Tag: ಮೋದಿ ಕ್ಯಾಬಿನೆಟ್

  • ಜೀವನದ ಅತಿದೊಡ್ಡ ಸವಾಲು, ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೆಲಸ ಮಾಡ್ತೀನಿ: ಹೆಚ್‌ಡಿಕೆ

    ಜೀವನದ ಅತಿದೊಡ್ಡ ಸವಾಲು, ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೆಲಸ ಮಾಡ್ತೀನಿ: ಹೆಚ್‌ಡಿಕೆ

    – ಕುಮಾರಸ್ವಾಮಿ ಮುಗಿದೇ ಹೋದ ಅನ್ನುವಾಗಲೇ ಒಂದು ಶಕ್ತಿ ಕಾಪಾಡಿದೆ ಎಂದ ಸಚಿವ

    ನವದೆಹಲಿ: ನನ್ನ ವಿಚಾರದಲ್ಲಿ ವಿಶೇಷವಾದ ನಂಬಿಕೆ ಇಟ್ಟು ಖಾತೆ ನೀಡಿದ್ದಾರೆ. ನನ್ನ ಮೇಲೆ ಸವಾಲಿದೆ. ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವತ್ತ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಿದ್ದಾರೆ. ವಿಶ್ವಾಸ ಇಟ್ಟು ಖಾತೆ ಹಂಚಿಕೆ ಮಾಡಿದ್ದಾರೆ. ಪ್ರಹ್ಲಾದ್ ಜೋಶಿಯವರಿಗೆ ಆಹಾರ ಖಾತೆ ಕೊಟ್ಟಿದ್ದಾರೆ. ನನಗೆ ದೊಡ್ಡ, ಪ್ರಮುಖವಾದ ಇಲಾಖೆ ನೀಡಿದ್ದಾರೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ನಿರೀಕ್ಷೆ ಮಾಡಿ ಖಾತೆ ನೀಡಿದ್ದಾರೆ. ಕನ್ನಡಿಗರ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ – ಜೆ.ಪಿ ನಡ್ಡಾಗೆ ಆರೋಗ್ಯ ಖಾತೆ ಗಿಫ್ಟ್

    ಕರ್ನಾಟಕಕ್ಕೆ ಅಂತ ಮಾತ್ರ ಹೇಳಲ್ಲ. ದೇಶಾದ್ಯಂತ ಸುತ್ತಾಡಿ, ಬದಲಾವಣೆ ತರಬೇಕು ಎಂದು ಬಯಸಿದ್ದೇನೆ. ನನ್ನ ಜೀವನದಲ್ಲಿ ಅತಿ ದೊಡ್ಡ ಸವಾಲು ಇದು. ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ಇವೆ. ಅವುಗಳನ್ನು ಈಗ ಚರ್ಚೆ ಮಾಡುವುದಿಲ್ಲ. ದೇಶದ ಪ್ರಗತಿಗೆ ಕೆಲಸ ಮಾಡಬೇಕಿದೆ. ಎಲ್ಲವನ್ನು ಗಮನಿಸಿ ಇಲಾಖೆಯನ್ನು ಮೋದಿ (Narendra Modi) ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ ಕ್ಷಣ ವ್ಯರ್ಥ ಮಾಡದೇ ಕೆಲಸ ಮಾಡುತ್ತೇನೆ. ರೂಟ್‌ಮ್ಯಾಪ್ ಸಿದ್ಧಮಾಡಿ ಕೆಲಸ ಮಾಡುತ್ತೇನೆ. ನನ್ನದೇ ಕಲ್ಪನೆಯಲ್ಲಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಜೈಲಿನಲ್ಲಿರೋ ಹೇಮಂತ್ ಸೊರೆನ್ ಪತ್ನಿ ಜಾರ್ಖಂಡ್ MLA ಆಗಿ ಪ್ರಮಾಣವಚನ ಸ್ವೀಕಾರ!

    ಶೋಭಾ ಅವರಿಗೂ ಉತ್ತಮ ಖಾತೆ ಸಿಕ್ಕಿದೆ. ದೇಶದ ಪ್ರಗತಿಗೆ ನಾವು ಕೆಲಸ ಮಾಡುತ್ತೇವೆ. ಹೊಸ ಇತಿಹಾಸ ಕರ್ನಾಟಕದಲ್ಲಿ ತರುವುದು ಮಾತ್ರವಲ್ಲ, ದೇಶದ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇವೆ. ಕೃಷಿ ಖಾತೆ ನಿರೀಕ್ಷೆ ಇತ್ತು, ಆದರೆ ಮೋದಿ ತೀರ್ಮಾನ ಮಾಡಿದ್ದಾರೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಎಲ್ಲದರ ಬಗ್ಗೆ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: Modi Cabinet: ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ – ಬಲಿಷ್ಠ ಖಾತೆಗಳನ್ನು ತನ್ನಲ್ಲೇ ಉಳಿಸಿಕೊಂಡ ಬಿಜೆಪಿ – ಇಲ್ಲಿದೆ ಲಿಸ್ಟ್

    ಜೆಡಿಎಸ್ ಪಕ್ಷ ಏಳು-ಬೀಳುಗಳನ್ನು ಕಂಡಿದೆ. ದೇವೇಗೌಡರನ್ನು ಇಂದು ಸ್ಮರಿಸುತ್ತೇನೆ. ದೇವೇಗೌಡರ ರಾಜಕೀಯ ಮುಗಿದೇ ಹೋಯಿತು ಎನ್ನುವಾಗ ಮತ್ತೆ ಪುಟಿದೆದ್ದಿದ್ದಾರೆ. ಕುಮಾರಸ್ವಾಮಿ ಮುಗಿದು ಹೋದ ಎನ್ನುವಾಗಲೇ ಯಾವುದೋ ಶಕ್ತಿ ಕಾಪಾಡಿದೆ. ಈ ಪಕ್ಷವನ್ನು ಯಾವುದೋ ಶಕ್ತಿ ಮೇಲೆತ್ತಿದೆ. ಪಕ್ಷದ ಸಂಘಟನೆ ಮಾಡುವ ಸಮರ್ಥ ನಾಯಕರು ರಾಜ್ಯದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Modi cabinet: ಕರ್ನಾಟಕದ ನಾಲ್ವರು ಸಚಿವರಿಗೆ ಬಂಪರ್‌ – ಯಾರಿಗೆ ಯಾವ ಖಾತೆ?

  • ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ: ಭಾವುಕರಾದ ನಾರಾಯಣಸ್ವಾಮಿ

    ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ: ಭಾವುಕರಾದ ನಾರಾಯಣಸ್ವಾಮಿ

    ನವದೆಹಲಿ: ಓರ್ವ ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿದೆ ಅನ್ನೋದಕ್ಕೆ ರಾಷ್ಟ್ರಕ್ಕೆ ನಾನೇ ಸಾಕ್ಷಿ ಎಂದು ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಭಾವುಕರಾದರು.

    ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಖಚಿತವಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ನಾರಾಯಣಸ್ವಾಮಿ ಆಗಮಿಸಿದ್ದರು. ನಿವಾಸದಿಂದ ಹೊರ ಬರುತ್ತಲೇ ಕೇಂದ್ರದ ಸಚಿವನಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ನಾರಾಯಣಸ್ವಾಮಿ, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಪಕ್ಷ ಅವಕಾಶ ನೀಡಿದೆ. ಸಿಕ್ಕ ಅವಕಾಶವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.

    ಸಂಸದ ನಾರಾಯಣಸ್ವಾಮಿಗೆ ಏಕೆ ಸ್ಥಾನ?
    ಎಸ್‍ಸಿ ಎಡಗೈ ಸಮುದಾಯದ ಕೋಟಾ ಇತ್ತು. ಮೊದಲ ಅವಧಿಯಲ್ಲಿ ಮೋದಿ ಸಂಪುಟದಲ್ಲಿ ವಿಜಯಪುರದ ಸಂಸದ ರಮೇಶ್ ಜಿಗಜಿಣಗಿ ಸ್ಥಾನ ಕೊಡಲಾಗಿತ್ತು. ಆದರೆ ಎರಡನೇ ಅವಧಿಯಲ್ಲಿ ಸ್ಥಾನವನ್ನ ಕೊಟ್ಟಿರಲಿಲ್ಲ. ಹಾಗಾಗಿ ಆ ಕೋಟಾದಲ್ಲಿ ನಾರಾಯಣಸ್ವಾಮಿಗೆ ಸ್ಥಾನ ನೀಡಲಾಗಿದೆ. ಇನ್ನೂ ನಾರಾಯಣಸ್ವಾಮಿ ಅವರು ಬಿ.ಎಲ್.ಸಂತೋಷ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು.

    ಶೋಭಾ ಕರಂದ್ಲಾಜೆ ಕೇಂದ್ರ ಸಂಪುಟ ಸೇರ್ಪಡೆಯಾದ ರಾಜ್ಯದ ಐದನೇ ಸಂಸದೆಯಾಗಲಿದ್ದಾರೆ. ಈ ಹಿಂದೆ ಸರೋಜಿನಿ ಮಹಿಷಿ, ಬಳ್ಳಾರಿ ಸಂಸದೆಯಾಗಿದ್ದ ಬಸವರಾಜೇಶ್ಚರಿ, ಚಿಕ್ಕಮಗಳೂರು ಸಂಸದೆಯಾಗಿದ್ದ ಡಿ.ಕೆ.ತಾರದೇವಿ, ಕೆನರಾ ಸಂಸದೆಯಾಗಿದ್ದ ಮಾರ್ಗರೇಟ್ ಅಳ್ವಾ ಕೇಂದ್ರ ಸಚಿವರಾಗಿದ್ದರು. ಈಗ ಮತ್ತೆ ಉಡುಪಿ-ಚಿಕ್ಕಮಗಳೂರಿಗೆ ಅದೃಷ್ಟ ಒಲಿದು ಬಂದಿದೆ.

  • ಮೋದಿ ಕ್ಯಾಬಿನೆಟ್‍ಗೆ ಸರ್ಜರಿ – 27 ಮಂದಿಗೆ ಮಂತ್ರಿ ಸ್ಥಾನ?

    ಮೋದಿ ಕ್ಯಾಬಿನೆಟ್‍ಗೆ ಸರ್ಜರಿ – 27 ಮಂದಿಗೆ ಮಂತ್ರಿ ಸ್ಥಾನ?

    ನವದೆಹಲಿ: ಜುಲೈ ಮೊದಲ ವಾರದಲ್ಲಿ ಕೇಂದ್ರ ಕ್ಯಾಬಿನೆಟ್ ಪುನರ್‌ರಚನೆಯಾಗಲಿದ್ದು, ಕೆಲ ಸಚಿವರನ್ನು ಕೈಬಿಡುವ ಸಾಧ್ಯತೆಯಿದೆ.

    ಹೌದು, ಪ್ರಧಾನಿ ಮೋದಿ ಕೆಲ ಸಚಿವರನ್ನು ಕೈಬಿಟ್ಟು 27 ಹೊಸ ಮುಖಗಳಿಗೆ ಮಂತ್ರಿ ಸ್ಥಾನ ನೀಡಲು ಮುಂದಾಗಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ವರದಿಯಾಗಿದೆ.

    ಸಂಭಾವ್ಯ ಪಟ್ಟಿಯಲ್ಲಿ ಯಾರಿದ್ದಾರೆ?
    ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಬಿಜೆಪಿ ಜನರಲ್ ಸೆಕ್ರೆಟರಿ ಭೂಪೇಂದ್ರ ಯಾದವ್ ಹಾಗೂ ಕೈಲಾಶ್ ವಿಜಯವರ್ಗಿಯಾ, ಬಿಜೆಪಿ ವಕ್ತಾರ ಹಾಗೂ ಅಲ್ಪ ಸಂಖ್ಯಾತ ಮುಖಂಡ ಝಪರ್ ಇಸ್ಲಾಂ ಮೋದಿ ಸಂಪುಟ ಸೇರಿಕೊಳ್ಳುವ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

    ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ, ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನವಾಲ ಅವರಿಗೂ ಮಂತ್ರಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಿದೆ. ಇದನ್ನೂ ಓದಿ: ವಿಶ್ವ ನಾಯಕರ ಪೈಕಿ ಶೇ.66 ಅಂಕದೊಂದಿಗೆ ಮೋದಿ ನಂಬರ್ 1

    ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಲ್ಲಿನ ನಾಯಕರಿಗೆ ಜಾಸ್ತಿ ಅವಕಾಶ ಸಿಗುವ ಸಾಧ್ಯತೆಯಿದೆ. ಈ ಪೈಕಿ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಮಹಾರಾಜ ಗಂಜ್ ಸಂಸದ ಪಂಕಜ್ ಚೌಧರಿ, ವರುಣ್ ಗಾಂಧಿ ಹಾಗೂ ಓಆಂ ಮೈತ್ರಿ ಪಕ್ಷದ ಅನುಪ್ರಿಯಾ ಪಟೇಲ್ ಹೆಸರು ಮುಂಚೂಣಿಯಲ್ಲಿದೆ.

    ಒಡಿಶಾ ಸಂಸದ ಅಶ್ವಿನ್ ವೈಷ್ಣವ್, ಬಂಗಾಳದ ಮಾಜಿ ರೈಲ್ವೇ ಸಚಿವ ದಿನೇಶ್ ತ್ರಿವೇದಿ, ರಾಜ್ಯ ಸಭಾ ಸದಸ್ಯ ಅನಿಲ್ ಜೈನ್, ರಾಜಸ್ಥಾನದಿಂದ ಕಿರಿಯ ಸಂಸದ ಚೌಧರಿ, ರಾಹುಲ್ ಕಸ್ವಾನ್ ಮತ್ತು ಸಿಕಾರ್ ಸಂಸದ ಸುಮೇಧಾನಂದ ಸರಸ್ವತಿ ಕೂಡ ಕೇಂದ್ರ ಸಂಪುಟ ಸೇರಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ದೆಹಲಿಯಿಂದ ಸಂಸದೆ ಮೀನಾಕ್ಷಿ ಲೇಖಿ, ಬಿಹಾರದಲ್ಲಿ ಚಿರಾಗ್ ಪಾಸ್ವಾನ್ ವಿರುದ್ಧ ದಂಗೆ ಎದ್ದ ಪಶುಪತಿ ಪರಾಸ್, ಜೆಡಿಯು ನಾಮನಿರ್ದೇಶನಗಳಾದ ಆರ್.ಸಿ.ಪಿ. ಸಿಂಗ್ ಮತ್ತು ಸಂತೋಷ್ ಕುಮಾರ್ ಕೂಡ ಸಂಭಾವ್ಯ ಪಟ್ಟಿಯಲ್ಲಿದ್ದಾರೆ.