Tag: ಯಜುವೇಂದ್ರ ಚಹಲ್

  • ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

    ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

    – ಪತ್ನಿಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ
    – ಎಸಿ ಆನ್‌ ಆಗಿದ್ದರೂ ನಾನು ಬೆವರುತ್ತಿದ್ದೆ

    ಮುಂಬೈ: ನಮ್ಮ ದಾಂಪತ್ಯದ ಕುರಿತ ಸುದ್ದಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ, ಟೀಕೆ ನೋಡಿ ಖಿನ್ನತೆಗೆ ಜಾರಿದ್ದೆ. ಈ ಸಂದರ್ಭದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆಯೂ ಯೋಚಿಸಿದ್ದೆ ಎಂದು ಟೀಂ ಇಂಡಿಯಾ ಸ್ಪಿನ್ನರ್‌ ಯಜುವೇಂದ್ರ ಚಹಲ್‌ (Yuzvendra Chahal) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಧನಶ್ರೀ ವರ್ಮಾಗೆ (Dhanashree Verma) ವಿಚ್ಛೇದನ (Divorce) ನೀಡಿದ ವಿಚಾರದ ಬಗ್ಗೆ ಇದೇ ಮೊದಲ ಬಾರಿಗೆ ಚಹಲ್‌ ಮೌನ ಮುರಿದಿದ್ದಾರೆ. ರಾಜ್ ಶಮಾನಿ ಯೂಟ್ಯೂಬ್ ಚಾನಲ್‌ನಲ್ಲಿ ವಿಚ್ಛೇದನದ ಬಗ್ಗೆ ಸಾಕಷ್ಟು ವಿಚಾರ ತಿಳಿಸಿದ್ದಾರೆ.

    ಸುಮಾರು 5 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದ ಯಜುವೇಂದ್ರ ಮತ್ತು ಧನಶ್ರೀ ಅವರಿಗೆ ಈ ವರ್ಷದ ಮಾರ್ಚ್ 20 ರಂದು ಬಾಂಬೆ ಹೈಕೋರ್ಟ್ ವಿಚ್ಛೇದನ ನೀಡಿತ್ತು. ಡಿವೋರ್ಸ್‌ ಪಡೆಯುವ ಕೆಲ ತಿಂಗಳ ಮೊದಲು ಆತ್ಮಹತ್ಯೆಯ ಆಲೋಚನೆಗಳು ಬರುತ್ತಿದ್ದವು ಎಂದು ಚಹಲ್‌ ಹೇಳಿದರು.

    ಚಹಲ್‌ ಹೇಳಿದ್ದೇನು?
    ಡಿಸೆಂಬರ್-ಜನವರಿ (2024–25) ತಿಂಗಳುಗಳಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಸಮಯದಲ್ಲಿ ನಾನು ರಾಜ್ಯ ಕ್ರಿಕೆಟ್‌ ತಂಡದಿಂದ ವಿರಾಮ ಕೇಳಿದ್ದೆ. ನಮ್ಮಿಬ್ಬರ ಮಧ್ಯೆ ಹೊಂದಾಣಿಕೆಯಾಗದ ಕಾರಣ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದೆ.  ಇದನ್ನೂ ಓದಿ: 5 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

    ಈ ಸುದ್ದಿ ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ (Social Media) ಬರುತ್ತಿದ್ದ ಚರ್ಚೆ, ಟೀಕೆಗಳನ್ನು ನೋಡಿ ಖಿನ್ನತೆಗೆ ಜಾರಿದ್ದೆ. ಕ್ರಿಕೆಟಿನಿಂದ ವಿರಾಮ ಪಡೆದರೂ ನಾನು ನಡುಗುತ್ತಿದ್ದೆ. ಎಸಿ ಆನ್‌ ಆಗಿದ್ದರೂ ಬೆವರುತ್ತಿದ್ದೆ. ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ. ಆದರೆ ಸ್ನೇಹಿತ ನನ್ನನ್ನು ತಡೆದ. ಈ ಸಮಯದಲ್ಲಿ ಎರಡೇ ಗಂಟೆ ಮಲಗುತ್ತಿದ್ದೆ.

    ಮದುವೆಯಾದ ಕೆಲ ಸಮಯದ ನಂತರ ನಮ್ಮ ನಡುವೆ ಹೊಂದಾಣಿಕೆ ಸಮಸ್ಯೆ ಕಾಣಿಸತೊಡಗಿತು. ಕ್ರಿಕೆಟ್‌ ಆಡುತ್ತಿದ್ದ ಕಾರಣ ಪತ್ನಿಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ. ಅವಳು ಕೂಡ ತನ್ನ ಕೆಲಸವನ್ನು ಮಾಡುತ್ತಿದ್ದಳು, ನಮಗೆ ಹೆಚ್ಚು ಭೇಟಿಯಾಗಲು ಸಾಧ್ಯವಾಗಲಿಲ್ಲ. ಇದು 1-2 ವರ್ಷಗಳಿಂದ ಈ ರೀತಿ ನಡೆಯುತ್ತಿತ್ತು. ಇದರಿಂದಾಗಿ ಜಗಳ ಆಗುತ್ತಿತ್ತು. ಇದನ್ನೂ ಓದಿ: ಹೆಣ್ಣನ್ನ ದೂಷಿಸುವುದು ಫ್ಯಾಷನ್‌ ಆಗಿದೆ – ಬ್ಯೂಟಿ ಜೊತೆ ಚಹಲ್‌ ಡೇಟಿಂಗ್‌ ವಂದತಿ ಬೆನ್ನಲ್ಲೇ ಧನಶ್ರೀ ರಿಯಾಕ್ಷನ್‌

    ಈ ಸಂದರ್ಭದಲ್ಲಿ ನನ್ನ ಕೆಲಸದ ಸಮಯವನ್ನು ವಿಭಜಿಸಲು ಮುಂದಾದೆ. ಸಂಬಂಧದ ಬಗ್ಗೆ ಯೋಚಿಸಲು ನನಗೆ ಸಾಧ್ಯವಾಗಲಿಲ್ಲ. ನೀವು 18-20 ವರ್ಷಗಳಿಂದ ಯಾವುದನ್ನಾದರೂ ಕೆಲಸ ಮಾಡುತ್ತಿದ್ದರೆ ಅದನ್ನು ಸಂಬಂಧಕ್ಕಾಗಿ ಬಿಡಲು ಸಾಧ್ಯವಿಲ್ಲ.

    ಮದುವೆಯಾಗಿ ಮೂರು ವರ್ಷದ ನಂತರ ಪರಸ್ಪರ ಚರ್ಚಿಸಿ ವಿಚ್ಛೇದನ ನಿರ್ಧಾರ ಕೈಗೊಳ್ಳಲಾಯಿತು. ಆದರೆ ಈ ವಿಚಾರವನ್ನು ಬಹಿರಂಗ ಮಾಡುವುದು ಬೇಡ ಎಂದು ತೀರ್ಮಾನ ತೆಗೆದುಕೊಂಡಿದ್ದೆವು. ಎರಡು ವರ್ಷ ಮುಂದುವರೆಸಿಕೊಂಡು ಬಂದಿದ್ದೆವು.

    ನನ್ನ ಬಗ್ಗೆ ಯಾರು ಏನು ಬೇಕಾದರೂ ಹೇಳಬಹುದು. ನಾನು ಇಬ್ಬರು ಸಹೋದರಿಯರ ಜೊತೆಗೆ ಬೆಳೆದಿದ್ದೇನೆ. ಹೆಣ್ಣು ಮಕ್ಕಳನ್ನು ಗೌರವಿಸುವುದು ನನಗೆ ತಿಳಿದಿದೆ. ದೇವರ ದಯೆಯಿಂದ ನಾನು ಬದುಕಿದ್ದೇನೆ. ವಿಚ್ಛೇದನ ಪಡೆದ ನಂತರ ಜನರು ನನ್ನನ್ನು ಮೋಸಗಾರ ಎಂದು ಆರೋಪಿಸಿದರು. ನಾನು ನನ್ನ ಜೀವನದಲ್ಲಿ ಎಂದಿಗೂ ಮೋಸ ಮಾಡಿಲ್ಲ. ನಾನು ಆ ರೀತಿಯ ವ್ಯಕ್ತಿಯಲ್ಲ. ಜನರಿಗೆ ಏನೂ ತಿಳಿಯದ ಕಾರಣ ಅವರು ನನ್ನನ್ನು ದೂಷಿಸುತ್ತಿದ್ದರು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ:ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ಮದುವೆಯಾಗಿದ್ದರು. ಆ ಬಳಿಕ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಬ್ರೇಕ್ ಅಪ್‍ಗೆ ಮುಂದಾಗಿದ್ದಾರೆ ಎಂದು 2023 ರಲ್ಲಿ ಸುದ್ದಿ ಪ್ರಕಟವಾಗಿತ್ತು. ನಂತರ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ತೆರೆ ಎಳೆದಿದ್ದರು. ಕೊರೋನಾ ಕಾಲದ ಲಾಕ್‌ಡೌನ್ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಧನಶ್ರೀ ಎಂದು ಹೇಳಿದ್ದರು.

    ಇಬ್ಬರೂ ಇನ್‌ಸ್ಟಾದಲ್ಲಿ ಪರಸ್ಪರ ಅನ್‌ಫಾಲೋ ಆಗಿದ್ದರು. ಆಗಲೇ ಇಬ್ಬರ ಮಧ್ಯೆ ಬಿರುಕು ಮೂಡಿದೆ ಎಂದು ವರದಿಯಾಗಿತ್ತು. ಇನ್‌ಸ್ಟಾದಲ್ಲಿ ಚಹಲ್‌ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್‌ ಮಾಡಿದ್ದರೆ ಧನಶ್ರೀ ಚಹಲ್‌ ಅವರೊಂದಿಗೆ ಫೋಟೋ ಡಿಲೀಟ್‌ ಮಾಡಿಲ್ಲ. ಈಗಲೂ ಧನಶ್ರೀ ಇನ್‌ಸ್ಟಾದಲ್ಲಿ ಇಬ್ಬರು ಜೊತೆಯಲ್ಲಿರುವ ಫೋಟೋಗಳನ್ನು ನೋಡಬಹುದಾಗಿದೆ.

  • ನೆಗೆಟಿವ್ ಕಾಮೆಂಟ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳಲ್ಲ- ಡಿವೋರ್ಸ್ ಬಗ್ಗೆ ಮೌನ ಮುರಿದ ಧನಶ್ರೀ

    ನೆಗೆಟಿವ್ ಕಾಮೆಂಟ್‌ಗಳ ಬಗ್ಗೆ ತಲೆಕೆಡಿಸಿಕೊಳ್ಳಲ್ಲ- ಡಿವೋರ್ಸ್ ಬಗ್ಗೆ ಮೌನ ಮುರಿದ ಧನಶ್ರೀ

    ಟಿ ಧನಶ್ರೀ ವರ್ಮಾ (Dhanashree Verma) ಅವರು ಮೊದಲ ಬಾರಿಗೆ ಯಜುವೇಂದ್ರ ಚಹಲ್ (Yuzvendra Chahal) ಜೊತೆಗಿನ ಡಿವೋರ್ಸ್ ಬಗ್ಗೆ ಮಾತನಾಡಿದ್ದಾರೆ. ಡಿವೋರ್ಸ್ ಬಳಿಕ ತಮಗಾದ ಕೆಟ್ಟ ಟ್ರೋಲ್ ಹಾಗೂ ನೆಗೆಟಿವ್ ಕಾಮೆಂಟ್‌ಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:ಹಣ, ಅಧಿಕಾರದ ಸುತ್ತ ‘ಕುಬೇರ’- ಟೀಸರ್‌ನಲ್ಲಿ ಮಿಂಚಿದ ಧನುಷ್, ರಶ್ಮಿಕಾ

    ಸಂದರ್ಶನವೊಂದರಲ್ಲಿ ಧನಶ್ರೀ ಮಾತನಾಡಿ, ಟ್ರೋಲ್ ಹಾಗೂ ಕೆಟ್ಟ ಕಾಮೆಂಟ್‌ಗಳ ಬಗ್ಗೆ ನಾನು ಎಂದಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ನನ್ನ ಗಮನ ಯಾವಾಗಲೂ ಕೆಲಸದ ಮೇಲೆಯೇ ಇರುತ್ತದೆ. ವೃತ್ತಿಪರವಾಗಿ ನನ್ನ ಗುರಿಯೇನು ಎಂಬುದರ ಬಗ್ಗೆ ಅರಿವಿದೆ. ನಾನು ಅದರ ಕಡೆ ಗಮನ ಹರಿಸುತ್ತಿದ್ದೇನೆ. ನಾನು ಮಾನಸಿಕವಾಗಿ ಸ್ಟ್ರಾಂಗ್ ಆಗಿರೋದ್ರಿಂದ ನೆಗೆಟಿವ್ ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನನ್ನ ಬೆಳವಣಿಗೆಗೆ ಸಹಾಯವಾಗ ವಿಚಾರಗಳಿಂದ ತಾವು ದೂರವಿರೋದಾಗಿ ನಟಿ ಹೇಳಿದ್ದಾರೆ. ಇದನ್ನೂ ಓದಿ:ಮ್ಯಾನೇಜರ್ ಮೇಲೆ ಹಲ್ಲೆ- ನಟ ಉನ್ನಿ ಮುಕುಂದನ್ ವಿರುದ್ಧ ಕೇಸ್

    ಯಜುವೇಂದ್ರ ಚಹಲ್ ಜೊತೆ ನಟಿ ಪ್ರೀತಿಸಿ 2020ರಲ್ಲಿ ಮದುವೆಯಾದರು. ಈ ವರ್ಷ ಮಾರ್ಚ್ 20ರಂದು ಡಿವೋರ್ಸ್ ಪಡೆದರು.

    ಪ್ರಸ್ತುತ ಧನಶ್ರೀ ಅವರು ಟಾಲಿವುಡ್ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾವೊಂದರಲ್ಲಿ ಐಟಂ ಡ್ಯಾನ್ಸ್‌ ಸೇರಿದಂತೆ ಆಲ್ಬಂ ಸಾಂಗ್‌ಗಳಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

  • ಬೌಲರ್‌ಗಳ ಆಟಕ್ಕೆ 20 ವಿಕೆಟ್‌ ಪತನ – ಪಂಜಾಬ್‌ಗೆ ರೋಚಕ 16 ರನ್‌ಗಳ ಜಯ

    ಬೌಲರ್‌ಗಳ ಆಟಕ್ಕೆ 20 ವಿಕೆಟ್‌ ಪತನ – ಪಂಜಾಬ್‌ಗೆ ರೋಚಕ 16 ರನ್‌ಗಳ ಜಯ

    ಮುಲ್ತಾನ್‌ಪುರ್‌: ಐಪಿಎಲ್‌ನಲ್ಲಿ ಬ್ಯಾಟ್ಸ್‌ಮನ್‌ಗಳೇ ವಿಜೃಂಭಿಸುತ್ತಾರೆ ಎಂಬ ಕೂಗಿನ ಮಧ್ಯೆ ಬೌಲರ್‌ಗಳು ಮಿಂಚಿದ್ದಾರೆ. ಪಂಜಾಬ್‌ (Punjab Kings) ಮತ್ತು ಕೋಲ್ಕತ್ತಾ (Kolkata Knight Riders) ವಿರುದ್ಧ ಪಂದ್ಯದಲ್ಲಿ 20 ವಿಕೆಟ್‌ ಪತನಗೊಂಡರೂ ಕೊನೆಗೂ ಪಂಜಾಬ್‌ ರೋಚಕ 16 ರನ್‌ಗಳ ಜಯ ದಾಖಲಿಸುವಲ್ಲಿ ಯಶಸ್ವಿಯಾಗಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಪಂಜಾಬ್‌ 15.2 ಓವರ್‌ಗಳಲ್ಲಿ 111 ರನ್‌ಗಳಿಗೆ ಆಲೌಟ್‌ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ಕೋಲ್ಕತ್ತಾ 15.1 ಓವರ್‌ಗಳಲ್ಲಿ 95 ರನ್‌ಗಳಿಗೆ ಆಲೌಟ್‌ ಆಗಿ ಸೋಲನ್ನು ಒಪ್ಪಿಕೊಂಡಿದೆ.

     

    7 ರನ್‌ ಗಳಿಸುವಷ್ಟರಲ್ಲೇ ಕೋಲ್ಕತ್ತಾ ಎರಡು ವಿಕೆಟ್‌ ಕಳೆದುಕೊಂಡರೂ ರಘುವಂಶಿ ಮತ್ತು ರೆಹಾನೆ ನಿಧಾನವಾಗಿ ಆಡಿ ಇನ್ನಿಂಗ್ಸ್‌ ಕಟ್ಟಿದರು. ರಹಾನೆ 17 ರನ್‌ ರಘುವಂಶಿ 37 ರನ್‌ (28 ಎಸೆತ, 5 ಬೌಂಡರಿ, 1 ಸಿಕ್ಸ್‌ ) ಸಿಡಿಸಿ ಔಟಾದರು. ಇವರಿಬ್ಬರು ಔಟಾದ ಬೆನ್ನಲ್ಲೇ ಪತನ ಆರಂಭವಾಯಿತು. ಇದನ್ನೂ ಓದಿ: ಕೇವಲ 26 ರನ್‌ ಗಳಿಸಿದರೂ, ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ

    12ನೇ ಓವರ್‌ನಲ್ಲಿ ಚಹಲ್‌ (Yuzvendra Chahal) ಅವರು ರಿಂಕು ಸಿಂಗ್‌ ಮತ್ತು ರಮಣ್‌ದೀಪ್‌ ಸಿಂಗ್‌ ಅವರನ್ನು ಔಟ್‌ ಮಾಡುವ ಮೂಲಕ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ಹೀಗಿದ್ದರೂ ರಸೆಲ್‌ ಅಬ್ಬರಿಸುತ್ತಿದ್ದರು. ಆದರೆ ರಸೆಲ್‌ 17 ರನ್‌ಗಳಿಸಿದಾಗ ಜಾನ್‌ಸೆನ್‌ ಎಸೆತದಲ್ಲಿ ಬೌಲ್ಡ್‌ ಆಗುವ ಮೂಲಕ ಕಿಂಗ್ಸ್‌ ಪಂದ್ಯವನ್ನು ಸೋತಿತು.

     

    ಚಹಲ್‌ 4 ವಿಕೆಟ್‌ ಕಿತ್ತರೆ, ಜಾನ್‌ಸೆನ್‌ 3 ವಿಕೆಟ್‌ ಕಿತ್ತರು. ಮ್ಯಾಕ್ಸ್‌ವೆಲ್‌, ಆರ್ಶ್‌ದೀಪ್‌ ಸಿಂಗ್‌, ಬಾರ್ಟ್ಲೆಟ್ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಸೆಂಚುರಿ ಬಾರಿಸಿದ್ದಕ್ಕೆ ಪಾಕ್‌ ಸೂಪರ್‌ ಲೀಗಲ್ಲಿ ಸಿಕ್ಕಿದ್ದು ಹೇರ್ ಡ್ರೈಯರ್‌!

    ಮೊದಲು ಬ್ಯಾಟ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ಆರಂಭಿಕ ಮೂವರು ಆಟಗಾರರನ್ನು ಹರ್ಷಿತ್‌ ರಾಣಾ ಪೆವಿಲಿಯನ್‌ಗೆ ಕಳುಹಿಸಿದ್ದರು. ಪ್ರಿಯಾಂಶ್‌ ಅರ್ಯಾ 22 ರನ್‌(12 ಎಸೆತ, 3 ಬೌಂಡರಿ, 1 ಸಿಕ್ಸ್‌), ಪ್ರಭುಸಿಮ್ರಾನ್‌ ಸಿಂಗ್‌ 30 ರನ್‌(15 ಎಸೆತ, 2 ಬೌಂಡರಿ, 3 ಸಿಕ್ಸ್‌) ಕೊನೆಯಲ್ಲಿ ಶಶಾಂಕ್‌ ಸಿಂಗ್‌ 18 ರನ್‌ ಹೊಡೆದ ಪರಿಣಾಮ ಪಂಜಾಬ್‌ 100 ರನ್‌ಗಳ ಗಡಿಯನ್ನು ದಾಟಿತ್ತು.

    ಹರ್ಷಿತ್‌ ರಾಣಾ 3 ವಿಕೆಟ್‌, ವರುಣ್‌ ಚಕ್ರವರ್ತಿ ಮತ್ತು ಸುನಿಲ್‌ ನರೈನ್‌ ತಲಾ 2 ವಿಕೆಟ್‌, ವೈಭವ್‌ ಅರೋರ, ಅನ್ರಿಚ್ ನಾರ್ಟ್ಜೆ ತಲಾ ಒಂದೊಂದು ವಿಕೆಟ್‌ ಕಿತ್ತರು.

     

  • ನಾನಿನ್ನೂ ಸಿಂಗಲ್‌, ಮದ್ವೆಯಾಗಲು ನಾನು ಬಯಸುವವರ ಜೊತೆ ಮಾತ್ರ ಡೇಟಿಂಗ್‌ – ಚಹಲ್‌ ಜೊತೆ ಕಾಣಿಸಿಕೊಂಡ ಬ್ಯೂಟಿ ಸ್ಪಷ್ಟನೆ

    ನಾನಿನ್ನೂ ಸಿಂಗಲ್‌, ಮದ್ವೆಯಾಗಲು ನಾನು ಬಯಸುವವರ ಜೊತೆ ಮಾತ್ರ ಡೇಟಿಂಗ್‌ – ಚಹಲ್‌ ಜೊತೆ ಕಾಣಿಸಿಕೊಂಡ ಬ್ಯೂಟಿ ಸ್ಪಷ್ಟನೆ

    ಮುಂಬೈ: ಇತ್ತೀಚೆಗೆ ಟೀಂ ಇಂಡಿಯಾ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಜೊತೆ ಕಾಣಿಸಿಕೊಂಡಿದ್ದ ಬ್ಯೂಟಿ ಆರ್‌ಜೆ ಮಹ್ವಾಷ್ (RJ Mahvash) ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಚಹಲ್‌ ಅವರೊಂದಿಗೆ ಡೇಟಿಂಗ್‌ ಸುದ್ದಿ ಹರಿದಾಡುತ್ತಿದ್ದಂತೆ ವದಂತಿಗಳಿಗೆ ಫುಲ್‌ಸ್ಟಾಪ್‌ ಹಾಕಿದ್ದಾರೆ. ನಾನು ಮದುವೆಯಾಗಲು ಬಯಸುವವರ ಜೊತೆಗೆ ಮಾತ್ರ ಡೇಟಿಂಗ್‌ ಮಾಡ್ತೀನಿ ಅಂತ ಸ್ಪಷ್ಟನೆ ನೀಡಿದ್ದಾರೆ.

     

    View this post on Instagram

     

    A post shared by Mahvash (@rj.mahvash)

    ಕಳೆದ ತಿಂಗಳು ಮುಕ್ತಾಯಗೊಂಡ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದ ವೇಳೆ ಚಹಲ್‌ (Yuzvendra Chahal) ಜೊತೆಗೆ ಮಹ್ವಾಷ್‌ ಕಾಣಿಸಿಕೊಂಡಿದ್ದರು. ಆದ್ರೆ ನೃತ್ಯ ಸಂಯೋಜಕಿ ಧನಶ್ರೀ ವರ್ಮಾ (Dhanashree Verma) ಅವರಿಂದ ವಿಚ್ಛೇದನ ಪಡೆದ ಬಳಿಕ ಚಹಲ್‌ ಮತ್ತು ಮಹ್ವಾಷ್‌ ಅವರ ಡೇಟಿಂಗ್‌ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಹೈಪ್‌ ಕ್ರಿಯೆಟ್‌ ಮಾಡಿತ್ತು. ಅಲ್ಲದೇ ಇವರಿಬ್ಬರೂ ಮದುವೆಯಾಗಲಿದ್ದಾರೆ ಎಂಬ ಹೇಳಿಕೆಗಳೂ ಕೇಳಿಬಂದಿತ್ತು. ಇದೀಗ ಈ ಎಲ್ಲ ವದಂತಿಗಳಿಗೆ ಆರ್‌ಜೆ ಮಹ್ವಾಷ್‌ ಫುಲ್‌ಸ್ಟಾಪ್‌ ಹಾಕಿದ್ದಾರೆ.

    ಪಾಡ್‌ಕಾಸ್ಟ್‌ವೊಂದರಲ್ಲಿ ಮಾತಮಾಡಿದ ಅವರು, ಸದ್ಯಕ್ಕೆ ನಾನಿನ್ನೂ ಸಿಂಗಲ್, ಮದುವೆ ಪರಿಕಲ್ಪನೆಯೇ ನನಗೆ ಅರ್ಥವಾಗುತ್ತಿಲ್ಲ. ಈ ಮೊದಲು ನನಗೆ ನಿಶ್ಚಿತಾರ್ಥ ಆಗಿತ್ತು, ಆ ಸಂಬಂಧವೂ ಮುರಿದುಬಿದ್ದಿತು. ಹಾಗಾಗಿ ನಾನು ಕ್ಯಾಷುವಲ್ ಡೇಟಿಂಗ್ ಹೋಗಲ್ಲ, ಅದರಲ್ಲಿ ನನಗೆ ನಂಬಿಕೆಯೂ ಇಲ್ಲ. ನಾನು ಮದುವೆಯಾಗಲು ಬಯಸಿದವರ ಜೊತೆ ಮಾತ್ರ ಡೇಟಿಂಗ್‌ಗೆ ಹೋಗಲು ಬಯಸುತ್ತೇನೆ. ಆದ್ರೆ ಸದ್ಯಕ್ಕೆ ಈ ಯಾವ ಯೋಚನೆಯೂ ನನಗಿಲ್ಲ ಎಂದಿದ್ದಾರೆ.

    ತನಗೆ 19ನೇ ವಯಸ್ಸಿನಲ್ಲೇ ನಿಶ್ಚಿತಾರ್ಥ ಆಗಿತ್ತು, ಮದ್ವೆಗೆ 2 ವರ್ಷ ಸಮಯವಿತ್ತು. ಆದ್ರೆ ತಾನು 21 ವರ್ಷ ವಯಸ್ಸಿನವಳಿದ್ದಾಗ, ಮದುವೆ ಸಂಬಂಧವನ್ನು ರದ್ದುಗೊಳಿಸಿದೆ. ಏಕೆಂದರೆ ನನಗೆ ಹೊಂದಿಕೆಯಾಗುವಂತಹ ಒಳ್ಳೆಯ ಗಂಡ ಸಿಗಬೇಕು ಅನ್ನೋದೊಂದೇ ನನ್ನ ಬಯಕೆಯಾಗಿತ್ತು. ಮುಂದೆ ಅಂತಹ ತಪ್ಪು ಆಗದಂತೆ ನಾನು ನೋಡಿಕೊಳ್ಳಲು ಬಯಸುತ್ತಿದ್ದೇನೆ ಎಂದು ಮಹ್ವಾಷ್‌ ಹೇಳಿಕೊಂಡಿದ್ದಾರೆ.

  • ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ದುಬೈ: ಟೀಂ ಇಂಡಿಯಾ (Team India) ಸ್ಪಿನ್ನರ್‌ ಯಜುವೇಂದ್ರ ಚಹಲ್‌ (Yuzvendra Chahal) ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ನ್ಯೂಜಿಲೆಂಡ್‌ (New Zealand) ವಿರುದ್ಧ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ (Champions Trophy Final) ಪಂದ್ಯವನ್ನು ಯುವತಿ ಜೊತೆ ಕುಳಿತುಕೊಂಡು ವೀಕ್ಷಿಸುತ್ತಿದ್ದಾರೆ.

    ನೃತ್ಯ ಸಂಯೋಜಕಿ ಧನಶ್ರೀ ವರ್ಮಾ (Dhanashree Verma) ಮತ್ತು ಚಹಲ್‌ ಈಗ ಬೇರ್ಪಟ್ಟಿದ್ದಾರೆ. ಡಿವೋರ್ಸ್‌ ಪಡೆದ ನಂತರ ಚಹಲ್‌ ಮತ್ತೇ ಡೇಟಿಂಗ್‌ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

     

    ಚಹಲ್‌ ಗ್ಯಾಲರಿಯಲ್ಲಿ ಆರ್‌ಜೆ ಮಹ್ವಾಶ್ ಜೊತೆ ಕುಳಿತಿದ್ದಾರೆ. ಚಹಲ್- ಆರ್.ಜೆ ಮಹ್ವಾಶ್ ಅವರ ಫುಲ್ ವೈರಲ್ ಆಗಿರುವ ಫೋಟೋಗಳಿಗೆ ನೆಟ್ಟಿಗರು ವಿಧ ವಿಧವಾದ ಕಮೆಂಟ್‌ ಮಾಡುತ್ತಿದ್ದಾರೆ.

    ಕೆಲ ದಿನಗಳ ಹಿಂದೆ ಮಹ್ವಾಶ್ ಜೊತೆ ಚಹಲ್‌ ಕಾಣಿಸಿಕೊಂಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್‌ ಆದ ಬೆನ್ನಲ್ಲೇ ಗಾಸಿಪ್‌ಗಳು ಎದ್ದಿದ್ದವು. ಈ ಗಾಸಿಪ್‌ಗಳನ್ನು ಮಹ್ವಾಶ್‌ ತಳ್ಳಿ ಹಾಕಿದ್ದರು. ಹೀಗಿದ್ದರೂ ಈಗ ಮತ್ತೆ ಚಹಲ್‌ ಜೊತೆ ಮಹ್ವಾಶ್ ಕಾಣಿಸಿಕೊಂಡಿದ್ದಾರೆ.‌ ಇದನ್ನೂ ಓದಿ: 4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

     

    ಯಜುವೇಂದ್ರ ಚಹಲ್ಮತ್ತು ನಟಿ ಧನಶ್ರೀ (Dhanashree Verma) ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ (Divorce) ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್‌ ಪಡೆಯುತ್ತೇವೆ ಎಂದು ತಿಳಿಸಿದ್ದರು.

    ತಮ್ಮ ವಿಚ್ಛೇದನದ ಹಿಂದಿನ ಕಾರಣದ ಬಗ್ಗೆ ಪ್ರಶ್ನಿಸಿದಾಗ, ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದರು. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.

     

  • ಡಿವೋರ್ಸ್‌ ಬಳಿಕ ಚಹಲ್‌ನಿಂದ 60 ಕೋಟಿ ಜೀವನಾಂಶ – ಧನಶ್ರೀ ಕುಟುಂಬ ಹೇಳಿದ್ದೇನು?

    ಡಿವೋರ್ಸ್‌ ಬಳಿಕ ಚಹಲ್‌ನಿಂದ 60 ಕೋಟಿ ಜೀವನಾಂಶ – ಧನಶ್ರೀ ಕುಟುಂಬ ಹೇಳಿದ್ದೇನು?

    ನವದೆಹಲಿ: ಟೀಂ ಇಂಡಿಯಾದ (Team India) ಸ್ಪಿನ್ನರ್ ಯಜುವೇಂದ್ರ ಚಹಲ್ (Yuzvendra Chahal) ಹಾಗೂ ಮತ್ತು ನಟಿ ಧನಶ್ರೀ (Dhanashree Verma) ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ. ಇದರ ನಡುವೆ ಧನಶ್ರೀ ಕುಟುಂಬ ಯುಜ್ವೇಂದ್ರ ಚಾಹಲ್ ಅವರ ಬಳಿ 60 ಕೋಟಿ ರೂ. ಜೀವನಾಂಶ ಕೇಳಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ವದಂತಿಯನ್ನು ಧನಶ್ರೀ ಕುಟುಂಬ ತಳ್ಳಿಹಾಕಿದೆ.

    ಜೀವನಾಂಶದ ಬಗ್ಗೆ ಪ್ರಸಾರವಾಗುತ್ತಿರುವ ಆಧಾರ ರಹಿತ ಹೇಳಿಕೆಗಳು, ಸುದ್ದಿಗಳಿಂದ ನಮಗೆ ಬೇಸರವಾಗಿದೆ. ಅಂತಹ ಯಾವುದೇ ಜೀವನಾಂಶದ ಬೇಡಿಕೆಯಿಟ್ಟಿಲ್ಲ ಅಥವಾ ನೀಡಲಾಗಿಲ್ಲ ಎಂದು ಧನಶ್ರೀ ವರ್ಮಾ ಅವರ ಸಂಬಂಧಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

    ಈ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಇಂತಹ ಪರಿಶೀಲಿಸದ ಮಾಹಿತಿಯನ್ನು ಪ್ರಕಟಿಸುವುದು ತೀರಾ ಬೇಜವಾಬ್ದಾರಿಯಾಗಿದೆ. ಇದು ಅವರ ಕುಟುಂಬಗಳನ್ನು ಸಹ ಅನಗತ್ಯವಾಗಿ ಮುಜುಗರಕ್ಕೀಡು ಮಾಡುತ್ತದೆ. ಮಾಹಿತಿಯನ್ನು ಹರಡುವ ಮೊದಲು ಸಂಯಮ ಮತ್ತು ಸತ್ಯ ಪರಿಶೀಲನೆ ಮಾಡಬೇಕು. ಪ್ರತಿಯೊಬ್ಬರ ಖಾಸಗಿ ಜೀವನದ ಬಗ್ಗೆ ಗೌರವದಿಂದ ವರ್ತಿಸುವಂತೆ ನಾವು ಮಾಧ್ಯಮಗಳಿಗೆ ಮನವಿ ಮಾಡುತ್ತೇವೆ ಎಂದಿದ್ದಾರೆ.

    ಯುಜ್ವೇಂದ್ರ ಚಾಹಲ್ ಮತ್ತು ನರ್ತಕಿ-ನೃತ್ಯ ಸಂಯೋಜಕಿ ಧನಶ್ರೀ ವರ್ಮಾ ಕಾನೂನು ಬದ್ಧವಾಗಿ ವಿಚ್ಛೇದನ ಪಡೆದಿದ್ದಾರೆ. ಫೆ.19ರ ಮಂಗಳವಾರ ವಿಚಾರಣೆಯನ್ನು ಅಂತಿಮಗೊಂಡಿತ್ತು.

    ಚಹಲ್‌ ಆಸ್ತಿ ಎಷ್ಟಿದೆ?
    ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ದೇಶಕ್ಕಾಗಿ 200 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವ ಚಹಲ್‌ ಟೀಂ ಇಂಡಿಯಾದ ಟಾಪ್‌ ಬೌಲರ್‌ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಚಹಲ್‌ 160 ಐಪಿಎಲ್‌ (IPL) ಪಂದ್ಯವಾಡಿ 22.44 ರ ಸರಾಸರಿಯಲ್ಲಿ 205 ವಿಕೆಟ್ ಪಡೆದಿದ್ದಾರೆ.

    2024ರ ಆವೃತ್ತಿಯಲ್ಲಿ ಚಹಲ್‌ ರಾಜಸ್ಥಾನ ರಾಯಲ್ಸ್‌ ಪರ ಆಡಿದ್ದರು. ಈ ವೇಳೆ ಅವರಿಗೆ 6.5 ಕೋಟಿ ರೂ. ನೀಡಿತ್ತು. ಐಪಿಎಲ್ 2025 ರ ಮೆಗಾ ಹರಾಜಿಗೆ ಮೊದಲು ಚಹಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ ಕೈಬಿಟ್ಟಿತ್ತು. ನಂತರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಂಜಾಬ್‌ ಕಿಂಗ್ಸ್‌ 18 ಕೋಟಿ ರೂ. ನೀಡಿ ಚಹಲ್‌ ಅವರನ್ನು ಖರೀದಿಸಿತ್ತು.

    ಚಾಹಲ್ ಅವರು 2019 ರಲ್ಲಿ ಜೀವನಶೈಲಿ ಬ್ರ್ಯಾಂಡ್ ‘ಚೆಕ್ಮೇಟ್’ ಅನ್ನು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೇ ಅವರು ಫಿಟ್‌ನೆಸ್ ಅಪ್ಲಿಕೇಶನ್ ʼಗ್ರಿಪ್ʼ ಮತ್ತು ʼYUZOʼ ಬಟ್ಟೆ ಲೈನ್‌ನಲ್ಲಿ ಪಾಲನ್ನು ಹೊಂದಿದ್ದಾರೆ. ಚಹಲ್‌ ಪೋರ್ಷೆ ಕೆಯೆನ್ನೆ ಎಸ್, ಮರ್ಸಿಡಿಸ್ ಬೆಂಜ್ ಸಿ-ಕ್ಲಾಸ್, ಲಂಬೋರ್ಘಿನಿ ಸೆಂಟೆನಾರಿಯೊ ಮತ್ತು ರೋಲ್ಸ್ ರಾಯ್ಸ್ ಸೇರಿದಂತೆ ಹಲವಾರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.

    ಬ್ರ್ಯಾಂಡ್ ಎಂಡಾರ್ಸ್‌ಮೆಂಟ್‌ಗಳಿಂದ ಉತ್ತಮ ಮೊತ್ತವನ್ನು ಪಡೆಯುತ್ತಿರುವ ಚಹಲ್‌ ಅವರ ನಿವ್ವಳ ಮೌಲ್ಯ ಸುಮಾರು 45 ಕೋಟಿ ಇರಬಹುದು ಎಂದು ಅಂದಾಜಿಸಲಾಗಿದೆ.

    ಧನಶ್ರೀ ಅಸ್ತಿ ಎಷ್ಟಿದೆ?
    ನೃತ್ಯ ಸಂಯೋಜನೆ, ಬ್ರಾಂಡ್ ಪ್ರಚಾರ, ಸೋಶಿಯಲ್‌ ಮೀಡಿಯಾಗಳಿಂದ ಧನಶ್ರೀ ಆದಾಯ ಸಂಪಾದಿಸುತ್ತಿದ್ದಾರೆ. ಮಾಧ್ಯಮವೊಂದರ ಪ್ರಕಾರ ಧನಶ್ರೀ ಅವರು ಅಂದಾಜು 25 ಕೋಟಿ ರೂ. ಮೌಲ್ಯದ ಸಂಪತ್ತು ಹೊಂದಿದ್ದಾರೆ.

  • 4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

    4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

    ಮುಂಬೈ: ಟೀಂ ಇಂಡಿಯಾದ (Team India) ಸ್ಪಿನ್ನರ್ ಯಜುವೇಂದ್ರ ಚಹಲ್ (Yuzvendra Chahal) ಮತ್ತು ನಟಿ ಧನಶ್ರೀ (Dhanashree Verma) ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ.

    ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ (Divorce) ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್‌ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

    ತಮ್ಮ ವಿಚ್ಛೇದನದ ಹಿಂದಿನ ಕಾರಣದ ಬಗ್ಗೆ ಪ್ರಶ್ನಿಸಿದಾಗ, ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದಾರೆ. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.

    ಕೆಲ ದಿನಗಳಿಂದ ಇಬ್ಬರೂ ಡಿವೋರ್ಸ್ ಪಡೆಯಲಿದ್ದಾರೆ ಎಂದ ಸುದ್ದಿಯಾಗುತ್ತಿತ್ತು. ಆದರೆ ಅಧಿಕೃತವಾಗಿ ಇಬ್ಬರೂ ತಿಳಿಸಿರಲಿಲ್ಲ. ಡಿವೋರ್ಸ್‌ ಪಡೆದ ನಂತರ ಚಹಲ್‌ ಕೈಮಗಿಯುತ್ತಿರುವ ಹನುಮಂತನ ಚಿತ್ರ ಪ್ರಕಟಿಸಿದ್ದರೆ ಧನಶ್ರೀ ಇನ್‌ಸ್ಟಾದಲ್ಲಿ ಭಾವನಾತ್ಮಕ ಪೋಸ್ಟ್‌ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಚಹಲ್‌, ಧನಶ್ರೀ ಸಂಪತ್ತು ಎಷ್ಟಿದೆ? ಆದಾಯದ ಮೂಲ ಯಾವುದು?

    ಇನ್‌ಸ್ಟಾದಲ್ಲಿ ಚಹಲ್‌ ದೇವರು ನನ್ನನ್ನು ಎಷ್ಟೋ ಬಾರಿ ಕಾಪಾಡಿದ್ದಾನೆ. ನಾನು ಅವುಗಳನ್ನು ಸಂಖ್ಯೆಯಲ್ಲಿ ಎಣಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ದೇವರು ನನ್ನ ಅರಿವಿಗೆ ಬಾರದೆಯೋ ನನ್ನ ಜೊತೆ ನಿಂತಿದ್ದಾನೆ. ನನಗೆ ತಿಳಿಯದೇ ನನ್ನನ್ನು ಬೆಂಬಲಿಸಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

    ಧನಶ್ರೀ ಅವರು ಒತ್ತಡದಿಂದ ಅದೃಷ್ಟಶಾಲಿಯಾಗುವವರೆಗೆ. ದೇವರು ನಮ್ಮ ಒತ್ತಡವನ್ನು ಸಂತೋಷವಾಗಿ ಪರಿವರ್ತಿಸುವ ರೀತಿ ಎಷ್ಟು ಅದ್ಭುತವಾಗಿದೆ? ಇಂದು ನೀವು ಯಾವುದಾದರೂ ವಿಷಯದ ಬಗ್ಗೆ ಒತ್ತಡಕ್ಕೆ ಒಳಗಾದರೆ ಹೆಚ್ಚು ಯೋಚಿಸುತ್ತಿದ್ದರೆ, ನಿಮಗೆ ಒಂದು ಆಯ್ಕೆ ಇದೆ ಎಂಬುದನ್ನು ನೆನಪಿಡಿ. ನೀವು ಆ ಉದ್ವೇಗವನ್ನು ತೆಗೆದುಕೊಳ್ಳಬಹುದು ಅಥವಾ ನಿಮ್ಮ ಎಲ್ಲಾ ಚಿಂತೆಗಳನ್ನು ದೇವರಿಗೆ ಅರ್ಪಿಸಿ ಎಲ್ಲದಕ್ಕೂ ಪ್ರಾರ್ಥಿಸಬಹುದು.ದೇವರು ನಿಮ್ಮ ಒಳಿತಿಗಾಗಿ ಎಲ್ಲವನ್ನೂ ಮಾಡಬಹುದು ಎಂದು ನಂಬುವುದರಲ್ಲಿ ಬೇರೆಯದೇ ರೀತಿಯ ಶಕ್ತಿಯಿದೆ ಎಂಬುದಾಗಿ ಬರೆದುಕೊಂಡಿದ್ದಾರೆ.

    ಕೆಲ ತಿಂಗಳ ಹಿಂದೆ ಇಬ್ಬರೂ ಇನ್‌ಸ್ಟಾದಲ್ಲಿ ಪರಸ್ಪರ ಅನ್‌ಫಾಲೋ ಆಗಿದ್ದರು. ಆಗಲೇ ಇಬ್ಬರ ಮಧ್ಯೆ ಬಿರುಕು ಮೂಡಿದೆ ಎಂದು ವರದಿಯಾಗಿತ್ತು. ಇನ್‌ಸ್ಟಾದಲ್ಲಿ ಚಹಲ್‌ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್‌ ಮಾಡಿದ್ದರೆ ಧನಶ್ರೀ ಚಹಲ್‌ ಅವರೊಂದಿಗೆ ಫೋಟೋ ಡಿಲೀಟ್‌ ಮಾಡಿಲ್ಲ.

     

    View this post on Instagram

     

    A post shared by Dhanashree Verma (@dhanashree9)

    ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ಮದುವೆಯಾಗಿದ್ದರು. ಆ ಬಳಿಕ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಬ್ರೇಕ್ ಅಪ್‍ಗೆ ಮುಂದಾಗಿದ್ದಾರೆ ಎಂದು ಎರಡು ವರ್ಷದ ಹಿಂದೆ ಸುದ್ದಿ ಪ್ರಕಟವಾಗಿತ್ತು. ನಂತರ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ತೆರೆ ಎಳೆದಿದ್ದರು. ಕೊರೋನಾ ಕಾಲದ ಲಾಕ್‌ಡೌನ್ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಧನಶ್ರೀ ಎಂದು ಹೇಳಿದ್ದರು.

    ಹಿಂದೆ ಚಹಲ್ ಹೊಸ ಜೀವನ ಆರಂಭ ಎಂದು ಪೋಸ್ಟ್ ಹಾಕಿಕೊಂಡಿದ್ದರು. ಅದೇ ಸಮಯಕ್ಕೆ ಧನಶ್ರೀ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿದ್ದ ಸರ್ ನೇಮ್ ಚಹಲ್ ಪದವನ್ನು ಕಿತ್ತುಹಾಕಿ ಧನಶ್ರೀ ವರ್ಮಾ ಎಂದು ಬದಲಾವಣೆ ಮಾಡಿಕೊಂಡಿದ್ದರು.

    ಸದ್ಯ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆಯಲು ಚಹಲ್‌ ವಿಫಲರಾಗಿದ್ದು 2023ರ ಜನವರಿಯಲ್ಲಿ ಕೊನೆಯ ಏಕದಿನ ಪಂದ್ಯವಾಡಿದ್ದರೆ, 2023ರ ಆಗಸ್ಟ್‌ನಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು.

    ಐಪಿಎಲ್ 2025 ರ ಮೆಗಾ ಹರಾಜಿಗೆ ಮೊದಲು ಚಹಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದಿಂದ ಕೈಬಿಟ್ಟಿತ್ತು. ನಂತರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಂಜಾಬ್‌ ಕಿಂಗ್ಸ್‌ 18 ಕೋಟಿ ರೂ. ನೀಡಿ ಚಹಲ್‌ ಅವರನ್ನು ಖರೀದಿಸಿತ್ತು. ಚಹಲ್‌ 160 ಐಪಿಎಲ್‌ ಪಂದ್ಯವಾಡಿ 22.44 ರ ಸರಾಸರಿಯಲ್ಲಿ 205 ವಿಕೆಟ್ ಪಡೆದಿದ್ದಾರೆ.

  • ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

    ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

    ಮುಂಬೈ: ಟೀಂ ಇಂಡಿಯಾ ಸ್ಟಾರ್ ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಹಲ್‌ (Yuzvendra Chahal) ಅವರು ಪತ್ನಿ ಧನಶ್ರೀ ವರ್ಮಾಗೆ (Dhanashree Verma) ಡಿವೋರ್ಸ್‌ ಕೊಡಲಿದ್ದಾರೆ ಎಂಬ ವದಂತಿ ಬಗ್ಗೆ ಧನಶ್ರೀ ಮೌನ ಮುರಿದಿದ್ದಾರೆ.

    2020ರ ಡಿಸೆಂಬರ್‌ 22ರಂದು ಉತ್ತರ ಪ್ರದೇಶದ ಗುರುಗ್ರಾಮ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಚಹಲ್‌-ಧನಶ್ರೀ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ವದಂತಿ ಜಾಲತಾಣದಲ್ಲಿ ಸದ್ದು ಮಾಡುತ್ತಲೇ ಇತ್ತು. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಧನಶ್ರೀ ವಂದತಿ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಡಿವೋರ್ಸ್‌ ಆದ್ರೆ ಚಹಲ್‌ ಧನಶ್ರೀಗೆ ಎಷ್ಟು ಜೀವನಾಂಶ ಕೊಡಬೇಕು? ಇಬ್ಬರ ಸಂಪತ್ತು ಎಷ್ಟಿದೆ?

    ನಾನು, ನನ್ನ ಕುಟುಂಬದ ಸದಸ್ಯರು ಕಳೆದ ಕೆಲ ದಿನಗಳಿಂದ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಕೆಲವರು ಸತ್ಯ ತಿಳಿಯದೇ ಸುಳ್ಳು ಸುಳ್ಳನ್ನೇ ಬರೆಯುತ್ತಿದ್ದಾರೆ. ನನ್ನ ಖ್ಯಾತಿಗೆ ಕಳಂಕ ತರಲು ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷ ಹರಡುವ ಟ್ರೋಲ್‌ಗಳನ್ನು ಮಾಡುತ್ತಿದ್ದಾರೆ. ಹಲವು ವರ್ಷಗಳ ಕಾಲ ಶ್ರಮಿಸಿದ ನಂತರವೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ನಾನು ಮೌನವಾಗಿದ್ದ ಮಾತ್ರಕ್ಕೆ, ಅದು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದಿದ್ದಾರೆ. ಇದನ್ನೂ ಓದಿ: ಚಹಲ್‌, ಧನಶ್ರೀ ದಾಂಪತ್ಯದಲ್ಲಿ ಬಿರುಕು – ಮದ್ವೆಯಾಗಿ 4 ವರ್ಷದ ಬಳಿಕ ಡಿವೋರ್ಸ್?

    ಮುಂದುವರಿದು… ಇತರರಿಗೆ ಸಹಾನುಭೂತಿ ತೋರಿಸಲು ಧೈರ್ಯ ಬೇಕು. ನೈಜ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮೌಲ್ಯಗಳೊಂದಿಗೆ ಮುಂದುವರಿಯುವುದರಲ್ಲಿ ನಾನು ನಂಬಿಕೆ ಇಡುತ್ತೇನೆ. ಇಲ್ಲಿ ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ. ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಸಾಕ್ಷ್ಯಗಳಿಲ್ಲಿದ್ರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ ಎಂದು ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

    ಧನಶ್ರೀ ಅವರ ಈ ಪೋಸ್ಟ್‌ ಬಳಿಕ ಇನ್ನಷ್ಟು ಚರ್ಚೆಗಳು ಹುಟ್ಟಿಕೊಂಡಿವೆ. ಏಕೆಂದರೆ ಈ ಪೋಸ್ಟ್‌ನಲ್ಲಿ ಚಹಲ್‌ ಜೊತೆಗಿನ ಸಂಬಂಧ ಮುಂದುವರಿಸುವುದಾಗಿ ಅವರು ಸ್ಪಷ್ಟನೆ ನೀಡಿಲ್ಲ. ಚಹಲ್‌ ಹೆಸರನ್ನೂ ಪ್ರಸ್ತಾಪಿಸಿಲ್ಲ ಎಂದು ನೆಟ್ಟಿಗರು ಚರ್ಚಿಸಿದ್ದಾರೆ.

  • ಡಿವೋರ್ಸ್‌ ಆದ್ರೆ ಚಹಲ್‌ ಧನಶ್ರೀಗೆ ಎಷ್ಟು ಜೀವನಾಂಶ ಕೊಡಬೇಕು? ಇಬ್ಬರ ಸಂಪತ್ತು ಎಷ್ಟಿದೆ?

    ಡಿವೋರ್ಸ್‌ ಆದ್ರೆ ಚಹಲ್‌ ಧನಶ್ರೀಗೆ ಎಷ್ಟು ಜೀವನಾಂಶ ಕೊಡಬೇಕು? ಇಬ್ಬರ ಸಂಪತ್ತು ಎಷ್ಟಿದೆ?

    ಮುಂಬೈ: ಭಾರತ ಖ್ಯಾತ ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಹಲ್‌ (Yuzvendra Chahal) ಅವರು ಪತ್ನಿ ಧನಶ್ರೀ ವರ್ಮಾಗೆ (Dhanashree Verma) ಡಿವೋರ್ಸ್‌ ಕೊಡಲಿದ್ದಾರೆ ಎಂಬ ವದಂತಿ ಸುದ್ದಿಗಳು ಪ್ರಕಟವಾಗುತ್ತಿದೆ. ಈ ಸುದ್ದಿ ಒಂದು ವೇಳೆ ನಿಜವಾಗಿ ಕೋರ್ಟ್‌ ಮೂಲಕ ವಿಚ್ಛೇದನ (Divorce) ಪಡೆದರೆ ಚಹಲ್‌ ಧನಶ್ರೀ ಅವರಿಗೆ ಭಾರೀ ಜೀವನಾಂಶ (Alimony) ನೀಡಬೇಕಾಗುತ್ತದೆ.

    ಚಹಲ್‌ ಆಸ್ತಿ ಎಷ್ಟಿದೆ?
    ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ದೇಶಕ್ಕಾಗಿ 200 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಪಡೆದಿರುವ ಚಹಲ್‌ ಟೀಂ ಇಂಡಿಯಾದ ಟಾಪ್‌ ಬೌಲರ್‌ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಚಹಲ್‌ 160 ಐಪಿಎಲ್‌ (IPL) ಪಂದ್ಯವಾಡಿ 22.44 ರ ಸರಾಸರಿಯಲ್ಲಿ 205 ವಿಕೆಟ್ ಪಡೆದಿದ್ದಾರೆ.

    2024ರ ಆವೃತ್ತಿಯಲ್ಲಿ ಚಹಲ್‌ ರಾಜಸ್ಥಾನ ರಾಯಲ್ಸ್‌ ಪರ ಆಡಿದ್ದರು. ಈ ವೇಳೆ ಅವರಿಗೆ 6.5 ಕೋಟಿ ರೂ. ನೀಡಿತ್ತು. ಐಪಿಎಲ್ 2025 ರ ಮೆಗಾ ಹರಾಜಿಗೆ ಮೊದಲು ಚಹಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡ ಕೈಬಿಟ್ಟಿತ್ತು. ನಂತರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಂಜಾಬ್‌ ಕಿಂಗ್ಸ್‌ 18 ಕೋಟಿ ರೂ. ನೀಡಿ ಚಹಲ್‌ ಅವರನ್ನು ಖರೀದಿಸಿತ್ತು.

    ಚಾಹಲ್ ಅವರು 2019 ರಲ್ಲಿ ಜೀವನಶೈಲಿ ಬ್ರ್ಯಾಂಡ್ ‘ಚೆಕ್ಮೇಟ್’ ಅನ್ನು ಪ್ರಾರಂಭಿಸಿದ್ದರು. ಅಷ್ಟೇ ಅಲ್ಲದೇ ಅವರು ಫಿಟ್‌ನೆಸ್ ಅಪ್ಲಿಕೇಶನ್ ʼಗ್ರಿಪ್ʼ ಮತ್ತು ʼYUZOʼ ಬಟ್ಟೆ ಲೈನ್‌ನಲ್ಲಿ ಪಾಲನ್ನು ಹೊಂದಿದ್ದಾರೆ. ಚಹಲ್‌ ಪೋರ್ಷೆ ಕೆಯೆನ್ನೆ ಎಸ್, ಮರ್ಸಿಡಿಸ್ ಬೆಂಜ್ ಸಿ-ಕ್ಲಾಸ್, ಲಂಬೋರ್ಘಿನಿ ಸೆಂಟೆನಾರಿಯೊ ಮತ್ತು ರೋಲ್ಸ್ ರಾಯ್ಸ್ ಸೇರಿದಂತೆ ಹಲವಾರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.

    ಬ್ರ್ಯಾಂಡ್ ಎಂಡಾರ್ಸ್‌ಮೆಂಟ್‌ಗಳಿಂದ ಉತ್ತಮ ಮೊತ್ತವನ್ನು ಪಡೆಯುತ್ತಿರುವ ಚಹಲ್‌ ಅವರ ನಿವ್ವಳ ಮೌಲ್ಯ ಸುಮಾರು 45 ಕೋಟಿ ಇರಬಹುದು ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ:ಚಹಲ್‌, ಧನಶ್ರೀ ದಾಂಪತ್ಯದಲ್ಲಿ ಬಿರುಕು – ಮದ್ವೆಯಾಗಿ 4 ವರ್ಷದ ಬಳಿಕ ಡಿವೋರ್ಸ್?

    ಒಂದು ವೇಳೆ ಅಧಿಕೃತವಾಗಿ ಕೋರ್ಟ್‌ ಮೂಲಕ ಧನಶ್ರೀಗೆ ಡಿವೋರ್ಸ್‌ ನೀಡಿದರೆ ಚಹಲ್‌ ಅವರು ತಮ್ಮ ಸಂಪತ್ತಿನ 20% ರಿಂದ 30% ವರೆಗಿನ ಪಾಲನ್ನು ನೀಡಬೇಕಾಗಬಹುದು. ಎಷ್ಟು ಜೀವನಾಂಶ ನೀಡಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಲಿದೆ.

    ಧನಶ್ರೀ ಅಸ್ತಿ ಎಷ್ಟಿದೆ?
    ನೃತ್ಯ ಸಂಯೋಜನೆ, ಬ್ರಾಂಡ್ ಪ್ರಚಾರ, ಸೋಶಿಯಲ್‌ ಮೀಡಿಯಾಗಳಿಂದ ಧನಶ್ರೀ ಆದಾಯ ಸಂಪಾದಿಸುತ್ತಿದ್ದಾರೆ. ಮಾಧ್ಯಮವೊಂದರ ಪ್ರಕಾರ ಧನಶ್ರೀ ಅವರು ಅಂದಾಜು 25 ಕೋಟಿ ರೂ. ಮೌಲ್ಯದ ಸಂಪತ್ತು ಹೊಂದಿದ್ದಾರೆ.

  • ಚಹಲ್‌, ಧನಶ್ರೀ ದಾಂಪತ್ಯದಲ್ಲಿ ಬಿರುಕು –  ಮದ್ವೆಯಾಗಿ 4 ವರ್ಷದ ಬಳಿಕ ಡಿವೋರ್ಸ್?

    ಚಹಲ್‌, ಧನಶ್ರೀ ದಾಂಪತ್ಯದಲ್ಲಿ ಬಿರುಕು – ಮದ್ವೆಯಾಗಿ 4 ವರ್ಷದ ಬಳಿಕ ಡಿವೋರ್ಸ್?

    ಮುಂಬೈ: ಟೀಂ ಇಂಡಿಯಾದ (Team India) ಸ್ಪಿನ್ನರ್ ಯಜುವೇಂದ್ರ ಚಹಲ್ (Yuzvendra Chahal) ಮತ್ತು ನಟಿ ಧನಶ್ರೀ (Dhanashree Verma) ನಡುವಿನ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದ್ದು, ಶೀಘ್ರವೇ ಡಿವೋರ್ಸ್‌ (Divorce) ಪಡೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

    ಆಪ್ತ ಮೂಲಗಳ ಪ್ರಕಾರ ಇಬ್ಬರು ಪ್ರತ್ಯೇಕವಾಗುವುದು ನಿಜ. ವಿಚ್ಛೇದನ ಪ್ರಕ್ರಿಯೆಗಳು ಇನ್ನೂ ಅಂತಿಮಗೊಂಡಿಲ್ಲ. ಎಲ್ಲಾ ಷರತ್ತುಗಳು ಪೂರ್ಣಗೊಂಡ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: ಟೀಂ ಇಂಡಿಯಾ ವೇಗಿಗಳ ಅಬ್ಬರಕ್ಕೆ ಆಸಿಸ್‌ ತತ್ತರ; 181 ರನ್‌ಗಳಿಗೆ ಆಲೌಟ್‌

    ಇಬ್ಬರು ಪ್ರತ್ಯೇಕವಾಗಲು ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ದಂಪತಿ ಪ್ರತ್ಯೇಕವಾಗಿ ತಮ್ಮ ಜೀವನವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ವದಂತಿಗೆ ಪೂರಕ ಎಂಬಂತೆ ಇಬ್ಬರೂ ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ದಾರೆ. ಚಹಲ್‌ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್‌  ಮಾಡಿದ್ದರೆ ಧನಶ್ರೀ ಚಹಲ್‌ ಅವರೊಂದಿಗೆ ಫೋಟೋ ಡಿಲೀಟ್‌ ಮಾಡಿಲ್ಲ.

    ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ಮದುವೆಯಾಗಿದ್ದರು. ಆ ಬಳಿಕ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಬ್ರೇಕ್ ಅಪ್‍ಗೆ ಮುಂದಾಗಿದ್ದಾರೆ ಎಂದು ಎರಡು ವರ್ಷದ ಹಿಂದೆ ಸುದ್ದಿ ಪ್ರಕಟವಾಗಿತ್ತು. ನಂತರ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ತೆರೆ ಎಳೆದಿದ್ದರು.  ಕೊರೋನಾ ಕಾಲದ ಲಾಕ್‌ಡೌನ್ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಧನಶ್ರೀ ಎಂದು ಹೇಳಿದ್ದರು.

    ಹಿಂದೆ ಚಹಲ್ ಹೊಸ ಜೀವನ ಆರಂಭ ಎಂದು ಪೋಸ್ಟ್ ಹಾಕಿಕೊಂಡಿದ್ದರು. ಅದೇ ಸಮಯಕ್ಕೆ ಧನಶ್ರೀ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿದ್ದ ಸರ್ ನೇಮ್ ಚಹಲ್ ಪದವನ್ನು ಕಿತ್ತುಹಾಕಿ ಧನಶ್ರೀ ವರ್ಮಾ ಎಂದು ಬದಲಾವಣೆ ಮಾಡಿಕೊಂಡಿದ್ದರು. ಇದನ್ನೂ ಓದಿ: ಫಲಿಸಿತು ಅಪ್ಪನ ತ್ಯಾಗ – ಮಗನಿಗಾಗಿ ಸರ್ಕಾರಿ ಉದ್ಯೋಗ ತೊರೆದಿದ್ದ ನಿತೀಶ್‌ ರೆಡ್ಡಿ ತಂದೆ!

    ಸದ್ಯ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆಯಲು ಚಹಲ್‌ ವಿಫಲರಾಗಿದ್ದು 2023ರ ಜನವರಿಯಲ್ಲಿ ಕೊನೆಯ ಏಕದಿನ ಪಂದ್ಯವಾಡಿದ್ದರೆ, 2023ರ ಆಗಸ್ಟ್‌ನಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು.

    ಐಪಿಎಲ್ 2025 ರ ಮೆಗಾ ಹರಾಜಿಗೆ ಮೊದಲು ಚಹಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದಿಂದ ಕೈಬಿಟ್ಟಿತ್ತು. ನಂತರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಂಜಾಬ್‌ ಕಿಂಗ್ಸ್‌ 18 ಕೋಟಿ ರೂ. ನೀಡಿ ಚಹಲ್‌ ಅವರನ್ನು ಖರೀದಿಸಿತ್ತು. ಚಹಲ್‌ 160 ಐಪಿಎಲ್‌ ಪಂದ್ಯವಾಡಿ 22.44 ರ ಸರಾಸರಿಯಲ್ಲಿ 205 ವಿಕೆಟ್ ಪಡೆದಿದ್ದಾರೆ.