ಸ್ಯಾಂಡಲ್‌ವುಡ್ ನಟ ಸುದೀಪ್ (Sudeep) ಮ್ಯಾಕ್ಸ್ ಚಿತ್ರದ ಬಳಿಕ ಹೊಸ ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದರು. ಇದರ ನಡುವೆ ಕಟ್ಟು ಮಸ್ತಾದ ವರ್ಕೌಟ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಬಿಗ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ
ಹೊಸ ಸಿನಿಮಾಗಾಗಿ ಸುದೀಪ್ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ. ಕಟ್ಟು ನಿಟ್ಟಾಗಿ ಡಯಟ್ ಫಾಲೋ ಮಾಡಿ ಸಖತ್ ಆಗಿ ಬಾಡಿ ಬೀಲ್ಡ್ ಮಾಡಿದ್ದಾರೆ. ಅವರ ಈ ವರ್ಕೌಟ್ ಫೋಟೋ ನೋಡಿ ಫ್ಯಾನ್ಸ್ ಬೆರಗಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಟನ ಈ ಪೋಸ್ಟ್ ಸಖತ್ ವೈರಲ್ ಆಗ್ತಿದೆ.ಇದನ್ನೂ ಓದಿ:ಗೋಲ್ಡ್ ರಾಣಿಗೆ ಮತ್ತೆ ಶಾಕ್ ಕೊಟ್ಟ ಪತಿ – ವಿಚ್ಛೇದನಕ್ಕೆ ಅರ್ಜಿ
View this post on Instagram
ಅದಷ್ಟೇ ಅಲ್ಲ, ವರ್ಕೌಟ್ ಫೋಟೋ ಶೇರ್ ಮಾಡಿ ಏ.16 ಎಂದು ಸುದೀಪ್ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಹಾಗಾಗಿ ಇದು ಮುಂದಿನ ಚಿತ್ರದ ಬಗ್ಗೆ ಅಪ್‌ಡೇಟ್ ಎಂದೇ ಫ್ಯಾನ್ಸ್ ಊಹಿಸಿದ್ದಾರೆ.

‘ಮಾಕ್ಸ್’ (Max) ಚಿತ್ರದ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಬಾಷಾ’ ಸಿನಿಮಾಗಾಗಿ ನಟ ತಯಾರಿ ಮಾಡಿಕೊಳ್ತಿದ್ದಾರೆ. ಅದಕ್ಕಾಗಿ ಸುದೀಪ್ ದೇಹ ದಂಡಿಸಿದ್ದಾರೆ. ಇದೇ ಏ.16ರಂದು ಈ ಚಿತ್ರ ಸೆಟ್ಟೇರಲಿದೆ ಎಂದು ಹೇಳಲಾಗ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಗುವವರೆಗೂ ಕಾಯಬೇಕಿದೆ.














‘ಮ್ಯಾಕ್ಸ್’ ಸಿನಿಮಾ ಈಗೀನ ಕಾಲಕ್ಕೆ ತಕ್ಕಂತೆ ಇದೆ. ಚಿತ್ರದಲ್ಲಿ ದೊಡ್ಡ ಮಟ್ಟದ ಸ್ಟಂಟ್ಸ್ ಕೂಡ ಇದೆ. ಬಾಡಿ ಡಬಲ್ ಬಳಸದೆ ಸುದೀಪ್ ಸರ್ ತಾವೇ ಸ್ಟಂಟ್ಸ್ ಮಾಡಿದ್ದಾರೆ. ಈ ಚಿತ್ರ ಫ್ಯಾನ್ಸ್‌ಗೆ ಪೈಸಾ ವಸೂಲ್ ಸಿನಿಮಾ ಆಗಿದೆ. ‘ಮ್ಯಾಕ್ಸ್’ ಸಿನಿಮಾ ನಿಜಕ್ಕೂ ಎಲ್ಲರಿಗೂ ಇಷ್ಟವಾಗುತ್ತದೆ ಎಂದು ನಟಿ ಮಾತನಾಡಿದ್ದಾರೆ.
ಪ್ಯಾನ್ ಇಂಡಿಯಾ ಚಿತ್ರವಾದ ‘ಮ್ಯಾಕ್ಸ್’ ಒಂದು ಮಾಸ್ ಚಿತ್ರವಾಗಿದ್ದು, ಟೀಸರ್‌ನಲ್ಲಿರುವ ಡೈಲಾಗ್ ತುಣುಕುಗಳು ಈಗಾಗಲೇ ಭರ್ಜರಿ ಸದ್ದು ಮಾಡಿ, ಸಿನಿ ಪ್ರೇಕ್ಷಕರು ಚಿತ್ರದ ಬರುವಿಕೆಯನ್ನು ಎದುರು ನೋಡುವಂತೆ ಮಾಡಿದೆ. ಬಾ ಬಾ ಬ್ಲಾಕ್ ಶಿಪ್ ಹ್ಯಾವ್ ಯೂ ಎನಿ ಕ್ಲೂ ಎಂದು ಖಡಕ್ ಡೈಲಾಗ್ ಹೇಳುವ ಮೂಲಕ ಸುದೀಪ್ ಮಸ್ತ್ ಆಗಿ ಎಂಟ್ರಿ ಕೊಟ್ಟಿದ್ದಾರೆ.