Tag: ಮೈಸೂರು ರಸ್ತೆ

  • ಮುಜರಾಯಿಂದ ಬಿಗ್‌ಶಾಕ್ – 40 ವರ್ಷಗಳಿಂದ ಬೆಂಗ್ಳೂರಲ್ಲಿದ್ದ 10ಕ್ಕೂ ಹೆಚ್ಚು ಅಂಗಡಿಗಳು ಜಪ್ತಿ

    ಮುಜರಾಯಿಂದ ಬಿಗ್‌ಶಾಕ್ – 40 ವರ್ಷಗಳಿಂದ ಬೆಂಗ್ಳೂರಲ್ಲಿದ್ದ 10ಕ್ಕೂ ಹೆಚ್ಚು ಅಂಗಡಿಗಳು ಜಪ್ತಿ

    ವಾಸಕ್ಕೆ ಯೋಗ್ಯವಿಲ್ಲ ಎಂದು ಇಲಾಖೆ ಸ್ಪಷ್ಟನೆ

    ಬೆಂಗಳೂರು: ಮುಜರಾಯಿ ಇಲಾಖೆ (Muzrai Department) ಬಿಗ್ ಆಪರೇಷನ್‌ವೊಂದನ್ನು ಶುರುಮಾಡಿದ್ದು, 40 ವರ್ಷಗಳಿಂದ ಬೆಂಗಳೂರಿನಲ್ಲಿದ್ದ 10ಕ್ಕೂ ಹೆಚ್ಚು ಅಂಗಡಿಗಳನ್ನು ಜಪ್ತಿ ಮಾಡಿದೆ.

    ಮುಜರಾಯಿಯ ಅಡಿಯಲ್ಲಿ ಬರುವ ದೇವಸ್ಥಾನದ ಜಾಗದಲ್ಲಿರುವ ಅನಧಿಕೃತ ಅಂಗಡಿ, ಮೆಡಿಕಲ್ ಶಾಪ್‌ಗಳಿಗೆ ಇಲಾಖೆ ಬಿಗ್‌ಶಾಕ್ ನೀಡಿದೆ.ಇದನ್ನೂ ಓದಿ: ಸೆಕ್ಸ್‌ ವರ್ಕರ್ಸ್‌ ಮೇಲೆ ಹಲ್ಲೆ ನಡೆಸಿ ದರೋಡೆ: ಸಿಂಗಾಪುರದಲ್ಲಿ ಇಬ್ಬರು ಭಾರತೀಯರಿಗೆ ಜೈಲು ಶಿಕ್ಷೆ

    ಇದೀಗ ಮೈಸೂರು ರಸ್ತೆಯ (Mysuru Road) ಕರೆಕಲ್ಲು ಆಂಜನೇಯ ದೇವಾಲಯದ ಜಾಗದಲ್ಲಿ 40 ವರ್ಷಗಳಿಂದ ಅನಧಿಕೃತವಾಗಿದ್ದ ಕೆಲವು ಅಂಗಡಿಗಳಿಗೆ ಬೀಗ ಹಾಕಿ, ಜಪ್ತಿ ಮಾಡಿದ್ದು, ವಾಸಕ್ಕೆ ಯೋಗ್ಯವಿಲ್ಲ ಎಂದು ಸ್ಪಷ್ಟನೆ ನೀಡಿದೆ.

  • ಕಂಠಪೂರ್ತಿ ಕುಡಿದು ಮಾರಣಾಂತಿಕ ಹಲ್ಲೆ – ಹಲ್ಲೆಗೊಳಗಾದ ವ್ಯಕ್ತಿ ದೂರು ನೀಡ್ತಿದ್ದಂತೆ ನೇಣಿಗೆ ಶರಣಾದ ಆರೋಪಿ

    ಕಂಠಪೂರ್ತಿ ಕುಡಿದು ಮಾರಣಾಂತಿಕ ಹಲ್ಲೆ – ಹಲ್ಲೆಗೊಳಗಾದ ವ್ಯಕ್ತಿ ದೂರು ನೀಡ್ತಿದ್ದಂತೆ ನೇಣಿಗೆ ಶರಣಾದ ಆರೋಪಿ

    ಬೆಂಗಳೂರು: ಕಂಠಪೂರ್ತಿ ಕುಡಿದು ಮಾರಣಾಂತಿಕ ಹಲ್ಲೆ ನಡೆಸಿದ್ದವನ ವಿರುದ್ಧ ಹಲ್ಲೆಗೊಳಗಾದ ವ್ಯಕ್ತಿ ದೂರು ನೀಡುತ್ತಿದ್ದಂತೆ ಆರೋಪಿ ನೇಣಿಗೆ ಶರಣಾಗಿರುವ ಘಟನೆ ನಗರದ ಮೈಸೂರು ರಸ್ತೆಯ (Mysuru Road) ಕಸ್ತೂರಿ ಬಾ ನಗರದಲ್ಲಿ ನಡೆದಿದೆ.

    ಮೃತ ಆರೋಪಿಯನ್ನು ದಿವ್ಯ ತೇಜ್ ಹಾಗೂ ಹಲ್ಲೆಗೊಳಗಾದ ವ್ಯಕ್ತಿಯನ್ನು ರಿಷಿ ತೇಜ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ದಾವಣಗೆರೆ | ವೃದ್ಧ ದಂಪತಿಯ ಕೈಕಾಲು ಕಟ್ಟಿ 8 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಗ್ಯಾಂಗ್

    ಘಟನೆ ನಡೆದ ದಿನ ರಿಷಿ ಕಡೆಯಿಂದ ದಿವ್ಯ ಬಿಯರ್ ಬಾಟಲಿಗಳನ್ನು ತರಿಸಿದ್ದ. ಬಳಿಕ ತಡರಾತ್ರಿವರೆಗೆ ಇಬ್ಬರು ಸೇರಿಕೊಂಡು ಕಂಠಪೂರ್ತಿ ಕುಡಿದಿದ್ದರು. ಈ ವೇಳೆ ಕುಡಿದ ನಶೆಯಲ್ಲಿದ್ದ ದಿವ್ಯ ಏಕಾಏಕಿ ಬಿಯರ್ ಬಾಟಲಿಯಿಂದ ರಿಷಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ರಿಷಿಗೆ ದಿವ್ಯ ಹೊಸ ಬಟ್ಟೆ ತಂದುಕೊಟ್ಟಿದ್ದ. ಬಳಿಕ ರಿಷಿ ಹೊಸ ಬಟ್ಟೆ ಧರಿಸಿಕೊಂಡು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ.

    ದೂರು ದಾಖಲಾಗುತ್ತಿದ್ದಂತೆ ಹೆದರಿಕೊಂಡ ದಿವ್ಯ ಹಲ್ಲೆ ನಡೆದ ಮನೆಗೆ ಮರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಿಷಿ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸರು ಮನೆ ಪರಿಶೀಲನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

    ಸದ್ಯ ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ (Byatarayanapura Police Station) ದೂರು ದಾಖಲಾಗಿದೆ.ಇದನ್ನೂ ಓದಿ: ಚಂದ್ರಗ್ರಹಣ ಕಣ್ತುಂಬ ನೋಡಿ ಸಂಭ್ರಮಿಸಿ: ಭೌತವಿಜ್ಞಾನಿ ಎ.ಪಿ.ಭಟ್‌

  • ಪೋಷಕರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ – ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ ವಿದ್ಯಾರ್ಥಿನಿ ಸಾವು

    ಪೋಷಕರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ – ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ ವಿದ್ಯಾರ್ಥಿನಿ ಸಾವು

    ಬೆಂಗಳೂರು: ಆಲೋವೆರಾ ಜ್ಯೂಸ್(Aloevera Juice) ಎಂದು ಬಾಲಕಿಯೊಬ್ಬಳು ಕ್ರಿಮಿನಾಶಕ ಸೇವಿಸಿದ್ದು, ಪೋಷಕರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ(Byatarayanapura) ನಡೆದಿದೆ.

    9ನೇ ತರಗತಿ ವಿದ್ಯಾರ್ಥಿನಿ ನಿಧಿ ಕೃಷ್ಣ(14) ಮೃತ ಬಾಲಕಿ. ಇದನ್ನೂ ಓದಿ: ಚಿಕ್ಕಮಗಳೂರು | ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ವ್ಯಕ್ತಿ ಆತ್ಮಹತ್ಯೆ

    ಬಾಲಕಿಯು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಆಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ ಆಲೋವೆರಾ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಔಷಧವನ್ನು ಮನೆಯವರು ತುಂಬಿಟ್ಟಿದ್ದರು. ಇದನ್ನೂ ಓದಿ: ಇನ್ಮುಂದೆ ಕೇವಲ 3 ದಿನಗಳಲ್ಲಿ ಪಿಎಫ್‌ ಹಣ ನಿಮ್ಮ ಖಾತೆಗೆ – ಎಟಿಎಂ ಮೂಲಕ ಪಿಎಫ್‌ ವಿತ್‌ಡ್ರಾ ಹೇಗೆ?

    ಮಾ. 18ರಂದು ಬಾಲಕಿ ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ್ದಳು. ಬಳಿಕ ಅನಾರೋಗ್ಯದ ಹಿನ್ನಲೆ ಆಕೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಾ. 31ರಂದು ಬಾಲಕ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಇಡೀ ‘ಇಂಡಿಯಾ ಒಕ್ಕೂಟ’ ವಕ್ಫ್‌ ಮಸೂದೆ ವಿರುದ್ಧ ಮತ ಚಲಾಯಿಸುತ್ತೆ: ಸಂಸದ ಪ್ರೇಮಚಂದ್ರನ್‌

    ಮೈಸೂರು ರಸ್ತೆ(Mysuru Road) ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಇಂದಿನಿಂದ 15 ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಇಂದಿನಿಂದ 15 ದಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

    ಬೆಂಗಳೂರು: ನಗರದ ನೇರಳೆ ಮಾರ್ಗದ (Purple Line) ಮೆಟ್ರೋ (Bengaluru Metro) ಸೇವೆಯಲ್ಲಿ ಇಂದಿನಿಂದ 15 ದಿನಗಳವರೆಗೆ ವ್ಯತ್ಯಯವಾಗಲಿದೆ. ಇಂದು ಕೆಂಗೇರಿ ಹಾಗೂ ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲುಗಳು ಸಂಚರಿಸುತ್ತಿಲ್ಲ.

    ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ, ಬೈಯಪ್ಪನಹಳ್ಳಿ ಹಾಗೂ ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವಿನ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಯಲಿರುವ ಕಾರಣ 15 ದಿನಗಳವರೆಗೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

    ಯಾವ ದಿನ, ಯಾವ ಸಮಯ ವ್ಯತ್ಯಯ?
    ಆಗಸ್ಟ್ 17:
    ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆ ಲಭ್ಯವಿರಲಿದೆ.

    ಆಗಸ್ಟ್ 23 ಮತ್ತು 24:
    ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಈ ವೇಳೆ ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ. ಬೆಳಗ್ಗೆ 7 ಗಂಟೆ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಇದನ್ನೂ ಓದಿ: ಬೆಂಗಳೂರಿನಲ್ಲೊಂದು ವಿಚಿತ್ರ ಘಟನೆ- ಬಾಡಿಗೆದಾರನನ್ನ ಗಮನಿಸದೇ ಮನೆ ಸೀಜ್

    ಆಗಸ್ಟ್ 20 ರಿಂದ 29:
    ಬೈಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ (ಕಾಡುಗೋಡಿ) ಮಾರ್ಗಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಮೆಟ್ರೋ ಸೇವೆ ಸ್ಥಗಿತವಿರಲಿದೆ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.

    ಆಗಸ್ಟ್ 23 ಮತ್ತು 24:
    ಬೆಳಗ್ಗೆ 5 ರಿಂದ 7 ಗಂಟೆಯವರೆಗೆ ಮೈಸೂರು ರಸ್ತೆ ನಿಲ್ದಾಣದಲ್ಲಿ ರೈಲು ಸೇವೆ ಕೊನೆಗೊಳ್ಳುವುದು. ಇನ್ನುಳಿದ ದಿನಗಳಲ್ಲಿ ರೈಲು ಸೇವೆ ಕೆಂಗೇರಿ ನಿಲ್ದಾಣದವರೆಗೆ ಲಭ್ಯವಿರಲಿದೆ. ಇದನ್ನೂ ಓದಿ: ಕರುನಾಡ ಮಂದಿಗೆ ಮತ್ತೊಂದು ಶಾಕ್- ಬೇಳೆ, ತರಕಾರಿ ಬಳಿಕ ಅಕ್ಕಿ ಬೆಲೆಯೂ ದುಬಾರಿ

    ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಂಗೇರಿ To ಮೈಸೂರು ರಸ್ತೆ ಮೆಟ್ರೋ ಸಂಚಾರ ಜ.27 ರಿಂದ 30ರವರೆಗೆ ಸ್ಥಗಿತ

    ಕೆಂಗೇರಿ To ಮೈಸೂರು ರಸ್ತೆ ಮೆಟ್ರೋ ಸಂಚಾರ ಜ.27 ರಿಂದ 30ರವರೆಗೆ ಸ್ಥಗಿತ

    ಬೆಂಗಳೂರು: ಮೈಸೂರು ರಸ್ತೆಯಿಂದ (Mysuru Road) ಕೆಂಗೇರಿ (Kengeri) ನಡುವಿನ ಮೆಟ್ರೋ (Metro) ಸೇವೆಯನ್ನು ಜ.27ರಿಂದ ಜ.30ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಕೆಂಗೇರಿಯಿಂದ ಚಲ್ಲಘಟ್ಟದವರೆಗಿನ ವಿಸ್ತರಣಾ ಮಾರ್ಗದ ಕಾರ್ಯಾರಂಭಕ್ಕೆ ಸಂಬಂಧಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಹಿನ್ನೆಲೆಯಲ್ಲಿ ನೇರಳೆ ಮಾರ್ಗದ (Purple Line) ಕೆಂಗೇರಿಯಿಂದ ಮೈಸೂರು ರಸ್ತೆಯ ಮೆಟ್ರೋ ಸಂಚಾರವನ್ನು 4 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಆದರೆ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಎಂದಿನಂತೆ ಇರುತ್ತದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸಂಕಷ್ಟದಲ್ಲಿ ತೊಗರಿ ಬೆಳೆಗಾರರು : ಇಂದು ಸಂಜೆ ಪರಿಹಾರ ಘೋಷಣೆ – ಬೊಮ್ಮಾಯಿ

    ಬೈಯಪ್ಪನಹಳ್ಳಿಯಿಂದ ಕೆಂಗೇರಿವರೆಗಿನ ಮಾರ್ಗದಲ್ಲಿ ರೈಲು ಸೇವೆಗಳು ಜ. 31ರ ಬೆಳಗ್ಗೆ 5.00 ಗಂಟೆಯಿಂದ ವೇಳಾಪಟ್ಟಿಯ ಪ್ರಕಾರ ಪುನಾರಂಭವಾಗುತ್ತದೆ. ಇನ್ನುಳಿದಂತೆ ಹಸಿರು ಮಾರ್ಗದ ನಾಗಸಂದ್ರದಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಯಾವ ಮುಖ ಇಟ್ಕೊಂಡು ಮೋದಿ ರಾಜ್ಯದಲ್ಲಿ ವೋಟು ಕೇಳ್ತಾರೆ – ಹೆಚ್‌ಡಿಕೆ ಪ್ರಶ್ನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗ್ಳೂರು ಸಂಪೂರ್ಣ ಸ್ತಬ್ಧ- ರಸ್ತೆಗಳು ಖಾಲಿ ಖಾಲಿ

    ಬೆಂಗ್ಳೂರು ಸಂಪೂರ್ಣ ಸ್ತಬ್ಧ- ರಸ್ತೆಗಳು ಖಾಲಿ ಖಾಲಿ

    ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಇದೇ ಮೊದಲ ಸಂಡೇ ಲಾಕ್‍ಡೌನ್ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್, ಮಲ್ಲೇಶ್ವರಂ, ತುಮಕೂರು, ಮೈಸೂರು ರಸ್ತೆ ಸೇರಿದಂತೆ ಬೆಂಗಳೂರಿನ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿವೆ.

    ಬಳ್ಳಾರಿ ರೋಡ್ ಮತ್ತು ಮೇಕ್ರಿ ಸರ್ಕಲ್ ಸುತ್ತಮುತ್ತ ರಸ್ತೆಗಳು ಫುಲ್ ಖಾಲಿ ಖಾಲಿಯಾಗಿವೆ. ಪ್ರಮುಖ ಪ್ಲೈಓವರ್‌ಗೆ ಬ್ಯಾರಿಕೇಡ್ ಹಾಕಿ ಪೊಲೀಸರು ಮುಚ್ಚಿದ್ದಾರೆ. ಹೀಗಾಗಿ ರಸ್ತೆಗಳು ಖಾಲಿ ಖಾಲಿ ಇರುವುದರಿಂದ ಹೆಬ್ಬಾಳದ ರಸ್ತೆ ಬದಿಯಲ್ಲಿ ಜನರು ವಾಕಿಂಗ್ ಮಾಡುತ್ತಿದ್ದಾರೆ.

    ಇನ್ನೂ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸಂಪೂರ್ಣ ನಿಶಬ್ಧವಾಗಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳು ಫುಲ್ ಖಾಲಿ ಖಾಲಿಯಾಗಿವೆ. ಮೆಜೆಸ್ಟಿಕ್‍ನಲ್ಲಿ ಆಟೋಗಳ ಸಂಚಾರ ಹೊರತು ಪಡಿಸಿದರೆ ಬೇರೆ ವಾಹನಗಳ ಓಡಾಟ ಸಂಪೂರ್ಣ ಬಂದ್ ಆಗಿದೆ. ಇಂದಿನಿಂದ ನಾಳೆ ಬೆಳಗ್ಗೆಯ ತನಕ ಲಾಕ್‍ಡೌನ್ ವಿಚಾರ ತಿಳಿದು ಮೆಜೆಸ್ಟಿಕ್ ಕಡೆ ಪ್ರಯಾಣಿಕರು ಬರುತ್ತಿಲ್ಲ.

    ಮಲ್ಲೇಶ್ವರಂನಲ್ಲಿ ಹಾಲು ಮಾರಾಟಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಮಲ್ಲೇಶ್ವರಂ ಮುಖ್ಯ ರಸ್ತೆಗಳು ಖಾಲಿ ಖಾಲಿಯಾಗಿವೆ. ಆದರೆ ದ್ವಿಚಕ್ರ ವಾಹನದಲ್ಲಿ ಜನರು ಓಡಾಡುತ್ತಿದ್ದಾರೆ. ಸಂಡೇ ಕರ್ಫ್ಯೂ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಆದೇಶ ಹೊರಡಿಸಿದ್ದು, ನಗರದ ದೇವಾಲಯಗಳು ಕೂಡ ಬಂದ್ ಆಗಿದೆ. ಮಲ್ಲೇಶ್ವರಂನ ಸಾಯಿ ಬಾಬಾ ದೇವಾಲಯ ಬಂದ್ ಆಗಿದೆ. ಆದರೆ ಗುರು ಪೂರ್ಣಮಿ ಹಿನ್ನೆಲೆಯಲ್ಲಿ ಸಾಯಿ ಬಾಬಾ ದರ್ಶನಕ್ಕೆ ಬಂದ ಭಕ್ತಾಧಿಗಳು ರಸ್ತೆಯಲ್ಲೇ ನಮಸ್ಕಾರ ಮಾಡಿ ವಾಪಸ್ ಹೋಗುತ್ತಿದ್ದಾರೆ.

    ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‍ಗಳ ಸಂಚಾರ ನಿಷೇಧ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯ ಸೆಟಲೈಟ್ ಫುಲ್ ಖಾಲಿ ಖಾಲಿಯಗಿದೆ. ನಿಲ್ದಾಣದಲ್ಲಿ ಬ್ಯಾರಿಕೇಡ್‍ನಿಂದ ಕ್ಲೋಸ್ ಮಾಡಲಾಗಿದೆ. ಇತ್ತ ಮೈಸೂರು ರಸ್ತೆ ಕೂಡ ಫುಲ್ ಖಾಲಿ ಖಾಲಿಯಾಗಿದೆ. ಮಾಗಡಿ ರೋಡ್ ಕೂಡ ಸಂಪೂರ್ಣ ಸ್ತಬ್ಧವಾಗಿದೆ.

    ಸದಾ ವಾಹನ ಸಂಚಾರದಿಂದ ಟ್ರಾಫಿಕ್ ಜಾಮ್ ಆಗುತ್ತಿದ್ದ ತುಮಕೂರು ರಸ್ತೆ ಭಾನುವಾರ ಲಾಕ್‍ಡೌನ್ ಹಿನ್ನೆಲೆಯಲ್ಲಿ ಖಾಲಿ ಖಾಲಿಯಾಗಿದೆ. ಬೆರೆಳೆಣಿಕೆಯಷ್ಟು ವಾಹನಗಳು ಸಂಚಾರ ಬಿಟ್ಟರೆ ಬಹುತೇಕ ರಸ್ತೆ ಖಾಲಿ ಇದೆ. ಗೊರಗೊಂಟೆಪಾಳ್ಯದ ಫ್ಲೈ ಓವರ್ ಕ್ಲೋಸ್ ಮಾಡಲಾಗಿದೆ.

  • ಬೆಂಗಳೂರಿನ ಮಳೆಗೆ ವೃಷಭಾವತಿಯ ರೌದ್ರ ನರ್ತನ- ಮೈಸೂರು ರಸ್ತೆಯ ಅರ್ಧ ಭಾಗ ಕುಸಿತ

    ಬೆಂಗಳೂರಿನ ಮಳೆಗೆ ವೃಷಭಾವತಿಯ ರೌದ್ರ ನರ್ತನ- ಮೈಸೂರು ರಸ್ತೆಯ ಅರ್ಧ ಭಾಗ ಕುಸಿತ

    – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

    ಬೆಂಗಳೂರು: ಸಿನಿಕಾನ್ ಸಿಟಿಯಲ್ಲಿ ಇಂದು ಸುರಿದ ಧಾರಾಕಾರ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ವೃಷಭಾವತಿ ನದಿಯ ರೌದ್ರ ನರ್ತನಕ್ಕೆ ಕೆಂಗೇರಿ ಬಳಿ ತಡೆಗೋಡೆ ಸೇರಿ ಅರ್ಧ ರಸ್ತೆ ಕೊಚ್ಚಿ ಹೋಗಿದೆ. ಭಾರೀ ಪ್ರಮಾಣದ ನೀರು ರಸ್ತೆಗೆ ನುಗ್ಗಿದ್ದು, ಅರ್ಧ ಬಸ್ ಮುಳುಗಿದರೆ, ಕಾರುಗಳು ತೇಲುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

    ಕೆಂಗೇರಿಯಲ್ಲಿ ಬರೋಬ್ಬರಿ 65.5 ಮಿಲಿ ಮೀಟರ್ ಮಳೆ ಬಿದ್ದಿದ್ದು, ಹೀಗಾಗಿ ವೃಷಭಾವತಿ ನದಿಯ ಒಳ ಹರಿವು ಹೆಚ್ಚಾಗಿದೆ. ಇದರಿಂದಾಗಿ ಮೈಸೂರು ರಸ್ತೆ ತಡೆಗೋಡೆ ಕೊಚ್ಚಿ ಹೋಗಿದೆ. ಕೆಂಗೇರಿಯ ದುಬಾಸಿಪಾಳ್ಯ ಬಳಿ ತಡೆಗೋಡೆ ಕೊಚ್ಚಿ ಹೋಗಿದ್ದು, ನದಿಯ ಹರಿವಿನ ರಭಸಕ್ಕೆ ಅರ್ಧ ರಸ್ತೆ ಸಹ ಕುಸಿದಿದೆ. ರಸ್ತೆ ಮೇಲೆ 5 ಅಡಿಯಷ್ಟು ನೀರು ನಿಂತಿದ್ದು, ಕೆಲ ಕಾರುಗಳು ತೇಲುತ್ತಿವೆ. ಬಸ್‍ಗಳು ಸಹ ಅರ್ಧದಷ್ಟು ಮುಳುಗಿವೆ. ಕಾರನ್ನು ರಸ್ತೆಯಲ್ಲಿಯೇ ಬಿಟ್ಟು ಚಾಲಕ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ. ಕಾರು ನಿರಲ್ಲಿ ತೆಲುತ್ತಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ರಸ್ತೆ ತಡೆಗೋಡೆ ಹಾಗೂ ಅರ್ಧ ರಸ್ತೆ ಕೊಚ್ಚಿ ಹೋಗಿದ್ದರಿಂದ ಕೆಲ ಕಾಲ ಸಂಚಾರವನ್ನು ನಿಷೇಧಿಸಲಾಗಿತ್ತು. ನಂತರ ಏಕಮುಖ ಸಂಚಾರ ವ್ಯವಸ್ಥೆ ಮಾಡಿ ವಾಹನಗಳನ್ನು ಬಿಡಲಾಗುತ್ತಿದೆ. ಮಳೆ ನಿಂತರೂ ನದಿಯಲ್ಲಿ ಪ್ರವಾಹ ಇಳಿದಿಲ್ಲ. ಇದರಿಂದಾಗಿ ವಾಹನ ಸವಾರರು ತೀವ್ರ ಆತಂಕಗೊಂಡಿದ್ದಾರೆ. ಯಾವಾಗಲೂ ಬ್ಯುಸಿಯಾಗಿರುತ್ತಿದ್ದ ರಸ್ತೆ ಕೊಚ್ಚಿ ಹೋಗಿದ್ದರಿಂದ ಕಿಲೋಮೀಟರ್‍ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ. ಪೊಲೀಸರು ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

    ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಮೈಸೂರು ರಸ್ತೆಯಲ್ಲಿ ನದಿಗೆ ಕಟ್ಟಿದ ತಡೆಗೋಡೆ ಬಿದಿದ್ದೆ ಹಾಗೂ ರಸ್ತೆ ಕೂಡ ಕುಸಿದಿದೆ. ಎಂಜಿನಿಯರ್ಸ್ ಪ್ರಕಾರ ಮೆಟ್ರೋ ಪಿಲ್ಲರ್‍ಗೆ ಏನೂ ಆಗುವುದಿಲ್ಲ ಎಂದಿದ್ದಾರೆ. ಜನರಿಗೆ ಏನಾದರೂ ಅಪಾಯವಾಗಿದೆಯೇ ಎಂದು ಪರಿಶೀಲಿಸಲು ಸ್ಥಳಕ್ಕೆ ಬಂದಿದ್ದೇನೆ. ಇದೀಗ ಮೈಸೂರ್ ರಸ್ತೆಯ ಒಂದು ಬದಿಯನ್ನು ಬಂದ್ ಮಾಡಿದ್ದೇವೆ. ಕಾಮಗಾರಿ ಮುಗಿಯುವವರೆಗೂ ರಸ್ತೆ ಬಂದ್ ಮಾಡಲಾಗಿದೆ ಎಂದು ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ.

    ಮಳೆ ನೀರು ಕಾಲುವೆ ಮುಖ್ಯ ಎಂಜಿನಿಯರ್ ಬಸವರಾಜ್ ಈ ಕುರಿತು ಪ್ರತಿಕ್ರಿಯಿಸಿ, ವೃಷಭಾವತಿ ನದಿಯ ತಡೆಗೋಡೆ 150ಕ್ಕೂ ಹೆಚ್ಚು ಮೀಟರ್ ಕುಸಿದಿದ್ದು, ರಸ್ತೆ ಸಹ ಕುಸಿಯುತ್ತಿದೆ. ನೀರು ಕಡಿಮೆಯಾದ ತಕ್ಷಣ ಕಾಮಗಾರಿ ಪ್ರಾರಂಭ ಮಾಡುತ್ತೇವೆ. ಮೊದಲು ರಸ್ತೆ ಮತ್ತೆ ಕುಸಿಯದಂತೆ ಮರಳಿನ ಚೀಲ ಹಾಕುತ್ತೇವೆ. ಮೆಟ್ರೋ ಪಿಲ್ಲರ್‍ಗೆ ಸದ್ಯಕ್ಕೆ ಯಾವುದೇ ಅಪಾಯ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.

  • ಮೈಸೂರು ರಸ್ತೆ ಫ್ಲೈಓವರ್ ಮೇಲೆ ಓಡಾಡುವ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

    ಮೈಸೂರು ರಸ್ತೆ ಫ್ಲೈಓವರ್ ಮೇಲೆ ಓಡಾಡುವ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

    ಬೆಂಗಳೂರು: ಗುಂಡಿ ಮುಚ್ಚುವ ಕಾಮಗಾರಿ ಹಿನ್ನೆಲೆಯಲ್ಲಿ ಇದೇ ತಿಂಗಳ 26 ರಿಂದ ಮೈಸೂರು ರಸ್ತೆ ಫ್ಲೈಓವರ್ (ಸಿರ್ಸಿ ಸರ್ಕಲ್) ಮುಚ್ಚಲಿದ್ದು, ವಾಹನ ಸವಾರರು ಮುಂದಿನ 4 ತಿಂಗಳು ಪರ್ಯಾಯ ಮಾರ್ಗ ನೋಡಿಕೊಳ್ಳಬೇಕಿದೆ.

    ಮೈಸೂರು ರಸ್ತೆ, ಬಸವನಗುಡಿ, ಮೆಜೆಸ್ಟಿಕ್, ಗೋರಿಪಾಳ್ಯ ಮಾರ್ಗವಾಗಿ ಸಂಚರಿಸಲು ಬೆಂಗಳೂರಿನ ಸಿರ್ಸಿ ಫ್ಲೈಓವರ್ ಬಳಸುತ್ತಿದ್ದ ವಾಹನ ಸವಾರರು ನೋಡಲೇಬೇಕಾದ ಸುದ್ದಿ ಇದಾಗಿದೆ. ಫ್ಲೈಓವರ್ ಮೇಲೆ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಹಿನ್ನೆಲೆಯಲ್ಲಿ ಇದೇ ತಿಂಗಳ 27 ರಂದು ಫ್ಲೈಓವರ್ ಬಂದ್ ಆಗಲಿದೆ. ಈ ಮೂಲಕ ವಾಹನ ಸಂಚಾರಕ್ಕೆ ಬ್ರೇಕ್ ಬೀಳಲಿದೆ.

    ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಟೆಕ್ಕಿ ಟಾರ್ ಶೀಟ್ ಅಳವಡಿಸಲಾಗುತ್ತದೆ. ಮೂರು ಮಿಲಿ ಮೀಟರ್ ಗಾತ್ರದ ಸಣ್ಣ ಡಾಂಬಾರ್ ಶೀಟ್ ಹಾಕಿ ಕಾಂಕ್ರಿಟ್ ಮೇಲ್ಭಾಗದಲ್ಲಿ ಡಾಂಬರೀಕರಣ ಮಾಡಲಾಗುತ್ತದೆ. ಇನ್ನು ಈ ಕಾಮಗಾರಿಗೆ 4 ತಿಂಗಳ ಸಮಯ ಕೇಳಿದ್ದು, 2 ತಿಂಗಳಲ್ಲಿ ಮುಗಿಸುವ ವಿಶ್ವಾಸವಿದೆ ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

    ಕಳೆದ 4 ವರ್ಷಗಳ ಹಿಂದೆ ಫ್ಲೈಓವರ್ ಡಾಂಬರೀಕರಣ ಮಾಡಲಾಗಿತ್ತು. ಗುಂಡಿ ಬಿದ್ದಿದೆ ಎಂದು 3 ತಿಂಗಳ ಹಿಂದೆಯಷ್ಟೇ ಗುಂಡಿ ಮುಚ್ಚುವ ಕೆಲಸವೂ ಆಗಿದೆ. ಈಗ ಮತ್ತೆ 4 ಕೋಟಿ 50 ಲಕ್ಷ ವೆಚ್ಚದಲ್ಲಿ ಮತ್ತೆ ಕಾಮಗಾರಿ ಕೈಗೆತ್ತಿಕೊಂಡಿದೆ.

    4 ಹಂತದಲ್ಲಿ ಫ್ಲೈಓವರ್ ಬಂದ್ ಆಗಲಿದೆ. ಮೊದಲು ರಾಯನ್ ಸರ್ಕಲ್ ನಿಂದ ಮೈಸೂರು ರಸ್ತೆವರೆಗೂ ಬಂದ್ ಮಾಡಲಾಗುತ್ತದೆ. ಮತ್ತೆ ಟೌನ್‍ಹಾಲ್ ಭಾಗದಿಂದ ರಾಯನ್ ಸರ್ಕಲ್‍ವರೆಗೂ ಕಾಮಗಾರಿ ಮಾಡಲಾಗುತ್ತದೆ. ಇತ್ತ ಮೂರನೇ ಹಂತದಲ್ಲಿ ಮೈಸೂರು ರಸ್ತೆಯಿಂದ ಮಾರುಕಟ್ಟೆವರೆಗೂ ಬಂದ್ ಮಾಡಲಾಗುತ್ತದೆ. ಕಡೆಯದಾಗಿ ಕೆ.ಆರ್.ಮಾರುಕಟ್ಟೆಯಿಂದ ಟೌನ್ ಹಾಲ್ ತಲುಪುವ ಫ್ಲೈಓವರ್ ತಲುಪುವ ಕಡೆಯ ಭಾಗದವರೆಗೂ ಡಾಂಬರೀಕರಣ ಕಾಮಗಾರಿ ನಡೆಯಲಿದೆ. ಹೀಗಾಗಿ ವಾಹನ ಸವಾರರು ಮುಂದಿನ 4 ತಿಂಗಳೂ ಪರ್ಯಾಯ ಮಾರ್ಗ ನೋಡಿಕೊಳ್ಳಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv