ ಕೊಟ್ಟು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಇದನ್ನೂ ಓದಿ: ರೀಲ್ಸ್ ಹುಚ್ಚು ಹೃದಯಕ್ಕೆ ತರ್ತಿದ್ಯಾ ಕುತ್ತು? – ಮೊಬೈಲ್ ವಿಕಿರಣದಿಂದಲೂ ಹೃದಯಕ್ಕೆ ಘಾಸಿ ಆಗ್ತಿದ್ಯಾ?

    ಪೊಲೀಸರು ಖಚಿತ ಮಾಹಿತಿ ತಿಳಿದು ದಾಳಿ ಮಾಡಿದ ವೇಳೆ ರೆಡ್ ಹ್ಯಾಂಡ್ ಆಗಿ ಇಬ್ಬರು ಯುವತಿಯರು 6 ಪುರುಷರು ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: 100 ವರ್ಷಗಳಲ್ಲಿ ಇದೇ ಮೊದಲು – ಟೆಕ್ಸಾಸ್‌ನಲ್ಲಿ ಭೀಕರ ಪ್ರವಾಹಕ್ಕೆ 78 ಮಂದಿ ಬಲಿ, 41 ಜನ ಮಿಸ್ಸಿಂಗ್‌

  • ಸ್ನೇಹಮಹಿ ಕೃಷ್ಣ ಹೆಸರಲ್ಲಿ ಹಲವರ ಮೇಲೆ ಅನಾಮಧೇಯರಿಂದ ದೂರು

    ಸ್ನೇಹಮಹಿ ಕೃಷ್ಣ ಹೆಸರಲ್ಲಿ ಹಲವರ ಮೇಲೆ ಅನಾಮಧೇಯರಿಂದ ದೂರು

    ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣನ (Snehamayi krishna) ಹೆಸರಿಗೆ ಈಗ ಸೂಪರ್ ಪವರ್ ಬಂದಿದೆ. ಸ್ನೇಹಮಯಿ ಹೆಸರನ್ನು ಹೇಳಿಕೊಂಡು ಪೊಲೀಸರಿಗೆ ಅನಾಮಧೇಯ ಪತ್ರಗಳು ಹೋಗುತ್ತಿವೆ ಅನ್ನೋ ಆರೋಪ ಕೇಳಿಬಂದಿದೆ.

    ಮೈಸೂರಿನ ಜಯಪುರ ಪೊಲೀಸ್ ಠಾಣೆಗೆ (Mysuru Jayapura Police) ಗಿರೀಶ್ ಎಂಬುವವರ ವಿರುದ್ಧ ದೂರು ಹೋಗಿದೆ. ಅಸಲಿಗೆ ಗಿರೀಶ್ ಯಾರು ಎಂಬುದೇ ಸ್ನೇಹಮಹಿ ಕೃಷ್ಣಗೆ ಗೊತ್ತಿಲ್ಲ. ವಿಚಾರಣೆ ಹೋದಾಗಲೇ ತಮ್ಮ ಹೆಸರು ದುರ್ಬಳಕೆಯಾಗಿರುವುದು ಸ್ನೇಹಮಹಿ ಕೃಷ್ಣಗೆ ಗೊತ್ತಾಗಿದೆ. ಈ ಬಗ್ಗೆ ʻಪಬ್ಲಿಕ್ ಟಿವಿʼಗೆ ಹೇಳಿಕೆ ನೀಡಿದ ಸ್ನೇಹಮಯಿ ಕೃಷ್ಣ, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಪ್ರಶಿಕ್ಷಣಾರ್ಥಿಯ ಬಳಿ ಹಣ ಕೇಳಿದ ಬಗ್ಗೆ ದೂರು ಹೋಗಿದೆ. ಇದನ್ನೂ ಓದಿ: ವೈಕುಂಠ ಏಕಾದಶಿ ಪುರಾಣ ಕಥೆ ಏನು? ಯಾಕೆ ಆಚರಣೆ ಮಾಡುತ್ತಾರೆ?

    ಸಂಚಾರಿ ಪೊಲೀಸರು ವಾಹನಗಳನ್ನ ತಪಾಸಣೆ ಮಾಡುವಾಗ ಸಿಕ್ಕಿ ಬಿದ್ದರೆ ನನ್ನ ಹೆಸರು ಹೇಳಿ ಶುಲ್ಕ ಕಟ್ಟದೇ ಹೋಗುತ್ತಿದ್ದಾರೆ. ಮೈಸೂರಿನ ಅರ್ಜುನ್‌ ಗೂರುಜಿ ವಿರುದ್ಧವು ದೂರು ಹೋಗಿದೆ. ನನ್ನ ಹೆಸರನ್ನ ಯಾಕೆ ಬಳಸಿಕೊಳ್ಳುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಅವರ ವೈಯಕ್ತಿಕ ವಿಚಾರಕ್ಕೆ ನನಗೆ ಕೆಟ್ಟ ಹೆಸರು ತರುಲು ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೆ ಕ್ರಮ ತೆಗೆದುಕೊಳ್ಳುವುದು ಕಷ್ಟವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಹೋರಾಟ ಮಾಡುತ್ತಿರುವ ಸ್ನೇಹಮಯಿ ಹೆಸರು ಬಳಸಿಕೊಂಡರೆ ನಮ್ಮ ಕೆಲಸ ಆಗುತ್ತದೆ ಎಂದು ಜನ ತಿಳಿದುಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.

    ಒಳ್ಳೆತನಕ್ಕೆ ನನ್ನ ಹೆಸರು ಬಳಸಿಕೊಂಡು ಅದರಿಂದ ಸಮಾಜಕ್ಕೆ ಒಳ್ಳೆಯದಾದರೆ ತೊಂದರೆ ಇಲ್ಲ. ನಿಮ್ಮ ಬಳಿ ದಾಖಲೆಗಳಿದ್ರೆ ನನಗೆ ಕೊಡಿ ನಿಮ್ಮ ಪರ ನಾನು ಹೋರಾಟ ಮಾಡುತ್ತೇನೆ. ಆದ್ರೆ ನನ್ನ ಹೆಸರು ದುರ್ಬಳಕೆಯಾದರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ʻಪಬ್ಲಿಕ್ ಟಿವಿʼ ಮೂಲಕ ಸ್ನೇಹಮಯಿ ಕೃಷ್ಣ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಉಡುಪಿ| ಮರದ ದಿಮ್ಮಿಗೆ ಡಿಕ್ಕಿಯಾಗಿ ಮಲ್ಪೆಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ