ಹುಬ್ಬಳ್ಳಿ: ನಾನು ಯಾವುದೇ ಹಾಡು, ಹಾಡಿನ ಸಾಲನ್ನು ಕದ್ದಿಲ್ಲ ಎಂದು ಗಾಯಕ ಚಂದನ್ ಶೆಟ್ಟಿ (Chandan Shetty) ಹೇಳಿದ್ದಾರೆ.
ಕಾಟನ್ ಕ್ಯಾಂಡಿ (Cotton Candy) ಹಾಡಿನ ತುಣುಕುಗಳನ್ನು ಕದಿಯಲಾಗಿದೆ ಎಂಬ ಆರೋಪವನ್ನು ಗಾಯಕ ಚಂದನ ಶೆಟ್ಟಿ ತಳ್ಳಿಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು ಇದು ಕಾಕತಾಳೀಯ. ನಾನು ಯಾವುದೇ ಹಾಡು, ಹಾಡಿನ ಸಾಲು, ಟ್ಯೂನ್ ಕದ್ದಿಲ್ಲ. ಯಾವುದೋ ವಿವ್ ಇಲ್ಲದ ಸಾಂಗ್ ಕದ್ದು ನಾನು ಹಾಡು ಮಾಡುವ ಪರಿಸ್ಥಿತಿ ಬಂದಿಲ್ಲ ಎಂದು ಹೇಳಿದರು.
ಏನಿದು ವಿವಾದ?
ಹೊಸ ವರ್ಷಕ್ಕೆ ರಿಲೀಸ್ ಆದ ಕಾಟನ್ ಕ್ಯಾಂಡಿ ಸಾಂಗ್ ಟ್ಯೂನ್ ನಾನು ಆರು ವರ್ಷದ ಹಿಂದೆ ಮಾಡಿದ ವೈ ಬುಲ್ (Y Bull) ಪಾರ್ಟಿ ಸಾಂಗ್ ಟ್ಯೂನ್ ಒಂದೇ ಇದೆ ಎಂದು ಯುವರಾಜ್ ಹೇಳಿದ್ದಾರೆ. ಮೊದಲ ಪಲ್ಲವಿ, ಸೆಕೆಂಡ್ ಚರಣವನ್ನು ಚಂದನ್ ಶೆಟ್ಟಿ ಕಾಪಿ ಮಾಡಿದ್ದಾರೆ. ಆರು ವರ್ಷಗಳ ಹಿಂದೆ ತುಂಬಾನೇ ಕಷ್ಟಪಟ್ಟು ಹಣ ಕೂಡಿಟ್ಟು ರ‍್ಯಾಪ್ ಸಾಂಗ್ ಮಾಡಿದ್ದೇನೆ ಎಂದು ಯುವರಾಜ್ (Yuvraj) ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.
ಬೆಂಗಳೂರು: ಪಬ್ಲಿಕ್ ಮ್ಯೂಸಿಕ್ (PUBLiC Music) ವಾಹಿನಿ ಶುರುವಾಗಿ ಇಂದಿಗೆ 10 ವರ್ಷವಾಗಿದೆ. ಸಹಜವಾಗಿಯೇ ಸಂಭ್ರಮ ಮೇಳೈಸಿದೆ. ಇಂದು ದಶೋತ್ಸವ (10th Anniversary) ಹೆಸರಲ್ಲಿ ಪಬ್ಲಿಕ್ ಮ್ಯೂಸಿಕ್ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ.
ಪಬ್ಲಿಕ್ ಟಿವಿ (PUBLiC TV) ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ (HR Ranganath) ಬೆಳಗ್ಗೆ 10 ಗಂಟೆ 10ನಿಮಿಷ 10 ಸೆಕೆಂಡ್‌ಗೆ ಸರಿಯಾಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪಬ್ಲಿಕ್ ಮ್ಯೂಸಿಕ್ ದಶೋತ್ಸವ ಸಂಭ್ರಮಕ್ಕೆ ಎಂದಿನಂತೆ ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ಆನಂದ್ ಆಡಿಯೋದ ಶ್ಯಾಮ್ ಚಾಬ್ರಿಯಾ, ಅಶ್ವಿನಿ ರೆಕಾರ್ಡಿಂಗ್ ಕಂಪನಿಯ ಅಶ್ವಿನಿ ರಾಮ್‌ಪ್ರಸಾದ್ ಹಾಗೂ ಝೇಂಕಾರ್ ಮ್ಯೂಸಿಕ್‌ನ ಭರತ್ ಜೈನ್ ಸಾಕ್ಷಿಯಾಗಲಿದ್ದಾರೆ.
ದಶೋತ್ಸವದ ಪ್ರಯುಕ್ತ ಹತ್ತು ವಿಶೇಷ ಶೋಗಳು ನಡೆಯಲಿವೆ. ನಟ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಗಾಯಕರಾದ ನವೀನ್ ಸಜ್ಜು, ಸಂಗೀತ ರಾಜೀವ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ನಮ್ಮೊಂದಿಗೆ ಇರಲಿದ್ದಾರೆ.
ಕಳೆದ ಹತ್ತು ವರ್ಷಗಳಲ್ಲಿ ಪಬ್ಲಿಕ್ ಮ್ಯೂಸಿಕ್ ಸಂಗೀತದ ಮೂಲಕ ಎಲ್ಲಾ ಕಡೆ ಪಸರಿಸಿಕೊಂಡಿದೆ. ಮೊದಲ ವರ್ಷದಿಂದ ಇಂದು ದಶಕದವರೆಗೂ ಪಬ್ಲಿಕ್ ಮ್ಯೂಸಿಕ್ ದಿನದಿಂದ ದಿನಕ್ಕೆ ಆಪ್ಡೇಟ್ ಆಗುತ್ತಾ, ಎಲ್ಲಾ ಜನರೇಶನ್‌ಗೂ ಇಷ್ಟವಾಗುವಂತ ಹಾಡುಗಳನ್ನು ಪ್ರಸಾರ ಮಾಡುತ್ತಿದೆ. ಈ ಸಂಭ್ರಮಕ್ಕೆ ಮುಖ್ಯ ಕಾರಣ ನೀವು. ಮೊದಲ ವರ್ಷದಿಂದ ಇಲ್ಲಿಯವರೆಗೂ ಜೊತೆಗೆ ನಿಂತಿದ್ದೀರಿ, ಬೆನ್ನುತಟ್ಟಿ ಬೆಂಬಲ ಕೊಟ್ಟಿದ್ದೀರಿ. ಇದೇ ರೀತಿ ಮುಂದೆಯೋ ನಿಮ್ಮ ಬೆಂಬಲ, ಹಾರೈಕೆ ನಮ್ಮ ಮೇಲಿರಲಿ.
“ನನಗೆ ಈಗ ಎಂಬತ್ತು ದಾಟಿದೆ. ನಡೆಯುವಾಗ, ಊಟ ಮಾಡುವಾಗ, ಮಾತ್ರೆ ತೆಗೆದುಕೊಳ್ಳುವಾಗ ಹಾಗೂ ನಿದ್ರೆ ಮಾಡುವಾಗ ಮಾತ್ರ ನನಗೆ ಮುಪ್ಪು ಬಂದಿರೋದು ಗೊತ್ತಾಗುತ್ತದೆ. ಆದೇ ನೀವು ನನ್ನ ಕೈಗೆ ಪುಟ್ಟ ಪಿಟೀಲು ಕೊಟ್ಟು ನೋಡಿ, ಆಗ ನನ್ನ ವೃದ್ಧಾಪ್ಯ ಮರೆತು, 18ರ ಹುಡುಗನಾಗುತ್ತೇನೆ. ಆದೇ ಸಂಗೀತಕ್ಕಿರುವ ಶಕ್ತಿ” ಎನ್ನುತ್ತಾರೆ ಖ್ಯಾತ ಪಿಟೀಲು ವಾದಕರಾದ ಟಿ.ಎನ್ ಕೃಷ್ಣನ್.
ಬೇಕಂದಾಗ ಹರೆಯವನ್ನು ಪಡೆದುಕೊಳ್ಳುವ ದೈವಶಕ್ತಿ ಯಾರಿಗೆ ತಾನೆ ಬೇಡ? ಏನು ತಿಂದರೂ ಜೀರ್ಣಿಸಿಕೊಳ್ಳುವ, ಎಷ್ಟು ಬೇಕಾದರೂ ಕುಣಿಯುವ ಓಡುವ ಹಾಗೂ ನಿದ್ರಿಸುವ ಮಂತ್ರಶಕ್ತಿ ಯಾರಿಗೆ ತಾನೆ ಬೇಡ ಹೇಳಿ. ಸಾಕಷ್ಟು ಸ್ನೇಹಿತರನ್ನು ಪಡೆಯುವ ಯೌವನ ಎಲ್ಲರಿಗೂ ಬೇಕು. ಆ ಯೌವನದ ಗುಟ್ಟು ಸಂಗೀತದಲ್ಲಿದೆ. ಮೈಯಲ್ಲಿ ಮಿಂಚು ಹರಿಸುವ ಹಾಗೂ ಹೊಸದೊಂದು ಲೋಕಕ್ಕೆ ಕರೆದೊಯ್ಯುವ ಸಂಗೀತದ ರಸದೌತಣವನ್ನು ಪಬ್ಲಿಕ್ ಮ್ಯೂಸಿಕ್ (PUBLiC Music) ಸತತ ಹತ್ತು ವರ್ಷಗಳಿಂದ ಕರ್ನಾಟಕದ (Karnataka) ಜನತೆಗೆ ಹಾಗೂ ಸಾಗರದಾಚೆಗಿನ ಮ್ಯೂಸಿಕ್ ಅಭಿಮಾನಿಗಳಿಗೆ ನೀಡುತ್ತಾ ಬಂದಿದೆ. ಇದನ್ನೂ ಓದಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸಿ: ಫ್ರಾನ್ಸ್ ಅಧ್ಯಕ್ಷ ಒತ್ತಾಯ
ದಶೋತ್ಸವ ಹೆಸರಿನ ಮೂಲಕ ಕನ್ನಡಿಗರ ಪ್ರಪ್ರಥಮ ಮ್ಯೂಸಿಕ್ ಚಾನೆಲ್ ಪಬ್ಲಿಕ್ ಪಬ್ಲಿಕ್ ಮ್ಯೂಸಿಕ್ ಹತ್ತನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಸೆಪ್ಟೆಂಬರ್ 28ರಂದು ಪಬ್ಲಿಕ್ ಮ್ಯೂಸಿಕ್‌ಗೆ ಹಬ್ಬದ ಸಂಭ್ರಮ. ಅಂದು ದಿನಪೂರ್ತಿ ಕಲರ್‌ಫುಲ್ ಕಾರ್ಯಕ್ರಮಗಳು ನಡೆಯುತ್ತವೆ. ಸಂಗೀತವನ್ನು ಮನಸಾರೆ ಅಪ್ಪಿ, ಸಂಗೀತದ ಬಗ್ಗೆ ವಿಶೇಷ ಪ್ರೀತಿ ಇರೋ ಪಬ್ಲಿಕ್ ಟಿ.ವಿಯ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ (HR Ranganath) ಬೆಳಗ್ಗೆ 10ಗಂಟೆ 10ನಿಮಿಷ 10 ಸೆಕೆಂಡ್‌ಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಈ ದಶೋತ್ಸವದ (10 Anniversary) ಉದ್ಘಾಟನೆಯಲ್ಲಿ ಲಹರಿ ಮ್ಯೂಸಿಕ್‌ನ ಮಾಲೀಕರಾದ ಮನೋಹರ್ ನಾಯ್ಡು, ಆನಂದ್ ಆಡಿಯೋ ಕಂಪನಿಯ ಮುಖ್ಯಸ್ಥರಾದ ಶ್ಯಾಮ್ ಚಾಬ್ರಿಯಾ, ಅಶ್ವಿನಿ ರೆಕಾರ್ಡಿಂಗ್ ಕಂಪನಿಯ ಅಶ್ವಿನಿ ರಾಮ್ ಪ್ರಸಾದ್ ಹಾಗೂ ಝೇಂಕಾರ್ ಮ್ಯೂಸಿಕ್‌ನ ಭರತ್ ಜೈನ್ ಉಪಸ್ಥಿತರಿರುತ್ತಾರೆ.
ಭಾರತದ ರಿಯಲ್‌ಸ್ಟಾರ್ ಉಪೇಂದ್ರ, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಚಿತ್ರ ಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್, ಗಾಯಕಿ ಐಶ್ವರ್ಯ ರಂಗರಾಜನ್ ಹಾಗೂ ನಟಿ ರೀಷ್ಮ ನಾಣಯ್ಯ ಕಾರ್ಯಕ್ರಮದ ಹೊಳಪನ್ನು ಹೆಚ್ಚಿಸಲಿದ್ದಾರೆ. ದಶೋತ್ಸವದ ಪ್ರಯುಕ್ತ ಹತ್ತು ವಿಶೇಷ ಲೈವ್ ಶೋಗಳು ನಡೆಯಲಿವೆ.
ಸ್ಯಾಂಡಲ್‌ವುಡ್‌ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಗಾಯಕ ಹಾಗೂ ಸಂಗೀತ ನಿರ್ದೇಶಕ ನವೀನ್ ಸಜ್ಜು, ಕನ್ನಡದ ಮೊದಲ ಮಹಿಳಾ ಇಂಡಿಪೆಂಡೆಂಟ್ ಸಿಂಗರ್ ಸಂಗೀತ ರಾಜೀವ್ ಸೇರಿದಂತೆ ಸ್ಯಾಂಡಲ್‌ವುಡ್‌ನ ಸಾಕಷ್ಟು ಸೆಲೆಬ್ರಿಟಿಗಳು ಕಾರ್ಯಕ್ರಮದಲ್ಲಿ ಇರಲಿದ್ದಾರೆ.
ಮಲಯ ಮಾರುತ ಚಿತ್ರದ ಎಲ್ಲೆಲ್ಲೂ ಸಂಗೀತವೇ ಹಾಡಿನಂತೆ ಹತ್ತು ವರ್ಷಗಳಲ್ಲಿ ಪಬ್ಲಿಕ್ ಮ್ಯೂಸಿಕ್ ಸಂಗೀತದ ಮೂಲಕ ಎಲ್ಲಾ ಕಡೆ ಪಸರಿಸಿಕೊಂಡಿದೆ. ಮೊದಲ ವರ್ಷದಿಂದ ಇಂದು ದಶಕದವರೆಗೂ ಪಬ್ಲಿಕ್ ಮ್ಯೂಸಿಕ್ ದಿನದಿಂದ ದಿನಕ್ಕೆ ಆಪ್ಡೇಟ್ ಆಗುತ್ತಾ, ಎಲ್ಲಾ ಜನರೇಶನ್‌ಗೂ ಇಷ್ಟವಾಗುವಂತ ಹಾಡುಗಳನ್ನು ಪ್ರಸಾರ ಮಾಡುತ್ತಾ ದಶೋತ್ಸವದ ಸಂಭ್ರಮದವರೆಗೂ ಬಂದು ನಿಂತಿದ್ದೇವೆ. ಈ ಸಂಭ್ರಮಕ್ಕೆ ಮುಖ್ಯ ಕಾರಣ ಕನ್ನಡಿಗರು. ಮೊದಲ ವರ್ಷದಿಂದ ಇಲ್ಲಿಯವರೆಗೂ ಜೊತೆಗೆ ನಿಂತಿದ್ದೀರಿ, ಬೆನ್ನುತಟ್ಟಿ ಬೆಂಬಲ ಕೊಟ್ಟಿದ್ದೀರಿ. ಇದೇ ರೀತಿ ಮುಂದೆಯೋ ನಿಮ್ಮ ಬೆಂಬಲ ಇರುತ್ತೆ ಎನ್ನುವ ಗಟ್ಟಿ ನಂಬಿಕೆಯಲ್ಲಿದ್ದೇವೆ.
ಲಂಡನ್: ಐಫೋನ್ (iPhone) ಉತ್ಪಾದಿಸುವ ಅಮೆರಿಕದ ಆಪಲ್ (Apple) ಕಂಪನಿಗೆ ಯೂರೋಪಿಯನ್ ಯೂನಿಯನ್‌ನ (European Union) ಆಂಟಿಟ್ರಸ್ಟ್ ನಿಯಂತ್ರಕ ಭರ್ಜರಿ 1.84 ಬಿಲಿಯನ್ ಯುರೋ (ಅಂದಾಜು 16,584 ಕೋಟಿ ರೂ.) ದಂಡವನ್ನು ವಿಧಿಸಿದೆ.
ಸ್ಪರ್ಧಾತ್ಮಕ ನಿಯಮ ಉಲ್ಲಂಘಿಸಿ ಆ್ಯಪಲ್ ತನ್ನ ಉತ್ಪನ್ನಗಳಲ್ಲಿ ಸಂಗೀತ ಸೇವೆ ನೀಡುವ ಹಲವು ಕಂಪನಿಗಳ ಆಪ್‌ಗಳ ಸೇವೆ ನಿರ್ಬಂಧ ಹೇರಿ ತಾನು ಸೂಚಿಸಿದ ಉತ್ಪನ್ನಗಳನ್ನು ಮಾತ್ರ ಗ್ರಾಹಕರು ಬಳಸುವಂತೆ ಮಾಡಿದೆ. ಅನಾರೋಗ್ಯಕರ ಸ್ಪರ್ಧೆಗೆ ಉದಾಹರಣೆ ಎಂದು ಅಭಿಪ್ರಾಯಪಟ್ಟ ಒಕ್ಕೂಟ ಭಾರೀ ಪ್ರಮಾಣದ ದಂಡ ವಿಧಿಸಿದೆ. ಇದನ್ನೂ ಓದಿ: ಶೀಘ್ರವೇ ಭಾರತದಲ್ಲಿ ಪಿಕ್ಸೆಲ್ ಫೋನ್ ತಯಾರಿಸಲಿದೆ ಗೂಗಲ್
ಐದು ವರ್ಷದ ಹಿಂದೆ ಡಿಜಿಟಲ್ ಮ್ಯೂಸಿಕ್ (Digital Music) ಸೇವೆ ನೀಡುವ ಸ್ಪಾಟಿಫೈ (Spotify) ನೀಡಿದ ದೂರಿನ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಒಕ್ಕೂಟ ಈಗ ಅಂತಿಮ ನಿರ್ಧಾರ ಪ್ರಕಟಿಸಿದೆ.
ಒಂದು ದಶಕದವರೆಗೆ, ಆಪ್ ಸ್ಟೋರ್ ಮೂಲಕ ಸಂಗೀತ ಸ್ಟ್ರೀಮಿಂಗ್ ಅಪ್ಲಿಕೇಶನ್‌ಗಳ ವಿತರಣೆಗಾಗಿ ಆಪಲ್ ಮಾರುಕಟ್ಟೆಯಲ್ಲಿ ತನ್ನ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದೆ. ಯುರೋಪಿಯನ್ ಯೂನಿಯನ್ ಆಂಟಿಟ್ರಸ್ಟ್ ನಿಯಮಗಳ ಅಡಿಯಲ್ಲಿ ಈ ರೀತಿ ನಿರ್ಬಂಧ ಹೇರುವುದು ಕಾನೂನುಬಾಹಿರ ಎಂದು ಒಕ್ಕೂಟ ಹೇಳಿದೆ. ಇದನ್ನೂ ಓದಿ: ಎರಡನೇ ಐಫೋನ್ ಘಟಕ ತೆರೆಯಲು ಮಾತುಕತೆ ಆರಂಭಿಸಿದ ಟಾಟಾ
ಯಾವುದೇ ಕಂಪನಿಗೆ ಗ್ರಾಹಕರನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಗ್ರಾಹಕನಿಗೆ ಏನು ಬೇಕೋ ಅದನ್ನು ಪಡೆಯಲು ಸ್ವಾತಂತ್ರ್ಯ ನೀಡಬೇಕು. ಬೇರೆ ಸೇವೆ ಬಳಸಲು ಅವಕಾಶ ನೀಡದೇ ತಾನು ನೀಡಿದ್ದನ್ನೇ ಬಳಸಬೇಕು ಎಂಬ ನೀತಿಯನ್ನು ಅಳವಡಿಸಿದವರಿಗೆ ಈ ತೀರ್ಪು ಪ್ರಬಲ ಸಂದೇಶವನ್ನು ಕಳುಹಿಸಿದೆ ಎಂದು ಸ್ಪಾಟಿಫೈ ತೀರ್ಪನ್ನು ಸ್ವಾಗತಿಸಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಮಲಯಾಳಂ (Malayalam) ಸಿನಿಮಾ (Music) ರಂಗದ ಹೆಸರಾಂತ ಸಂಗೀತ ನಿರ್ದೇಶಕ, ಸಿನಿಮಾ ಸಂಗೀತದಲ್ಲಿ ಸಾಕಷ್ಟ ಪ್ರಯೋಗಗಳನ್ನು ಮಾಡಿರುವ ಕೆ.ಜೆ. ಜಾಯ್ (KJ Joy) ನಿಧನರಾಗಿದ್ದಾರೆ (Passed Away). ಅವರಿಗೆ 77 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಲವ್ ಲೆಟರ್ ಸಿನಿಮಾದ ಮೂಲಕ 1975ರಲ್ಲಿ ಸಿನಿಮಾ ರಂಗ ಪ್ರವೇಶ ಮಾಡಿದ್ದರು ಜಾಯ್. ನಂತರ ಸರ್ಪಂ, ಪ್ರಿಯಾಪುತ್ರನ್, ಸ್ನೇಹ ಯಮುನಾ ಸೇರಿದಂತೆ ಸಾಕಷ್ಟು ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ್ದ ಹೆಗ್ಗಳಿಕೆ ಇವರದ್ದು.
ಸಿನಿಮಾ ಸಂಗೀತದ ವಿಚಾರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಿದ್ದಾರೆ ಜಾಯ್. ಮಲಯಾಳಂ ಸಿನಿಮಾ ರಂಗಕ್ಕೆ ಕೀ ಬೋರ್ಡ್ ಸೇರಿದಂತೆ ಅನೇಕ ಆಧುನಿಕ ವಾದ್ಯವನ್ನು ಪರಿಚಯಿಸಿದವರು. ಹಾಗಾಗಿ ಮಲಯಾಳಂ ಸಿನಿಮಾ ಕ್ಷೇತ್ರ ಮೊದಲ ಟೆಕ್ನೋ ಸಂಗೀತಾಗಾರ ಎಂದು ಕರೆಯುತ್ತಿದೆ.
ಹಲವಾರು ಬಾರಿ ಮರು ಚಿತ್ರೀಕರಣ, ಮತ್ತೆ ಮತ್ತೆ ತಿದ್ದುಪಡಿಗಳು, ಹಲವಾರು ಬದಲಾವಣೆಗಳೊಂದಿಗೆ ಕ್ರೇಜ್ ಹುಟ್ಟುಹಾಕುತ್ತಿರುವ ಸುಧೀರ್ ಅತ್ತಾವರ (Sudhir Attavar) ನಿರ್ದೇಶನದ ಕೊರಗಜ್ಜ (Koragajja) ಸಿನಿಮಾದ ಸಂಗೀತವನ್ನೇ ಸಂಪೂರ್ಣವಾಗಿ ಬದಲಾಯಿಸಿ, ದಕ್ಷಿಣ ಭಾರತದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ (Gopi Sundar) ಈಗ ಸಿನಿಮಾಗೆ ಬ್ಯಾಗ್ರೌಂಡ್ ಸ್ಕೋರ್ ಜೊತೆ ಎಲ್ಲಾ ಹಾಡುಗಳನ್ನು ಮತ್ತೆ ಹೊಸದಾಗಿ ಕಂಪೋಜ್ ಮಾಡುತ್ತಿದ್ದಾರೆ.
ಬಹುಕೋಟಿ ವೆಚ್ಚದಲ್ಲಿ ತ್ರಿವಿಕ್ರಮ ಸಪಲ್ಯ ರವರು ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ನ ಅಡಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಕೊರಗಜ್ಜ ಚಿತ್ರಕ್ಕೆ RRR, ಪುಷ್ಪ ಮೊದಲಾದ ಹಿಟ್ ಸಿನಿಮಾಗಳ ತಂತ್ರಜ್ಞರ ದಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ.
ಸುಮಾರು ಎಂಟು ನೂರು ವರ್ಷಗಳ ಹಿಂದಿನ ಕಥೆಯುಳ್ಳ ಈ ಸಿನಿಮಾದಲ್ಲಿ ಹಾಲಿವುಡ್- ಬಾಲಿವುಡ್ ಕಲಾವಿದರಾದ ಕಬೀರ್ ಬೇಡಿ, ಸಂದೀಪ್ ಸೋಪರ್ಕರ್, ಗಣೇಶ್ ಆಚಾರ್ಯ ಜೊತೆ ಶ್ರುತಿ, ಭವ್ಯ ಮೊದಲಾದವರು ಅಭಿನಯಿಸುತ್ತಿದ್ದಾರೆ. ಋತಿಕ ಎನ್ನುವ ಹೊಸ ಮುಖ ಕೊರಗಜ್ಜನ ತಾಯಿ ಕೊರೊಪೊಳು ಪಾತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಪರಿಚಯ ವಾಗುತ್ತಿದ್ದಾರೆ.
ಉಳಿದಂತೆ ಜೀತ್ ಜೊಸ್ಸಿ ಮತ್ತು ವಿದ್ಯಾಧರ್ ಶೆಟ್ಟಿ ಸಂಕಲನ, ಮನೋಜ್ ಪಿಳ್ಳೈ ಮತ್ತು ಪವನ್ ವಿ ಛಾಯಾಗ್ರಹಣ, ಸುಧೀರ್ ಅತ್ತಾವರ್ ಕಲಾ ನಿರ್ದೇಶನ, ಬಿಬಿನ್ ದೇವ್ ಸೌಂಡ್ ಡಿಸೈನಿಂಗ್ ಚಿತ್ರಕ್ಕಿದೆ. ಮಾರ್ಚ್ ಕೊನೆಗೆ ಸಿನಿಮಾ ಬಿಡುಗಡೆಗಾಗಿ ತಯಾರಿ ನಡೆದಿದೆ.
ಸುಗಮ ಸಂಗೀತ (Music) ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯುವ ಗಾಯಕ, ಸಂಗೀತ ಸಂಯೋಜಕ ಮನೋಜ್ ವಸಿಷ್ಠ (Manoj Vasistha) ಅನಾರೋಗ್ಯದ ಕಾರಣದಿಂದಾಗಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಿ ಇಂದು ಇಹಲೋಕ (Passed Away) ತ್ಯಜಿಸಿದ್ದಾರೆ.
ಕನ್ನಡ ಕಿರುತೆರೆಯ ಬಹುತೇಕ ರಿಯಾಲಿಟಿ ಶೋಗಳಲ್ಲಿ ಮನೋಜ್ ಮೆಂಟರ್ ಆಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಪ್ರವೀಣ್ ಡಿ ರಾವ್ ಅವರ ಅನೇಕ ಧಾರಾವಾಹಿ ಶೀರ್ಷಿಕೆಗಳಿಗೆ ಮನೋಜ್ ವಸಿಷ್ಠ ಕೆಲಸ ಮಾಡಿದ್ದಾರೆ. ಪತ್ನಿ ಅರುಂಧತಿ (Arundhati) ಕೂಡ ಗಾಯಕಿ. ಕನ್ನಡ ಕೋಗಿಲೆ ಸೇರಿದಂತೆ ಹಲವಾರು ರಿಯಾಲಿಟಿ ಶೋಗಳಲ್ಲಿ ಅರುಂಧತಿ ಮತ್ತು ಮನೋಜ್ ಒಟ್ಟಿಗೆ ವೇದಿಕೆಯ ಮೇಲೆ ಕಾಣಿಸಿಕೊಂಡಿದ್ದಾರೆ.
ರಿಯಾಲಿಟಿ ಶೋಗಳು ಮಾತ್ರವಲ್ಲ, ಸಾಕಷ್ಟು ಸಂಗೀತ ಕಾರ್ಯಕ್ರಮಗಳನ್ನೂ ಈ ಜೋಡಿ ನೀಡಿದೆ. ಅಗಲಿದ ಮನೋಜ್ ಅವರಿಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಶೃದ್ಧಾಂಜಲಿ ಸಲ್ಲಿಸಿದ್ದಾರೆ. ಮಧ್ಯಾಹ್ನದ ನಂತರ ಮನೋಜ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಜಯನಗರ ಹೌಸಿಂಗ್ ಸೊಸೈಟಿ ಬಳಿಯ ಬೇ ಅಪಾರ್ಟ್ಮೆಂಟ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ.
‘ಕವಚ’ ಸಿನಿಮಾ ಖ್ಯಾತಿಯ ನಟಿ ಹಾಗೂ ನಿರ್ಮಾಪಕಿ ಇತಿ ಆಚಾರ್ಯ (Iti Acharya) ಅಮೆರಿಕನ್ (American) ಮ್ಯೂಸಿಕ್ ವೀಡಿಯೋದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮೆರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ (Music) ನಿರ್ದೇಶಕ ಕಂಪೋಸ್ ಮಾಡಿರುವ ಆಲ್ಬಂ ಸಾಂಗ್ ನಲ್ಲಿ ಕನ್ನಡತಿ ಇತಿ ಆಚಾರ್ಯ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ.
ಮೆರ್ಲಿನ್ ಬಾಬಾಜಿ (Merlin Babaji) ಅಮೆರಿಕದಲ್ಲಿ ಖ್ಯಾತಿ ಗಳಿಸಿರುವ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ. ಕಳೆದ ವರ್ಷ ಇವರ ‘ವೈಬ್ಸ್’ ಸಾಂಗ್ ಬಿಡುಗಡೆಯಾಗಿ ಪ್ರಪಂಚದಾದ್ಯಂತ ಜನಪ್ರಿಯ ಗೊಂಡಿತ್ತು. ಸೋಶಿಯಲ್ ಮೀಡಿಯಾ ಸೆನ್ಸೇಶನ್ ಆಗಿದ್ದ ‘ವೈಬ್ಸ್’ ಸಾಂಗ್ ಹತ್ತು ಮಿಲಿಯನ್ ವೀವ್ಸ್ ಪಡೆದುಕೊಂಡಿತ್ತು. ಇದೀಗ ಮತ್ತೊಂದು ವೀಡಿಯೋ ಸಾಂಗ್ ಮೂಲಕ ಮೆರ್ಲಿನ್ ಸೆನ್ಸೇಶನ್ ಕ್ರಿಯೇಟ್ ಮಾಡಲು ಸಜ್ಜಾಗಿದ್ದಾರೆ. ತಮ್ಮ ಹೊಸ ವೀಡಿಯೋ ಹಾಡಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿರುವ ನಟಿ ಹಾಗೂ ಮಾಡೆಲ್ ಇತಿ ಆಚಾರ್ಯ ಅವರ ಜೊತೆ ಕೈ ಜೋಡಿಸಿರೋದು ವಿಶೇಷ. ಇದನ್ನೂ ಓದಿ: 14ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ಮೆರ್ಲಿನ್ ಬಾಬಾಜಿ ಕಳೆದ ಒಂದು ವರ್ಷದಿಂದ ನನಗೆ ಪರಿಚಿತರು. ಅವರ ಸಂಗೀತದ ದೊಡ್ಡ ಅಭಿಮಾನಿ ನಾನು. ‘ಲವ್ ಹರ್ ಟೂ ಮಚ್’ ಸಾಂಗ್ ಕೇಳಿದ ಮೇಲೆ ತುಂಬಾ ಇಷ್ಟವಾಯ್ತು. ನಾನು ಈ ಹಾಡಿನಲ್ಲಿ ನಟಿಸುವೆ ಎಂದು ಹೇಳಿದೆ ಎಂದು ಇತಿ ಆಚಾರ್ಯ ಸಂತಸ ಹಂಚಿಕೊಂಡಿದ್ದಾರೆ.
ಇತಿ ಆಚಾರ್ಯ ಸಹೋದರ ಅಭಿ ಆಚಾರ್ಯ ಕೂಡ ಅಮೇರಿಕಾದಲ್ಲಿ ಸಂಗೀತ ಕಲಾವಿದರಾಗಿದ್ದು, 2023ರ ಗ್ರ್ಯಾಮ್ಮಿ ಅವಾರ್ಡ್ ನಲ್ಲಿ ಇವರ ಹೆಸರು ನಾಮ ನಿರ್ದೇಶನವಾಗಿತ್ತು. ಅಮೇರಿಕಾದಲ್ಲಿ ನನ್ನ ಸಹೋದರ ನೆಲೆಸಿರೋದು ಅಲ್ಲಿನ ಜನರೊಂದಿಗೆ ಸಂಪರ್ಕ ಸಾಧಿಸಲು ಸಹಾಯವಾಗಿದೆ ಎನ್ನುತ್ತಾರೆ ಇತಿ ಆಚಾರ್ಯ.
ನಟಿ ಹಾಗೂ ಮಾಡೆಲ್ ಆಗಿರುವ ಇತಿ ಆಚಾರ್ಯ 2016ರ ಮಿಸ್ ಸೌತ್ ಇಂಡಿಯಾ ವಿನ್ನರ್. ಆರ್ ವಿ ಎಸ್ ಪಿ ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಒಳಗೊಂಡಂತೆ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಹಿರಿಮೆ ಇವರದ್ದು, 2022ರ ಕ್ಯಾನಿಸ್ ಫಿಲ್ಮಂ ಫೆಸ್ಟ್ ರೆಡ್ ಕಾರ್ಪೆಟ್ ನಲ್ಲೂ ಇತಿ ಹೆಜ್ಜೆ ಹಾಕಿದ್ದಾರೆ. ಇದೀಗ ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದ್ದಾರೆ.
ಬೆಂಗಳೂರು: ಕಾಂಗ್ರೆಸ್(Congress) ವಿರುದ್ಧ ಎಂಆರ್‌ಟಿ ಮ್ಯೂಸಿಕ್(MRT Music) ನ್ಯಾಯಾಂಗ ನಿಂದನೆ(Contempt of Court ) ಅರ್ಜಿ ಸಲ್ಲಿಸಿದ್ದು ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಹೈಕೋರ್ಟ್‌ನಲ್ಲಿ(High Court) ನಡೆದ ವಿಚಾರಣೆ ವೇಳೆ ಕೆಜಿಎಫ್ ಚಾಪ್ಟರ್ 2(KGF 2) ಸಿನಿಮಾದ ಹಾಡು ತೆಗೆಯುತ್ತೇವೆಂದು ಕಾಂಗ್ರೆಸ್ ಮುಚ್ಚಳಿಕೆ ನೀಡಿತ್ತು. ಆದರೆ ಈ ಹಾಡನ್ನು ಇನ್ನೂ ತೆಗೆದಿಲ್ಲ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ದ್ವಿಸದಸ್ಯ ಪೀಠ ರಾಹುಲ್ ಗಾಂಧಿ (Rahul Gandhi), ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್(Jairam Ramesh) ಅವರಿಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿಯ ಮುಂದಿನ ವಿಚಾರಣೆ ಜನವರಿ 12ಕ್ಕೆ ನಡೆಯಲಿದೆ.
ಏನಿದು ಪ್ರಕರಣ?:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಸ್ಥೆಯ ಅನುಮತಿ ಇಲ್ಲದೇ ಕೆಜಿಎಫ್ ಹಾಡನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಬಳಸಿದೆ. ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವ ಎಂಆರ್‌ಟಿ ಸಂಸ್ಥೆಯು ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ, ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿತ್ತು.
ಕೆಜಿಎಫ್ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್, ಯೂಟ್ಯೂಬ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಬಳಿಕ ಕೋರ್ಟ್ ಮೊರೆ ಹೋಗಿತ್ತು. ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಯಾತ್ರೆಯ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡುವಂತೆ ಟ್ವಿಟ್ಟರ್ ಕಂಪನಿಗೆ ಬೆಂಗಳೂರು ನಗರ ಜಿಲ್ಲಾ ವಾಣಿಜ್ಯ ಕೋರ್ಟ್ ಆದೇಶಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ನ.8 ರಂದು ನ್ಯಾ. ಜಿ. ನರೇಂದರ್ ಮತ್ತು ನ್ಯಾ.ಪಿಎನ್ ದೇಸಾಯಿ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆದ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ನಮ್ಮ ಪ್ರತಿವಾದಿಗಳು ಸಂಪೂರ್ಣ ಟ್ವಿಟ್ಟರ್ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಆದರೆ 45 ಸೆಕೆಂಡಿನ ಆಡಿಯೋದಲ್ಲಿ ಮಾತ್ರ ಮ್ಯೂಸಿಕ್ ಬಳಕೆ ಮಾಡಲಾಗಿದೆ. ಮ್ಯೂಸಿಕ್ ಬಳಸಿ ನಾವು ತಪ್ಪು ಮಾಡಿದ್ದೇವೆ. ಕೆಜಿಎಫ್ ಮ್ಯೂಸಿಕ್ ಎಲ್ಲೆಲ್ಲಿ ಬಳಕೆ ಮಾಡಲಾಗಿದೆಯೋ ಅವೆಲ್ಲವನ್ನು ತೆಗೆದು ಹಾಕುತ್ತೇವೆ ಎಂದು ಮನವಿ ಮಾಡಿದ್ದರು.
ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕೆಜಿಎಫ್ ಹಾಡನ್ನು ಬಳಕೆ ಮಾಡಿದ್ದ ಟ್ವೀಟ್‌ಗಳನ್ನು(Tweet) ತೆಗೆದು ಹಾಕಬೇಕೆಂದು ಹೈಕೋರ್ಟ್ ಕಾಂಗ್ರೆಸ್‌ಗೆ ಆದೇಶ ನೀಡಿ ಕೆಳ ನ್ಯಾಯಾಲಯ ನೀಡಿದ ಆದೇಶವನ್ನು ರದ್ದುಗೊಳಿಸಿತ್ತು.
ದೂರುದಾರರು ಸಂಪೂರ್ಣ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಇಲ್ಲಿ ಪ್ರತಿವಾದಿಯವರಿಗೆ ರಾಜಕೀಯ ಕುಮ್ಮಕ್ಕು ಇದೆಯೇ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ. ನಾವು ತಪ್ಪು ಮಾಡಿದ್ದೇವೆ. ಆದರೆ ಇದರಲ್ಲಿ ಯಾವುದೇ ವಾಣಿಜ್ಯ ಉದ್ದೇಶ ಇಲ್ಲ. ನಮ್ಮ ಅಭಿಪ್ರಾಯವನ್ನು ಆಲಿಸದೇ ಕೆಳ ನ್ಯಾಯಾಲಯ ಈ ರೀತಿಯ ಆದೇಶ ನೀಡಿದ್ದು ಎಷ್ಟು ಸರಿ? ದೇಶದ ದೊಡ್ಡ ರಾಜಕೀಯ ಪಕ್ಷದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯಕ್ತಪಡಿಸುವ ಸಾಮಾಜಿಕ ಮಾಧ್ಯಮ ಧಮನಿಸುವುದಕ್ಕೆ ಕೋರ್ಟ್ ಅನುಮತಿ ನೀಡಬಾರದು ಎಂದು ಸಿಂಘ್ವಿ ಮನವಿ ಮಾಡಿದ್ದರು.
ಈ ವೇಳೆ ಎಂಆರ್‌ಟಿ ಸ್ಟುಡಿಯೋ ಪರ ವಕೀಲರಿಗೆ, ಈ ಪ್ರಕರಣದಲ್ಲಿ ಕಾಂಗ್ರೆಸ್ ಟ್ವಿಟ್ಟರ್ ಖಾತೆಯನ್ನು ತನಿಖೆ ಯಾಕೆ ಮಾಡಬೇಕು? ಆಯುಕ್ತರನ್ನು ಯಾಕೆ ನೇಮಿಸಬೇಕು? ಅವರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ತಪ್ಪನ್ನು ಒಪ್ಪಿಕೊಂಡ ಮೇಲೆ ತನಿಖೆ ಯಾಕೆ ಎಂದು ಪ್ರಶ್ನಿಸಿತು.
ಅಭಿಷೇಕ್ ಮನು ಸಿಂಘ್ವಿ, ನ.9ರ ಮಧ್ಯಾಹ್ನ 2 ಗಂಟೆಯ ಒಳಗಡೆ ಎಲ್ಲೆಲ್ಲಿ ಮ್ಯೂಸಿಕ್ ಬಳಕೆ ಮಾಡಿದ್ದೇವೋ ಅವುಗಳನ್ನು ತೆಗೆದು ಹಾಕುತ್ತೇವೆ. ಅರ್ಜಿದಾರ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಗೆ ದಾಖಲೆ ನೀಡುತ್ತೇವೆ ಎಂದು ತಿಳಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಕಾಪಿರೈಟ್ ಉಲ್ಲಂಘನೆ ಮಾಡಿದ ಎಲ್ಲಾ ಟ್ವೀಟ್‌ಗಳನ್ನು ತೆಗೆದು ಹಾಕುವಂತೆ ಆದೇಶಿಸಿತ್ತು.
Live Tv
[brid partner=56869869 player=32851 video=960834 autoplay=true]
ಪ್ರತೀ ತಾಯಿ, ಚಿನ್ನ, ಮುದ್ದು, ಬಂಗಾರಿ, ಪುಟ್ಟ, ಚಿನ್ನುಮರಿ ಅಂತೆಲ್ಲ ಹೆಸರಿಡಿದು ಕರೆಯುವ ಲಾಲಿ ಹಾಡಿಗೆ ಮಗು ಮಲಗುತ್ತದೆ. ಎಂತಹ ಕಠಿಣ ಮನುಷ್ಯನಾದರೂ ಸಹ ಸಂಗೀತದ ರಾಗಕ್ಕೆ, ಒಮ್ಮೆಯಾದರೂ ತಲೆದೂಗಿಯೇ ಇರುತ್ತಾನೆ. ಒಂದಲ್ಲ ಒಂದು ಹಾಡಿಗೆ ಕೈಕಾಲು ಬೆರಳು, ತಾಳ ಹಾಕೆ ಇರುತ್ತಾನೆ. ಆ ಸೆಳೆಯುವ ಶಕ್ತಿ ಸಂಗೀತಕ್ಕಿದೆ. ಈ ಸಂಗೀತದ ಸಪ್ತಸ್ವರಗಳನ್ನು ಪಬ್ಲಿಕ್ ಮ್ಯೂಸಿಕ್(Public Music) ಸತತ ಎಂಟು ವರ್ಷಗಳಿಂದ ಕನ್ನಡಿಗರಿಗೆ ನೀಡುತ್ತಲೇ ಬಂದಿದೆ.
ಈ ಎಂಟು ಮೆಟ್ಟಿಲುಗಳನ್ನು ಸಲೀಸಾಗಿ ದಾಟುವಂತೆ ಮಾಡಿದ್ದು ಕನ್ನಡಿಗರು. ಪ್ರತೀ ಹೆಜ್ಜೆಯಲ್ಲೂ ಜೊತೆಗಿದ್ದು, ಚಿಕ್ಕಪುಟ್ಟ ತಪ್ಪುಗಳನ್ನು ತಿದ್ದಿ-ತೀಡಿ ಇಲ್ಲಿಯವರೆಗೂ ತಂದು ನಿಲ್ಲಿಸಿದ್ದೀರಿ. ಮುಂದಿನ ದಿನಗಳಲ್ಲೂ ಕೈ ಹಿಡಿದು ಮುನ್ನಡೆಸುತ್ತೀರಿ ಎನ್ನುವ ಭರವಸೆಯೂ ನಮಗೆ ಕೊಟ್ಟಿದ್ದೀರಿ. 8 ವರ್ಷಗಳ ಕಾಲ ಪಬ್ಲಿಕ್ ಮ್ಯೂಸಿಕ್ ಸೂಪರ್ ಹಿಟ್ ಹಾಡುಗಳ ಜೊತೆಗೆ ಲೈವ್ ಶೋ, ಹಬ್ಬ-ಹರಿದಿನಗಳಲ್ಲಿ ಹೊಸ ಕಾರ್ಯಕ್ರಮ, ಸ್ಪೆಷಲ್ ಕಾಂಟೆಸ್ಟ್ ಹಾಗೂ ಸೆಲೆಬ್ರೆಟಿ ಷೋಗಳು ನಮ್ಮ-ನಿಮ್ಮ ಭಾಂದವ್ಯ ಹೆಚ್ಚುವಂತೆ ಮಾಡಿವೆ. ʼಪಬ್ಲಿಕ್ ಮ್ಯೂಸಿಕೋತ್ಸವ ಎನ್ನುವ ಟೈಟಲ್‍ನಲ್ಲಿ 8ನೇ ವರ್ಷದ ವಾರ್ಷಿಕೋತ್ಸವವನ್ನು ಸ್ಯಾಂಡಲ್‍ವುಡ್ ದಿಗ್ಗಜರ ಜೊತೆ ಆಚರಿಸುತ್ತಿದ್ದೇವೆ. 8 ವರ್ಷಗಳ ಏಳುಬೀಳುಗಳ ಜರ್ನಿಯಲ್ಲಿ ಜೊತೆಗಿದ್ದ ಎಲ್ಲರಿಗೂ ನಮ್ಮದೊಂದು ದೊಡ್ಡ ಸೆಲ್ಯೂಟ್.
ಈ ಎಂಟರ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಸಂಗೀತದ ರೆಂಬೆ-ಕೊಂಬೆ, ಬೇರಿನಂತಿರೋ ಸ್ಯಾಂಡಲ್‍ವುಡ್‍ನ ಎಂಟು ವಿಭಾಗದ ಎಂಟು ಸೆಲೆಬ್ರಿಟಿಗಳನ್ನು ಕರೆಸಿ ಸಂಗೀತದ ಮಾಧುರ್ಯವನ್ನು ಸವಿಯಲಾಗುತ್ತಿದೆ. ನಟರಾಗಿಯೂ ಹಾಗೂ ನಿರ್ದೇಶಕರಾಗಿಯೂ ಗುರುತಿಸಿಕೊಂಡಿರೋ ರಿಷಬ್ ಶೆಟ್ಟಿ, ಜೋಗಿ ಪ್ರೇಮ್, ಕನ್ನಡಿಗರಿಗೆ ಸದಾ ಕಾಮಿಡಿ ಕಚಗುಳಿ ಕೊಡುತ್ತಿರುವ ಚಿಕ್ಕಣ್ಣ, ನಟಿ ನಿಶ್ವಿಕಾ ನಾಯ್ಡು, ಸಿನಿಮಾ ಸಾಹಿತಿ ಹಾಗೂ ನಿರ್ದೇಶಕ ಕವಿರಾಜ್ ಸೇರಿದಂತೆ ರಾಜ್ ಕುಟುಂಬದ ಕುಡಿ ಧನ್ಯಾ ರಾಮ್‍ಕುಮಾರ್ ಹಾಗೂ ಸಿಂಗರ್ ಸಂತೋಷ್ ವೆಂಕಿ ಪಬ್ಲಿಕ್ ಮ್ಯೂಸಿಕೋತ್ಸವದಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅಷ್ಟೇ ಅಲ್ಲದೆ ಅನಿವರ್ಸರಿ ಪ್ರಯುಕ್ತ ಪ್ರತೀ ಗಂಟೆ ಸ್ಯಾಂಡಲ್‍ವುಡ್ ದಿಗ್ಗಜರು ಪಬ್ಲಿಕ್ ಮ್ಯೂಸಿಕ್‍ನ ಬಹುಮುಖ್ಯ ಭಾಗವಾಗಿರೋ ʼಪಬ್ಲಿಕ್ʼಗೆ ಚಿಕ್ಕ ಪ್ರಶ್ನೆ ಕೇಳಿ, ದೊಡ್ಡ ಗಿಫ್ಟ್ ಕೊಡುತ್ತಿದ್ದಾರೆ. ಇದರ ಜೊತೆಗೆ ದಿನವಿಡಿ ಕಲರ್‍ಫುಲ್ ಲೈ ಶೋಗಳ ಮೂಲಕ ಪಬ್ಲಿಕ್ ಮ್ಯೂಸಿಕ್ ರಸಿಕರಿಗೆ ಸಾಗರದಷ್ಟು ಮನರಂಜನೆಯನ್ನು ನೀಡಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]