Tag: ಮೊರಾರ್ಜಿ ದೇಸಾಯಿ ವಸತಿ ಶಾಲೆ

  • ಹಾಸ್ಟೆಲ್ ಊಟದ ವಿಚಾರಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ ಪ್ರಿನ್ಸಿಪಲ್, ವಾರ್ಡನ್ ಅಮಾನತು

    ಹಾಸ್ಟೆಲ್ ಊಟದ ವಿಚಾರಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ ಪ್ರಿನ್ಸಿಪಲ್, ವಾರ್ಡನ್ ಅಮಾನತು

    ಬೀದರ್: ಜಿಲ್ಲೆಯ ಔರಾದ್ (Aurad) ತಾಲೂಕಿನ ಸಂತಪೂರ್ (Santhapur) ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿನ್ಸಿಪಲ್ ಹಾಗೂ ವಾರ್ಡನ್‌ನನ್ನು ಅಮಾನತು ಮಾಡಲಾಗಿದೆ.

    ವಸತಿ ಶಾಲೆಯ ಪ್ರಿನ್ಸಿಪಲ್ ಭಗವಂತ ಕಾಂಬ್ಳೆ ಹಾಗೂ ವಾರ್ಡನ್ ಶಿವಕುಮಾರ್ ವೈಜಪ್ಪ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಇದನ್ನೂ ಓದಿ: ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಉತ್ತರಾಧಿಕಾರಿಯಾಗಿ ಸನ್ಯಾಸತ್ವ ಸ್ವೀಕರಿಸಿದ ಕೆಎಎಸ್ ಅಧಿಕಾರಿ

    ಊಟದಲ್ಲಿ ಹುಳ ಬಿದ್ದಿದ್ದನ್ನು ಹಾಗೂ ಮೆನು ಚಾರ್ಟ್ ಪ್ರಕಾರ ಊಟ ನೀಡದಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಲ್ ಹಾಗೂ ವಾರ್ಡನ್ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ವಸತಿ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು. ಈ ವೇಳೆ ಕರ್ತವ್ಯಲೋಪ ಎಸಗಿದ್ದವರ ವಿರುದ್ಧ ವರದಿ ಸಲ್ಲಿಸಲಾಗಿದೆ.

    ಇನ್ನು ಅಮಾನತಿನಿಂದ ತೆರವಾಗಿರುವ ಹುದ್ದೆಗಳಿಗೆ ಪ್ರಭಾರಿ ಪ್ರಾಂಶುಪಾಲರನ್ನಾಗಿ ಘೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಉಪಪ್ರಾಂಶುಪಾಲ ರವೀಂದ್ರ ಚಟ್ನಳ್ಳಿ ಹಾಗೂ ಮೇಲ್ವಿಚಾರಕರನ್ನಾಗಿ ವಸತಿ ಶಾಲೆಯ ಕಂಪ್ಯೂಟರ್ ಶಿಕ್ಷಕ ದಯಾನಂದ ಅವರನ್ನು ನೇಮಿಸಲಾಗಿದೆ.ಇದನ್ನೂ ಓದಿ: Waqf: 150 ಕೋಟಿ ಆಫರ್| ವಿಜಯೇಂದ್ರ ಮೇಲಿನ ಸಿದ್ದರಾಮಯ್ಯ ಆರೋಪ ಸುಳ್ಳು: ಅನ್ವರ್ ಮಾಣಿಪ್ಪಾಡಿ

  • ಮರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ

    ಮರುಡೇಶ್ವರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ

    – ಸಂತ್ರಸ್ತ ಕುಟುಂಬಸ್ಥರಿಗಿಂದು ಮೃತದೇಹ ಹಸ್ತಾಂತರ

    ಕಾರವಾರ: ಮುರುಡೇಶ್ವರದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಕೋಲಾರದಿಂದ (Kolar) ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ (Uttara Kannada) ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯ ಕುರಿತು ತನಿಖೆ ಕೈಗೊಂಡಿದ್ದಾರೆ.ಇದನ್ನೂ ಓದಿ: ವೈದ್ಯನ ಕೈಹಿಡಿದ್ರೂ ಸುಖವಿಲ್ಲದ ಬದುಕು, 4 ವರ್ಷದಿಂದ ಗೃಹಬಂಧನದಲ್ಲಿ ಗೃಹಿಣಿ!

    ಈ ಮಧ್ಯೆ ಪ್ರವಾಸಿಗರಿಗೆ ಜಿಲ್ಲಾಡಳಿತ ಕಡಲ ತೀರಕ್ಕೆ ನಿರ್ಬಂಧ ಹೇರಿದೆ. ಇದೀಗ ಮುರುಡೇಶ್ವರ ಬಿಟ್ಟಿರುವ ಪಾರ್ಥಿವ ಶರೀರಗಳು ಇಂದು (ಡಿ.12) ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಲಿದೆ. ಬಳಿಕ ಜಿಲ್ಲಾಡಳಿತದ ವತಿಯಿಂದ ಅಂತಿಮ ನಮನ ಸಲ್ಲಿಸಿ, ನಂತರ ಅವರವರ ಕುಟುಂಬಗಳಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗುತ್ತದೆ.

    ಘಟನೆ ಏನು?
    ಕೋಲಾರದ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಮುರುಡೇಶ್ವರ ಕಡಲ ತೀರದಲ್ಲಿ ಆಟ ಆಡುವಾಗ ಶಾಲೆಯ 7 ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. 7 ವಿದ್ಯಾರ್ಥಿನಿಯರ ಪೈಕಿ 4 ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತದೆ – ಟೆಕ್ಕಿ ಅತುಲ್ ಆತ್ಮಹತ್ಯೆ ಕುರಿತು ಕಂಗನಾ ಪ್ರತಿಕ್ರಿಯೆ

  • ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಕಾರವಾರ: ಮುರುಡೇಶ್ವರದಲ್ಲಿ (Murudeshwar) ಸಮುದ್ರ ಪಾಲಾಗಿದ್ದ ನಾಲ್ವರು ವಿದ್ಯಾರ್ಥಿನಿಯರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಈ ಕುರಿತು ಸಿಎಂ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕೋಲಾರ (Kolar) ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ, ಲಾವಣ್ಯ, ವಂದನಾ ಹಾಗೂ ಶ್ರಾವಂತಿ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ, ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಟ್ವೀಟ್‌ನಲ್ಲೇನಿದೆ?
    ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.

    ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.

    ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ.

    ಘಟನೆ ಏನು?
    ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ ಒಟ್ಟು 57 ಮಂದಿ ಸೇರಿ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದರು. ಮಂಗಳವಾರ (ಡಿ.10) ಸಮುದ್ರದಲ್ಲಿ ಆಟ ಆಡುವಾಗ ಅಲೆಯ ಹೊಡೆತದಿಂದ ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಈ ವೇಳೆ ಒಟ್ಟು ಏಳು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. ಆ ಪೈಕಿ ಮೂವರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಣೆ ಮಾಡಿದ್ರೆ, ಶ್ರಾವಂತಿ ಎಂಬಾಕೆ ಸಾವನ್ನಪ್ಪಿದ್ದಳು. ಇಂದು (ಡಿ.11) ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿದೆ.ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

  • ಲೈಂಗಿಕ ಕಿರುಕುಳ ಆರೋಪ – ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ ಪ್ರಾಂಶುಪಾಲರ ಅಮಾನತು

    ಲೈಂಗಿಕ ಕಿರುಕುಳ ಆರೋಪ – ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿರ್ಲಕ್ಷ್ಯ ವಹಿಸಿದ ಪ್ರಾಂಶುಪಾಲರ ಅಮಾನತು

    ಕಲಬುರಗಿ: ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ (Girls Student) ದೂರಿನ ಕುರಿತು ನಿರ್ಲಕ್ಷ್ಯ ವಹಿಸಿದ್ದ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Desai Residential School) ಪ್ರಾಂಶುಪಾಲರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

    ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

    ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಕನನ್ನು (PT Teacher) ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಲಾಗಿತ್ತು. ಈ ಬೆನ್ನಲ್ಲೇ ವಿದ್ಯಾರ್ಥಿನಿಯರ ದೂರಿನ ಕುರಿತು ನಿರ್ಲಕ್ಷ್ಯ ವಹಿಸಿದ್ದ ಜೇವರ್ಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರನ್ನೂ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಇದನ್ನೂ ಓದಿ: ಪತಂಜಲಿ ಸಸ್ಯಾಹಾರಿ ಹರ್ಬಲ್ ಟೂತ್ ಪೌಡರ್‌ನಲ್ಲಿ ಮಾಂಸಾಹಾರಿ ಅಂಶ – ದೆಹಲಿ ಹೈಕೋರ್ಟ್‌ಗೆ ಅರ್ಜಿ

    ದೈಹಿಕ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದ ಕುರಿತು ಪ್ರಾಂಶುಪಾಲರಿಗೆ ಲಿಖಿತವಾಗಿ ದೂರು ನೀಡಿದ್ದರು. ಆದಾಗ್ಯೂ ಪ್ರಾಂಶುಪಾಲರು ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: BMTC ನಿರ್ವಾಹಕ ಹುದ್ದೆಗೆ ಪರೀಕ್ಷೆ, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ – ಕೆಇಎ

    ಈ ಆರೋಪದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಸೇವೆಯಿಂದ ಅಮಾನತು ಮಾಡಿ ಆದೇಶಿಸಿಲಾಗಿದೆ. ಇವರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ನಿಯಮ 98(A) (D)ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಅಮಾನತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟಿ ಹೊರಗೆ ಹೋಗುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ತ್ವರಿತ ತೀರ್ಪಿನ ಅಗತ್ಯವಿದೆ: ಮೋದಿ

  • ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

    ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

    ಬೆಂಗಳೂರು: ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಶುಕ್ರವಾರ ಎಸ್‌ಸಿಸಿಪಿ/ಟಿಎಸ್‌ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ (Morarji Desai School Chamarajpet) ಅನಿರೀಕ್ಷಿತ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಹೈದರಾಬಾದ್‌ ಕರ್ನಾಟಕದಲ್ಲಿ ಬಿಜೆಪಿ ಹಿನ್ನಡೆಗೆ ಪಂಚ ಗ್ಯಾರಂಟಿ ಕಾರಣ – ಆತ್ಮಾವಲೋಕನ ಸಭೆಯಲ್ಲಿ ಅಭಿಪ್ರಾಯ

    ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.

    ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜೊತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು‌ ಎಂದು ಅವರು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

  • ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

    ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು

    ಚಿಕ್ಕಬಳ್ಳಾಪುರ: ಶಾಲಾ ಶಿಕ್ಷಕರು (Teacher) ಮಾಡಿದ ಎಡವಟ್ಟಿಗೆ ಇಬ್ಬರು ವಿದ್ಯಾರ್ಥಿಗಳು (Student) ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bengaluru Rural) ದೇವನಹಳ್ಳಿ ತಾಲೂಕಿನ ದೇವನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಮೃತ ವಿದ್ಯಾರ್ಥಿಗಳನ್ನು ಬಾಗಲೂರು ಬಳಿಯ ರಜಾಕ್ ಪಾಳ್ಯದ ವಿದ್ಯಾರ್ಥಿ ಜುನೈದ್ (14), ಹಾಗೂ ಹೊಸಕೋಟೆ ತಾಲೂಕು ವಳಗೆರೆಪುರದ ವಿದ್ಯಾರ್ಥಿ ಸಂತೋಷ್ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳಿಬ್ಬರು ದೇವನಾಯಕನಹಳ್ಳಿ ಗ್ರಾಮದ ಬಳಿ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (Morarji Desai School) 8ನೇ ತರಗತಿಯಲ್ಲಿ ಓದುತ್ತಿದ್ದರು.

    ವಸತಿ ಶಾಲೆಯಲ್ಲಿದ್ದ 188 ವಿದ್ಯಾರ್ಥಿಗಳಲ್ಲಿ 98 ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಉಳಿದ 94 ವಿದ್ಯಾರ್ಥಿಗಳಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಶಾಲೆಯ ಪ್ರಭಾರ ಜವಾಬ್ದಾರಿ ವಹಿಸಿಕೊಂಡಿದ್ದ ಕಂಪ್ಯೂಟರ್ ಶಿಕ್ಷಕಿ ರಶ್ಮಿ, ವೀಣಾ, ಕಾವಲುಗಾರ ಪ್ರಸನ್ನ ಪಿಕ್ನಿಕ್ ವಾಕಿಂಗ್ ಅಂತ ಶಾಲೆಯ ಹಿಂಭಾಗದ ಕುಂಟೆ ಕಡೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ 5 ಮಂದಿ ವಿದ್ಯಾರ್ಥಿಗಳು ಕುಂಟೆಯಲ್ಲಿ ಈಜಾಡಲು ಧುಮುಕಿದ್ದು, ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು ಉಳಿದ ಮೂವರು ಆಸ್ಪತ್ರೆ (Hospital) ಸೇರಿದ್ದಾರೆ. ಶ್ರೇಯಸ್‌ ಎಂಬ ವಿದ್ಯಾರ್ಥಿಯನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿದ್ದು, ಅಬ್ದುಲ್ ಅಮೀದ್, ಹಾಗೂ ಸುಹೇಲ್ ಖಾನ್ ಎಂಬ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.

    ಘಟನೆಯಲ್ಲಿ ಜುನೈದ್ ಹಾಗೂ ಸಂತೋಷ್ ಸಾವನ್ನಪ್ಪಿದ್ದು, ಮೃತರ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಅಲ್ಪಸಂಖ್ಯಾತರ ಇಲಾಖೆಯ ಜಂಟಿ‌ನಿರ್ದೇಶಕ ಸಾಬೀರ್ ಮುಲ್ಲಾ ಸೇರಿದಂತೆ ತಹಶೀಲ್ದಾರ್ ಶಿವರಾಜ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಇನ್ನೂ ಘಟನೆಗೆ ಕಾರಣೀಕರ್ತರಾದ ಶಿಕ್ಷಕಿಯರಾದ ರಶ್ಮಿ ಹಾಗೂ ವೀಣಾ, ಸೇರಿದಂತೆ ಕಾವಲುಗಾರ ಪ್ರಸನ್ನ ಹಾಗೂ ಮುಖ್ಯ ಶಿಕ್ಷಕ ಶಿವಮೂರ್ತಿ ವಿರುದ್ಧ ಚನ್ನರಾಯಪಟ್ಟಣ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಜನವರಿ 1ರ ನಸುಕಿನ ಜಾವ 2 ಗಂಟೆವರೆಗೂ ನಮ್ಮ ಮೆಟ್ರೋ ಸಂಚರಿಸಲಿದೆ: BMRCL

    ಈ ಸಂಬಂಧ ಸದ್ಯ ನಾಲ್ವರನ್ನು ಸಹ ಚನ್ನರಾಯಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಇತ್ತ ಶಾಲೆಗೆ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗಳು ಆಗಮಿಸಿ, ಪೋಷಕರಿಗೆ ಸರ್ಕಾರದ ಕಡೆಯಿಂದ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಬರ್ತಾರೆ ಅಂತ ಅಸೆಂಬ್ಲಿ ಮೊಟಕುಗೊಳಿಸಿದ್ರು: ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ಉಡುಪಿಯಲ್ಲಿ ಆರ್.ಅಶೋಕ್ ಗ್ರಾಮ ವಾಸ್ತವ್ಯ – ಮಕ್ಕಳಿಗೆ ಜೀವನ ಪಾಠ ಮಾಡಿದ ಸಾಮ್ರಾಟ್

    ಉಡುಪಿಯಲ್ಲಿ ಆರ್.ಅಶೋಕ್ ಗ್ರಾಮ ವಾಸ್ತವ್ಯ – ಮಕ್ಕಳಿಗೆ ಜೀವನ ಪಾಠ ಮಾಡಿದ ಸಾಮ್ರಾಟ್

    ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಹೂಡಿದ್ದಾರೆ.

    ಸರ್ಕಾರಿ ಶಾಲೆ, ಪ್ರೈವೆಟ್ ಶಾಲೆ ಎಂಬ ಮೇಲು ಕೀಳು ಇಲ್ಲ. ಸಾಧನೆ ವಿಷಯ ಬಂದರೆ ಬಡವರ ಮಕ್ಕಳು ಶ್ರೀಮಂತರ ಮಕ್ಕಳೆಂಬುವುದಿಲ್ಲ ಎಂಬುವುದಕ್ಕೆ ತಮ್ಮ ಜೀವನವನ್ನು ಉದಾಹರಣೆ ಕೊಟ್ಟರು. ಸರ್ಕಾರಿ ಶಾಲೆಯಲ್ಲಿ ಕಲಿತ ನಾನು ಸಚಿವನಾದೆ. ಐಎಎಸ್, ಐಪಿಎಸ್‍ಗಳು ನನ್ನ ಮಾತನ್ನು ಕೇಳುತ್ತಿದ್ದಾರೆ ಎಂದು ಹಾಸ್ಟೆಲ್ ಮಕ್ಕಳಿಗೆ ಅಶೋಕ್ ಅವರು ಜೀವನ ಪಾಠ ಮಾಡಿದರು.

    ಫೈವ್ ಸ್ಟಾರ್ ಹೋಟೆಲ್‍ನ ಅಡುಗೆ ಭಟ್ಟನಿಗೆ ನಾಲ್ಕುವರೆ ಲಕ್ಷ ರೂಪಾಯಿ ಸಂಬಳ ಇದೆ. ಯಾವುದೇ ಕೆಲಸ ಮೇಲಲ್ಲ, ಕೀಳಲ್ಲ. ನಾವು ಮಾಡುವ ಉದ್ಯೋಗದಲ್ಲಿ ಉತ್ತುಂಗಕ್ಕೆ ಹೋಗಬೇಕು. ಟಾಪ್ ಮೋಸ್ಟ್ ಕೆಲಸಕ್ಕೆ ಕೈತುಂಬ ಸಂಬಳ, ಗೌರವ ಸಿಗುತ್ತದೆ ಎಂದರು. ಇದನ್ನೂ ಓದಿ: ಕೂಚ್ ಬೆಹಾರ್ ಪ್ರತ್ಯೇಕ ರಾಜ್ಯದ ಬೇಡಿಕೆ ಇಡುವವರ ಮೊಣಕಾಲು ಮುರಿಯುತ್ತೇವೆ: ಉದಯನ್ ಗುಹಾ

    ಕಲಾವಿದನ ಕಲಾಕೃತಿ, ಟೀ ಮಾರುತ್ತಿದ್ದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿದ್ದು, ಬೆಸ್ತರ ಮನೆಯ ಮಗ ಅಬ್ದುಲ್ ಕಲಾಂ ಎಂಬ ರಾಷ್ಟ್ರಪತಿ ಆಗಿದ್ದು, ಪದ್ಮನಾಭ ನಗರದ ಸೊಪ್ಪು ಮಾರುವ ವ್ಯಕ್ತಿಯ ಮಗಳು ರ‍್ಯಾಂಕ್‌ ಪಡೆದ ಸಾಹಸ ಕಥೆಯನ್ನು ವಸತಿ ಶಾಲೆಯ ಮಕ್ಕಳ ಮುಂದೆ ಹೇಳಿ ಪ್ರೋತ್ಸಾಹ ನೀಡಿದರು.

    ಇದೇ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಕೊರೊನಾ ನಂತರ ಮತ್ತೆ ಗ್ರಾಮ ವಾಸ್ತವ್ಯ ಲಾಂಚ್ ಆಗಿದೆ. ಉಡುಪಿಯಲ್ಲಿ ಸುಮಾರು 13,500 ಕಡತ ವಿಲೇವಾರಿ ಗ್ರಾಮ ವಾಸ್ತವ್ಯ ಸಂದರ್ಭ ಮಾಡಲಾಯಿತು. ಗ್ರಾಮವಾಸ್ತವ್ಯ ಅಂದರೆ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ಮುಟ್ಟಿಸುವುದು. ನೆನೆಗುದಿಗೆ ಬಿದ್ದಿರುವ ಸಮಸ್ಯೆಗಳನ್ನು ಬಗೆಹರಿಸುವುದು. ಇದು ನಾಮ್ ಕೆ ವಾಸ್ತೇ ವಾಸ್ತವ್ಯ ಅಲ್ಲ. ರಾಜಕೀಯ ಜಂಜಾಟಗಳ ನಡುವೆ ಗ್ರಾಮವಾಸ್ತವ್ಯ ಜೀವನ ಪ್ರೀತಿ ಕೊಡುತ್ತದೆ ಎಂದರು

    ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಧನೆಗೆ ಸಚಿವರು ಸನ್ಮಾನಿಸಿದರು. ವಿದ್ಯಾರ್ಥಿನಿ ಸಚಿವರ ಕಾಲಿಗೆ ಬಿದ್ದಾಗ ಸಚಿವರೇ ವಿದ್ಯಾರ್ಥಿನಿ ಕಾಲಿಗೆ ನಮಸ್ಕರಿಸಿದರು ದೊಡ್ಡತನ ಮೆರೆದರು. ಇದನ್ನೂ ಓದಿ: ದೇಶದ ಮೊದಲ ಪ್ರಧಾನಿ ಶಂಕುಸ್ಥಾಪನೆ ಮಾಡಿದ್ದ ಯೋಜನೆಗಳು ಮೋದಿ ಸರ್ಕಾರದಿಂದ ಪೂರ್ಣ: ಅಮಿತ್ ಶಾ

  • ಕಾಲುವೆಯಲ್ಲಿ ಬಿದ್ದ ವಿದ್ಯಾರ್ಥಿ ನೀರು ಪಾಲಾದ!

    ಕಾಲುವೆಯಲ್ಲಿ ಬಿದ್ದ ವಿದ್ಯಾರ್ಥಿ ನೀರು ಪಾಲಾದ!

    ಯಾದಗಿರಿ: ಕಾಲುವೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಕಾಲು ಜಾರಿ ಬಿದ್ದು, ನೀರು ಪಾಲಾದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿಯಲ್ಲಿ ನಡೆದಿದೆ.

    ನಿಂಗಪ್ಪ (18) ನೀರು ಪಾಲಾದ ವಿದ್ಯಾರ್ಥಿ. ಈತ ಬೇವಿನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿ ಬಳಿ ಶನಿವಾರ ಈ ಘಟನೆ ನಡೆದಿದೆ. ವೀಕೆಂಡ್ ಕಫ್ರ್ಯೂನಿಂದ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಂಗಪ್ಪ ಕಾಲುವೆಯಲ್ಲಿ ಈಜಲು ಹೋಗಿದ್ದ.  ಇದನ್ನೂ ಓದಿ: ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ: ಬಿಜೆಪಿ ವ್ಯಂಗ್ಯ

    ಈಜಲು ಬಾರದೆ ಇದ್ದರು, ಸ್ನೇಹಿತರ ಜೊತೆ ಸೇರಿ ಈಜಲು ಹೋಗಿದ್ದ. ಕಾಲುವೆಯಲ್ಲಿ ಇಳಿದು ಈಜಲು ಪ್ರಯತ್ನಿಸಿದ್ದ. ಆ ಸಂದರ್ಭದಲ್ಲಿ ಕಾಲುವೆಯಲ್ಲಿ ರಭಸವಾಗಿ ನೀರು ಹರಿಯುತ್ತಿತ್ತು. ನೀರಿಗೆ ಸಿಲುಕಿ ನಿಂಗಪ್ಪ ಕೊಚ್ಚಿ ಹೋಗಿದ್ದಾರೆ. ಪ್ರಕರಣ ಸಂಬಂಧಿಸಿ ನಿಂಗಪ್ಪನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

  • ಚಾಮರಾಜನಗರದಲ್ಲಿ ಆದರ್ಶ ಶಾಲೆ ಬಳಿಕ ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ

    ಚಾಮರಾಜನಗರದಲ್ಲಿ ಆದರ್ಶ ಶಾಲೆ ಬಳಿಕ ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ

    ಚಾಮರಾಜನಗರ: ಜಿಲ್ಲೆಯ ಯಳಂದೂರಿನ ಆದರ್ಶ ಶಾಲೆಯ ಬಳಿಕ ಇದೀಗ ಹನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಜಿಲ್ಲೆಯಲ್ಲಿ ಇದೀಗ ಆತಂಕ ಶುರುವಾಗಿದೆ.

    ಹನೂರು ಪಟ್ಟಣದ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿ ಹಾಗೂ ಓರ್ವ ವಿದ್ಯಾರ್ಥಿನಿಗೆ ಕೋವಿಡ್ ದೃಢಪಟ್ಟಿದೆ. ಶಾಲೆಗಳು ಪ್ರಾರಂಭವಾಗುವ ಮುನ್ನ ಎಲ್ಲ ವಿದ್ಯಾರ್ಥಿಗಳ ಕೋವಿಡ್ ನೆಗೆಟಿವ್ ರಿಪೋರ್ಟ್ ಪಡೆದೇ ಶಾಲೆಗೆ ದಾಖಲು ಮಾಡಿಕೊಳ್ಳಲಾಗಿತ್ತು. ಆದರೆ ಕಳೆದ ಒಂದು ವಾರದ ಹಿಂದೆ ಕೆಲ ವಿದ್ಯಾರ್ಥಿಗಳಲ್ಲಿ ನೆಗಡಿ, ಕೆಮ್ಮು, ಶೀತ ಜ್ವರ ಕಂಡು ಬಂದ ಹಿನ್ನೆಲೆ ಹನೂರು ಪಟ್ಟಣದ ಕೋವಿಡ್ ಕೇಂದ್ರದಲ್ಲಿ ಪರೀಕ್ಷೆಗೆ ಒಳಪಡಿಸಿ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿಕೊಡಲಾಗಿತ್ತು. ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದ ಸ್ವ್ಯಾಬ್ ಮಾದರಿಯಲ್ಲಿ 3 ವಿದ್ಯಾರ್ಥಿಗಳಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

    ಕಳೆದ ವಾರವಷ್ಟೇ ಯಳಂದೂರಿನ ಆದರ್ಶ ಶಾಲೆಯ ಇಬ್ಬರು ಬಾಲಕರಿಗೆ ಕೊರೊನಾ ಸೋಂಕು ತಗುಲಿತ್ತು. ವಿದ್ಯಾರ್ಥಿಗಳು ಸಂತೇಮರಹಳ್ಳಿ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಮೊರಾರ್ಜಿ ಶಾಲೆ ವಿದ್ಯಾರ್ಥಿಗಳಲ್ಲೂ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

  • ಕಳಪೆ ಗುಣಮಟ್ಟದ ಆಹಾರ ಸೇವಿಸಿ 12 ಮಂದಿ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

    ಕಳಪೆ ಗುಣಮಟ್ಟದ ಆಹಾರ ಸೇವಿಸಿ 12 ಮಂದಿ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ

    ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್‍ನಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರಿನ ಲಿಂಗಸಗೂರಿನಲ್ಲಿ ಇಂದು ನಡೆದಿದೆ.

    ಕಳಪೆ ಗುಣಮಟ್ಟದ ಆಹಾರವನ್ನು ಸೇವಿಸಿ ಸುಮಾರು 12 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮಧ್ಯಾಹ್ನದ ಊಟ ಬಳಿಕ ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥರಾಗಿದ್ದಾರೆ. ತಕ್ಷಣ ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

    ಪದೇ ಪದೇ ಮೊರಾರ್ಜಿ ಶಾಲೆಗಳಲ್ಲಿ ಈ ರೀತಿ ಘಟನೆಗಳು ಮರುಕಳಿಸುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಈ ಕುರಿತು ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದೆ. ರಾಜ್ಯದಲ್ಲಿ ಹಲವೆಡೆ ಕಳಪೆ ಗುಣಮಟ್ಟದ ಆಹಾರ ಸೇವಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾದರೂ ಕ್ರಮ ತೆಗೆದುಕೊಳ್ಳದ ಅಧಿಕಾರಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv