Tag: ಯಡಿಯೂರಪ್ಪ ಮೊಮ್ಮಗಳು

  • ಮಣ್ಣಲ್ಲಿ ಮಣ್ಣಾದ ಸೌಂದರ್ಯ – ಬಿಎಸ್‌ವೈ ಸೇರಿ ಕುಟುಂಬಸ್ಥರಿಂದ ಅಂತ್ಯಕ್ರಿಯೆ

    ಮಣ್ಣಲ್ಲಿ ಮಣ್ಣಾದ ಸೌಂದರ್ಯ – ಬಿಎಸ್‌ವೈ ಸೇರಿ ಕುಟುಂಬಸ್ಥರಿಂದ ಅಂತ್ಯಕ್ರಿಯೆ

    ಬೆಂಗಳೂರು: ಅಬ್ಬಿಗೆರೆ ಫಾರಂ ಹೌಸ್‌ನಲ್ಲಿ ಲಿಂಗಾಯತ ಸಂಪ್ರದಾಯದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೊಮ್ಮಗಳಾದ ಸೌಂದರ್ಯ ಅವರ ಅಂತ್ಯಕ್ರಿಯೆ ಇಂದು ಸಂಜೆ ನೆರವೇರಿತು.

    ಯಡಿಯೂರಪ್ಪ, ಕುಟುಂಬಸ್ಥರು, ಸಚಿವರು ಸೇರಿ ಬಂಧುಗಳ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಯಡಿಯೂರಪ್ಪ ಅವರ ಮೊಮ್ಮಗಳ ಸಾವಿಗೆ ಪ್ರಧಾನಿ ಮೋದಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: 15 ದಿನದ ಹಿಂದೆಯಷ್ಟೇ ಪತಿ ಜೊತೆಗೆ ಕಾಲೇಜಿಗೆ ತೆರಳಿ ಹಳೆ ಸ್ನೇಹಿತರನ್ನು ಮಾತಾಡಿಸಿದ್ದ ಸೌಂದರ್ಯ!

    ಬೆಂಗಳೂರಿನ ವಸಂತನಗರದಲ್ಲಿರುವ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ಬಿಎಸ್‌ವೈ ಅವರ ಮೊಮ್ಮಗಳು ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡಿದ್ದರು. ವೃತ್ತಿಯಲ್ಲಿ ವೈದ್ಯರಾಗಿದ್ದ, ಸೌಂದರ್ಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪತಿ ಡಾಕ್ಟರ್ ನೀರಜ್ ಇಂದು ಆಸ್ಪತ್ರೆಗೆ ತೆರಳಿದ್ದ ಸಂದರ್ಭದಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಸೌಂದರ್ಯ ನೇಣು ಬಿಗಿದುಕೊಂಡಿದ್ದರು. ಮಗುವನ್ನು ಬೇರೊಂದು ಕೊಠಡಿಯಲ್ಲಿ ಮಲಗಿಸಿ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದರು.

    ಮೇಡಂ ರೂಂ ಬಾಗಿಲು ತೆಗೀತಿಲ್ಲ ಎಂದು ಕೆಲಸದವರು ನೀರಜ್‌ಗೆ ಫೋನ್ ಮಾಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪತಿಯ ಅಬ್ಬಿಗೆರೆ ಫಾರಂ ಹೌಸ್‌ನಲ್ಲಿ ಸೌಂದರ್ಯ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಇದನ್ನೂ ಓದಿ: ಮಗುವಾದ ಬಳಿಕ ಡಿಪ್ರೆಷನ್‌ಗೆ ಒಳಗಾಗಿದ್ರಾ ಬಿಎಸ್‌ವೈ ಮೊಮ್ಮಗಳು?

  • ಮಗುವಾದ ಬಳಿಕ ಡಿಪ್ರೆಷನ್‌ಗೆ ಒಳಗಾಗಿದ್ರಾ ಬಿಎಸ್‌ವೈ ಮೊಮ್ಮಗಳು?

    ಮಗುವಾದ ಬಳಿಕ ಡಿಪ್ರೆಷನ್‌ಗೆ ಒಳಗಾಗಿದ್ರಾ ಬಿಎಸ್‌ವೈ ಮೊಮ್ಮಗಳು?

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗುವಾದ ಬಳಿಕ ಅವರು ಡಿಪ್ರೆಷನ್‌ಗೆ (ಮಾನಸಿಕ ಖಿನ್ನತೆ) ಒಳಗಾಗಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

    ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳ ಪಾರ್ಥಿವ ಶರೀರವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಸೌಂದರ್ಯ ಅವರನ್ನು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ಮಾಜಿ ಸಿಎಂ ಮೊಮ್ಮಗಳ ಸಾವಿಗೆ ಕಾರಣ ಏನೆಂಬುದು ವರದಿಯಿಂದ ತಿಳಿದುಬರಲಿದೆ. ಇದನ್ನೂ ಓದಿ:

    ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಅವರು ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ಅವರ ಪತಿ ಡಾ. ನಿರಂಜನ್ ಕೂಡ ಅದೇ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ದಂಪತಿಗೆ 9 ತಿಂಗಳ ಗಂಡು ಮಗು ಇದೆ. ರಾಮಯ್ಯದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ ಬೌರಿಂಗ್‌ನಲ್ಲೇ ಸರ್ಜನ್ ಆಗಿದ್ದ ಸೌಂದರ್ಯ ಅವರು ಮಗುವಾದ ನಂತರ ಕೆಲಸ ಬಿಟ್ಟಿದ್ದರು. ನಂತರ ಡಿಪ್ರೆಷನ್‌ಗೆ ಒಳಗಾಗಿದ್ದರು. ಕಳೆದ ಮೂರು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

    ಸೌಂದರ್ಯ ಹಾಗೂ ಪತಿ ಡಾ. ನಿರಂಜನ್ ಅವರು ಧವಳಗಿರಿ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದರು. ಆದರೆ ಇಂದು ಡಾಲರ್ಸ್ ಕಾಲೋನಿಯ ಲೆಗೆಸ್ಸಿ ಅಪಾರ್ಟ್ಮೆಂಟ್ ಫ್ಲಾಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗುವನ್ನು ಪಕ್ಕದ ರೂಮ್‌ನಲ್ಲಿ ಮಲಗಿಸಿ ತಾನು ಬೇರೊಂದು ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಘಟನೆ ಸಂಬAಧ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಕೆಲವರು ಸಚಿವರೂ ಭಾಗಿಯಾಗಿದ್ದರು. ಸದ್ಯ ಯಡಿಯೂರಪ್ಪ ನಿವಾಸದ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.