Tag: ಯಡಿಯರೂಪ್ಪ

  • ವಿಪಕ್ಷ ನಾಯಕನ ಆಯ್ಕೆಗೆ ಸೋಮವಾರ ರಾಜ್ಯಕ್ಕೆ ಬರಲಿದ್ದಾರೆ ವೀಕ್ಷಕರು

    ವಿಪಕ್ಷ ನಾಯಕನ ಆಯ್ಕೆಗೆ ಸೋಮವಾರ ರಾಜ್ಯಕ್ಕೆ ಬರಲಿದ್ದಾರೆ ವೀಕ್ಷಕರು

    ನವದೆಹಲಿ: ಸೋಮವಾರದಿಂದ ವಿಧಾನಮಂಡಲ (Karnataka Assembly Session) ಅಧಿವೇಶನ ಶುರುವಾಗುತ್ತಿದ್ದರೂ ಬಿಜೆಪಿ (BJP) ಈವರೆಗೂ ವಿಪಕ್ಷ ನಾಯಕನನ್ನು (Opposition Leader) ಆಯ್ಕೆ ಮಾಡಲು ಆಗಿಲ್ಲ. ಯಾರನ್ನು ಆಯ್ಕೆ ಮಾಡಿದರೆ ಚೆನ್ನಾಗಿರುತ್ತದೆ ಎಂಬ ಬಗ್ಗೆ ಎಂಬ ಬಗ್ಗೆ ಯಡಿಯೂರಪ್ಪ (Yediyurappa) ಅವರಿಂದ ಅಭಿಪ್ರಾಯ ಸಂಗ್ರಹಿಸಿದೆ.

    ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ  ಜೊತೆ ಸಭೆ ನಡೆದ ಬಳಿಕ ಮಾತನಾಡಿದ ಯಡಿಯೂರಪ್ಪ, ಸೋಮವಾರ ಕೇಂದ್ರದ ವೀಕ್ಷಕರಾಗಿ ವಿನೋದ್ ತಾವ್ಡೆ ಮತ್ತು ಮನ್ಸುಖ್ ಮಂಡವಿಯಾ ಇಬ್ಬರು ಬರುತ್ತಿದ್ದಾರೆ. ಅವರು ರಾಜ್ಯ ಬಿಜೆಪಿ ಶಾಸಕರಿಂದ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಆಯ್ಕೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಉದ್ಧವ್‌ 1 ನಿರ್ಧಾರದಿಂದ ಮಹಾರಾಷ್ಟ್ರದಲ್ಲಿ ಬಂತು ಟ್ರಿಪಲ್‌ ಎಂಜಿನ್‌ ಸರ್ಕಾರ – ವಿಪಕ್ಷ ನಾಯಕ ಈಗ ಡಿಸಿಎಂ!

     

    ವೀಕ್ಷಕರು ಕೇಂದ್ರ ನಾಯಕರಿಗೆ ವರದಿ ನೀಡಿದ ಬಳಿಕ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ಮಾಡಲಾಗುತ್ತದೆ. ನಾಳೆ ಅಧಿವೇಶನಕ್ಕೆ ಮುನ್ನ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಇಲ್ಲ. ಸದ್ಯ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಅಗತ್ಯ ಬಿದ್ದರೆ ಎರಡು ದಿನಗಳ ಬಳಿಕ ಮತ್ತೆ ಕರೆಯುತ್ತೇವೆ ಎಂದು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳೇ ಹೊಣೆ : ಬಿಎಸ್‌ವೈ

    ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳೇ ಹೊಣೆ : ಬಿಎಸ್‌ವೈ

    – ಎಫ್‌ಡಿಎ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ಅಮಾನತಿಗೆ ಸೂಚನೆ

    ಶಿವಮೊಗ್ಗ : ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಗಣಿಗಾರಿಕೆಗಳಿಗೆ ತತ್ ಕ್ಷಣ ಕಡಿವಾಣ ಹಾಕುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

    ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ನಂತರವೂ ಅಕ್ರಮ ಗಣಿಗಾರಿಕೆ ನಡೆದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ. ಎಲ್ಲ ಅಕ್ರಮ ಗಣಿಗಾರಿಕೆಗಳು ಕೂಡಲೇ ನಿಲ್ಲಬೇಕು.  ಅರ್ಜಿ ಹಾಕಿ ನಂತರ ಪರವಾನಗಿ ಪಡೆಯಬೇಕು. ಅಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅನುಮತಿ ನೀಡಬೇಕು ಎಂದರು.

    ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟದ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಗಣಿಗಾರಿಕೆಯಿಂದ ಕೆಆರ್ ಎಸ್ ಜಲಾಶಯಕ್ಕೆ ಸಮಸ್ಯೆ ಎದುರಾಗಲಿದೆ. ಈಗಾಗಲೇ ಹಲವು ಬಾರಿ ಗಣಿಗಾರಿಕೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ. ಇದರ ನಡುವೆಯೂ ಅಲ್ಲೊಂದು ಇಲ್ಲೊಂದು ಕದ್ದುಮುಚ್ಚಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು,  ಶೀಘ್ರವೇ ಇದಕ್ಕೂ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.

    ಅಮಾನತಿಗೆ ಸೂಚನೆ: ಕೆಪಿಎಸ್‌ಸಿ ಎಫ್ ಡಿಎ ಪ್ರಶ್ನೆ ಪತ್ರಿಕೆ ಪರೀಕ್ಷೆಗು ಮುನ್ನವೇ ಬಹಿರಂಗಗೊಂಡಿರುವ ವಿಚಾರ ಅಕ್ಷಮ್ಯ ಅಪರಾಧ. ಈ ಬಗ್ಗೆ ಅಧಿಕಾರಿಗಳಿಂದ ರಾತ್ರಿಯೇ ಮಾಹಿತಿ ಪಡೆದಿದ್ದೇನೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥರ ಬಂಧನವಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು‌ ಮಾಡುವಂತೆ ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ಹುದ್ದೆಯಿಂದ ವಜಾಗೊಳಿಸಲು ಸೂಚಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇದನ್ನೂ ಓದಿ: 1 ಪೇಪರ್‌ಗೆ 10 ಲಕ್ಷ ರೂ. ಡೀಲ್‌ – ಕೆಪಿಎಸ್‌ಸಿ ಕಚೇರಿಯಿಂದಲೇ ಎಫ್‌ಡಿಎ ಪ್ರಶ್ನೆ ಪತ್ರಿಕೆ ಲೀಕ್‌

  • ಮೂವರು ಡಿಸಿಎಂ, ಬೊಮ್ಮಾಯಿಗೆ ಗೃಹ, ಸವದಿಗೆ ಸಾರಿಗೆ – ಯಾರಿಗೆ ಯಾವ ಖಾತೆ?

    ಮೂವರು ಡಿಸಿಎಂ, ಬೊಮ್ಮಾಯಿಗೆ ಗೃಹ, ಸವದಿಗೆ ಸಾರಿಗೆ – ಯಾರಿಗೆ ಯಾವ ಖಾತೆ?

    ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಆರ್‌ಎಸ್‌ಎಸ್ ಮತ್ತು ಯಡಿಯೂರಪ್ಪ ನಡುವಿನ ಹಗ್ಗ-ಜಗ್ಗಾಟದ ಬಳಿಕ ಖಾತೆ ಹಂಚಿಕೆ ಅಂತಿಮಗೊಂಡಿದೆ.

    ಅಶ್ವಥ್ ನಾರಾಯಣ,  ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ.  ನಾಳೆ ಬೆಳಗ್ಗೆ 11.30ಕ್ಕೆ ಉಮೇಶ್ ಕತ್ತಿ ಮತ್ತು ಅರವಿಂದ ಲಿಂಬಾವಳಿ ಸಂಪುಟಕ್ಕೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದ್ದು, ಈ ಸಂಬಂಧ ಸಿಎಂ ಸಮಯಾವಕಾಶ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

    ಯಾರಿಗೆ ಯಾವ ಖಾತೆ?
    ಸಿಎಂ ಬಿ.ಎಸ್.ಯಡಿಯೂರಪ್ಪ- ಹಣಕಾಸು, ಗುಪ್ತಚರ, ವಾರ್ತಾ ಪ್ರಸಾರ, ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಇಂಧನ,ಶಿಕ್ಷಣ, ಕೃಷಿ,

    1) ಗೋವಿಂದ ಕಾರಜೋಳ – ಲೋಕೋಪಯೋಗಿ, ಸಮಾಜ ಕಲ್ಯಾಣ
    2) ಡಾ. ಅಶ್ವತ್ಥ ನಾರಾಯಣ – ಉನ್ನತ ಶಿಕ್ಷಣ, ಐಟಿ ಮತ್ತು  ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ,
    3) ಲಕ್ಷ್ಮಣ ಸವದಿ – ಸಾರಿಗೆ
    4) ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್
    5) ಜಗದೀಶ್ ಶೆಟ್ಟರ್ – ಬೃಹತ್, ಮಧ್ಯಮ ಕೈಗಾರಿಕೆ
    6) ಆರ್. ಅಶೋಕ್ – ಕಂದಾಯ
    7) ಬಿ. ಶ್ರೀರಾಮುಲು – ಆರೋಗ್ಯ
    8) ಸುರೇಶ್ ಕುಮಾರ್ – ಪ್ರಾಥಮಿಕ ಶಿಕ್ಷಣ
    9) ವಿ ಸೋಮಣ್ಣ – ವಸತಿ, ಕನ್ನಡ ಮತ್ತು ಸಂಸ್ಕೃತಿ

    10) ಸಿ ಟಿ ರವಿ – ಪ್ರವಾಸೋದ್ಯಮ
    11) ಬಸವರಾಜ್ ಬೊಮ್ಮಾಯಿ – ಗೃಹ
    12) ಕೋಟ ಶ್ರೀನಿವಾಸ್ ಪೂಜಾರಿ – ಮೀನುಗಾರಿಕೆ, ಬಂದರು
    13) ಜೆ ಸಿ ಮಾಧುಸ್ವಾಮಿ – ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ
    14) ಸಿ.ಸಿ ಪಾಟೀಲ್ – ಗಣಿ ಮತ್ತು ಭೂ ವಿಜ್ಞಾನ, ವಾಣಿಜ್ಯ ಮತ್ತು ಕೈಗಾರಿಕೆ
    15) ಪ್ರಭು ಚೌವ್ಹಾಣ್ – ಪಶು ಸಂಗೋಪನೆ
    16) ಶಶಿಕಲಾ ಜೊಲ್ಲೆ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
    17) ನಾಗೇಶ್ – ಅಬಕಾರಿ