Tag: ಮೌಲಾನಾ ಮುಫ್ತಿ

  • ಪ್ರಖ್ಯಾತ ಇಸ್ಲಾಮಿ ವಿದ್ವಾಂಸ ಮೌಲಾನ ಅಶ್ರಫ್ ಅಲಿ ಇನ್ನಿಲ್ಲ

    ಪ್ರಖ್ಯಾತ ಇಸ್ಲಾಮಿ ವಿದ್ವಾಂಸ ಮೌಲಾನ ಅಶ್ರಫ್ ಅಲಿ ಇನ್ನಿಲ್ಲ

    ಬೆಂಗಳೂರು: ರಾಜ್ಯದ ಪ್ರಖ್ಯಾತ ಇಸ್ಲಾಮಿ ವಿದ್ವಾಂಸರು, ದೇಶ ವಿದೇಶಗಳಲ್ಲಿ ಚಿರಪರಿಚಿತರೂ ಆಗಿರುವ ಅಮೀರ್ ಇ ಶರಿಯತ್ ಹಝ್ರತ್ ಮೌಲಾನಾ ಮುಫ್ತಿ ಮುಹಮ್ಮದ್ ಅಶ್ರಫ್ ಅಲಿ ನಿಧನರಾಗಿದ್ದಾರೆ.

    ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ವಿಕ್ರಂ ಆಸ್ಪತ್ರೆಯಲ್ಲಿ 2.30ರ ಸುಮಾರಿಗೆ ನಿಧನರಾಗಿದ್ದಾರೆ. ಇವರು ನಾಲ್ಕು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

    ಬೆಂಗಳೂರಿನ ಗೋವಿಂದಪುರದಲ್ಲಿರುವ ಪ್ರತಿಷ್ಠಿತ ಇಸ್ಲಾಮೀ ಶರಿಯತ್ ಕಾಲೇಜ್, ದಾರುಲ್ ಉಲೂಂ ಸಬೀಲುರ್ರಷಾದ್ ಇದರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸರೋ ಇವರು, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‍ನ ಕಾರ್ಯಕಾರಿ ಸಮಿತಿ ಸದಸ್ಯರೂ ಆಗಿದ್ದರು. ಅಲ್ಲದೇ ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಉಪಾಧ್ಯಕ್ಷ, ಇಸ್ಲಾಮಿ ಫಿಖಾ ಅಕಾಡೆಮಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

    ಕೇವಲ ಧಾರ್ಮಿಕ ವಿಚಾರಗಳಿಗಷ್ಟೇ ಸೀಮಿತವಾಗಿರದೆ ಸಾಮಾಜಿಕ ಹೋರಾಟಗಳಲ್ಲಿಯೂ ಸಕ್ರಿಯರಾಗಿದ್ದರು. ಮೃತರ ನಮಾಝೆ ಜನಾಝವನ್ನು ಸೆ.9ರಂದು ಬೆಳಗ್ಗೆ 10 ಗಂಟೆಗೆ ಸಬೀಲುರ್ರಷಾದ್ ನಲ್ಲಿ ನೆರವೇರಿಸಲಿದ್ದು, ಅವರ ಪಾರ್ಥಿವ ಶರೀರವನ್ನು ಕಾಲೇಜಿನ ಆವರಣದಲ್ಲಿ ದಫನ್ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

    ಮಾಜಿ ಪ್ರಧಾನಿ ದೇವೆಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಗೃಹಸಚಿವ ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ರಿಜ್ವಾನ್ ಆರ್ಷದ್ ಸೇರಿ ಹಲವು ರಾಜಕೀಯ ಮುಖಂಡರು ಅಂತಿಮ ನಮನ ಸಲ್ಲಿಸಿದ್ದಾರೆ.