Tag: ಯದುವೀರ್

  • ರಾಜಕೀಯ ಪ್ರವೇಶ, ಊಹಾ ಪೋಹಾಕ್ಕೆ ಯದುವೀರ್ ಸ್ಪಷ್ಟನೆ

    ರಾಜಕೀಯ ಪ್ರವೇಶ, ಊಹಾ ಪೋಹಾಕ್ಕೆ ಯದುವೀರ್ ಸ್ಪಷ್ಟನೆ

    ಹಾಸನ: ಮೈಸೂರು ಮಹಾರಾಜರು ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಊಹಾ ಪೋಹಾಕ್ಕೆ ಸ್ವತಃ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೆರೆ ಎಳೆದಿದ್ದಾರೆ.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜನೆ ಮಾಡಿರುವ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿಲು ಇದೇ ಮೊದಲ ಬಾರಿಗೆ ಹಾಸನಕ್ಕೆ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದ ಬಗ್ಗೆ ಸದ್ಯಕ್ಕೆ ನನಗೆ ಆಸಕ್ತಿಯಿಲ್ಲ. ಹಿಂದಿನಿಂದಲೂ ಜನರೊಂದಿಗೆ ರಾಜಪರಂಪರೆಯ ನಂಟು ಇದೆ. ಆ ಸಂಬಂಧವನ್ನು ಮುಂದುವರಿಸಿಕೊಂಡು ಹೋಗೋದಷ್ಟೇ ನನ್ನ ಮುಂದಿರುವ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಬಿಜೆಪಿಯಿಂದ ಯಧುವೀರ್ ಸ್ಪರ್ಧೆ?

    ಮಂಡ್ಯದಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಹಾರಾಜರು, ಸದ್ಯ ಅದೆಲ್ಲಾ ಬರೀ ಊಹಾಪೋಹ. ಅಂಥ ಯಾವುದೇ ಪ್ರಸ್ತಾಪ ನನ್ನ ಮುಂದೆ ಇಲ್ಲ. ಮೈಸೂರಿನ ಪಾರಂಪರಾಗತ ಪರಂಪರೆ ಉಳಿಸಿಕೊಳ್ಳೋದು ಜೊತೆಗೆ ತಾನು ಸಮಾಜಸೇವೆಯಲ್ಲಿ ಅಥವಾ ಕೆಲವು ಕ್ಷೇತ್ರದಲ್ಲಿ ತೊಡಗಿಸಿಕೊಂಡು ಮುಂದುವರಿಸುವುದಾಗಿ ಹೇಳಿದರು.

    ಭವಿಷ್ಯದಲ್ಲಿ ಚುನಾವಣೆ ನಿಲ್ಲುವ ಬಗ್ಗೆ ಉತ್ತರ ನೀಡಲು ಯದುವೀರ್ ನಿರಾಕರಿಸಿದ್ದು, ನಾನು ವಿದೇಶದಲ್ಲಿ ಇದ್ದುದರಿಂದ ನೆರೆ ಹಾವಳಿಯಿಂದ ತತ್ತರಿಸಿ ಹೋಗಿರುವ ಕೊಡಗಿಗೆ ಭೇಟಿ ಕೊಡಲು ಸಾಧ್ಯವಿಲ್ಲ. ಆದಷ್ಟು ಶೀಘ್ರದಲ್ಲೇ ಮಡಿಕೇರಿಗೆ ಭೇಟಿ ನೀಡುವೆ ಎಂದು ತಿಳಿಸಿದರು.

    ಇದೇ ವೇಳೆ ಮೈಸೂರಿನ ಅರಸರಿಗೆ ರಾಜಧನ ನೀಡಿಕೆ ವಿಚಾರ ಕುರಿತ ಪ್ರಶ್ನೆಗೆ, ಈ ಬಗ್ಗೆ ತನಗೆ ಹೆಚ್ಚಿನ ಮಾಹಿತಿಯಿಲ್ಲ. ಅರಮನೆ ಕಚೇರಿಯಲ್ಲಿ ಕೇಳಿ ಎಂದಷ್ಟೇ ಹೇಳಿದರು. ಬಳಿಕ ಹಾಸನದ ಖಾಸಗಿ ಹೋಟೆಲ್ ನಿಂದ ಕಾರ್ಯಕ್ರಮ ನಡೆಯುವ ಕಲಾಭವನದವರೆಗೆ ಮಹಾರಾಜರನ್ನು ಸಾರೋಟ ಮೆರವಣಿಗೆ ಕರೆದೊಯ್ಯಲಾಯಿತು. ಈ ವೇಳೆ ವೀರಗಾಸೆ ಕುಣಿತ, ಪೂರ್ಣಕುಂಭ ಸ್ವಾಗತ ಮೆರವಣಿಗೆ ಗಮನ ಸೆಳೆಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೆಆರ್‌ಎಸ್‌  ಅಣೆಕಟ್ಟು ರುದ್ರರಮಣೀಯ ದೃಶ್ಯ ಕಣ್ತುಂಬಿಕೊಂಡ ಅಂಬರೀಶ್, ಯದುವೀರ್ ದಂಪತಿ

    ಕೆಆರ್‌ಎಸ್‌ ಅಣೆಕಟ್ಟು ರುದ್ರರಮಣೀಯ ದೃಶ್ಯ ಕಣ್ತುಂಬಿಕೊಂಡ ಅಂಬರೀಶ್, ಯದುವೀರ್ ದಂಪತಿ

    ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಗೆ ಮೈಸೂರು ರಾಜ ಯದುವೀರ್ ದಂಪತಿ ಹಾಗೂ ನಟ, ಮಾಜಿ ಸಚಿವ ಅಂಬರೀಶ್ ಭೇಟಿ ನೀಡಿ ಅಣೆಕಟ್ಟೆಯ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ.

    ಕೆಆರ್‌ಎಸ್‌ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಯಿಂದ ಒಂದು ಲಕ್ಷದ 20 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ತುಂಬಿ ಹರಿಯುತ್ತಿದ್ದು ಆ ದೃಶ್ಯವನ್ನು ಕಣ್ತುಂಬಿಕೊಳ್ಳಲು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ರಿಷಿಕಾರೊಂದಿಗೆ ಕೆಆರ್‌ಎಸ್‌ ಅಣೆಕಟ್ಟೆಗೆ ಆಗಮಿಸಿದ್ದರು. ಜೊತೆಗೆ ಅಣೆಕಟ್ಟೆ ಮೈದುಂಬಿ ಹರಿಯುತ್ತಿರುವ ದೃಶ್ಯವನ್ನು ತಮ್ಮ ಕ್ಯಾಮೆರಾದಲ್ಲೂ ಸೆರೆಹಿಡಿದರು.

    ನಟ, ಮಾಜಿ ಸಚಿವ ಅಂಬರೀಶ್ ಕೂಡ ಕೆಆರ್‌ಎಸ್‌ ಗೆ ಭೇಟಿ ನೀಡಿದ್ದು, ಧುಮ್ಮಿಕ್ಕಿ ಹರಿಯುತ್ತಿರುವ ಕಾವೇರಿ ನದಿ ವೀಕ್ಷಿಸಿದರು. ಅಂಬರೀಶ್ ಅವರೊಂದಿಗೆ ಅಧಿಕಾರಿಗಳು ಸಹ ಸಾಥ್ ನೀಡಿದ್ದು, ಅವರೊಂದಿಗೆ ಸೆಲ್ಫಿ ತೆಗೆದುಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಡದೇವತೆ ಚಾಮುಂಡಿಗೆ ವರ್ಧಂತಿ ಉತ್ಸವ – ತಾಯಿಯ ಹುಟ್ಟುಹಬ್ಬಕ್ಕೆ ಹರಿದುಬಂತು ಭಕ್ತಸಾಗರ

    ನಾಡದೇವತೆ ಚಾಮುಂಡಿಗೆ ವರ್ಧಂತಿ ಉತ್ಸವ – ತಾಯಿಯ ಹುಟ್ಟುಹಬ್ಬಕ್ಕೆ ಹರಿದುಬಂತು ಭಕ್ತಸಾಗರ

    ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರ. ಇದರ ಜೊತೆಗೆ ಚಾಮುಂಡಿ ತಾಯಿಯ ವರ್ಧಂತಿ ಅರ್ಥಾತ್ ಹುಟ್ಟುಹಬ್ಬ. ಆದ್ದರಿಂದ ನಾಡದೇವಿ ಚಾಮುಂಡಿಗೆ ವರ್ಧಂತಿ ಉತ್ಸವ ನಡೆಯುತ್ತಿದೆ.

    ವರ್ಧಂತಿ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರವೇ ಹರಿದಿದೆ. ಪ್ರಾತಃಕಾಲದಿಂದಲೇ ವಿವಿಧ ಅಭಿಷೇಕ ಮತ್ತು ಪೂಜೆಗಳು ನಡೆದಿವೆ. ಬೆಳಗ್ಗೆ 9.30 ಕ್ಕೆ ಮಹಾಮಂಗಳಾರತಿ ನೆರವೇರಿದ್ದು, 10.25ಕ್ಕೆ ಚಾಮುಂಡಿ ದೇವಿಯ ಚಿನ್ನದ ಪಲ್ಲಕ್ಕಿ ಉತ್ಸವ ಪ್ರಾರಂಭವಾಗಿದೆ. ಈ ವರ್ಧಂತಿ ಉತ್ಸವದಲ್ಲಿ ಯದುವಂಶದ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಭಾಗಿಯಾಗಿದ್ದು. ಅಲ್ಲದೆ ಸಾವಿರಾರು ಭಕ್ತರು ಆಗಮಿಸಿ ಈ ಕ್ಷಣವನ್ನ ಕಣ್ತುಂಬಿಕೊಂಡರು.


    ಪ್ರತಿ ಆಷಾಢ ಶುಕ್ರವಾರಕ್ಕಿಂತ ಇಂದು ಹೆಚ್ಚಿನ ಭಕ್ತರು ಬೆಟ್ಟದಲ್ಲಿ ಸೇರಿದ್ದಾರೆ. ಚಾಮುಂಡಿ ದೇವಾಲಯದಲ್ಲಿ ವಿವಿಧ ರೀತಿ ಪುಷ್ಪಗಳಿಂದ ದೇವಾಸ್ಥಾನವನ್ನು ಅಲಂಕಾರ ಮಾಡಲಾಗಿದೆ. ಹೂವಿನ ಅಲಂಕಾರ ಭಕ್ತರನ್ನು ಹೆಚ್ಚು ಆಕರ್ಷಿಸುತ್ತಿದೆ. ಚಾಮುಂಡಿ ವರ್ಧಂತಿ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ದೇವಿಯ ಚಿನ್ನದ ಫಲ್ಲಕ್ಕಿ ಉತ್ಸವ ಅದ್ಧೂರಿಯಿಂದ ನೆರವೇರಿದೆ.

  • ಅಮಿತ್ ಶಾ, ರಾಜಮಾತೆ ಪ್ರಮೋದಾದೇವಿ ಗುಟ್ಟಾಗಿ ಮಾತಾಡಿದ್ದನ್ನ ರಿವೀಲ್ ಮಾಡಿದ ಯದುವೀರ್!

    ಅಮಿತ್ ಶಾ, ರಾಜಮಾತೆ ಪ್ರಮೋದಾದೇವಿ ಗುಟ್ಟಾಗಿ ಮಾತಾಡಿದ್ದನ್ನ ರಿವೀಲ್ ಮಾಡಿದ ಯದುವೀರ್!

    ಚಿತ್ರದುರ್ಗ: ಮೈಸೂರಿನ ಯುವರಾಜ ಯದುವೀರ್ ಭಾನುವಾರ ರಜೆ ಇದ್ದ ಪ್ರಯುಕ್ತ ಕಲ್ಲಿನ ಕೋಟೆ ಚಿತ್ರದುರ್ಗಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.

    ಯುವರಾಜ ಯದುವೀರ್ ಕೋಟೆ ವೀಕ್ಷಣೆ ಮಾಡಿ ಕೋಟೆಯ ಬಗ್ಗೆ ವಿವರಣೆ ಪಡೆದಿದ್ದಾರೆ. ಈ ವೇಳೆ ಮೈಸೂರಿನ ಯುವರಾಜ ನನ್ನು ನೋಡಿದ ಕೋಟೆನಾಡಿನ ಜನರು ಪುಳಕಿತರಾಗಿದ್ದು, ಅವರನ್ನು ನೋಡಲು ಪ್ರವಾಸಿಗರು ಮುಗಿಬಿದ್ದಿದ್ದರು.

    ಕೋಟೆ ವೀಕ್ಷಣೆ ಬಳಿಕ ಮಾತನಾಡಿದ ಯದುವೀರ್, ಇದೇ ಮೊದಲ ಬಾರಿಗೆ ನಾನು ಕೋಟೆಗೆ ಭೇಟಿ ನೀಡಿದ್ದೇನೆ. ಐತಿಹಾಸಿಕ ಕೋಟೆ ನೋಡಿ ತುಂಬಾ ಸಂತೋಷವಾಗಿದೆ. ರಾಜ್ಯದ ರಾಜ ಮನೆತನಗಳಿಗೆ ಅವಿನಾಭಾವ ಸಂಬಂಧವಿದೆ. ನನ್ನ ಅಜ್ಜಿ ಗಾಯಿತ್ರಿದೇವಿ ಅವರ ಹೆಸರಿನಲ್ಲಿ ವಾಣಿ ವಿಲಾಸ ಜಲಾಶಯಗಳಿವೆ ಎಂದು ತಮ್ಮ ಸಂತಸವನ್ನು ವ್ಯಕ್ತ ಪಡಿಸಿದ್ದಾರೆ.

    ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ರಾಜಮಾತೆ ಪ್ರಮೋದಾದೇವಿ ಮಾತನಾಡಿದ್ದ ಬಗ್ಗೆ ತಿಳಿಸಿದ್ದಾರೆ. ರಾಜಕೀಯಕ್ಕೆ ಬರುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಅಮಿತ್ ಶಾ ಅವರು ರಾಜಮಾತೆ ಪ್ರಮೋದಾದೇವಿ ಮತ್ತು ನನ್ನನ್ನು ಭೇಟಿ ಮಾಡಿದ್ದರು. ಆದರೆ ರಾಜ್ಯ ಸಭೆಗೆ ಆಯ್ಕೆ ಮಾಡುವ ಬಗ್ಗೆ ಯಾವುದೇ ರೀತಿಯ ಆಫರ್ ನೀಡಿಲ್ಲ ಎಂದು ಹೇಳಿದ್ದಾರೆ. ಇದನ್ನು ಓದಿ: ರಾಜಮಾತೆ ಪ್ರಮೋದಾ ದೇವಿ ಜೊತೆ ಶಾ ಮಹತ್ವದ ಚರ್ಚೆ – ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಜನರು ಬಯಸಿದರೆ ಮುಂದೆ ರಾಜಕೀಯಕ್ಕೆ ಬರುತ್ತೇನೆ. ಸದ್ಯಕ್ಕೆ ರಾಜಕೀಯ ನನ್ನ ದಾರಿಯಲ್ಲಿ ಇಲ್ಲ. ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂಪರ್ಕಿಸುವ ಕಾರಿಡಾರ್ ಮಾಡುವ ಚಿಂತನೆ ಇದೆ. ಆ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬಹುದು. ಪ್ರವಾಸಿಗರೂ ಕೂಡ ಇಂತಹ ಐತಿಹಾಸಿಕ ಸ್ಥಳಗಳ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

    ಮಾರ್ಚ್ 30 ಶುಕ್ರವಾರದಂದು ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರಿಗೆ ಭೇಟಿ ನೀಡಿದ್ದರು. ಈ ವೇಳೆ ಅಮಿತ್ ಶಾ ರಾಜಮಾತೆ ಪ್ರಮೋದಾ ದೇವಿ ಹಾಗೂ ಯದುವೀರ್ ಒಡೆಯರ್ ಅವರ ಚರ್ಚೆ ನಡೆಸಿದ್ದರು. ಬಳಿಕ ಮೈಸೂರು ಅರಮನೆಯ ಗಣಪತಿ ದೇವಸ್ಥಾನ ಮುಂಭಾಗ ಅಮಿತ್ ಶಾ ಹಾಗೂ ಪ್ರಮೋದಾ ದೇವಿ ಒಡೆಯರ್ ಅವರು ಗೌಪ್ಯ ಮಾತುಕತೆ ನಡೆಸಿದ್ದರು. ಈ ವೇಳೆ ಯದುವೀರ್ ಒಡೆಯರ್ ಅವರನ್ನು ಬಿಟ್ಟು ಇಬ್ಬರೇ ಮಾತುಕತೆ ನಡೆಸಿದ್ದರು.

  • ರಾಜಕೀಯ ಎಂಟ್ರಿ ಸುದ್ದಿ ಬಗ್ಗೆ ಸ್ಪಷ್ಟನೆ ಕೊಟ್ಟ ಯದುವೀರ್ ಒಡೆಯರ್

    ರಾಜಕೀಯ ಎಂಟ್ರಿ ಸುದ್ದಿ ಬಗ್ಗೆ ಸ್ಪಷ್ಟನೆ ಕೊಟ್ಟ ಯದುವೀರ್ ಒಡೆಯರ್

    ಮಡಿಕೇರಿ: ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ. ಯಾವುದೇ ಪಕ್ಷದ ಪ್ರಚಾರ ಕಾರ್ಯದಲ್ಲೂ ತೊಡಗಿಸಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ರಾಜಕೀಯ ಸೇರ್ಪಡೆ ಸಂಬಂಧಿಸಿದಂತೆ ಬರುತ್ತಿದ್ದ ವದಂತಿ ಸುದ್ದಿಗಳಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೆರೆ ಎಳೆದಿದ್ದಾರೆ.

    ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದಲ್ಲಿರುವ ಕಾವೇರಿ ಕಾಲೇಜು ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತನ್ನ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಸಮಾಜ ಸೇವೆಗಳಲ್ಲೇ ತನ್ನನ್ನು ತಾನು ತೊಡಗಿಸಿಕೊಳ್ಳುತ್ತೇನೆ ವಿನಃ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿದರು.  ಇದನ್ನೂ ಓದಿ: ತವರಿನಲ್ಲಿಯೇ ಸಿಎಂ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ ಹೈಕಮಾಂಡ್ ನಿಂದ ಮಹತ್ವದ ಸೂಚನೆ ರವಾನೆ

    ಇದೇ ವೇಳೆ ಅಮಿತ್ ಶಾ ಭೇಟಿ ಕುರಿತು ಮಾತನಾಡಿದ ಅವರು, ಮಾರ್ಚ್ 30 ರಂದು ಅಮಿತ್ ಷಾ ಮೈಸೂರು ಅರಮನೆಗೆ ಭೇಟಿ ನೀಡುವ ಬಗ್ಗೆ ನನಗೆ ತಿಳಿದಿಲ್ಲ. ನನ್ನ ಗಮನಕ್ಕೂ ಇಲ್ಲಿವರೆಗೂ ಬಂದಿರಲಿಲ್ಲ, ನಿಮ್ಮಿಂದಲೇ ಗೊತ್ತಾಗ್ತಿದೆ ಅಂತ ಹೇಳಿದ್ರು.

    ಒಂದು ವೇಳೆ ಅಮಿತ್ ಶಾ ಅರಮನೆಗೆ ಬಂದ್ರೆ ಭೇಟಿ ಮಾಡುತ್ತೇನೆ. ಆದರೆ ನಾನು ರಾಜಕೀಯಕ್ಕೆ ಯಾವುದೇ ಕಾರಣಕ್ಕೂ ಬರಲ್ಲ. ಈಗಾಗಲೇ ಅನೇಕ ಬಾರಿ ಹೇಳಿದ್ದೇನೆ. ರಾಜಕಾರಣದಲ್ಲಿ ಆಸಕ್ತಿಯೂ ಇಲ್ಲ. ನನ್ನ ಆಸಕ್ತಿ ಏನಿದ್ರೂ ಜನರ ಜೊತೆ ಬೆರೆಯುವುದು ಅಷ್ಟೇ ಅಂದ್ರು.

  • ತಾಯಿ ಚಾಮುಂಡಿ ದೇವಿಯ ಸನ್ನಿಧಾನದಲ್ಲಿ ಆದ್ಯವೀರ್ ತೊಟ್ಟಿಲು ಶಾಸ್ತ್ರ

    ತಾಯಿ ಚಾಮುಂಡಿ ದೇವಿಯ ಸನ್ನಿಧಾನದಲ್ಲಿ ಆದ್ಯವೀರ್ ತೊಟ್ಟಿಲು ಶಾಸ್ತ್ರ

    ಮೈಸೂರು: ಮೈಸೂರಿನ ರಾಜವಂಶಸ್ಥ ಯದುವೀರ್ ದಂಪತಿ ಕೆಲ ದಿನಗಳ ಹಿಂದೆ ಪುತ್ರನೊಂದಿಗೆ ಅರಮನೆಗೆ ಆಗಮಿಸಿದ್ದು, ಇಂದು ಚಾಮುಂಡಿ ಬೆಟ್ಟದಲ್ಲಿ ಶಾಸ್ತ್ರೋಕ್ತವಾಗಿ ತೊಟ್ಟಿಲು ಪೂಜೆ ನೆರವೇರಿದೆ.

    ಪುತ್ರನ ಜನನದ ನಂತರ ಯದುವೀರ್ ದಂಪತಿ ಚಾಮುಂಡಿ ದೇವಿಯ ದರ್ಶನ ಪಡೆದಿದ್ದು, ಕುಟುಂಬ ಸಮೇತ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಗನ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ಆವರಣದಲ್ಲಿ ಸಂಪಿಗೆ ಮರಕ್ಕೆ ಗಂಧದ ತೊಟ್ಟಿಲು ಕಟ್ಟಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದರು.

    ಫೆ.25ರಂದು ಬೆಂಗಳೂರು ಅರಮನೆಯಲ್ಲಿ ಯದುವೀರ್ ಪುತ್ರನಿಗೆ ನಾಮಕರಣ ಕಾರ್ಯಕ್ರಮ ನೆರವೇರಿತ್ತು. ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ಮಗುವಿಗೆ ನಾಮಕರಣ ಮಾಡಲಾಗಿತ್ತು. ನಂತರ ಮೈಸೂರು ಅರಮನೆಗೆ ಬಂದ ದಂಪತಿಗೆ ಅರಮನೆಯಲ್ಲಿದ್ದ ಮುತ್ತೈದೆಯರು ಆರತಿ ಬೆಳಗಿ ಸ್ವಾಗತ ಕೋರಿದ್ದರು. ಮಗನಿಗೆ ಆದ್ಯವೀರ್ ಎಂದು ನಾಮಕರಣ ಮಾಡಲು ಕಾರಣ ಕೇಳಿದಾಗ ಯದುವೀರ್ ಅವರು, ಆದ್ಯಾ ಎಂದರೆ ದುರ್ಗಿ, ಚಾಮುಂಡಿ ಎಂದರ್ಥ. ಮಗುವಿನ ಒಳಿತಿಗಾಗಿ ಆ ಹೆಸರು ಇಡಲಾಗಿದೆ ಎಂದು ತಿಳಿಸಿದ್ದರು.

    ಯದುವೀರ್ ದಂಪತಿ ಶೀಘ್ರದಲ್ಲೇ ಪುತ್ರನ ಜೊತೆ ದೇವಾಲಯಗಳಿಗೆ ಪ್ರವಾಸ ಮಾಡಲಿದ್ದಾರೆ.

     

  • ನಾಮಕರಣ ಮುಗಿಸಿ ಬಂದ ಯದುವೀರ್ ದಂಪತಿ, ಆದ್ಯವೀರ್ ಗೆ ಮೈಸೂರು ಅರಮನೆಯಲ್ಲಿ ಅದ್ಧೂರಿ ಸ್ವಾಗತ!

    ನಾಮಕರಣ ಮುಗಿಸಿ ಬಂದ ಯದುವೀರ್ ದಂಪತಿ, ಆದ್ಯವೀರ್ ಗೆ ಮೈಸೂರು ಅರಮನೆಯಲ್ಲಿ ಅದ್ಧೂರಿ ಸ್ವಾಗತ!

    ಮೈಸೂರು: ಪುತ್ರ ಆದ್ಯವೀರ್ ಜೊತೆ ಮೈಸೂರು ಅರಮನೆಗೆ ಯದುವೀರ್ ದಂಪತಿ ಆಗಮಿಸಿದ್ದು, ತ್ರಿಷಿಕಾ ಹಾಗೂ ಯದುವೀರ್ ಅವರಿಗೆ ಆರತಿ ಬೆಳಗಿ ಸ್ವಾಗತ ಮಾಡಲಾಗಿದೆ.

    ಕಳೆದ ವಾರವಷ್ಟೆ ಬೆಂಗಳೂರು ಅರಮನೆಯಲ್ಲಿ ಯದುವೀರ್ ಪುತ್ರನಿಗೆ ನಾಮಕರಣ ಕಾರ್ಯಕ್ರಮ ನೆರವೇರಿತ್ತು. ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ಮಗುವಿಗೆ ನಾಮಕರಣ ಮಾಡಲಾಗಿತ್ತು. ನಂತರ ಮೈಸೂರು ಅರಮನೆಗೆ ಬಂದ ದಂಪತಿಗೆ ಅರಮನೆಯಲ್ಲಿದ್ದ ಮುತ್ತೈದೆಯರು ಆರತಿ ಬೆಳಗಿ ಸ್ವಾಗತ ಕೋರಿದ್ದಾರೆ.

    ಯದುವೀರ್ ಕುಟುಂಬ ನಾಮಕರಣ ಕಾರ್ಯಕ್ರಮ ಮುಗಿಸಿ ಮೈಸೂರು ಅರಮನೆಗೆ ಬಂದಿದ್ದು, ಇದೀಗ ಮೈಸೂರು ಅರಮನೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ಆದ್ಯವೀರ್ ನನ್ನು ನೋಡಿ ಅರಮನೆ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೈಸೂರು ಯದುವಂಶದ ಯುವರಾಜನಿಗೆ ನಾಮಕರಣ

    ಆದ್ಯವೀರ್ ತುಂಬಾ ಚೆನ್ನಾಗಿದ್ದಾನೆ. ನಾಮಕರಣ ಮುಗಿಸಿ ಮೈಸೂರಿಗೆ ಆಗಮಿಸಿದ್ದೇವೆ. ಬೆಂಗಳೂರಿನಲ್ಲಿ ನಾಮಕರಣ ಮಾಡಿದ್ದು ನಮ್ಮ ಅನುಕೂಲಕ್ಕಾಗಿ ಅಷ್ಟೇ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಮೈಸೂರಿನಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಶೀಘ್ರದಲ್ಲೇ ಚಾಮುಂಡಿ ಬೆಟ್ಟಕ್ಕೆ ಹೋಗಲಿದ್ದೇವೆ. ಆದ್ಯಾ ಎಂದರೆ ದುರ್ಗಿ, ಚಾಮುಂಡಿ ಎಂದರ್ಥ. ಮಗುವಿನ ಒಳಿತಿಗಾಗಿ ಆ ಹೆಸರು ಇಡಲಾಗಿದೆ. ಮಗು ಆದ್ಯವೀರ್ ಚೆನ್ನಾಗಿದ್ದಾನೆ. ಇಂದು ಬೆಂಗಳೂರಿನಿಂದ ಮೈಸೂರಿಗೆ ಕರೆತಂದಿದ್ದೇವೆ. ಮುಂದಿನ ಕಾರ್ಯಕ್ರಮಗಳೆಲ್ಲ ಅಮ್ಮನ ಸೂಚನೆಯಂತೆ ನಡೆಯಲಿದೆ ಎಂದು ಯದುವೀರ್ ತಿಳಿಸಿದ್ದಾರೆ.

    ಯದುವೀರ್ ದಂಪತಿ ಶೀಘ್ರದಲ್ಲೇ ಪುತ್ರನ ಜೊತೆ ದೇವಾಲಯಗಳಿಗೆ ಪ್ರವಾಸ ಮಾಡಲಿದ್ದಾರೆ.

  • ಸ್ವಚ್ಛ ಮೈಸೂರಿಗಾಗಿ ಅಭಿಯಾನ ಆರಂಭಿಸಿದ ಯದುವೀರ್ ಒಡೆಯರ್

    ಸ್ವಚ್ಛ ಮೈಸೂರಿಗಾಗಿ ಅಭಿಯಾನ ಆರಂಭಿಸಿದ ಯದುವೀರ್ ಒಡೆಯರ್

    ಮೈಸೂರು: ಸ್ವಚ್ಛ ಮೈಸೂರು ಪಟ್ಟಕ್ಕಾಗಿ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಯಾನ ಆರಂಭಿಸಿದ್ದಾರೆ.

    ಸಾಮಾಜಿಕ ಜಾಲತಾಣದ ಮೂಲಕ ಯದುವೀರ್ ಸ್ವಚ್ಛ ಸರ್ವೇಕ್ಷಣ್ ಅಭಿಯಾನದಲ್ಲಿ ಭಾಗಿಯಾಗುವಂತೆ ಮೈಸೂರಿಗರಲ್ಲಿ ಮನವಿ ಮಾಡುತ್ತಿದ್ದಾರೆ. ಫೇಸ್‍ಬುಕ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ವಿಶೇಷ ವಿಡಿಯೋಗಳನ್ನು ತನ್ನದೇ ಅಕೌಂಟ್‍ನಿಂದ ಅಪ್‍ಲೋಡ್ ಮಾಡಿ, ಸ್ವಚ್ಛ ಅಭಿಯಾನದಲ್ಲಿ ಯಾವ ರೀತಿ ಭಾಗಿಯಾಗಬೇಕೆಂದು ತಿಳಿಸುತ್ತಿದ್ದಾರೆ.

    ಸ್ವಚ್ಛತಾ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಸರ್ವೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡುತ್ತಿದ್ದು ಈ ಮೂಲಕ ಈ ಬಾರಿ ನಂ.1 ಪಟ್ಟಕ್ಕಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಯದುವೀರ್ ಸ್ವಚ್ಛ ಮೈಸೂರು ರಾಯಭಾರಿಯಾಗಿದ್ದಾರೆ.

  • ಯದುವಂಶಕ್ಕೆ ಉತ್ತರಾಧಿಕಾರಿ ಬಂದ ಖುಷಿಯಲ್ಲಿ ರಾಜವಂಶಸ್ಥರಿಂದ ದೇವಾಲಯಗಳಿಗೆ ಭೇಟಿ

    ಯದುವಂಶಕ್ಕೆ ಉತ್ತರಾಧಿಕಾರಿ ಬಂದ ಖುಷಿಯಲ್ಲಿ ರಾಜವಂಶಸ್ಥರಿಂದ ದೇವಾಲಯಗಳಿಗೆ ಭೇಟಿ

    ಮೈಸೂರು: ಯದುವಂಶಕ್ಕೆ ಉತ್ತರಾಧಿಕಾರಿ ಬಂದ ಖುಷಿಯಲ್ಲಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರ ಅರಮನೆಯ ಕೋಟೆಗೆ ಹೊಂದಿಕೊಂಡಿರುವ ಕೋಟೆ ಮಾರಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

    ಕೋಟೆ ಮಾರಮ್ಮನಿಗೆ ಹಾಲೆರೆಯುವ ಮೂಲಕ ಯದುವೀರ್ ಅವರು ವಿಶೇಷ ಪೂಜೆ ಸಲ್ಲಿಸಿದರು. ದೇವರ ಆಶೀರ್ವಾದದಿಂದ ಯದುವಂಶಕ್ಕೆ ಉತ್ತರಾಧಿಕಾರಿ ಸಿಕ್ಕಿದ್ದಾನೆ. ಈ ಸಂಭ್ರಮದ ಜೊತೆಗೆ ರಾಜ್ಯದ ಜನತೆಗೆ ದೇವಿ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಲು ಕೋಟೆ ಮಾರಮ್ಮನ ದೇವಾಲಯಕ್ಕೆ ಭೇಟಿ ನೀಡಿದ್ದೇನೆ ಎಂದು ಯುದುವೀರ್ ಹೇಳಿದ್ದಾರೆ.

    ಇದೇ ವೇಳೆ ಮಾತನಾಡಿದ ಯದುವೀರ್ ಎಲ್ಲ ದೇವಾಲಯಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.

    ಇದನ್ನೂ ಓದಿ: ಯದುವಂಶದ ಸಂಪ್ರದಾಯದಂತೆ ಅರಮನೆಯಲ್ಲೇ ಯುವರಾಜನ ನಾಮಕರಣ- ಯದುವೀರ್ ಒಡೆಯರ್

  • ಯದುವಂಶದ ಸಂಪ್ರದಾಯದಂತೆ ಅರಮನೆಯಲ್ಲೇ ಯುವರಾಜನ ನಾಮಕರಣ- ಯದುವೀರ್ ಒಡೆಯರ್

    ಯದುವಂಶದ ಸಂಪ್ರದಾಯದಂತೆ ಅರಮನೆಯಲ್ಲೇ ಯುವರಾಜನ ನಾಮಕರಣ- ಯದುವೀರ್ ಒಡೆಯರ್

    ಮೈಸೂರು: ಯದುವಂಶದ ಸಂಪ್ರದಾಯದಂತೆ ಯುವರಾಜನ ನಾಮಕರಣ ಅರಮನೆಯಲ್ಲಿ ನಡೆಯಲಿದೆ ಎಂದು ಮಹಾರಾಜ ಯದುವೀರ್ ಒಡೆಯರ್ ಹೇಳಿದ್ದಾರೆ.

    ಮೈಸೂರಿನಲ್ಲಿ ಮಾತನಾಡಿದ ಯದುವೀರ್, ನಮ್ಮ ಸಂಪ್ರದಾಯದಂತೆ ನಾಮಕರಣ ಕಾರ್ಯಕ್ರಮ ನಡೆಯಲಿದೆ. ಅರಮನೆಯ ಮೂಹೂರ್ತ ಸಮಯ ನೋಡಿಕೊಂಡು ನಾಮಕರಣ ಮಾಡುತ್ತೇವೆ. ಹಲವು ಹೆಸರುಗಳನ್ನು ಯೋಚನೆ ಮಾಡಿದ್ದು, ಯಾವ ಹೆಸರನ್ನು ಅಧಿಕೃತ ಮಾಡಿಲ್ಲ. ಮಗನ ಎಲ್ಲಾ ಕಾರ್ಯಕ್ರಮಗಳು ಅರಮನೆಯಲ್ಲೇ ನಡೆದರೆ ನಮಗೆ ಇನ್ನಷ್ಟು ಖುಷಿ ಸಿಗಲಿದೆ ಎಂದು ತಿಳಿಸಿದ್ರು.

    ಸದ್ಯ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದು, ಬೆಂಗಳೂರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಿದ ಯದುವೀರ್, ನಾಮಕರಣದ ಉಹಾಪೋಹಗಳಿಗೆ ತೆರೆ ಎಳೆದರು.

    ಆರು ದಶಕಗಳ ಬಳಿಕ ಮೈಸೂರು ಸಂಸ್ಥಾನದ ಯದುವಂಶಕ್ಕೆ ಪುತ್ರ ಸಂತಾನ ಪ್ರಾಪ್ತಿಯಾಗಿದೆ. 2017ರ ಡಿಸೆಂಬರ್ 06ರಂದು ರಾತ್ರಿ 9.50 ಕ್ಕೆ ರಾಣಿ ತ್ರಿಷಿಕಾ ಕುಮಾರಿ ಬೆಂಗಳೂರಿನ ಇಂದಿರಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು.

    ಮಿಥುನ ರಾಶಿ ಪುನರ್ವಸು ನಕ್ಷತ್ರದಲ್ಲಿ ಗಂಡು ಮಗು ಜನನವಾಗಿದ್ದು, ಜ್ಯೋತಿಷ್ಯದ ಪ್ರಕಾರ ಶ್ರೀರಾಮನು ಇದೇ ನಕ್ಷತ್ರದಲ್ಲಿ ಹುಟ್ಟಿದ್ದನು ಎಂದು ಹೇಳಲಾಗಿತ್ತು.