Tag: ಮೋಟಾರ್ ಬೈಕ್

  • ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಬುಲೆಟ್ ಸವಾರಿ – ವೀಡಿಯೋ ವೈರಲ್

    ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಬುಲೆಟ್ ಸವಾರಿ – ವೀಡಿಯೋ ವೈರಲ್

    ಭೋಪಾಲ್: ಮಧ್ಯಪ್ರದೇಶದ ಮೊವ್‍ನಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Congress MP Rahul Gandhi) ಅವರು ಮೋಟಾರ್ ಬೈಕ್ (Motorbike) (ರಾಯಲ್ ಎನ್‍ಫೀಲ್ಡ್ ಬುಲೆಟ್) (Royal Enfield Bullet) ಚಲಾಯಿಸುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಆಕರ್ಷಿಸಿದ್ದಾರೆ.

    ಈ ವೀಡಿಯೋವನ್ನು ಕಾಂಗ್ರೆಸ್ (Congress) ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಾಹುಲ್ ಗಾಂಧಿ ಬೈಕ್ ಮೇಲೆ ಬರುತ್ತಿದ್ದರೆ, ಭದ್ರತಾ ಸಿಬ್ಬಂದಿ ಮತ್ತು ಪಕ್ಷದ ಕಾರ್ಯಕರ್ತರು ಅವರನ್ನು ಹುರಿದುಂಬಿಸುತ್ತಿರುವುದನ್ನು ಹಾಗೂ ಹೋಗಲು ದಾರಿ ಮಾಡಿಕೊಡುತ್ತಿರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಬಿಜೆಪಿಯ ಕಲ್ಲು ತೂರಾಟದಿಂದ ಬಾಲಕನಿಗೆ ಗಾಯ – ಎಎಪಿ ಗುಜರಾತ್ ಮುಖ್ಯಸ್ಥನಿಂದ ಆರೋಪ

    ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ಮಧ್ಯಪ್ರದೇಶದ ಮೊರ್ಟಕ್ಕ ಗ್ರಾಮದಿಂದ ಪುನಾರಂಭವಾಯಿತು. ಗುರುವಾರ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಪತಿ ರಾಬರ್ಟ್ ವಾದ್ರಾ ಅವರು ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ : ಭಾರತ್ ಜೋಡೋ ಪಾದಯಾತ್ರೆಯಲ್ಲಿ ಮುಗ್ಗರಿಸಿ ಬಿದ್ದ ದಿಗ್ವಿಜಯ್‌ ಸಿಂಗ್

    ಮಧ್ಯಪ್ರದೇಶದ ಭಾರತ್ ಜೋಡೋ ಪಾದಯಾತ್ರೆ ನಡುವೆ ಶನಿವಾರ ಚಹಾ ವಿರಾಮಕ್ಕೆಂದು ರಸ್ತೆಬದಿಯ ರೆಸ್ಟೋರೆಂಟ್‍ಗೆ ಚಲಿಸುತ್ತಿದ್ದಾಗ ದಿಗ್ವಿಜಯ್ ಸಿಂಗ್ ಅವರು ಕೆಳಗೆ ಬಿದ್ದು, ಗಾಯಗೊಂಡಿದ್ದಾರೆ. ಈ ವೇಳೆ ತಕ್ಷಣವೇ ಕಾಂಗ್ರೆಸ್ ಕಾರ್ಯಕರ್ತರು ದಿಗ್ವಿಜಯ್ ಸಿಂಗ್ ಅವರ ಕೈ ಹಿಡಿದು ಮೇಲಕ್ಕೆತ್ತಿ ಸಹಾಯ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಾರು, ಮೋಟಾರ್ ಬೈಕ್ ಡಿಕ್ಕಿ – ಝೊಮ್ಯಾಟೋ ಡೆಲಿವರಿ ಬಾಯ್, ಇಬ್ಬರು ಯುವತಿಯರು ಸಾವು

    ಕಾರು, ಮೋಟಾರ್ ಬೈಕ್ ಡಿಕ್ಕಿ – ಝೊಮ್ಯಾಟೋ ಡೆಲಿವರಿ ಬಾಯ್, ಇಬ್ಬರು ಯುವತಿಯರು ಸಾವು

    ನವದೆಹಲಿ: ಕಾರು ಮತ್ತು ಮೋಟಾರ್ ಬೈಕ್ ಡಿಕ್ಕಿಯಾಗಿ ಝೊಮ್ಯಾಟೋ ಡೆಲಿವರಿ ಬಾಯ್ ಸೇರಿ ಇಬ್ಬರು ಹದಿಹರೆಯದವರು ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ಈಶಾನ್ಯ ದೆಹಲಿಯ ಶಕರ್‌ಪುರ್ ಪ್ರದೇಶದಲ್ಲಿ ನಡೆದಿದೆ.

    ಜ್ಯೋತಿ (17) ಮತ್ತು ಭಾರತಿ (19) ಮೃತ ದುರ್ದೈವಿಗಳು. ಯುವತಿಯರು ಮತ್ತು ಅವರ ಕುಟುಂಬದ ಇತರ ಐವರು ಪಶ್ಚಿಮ ದೆಹಲಿಯ ಪೀರಾಗರ್ಹಿಯಿಂದ ಕರ್ಕರ್ಡೂಮಾದಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದರು. ಕಾರಿನ ಮುಂಬದಿಯಲ್ಲಿ ಮೂವರು ಕುಳಿತಿದ್ದರೆ, ನಾಲ್ವರು ಹಿಂದೆ ಕುಳಿತಿದ್ದರು. ಈ ವೇಳೆ ಕಾರು ಲಕ್ಷ್ಮಿನಗರದಲ್ಲಿ ಹಾದು ಹೋಗುತ್ತಿದ್ದಾಗ ಝೊಮ್ಯಾಟೋ ಡೆಲಿವರಿ ಬಾಯ್ ಬೈಕ್ ಅಡ್ಡ ಬಂದಿದೆ. ಈ ವೇಳೆ ಕಾರು ಬೈಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ನರ್ಸ್ ಮೃತದೇಹ ಪತ್ತೆ – ಅತ್ಯಾಚಾರ ಆರೋಪ ಮಾಡಿದ ಕುಟುಂಬಸ್ಥರು

    ಪಲ್ಟಿಯಾದ ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತ ಝೊಮ್ಯಾಟೋ ಡೆಲಿವರಿ ಬಾಯ್ ಯಾರು ಎಂದು ಇನ್ನೂ ಗುರುತಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಅಪಘಾತದ ನಂತರ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯ ಅಧಿಕಾರಿಗಳು, ಯಾವುದೇ ಹಾಸಿಗೆ ಲಭ್ಯವಿಲ್ಲ ಎಂದು ಹೇಳಿದರು. ಅವರು ಹಾಸಿಗೆಯ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದಂತೆ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಇದನ್ನೂ ಓದಿ:  ಆ್ಯಸಿಡ್ ದಾಳಿಗೆ ಒಳಗಾದ ಯುವತಿ ಚಿಕಿತ್ಸೆಗೆ 1 ಲಕ್ಷ ರೂ. ಚಕ್ ಕೊಟ್ಟ 

    ಗ್ರಾಹಕರಿಗೆ ಆರ್ಡರ್ ಮಾಡಿದ ಆಹಾರವನ್ನು 10 ನಿಮಿಷದಲ್ಲಿ ತಲುಪಿಸಲಾಗುವುದು ಎಂದು ಝೊಮ್ಯಾಟೋ ಘೋಷಿಸಿದ ಒಂದು ತಿಂಗಳ ನಂತರ ಈ ರೀತಿಯ ಅನಾಹುತಗಳು ಸಂಭವಿಸುತ್ತಿವೆ. ನಿಗದಿತ ಸಮಯಕ್ಕೆ ಆರ್ಡರ್ ಡೆಲಿವರಿ ಮಾಡುವ ಧಾವಂತದಲ್ಲಿ ಇಂತಹ ದುರಂತಗಳು ಸಂಭವಿಸುತ್ತಿರುವುದು ಡೆಲಿವರಿ ಬಾಯ್‍ಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.