Tag: ಮೊರೆನಾ

  • ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ!

    ಭೋಪಾಲ್: ಜಮೀನು ವಿವಾದದ ಗಲಾಟೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ (shoot) ಹತ್ಯೆ ಮಾಡಿದ ಘಟನೆ ಶುಕ್ರವಾರ ಮಧ್ಯಪ್ರದೇಶದ (Madhya Pradesh) ಮೊರೆನಾದಲ್ಲಿ (Morena) ನಡೆದಿದೆ.

    ಘಟನೆಯ ಆಘಾತಕಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವೀಡಿಯೋದಲ್ಲಿ ಇಬ್ಬರು ರೈಫಲ್‍ಗಳನ್ನು (Rifles) ಹಿಡಿದು ಇನ್ನೊಂದು ಗುಂಪಿನ ಕಡೆ ಗುಂಡು ಹಾರಿಸುವುದು ದಾಖಲಾಗಿದೆ. ನಂತರ ಕೆಲವರು ಅವರನ್ನು ಕೋಲುಗಳಿಂದ ಥಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಂದೆಗೆ ಬಿಜೆಪಿ ಟಿಕೆಟ್ ಸಿಕ್ಕ ಖುಷಿಗೆ ಗಾಳಿಯಲ್ಲಿ ಗುಂಡು ಪ್ರಕರಣ – ಅಭ್ಯರ್ಥಿ ಪುತ್ರನ ವಿರುದ್ಧ ಎಫ್‍ಐಆರ್

    ಘಟನೆಯ ಹಿನ್ನೆಲೆ:
    ಧೀರ್ ಸಿಂಗ್ ತೋಮರ್ ಮತ್ತು ಗಜೇಂದ್ರ ಸಿಂಗ್ ತೋಮರ್ ಕುಟುಂಬಗಳ ನಡುವೆ 2013ರಲ್ಲಿ ತ್ಯಾಜ್ಯ ಸುರಿಯುವ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳವಾಗಿತ್ತು. ಆಗ ಧೀರ್ ಸಿಂಗ್ ತೋಮರ್ ಕುಟುಂಬದ ಇಬ್ಬರು ಸಾವನ್ನಪ್ಪಿದ್ದರು. ಈ ವೇಳೆ ಗಜೇಂದ್ರ ಸಿಂಗ್ ತೋಮರ್ ಕುಟುಂಬವು ಗ್ರಾಮದಿಂದ ಪಲಾಯನ ಮಾಡಿತ್ತು.

    ನಂತರ ಎರಡು ಕುಟುಂಬಗಳು ನ್ಯಾಯಾಲಯದ (Court) ಹೊರಗೆ ರಾಜಿ ಮಾಡಿಕೊಂಡಿದ್ದವು. ಶುಕ್ರವಾರ ಗಜೇಂದ್ರ ಸಿಂಗ್ ತೋಮರ್ ಕುಟುಂಬ ಗ್ರಾಮಕ್ಕೆ ಮರಳಿದೆ. ಈ ವೇಳೆ ಧೀರ್ ಸಿಂಗ್ ತೋಮರ್ ಕುಟುಂಬ ಅವರ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ.

    ಹತ್ಯೆಯಲ್ಲಿ ಭಾಗಿಯಾಗಿರುವ ಎಂಟು ಮಂದಿಯನ್ನು ಗುರುತಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಇಬ್ಬರು ಯೋಧರು ಸಾವು

  • ರೈಲು ಡಿಕ್ಕಿ ಹೊಡೆದು ಇಬ್ಬರು ಆರ್‌ಪಿಎಫ್ ಪೊಲೀಸರ ದುರ್ಮರಣ

    ರೈಲು ಡಿಕ್ಕಿ ಹೊಡೆದು ಇಬ್ಬರು ಆರ್‌ಪಿಎಫ್ ಪೊಲೀಸರ ದುರ್ಮರಣ

    ಭೋಪಾಲ್: ವೇಗವಾಗಿ ಬಂದ ರೈಲು (Train) ಡಿಕ್ಕಿ ಹೊಡೆದು ರೈಲ್ವೇ ಸಂರಕ್ಷಣಾ ಪಡೆಯ (RPF) ಇಬ್ಬರು ಹೆಡ್ ಕಾನ್‌ಸ್ಟೇಬಲ್‌ಗಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಮೊರೆನಾ (Morena) ಜಿಲ್ಲೆಯಲ್ಲಿ ನಡೆದಿದೆ.

    ಮೊರೆನಾದಿಂದ 7 ಕಿಮೀ ದೂರದಲ್ಲಿರುವ ಸಾಂಕ್ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಹೆಡ್ ಕಾನ್‌ಸ್ಟೇಬಲ್‌ಗಳಾದ ಅಶೋಕ್ ಕುಮಾರ್ (56) ಮತ್ತು ನವರಾಜ್ ಸಿಂಗ್ (40) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರಾಮದ ಯುವಕನೊಂದಿಗೆ ಪ್ರೀತಿ – ಮಗಳನ್ನೇ ಕೊಚ್ಚಿ ಕೊಂದ ತಂದೆ

    ಆರ್‌ಪಿಎಫ್ ಪೊಲೀಸರು ಸ್ಥಳದಲ್ಲಿ ನಿಲ್ಲಿಸಿದ್ದ ಗ್ವಾಲಿಯರ್-ಆಗ್ರಾ ಪ್ಯಾಸೆಂಜರ್ ರೈಲನ್ನು ಪರಿಶೀಲಿಸುತ್ತಿದ್ದು, ಅವರಿಬ್ಬರೂ ಮಧ್ಯದ ಹಳಿಯಲ್ಲಿದ್ದರು. ಈ ವೇಳೆ ದೆಹಲಿಯಿಂದ ಬರುತ್ತಿದ್ದ ದುರೊಂತೋ ಎಕ್ಸ್ಪ್ರೆಸ್ ರೈಲು ವೇಗವಾಗಿ ಹಾದು ಹೋಗಿದೆ. ಇದರಿಂದ ರೈಲು ಅಧಿಕಾರಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಮೊರೆನಾ ಆರ್‌ಪಿಎಫ್ ಪೊಲೀಸ್ ಠಾಣೆಯ ಉಸ್ತುವಾರಿ ಹರಿಕಿಶನ್ ಮೀನಾ ತಿಳಿಸಿದ್ದಾರೆ. ಇದನ್ನೂ ಓದಿ: 2,500 ರೂ. ವಾಪಸ್ ಕೊಡದಿದ್ದಕ್ಕೆ ಯುವಕನ ಕೈಯನ್ನೆ ಕತ್ತರಿಸಿದ್ರು

    ಇನ್ನೊಂದು ಬದಿಯ ಹಳಿಯಲ್ಲಿ ಗೂಡ್ಸ್ ರೈಲು ನಿಂತಿದ್ದರಿಂದ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಓಡಲು ಸಾಧ್ಯವಾಗಲಿಲ್ಲ. ಹೀಗಾಗಿ ದುರಂತ ಸಂಭವಿಸಿದೆ. ಇಬ್ಬರು ಪೊಲೀಸರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

    Live Tv
    [brid partner=56869869 player=32851 video=960834 autoplay=true]