Tag: ಮೊಸರು ಸಾರು

  • ಬೆಂಡೆಕಾಯಿ ಹಾಕಿ ಮೊಸರು ಸಾರು ಮಾಡಿದ್ರೆ ಸಖತ್ ಟೇಸ್ಟ್-ನೀವೂ ಒಮ್ಮೆ ಟ್ರೈ ಮಾಡಿ

    ಬೆಂಡೆಕಾಯಿ ಹಾಕಿ ಮೊಸರು ಸಾರು ಮಾಡಿದ್ರೆ ಸಖತ್ ಟೇಸ್ಟ್-ನೀವೂ ಒಮ್ಮೆ ಟ್ರೈ ಮಾಡಿ

    ಮೊಸರನ್ನು ಅನ್ನಕ್ಕೆ ಹಾಕಿ ಊಟ ಮಾಡುವ ಬದಲು ನೀವು ಸಾಂಬಾರ್ ಮಾಡಿದರೆ ಸಖತ್ ಟೇಸ್ಟ್ ಆಗಿರುತ್ತದೆ. ಈ ಮೊಸರು ಬೆಂಡೆಕಾಯಿ ಸಾರಿನ ರುಚಿ ಒಂದು ಹಿಡಿ ಅನ್ನವನ್ನು ಹೆಚ್ಚೇ ನಿಮ್ಮ ಹೊಟ್ಟೆ ತಲುಪುವಂತೆ ಮಾಡುತ್ತದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ.

    ಬೇಕಾಗುವ ಸಾಮಗ್ರಿಗಳು:
    * ಬೆಂಡೆಕಾಯಿ- ಕಾಲು ಕೆಜಿ
    * ಈರುಳ್ಳಿ-1
    * ಟೊಮೆಟೋ-1
    * ಶುಂಠಿ-ಬೆಳ್ಳುಳ್ಳಿ ಪೇಸ್ಟ್- 1 ಚಮಚ
    * ಮೊಸರು 2 ಕಪ್ ಸ್ವಲ್ಪ
    * ತೆಂಗಿನ ತುರಿ- ಸ್ವಲ್ಪ
    * ಗೋಡಂಬಿ 6-7
    * ಗರಂ ಮಸಾಲ- 1 ಚಮಚ
    * ಖಾರದ ಪುಡಿ- 1ಚಮಚ
    * ಅರಿಶಿಣ ಪುಡಿ- ಅರ್ಧ
    * ಅಡುಗೆ ಎಣ್ಣೆ- 4 ಚಮಚ
    * ರುಚಿಗೆ ತಕ್ಕ ಉಪ್ಪು
    * ಇಂಗು, ಸಾಸಿವೆ, ಜೀರಿಗೆ, ಉದ್ದಿನ ಬೇಳೆ- ಸ್ವಲ್ಪ
    * ಒಣ ಮೆಣಸು-3
    * ಕರಿ ಬೇವು- ಸ್ವಲ್ಪ

    ಮಾಡುವ ವಿಧಾನ:
    * ಅಡುಗೆ ಎಣ್ಣೆ ಹಾಕಿ ಬಿಸಿ ಮಾಡಿ ಅದರಲ್ಲಿ ಬೆಂಡೆ ಕಾಯಿ ಹಾಕಿ ಫ್ರೈ ಮಾಡಿಕೊಳ್ಳಬೇಕು.
    * ಗೋಡಂಬಿ, ತೆಂಗಿನ ತುರಿ ಹಾಕಿ ನುಣ್ಣನೆ ರುಬ್ಬಿ. ಇದನ್ನೂ ಓದಿ:  ಸ್ಪೆಷಲ್ ಹೀರೆಕಾಯಿ ದೋಸೆ ಮಾರ್ನಿಂಗ್ ತಿಂಡಿಗೆ ಮಾಡಿ

    * ಬಾಣಲೆಯಲ್ಲಿ ಅಡುಗೆ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ, ಉದ್ದಿನ ಬೇಳೆ, ಜೀರಿಗೆ, ಇಂಗು ಹಾಕಿ, ಈರುಳ್ಳಿ, ಒಣ ಮೆಣಸನ್ನು ಹಾಕಿ ಫ್ರೈ ಮಾಡಿಕೊಳ್ಳಿ.

    * ನಂತರ ಈಗಾಗಲೇ ರುಬ್ಬಿದ ಗೋಡಂಬಿ ಪೇಸ್ಟ್, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಖಾರದ ಪುಡಿ, ಗರಂ ಪುಡಿ, ಅರಿಶಿಣ ಪುಡಿ, ಮೊಸರು, ನೀರು ಸೇರಿಸಿ, ರುಚಿಗೆ ತಕ್ಕ ಉಪ್ಪು ಹಾಕಿ ಕುದಿಸಿಕೊಳ್ಳಿ. ಇದನ್ನೂ ಓದಿ:  ಸರಳ, ರುಚಿಯಾದ ಬೆಳ್ಳುಳ್ಳಿ ಚಟ್ನಿ ಮಾಡಲು ಟ್ರೈ ಮಾಡಿ

    * ಸಾರು ಕುದಿ ಬರುವಾಗ ಫ್ರೈ ಮಾಡಿದ ಬೆಂಡೆ ಕಾಯಿ ಹಾಕಿದರೆ ರುಚಿಯಾದ ಮೊಸರು ಬೆಂಡೆಕಾಯಿ ಸಾರು ಸವಿಯಲು ಸಿದ್ಧವಾಗುತ್ತದೆ.