Tag: ಯಕೃತ್‌

  • ಹೆಪಟೈಟಿಸ್-ಬಿ ವೈರಸ್ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ.ಶಕೀಲಾ

    ಹೆಪಟೈಟಿಸ್-ಬಿ ವೈರಸ್ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ.ಶಕೀಲಾ

    – ಲಕ್ಷಣಗಳು ಕಂಡ ಕೂಡಲೇ ಚಿಕಿತ್ಸೆ ಪಡೆಯಬೇಕು

    ಬಳ್ಳಾರಿ: ಯಕೃತ್ತಿನ (Liver) ಮೇಲೆ ಪರಿಣಾಮ ಬೀರುವ ಹೆಪಟೈಟಿಸ್-ಬಿ (Hepatitis B) ಒಂದು ವೈರಸ್ (Virus) ಸೋಂಕಾಗಿದ್ದು, ಗಾಢವಾದ ಮೂತ್ರದ ಬಣ್ಣದಲ್ಲಿ ಬದಲಾವಣೆ, ವಾಕರಿಕೆ ಮುಂತಾದವುಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ (Government Hospital) ಚಿಕಿತ್ಸೆ ಪಡೆಯುವ ಮೂಲಕ ಆರಂಭದಲ್ಲಿಯೇ ರೋಗ ನಿಯಂತ್ರಣಕ್ಕೆ ಸಹಕರಿಸಿ ಎಂದು ರಾಷ್ಟ್ರೀಯ ವೈರಲ್ ಹೆಪಟೈಟಿಸ್ ನಿಯಂತ್ರಣ ಕಾರ್ಯಕ್ರಮದ ಉಪನಿರ್ದೇಶಕರಾದ ಡಾ.ಶಕೀಲಾ.ಎನ್ ಹೇಳಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ನಿರ್ದೇಶನಾಲಯದಡಿ ರಾಷ್ಟ್ರೀಯ ವೈರಲ್ ಹೆಪಟೈಟಿಸ್ ನಿಯಂತ್ರಣ ಕಾರ್ಯಕ್ರಮದ ಮೂಲಕ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳು, ಫಿಜಿಷಿಯನ್, ತಜ್ಞ ವೈದ್ಯರುಗಳಿಗೆ ಬಳ್ಳಾರಿ ನಗರದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ಸಾಮಾನ್ಯವಾಗಿ ಕಾಮಾಲೆ ಎಂದು ಕರೆಸಿಕೊಳ್ಳುವ ಹೆಪಟೈಟಿಸ್‌-ಬಿ ಸೋಂಕು ಆರಂಭದಲ್ಲಿ ಚಿಹ್ನೆಗಳನ್ನು ಗುರುತಿಸಲು ಸಾಧ್ಯವಾಗುವುದಿಲ್ಲ. ಕ್ರಮೇಣ ಚರ್ಮ ಮತ್ತು ಕಣ್ಣುಗಳ ಹಳದಿ, ಗಾಢ ಮೂತ್ರ, ತೀವ್ರ ಆಯಾಸ, ವಾಕರಿಕೆ, ವಾಂತಿ ಸ್ನಾಯು ಮತ್ತು ಕೀಲು ನೋವು, ಹಸಿವಾಗದಿರುವಿಕೆ, ಹೊಟ್ಟೆ ಬಲಭಾಗದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದು, ಈ ಹಂತದಲ್ಲಿಯೂ ನಿರ್ಲಕ್ಷಿಸಿದರೆ ಗಂಭೀರ ಸ್ಥಿತಿಗೆ ರೋಗಿಯ ಆರೋಗ್ಯ ಬದಲಾಗಬಹುದು. ಇದಕ್ಕಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆ ಮತ್ತು ಪರೀಕ್ಷೆ ಕೈಗೊಳ್ಳಲಾಗುತ್ತಿದ್ದು, 2030 ರ ವೇಳೆಗೆ ಹೆಪಟೈಟಿಸ್‌ ಮುಕ್ತ ದೇಶವನ್ನಾಗಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು. ಇದನ್ನೂ ಓದಿ: ಗ್ಯಾರಂಟಿಗೆ ಅನುದಾನ ಕಳೆದ ಬಾರಿ ಎಷ್ಟಿತ್ತು? ಈ ಬಾರಿ ಎಷ್ಟು ಹಂಚಿಕೆಯಾಗಿದೆ? ಸಾಲ ಎಷ್ಟು?

    ಕಾರ್ಯಕ್ರಮದಲ್ಲಿ ಡಿಎಚ್ಓ ಡಾ.ಯಲ್ಲಾ ರಮೇಶ್ ಬಾಬು, ಬಿಮ್ಸ್ ನಿರ್ದೇಶಕ ಡಾ.ಬಿ.ಗಂಗಾಧರ ಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್ ಬಸರೆಡ್ಡಿ, ಎನ್.ವಿ.ಹೆಚ್.ಸಿ.ಪಿ ಸಲಹೆಗಾರರಾದ ಡಾ.ಹರ್ಷಿತಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಡಿಪಿಸಿ ಅರ್ಚನಾ, ಡ್ಯಾಪ್ಕೋ ಮೇಲ್ವಿಚಾರಕ ಗಿರೀಶ್, ಪಿಪಿಸಿ ಅನಿಲ್ ಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ಪಂಪಾಪತಿ ಸೇರಿದಂತೆ 7 ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

  • ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಯಕೃತ್‌ ದಾನ – ಯಶಸ್ವಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ

    ಯಕೃತ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಾಯಿಗೆ ಮಗನಿಂದ ಯಕೃತ್‌ ದಾನ – ಯಶಸ್ವಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ

    ಬೆಂಗಳೂರು: ಯಕೃತ್‌ ಕ್ಯಾನ್ಸರ್‌ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್‌ ಕಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

    ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕರಾದ ಡಾ.ಕಿಶೋರ್ ಜಿ.ಎಸ್‌.ಬಿ. ಮತ್ತು ಡಾ.ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ.ಬಿ.ಎಸ್ ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದೆ. ಇದನ್ನೂ ಓದಿ: ಮಳೆಗೆ ಮುಳುಗಿದ ಕರುನಾಡು – ಹಾವೇರಿ, ಕೊಡಗು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ

    ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಲಿವರ್‌ ಟ್ರಾನ್ಸ್‌ಪ್ಲಾಂಟ್‌ ಸರ್ಜನ್‌ ಡಾ. ಕಿಶೋರ್ ಜಿಎಸ್‌ಬಿ, ಮತ್ತು ಡಾ. ಪಿಯೂಷ್ ಸಿನ್ಹಾ, 2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ದೀರ್ಘಕಾಲದಿಂದ ಯಕೃತ್‌ನ ಕಾಯಿಲೆ ಇರುವ ಕಾರಣ ಅವರ ಯಕೃತ್‌ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್‌ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ ಶೈಲಿಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿತ್ತು. ಅವರನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದ ಬಳಿಕ ಪಿತ್ತರಸ ನಾಳದಲ್ಲಿ ಕಲ್ಲು ಇರುವುದು ಪತ್ತೆಯಾಯಿತು. ಗ್ಯಾಸ್ಟ್ರೋ ತಂಡವು ಈ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಯಕೃತ್‌ನ ಕ್ಯಾನ್ಸರ್‌ ಪ್ರಾರಂಭಿಕ ಹಂತದಲ್ಲಿರುವುದು ಸಹ ತಿಳಿದುಬಂತು. ಹೀಗಾಗಿ ಆಕೆಗೆ ಲಿವರ್ ಸಿರೋಸಿಸ್ ಮತ್ತು ಯಕೃತ್ತಿನ ಕ್ಯಾನ್ಸರ್‌ಗೆ ಕೂಡಲೇ ಯಕೃತ್‌ ಕಸಿ ಅಗತ್ಯತೆ ಬಿತ್ತು. ಸ್ವತಃ 31 ವರ್ಷದ ಮಗನೇ ತನ್ನ ಯಕೃತ್‌ನ ಭಾಗವನ್ನು ದಾನ ಮಾಡಲು ಮುಂದಾದರು. ಸಕಾಲದಲ್ಲಿ ಯಕೃತ್‌ ಸಿಕ್ಕ ಪರಿಣಾಮ ಅವರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು ಎಂದು ವಿವರಿಸಿದರು.

    ದಾನಿಯ ಯಕೃತ್ತಿನ ಉಳಿದ ಭಾಗವು ತಕ್ಷಣವೇ ಪುನರುತ್ಪಾದಿಸಲು ಪ್ರಾರಂಭಿಸುತ್ತದೆ. 6 ರಿಂದ 8 ವಾರಗಳಲ್ಲಿ ಅದರ ಸಾಮಾನ್ಯ ಗಾತ್ರಕ್ಕೆ ಯಕೃತ್‌ ಬೆಳೆಯುತ್ತದೆ. ಹೆಚ್ಚಿನ ಯಕೃತ್‌ ದಾನಿಗಳು ಶಸ್ತ್ರಚಿಕಿತ್ಸೆಯ ಒಂದು ವಾರದ ನಂತರ ಸಾಮಾನ್ಯ ಜೀವನಕ್ಕೆ ಮರಳಬಹುದು ಎಂದರು. ಇದನ್ನೂ ಓದಿ: 2 ವರ್ಷಗಳ ಬಳಿಕ ಭಾರೀ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್‌ ಮುಕ್ತ – ಈ ಷರತ್ತು ಅನ್ವಯ

    ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ನಿರ್ದೇಶಕ ಡಾ.ಬಿ.ಎಸ್ ರವೀಂದ್ರ ಮಾತನಾಡಿ, ಯಕೃತ್ತಿನ ಕ್ಯಾನ್ಸರ್ ಅನ್ನು CT ಸ್ಕ್ಯಾನ್ ಸ್ಕ್ರೀನಿಂಗ್‌ನಲ್ಲಿ ಪತ್ತೆ ಹಚ್ಚಲಾಯಿತು. ಕೊಲಾಂಜೈಟಿಸ್‌ನೊಂದಿಗೆ ಸಿರೋಟಿಕ್ ರೋಗಿಗೆ ಚಿಕಿತ್ಸೆ ನೀಡುವುದು ಸವಾಲಿನ ಸಂಗತಿ, ಜೊತೆಗೆ ಸಾಮಾನ್ಯ ಪಿತ್ತರಸ ನಾಳದಿಂದ ಕಲ್ಲುಗಳನ್ನು ಯಶಸ್ವಿಯಾಗಿ ಹೊರತೆಗೆದು ಸ್ಟೆಂಟ್‌ಗಳನ್ನು ಇರಿಸಲು ಸಾಧ್ಯವಾಯಿತು ಎಂದು ವಿವರಿಸಿದರು. ಇದನ್ನೂ ಓದಿ: ಮೋದಿಯನ್ನು ಭೇಟಿಯಾದ ಹೆಚ್‌ಡಿಡಿ, ಹೆಚ್‌ಡಿಕೆ – ಮಹತ್ವದ ವಿಚಾರಗಳ ಕುರಿತು ಚರ್ಚೆ