Tag: ಮೊಹಮ್ಮದ್‌ ಜುಬೇರ್‌

  • ಎಂದಿನಂತೆ ನನ್ನ ಕೆಲಸ ಮುಂದುವರಿಸುತ್ತೇನೆ: ಜೈಲಿನಿಂದ ಹೊರಬಂದ ಜುಬೇರ್‌ ಮಾತು

    ಎಂದಿನಂತೆ ನನ್ನ ಕೆಲಸ ಮುಂದುವರಿಸುತ್ತೇನೆ: ಜೈಲಿನಿಂದ ಹೊರಬಂದ ಜುಬೇರ್‌ ಮಾತು

    ನವದೆಹಲಿ: ಟ್ವೀಟ್‌ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿ ಕಾನೂನು ಸಮರ ಎದುರಿಸಿದ್ದ ಫ್ಯಾಕ್ಟ್‌ ಚೆಕಿಂಗ್‌ ವೆಬ್‌ಸೈಟ್‌ ‘ಆಲ್ಟ್‌ ನ್ಯೂಸ್’ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್‌ ಜುಬೇರ್‌ ಆರೋಪ ಮುಕ್ತರಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ ಬಿಡುಗಡೆ ನಂತರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಗೌರವಾನ್ವಿತ ನ್ಯಾಯಾಲಯವು ಯಾವುದೇ ನಿರ್ಬಂಧವನ್ನು ಹಾಕದ ಕಾರಣ ನಾನು ನನ್ನ ಕೆಲಸವನ್ನು ಎಂದಿನಂತೆ ಮುಂದುವರಿಸುತ್ತೇನೆ ಎಂದು ಜುಬೇರ್‌ ಹೇಳಿದ್ದಾರೆ. ಇದನ್ನೂ ಓದಿ: ಶೀಘ್ರವೇ ಷರೀಫ್-ಮೋದಿ ಭೇಟಿ ಸಾಧ್ಯತೆ

    SUPREME COURT

    ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ, ನಾನು ಮೊದಲಿನಂತೆ ಕೆಲಸ ಮಾಡುತ್ತೇನೆ ಎಂದು ಮೊಹಮ್ಮದ್‌ ಜುಬೇರ್‌ ತಿಳಿಸಿದ್ದಾರೆ. ತಮ್ಮ ಟ್ವೀಟ್‌ಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೂನ್ 27 ರಂದು ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿ ಅವರ ವಿರುದ್ಧ ಇನ್ನೂ ಏಳು ಎಫ್‌ಐಆರ್‌ಗಳು ದಾಖಲಾಗಿವೆ.

    ಬಂಧನದ ಅಧಿಕಾರವನ್ನು ಸರಿಯಾಗಿ ಬಳಿಸಿಕೊಳ್ಳಬೇಕು ಎಂಬುದು ಕಾನೂನು ತತ್ವವಾಗಿದೆ. ಪ್ರಸ್ತುತ ಪ್ರಕರಣದಲ್ಲಿ ಅವರನ್ನು ನಿರಂತರವಾಗಿ ಬಂಧನದಲ್ಲಿ ಇರಿಸುವುದು, ವಿವಿಧ ನ್ಯಾಯಾಲಯಗಳಲ್ಲಿ ಅಂತ್ಯವಿಲ್ಲದ ವಿಚಾರಣೆಗೆ ಒಳಪಡಿಸಲು ಯಾವುದೇ ಸಮರ್ಥನೆ ಇಲ್ಲ ಎಂದು ಜುಬೇರ್‌ ಬಿಡುಗಡೆ ಆದೇಶದಲ್ಲಿ ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಇದನ್ನೂ ಓದಿ: ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ

    ಮೊಹಮ್ಮದ್ ಜುಬೇರ್ ವಿರುದ್ಧ ಯುಪಿಯಲ್ಲಿ ವಿಶೇಷ ತನಿಖೆ ನಡೆಸುವುದನ್ನು ನ್ಯಾಯಾಲಯ ರದ್ದುಗೊಳಿಸಿತು. ಅವರ ವಿರುದ್ಧ ಯುಪಿಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿತು. ಮೊಹಮ್ಮದ್ ಜುಬೇರ್ ಟ್ವೀಟ್ ಮಾಡುವುದನ್ನು ನಿಲ್ಲಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ಮನವಿಯನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದರು.

    Live Tv
    [brid partner=56869869 player=32851 video=960834 autoplay=true]

  • ಅಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು

    ಅಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು

    ನವದೆಹಲಿ: ಅಲ್ಟ್‌ ನ್ಯೂಸ್ ಸಹ ಸಂಸ್ಥಾಪಕ, ಕರ್ನಾಟಕ ಮೂಲದ ಪತ್ರಕರ್ತ ಮೊಹಮ್ಮದ್ ಜುಬೇರ್‌ಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಜಾಮೀನು ನೀಡಿದೆ. 50,000 ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಒರ್ವ ಶ್ಯೂರಿಟಿ ಷರತ್ತಿಗೆ ಒಳಪಟ್ಟು ಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಜುಬೈರ್ ಪರ ವಕೀಲರಾದ ವೃಂದಾ ಗ್ರೋವರ್ ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ಗುರುವಾರ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೇವೇಂದ್ರ ಕುಮಾರ್ ಜಂಗಾಲ ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಗರ್ಭಪಾತ ಬೇಡ, ಮಗುವಿಗೆ ಜನ್ಮ ನೀಡಿ ದತ್ತು ಕೊಡಿ – ದೆಹಲಿ ಹೈಕೋರ್ಟ್

    court order law

    ಮೊಹಮ್ಮದ್ ಜುಬೇರ್ ಟ್ವೀಟ್‌ಗಳ ಮೂಲಕ ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಬಿತ್ತುತ್ತಿದ್ದಾರೆ. ಉದ್ದೇಶ ಪೂರ್ವಕವಾಗಿ ಧರ್ಮಗಳು ಮತ್ತು ಧಾರ್ಮಿಕ ಮುಖಂಡರ ವಿರುದ್ಧ ಟ್ವೀಟ್ ಮಾಡಿ ಸಮಾಜದ ಸ್ವಾಸ್ಥ್ಯ ಹದಗೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೆಹಲಿ ಪೊಲೀಸರು ಬಂಧಿಸಿದ್ದರು. ತರುವಾಯ, ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆ, 2010 ರ ಸೆಕ್ಷನ್ 35 ಮತ್ತು IPC ಸೆಕ್ಷನ್ 201 (ಸಾಕ್ಷ್ಯ ನಾಶ) ಮತ್ತು 120B (ಅಪರಾಧದ ಪಿತೂರಿ) ಅಡಿಯಲ್ಲಿ ಅಪರಾಧಗಳನ್ನು ಸೇರಿಸಲಾಗಿತ್ತು.

    ಈ ಹಿಂದೆ ಪ್ರಕರಣ ವಿಚಾರಣೆ ನಡೆಸಿದ್ದ, ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜುಬೈರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಈ ಆದೇಶವನ್ನು ಪ್ರಶ್ನೆ ಮಾಡಿ ಪಟಿಯಾಲ ಹೌಸ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಸಂಸತ್‌ ಅಧಿವೇಶನದಲ್ಲಿ ಧರಣಿ ನಡೆಸುವಂತಿಲ್ಲ: ಆದೇಶ ಪ್ರಕಟ

    ಹಿಂದೂ ದೇವರನ್ನು ಅವಮಾನಿಸುವ ಉದ್ದೇಶದಿಂದ ಜುಬೈರ್ ಪ್ರಶ್ನಾರ್ಹ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಹನುಮಾನ್ ಭಕ್ತ್ ಎಂಬ ಟ್ವಿಟ್ಟರ್‌ ಹ್ಯಾಂಡಲ್‌ನಿಂದ ಜುಬೈರ್ ವಿರುದ್ಧದ ಪ್ರಕರಣವನ್ನು ಆಧರಿಸಿ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಮೊಹಮ್ಮದ್ ಜುಬೇರ್ ಟ್ವೀಟ್ ಮಾಡಿದ ಚಿತ್ರವು 1983 ರ ‘ಕಿಸ್ಸಿ ಸೆ ನಾ ಕೆಹನಾ’ ಚಿತ್ರದ ಸ್ಕ್ರೀನ್‌ಶಾಟ್ ಎಂದು ಅವರ ವಕೀಲರು ವಿಚಾರಣೆ ವೇಳೆ ಸಮರ್ಥಿಸಿಕೊಂಡಿದ್ದರು.

    ಜುಬೇರ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಜುಲೈ 8 ರಂದು ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಸೀತಾಪುರ್ ಪೋಲೀಸರು ದೂರು ದಾಖಲಿಸಿಕೊಂಡಿದ್ದರು. ಲಖಿಂಪುರ ಖೇರಿ ಜಿಲ್ಲೆಯಲ್ಲಿ ದಾಖಲಾದ ಮತ್ತೊಂದು ಎಫ್‌ಐಆರ್‌ನಲ್ಲಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಜಾಮೀನು

    ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಜಾಮೀನು

    ನವದೆಹಲಿ: ಧಾರ್ಮಿಕ ನಾಯಕರ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಉತ್ತರ ಪ್ರದೇಶ ಪೊಲೀಸರಿಂದ ಬಂಧನಕ್ಕೊಳಗಾದ ಕರ್ನಾಟಕ ಮೂಲದ ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಸುಪ್ರೀಂ ಕೋರ್ಟ್ ಐದು ದಿನಗಳ ಜಾಮೀನು ನೀಡಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಇಂದಿರಾ ಬ್ಯಾನರ್ಜಿ, ನ್ಯಾ.ಜೆ.ಕೆ ಮಹೇಶ್ವರಿ ಪೀಠ ಜಾಮೀನು ಮಂಜೂರು ಮಾಡಿದೆ.

    ಜುಬೇರ್ ಪರ ವಾದ ಮಂಡಿಸಿದ, ಹಿರಿಯ ವಕೀಲ ಕಾಲಿನ್ ಗೊನ್ಸಾಲ, ಮೊಹಮ್ಮದ್ ಜುಬೇರ್ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ಹೂಡಲು ಸಾಧ್ಯವಿಲ್ಲ. ಒಂದು ಟ್ವೀಟ್ ಆಧಾರದ ಮೇಲೆ ದೂರು ದಾಖಲಿಸಿಕೊಳ್ಳಲಾಗಿದೆ. ಪೊಲೀಸ್ ಮತ್ತು ನ್ಯಾಯಾಂಗ ಬಂಧನ ಪ್ರಶ್ನೆಗಳು ಅಪ್ರಸ್ತುತವಾಗಿದೆ. ನನ್ನ ಟ್ವೀಟ್ ಬಗ್ಗೆ ನಾನು ಒಪ್ಪಿಕೊಂಡಿದ್ದೇನೆ ಇದು ಅಪರಾಧವಾ? ಇದನ್ನು ತನಿಖೆ ನಡೆಸುವ ಅಗತ್ಯವಿಲ್ಲ. ಪ್ರಕರಣದ ಎಲ್ಲ ಪ್ರಕ್ರಿಯೆಗಳನ್ನು ರದ್ದು ಮಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕಾಳಿಗೆ ಅವಮಾನ : ನಿರ್ಮಾಪಕಿ ಲೀನಾ ಮಣಿಮೇಕಲೈಗೆ ಲುಕ್ ಔಟ್ ಸಂಕಟ

    SUPREME COURT

    ಇದಕ್ಕೆ ಉತ್ತರ ಪ್ರದೇಶ ಪೊಲೀಸರ ಪರ ವಾದ ಪ್ರತಿವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೆಳ ಹಂತದ ನ್ಯಾಯಾಲಯ ಜಾಮೀನು ರದ್ದು ಮಾಡಿದೆ. 14 ದಿನಗಳ ಕಸ್ಟಡಿ ನೀಡಿದೆ. ಆರೋಪಿ ಉದ್ದೇಶ ಪೂರ್ವಕವಾಗಿ ಟ್ವೀಟ್‌ ಮಾಡಿದ್ದಾರೆ.‌ ಈ ರೀತಿಯ ಟ್ವೀಟ್‌ಗಳನ್ನು ಕೋರ್ಟ್ ಪ್ರೋತ್ಸಾಹಿಸಬಾರದು.

    ಆರೋಪಿ ವಿರುದ್ಧ 295A (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ) ಮತ್ತು 153A (ಧರ್ಮ, ಜನಾಂಗ, ಜನ್ಮಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಾಥಮಿಕ ಪ್ರಕರಣ ದಾಖಲಿಸಲಾಗಿದೆ. ಈ ಹಿನ್ನೆಲೆ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ವಾದ ಪ್ರತಿವಾದ ಆಲಿಸಿದ ಕೋರ್ಟ್, ಯಾವುದೇ ತಾಂತ್ರಿಕ ಸಾಕ್ಷ್ಯಗಳನ್ನು ನಾಶ ಮಾಡದಂತೆ ಷರತ್ತು ವಿಧಿಸಿ ಐದು ದಿನಗಳ ಜಾಮೀನು ನೀಡಿತು. ಮತ್ತು ಪ್ರಕರಣ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ರಜೆ ಕಾಲದ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಪೀಠ ಹೇಳಿತು.

    ಮೊಹಮ್ಮದ್ ಜುಬೇರ್ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಹಿಂದೂ ಧಾರ್ಮಿಕ ಮುಖಂಡರ ವಿರುದ್ಧ ಅವಹೇಳನಕಾರಿ ಟ್ವೀಟ್‌ ಮಾಡಿದ ಹಿನ್ನೆಲೆ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. ಇದಕ್ಕೂ ಮುನ್ನ ದೆಹಲಿ ಪೊಲೀಸರು 2018 ರಲ್ಲಿ ಮಾಡಿದ ವಿವಾದಾತ್ಮಕ ಟ್ವೀಟ್ ಕಾರಣಕ್ಕೆ ಬಂಧಿಸಿದ್ದರು‌. ಸದ್ಯ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು‌, ದೆಹಲಿ ಪೊಲೀಸರ ಮುಂದೆ ಜುಬೇರ್ ಹಾಜರಾಗಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ – 14 ದಿನ ನ್ಯಾಯಾಂಗ ಬಂಧನ

    ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ – 14 ದಿನ ನ್ಯಾಯಾಂಗ ಬಂಧನ

    ನವದೆಹಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಜಾಮೀನು ಅರ್ಜಿಯನ್ನು ಪಟಿಯಾಲ ಹೈಕೋರ್ಟ್ ಶನಿವಾರ ನಿರಾಕರಿಸಿದೆ ಹಾಗೂ 14 ದಿನಗಳ ನ್ಯಾಯಾಂಗ ಬಂಧನವನ್ನು ನೀಡಿದೆ.

    2018ರಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತಹ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಹಿನ್ನೆಲೆ ಜುಬೇರ್ ಅವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಬಂಧನದ ಬಳಿಕ ಅವರ ಟ್ವಿಟ್ಟರ್ ಖಾತೆಯಲ್ಲಿ ಹೆಚ್ಚಾಗಿ ಪಾಕಿಸ್ತಾನದ ಹಾಗೂ ಮಧ್ಯಪ್ರಾಚ್ಯ ರಾಷ್ಟ್ರಗಳ ಖಾತೆಗಳಿಂದ ಬೆಂಬಲ ವ್ಯಕ್ತವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಿಜೆಪಿ ನಾಯಕರೊಂದಿಗೆ ಟೈಲರ್‌ ಹಂತಕರಿರೋ ಫೋಟೋ ವೈರಲ್‌ – BJPಗೂ ಹಂತಕರಿಗೂ ಇದ್ಯಾ ನಂಟು?

    ಮೊಹಮ್ಮದ್ ಜುಬೇರ್ ಬಂಧನದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಪೋಸ್ಟ್‌ಗಳು ಹಾಗೂ ಹ್ಯಾಶ್‌ಟ್ಯಾಗ್‌ಗಳು ಹರಿದಾಡಿವೆ. ದೆಹಲಿ ಪೊಲೀಸರ ಪ್ರಕಾರ ಜುಬೇರ್ ಅವರಿಗೆ ಬೆಂಬಲಿಸಿ ಟ್ವೀಟ್ ಮಾಡುತ್ತಿರುವ ಹೆಚ್ಚಿನ ಬಳಕೆದಾರರು ಪಾಕಿಸ್ತಾನ, ಯುಎಇ, ಕುವೈತ್‌ಗಳಂತಹ ಮಧ್ಯಪ್ರಾಚ್ಯ ದೇಶದವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಣಿಪುರದಲ್ಲಿ ಭೂಕುಸಿತ – 3 ದಿನಗಳಿಂದ 24 ಸಾವು, 38 ಜನ ನಾಪತ್ತೆ

    ಮೊಹಮ್ಮದ್ ಜುಬೇರ್ ಅವರ 4 ದಿನಗಳ ಬಂಧನ ಶನಿವಾರ ಕೊನೆಗೊಂಡ ಬಳಿಕ ದೆಹಲಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಕೋರಿದ್ದಾರೆ. ಪ್ರಕರಣದಲ್ಲಿ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಎಫ್‌ಐಆರ್‌ನಲ್ಲಿ ಅದಕ್ಕೆ ಸಂಬಂಧಿಸಿದ ಸೆಕ್ಷನ್‌ಗಳನ್ನು ಸೇರಿಸಿದ್ದಾರೆ.

    Live Tv

  • ಪತ್ರಕರ್ತರು ಏನೇ ಬರೆದ್ರೂ ಅರೆಸ್ಟ್ ಮಾಡುವಂತಿಲ್ಲ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರ

    ಪತ್ರಕರ್ತರು ಏನೇ ಬರೆದ್ರೂ ಅರೆಸ್ಟ್ ಮಾಡುವಂತಿಲ್ಲ: ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ವಕ್ತಾರ

    ವಾಷಿಂಗ್ಟನ್: ಪತ್ರಕರ್ತರು ಏನು ಬರೆಯುತ್ತಾರೆ, ಅವರು ಏನು ಟ್ವೀಟ್ ಮಾಡುತ್ತಾರೆ ಈ ಕಾರಣಕ್ಕೆ ಅವರನ್ನು ಜೈಲಿಗೆ ಹಾಕಬಾರದು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರ ವಕ್ತಾರರು ಹೇಳಿದ್ದಾರೆ.

    ಭಾರತದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಬಂಧನವನ್ನು ಉಲ್ಲೇಖಿಸಿ ಆಂಟೋನಿಯೊ ವಕ್ತಾರ ಸ್ಟೀಫನ್ ಡುಜಾರಿಕ್ ಪ್ರತಿಕ್ರಿಯಿಸಿ, ಮೊದಲನೆಯದಾಗಿ ನಾನು ಪ್ರಪಂಚದಾದ್ಯಂತ ಯಾವುದೇ ಸ್ಥಳದಲ್ಲಿ ಜನರು ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡುವುದು ಬಹಳ ಮುಖ್ಯ ಎಂದು ಭಾವಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: AltNews ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅರೆಸ್ಟ್‌

    ಪತ್ರಕರ್ತರು ಮುಕ್ತವಾಗಿ ಮತ್ತು ಯಾವುದೇ ಕಿರುಕುಳ, ಬೆದರಿಕೆಯಿಲ್ಲದೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ಮಾಡಿಕೊಡಬೇಕು. ಪತ್ರಕರ್ತರು ಏನು ಬರೆಯುತ್ತಾರೆ, ಅವರು ಏನು ಟ್ವೀಟ್ ಮಾಡುತ್ತಾರೆ ಎಂದು ಅವರನ್ನು ಜೈಲಿಗೆ ಹಾಕಬಾರದು. ಪತ್ರಕರ್ತ ಮೊಹಮ್ಮದ್ ಜುಬೇರ್ ಬಂಧನವು ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಂತಾಗಿದೆ ಎಂದು ಹೇಳಿದರು.

    ಫ್ಯಾಕ್ಟ್ ಚೆಕ್ ವೆಬ್‍ಸೈಟ್ AltNews ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರನ್ನು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಅಡಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: 3 ದಿನದ ಮಗುವನ್ನು ಆಸ್ಪತ್ರೆಯಿಂದ ಹೊತ್ತೊಯ್ದು ಕಚ್ಚಿ ಕೊಂದ ಬೀದಿನಾಯಿ

    Live Tv

  • AltNews ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅರೆಸ್ಟ್‌

    AltNews ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅರೆಸ್ಟ್‌

    ನವದೆಹಲಿ: ಫ್ಯಾಕ್ಟ್‌ ಚೆಕ್‌ ವೆಬ್‌ಸೈಟ್‌ AltNews ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

    ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಅಡಿ ಪೊಲೀಸರು ಬಂಧಿಸಿದ್ದಾರೆ.

    AltNews ಸಂಸ್ಥಾಪಕ ಪ್ರತಿಕ್‌ ಸಿನ್ಹಾ ಪ್ರತಿಕ್ರಿಯಿಸಿ, ದೆಹಲಿ ಪೊಲೀಸರು ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆದಿದ್ದರು. ಆದರೆ ಈ ಪ್ರಕರಣದಲ್ಲಿ ಅರೆಸ್ಟ್‌ ಮಾಡಿದ್ದಾರೆ. ಆದರೆ ಐಎಫ್‌ಐಆರ್‌ ಕಾಪಿ ನೀಡಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಜೊತೆ ಮಹಾರಾಷ್ಟ್ರ ಸರ್ಕಾರಕ್ಕೆ ನಂಟು? – ಬಂಡಾಯಕ್ಕೆ ಇದೇ ಕಾರಣ

    ಜುಬೇರ್‌ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಬಹಳಷ್ಟು ಸ್ಯಾಕ್ಷ್ಯಗಳನ್ನು ಸಂಗ್ರಹಿಸಿದ ಬಳಿಕ ಅರೆಸ್ಟ್‌ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಬಳಿಕ ತಮ್ಮ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆಯಿದೆ.

    Live Tv