Tag: ಮೋಹನ್‌ದಾಸ್‌ ಪೈ

  • ಚೀನಾದಿಂದ ಬೇಗ ಬೋಗಿಗಳನ್ನು ತರಿಸಿ: ಬೆನ್ನು ತಟ್ಟಿಕೊಂಡ ಡಿಕೆಶಿಗೆ ಪೈ ಟಾಂಗ್‌

    ಚೀನಾದಿಂದ ಬೇಗ ಬೋಗಿಗಳನ್ನು ತರಿಸಿ: ಬೆನ್ನು ತಟ್ಟಿಕೊಂಡ ಡಿಕೆಶಿಗೆ ಪೈ ಟಾಂಗ್‌

    ಬೆಂಗಳೂರು: ಹಳದಿ ಮಾರ್ಗದ ಮೆಟ್ರೋ ರೈಲು (Yellow Line Metro) ಸೇವೆ ಆರಂಭವಾದ ಬಳಿಕ ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಟ್ರಾಫಿಕ್‌ ಸಮಸ್ಯೆ ಕಡಿಮೆಯಾಗಿದೆ ಎಂದು ಬೆನ್ನು ತಟ್ಟಿಕೊಂಡ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರಿಗೆ ಉದ್ಯಮಿ ಮೋಹನ್‌ದಾಸ್‌ ಪೈ (T.V. Mohandas Pai) ಟಾಂಗ್‌ ಕೊಟ್ಟಿದ್ದಾರೆ.

    ಡಿಕೆ ಶಿವಕುಮಾರ್ ಅವರೇ ನಾನು ಕೋಲ್ಕತ್ತಾದಲ್ಲಿದ್ದೇನೆ. ಪಶ್ಚಿಮ ಬಂಗಾಳದಲ್ಲಿರುವ ಟಿಟಾಘರ್ ರೈಲು ಸಿಸ್ಟಮ್ ಲಿಮಿಟೆಡ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿ ಮಾತಾನಾಡಿದ್ದೇನೆ. ನಿನ್ನೆ ಐದನೇಯ ರೈಲು ಕಳುಹಿಸಿಕೊಟ್ಟಿದ್ದಾರೆ. ಆದರೆ ಮುಂದೆ ಐದು ರೈಲುಗಳಿಗೆ ಬೇಕಾದ ಬೋಗಿಗಳನ್ನು ಚೀನಾದಿಂದ ಕಳಿಸಲು ಸಾಕಷ್ಟು ಸಮಸ್ಯೆಯಾಗಿದೆ. ಹೀಗಾಗಿ ಬಿಎಂಆರ್‌ಸಿಎಲ್‌ ಎಂಡಿ ಜೊತೆ ಮಾತಾನಾಡಿ ಬೋಗಿಗಳು ಬೇಗ ತಲುಪುವಂತೆ ವ್ಯವಸ್ಥೆ ಮಾಡಿ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ:  ದುರಹಂಕಾರದ ಮಾತು ಬಿಟ್ಟು, ಜನಪರ ಕೆಲಸ ಮಾಡಿ – ಉದ್ಯಮಿಗಳ ಬಗ್ಗೆ ಡಿಕೆಶಿ ಹೇಳಿಕೆಗೆ ಅಶ್ವಥ್ ನಾರಾಯಣ್‌ ಖಂಡನೆ

     


    ಬೋಗಿಗಳ ಸಾಗಾಟ ವಿಳಂಬ ಯಾಕೆ?
    ಸರಕು ವಿಮಾನದ ಮೂಲಕ ಚೀನಾದಿಂದ ಬೋಗಿಗಳನ್ನು ಸಾಗಿಸಿದರೆ ಖರ್ಚು ಜಾಸ್ತಿಯಾಗುತ್ತದೆ. ಹೀಗಾಗಿ ಹಡಗು ಮಾರ್ಗದ ಮೂಲಕವೇ ಹೆಚ್ಚಾಗಿ ಸಾಗಿಸಲಾಗುತ್ತದೆ. ಇದರಿಂದಾಗಿ ಬೋಗಿಗಳು ಭಾರತ ತಲುಪಲು ತಡವಾಗುತ್ತದೆ.

    ಖರ್ಚು ಜಾಸ್ತಿಯಾದರೂ ವಿಮಾನದ ಮೂಲಕವೇ ಸಾಗಿಸಲು ರಾಜ್ಯ ಸರ್ಕಾರ ಬಿಎಂಆರ್‌ಸಿಎಲ್‌ಗೆ ಹೇಳಬೇಕು. ಮೆಟ್ರೋ ವಿಳಂಬವಾದಷ್ಟು ವೆಚ್ಚ ಹೆಚ್ಚಾಗುತ್ತದೆ ಎಂದು ಈ ಹಿಂದೆ ತೇಜಸ್ವಿ ಸೂರ್ಯ ಟ್ವೀಟ್‌ ಮಾಡಿದ್ದರು.

  • ಸ್ವಚ್ಛನಗರಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಕುಸಿದ ಬೆಂಗಳೂರು- ಬಿಗ್‌ಶೇಮ್‌ ಎಂದು ಕುಟುಕಿದ ಪೈ

    ಸ್ವಚ್ಛನಗರಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಕುಸಿದ ಬೆಂಗಳೂರು- ಬಿಗ್‌ಶೇಮ್‌ ಎಂದು ಕುಟುಕಿದ ಪೈ

    ಬೆಂಗಳೂರು: ಬ್ರ್ಯಾಂಡ್ ಬೆಂಗಳೂರಿಗೆ(Bengaluru) ಮತ್ತೆ ಧಕ್ಕೆಯಾಗಿದೆ. ಸ್ವಚ್ಛ ಸರ್ವೇಕ್ಷಣ್‌ ರ್‍ಯಾಂಕಿಂಗ್‌ ಪಟ್ಟಿಯಲ್ಲಿ(Swachh Survekshan 2022 list) ಬೆಂಗಳೂರು ಕುಸಿದಿದೆ.

    ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕಳೆದ ವರ್ಷ 28ನೇ ಸ್ಥಾನದಲ್ಲಿ ಬೆಂಗಳೂರು ಈ ಬಾರಿ 43ನೇ ಸ್ಥಾನಕ್ಕೆ ಕುಸಿದಿದೆ.

    10 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ 45 ನಗರಗಳನ್ನು ಅಧ್ಯಯನ ನಡೆಸಿ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಧ್ಯಪ್ರದೇಶದ ಇಂದೋರ್‌ ಸತತ 6ನೇ ಬಾರಿ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿಯುತ್ತಿದೆ. ಚೆನ್ನೈ ಮತ್ತು ಮಧುರೈ ಕೊನೆಯ ಸ್ಥಾನಗಳನ್ನು ಪಡೆದುಕೊಂಡಿದೆ. ಇದನ್ನೂ ಓದಿ: ಯುವಕರ ಸಾಹಸ – ಭೂಗಳ್ಳರ ಕೈಯಿಂದ ಶಾಲೆಗೆ ಸೇರಿತು ಕೋಟ್ಯಂತರ ಮೌಲ್ಯದ ಜಮೀನು

    ನಗರದ ಸ್ವಚ್ಛತೆ, ನೈರ್ಮಲ್ಯ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಪಾಲಿಕೆಯಿಂದ ಕೈಗೊಂಡ ಕ್ರಮಗಳು, ಸಾರ್ವಜನಿಕ ಸ್ಥಳಗಳಲ್ಲಿನ ಸ್ವಚ್ಛತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದಕ್ಕೆ ಕೈಗೊಂಡ ಕ್ರಮ ಸೇರಿದಂತೆ ಹಲವು ಮಾನದಂಡಗಳ ಆಧಾರದ ಮೇಲೆ ರ್‍ಯಾಂಕ್‌ ನೀಡಲಾಗುತ್ತದೆ.

    ಕುಟುಕಿದ ಪೈ
    ಉದ್ಯಮಿ ಮೋಹನ್‌ದಾಸ್‌ ಪೈ(Mohandas Pai), ಬಿಗ್‍ಶೇಮ್. ನಮ್ಮ ಶಾಸಕರು, ಸಂಸದರು ಮತ್ತೆ ವಿಫಲರಾಗಿದ್ದಾರೆ. ತುಂಬಾ ಶಾಸಕರು ಭ್ರಷ್ಟ್ಟಾಚಾರಿಗಳು ಎಂದು ಬರೆದು ಸಿಎಂ ಬೊಮ್ಮಾಯಿ ಸೇರಿದಂತೆ ಬೆಂಗಳೂರಿನ ಮಂತ್ರಿ ಮತ್ತು ಸಂಸದರಿಗೆ ಟ್ಯಾಗ್‌ ಮಾಡಿ ಕುಟುಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]