Tag: ಯದುವೀರ

  • ಮತ್ತೆ ಸಿನಿಮಾ ರಂಗಕ್ಕೆ ಮರಳಿದ ನಿಖಿಲ್ ಕುಮಾರಸ್ವಾಮಿ

    ಮತ್ತೆ ಸಿನಿಮಾ ರಂಗಕ್ಕೆ ಮರಳಿದ ನಿಖಿಲ್ ಕುಮಾರಸ್ವಾಮಿ

    ರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy). ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡುತ್ತಿದ್ದಾರೆ.

    ಸೀತಾ ರಾಮ್ ಕಲ್ಯಾಣ್ ಸಿನಿಮಾದ ನಂತರ ಧನುಷ್ (Dhanush) ಮತ್ತು ಯದುವೀರ (Yaduveer) ಎಂಬೆರಡು ಚಿತ್ರಗಳನ್ನು ನಿಖಿಲ್ ಒಪ್ಪಿಕೊಂಡಿದ್ದರೂ, ಎರಡೂ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿರಲಿಲ್ಲ. ಹಾಗಾಗಿ ನಿರಾಳರಾಗಿ ಚುನಾವಣೆಗೆ ಕಳುಹಿಸಿ ಕೊಟ್ಟಿದ್ದರು ಆಯಾ ಚಿತ್ರಗಳ ನಿರ್ಮಾಪಕರು. ಆ ಚಿತ್ರಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಈ ನಡುವೆ ಮತ್ತೊಂದು ಹೆಸರಾಂತ ಸಂಸ್ಥೆ ನಿಖಿಲ್ ಚಿತ್ರ ಮಾಡಲು ಮುಂದಾಗಿದೆ. ಇದನ್ನೂ ಓದಿ:ಗೋಲ್ಡನ್ ಹೀರೋಗೆ ಜೋಡಿಯಾದ ‘ಗಟ್ಟಿಮೇಳ’ ನಟಿ ಶರಣ್ಯ ಶೆಟ್ಟಿ

    ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ (LYCA Production) ಇದೀಗ ನಿಖಿಲ್ ಅವರ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದೆ ಬಂದಿದೆ. ಈಗಾಗಲೇ ನಿಖಿಲ್ ಜೊತೆ ಮಾತುಕತೆಯನ್ನೂ ಅದು ಆಡಿದೆ. ನಿಖಿಲ್ ಕೂಡ ಆ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನುವುದು ಸದ್ಯಕ್ಕಿರುವ ವರ್ತಮಾನ.

    ನಿಖಿಲ್ ಕುಮಾರ ಸ್ವಾಮಿ ದೊಡ್ಡದೊಂದು ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ಈವರೆಗೂ ಬಂದ ಚಿತ್ರಗಳು ನಿಖಿಲ್ ಅವರಿಗೆ ಅಷ್ಟೇನೂ ಹೇಳಿಕೊಳ್ಳುವಂತಹ ಆದಾಯ ಮತ್ತು ಹೆಸರು ತಂದುಕೊಟ್ಟಿಲ್ಲ. ಹಾಗಾಗಿ ದೊಡ್ಡ ಬ್ರೇಕ್ ಗಾಗಿಯೇ ಅವರು ಕಾಯುತ್ತಿದ್ದಾರೆ. ಒಪ್ಪಿಕೊಂಡ ಚಿತ್ರಗಳು ಅವರ ಕೈ ಹಿಡಿಯಲಿ ಎನ್ನುವುದು ಅಭಿಮಾನಿಗಳ ಆಸೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿಖಿಲ್ ಕುಮಾರ್ ಸ್ವಾಮಿ ರಾಜಕೀಯದಲ್ಲಿ ಬ್ಯುಸಿ : ‘ಯದುವೀರ’ ಸಿನಿಮಾ ತಟಸ್ಥ

    ನಿಖಿಲ್ ಕುಮಾರ್ ಸ್ವಾಮಿ ರಾಜಕೀಯದಲ್ಲಿ ಬ್ಯುಸಿ : ‘ಯದುವೀರ’ ಸಿನಿಮಾ ತಟಸ್ಥ

    ಅಂದುಕೊಂಡಂತೆ ಆಗಿದ್ದರೆ, ಇಷ್ಟೊತ್ತಿಗಾಗಲೇ ನಿಖಿಲ್ ಕುಮಾರ್ ಸ್ವಾಮಿ ನಟನೆಯ ಯದುವೀರ ಸಿನಿಮಾದ ಶೂಟಿಂಗ್ ಶುರುವಾಗಬೇಕಿತ್ತು. ನಿಖಿಲ್ ಅವರ ಹುಟ್ಟು ಹಬ್ಬದಂದು ಗ್ರ್ಯಾಂಡ್ ಆಗಿಯೇ ಯದುವೀರ ಸಿನಿಮಾದ ಫಸ್ಟ್ ಲುಕ್ ರಿಲೀಸ್‍ ಮಾಡಿತ್ತು ಚಿತ್ರತಂಡ. ಅದಾಗಿ ಹಲವು ತಿಂಗಳು ಕಳೆದರೂ, ಇನ್ನೂ ಸಿನಿಮಾದ ಶೂಟಿಂಗ್ ಶುರುವಾಗಿಲ್ಲ. ಇದನ್ನೂ ಓದಿ : ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ

    ಈ ಸಿನಿಮಾವನ್ನು ಮಂಜು ಅಥರ್ವ್ ಅವರು ನಿರ್ದೇಶನ ಮಾಡಬೇಕಿತ್ತು. ಈ ನಿರ್ದೇಶಕ ಚೊಚ್ಚಲು ಸಿನಿಮಾ ಕೂಡ ಇದಾಗಿತ್ತು. ಅದ್ಭುತವಾಗಿ ಕತೆ ಬರೆದ ಕಾರಣಕ್ಕಾಗಿ ಕೆವಿಎನ್ ಪ್ರೊಡಕ್ಷನ್ ಈ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದಾಗಿತ್ತು. ಹೀಗಾಗಿ ದೊಡ್ಡ ಪ್ರೊಡಕ್ಷನ್ ಹೌಸ್ ನಿಂದ ತಮ್ಮ ಚೊಚ್ಚಲು ಸಿನಿಮಾ ಬರಲಿದೆ ಎಂದು ಕನಸು ಕಂಡಿದ್ದ ನಿರ್ದೇಶಕನಿಗೆ ಸಹಜವಾಗಿಯೇ ನಿರಾಸೆ ಆಗಿದೆ. ಇದನ್ನೂ ಓದಿ  : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್

    ಹಾಗಂತ ಸಿನಿಮಾ ಸಂಪೂರ್ಣ ನಿಲ್ಲಿಸಿಯೇ ಬಿಡುತ್ತಾರಾ? ಎನ್ನುವುದಕ್ಕೆ ಕೆವಿಎನ್ ಪ್ರೊಡಕ್ಷನ್ ಹೌಸ್ ನಿಂದ ಯಾವುದೇ ಸ್ಪಷ್ಟ ಉತ್ತರವಿಲ್ಲ. ಆದರೆ, ಕಳೆದ ಐದು ತಿಂಗಳಿಂದ ಯದುವೀರ ಬಗ್ಗೆ ಯಾವುದೇ ಅಪ್ ಡೇಟ್ ಕೂಡ ಕೊಟ್ಟಿಲ್ಲ. ಆದರೆ, ಕೆವಿಎನ್ ಮತ್ತೊಂದು ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಧ್ರುವ ಸರ್ಜಾ ಈ ಚಿತ್ರಕ್ಕೆ ಹೀರೋ, ಪ್ರೇಮ್ ನಿರ್ದೇಶಕ. ಸದ್ಯ ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ.

    ಮುಂದಿನ ವಿಧಾನ ಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ನಿಖಿಲ್ ರಾಜಕಾರಣದಲ್ಲಿ ಬ್ಯುಸಿಯಾಗಿದ್ದಾರೆ. ರಾಜ್ಯ ಸುತ್ತುತ್ತಿದ್ದಾರೆ. ಪಕ್ಷ ಕಟ್ಟುವ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಹೀಗಾಗಿ ನಿಖಿಲ್ ಸದ್ಯ ಸಿನಿಮಾ ಮಾಡುವುದು ಅನುಮಾನ ಎನ್ನಲಾಗುತ್ತಿದೆ. ಆದರೆ, ಈ ಕುರಿತು ನಿಖಿಲ್ ಕುಮಾರ್ ಈವರೆಗೂ ಯದುವೀರ ಸಿನಿಮಾದ ಬಗ್ಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಒಟ್ಟಿನಲ್ಲಿ ಸದ್ಯಕ್ಕಂತೂ ಯದುವೀರ ಸಿನಿಮಾದ ಶೂಟಿಂಗ್ ನಡೆಯುವುದಿಲ್ಲ.

  • ಯದುವೀರನಿಗಾಗಿ ಕನ್ನಡಕ್ಕೆ ವಾಪಸ್ಸಾದ ನೇಹಾ ಶೆಟ್ಟಿ

    ಯದುವೀರನಿಗಾಗಿ ಕನ್ನಡಕ್ಕೆ ವಾಪಸ್ಸಾದ ನೇಹಾ ಶೆಟ್ಟಿ

    ಗಣೇಶ್ ನಟನೆಯ ‘ಮುಂಗಾರು ಮಳೆ 2’ ಮೂಲಕ ಸಿನಿಮಾ ರಂಗ ಪ್ರವೇಶ ಮಾಡಿದ್ದ ಕರಾವಳಿ ಬೆಡಗಿ ನೇಹಾ ಶೆಟ್ಟಿ, ಆನಂತರ ಅವರು ಮತ್ತೆ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಳ್ಳಲಿಲ್ಲ. ಮುಂಗಾರು ಮಳೆ 2 ಬಾಕ್ಸ್ ಆಫೀಸಿನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ ಎನ್ನುವ ಕಾರಣಕ್ಕೋ ಏನೋ, ಸ್ಯಾಂಡಲ್ ವುಡ್ ನೇಹಾ ಶೆಟ್ಟಿಗೆ ಮತ್ತೆ ಅವಕಾಶ ಕೊಡಲಿಲ್ಲ. ಹಾಗಾಗಿ ಅವರು ತೆಲುಗು ಸಿನಿಮಾ ರಂಗದತ್ತ ಮುಖ ಮಾಡಿದರು. ಇದನ್ನು ಓದಿ : ಡಾ.ವಿಷ್ಣು ಪುತ್ಥಳಿ ಅನಾವರಣಕ್ಕೆ ಹಿಜಬ್ -ಕೇಸರಿ ವಿವಾದ ಅಡ್ಡಿ


    ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ನಿರ್ದೇಶನದ ‘ಮೆಹಬೂಬು’ ಚಿತ್ರದ ಮೂಲಕ ತೆಲುಗು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಈ ಸಿನಿಮಾ ತಕ್ಕಮಟ್ಟಿಗೆ ಹಿಟ್ ಆಯಿತು ಮತ್ತು ಪುರಿ ಜಗನ್ನಾಥ್ ಪರಿಚಯಿಸಿದ ನಟಿ ಅನ್ನುವ ಕಾರಣಕ್ಕೆ ಅಲ್ಲಿ ಅವರಿಗೆ ಅವಕಾಶ ಸಿಕ್ಕವು. ಹಾಗಾಗಿ ಒಂದರ ಮೇಲೊಂದು ಅವರು ಸಿನಿಮಾ ಮಾಡುತ್ತಲೇ ಹೋದರು. ಇದನ್ನೂ ಓದಿ : ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಸಲು ಖಡಕ್ ಸುತ್ತೋಲೆ

    ಮೊನ್ನೆಯಷ್ಟೇ ನೇಹಾ ಶೆಟ್ಟಿ ನಟನೆಯ ‘ಡಿಜೆ ಟಿಲ್ಲು’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾ ಭಾರೀ ಸದ್ದು ಕೂಡ ಮಾಡಿತು. ಅಲ್ಲಿಂದ ಅವರಿಗೆ ಅದೃಷ್ಟ ಖುಲಾಯಿಸಿದೆ. ಹಾಗಾಗಿ ಅವರನ್ನು ಮತ್ತೆ ಕನ್ನಡಕ್ಕ ತರುವ ಪ್ರಯತ್ನ ನಡೆದಿದೆ. ಇದನ್ನೂ ಓದಿ : ಸಿಎಂ ಜಗನ್ ಆದೇಶಕ್ಕೆ ನಿಟ್ಟುಸಿರಿಟ್ಟ ತೆಲುಗು ಚಿತ್ರರಂಗ


    ಸದ್ಯ ನೇಹಾ ಶೆಟ್ಟಿ ಕನ್ನಡದತ್ತ ಮತ್ತೆ ಮುಖ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ನಟನೆಯ ‘ಯದುವೀರ’ ಚಿತ್ರಕ್ಕೆ ಇವರನ್ನೇ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂಬ ಸುದ್ದಿಯಿದೆ. ಚಿತ್ರತಂಡ ಅಧಿಕೃತವಾಗಿ ಹೇಳಿಕೊಳ್ಳದೇ ಇದ್ದರೂ, ಚಿತ್ರತಂಡದ ಸದಸ್ಯರ ಮಾಹಿತಿಯ ಪ್ರಕಾರ, ಭಾರೀ ಮೊತ್ತದ ಸಂಭಾವನೆಯನ್ನೇ ನೀಡಿ ನೇಹಾ ಅವರನ್ನು ಕರೆತರಲಾಗುತ್ತಿದೆಯಂತೆ. ಇದನ್ನೂ ಓದಿ : ರಕ್ತದಾನ ಮಾಡಿದ ಹೃತಿಕ್ ರೋಷನ್


    ಮೊನ್ನೆಯಷ್ಟೇ ಯದುವೀರ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಿತ್ತು ಚಿತ್ರತಂಡ. ಸಿನಿಮಾದ ಚಿತ್ರೀಕರಣಕ್ಕೂ ಸಿದ್ಧತೆ ಮಾಡಿಕೊಂಡಿದೆ. ಕೆಲವೇ ದಿನಗಳಲ್ಲಿ ನಾಯಕಿಯ ಬಗ್ಗೆ ಚಿತ್ರತಂಡವೇ ಮಾಹಿತಿ ಕೊಡಬಹುದು.