Tag: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

  • ನೀವು ಅರಮನೆಗೆ ಬರಬೇಕಿಲ್ಲ, ನಾನೇ ಹೊರಗೆ ಬರ್ತೀನಿ, ಸಾಮಾನ್ಯನಂತೆ ಕೆಲಸ ಮಾಡ್ತೀನಿ: ಯದುವೀರ್

    ನೀವು ಅರಮನೆಗೆ ಬರಬೇಕಿಲ್ಲ, ನಾನೇ ಹೊರಗೆ ಬರ್ತೀನಿ, ಸಾಮಾನ್ಯನಂತೆ ಕೆಲಸ ಮಾಡ್ತೀನಿ: ಯದುವೀರ್

    ಮೈಸೂರು: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿಐೂ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಸಹ ಯದುವೀರ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

    ಚುನಾವಣಾ ಪ್ರಚಾರ (Election Campaign) ಸಂಬಂಧ ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಯದುವೀರ್ ಮಾತನಾಡಿದ್ದಾರೆ. ಇದನ್ನೂ ಓದಿ: ಕಣದಿಂದ ಹಿಂದೆ ಸರಿಯಬೇಡಿ – ಈಶ್ವರಪ್ಪಗೆ ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ ಗೋಪಾಲ್ ಜೀ ಬೆಂಬಲ

    ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ:
    ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ (Constitution) ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ನಾನು ರಾಜ ಅಂತ ಇದನ್ನು ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ ಎಂದು ಹೇಳಿದ್ದಾರೆ.

    ನನ್ನ ತಾಯಿ ಪ್ರಚಾರಕ್ಕೆ ಬರಬೇಕಿಲ್ಲ:
    ಇನ್ನೂ ನನ್ನ ತಾಯಿ (ಪ್ರಮೋದಾ ದೇವಿ ಒಡೆಯರ್) ನನ್ನ ಪರವಾಗಿ ಪ್ರಚಾರಕ್ಕೆ ಬರುವ ಅಗತ್ಯ ಇಲ್ಲ. ತಾಯಿ ಆಶೀರ್ವಾದದಿಂದಲೇ ನಾನು ಇಲ್ಲಿಗೆ ಬಂದಿದ್ದೇನೆ. ಅವರು ನನ್ನ ಪರವಾಗಿ ಹೇಳಿಕೆ ಕೊಡಬೇಕೆಂಬುದು ಏನು ಇಲ್ಲ. ಅವರ ಸಹಕಾರ ನನ್ನ ಮೇಲೆ ಸದಾ ಇರುತ್ತದೆ ಎಂದು ಯದುವೀರ್ ತಿಳಿಸಿದ್ದಾರೆ. ಇದನ್ನೂ ಓದಿ: ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್‌ ರಾಜೀನಾಮೆ – ಬಿಜೆಪಿಯಿಂದ ಕಣಕ್ಕೆ?

    ಪಕ್ಷಕ್ಕೆ ದ್ರೋಹ ಬಗೆಯಲ್ಲ:
    ಇದೇ ವೇಳೆ ಸಂಸದ ಪ್ರತಾಪ್ ಸಿಂಹ (Pratap Simha) ಸಹ ಮಾತನಾಡಿ, ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಕದಲ್ಲಿರುವವರಿಗೂ ದ್ರೋಹಮಾಡಲ್ಲ. 2014ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂತ ಹೈಕಮಾಂಡ್ ಹೇಳಿರಲಿಲ್ಲ. ನಾನು ಸಹ ಯಾಕೆ ಕೊಟ್ರಿ ಅಂತ ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ತಪ್ಪಿಸಿದ್ದೀರಿ ಅಂತಾನೂ ಕೇಳಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾ

    ಮೋದಿ ಪರವಾಗಿ ಕೈ ಎತ್ತಲು ಒಬ್ಬ ವ್ಯಕ್ತಿ ಬೇಕು:
    ಕಾಂಗ್ರೆಸ್ ಪಕ್ಷದಿಂದ ಆಫರ್ ಇತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್ ಸಿಂಹ, ಈಗ ಅದು ಪ್ರಸ್ತುತ ಅಲ್ಲ. ನಮಗೆ ಯದುವೀರ್ ಅವರನ್ನು ಗೆಲ್ಲಿಸುವುದಷ್ಟೇ ಮುಖ್ಯ. ದೇಶಕ್ಕೆ ಮೋದಿ ಬೇಕು, ಮೋದಿ (PM Modi) ಪರವಾಗಿ ಕೈ ಎತ್ತಲು ಮೈಸೂರಿನಿಂದ ಒಬ್ಬ ವ್ಯಕ್ತಿ ಬೇಕು ಇದಷ್ಟೇ ನಮಗೆ ಮುಖ್ಯ. ಪಕ್ಷ ನನಗೆ ತಾಯಿ ಇದ್ದ ಹಾಗೆ. ಇದು ಬರಿ ಬಾಯಿ ಮಾತಲ್ಲ, ಇದು ನನ್ನ ಮನಸಿನ ಮಾತು ಎಂದು ನುಡಿದಿದ್ದಾರೆ.

  • ‘ಮಗ್ಗಿ ಪುಸ್ತಕ’ದ ಫಸ್ಟ್ ಲುಕ್ ಲಾಂಚ್ ಮಾಡಿದ ಯದುವೀರ ಒಡೆಯರ್

    ‘ಮಗ್ಗಿ ಪುಸ್ತಕ’ದ ಫಸ್ಟ್ ಲುಕ್ ಲಾಂಚ್ ಮಾಡಿದ ಯದುವೀರ ಒಡೆಯರ್

    ದೊಂದು ಕಾಲವಿತ್ತು. ಕಾದಂಬರಿ ಆಧಾರಿತ ಸಿನಿಮಾ ಎನ್ನುವಾಗಲೇ ಆ ಚಿತ್ರಕ್ಕೊಂದು ತೂಕ ಬಂದು ಬಿಡುತ್ತಿತ್ತು. ಅಷ್ಟೇ ಅಲ್ಲ, ಕೌಟುಂಬಿಕವಾಗಿ, ಸಾಮಾಜಿಕವಾಗಿ ಸಂದೇಶಗಳಿರುತ್ತಿದ್ದವಲ್ಲದೆ, ಜೀವನಕ್ಕೆ ಹತ್ತಿರವಾಗಿದ್ದವು. ಈ ಮೂಲಕ ಓದುವ ಅಭ್ಯಾಸವಿಲ್ಲದವನನ್ನೂ ಕಾದಂಬರಿಗಳು ಮುಟ್ಟುತ್ತಿದ್ದವು. ಹೊಡೆಬಡಿ, ಪ್ರೀತಿಗೀತಿ ಇತ್ಯಾದಿ ವಿಚಾರಗಳು ಬಂದ ಮೇಲೆ ಕತೆಯೇ ಬೇಡ ಎನ್ನುವಂತಾಗಿದೆ. ಇಂತಹ ಕಾಲ ಘಟ್ಟದಲ್ಲಿ ಅಲ್ಲೊಂದು ಇಲ್ಲೊಂದು ಕಾದಂಬರಿ ಆಧಾರಿತ ಸಿನಿಮಾಗಳ ಬರ್ತಿವೆ. ಅಂತಹದ್ದೇ ಒಂದು ಪ್ರಯತ್ನ ಮಗ್ಗಿ ಪುಸ್ತಕ.

    ಎಚ್.ಸಿ.ಹರೀಶ್ (S.C. Harish) ಅವರ ‘ಅವನಿ’ ಕಾದಂಬರಿ ಆಧರಿಸಿ ಮಗ್ಗಿ ಪುಸ್ತಕ (Maggi Pustaka) ಎಂಬ ಸಿನಿಮಾವನ್ನು ದೃಶ್ಯ ರೂಪಕ್ಕಿಳಿಸಲಾಗಿದೆ. ದಸರಾ‌ ಮಹೋತ್ಸವದ ಅಂಗವಾಗಿ ಈ ಚಿತ್ರದ ಫಸ್ಟ್ ಲುಕ್ (First Look) ಅನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveera Krishnadatta Chamaraja Wodeyar) ನಾವರಣ ಮಾಡಿ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಚಿನ್ನಾಸ್ವಾಮಿ ಫಿಲ್ಮಂ ಸಂಸ್ಥೆಯಡಿ ಚಿನ್ನಾಸ್ವಾಮಿ ಯತಿರಾಜ್ ತಮ್ಮ ಸ್ನೇಹಿತರ ಜೊತೆಗೂಡಿ ಚಿತ್ರ ನಿರ್ಮಿಸುತ್ತಿದ್ದಾರೆ. ಅವನಿ ಕಾದಂಬರಿಕಾರರು ಆಗಿರುವ ಎಚ್. ಸಿ. ಹರೀಶ್ ಅವರೇ ಮಗ್ಗಿ ಪುಸ್ತಕ ಸಿನಿಮಾಗೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

    ಮಗ್ಗಿ ಪುಸ್ತಕ ಸಿನಿಮಾದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ದಡ್ಡ ಪ್ರವೀಣ ಖ್ಯಾತಿಯ ರಂಜನ್ ಸಜ್ಜು, ಶ್ರೀರಕ್ಷಾ, ಹಿರಿಯ ಕಲಾವಿದರಾದ ಮೈಸೂರು ರಮಾನಂದ, ರಂಗಾಯಣ ರಘು, ಗಿರಿಜಾ ಲೋಕೇಶ್, ಪ್ರಮೋದ್ ಶೆಟ್ಟಿ, ಬಿರಾದಾರ, ಮಿಮಿಕ್ರಿ ಗೋಪಿ, ಚಂದ್ರಪ್ರಭಾ, ವಾಣಿ, ರಾನ್ವಿ ಶೇಖರ್, ಕೃಷ್ಣ ಮಹೇಶ್, ವರದ, ಶ್ರೀನಿವಾಸ್ ಗೌಡ, ಮೂಗು ಸುರೇಶ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

     

    ಮೈಸೂರು, ಮಂಗಳೂರು, ಎಚ್. ಡಿ. ಕೋಟೆ, ನಂಜನಗೂಡು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ನಂದಕುಮಾರ್ ಛಾಯಾಗ್ರಹಣ, ಯಶಸ್ ನಾಚಪ್ಪ ಸಂಗೀತ, ಶರಣ್ ಕುಮಾರ್ ಗಜೇಂದ್ರಗಡ, ಗುರುನಾಥ ಬೋರಗಿ ಸಾಹಿತ್ಯ, ಶಿವಕುಮಾರ್ ಎಂ.ಸಂಕಲನ, ರಸೂಲ್ ನದಾಫ್ ಕಲಾ ನಿರ್ದೇಶನ ಮಗ್ಗಿ ಪುಸ್ತಕ ಸಿನಿಮಾಕ್ಕಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮುಂದಿನ ವರ್ಷಕ್ಕೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವುಂಟು ಮಾಡಿದೆ : ಯದುವೀರ್ ಒಡೆಯರ್

    ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವುಂಟು ಮಾಡಿದೆ : ಯದುವೀರ್ ಒಡೆಯರ್

    ಆನೇಕಲ್: ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ತುಂಬಾ ನೋವು ತರಿಸಿದೆ ನಾವೆಲ್ಲರೂ ಒಂದೇ ಎನ್ನುವ ಭಾವನೆಯಿಂದ ಬದುಕಬೇಕು ಎಂದು ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಆನೇಕಲ್ ಪಟ್ಟಣದ ಶ್ರೀ ತಿಮ್ಮರಾಯಸ್ವಾಮಿ ದೇವಾಲಯದಲ್ಲಿ ರಾಜಮುಡಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವೆಲ್ಲರೂ ಒಂದೇ ಎನ್ನುವ ಭಾವನೆ ನಮ್ಮಲ್ಲಿ ಮೂಡಬೇಕು. ಜಾತಿಗಳ ಒಳಗೆ ಸಂಘರ್ಷಗಳು ನಡೆಯಬಾರದು. ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ಘಟನೆಗಳು ಇನ್ನೂ ಮುಂದೆ ನಡೆಯದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಈಗಾಗಲೇ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಹೇಳಿದ್ದಾರೆ. ಯಾವುದೇ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಒಂದೇ ಎಂಬ ಮನೋಭಾವದಿಂದ ನಡೆದುಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್‌ – ಆತ್ಮಹತ್ಯೆಗೆ ಕಾರಣ ಏನು?

    ಆನೇಕಲ್ ಹಾಗೂ ಮೈಸೂರಿಗೆ ಈ ಹಿಂದೆ ಸಂಬಂಧ ಇತ್ತು ಎನ್ನುವ ಮಾಹಿತಿ ತಿಳಿದು ಬಂದಿದೆ. ಇದರಿಂದಾಗಿ ಆನೇಕಲ್ ಪಟ್ಟಣದ ಶ್ರೀ ತಿಮ್ಮರಾಯ ಸ್ವಾಮಿ ದೇವಾಲಯದಲ್ಲಿ ರಾಜಮುಡಿ ಉತ್ಸವವನ್ನು ಹಮ್ಮಿಕೊಂಡು ಆಹ್ವಾನ ನೀಡಿದ್ದಾರೆ. ನಾನು ತುಂಬಾ ಸಂತೋಷದಿಂದ ಇಲ್ಲಿಗೆ ಆಗಮಿಸಿ ಪೂಜೆಯಲ್ಲಿ ಭಾಗವಹಿಸಿದ್ದು ತುಂಬಾ ಸಂತೋಷ ತಂದಿದೆ ಎಂದರು. ಇದನ್ನೂ ಓದಿ: ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ

  • ಅಪ್ಪನ ದರ್ಬಾರ್ ನೋಡಿ ಕಿಲಕಿಲ ನಕ್ಕ ಆದ್ಯವೀರ

    ಅಪ್ಪನ ದರ್ಬಾರ್ ನೋಡಿ ಕಿಲಕಿಲ ನಕ್ಕ ಆದ್ಯವೀರ

    ಮೈಸೂರು: ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಖಾಸಗಿ ದರ್ಬಾರ್ ಬುಧವಾರ ಆರಂಭವಾಗಿದ್ದು, ಈ ವೇಳೆ ಮೊದಲ ಬಾರಿಗೆ ಖಾಸಗಿ ದರ್ಬಾರಿನಲ್ಲಿ ಭಾಗವಹಿಸಿದ್ದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪುತ್ರ ಆದ್ಯವೀರ ನರಸಿಂಹರಾಜ ಒಡೆಯರ್ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದರು. ಈ ವೇಳೆ ಅಪ್ಪನ ದರ್ಬಾರ್ ಕಂಡ ಆದ್ಯವೀರ ತನ್ನ ಮುದ್ದ ನಗುವಿನ ಎಲ್ಲರ ಗಮನ ಸೆಳೆದಿದ್ದಾರೆ.

    ಅರಮನೆಯ ಖಾಸಗಿ ದರ್ಬಾರಿನಲ್ಲಿ ಭಾಗವಹಿಸಿದ್ದ ಆದ್ಯವೀರ ಅವರ ಫೋಟೋ ಲಭ್ಯವಾಗಿದ್ದು, ತಾಯಿ ತ್ರಿಷಿಕಾ ಹಾಗೂ ರಾಜಮಾತೆ ಪ್ರಮೋದಾ ದೇವಿ ಅವರ ಆರೈಕೆಯಲ್ಲಿದ್ದರು. ಪೂಜಾ ವಿಧಾನದಲ್ಲಿ ಪಾಲ್ಗೊಳ್ಳುವ ಮುನ್ನ ಅರಮನೆಗೆ ತಾಯಿಯೊಂದಿಗೆ ಆಗಮಿಸಿದ್ದ ಆದ್ಯವೀರ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಅಚ್ಚಯಿಂದಲೇ ಗಮನಿಸುತ್ತಿದ್ದರು. ಇತ್ತ ರಾಜಾಪೋಷಾಕಿನಲ್ಲಿ ಕಂಗೊಳಿಸುತ್ತಿರುವ ಯದುವೀರ್ ಅವರು ತಿಳಿ ನೀಲಿ ಬಣ್ಣ ಸಾಂಪ್ರದಾಯಿಕ ಮೈಸೂರಿನ ಪೇಟಾ, ಗುಲಾಬಿ ವರ್ಣದ ನಿಲುವಂಗಿ, ಪೈಜಾಮಾ ಧರಿಸಿದ್ದರು. ನಿಲುವಂಗಿಯ ಮೇಲೆ ಗಂಡಭೇರುಂಡ ರಾಜ ಲಾಂಛನ ರಾರಾಜಿಸುತ್ತಿತ್ತು. ಅಲ್ಲದೇ ಮುತ್ತಿನ ಹಾರ, ಸ್ವರ್ಣ ಹಾರ, ಸ್ವರ್ಣ ತೋಳು ಬಂದಿ, ಮುತ್ತು ರತ್ನ ಖಚಿತ ಉಂಗುರ ತೊಟ್ಟಿದ್ದರು.

    ಈ ಬಾರಿಯ ದಸರಾ ಐತಿಹಾಸಿಕವಾಗಿದ್ದು, ಯದುವಂಶದ ಆದ್ಯವೀರ ನರಸಿಂಹರಾಜ ಒಡೆಯರ್ ಕೂಡ ತಮ್ಮ ಮೊದಲ ದಸರಾ ಹಬ್ಬದಲ್ಲಿ ಭಾಗವಹಿಸಿದ್ದರು. ಡಿ. 6 2017ರಲ್ಲಿ ಜನಿಸಿದ್ದ ಆದ್ಯವೀರಿಗೆ ಇದೇ ಮೊದಲ ದಸರಾವಾಗಿದೆ. ಮೈಸೂರಿನ ಸಂಸ್ಥಾನದ ಯದುವಂಶಕ್ಕೆ ಸುಮಾರು 6 ದಶಕಗಳಿಂದ ಸಂತಾನ ಇರಲಿಲ್ಲ. ಆದರೆ ಕಳೆದ ವರ್ಷ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಗೆ ಆದ್ಯವೀರ ಜನಿಸುವ ಮೂಲಕ ರಾಜಮನೆತನಕ್ಕೆ ಸಂತಾನ ಪ್ರಾಪ್ತಿಯಾಗಿತ್ತು. ಈ ಸಂತಸವನ್ನು ಇಡೀ ನಾಡಿನ ಜನತೆಯೂ ಸಂಭ್ರಮಿಸಿತ್ತು.

    ದಸರಾ ಆರಂಭಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಆದ್ಯವೀರ ನರಸಿಂಹರಾಜ ಒಡೆಯರ್ ಭಾಗಿಯಾಗುತ್ತಿರುವುದು ಖುಷಿ ತಂದಿದೆ. ನಮ್ಮ ಕುಟಂಬದ ಮತ್ತೊಬ್ಬ ಸದಸ್ಯ ಹಲವು ವರ್ಷಗಳ ನಂತರ ಪಾಲ್ಗೊಳ್ಳುತ್ತಿರುವುದು ಸಂತಸ ಇಮ್ಮಡಿಗೊಳಿಸಿದೆ. ದಸರಾದ ಸಿದ್ಧತೆಯಲ್ಲಿ ತೊಡಗಿಕೊಂಡಿರುವುದರಿಂದ ಆದ್ಯವೀರನನ್ನು ಗಮನಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಪ್ಪಿ ಪ್ರಜಾಕೀಯಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ

    ಉಪ್ಪಿ ಪ್ರಜಾಕೀಯಕ್ಕೆ ಮೈಸೂರು ಮಹಾರಾಜರ ಮೆಚ್ಚುಗೆ

    ಚಾಮರಾಜನಗರ: ಉಪೇಂದ್ರ ಅವರು ಪ್ರಜಾಕೀಯ ಪಕ್ಷ ಕಟ್ಟಿದ್ದು ಒಳ್ಳೆದಾಯಿತು ಎಂದು ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

    ಕೊಳ್ಳೆಗಾಲ ತಾಲೂಕಿನ ಕುರುಬರಕಟ್ಟೆ ಗ್ರಾಮದಲ್ಲಿ ಶ್ರೀ ಧರೆಗೆ ದೊಡ್ಡವರ ಸಂಸ್ಥಾನ ಮಠದ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಅವರು, ಉಪೇಂದ್ರ ಅವರು ಹೊಸ ಆಲೋಚನೆ ಇಟ್ಟುಕೊಂಡು ಪಕ್ಷ ಸ್ಥಾಪಿಸಿದ್ದಾರೆ. ಅವರು ಇಂಡಿಪೆಂಡೆಟ್ ಆಗಿ ಪಕ್ಷಕಟ್ಟಿರುವುದು ಒಳ್ಳೆಯದು ಎಂದು ತಿಳಿಸಿದರು.

    ಕರ್ನಾಟಕ್ಕೆ ಹೊಸ ಆಲೋಚನೆಗಳು ಬೇಕಾಗಿತ್ತು. ಆ ಹೊಸ ಆಲೋಚನೆಯನ್ನು ಉಪೇಂದ್ರ ಅವರು ಮಾಡಿದ್ದಾರೆ. ಈ ರೀತಿಯ ಪಕ್ಷ ಕರ್ನಾಟಕ್ಕೆ ಬೇಕಾಗಿತ್ತು. ಉಪೇಂದ್ರ ಅವರು ಈ ಮೂಲಕ ಕರ್ನಾಟಕ್ಕೆ ಒಳ್ಳೆಯದು ಮಾಡಲಿ ಎಂದು ಹೇಳಿದರು.

    ಮುಂದುವರೆದು ಮಾತನಾಡಿದ ಅವರು, ನನಗೆ ಸದ್ಯಕ್ಕೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲ ಎಂದು ತಿಳಿಸಿದರು.

    ಇದನ್ನೂ ಓದಿ: ಸಿನಿಮಾ ರಂಗಕ್ಕೆ ಗುಡ್‍ಬೈ ಹೇಳ್ತಾರಾ ಉಪೇಂದ್ರ?