Tag: ಯದುವೀರ ಒಡೆಯರ್

  • ‘ಶಿವಾಜಿ ಸುರತ್ಕಲ್ 2’ ಸಿನಿಮಾ ಮೆಚ್ಚಿದ ಮೈಸೂರು ಮಹಾರಾಜ

    ‘ಶಿವಾಜಿ ಸುರತ್ಕಲ್ 2’ ಸಿನಿಮಾ ಮೆಚ್ಚಿದ ಮೈಸೂರು ಮಹಾರಾಜ

    ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ (Shivaji Surathkal 2) ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ ‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಇತ್ತೀಚೆಗೆ ಮೈಸೂರು ಮಹಾರಾಜರಾದ ಯದುವೀರ ಒಡೆಯರ್ (Yaduveera Wodeyar) ಅವರು ವೀಕ್ಷೀಸಿದರು. ನಾಯಕ ರಮೇಶ್ ಅರವಿಂದ್ (Ramesh Aravind) ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ‘ನನಗೆ ಪತ್ತೆಧಾರಿ ಸಿನಿಮಾಗಳು ಬಹಳ ಇಷ್ಟ. ಶಿವಾಜಿ ಸುರತ್ಕಲ್ 2 ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ. ಉತ್ತಮವಾದ ಸಿನಿಮಾವನ್ನು ಚಿತ್ರತಂಡ ನೀಡಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಮಹಾರಾಜರು ಮನತುಂಬಿ ಹಾರೈಸಿದರು. ಇದನ್ನೂ ಓದಿ:‘ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

    ಈಗಾಗಲೇ ಜನಮನಸೂರೆಗೊಂಡಿರುವ ಈಚಿತ್ರ  ಚಿತ್ರಮಂದಿರಗಳಲ್ಲಿ ಯಶಸ್ವಿ 41 ದಿನಗಳನ್ನು ಪೂರೈಸಿ, 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ. ಬಾಕ್ಸ್ ಆಫೀಸಿನಲ್ಲೂ ಸದ್ದು ಮಾಡಿದೆ. ಆಕಾಶ್ ಆಕಾಶ್ ಶ್ರೀವಾಸ್ತ (Akash Srivastava) ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರೆ, ಶಿವರಾಜಿ ಸುರತ್ಕಲ್ ಆಗಿ ರಮೇಶ್ ಅರವಿಂದ್ ಕಾಣಿಸಿಕೊಂಡಿದ್ದಾರೆ. ಮೇಘನಾ ಗಾಂವ್ಕರ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.

  • ತವರಿನಲ್ಲಿಯೇ ಸಿಎಂ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ ಹೈಕಮಾಂಡ್ ನಿಂದ ಮಹತ್ವದ ಸೂಚನೆ ರವಾನೆ

    ತವರಿನಲ್ಲಿಯೇ ಸಿಎಂ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ ಹೈಕಮಾಂಡ್ ನಿಂದ ಮಹತ್ವದ ಸೂಚನೆ ರವಾನೆ

    ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ರಾಜಕೀಯ ತಂತ್ರಗಳನ್ನು ಪ್ರಯೋಗಿಸಲು ಸಜ್ಜಾಗಿದೆ. ಒಂದು ವೇಳೆ ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಸೋತರೆ ಕಾಂಗ್ರೆಸ್ ಗೆ ಭಾರೀ ಮುಖಭಂಗ ಆಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಮಹತ್ವದ ಸೂಚನೆಯನ್ನು ರವಾನೆ ಮಾಡಲಾಗಿದ ಎನ್ನಲಾಗಿದೆ.

    ಮಾರ್ಚ್ 10 ರಂದು ಮೈಸೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸರ್ಕಾರದ ಕೊಡುಗೆಗಳನ್ನು ತಿಳಿಸಿದ್ದರು. ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೆಮ್ಮೆಯಿಂದ ಹೇಳಿಕೊಂಡಿದ್ದರು. ಸಿಎಂ ಅವರ ಇದೇ ಮಾತುಗಳನ್ನು ಅಸ್ತ್ರವಾಗಿ ಬಳಸಿಕೊಂಡು ಮಹಾರಾಜರ ಕಾಲದ ಕೆಸಲಕ್ಕೆ ಸಿದ್ದು ಸರ್ಕಾರದ ಕೆಲಸ ಹೋಲಿಕೆ ಮಾಡಿ ವಾಗ್ದಾಳಿ ನಡೆಸುವಂತೆ ಸೂಚಿಸಲಾಗಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ.

     

    ಸಿಎಂ ಸಿದ್ದರಾಮಯ್ಯ ಅವರು ಕಳೆದ ಐದು ವರ್ಷದಲ್ಲಿ ಏನು ಮಾಡಿದ್ದಾರೆ ಅನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ. ಜನರಿಗೆ ಎಲ್ಲವೂ ಗೊತ್ತಿದೆ. ರಾಜರು ನೀಡಿದ ಕೊಡುಗೆಯನ್ನು ಜನರು ಯಾವತ್ತು ಮರೆಯುವುದಿಲ್ಲ. ಮೈಸೂರು ಸಂಸ್ಥಾನ ಕೊಡುಗೆ ಎಲ್ಲರಿಗೂ ಗೊತ್ತಿದೆ ಅಂತ ಮೈಸೂರು ಮಹರಾಜ ಯದುವೀರ್ ಒಡೆಯರ್ ಖಾರವಾಗಿ ಪ್ರತಿಕ್ರಿಯಿಸಿದ್ದರು.

    ಯದುವೀರ್ ಸಿಎಂ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದಂತೆ ಬಿಜೆಪಿ ಸಖತ್ ಪ್ಲಾನ್ ರೂಪಿಸಿಕೊಂಡಿದೆ. ರಾಜಕಾರಣದ ಬಗ್ಗೆ ಆಸಕ್ತಿ ಹೊಂದಿರುವ ಯದುವೀರ್ ಒಡೆಯರ್ ಅವರನ್ನು ಲೋಕಸಭೆ ಚುನಾವಣೆ ಒಳಗಾಗಿಯಾದ್ರೂ ಬಿಜೆಪಿಗೆ ಸೆಳೆಯುವಂತೆ ಪ್ಲ್ಯಾನ್ ಮಾಡಲಾಗ್ತಿದೆ ಎಂದು ತಿಳಿದು ಬಂದಿದೆ.

  • ರಾಜರು ಏನು ಮಾಡಿದ್ದಾರೆ, ಸಿಎಂ ಏನು ಮಾಡಿದ್ದಾರೆ ಅನ್ನೋದು ಜನ ತೀರ್ಮಾನ ಮಾಡ್ತಾರೆ: ಯದುವೀರ್

    ರಾಜರು ಏನು ಮಾಡಿದ್ದಾರೆ, ಸಿಎಂ ಏನು ಮಾಡಿದ್ದಾರೆ ಅನ್ನೋದು ಜನ ತೀರ್ಮಾನ ಮಾಡ್ತಾರೆ: ಯದುವೀರ್

    ಮೈಸೂರು: ರಾಜರು ಏನು ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು ಏನು ಮಾಡಿದ್ದಾರೆ ಅನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದು ಯದುವೀರ್ ಹೇಳಿದ್ದಾರೆ.

    ಮಹಾರಾಜರ ನಂತರ ನಮ್ಮ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕಳೆದ ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಈ ಕುರಿತು ಮೈಸೂರಿನಲ್ಲಿ ರಾಜವಂಶಸ್ಥ ಯದುವೀರ ಅವರು ಪ್ರತಿಕ್ರಿಯೆ ನೀಡಿ ರಾಜರ ಆಳ್ವಿಕೆ ಸಿದ್ದರಾಮಯ್ಯ ಆಳ್ವಿಕೆ ಹೋಲಿಕೆ ಮಾಡುವುದು ಸರಿಯಲ್ಲ. ಅಂದಿನ ರಾಜರ ಕಾಲಕ್ಕೂ, ಇಂದಿನ ಕಾಲಕ್ಕೂ ತುಂಬಾ ವ್ಯತ್ಯಾಸವಿದೆ ಎಂದು ತಿಳಿಸಿದರು.

    ಸಿಎಂ ಸಿದ್ದರಾಮಯ್ಯ ಅವರು ಕಳೆದ ಐದು ವರ್ಷದಲ್ಲಿ ಏನು ಮಾಡಿದ್ದಾರೆ ಅನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ. ಜನರಿಗೆ ಎಲ್ಲವೂ ಗೊತ್ತಿದೆ. ರಾಜರು ನೀಡಿದ ಕೊಡುಗೆಯನ್ನು ಜನರು ಯಾವತ್ತು ಮರೆಯುವುದಿಲ್ಲ. ಮೈಸೂರು ಸಂಸ್ಥಾನ ಕೊಡುಗೆ ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.

    ಮಾರ್ಚ್ 10 ರಂದು ಮೈಸೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸರ್ಕಾರದ ಕೊಡುಗೆಗಳನ್ನು ತಿಳಿಸಿದ್ದರು. ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

    ಮೈಸೂರು ಜಿಲ್ಲೆಗೆ ನಮ್ಮ ಸರ್ಕಾರದಿಂದ 5 ಸಾವಿರ ಕೋಟಿ ರೂ. ಹಣ ನೀಡಿದ್ದೇವೆ. ಸ್ವಾತಂತ್ರ್ಯ ಭಾರತದಲ್ಲಿ ಇಷ್ಟು ಹಣ ಕೊಟ್ಟ ಸರ್ಕಾರ ಇಲ್ಲವೇ ಇಲ್ಲ. ಮೈಸೂರಿನ ಪರಂಪರೆ ಉಳಿಸಿಕೊಂಡು ಕಟ್ಟಡಗಳನ್ನ ನಿರ್ಮಿಸಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನು ತಿಳಿಸಿದ್ದರು.