Tag: ಮೋಡ

  • ರಾಜ್ಯಾದ್ಯಂತ ನಾಳೆ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ!

    ರಾಜ್ಯಾದ್ಯಂತ ನಾಳೆ ಭಾರೀ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ!

    ಬೆಂಗಳೂರು: ತೆಲಂಗಾಣದಿಂದ ತಮಿಳುನಾಡಿನವರೆಗೂ ಮೋಡಗಳ ಸಾಲು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪಬ್ಲಿಕ್ ಟಿವಿಗೆ ಮಳೆಯಾಗುವ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದ್ದಾರೆ.

    ಮಳೆಯ ಜೊತೆ ಗುಡುಗು, ಮಿಂಚು, ಗಾಳಿ ಬೀಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕೂಡ ಮೋಡ ಕವಿದ ವಾತಾವರಣವಿರಲಿದ್ದು. ಅಲ್ಲಲ್ಲಿ ಚುದುರಿದ ಮಳೆಯಾಗಲಿದೆ ಎಂದು ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

  • ಇಂದು, ನಾಳೆ ರಾಜ್ಯಾದ್ಯಂತ ಸುರಿಯಲಿದೆ ಮಳೆ

    ಇಂದು, ನಾಳೆ ರಾಜ್ಯಾದ್ಯಂತ ಸುರಿಯಲಿದೆ ಮಳೆ

    ಬೆಂಗಳೂರು: ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

    ಪಬ್ಲಿಕ್ ಟಿವಿಗೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪ್ರತಿಕ್ರಿಯಿಸಿ, ಛತ್ತೀಸ್‍ಗಡ ದಿಂದ ತಮಿಳುನಾಡುವರೆಗೆ ಟ್ರಫ್ (ಮೋಡಗಳ ಸಾಲು) ಇರುವ ಹಿನ್ನೆಲೆಯಲ್ಲಿ ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದರು.

    ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಕೂಡ ಮಳೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.