Tag: ಮೋರ್ಬಿ ತೂಗುಸೇತುವೆ

  • ಮೋರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ TMC ವಕ್ತಾರ ಅರೆಸ್ಟ್ – ಮೋದಿ ವಿರುದ್ಧ ಮಮತಾ ಗರಂ

    ಮೋರ್ಬಿ ಸೇತುವೆ ದುರಂತದ ಬಗ್ಗೆ ಟ್ವೀಟ್ ಮಾಡಿದ TMC ವಕ್ತಾರ ಅರೆಸ್ಟ್ – ಮೋದಿ ವಿರುದ್ಧ ಮಮತಾ ಗರಂ

    ಅಹಮದಾಬಾದ್: ಗುಜರಾತಿನ ಮೋರ್ಬಿ ಸೇತುವೆ ದುರಂತದ (Morbi Bridge Collapse) ಕುರಿತು ಟ್ವೀಟ್ ಮಾಡಿದ ತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ (Saket Gokhale) ಅವರನ್ನ ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಇದರಿಂದ ಮಮತಾ ಬ್ಯಾನರ್ಜಿ (Saket Gokhale) ಅವರು ಬಿಜೆಪಿ (BJP) ಹಾಗೂ ಪ್ರಧಾನಿ ಮೋದಿ (Narendra Modi) ವಿರುದ್ಧ ಆಕ್ರೋಶ ಹೊರಹಾಕಿದ್ದು, ಇದು ರಾಜಕೀಯ ಸೇಡು ಎಂದು ಕಿಡಿ ಕಾರಿದ್ದಾರೆ.

    ಗೋಖಲೆ ಅವರನ್ನು ಬಂಧಿಸಲು ಕಾರಣವಾದ ಟ್ವೀಟ್ ಯಾವುದೆಂದು ನಿರ್ದಿಷ್ಟಪಡಿಸಿಲ್ಲ. ಆದರೆ ಗುಜರಾತ್ ಸರ್ಕಾರದ ಸತ್ಯ ಪರಿಶೀಲನಾ ಘಟಕವು ಗೋಖಲೆ ಅವರ ಇತ್ತೀಚಿನ ಟ್ವೀಟ್ ವೊಂದನ್ನು ಗುರುತಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಬ್ಯಾನರ್ಜಿಯನ್ನು ನಿಂದಿಸಿದ್ದ ನೀವು ಇದಕ್ಕೆ ಏನ್ ಹೇಳ್ತೀರಿ: ಮೋದಿ ವಿರುದ್ಧ ವಿಪಕ್ಷಗಳು ಕಿಡಿ

    ಇತ್ತೀಚಿನ ಟ್ವೀಟ್‌ನಲ್ಲಿ ಸಾಕೇತ್ ಗೋಖಲೆ `ಆರ್‌ಟಿಐ (ಮಾಹಿತಿ ಹಕ್ಕು ಕಾಯ್ದೆ) ಮಾಹಿತಿ ಪ್ರಕಾರ ಪ್ರಧಾನಿ ಅವರು ಮೋರ್ಬಿಗೆ ಭೇಟಿ ನೀಡಲು ಖರ್ಚಾಗಿದ್ದು 30 ಕೋಟಿ ರೂ.’ ಎಂದು ಉಲ್ಲೇಖಿಸಿದ್ದರು. ಈ ಕುರಿತು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ ಸತ್ಯ ಪರಿಶೀಲನೆ ನಡೆಸಿ ಆರ್‌ಟಿಐ ಮಾಹಿತಿ ಸುಳ್ಳು ಎಂದು ಹೇಳಿತ್ತು. ಇದನ್ನೂ ಓದಿ: ಮೋರ್ಬಿ ದುರಂತ: 1 ಲಕ್ಷ ರೂ. ದಂಡ ಪಾವತಿಸಿ – ಪುರಸಭೆ ವಿರುದ್ಧ ಹೈಕೋರ್ಟ್ ಗರಂ

    ಸಾಕೇತ್ ಗೋಖಲೆ ಅವರು ನಿನ್ನೆ ರಾತ್ರಿ ದೆಹಲಿಯಿಂದ ರಾಜಸ್ಥಾನದ ಜೈಪುರಕ್ಕೆ ವಿಮಾನದಲ್ಲಿ ತೆರಳಿದ್ದರು. ಅಲ್ಲಿಂದ ಗುಜರಾತ್ ಪೊಲೀಸರ್ ಬಂಧಿಸಿ ಕರೆದೊಯ್ದಿದ್ದಾರೆ ಎಂದು ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ. ಸದ್ಯ ಈ ಬಗ್ಗೆ ಬಿಜೆಪಿಯಾಗಲಿ ಅಥವಾ ಗುಜರಾತ್ ಸರ್ಕಾರವಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಕಳೆದ ಅಕ್ಟೋಬರ್ 30 ರಂದು ಗುಜರಾತಿನ ಮೋರ್ಬಿ ಜಿಲ್ಲೆಯಲ್ಲಿ ತೂಗು ಸೇತುವೆ ಕುಸಿದು 135 ಜನರು ಮೃತಪಟ್ಟಿದರು. ಬಳಿಕ ತನಿಖೆಯಲ್ಲಿ 9 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಸಂತ್ರಸ್ತರ ಆರೋಗ್ಯ ವಿಚಾರಿಸಿ, ಪರಿಹಾರ ಘೋಷಣೆ ಮಾಡಿದ್ದಾರೆ. ನಂತರದಲ್ಲಿ ಮೋರ್ಬಿ ಪುರಸಭೆಯನ್ನು ತರಾಟೆಗೆ ತೆಗೆದುಕೊಂಡಿದ್ದ ಗುಜರಾತ್ ಹೈಕೋರ್ಟ್ 1 ಲಕ್ಷ ದಂಡ ಸಹ ವಿಧಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

    ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

    ಗಾಂಧಿನಗರ: ಮೋರ್ಬಿಯಲ್ಲಿ ತೂಗು ಸೇತುವೆ (MorbiBridge) ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ (Narendra Modi) ಮತ್ತು ಗುಜರಾತ್ ಸರ್ಕಾರದ (Gujarat Government) ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

    ತೂಗು ಸೇತುವೆ ಕುಸಿದು 135 ಮಂದಿ ಮೃತಪಟ್ಟಿದ್ದಾರೆ, ಅವರಲ್ಲಿ 47 ಮಕ್ಕಳಿದ್ದಾರೆ. ರಕ್ಷಣೆ ಮಾಡಿರುವ 100ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಸಂತ್ರಸ್ತರನ್ನ ಭೇಟಿ ಮಾಡಲು ತೆರಳಿದ್ದಾರೆ. ಮೋರ್ಬಿ ಆಸ್ಪತ್ರೆಗೆ (Morbi Hospital) ಹಾಗೂ ತೂಗು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ನಡುವೆಯೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್

    ಸಾಮಾಜಿಕ ಜಾಲತಾಣದಲ್ಲಿ ಬಾಯ್‌ಕಾಟ್ ಮೋದಿ, ಬಾಯ್‌ಕಾಟ್ ಬಿಜೆಪಿ (BJP) ಹಾಗೂ ಗೋ ಬ್ಯಾಕ್ ಮೋದಿ (Go-Back-Modi) ಅಭಿಯಾನ ಆರಂಭಿಸಿದ್ದು, ತೀವ್ರವಾಗಿ ಖಂಡಿಸಿದ್ದಾರೆ. `ಭಾರತಕ್ಕೆ ಪ್ರಧಾನಿ ಬೇಕು, ಜೋಕರ್ ಬೇಡ, ಫ್ಯಾಷನ್ ಡಿಸೈನರ್ ಬೇಡ, ಪ್ರಧಾನಿ ಮೋದಿ ಅವಧಿಯಲ್ಲಿ ದೇಶದಲ್ಲೇ ಅತಿಹೆಚ್ಚು ಭ್ರಷ್ಟ ಅಧಿಕಾರಿಗಳಿದ್ದಾರೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ: ಅತಿಥಿಯಾಗಿ ಬೆಂಗಳೂರಿಗೆ ಬಂದ ಜ್ಯೂನಿಯರ್ ಎನ್.ಟಿ.ಆರ್

    ಗುಜರಾತಿನಲ್ಲಿ ನಡೆದ ದುರಂತದಿಂದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ನಿಮ್ಮ ಗಮನ ಮಾತ್ರ ಚುನಾವಣೆಯ ಮೇಲಿದೆ. ಇದು ಮೋದಿ ಅವರಿಗೆ ನಾಚಿಗೇಡಿನ ಸಂಗತಿ ಎಂದು ಕಿಡಿ ಕಾರಿದ್ದಾರಲ್ಲದೇ ಪ್ರಾಣ ಕಳೆದುಕೊಂಡವರಿಂದಾಗಿ ಅವರಿಗೆ 134 ಮತಗಳು ನಷ್ಟವಾಗಿದೆ ಎಂಬ ಚಿಂತೆ ಅವರಿಗಿದೆ ಎಂದು ಟೀಕಿಸಿದ್ದಾರೆ.

    ನಮಗೆ ಪ್ರಧಾನಿ ಬೇಕಾಗಿದೆಯೇ ಹೊರತು ಸ್ವಂತ ದೇಶದ ಜನರ ಜೀವಗಳ ಜೊತೆ ಚೆಲ್ಲಾಟ ಆಡೋರು ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]