Tag: ಮೈಸೂರು ವಿಶ್ವವಿದ್ಯಾಲಯ

  • ಎಸ್‌ಎಂ ಕೃಷ್ಣಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

    ಎಸ್‌ಎಂ ಕೃಷ್ಣಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

    ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ(SM Krishna) ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ (Mysore University) ತನ್ನ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರದಾನ ಮಾಡಿದೆ.

    ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಭಾಷ್ಯಂ ಸ್ವಾಮೀಜಿ ಹಾಗೂ ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್.ಸೀತಾರಾಮ್​ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರದಾನ ಮಾಡಿದರು.  ಇದನ್ನೂ ಓದಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ – ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ಬಿಡುಗಡೆ: ಡಿಕೆಶಿ

    ಘಟಿಕೋತ್ಸವದಲ್ಲಿ 32,249 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಯಿತು. ವಿವಿಧ ವಿಷಯಗಳಲ್ಲಿ 100ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳಿಗೆ ಪಿಹೆಚ್​ಡಿ ಪದವಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಸಿಲ್ಲಿ ಪ್ರಕರಣ: ಶರಣ ಪ್ರಕಾಶ್‌ ಪಾಟೀಲ್

    ಘಟಿಕೋತ್ಸವದಲ್ಲಿ 436 ಪದಕಗಳು, 266 ಬಹುಮಾನಗಳನ್ನು 252 ಮಂದಿ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುವುದು. ಇದರ ಜೊತೆಗೆ 6,144 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು ಹಾಗೂ 26,009 ಮಂದಿ ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಮಾಹಿತಿ ನೀಡಿದ್ದರು.

  • ಮೈಸೂರು ವಿವಿಯಿಂದ ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್

    ಮೈಸೂರು ವಿವಿಯಿಂದ ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್

    ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ 4 ತಿಂಗಳು ಕಳೆದರೂ ಅವರ ನೆನಪು ಕನ್ನಡಿಗರ ಮನದಲ್ಲಿ ಅಮರವಾಗಿ ಉಳಿದಿದೆ. ಇದೀಗ ದಿವಂಗತ ನಟ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.

    ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಘೋಷಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿವಿ ಯ 102ನೇ ಘಟಿಕೋತ್ಸವದಲ್ಲಿ ಕನ್ನಡದ ಯುವರತ್ನನಿಗೆ ಗೌರವ ಡಾಕ್ಟರೇಟ್  ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ 10 ತಂಡಗಳ ಪೈಕಿ 2 ತಂಡಕ್ಕೆ ಕನ್ನಡಿಗರ ನಾಯಕತ್ವ – ಮೂವರು ನೂತನ ನಾಯಕರ ಎಂಟ್ರಿ

    ಪುನೀತ್ ರಾಜ್‌ಕುಮಾರ್‌ರೊಂದಿಗೆ ಒಟ್ಟು ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಲಾಗಿದೆ. ಹಿರಿಯ ವಿಜ್ಞಾನಿ ಡಾ. ವಿಎಸ್ ಅತ್ರೆ ಹಾಗೂ ಜನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಲಾಗಿದೆ. ಇದನ್ನೂ ಓದಿ: ಅಪ್ಪು ಬೇಡವೆಂದ ಸಾಂಗ್ ಮತ್ತೆ ಪ್ರೇಕ್ಷಕರ ಮುಂದೆ – ಯಾವುದು ಈ ಸಾಂಗ್?

    ಈ ಹಿಂದೆ ಪುನೀತ್ ಅಭಿಮಾನಿಗಳು ಅಪ್ಪುಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರು. ಯುವರತ್ನ ತನ್ನ ಸಾವಿನಲ್ಲೂ ನೇತ್ರದಾನ ಮಾಡಿ ಹಲವರಿಗೆ ದೃಷ್ಟಿ ನೀಡಿದ್ದರು. ಇದೀಗ ಅವರ ಸಾವಿರಾರು ಅಭಿಮಾನಿಗಳು ಅಪ್ಪು ನಡೆದಿರುವ ಹಾದಿಯಲ್ಲಿ ನಡೆದು ನೇತ್ರದಾನಕ್ಕೆ ಮುಂದಾಗಿದ್ದಾರೆ.

  • ಮೈಸೂರು ವಿವಿ ಪ್ರಾಧ್ಯಾಪಕನಿಂದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

    ಮೈಸೂರು ವಿವಿ ಪ್ರಾಧ್ಯಾಪಕನಿಂದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

    ಮೈಸೂರು: ಪ್ರಾಧ್ಯಾಪಕನೇ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಕಾಮುಕ ಪ್ರಾಧ್ಯಾಪಕ ಪತ್ನಿ ಎದುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

    ಈ ಮೂಲಕ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮತ್ತೊಂದು ಕಾಮಕಾಂಡ ಬಯಲಾಗಿದ್ದು, ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೋ.ರಾಮಚಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಇದನ್ನೂ ಓದಿ: ಫೋನ್‍ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆ – ವರ್ಷ ಆಗುವುದರೊಳಗೆ ಯುವತಿ ಆತ್ಮಹತ್ಯೆ!

    ಸಂತ್ರಸ್ತೆ ರಾಮಚಂದ್ರ ಬಳಿ ಪಿಎಚ್ ಡಿ ಮಾರ್ಗದರ್ಶನ ಪಡೆಯುತ್ತಿದ್ದಳು. ಹೀಗಾಗಿ ರಾಮಚಂದ್ರ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡಿದ್ದ, ಈ ವೇಳೆ ಸಂತ್ರಸ್ತೆ ಕೂಗಾಟ, ಚೀರಾಟ ನಡೆಸಿದ್ದಾಳೆ. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ರಾಮಚಂದ್ರ ಪತ್ನಿ ಲೋಲಾಕ್ಷಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಸಂತ್ರಸ್ತ ಯುವತಿ ಹಾಗೂ ಪತಿಯನ್ನು ಠಾಣೆಗೆ ಕರೆತಂದಿದ್ದಾರೆ.

    ರಾಮಚಂದ್ರ ಪತ್ನಿ ಲೋಲಾಕ್ಷಿ ಕೂಡ ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು, ಇದೀಗ ಪೊಲೀಸರು ಆರೋಪಿ ರಾಮಚಂದ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

  • ಜುಲೈ 25ರಂದು ಕೆ-ಸೆಟ್ ಪರೀಕ್ಷೆ

    ಜುಲೈ 25ರಂದು ಕೆ-ಸೆಟ್ ಪರೀಕ್ಷೆ

    ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕಾರಣಾಂತರಗಳಿಂದ ಮುಂದೂಡಿದ್ದ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ)ಯ ದಿನಾಂಕವನ್ನು ನಿಗದಿ ಪಡಿಸಿದೆ.

    ಮೈಸೂರು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ದಿನಾಂಕ 11ರ ಏಪ್ರಿಲ್ 2021 ರಂದು ನಡೆಸಬೇಕಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದ್ದರಿಂದ ಸದರಿ ಕೆ-ಸೆಟ್ 2021 ಪರೀಕ್ಷೆಯನ್ನು 25-07-2021 ರ ಭಾನುವಾರ ನಡೆಸಲು ತೀರ್ಮಾನಿಸಲಾಗಿದೆ.

    ಎಲ್ಲಾ ನೋಂದಾಯಿತ ಅಭ್ಯರ್ಥಿಗಳು ಕೆಸೆಟ್ 2021ರ ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೈಬ್ ಸೈಟ್ http://kset.uni.mysore.ac.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಜೋಡಿ ಎತ್ತುಗಳಿಗೆ ಫುಲ್ ಡಿಮ್ಯಾಂಡ್

  • ನಮ್ಮ ವಿದ್ಯಾರ್ಥಿಗಳನ್ನು ತುರ್ತಾಗಿ ವಾಪಸ್ ಕಳಿಸಿ- ಮೈಸೂರು ವಿವಿಗೆ ಚೀನಾ ಮನವಿ

    ನಮ್ಮ ವಿದ್ಯಾರ್ಥಿಗಳನ್ನು ತುರ್ತಾಗಿ ವಾಪಸ್ ಕಳಿಸಿ- ಮೈಸೂರು ವಿವಿಗೆ ಚೀನಾ ಮನವಿ

    ಮೈಸೂರು: ನಮ್ಮ ವಿದ್ಯಾರ್ಥಿಗಳನ್ನು ತುರ್ತಾಗಿ ಸ್ವದೇಶಕ್ಕೆ ವಾಪಸ್ ಕಳಿಸಿ ಎಂದು ಮೈಸೂರು ವಿಶ್ವವಿದ್ಯಾಲಯಕ್ಕೆ ಚೀನಾ ಮನವಿ ಮಾಡಿಕೊಂಡಿದೆ.

    ಚೀನಾದಿಂದ ಉನ್ನತ ಶಿಕ್ಷಣಕ್ಕಾಗಿ ಮೈಸೂರಿಗೆ ಬಂದಿರುವ ವಿದ್ಯಾರ್ಥಿಗಳನ್ನು ನಮ್ಮ ದೇಶಕ್ಕೆ ವಾಪಸ್ ಕಳುಹಿಸಿ ಎಂದು ಚೀನಾ ಸರ್ಕಾರ ಮೈಸೂರು ವಿವಿಗೆ ಮನವಿ ಮಾಡಿದೆ. ಭಾರತ ಮತ್ತು ಚೀನಾ ಗಡಿಭಾಗದಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗಿರುವುದು ಮತ್ತು ಕೊರೊನಾ ವೈರಸ್ ಪರಿಣಾಮದಿಂದ ಚೀನಾ ಈ ರೀತಿ ಮನವಿ ಮಾಡಿದೆ ಎನ್ನಲಾಗಿದೆ.

    ಚೀನಾ ಸರ್ಕಾರದ ತುರ್ತು ಮನವಿಗೆ ಸ್ಪಂದಿಸಿರುವ ಮೈಸೂರು ವಿವಿ, 10 ದಿನಗಳ ಮುಂಚಿತವಾಗಿಯೇ ಚೀನಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿದೆ. ಮೈಸೂರು ವಿವಿಯಲ್ಲಿ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ 80ಕ್ಕೂ ಹೆಚ್ಚು ಚೀನಾ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ ಚೀನಾದ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷೆಯನ್ನು 10 ದಿನಗಳ ಕಾಲ ಮುಂಚಿತವಾಗಿ ನಡೆಸಲು ವಿವಿ ನಿರ್ಧಾರ ಮಾಡಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್, ಚೀನಾದ ರಾಯಭಾರಿ ಕಚೇರಿ ಸೂಚನೆ ಮೇರೆಗೆ ಪರೀಕ್ಷೆಗಳನ್ನು 10 ದಿನಗಳ ಮೊದಲೇ ನಡೆಸಲು ತೀರ್ಮಾನ ಮಾಡಿದ್ದೇವೆ. ಜೂನ್ 15ರಂದು ನಿಗಧಿಯಾಗಿದ್ದ ಪರೀಕ್ಷೆಯನ್ನು, ಜೂನ್ 1ಕ್ಕೆ ಆರಂಭ ಮಾಡಿ ಜೂ. 6ಕ್ಕೆ ಮುಕ್ತಾಯಗೊಳಿಸುತ್ತೇವೆ. ಪರೀಕ್ಷೆ ನಂತರ ವಿಶೇಷ ವಿಮಾನದಲ್ಲಿ ವಿದ್ಯಾರ್ಥಿಗಳು ಸ್ವದೇಶಕ್ಕೆ ತೆರಳಲಿದ್ದಾರೆ. ಚೀನಾ ಸರ್ಕಾರವೇ ವಿಮಾನ ವ್ಯವ್ಯಸ್ಥೆ ಮಾಡಲಿದೆ ಎಂದರು.

  • ಚೀನಾದಿಂದ ಸದ್ಯಕ್ಕೆ ವಾಪಸ್ ಆಗದಂತೆ ಮೈಸೂರು ವಿದ್ಯಾರ್ಥಿಗಳಿಗೆ ಸೂಚನೆ

    ಚೀನಾದಿಂದ ಸದ್ಯಕ್ಕೆ ವಾಪಸ್ ಆಗದಂತೆ ಮೈಸೂರು ವಿದ್ಯಾರ್ಥಿಗಳಿಗೆ ಸೂಚನೆ

    ಮೈಸೂರು: ವಿಶ್ವದಾದ್ಯಂತ ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಮೈಸೂರಿನಲ್ಲೂ ಕರೋನಾ ವೈರಸ್ ಭೀತಿ ಎದುರಾಗಿದೆ. ಮೈಸೂರು ವಿವಿಯಲ್ಲಿ ಓದುತ್ತಿರುವ 18 ಚೀನಾ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಮೈಸೂರಿಗೆ ವಾಪಸ್ ಬಾರದಂತೆ ಸೂಚನೆ ನೀಡಲಾಗಿದೆ.

    ಸದ್ಯ ರಜೆ ಮೇಲೆ 18 ಚೀನಾ ದೇಶದ ವಿದ್ಯಾರ್ಥಿಗಳು ಚೀನಾಕ್ಕೆ ತೆರಳಿದ್ದಾರೆ. ಮೈಸೂರು ವಿವಿಯಲ್ಲಿ ಚೀನಾ ದೇಶದ ಒಟ್ಟು 120 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿಭಾಗದ ಬಿ.ಟೆಕ್, ಎಂ.ಎಸ್. ಪ್ರೋಗ್ರಾಮಿಂಗ್‍ನ ಇನ್ಫಾರ್ಮೇಷನ್ ಟೆಕ್ನಾಲಜಿ, ಸಾಫ್ಟ್ ವೇರ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಅಧ್ಯಾಯನ ನಡೆಸುತ್ತಿದ್ದಾರೆ.

    120 ವಿದ್ಯಾರ್ಥಿಗಳ ಪೈಕಿ 18 ವಿದ್ಯಾರ್ಥಿಗಳು ಚೀನಾಗೆ ತೆರಳಿದ್ದು, ಅವರನ್ನು ಸದ್ಯಕ್ಕೆ ಅಲ್ಲಿಂದ ಹಿಂದಿರುಗದಂತೆ ಸೂಚಿಸಲಾಗಿದೆ. ಹೊಸ ವರ್ಷಾಚರಣೆಗೆ ಅಲ್ಲಿಗೆ ವಿದ್ಯಾರ್ಥಿಗಳು ತೆರಳಿದ್ದರು. ಚೀನಾದಲ್ಲಿ ಹೊಸ ವರ್ಷದ ಆಚರಣೆ ಬಹು ದೊಡ್ಡ ಆಚರಣೆ. ಈ ಹಿನ್ನೆಲೆಯಲ್ಲಿ ಮೈಸೂರು ವಿವಿಯಿಂದ ರಜೆ ಮೇಲೆ ಜ.15 ರಂದು ಚೀನಾಗೆ ತೆರಳಿದ್ದರು. ಜ.25 ರಂದು ಚೀನಾದಲ್ಲಿ ಹೊಸ ವರ್ಷಾಚರಣೆ ಇತ್ತು.

    ಇದನ್ನು ಮುಗಿಸಿಕೊಂಡು ಅವರು ಈಗಾಗಲೇ ವಾಪಸ್ ಆಗಬೇಕಿತ್ತು. ಚೀನಾದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ಕಾರಣದಿಂದ ಅವರನ್ನು ಸದ್ಯಕ್ಕೆ ಹಿಂದಿರುಗದಂತೆ ಸೂಚಿಸಲಾಗಿದೆ. ಅವರೆಲ್ಲಾ ಚೀನಾದ ಝೂಮೇಡಿಯನ್, ಪ್ರಾವೆನ್ಸಿಸ್‍ನ ಹೊಂಗೈ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು.

  • ಮಾಧ್ಯಮಗಳ ವಿರುದ್ಧ ಪ್ಲೇ ಕಾರ್ಡ್ ಗರ್ಲ್ ರಂಪಾಟ

    ಮಾಧ್ಯಮಗಳ ವಿರುದ್ಧ ಪ್ಲೇ ಕಾರ್ಡ್ ಗರ್ಲ್ ರಂಪಾಟ

    – ಕೋರ್ಟ್ ಆವರಣದಲ್ಲೇ ಮಾಧ್ಯಮಗಳ ವಿರುದ್ಧ ಆಕ್ರೋಶ

    ಮೈಸೂರು: ಮೈಸೂರಿನ ಮಾನಸಗಂಗೋತ್ರಿಯಲ್ಲಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮಿರ್ ಪೋಸ್ಟರ್ ಹಿಡಿದಿದ್ದ ನಳಿನಿ ಮಂಗಳವಾರ ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಳು. ಈ ವೇಳೆ ನ್ಯಾಯಾಲಯದ ಹೊರಭಾಗದಲ್ಲಿದ್ದ ಮಾಧ್ಯಮದವರನ್ನು ಕಂಡು ರಂಪಾಟ ನಡೆಸಿದ್ದು, ಮಾಧ್ಯಮದವರನ್ನು ಕಂಡು ಕೆಂಡಾಮಂಡಲವಾಗಿದ್ದಾಳೆ.

    ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ನ್ಯಾಯಾಲಯದ ಮುಂಭಾಗ ನಳಿನಿ ತಂದೆ ಮಾರ್ಗ ಬದಲಿಸಿದ್ದಾರೆ. ಈ ವೇಳೆ ತಂದೆ ಮೇಲೆಯೇ ಆಕ್ರೋಶ ಹೊರಹಾಕಿ, ರಸ್ತೆಯಲ್ಲೇ ಕುಳಿತಿದ್ದಾಳೆ. ನಳಿನಿಯನ್ನು ಸಮಾಧಾನ ಮಾಡಲು ತಂದೆ ಬಾಲಕುಮಾರ್ ಮುಂದಾದಾಗ ನಳಿನಿ ನಾವ್ಯಾಕೆ ಮಾಧ್ಯಮದವರ ಮುಂದೆ ಹೋಗಬೇಕು? ಅವರಿಗಾಗಿ ನಾವ್ಯಾಕೆ ದಾರಿ ಬದಲಿಸಬೇಕು ಎಂದು ಕೋಪದಿಂದಲೇ ಹೇಳಿದ್ದಾಳೆ.

    ನಂತರ ಮತ್ತೆ ಕ್ಯಾಮೆರಾಗಳ ಮುಂದೆಯೇ ನಡೆದು ಬಂದು, ನಮಗೆ ಖಾಸಗಿತನ ನೀಡಿ ಎಂದು ಕೂಗಾಡಿದ್ದಾಳೆ. ಇತ್ತೀಚೆಗೆ ಪೊಲೀಸರ ವಿಚಾರಣೆ ಬಳಿಕ ಸಹ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡಿದ್ದ ನಳಿನಿ, ನನ್ನ ಹೇಳಿಕೆಯನ್ನು ಪತ್ರಿಕೆ, ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನನ್ನೂ ಹೇಳುವುದಿಲ್ಲ ಎಂದು ಕಿಡಿಕಾರಿದ್ದಳು.

    ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಹಿಡಿದಿದ್ದ ವಿದ್ಯಾರ್ಥಿನಿಯನ್ನು ಪೊಲೀಸರು ಇತ್ತೀಚೆಗೆ ಸತತ 7 ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು.

    ವಿಚಾರಣೆಯಲ್ಲಿ ಒಟ್ಟು 80 ಪ್ರಶ್ನೆ ಕೇಳಲಾಗಿತ್ತು. ಇದರಲ್ಲಿ ಕೆಲವೊಂದು ಪ್ರಶ್ನೆಗಳನ್ನು ಹೊರತುಪಡಿಸಿ ಎಲ್ಲ ಪ್ರಶ್ನೆಗಳಿಗೂ ನಳಿನಿ ಉತ್ತರಿಸಿದ್ದಾಳೆ. ಸದ್ಯಕ್ಕೆ ಮೊದಲ ಹಂತದ ವಿಚಾರಣೆ ಮುಗಿದಿದ್ದು, ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು.

    ವಿಚಾರಣೆ ಬಳಿಕ ಹೊರ ಬಂದ ನಳಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಳು. ನಾನು ನನ್ನ ಹೇಳಿಕೆಯನ್ನು ಪತ್ರಿಕೆ ಹಾಗೂ ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ. ಬೇರೆ ಏನು ಕೇಳಬೇಡಿ. ನಾನು ಏನನ್ನೂ ಹೇಳುವುದಿಲ್ಲ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ. ಮತ್ತೇನು ಹೇಳುವುದಿಲ್ಲ ಎಂದಿದ್ದಳು.

  • ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು

    ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು

    ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಮಫಲಕ ಪ್ರದರ್ಶಿದ ನಳಿನಿ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸದೇ ಇರಲು ಮೈಸೂರು ವಕೀಲರ ಸಂಘ ನಿರ್ಣಯಿಸಿದೆ.

    ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪೊಲೀಸರು ರಾಷ್ಟ್ರ ವಿರೋಧಿ ಪ್ರಕರಣ ದಾಖಲಿಸಿಕೊಂಡಿರುವ ಹಿನ್ನೆಲೆಯಲ್ಲಿ ವಕಾಲತ್ತು ವಹಿಸದಂತೆ ವಕೀಲರಿಗೆ ಸೂಚನೆ ನೀಡಲಾಗಿದೆ.

    ಮೈಸೂರು ಜಿಲ್ಲಾ ನ್ಯಾಯಾಲಯದ ಯುವ ವಕೀಲರು ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣದಲ್ಲಿ ಆರೋಪಿಗಳ ಪರ ವಕಾಲತ್ತು ವಹಿಸಬೇಡಿ. ಈ ಹಿಂದೆ ಸಹ ಇಂತಹ ಪ್ರಕರಣಗಳಲ್ಲಿ ಆರೋಪಿಗಳ ಪರ ಜಿಲ್ಲಾ ನ್ಯಾಯಾಲಯದ ವಕೀಲರು ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಹೀಗಾಗಿ ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಗೆ ಮನವಿ ಸಲ್ಲಿಸಿದ್ದರು.

    ಮನವಿಗೆ ಸ್ಪಂದಿಸಿದ ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ, ಆರೋಪಿ ನಳಿನಿ ಪರ ವಕಾಲತ್ತು ವಹಿಸದಿರುವ ಕುರಿತು ನಿರ್ಣಯ ಕೈಗೊಂಡಿದೆ.

    ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಹಿಡಿದಿದ್ದ ವಿದ್ಯಾರ್ಥಿನಿಗೆ ಪೊಲೀಸರು ಇತ್ತೀಚೆಗೆ ಸತತ 7 ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು.

    ವಿಚಾರಣೆಯಲ್ಲಿ ಒಟ್ಟು 80 ಪ್ರಶ್ನೆ ಕೇಳಲಾಗಿತ್ತು. ಇದರಲ್ಲಿ ಕೆಲವೊಂದು ಪ್ರಶ್ನೆಗಳನ್ನು ಹೊರತುಪಡಿಸಿ ಎಲ್ಲ ಪ್ರಶ್ನೆಗಳಿಗೂ ನಳಿನಿ ಉತ್ತರಿಸಿದ್ದಾಳೆ. ಸದ್ಯಕ್ಕೆ ಮೊದಲ ಹಂತದ ವಿಚಾರಣೆ ಮುಗಿದಿದ್ದು, ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು.

    ವಿಚಾರಣೆ ಬಳಿಕ ಹೊರ ಬಂದ ನಳಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಳು. ನಾನು ನನ್ನ ಹೇಳಿಕೆಯನ್ನು ಪತ್ರಿಕೆ ಹಾಗೂ ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ. ಬೇರೆ ಏನು ಕೇಳಬೇಡಿ. ನಾನು ಏನನ್ನೂ ಹೇಳುವುದಿಲ್ಲ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ. ಮತ್ತೇನು ಹೇಳುವುದಿಲ್ಲ ಎಂದಿದ್ದಳು.

  • ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಪ್ರಕರಣ: ವಿದ್ಯಾರ್ಥಿನಿಗೆ ಸತತ 7:45 ಗಂಟೆ ಪೊಲೀಸರಿಂದ ವಿಚಾರಣೆ

    ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಪ್ರಕರಣ: ವಿದ್ಯಾರ್ಥಿನಿಗೆ ಸತತ 7:45 ಗಂಟೆ ಪೊಲೀಸರಿಂದ ವಿಚಾರಣೆ

    ಮೈಸೂರು: ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಹಿಡಿದಿದ್ದ ವಿದ್ಯಾರ್ಥಿನಿಗೆ ಪೊಲೀಸರು ಸತತ 7:45 ಗಂಟೆ ವಿಚಾರಣೆ ಮಾಡಿದ್ದಾರೆ.

    ವಿದ್ಯಾರ್ಥಿ ನಳಿನಿ ಶುಕ್ರವಾರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದು, ಪ್ರತಿಯನ್ನು ಠಾಣೆಗೆ ನೀಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ಹೇಳಿಕೆ ದಾಖಲಿಸಲು ಜಯಲಕ್ಷೀಪುರಂ ಠಾಣೆಗೆ ಬೆಳಗ್ಗೆ ಹಾಜರಾಗಿದ್ದರು. ಡಿಸಿಪಿ ಮುತ್ತುರಾಜ್ ಹಾಗೂ ಎಸಿಪಿ ಶಿವಶಂಕರ್ ಅವರು ಬೆಳಗ್ಗೆ 10ರಿಂದ ಸಂಜೆ 5.45 ಗಂಟೆ ವೆರಗೂ ಸತತ 7:45 ಗಂಟೆ ವಿಚಾರಣೆ ನಡೆಸಿದ್ದಾರೆ.

    ವಿಚಾರಣೆಯಲ್ಲಿ ಒಟ್ಟು 80 ಪ್ರಶ್ನೆ ಕೇಳಲಾಗಿದ್ದು, ಇದರಲ್ಲಿ ಕೆಲವೊಂದು ಪ್ರಶ್ನೆಗಳನ್ನು ಹೊರತುಪಡಿಸಿ ಎಲ್ಲಾ ಪ್ರಶ್ನೆಗಳಿಗೂ ನಳಿನಿ ಉತ್ತರಿಸಿದ್ದಾರೆ. ಸದ್ಯಕ್ಕೆ ಮೊದಲ ಹಂತದ ವಿಚಾರಣೆ ಮುಗಿದಿದ್ದು, ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

    ವಿಚಾರಣೆ ಬಳಿಕ ಹೊರ ಬಂದ ನಳಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ನಾನು ನನ್ನ ಹೇಳಿಕೆಯನ್ನು ಪತ್ರಿಕೆ ಹಾಗೂ ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ. ಬೇರೆ ಏನು ಕೇಳಬೇಡಿ. ನಾನು ಏನನ್ನೂ ಹೇಳುವುದಿಲ್ಲ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ. ಮತ್ತೇನು ಹೇಳುವುದಿಲ್ಲ ಎಂದರು.

  • ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಪ್ರಕರಣದ ವರದಿ ಕೇಳಿದ ರಾಜ್ಯಪಾಲರು

    ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಪ್ರಕರಣದ ವರದಿ ಕೇಳಿದ ರಾಜ್ಯಪಾಲರು

    ಮೈಸೂರು: ಫ್ರೀ ಕಾಶ್ಮಿರ ಪ್ಲೇ ಕಾರ್ಡ್ ಪ್ರದರ್ಶನ ಪ್ರಕರಣಕ್ಕೆ ರಾಜ್ಯಪಾಲರ ಭವನ ಕೂಡ ಎಂಟ್ರಿ ಕೊಟ್ಟಿದೆ. ಪ್ರಕರಣದ ಬಗ್ಗೆ ಸವಿಸ್ತಾರ ನೀಡುವಂತೆ ರಾಜ್ಯಪಾಲರು ವಿಶ್ವವಿದ್ಯಾಲಯದ ರಿಜಿಸ್ಟರ್ ಅವರಿಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಕಾರಣ ಏನು? ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ವಿವರವಾಗಿ ವರದಿ ನೀಡುವಂತೆ ಆದೇಶಿಸಿದ್ದಾರೆ.

    ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ವೇಳೆ ಫ್ರೀ ಕಾಶ್ಮಿರ ಪ್ಲೇ ಕಾರ್ಡ್ ಪ್ರದರ್ಶನ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೈಸೂರು ವಿಶ್ವವಿದ್ಯಾಲಯದ ರಿಜಿಸ್ಟರ್ ಆರ್.ಶಿವಪ್ಪ ಅವರು ಪ್ರತಿಭಟನಾ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮೈಸೂರು ವಿಶ್ವವಿದ್ಯಾಲಯದಿಂದ ಜಯಲಕ್ಷೀಪುರಂ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರತ್ಯೇಕ ದೂರು ದಾಖಲಾಗಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಫ್ರೀ ಕಾಶ್ಮೀರ ಪ್ಲೇಕಾರ್ಡ್ ಪ್ರದರ್ಶಿಸಿದವರ ಮೇಲೆ ದೂರು ದಾಖಲು

    ಮಾನಸ ಗಂಗೋತ್ರಿಯ ಭದ್ರತಾ ಸಿಬ್ಬಂದಿಗೂ ನೋಟಿಸ್ ಜಾರಿಯಾಗಿದೆ. ಅನುಮತಿ ಇಲ್ಲದ ವ್ಯಕ್ತಿಗಳಿಗೆ ಪ್ರತಿಭಟನೆ ನಡೆಸಲು ಹೇಗೆ ಅವಕಾಶ ಕೊಟ್ಟಿದ್ದೀರಿ? ಇದು ಭದ್ರತಾ ಲೋಪ. ಇದಕ್ಕೆ ಕಾರಣ ನೀಡಿ ಎಂದು ನೋಟಿಸ್ ಜಾರಿಯಾಗಿದೆ.