Tag: ಮೊಬೈಲ್ ಬ್ಲಾಸ್ಟ್

  • ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್ – ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್ – ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ಜೈಪುರ: ಉದಯಪುರದಿಂದ (Udaipur) ದೆಹಲಿಗೆ (Delhi)  ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ (Air India Flight) ಪ್ರಯಾಣಿಕರೊಬ್ಬರ ಮೊಬೈಲ್ ಸ್ಫೋಟಗೊಂಡಿದ್ದು (Mobile Blast) ತಕ್ಷಣವೇ ವಿಮಾನವನ್ನು ವಾಪಸ್ ಉದಯಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ (Emergency Landing) ಮಾಡಲಾಗಿದೆ.

    ಸೋಮವಾರ ಏರ್ ಇಂಡಿಯಾದ ಎಐ470 ವಿಮಾನ ಉದಯಪುರ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುತ್ತಿದ್ದ ವೇಳೆ ಪ್ರಯಾಣಿಕರೊಬ್ಬರ ಮೊಬೈಲ್ ಬ್ಯಾಟರಿ ಸ್ಫೋಟಗೊಂಡಿದೆ. ತಕ್ಷಣವೇ ವಿಮಾನವನ್ನು ಮತ್ತೆ ಅದೇ ನಿಲ್ದಾಣದಲ್ಲಿ ಇಳಿಸಲಾಗಿದೆ. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ

    ಸದ್ಯ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ. ವಿಮಾನವನ್ನು ಎಲ್ಲಾ ರೀತಿಯ ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ. ಆದರೆ ಘಟನೆಯ ಬಳಿಕ ಕೆಲ ಪ್ರಯಾಣಿಕರು ವಿಮಾನ ಹತ್ತಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಮಿತ್ ಶಾ ಉಪಸ್ಥಿತಿಯಲ್ಲೇ 2,400 ಕೋಟಿ ಮೌಲ್ಯದ ಡ್ರಗ್ಸ್ ನಾಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಮಾನದೊಳಗೆ ಪ್ರಯಾಣಿಕನ ಮೊಬೈಲ್ ಸ್ಫೋಟ – ಬೆಂಕಿ ನಂದಿಸಲು ಸಿಬ್ಬಂದಿ ಹರಸಹಾಸ

    ವಿಮಾನದೊಳಗೆ ಪ್ರಯಾಣಿಕನ ಮೊಬೈಲ್ ಸ್ಫೋಟ – ಬೆಂಕಿ ನಂದಿಸಲು ಸಿಬ್ಬಂದಿ ಹರಸಹಾಸ

    ನವದೆಹಲಿ: ಇಂಡಿಗೋದ ದಿಬ್ರುಗಢ್-ದೆಹಲಿ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್‍ಗೆ ಬೆಂಕಿ ಹತ್ತಿಕೊಂಡಿತ್ತು. ಆದರೆ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನದ ಸಹಾಯದಿಂದ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಸಂಭವಿಸಬೇಕಾದ ಭಾರೀ ಅನಾಹುತ ತಪ್ಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಈ ಕುರಿತಂತೆ ಪ್ರತಿಕ್ರಿಯಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ಫ್ಲೈಟ್ 6ಇ 2037 ಅಸ್ಸಾಂನ ದಿಬ್ರುಗಢ್‍ನಿಂದ ದೆಹಲಿಗೆ ತೆರಳುತ್ತಿದ್ದಾಗ ಕ್ಯಾಬಿನ್ ಸಿಬ್ಬಂದಿಯೊಬ್ಬರು ಪ್ರಯಾಣಿಕರ ಫೋನ್‍ನಿಂದ ಬೆಂಕಿಯ ಕಿಡಿ ಮತ್ತು ಹೊಗೆ ಹೊರಗೆ ಹೋಗುತ್ತಿರುವುನ್ನು ಗಮನಿಸಿದ್ದಾರೆ. ನಂತರ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನವನ್ನು ಬಳಸಿ ಬೆಂಕಿಯನ್ನು ನಂದಿಸಿದ್ದಾರೆ. ಇದನ್ನೂ ಓದಿ: ಎಸಿ ಸ್ಫೋಟ – ಓರ್ವ ಸಾವು, ಐವರಿಗೆ ಗಾಯ

    ಬಳಿಕ ಗುರುವಾರ ಮಧ್ಯಾಹ್ನ 12.45ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಸದ್ಯ ಅದೃಷ್ಟವಶಾತ್ ಘಟನೆ ವೇಳೆ ಯಾವುದೇ ಯಾವುದೇ ಪ್ರಯಾಣಿಕರಿಗೆ ಅಥವಾ ಕ್ಯಾಬಿನ್ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: RSS ಆಸ್ಪತ್ರೆ ಹಿಂದೂಗಳಿಗೆ ಮಾತ್ರವೇ ಎಂಬ ರತನ್ ಟಾಟಾ ಪ್ರಶ್ನೆಗೆ ಗಡ್ಕರಿ ಉತ್ತರ ಹೀಗಿತ್ತು

    ಇದೇ ವಿಚಾರವಾಗಿ ಇಂಡಿಗೋ, ದಿಬ್ರುಗಢ್‍ನಿಂದ ದೆಹಲಿಗೆ 6ಇ 2037 ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಬ್ಯಾಟರಿ ಬಿಸಿಯಾದ ಘಟನೆ ಸಂಭವಿಸಿದೆ. ಎಲ್ಲಾ ಅಪಾಯಕಾರಿ ಘಟನೆಗಳನ್ನು ನಿರ್ವಹಿಸಲು ಸಿಬ್ಬಂದಿಗೆ ತರಬೇತಿ ನೀಡಿದ್ದರಿಂದ, ಅವರು ಪರಿಸ್ಥಿತಿಯನ್ನು ತ್ವರಿತವಾಗಿ ನಿರ್ವಹಿಸಿದ್ದಾರೆ ಮತ್ತು ವಿಮಾನದಲ್ಲಿರುವ ಯಾವುದೇ ಪ್ರಯಾಣಿಕರಿಗೆ ಅಥವಾ ಆಸ್ತಿಗೆ ಹಾನಿಯಾಗಿಲ್ಲ ಎಂದು ತಿಳಿಸಿದೆ.

  • ರಿಪೇರಿ ಮಾಡುತ್ತಿದ್ದ ವೇಳೆ ಎಂಐ ಮೊಬೈಲ್ ಬ್ಲಾಸ್ಟ್

    ರಿಪೇರಿ ಮಾಡುತ್ತಿದ್ದ ವೇಳೆ ಎಂಐ ಮೊಬೈಲ್ ಬ್ಲಾಸ್ಟ್

    ಚಿತ್ರದುರ್ಗ: ರಿಪೇರಿ ಮಾಡುತ್ತಿದ್ದ ವೇಳೆ ಮೊಬೈಲ್ ಬ್ಲಾಸ್ಟ್ ಆಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

    ಇಲ್ಲಿನ ಹೊಸದುರ್ಗ ಪಟ್ಟಣದ ಸಂಗಮ ಮೊಬೈಲ್ ಸೆಂಟರ್ ನಲ್ಲಿ ಎಂಐ ಕಂಪನಿಗೆ ಸೇರಿದ ಮೊಬೈಲ್ ರಿಪೇರಿ ಮಾಡುತ್ತಿದ್ದ ವೇಳೆ ಬ್ಲಾಸ್ಟ್ ಆಗಿದೆ.

    ಮೊಬೈಲ್ ನಿಂದ ಹೊಗೆ ಬರುತ್ತಿದ್ದಂತೆ ರಿಪೇರಿ ಮಾಡುತ್ತಿದ್ದ ವ್ಯಕ್ತಿ ಅದನ್ನು ದೂರ ಎಸೆದಿದ್ದು, ಅಂಗಡಿಯಿಂದ ಸಿಬ್ಬಂದಿ ಹೊರಗೆ ಓಡಿದ್ದಾರೆ.

    ಭಾರೀ ಪ್ರಮಾಣದಲ್ಲಿ ಹೊಗೆಯೊಂದಿಗೆ ಎಂಐ ಮೊಬೈಲ್ ಬ್ಲಾಸ್ಟ್ ಆಗಿದೆ. ಈ ಎಲ್ಲಾ ದೃಶ್ಯ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    https://www.youtube.com/watch?v=jUepRlcY62k&feature=youtu.be

  • ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ತೊಡೆ, ಮರ್ಮಾಂಗಕ್ಕೆ ಗಂಭೀರ ಗಾಯ

    ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ತೊಡೆ, ಮರ್ಮಾಂಗಕ್ಕೆ ಗಂಭೀರ ಗಾಯ

    ಕೊಪ್ಪಳ: ಗ್ರಾಹಕರೆ ಮೊಬೈಲ್ ಖರೀದಿಸೋ ಮುನ್ನ ಎಚ್ಚರ ವಹಿಸಿ. ಯಾಕಂದ್ರೆ ಎಂಐ ನೋಟ್ 4 ಮೊಬೈಲ್ ಬ್ಲಾಸ್ಟ್ ಆಗಿ ಯುವಕನಿಗೆ ಗಂಭೀರ ಗಾಯವಾಗಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಗಂಗಾವತಿ ತಾಲೂಕಿನ ಸಿದ್ದಾಪೂರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಹನುಮೇಶ್ ಹರಿಜನ ಎಂಬವರು ತಮ್ಮ ಮೊಬೈಲನ್ನು ಪ್ಯಾಂಟ್ ಜೇಬಿನಲ್ಲಿಟ್ಟುಕೊಂಡಾಗ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಯುವಕನ ತೊಡೆಭಾಗ ಮತ್ತು ಮರ್ಮಾಂಗಕ್ಕೆ ಗಂಭೀರ ಗಾಯಗಳಾಗಿವೆ.

    ಹನುಮೇಶ್ ಹರಿಜನ ಆನ್‍ಲೈನ್ ಮೂಲಕ ಮೊಬೈಲ್ ಖರೀದಿಸಿದ್ದರು. ಸದ್ಯ ಗಾಯಗೊಂಡಿರುವ ಯುವಕ ಹನುಮೇಶರನ್ನು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.