Tag: ಮೈಸೂರು ಬೆಂಗಳೂರು ದಶಪಥ ರಸ್ತೆ

  • ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ; ಕಾರು, ಟಿಪ್ಪರ್‌ ಡಿಕ್ಕಿ

    ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ; ಕಾರು, ಟಿಪ್ಪರ್‌ ಡಿಕ್ಕಿ

    ರಾಮನಗರ: ಮೈಸೂರು – ಬೆಂಗಳೂರು ದಶಪಥ ರಸ್ತೆಯಲ್ಲಿ (Bengaluru Mysuru Expressway) ಕಾರು (Car) ಹಾಗೂ ಟಿಪ್ಪರ್​ ನಡುವೆ ಅಪಘಾತ (Accident) ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿದೆ.

    ರಾಮನಗರ (Ramanagara) ಬೈಪಾಸ್​​ನ ಸಂಘಬಸವನದೊಡ್ಡಿ ಬಳಿ ದಶಪಥ ಹೆದ್ದಾರಿ ಮೇಲ್ಸೇತುವೆವೊಂದರಲ್ಲಿ ಶುಕ್ರವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕಾರು, ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಗೆಯೇ ಟಿಪ್ಪರ್‌ ಮೇಲ್ಸೇತುವೆಗೆ ಒರಗಿ ನಿಂತಿದೆ. ಇದನ್ನೂ ಓದಿ: ನಾನು ಪೂಜಾರಿ ಅಷ್ಟೇ, ಜನ ಹೇಳಿದ್ದು ದೇವರಿಗೆ ತಲುಪಿಸುತ್ತೇನೆ: ಡಿಕೆಶಿ

    ಸೇತುವೆ ಕೆಳಭಾಗದಲ್ಲಿ ಎಕ್ಸ್‌ಪ್ರೆಸ್‌ ಹೈವೇ ಇರುವುದರಿಂದ ಹೆಚ್ಚಿನ ವಾಹನ ಸಂಚಾರಿಸುತ್ತಿತ್ತು. ಏನಾದರು ಟಿಪ್ಪರ್ ಸೇತುವೆಯಿಂದ ಕೆಳಗೆ ಉರುಳಿದ್ದರೆ ಹೆಚ್ಚಿನ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಅದೃಷ್ಟಾವಷತ್ ಭಾರಿ ಅನಾಹುತ ತಪ್ಪಿದಂತಾಗಿದೆ. ಕಳೆದ 8‌ ತಿಂಗಳಲ್ಲಿ ರಾಮನಗರ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಅಪಾಘತಗಳು ಸಂಭವಿಸಿ 40ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇದನ್ನೂ ಓದಿ: 25 ವರ್ಷಗಳಿಂದ ಸೋಲಿಲ್ಲದ ಸರದಾರ – ಕರಾವಳಿಯ ವಾಜಪೇಯಿ ಶ್ರೀನಿವಾಸ ಶೆಟ್ಟಿ

  • ದಶಪಥ ರಸ್ತೆ ಕಾಮಗಾರಿಗೆ ಟ್ವೀಟ್ ಮೂಲಕ ಮೋದಿ ಮೆಚ್ಚುಗೆ

    ದಶಪಥ ರಸ್ತೆ ಕಾಮಗಾರಿಗೆ ಟ್ವೀಟ್ ಮೂಲಕ ಮೋದಿ ಮೆಚ್ಚುಗೆ

    ಬೆಂಗಳೂರು: ಚುನಾವಣೆ ಸಮೀಪ ಬಿಜೆಪಿಯಿಂದ ಕರ್ನಾಟಕ (Karnataka) ಅಭಿವೃದ್ಧಿ ಮಂತ್ರ ಪಠಿಸಲಾಗುತ್ತಿದೆ. ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಗೆ ಮೋದಿ (Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿಎಂ ಬೊಮ್ಮಾಯಿ (Basavaraj Bommai) ಪೋಸ್ಟ್ ಮಾಡಿದ್ದ ಟ್ವೀಟ್ ರೀ ಟ್ವೀಟ್ ಮಾಡಿ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಶನಿವಾರ) ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಹಾಗೂ ಮೈಸೂರು – ಬೆಂಗಳೂರು ದಶಪಥ ರಸ್ತೆಯ ವೀಡಿಯೋಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಮೆಚ್ಚಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF

    ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ ಎಂದಿರುವ ಸಿಎಂ ಅವರ ಟ್ವೀಟ್‌ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡುತ್ತಾ, ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಸಂಸದನ ಪುತ್ರ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಂದಿನ ತಿಂಗಳು ಪ್ರಧಾನಿ, ರಾಷ್ಟ್ರಪತಿಗಳಿಂದ ದಶಪಥ ರಸ್ತೆ ಲೋಕಾರ್ಪಣೆ

    ಮುಂದಿನ ತಿಂಗಳು ಪ್ರಧಾನಿ, ರಾಷ್ಟ್ರಪತಿಗಳಿಂದ ದಶಪಥ ರಸ್ತೆ ಲೋಕಾರ್ಪಣೆ

    ಬೆಂಗಳೂರು: ಮುಂದಿನ ಫೆಬ್ರವರಿ ತಿಂಗಳಿನಿಂದಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಬಹುನಿರೀಕ್ಷಿತ ಬೆಂಗಳೂರು – ಮೈಸೂರು ದಶಪಥ ರಸ್ತೆ (Bengaluru Mysuru Expressway) ಲೋಕಾರ್ಪಣೆಗೊಳ್ಳಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಮಹತ್ವದ ಘೋಷಣೆ ಮಾಡಿದ್ದಾರೆ.

    ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿಗಳು ದಶಪಥ ರಸ್ತೆ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ರೂಪುರೇಷೆಗೆ ದಿನಾಂಕ ನಿಗದಿ ಮಾಡುತ್ತೇವೆ. ಇನ್ಮುಂದೆ ಬೆಂಗಳೂರು-ಮೈಸೂರು ನಡುವಿನ ಪ್ರಯಾಣ 1:10 ಗಂಟೆಗೆ ಇಳಿಯಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಹಾದಲ್ಲಿ ಸಕ್ಕರೆ ಹಾಕಿಲ್ಲ ಎಂದು ಹೋಟೆಲ್ ಮಾಲೀಕನಿಗೆ ಚಾಕು ಇರಿದ

    ಮುಂದುವರಿದು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru Chennai Expressway) ಕಾರಿಡಾರ್ ಬಗ್ಗೆ ಗಡ್ಕರಿ ಮಾಹಿತಿ ನೀಡಿದ್ದಾರೆ. 17 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಚೆನ್ನೈ ಹೆದ್ದಾರಿ ನಿರ್ಮಾಣ ಆಗಲಿದೆ. ಇವತ್ತು ಕಾಮಗಾರಿಯ ಪರಿವೀಕ್ಷಣೆ ನಡೆಸಿದ್ದೇನೆ. ಮೂರು ಹಂತಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಯಲಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಆಂಧ್ರ-ತಮಿಳುನಾಡು ನಡುವೆ ಎಕ್ಸ್ಪ್ರೆಸ್ ವೇ ನಿರ್ಮಾಣ ಆಗಲಿದೆ. ಕರ್ನಾಟಕದಲ್ಲಿ 5,069 ಕೋಟಿ ವೆಚ್ಚದಲ್ಲಿ ಮೂರು ಹಂತಗಳಲ್ಲಿ 71 ಕಿಮೀ ಕಾಮಗಾರಿ ನಡೆಯಲಿದೆ. ಈಗಾಗಲೇ ಶೇ.32 ರಿಂದ ಶೇ.36 ರಷ್ಟು ಕಾಮಗಾರಿ ಮುಗಿದಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತ- ಜ. 9ಕ್ಕೆ ಅಧಿಕೃತ ಘೋಷಣೆ?

    ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರು-ಚೆನ್ನೈ ನಡುವೆ 2.15 ಗಂಟೆಯಲ್ಲಿ ಪ್ರಯಾಣಿಸಬಹುದು. ಗಂಟೆಗೆ 120 ಕಿ.ಮೀ ವೇಗದಲ್ಲಿ ಸಂಚಾರ ಮಾಡಬಹುದು. ಎಕ್ಸ್ಪ್ರೆಸ್‌ವೇ ಪೂರ್ಣಗೊಂಡರೆ 38 ಕಿ.ಮೀ ಕಡಿತವಾಗಲಿದೆ. ಸದ್ಯ ಬೆಂ-ಚೆನ್ನೆöÊ ಮಧ್ಯೆ ಪ್ರಯಾಣಿಸಲು 5 ಗಂಟೆ ಸಮಯ ಆಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k