Tag: ಯಲಚೇನಹಳ್ಳಿ

  • ವಿಜಯದಶಮಿ ದಿನವೇ ಬೆಂಗ್ಳೂರಲ್ಲಿ ಅಗ್ನಿ ಅವಘಡ – ಸುಟ್ಟು ಕರಕಲಾದ 19 ಇವಿ ಬೈಕ್‌ಗಳು

    ವಿಜಯದಶಮಿ ದಿನವೇ ಬೆಂಗ್ಳೂರಲ್ಲಿ ಅಗ್ನಿ ಅವಘಡ – ಸುಟ್ಟು ಕರಕಲಾದ 19 ಇವಿ ಬೈಕ್‌ಗಳು

    ಬೆಂಗಳೂರು: ವಿಜಯದಶಮಿ ದಿನವೇ ಸಿಲಿಕಾನ್ ಸಿಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಯಲಚೇನಹಳ್ಳಿಯ (Yelachenahalli) ಕಮರ್ಷಿಯಲ್ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 19 ಇವಿ ಬೈಕ್‌ಗಳು ಸುಟ್ಟು ಕರಕಲಾಗಿವೆ.

    ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಬೇಸ್ಮೆಂಟ್‌ನಲ್ಲಿದ್ದ ಇವಿ ಬೈಕ್ ಚಾರ್ಜಿಂಗ್ ಪಾಯಿಂಟ್ ಓವರ್ ಹೀಟ್ ಆಗಿದ್ದು, ಪರಿಣಾಮ ಅಲ್ಲಿದ್ದ ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಜೊತೆಗೆ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಆರು ಸಿಲಿಂಡರ್‌ಗಳ ಗ್ಯಾಸ್ ಸೋರಿಕೆಯಾಗಿದ್ದು, ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದೆ.ಇದನ್ನೂ ಓದಿ: ಕಾಂತಾರ ಚಾಪ್ಟರ್ 1 ವಿಶ್ವದಾದ್ಯಂತ ಇಂದು ರಿಲೀಸ್

    ಸದ್ಯ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಜೊತೆಗೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ಬೆಂಗಳೂರಿನ ನಡುರಸ್ತೆಯಲ್ಲಿ ಹೊತ್ತಿ ಉರಿದ ಬೃಹತ್ ಗಾತ್ರದ ಕ್ರೇನ್

    ಬೆಂಗಳೂರಿನ ನಡುರಸ್ತೆಯಲ್ಲಿ ಹೊತ್ತಿ ಉರಿದ ಬೃಹತ್ ಗಾತ್ರದ ಕ್ರೇನ್

    ಬೆಂಗಳೂರು: ನಡುರಸ್ತೆಯಲ್ಲಿ ಬೃಹತ್ ಗಾತ್ರದ ಕ್ರೇನ್ (Crane) ಒಂದು ಹೊತ್ತಿ ಉರಿದಿರುವ ಘಟನೆ ನಗರದ ಯಲಚೇನಹಳ್ಳಿ (Yelachenahalli) ಮೆಟ್ರೋ ಸ್ಟೇಷನ್ ಬಳಿ ರಾತ್ರಿ ನಡೆದಿದೆ.

    ರಸ್ತೆ ನಡುವೆಯೇ ಕ್ರೇನ್‌ಗೆ ಬೆಂಕಿ (Fire) ತಗುಲಿ ಹೊತ್ತಿ ಉರಿದಿದೆ. ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ಆಗಮಿಸಿ, ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

    ವರ್ತೂರಿನಿಂದ ಬಿಡದಿಗೆ ತೆರಳುತ್ತಿದ್ದ ಕ್ರೇನ್ ಇದಾಗಿದ್ದು, ಆರಂಭದಲ್ಲಿ ಕ್ರೇನ್‌ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಕ್ರೇನ್ ಅನ್ನು ರಸ್ತೆ ಪಕ್ಕ ನಿಲ್ಲಿಸಿದ್ದಾನೆ. ಬೆಂಕಿ ಜಾಸ್ತಿಯಾಗುತ್ತಿದ್ದಂತೆ ಕ್ರೇನ್‌ನಲ್ಲಿದ್ದ ಮೂವರು ಕೆಳಗೆ ಇಳಿದಿದ್ದಾರೆ. ತಕ್ಷಣ ವಾಹನ ಸಂಚಾರವನ್ನೂ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: Breaking – ಮೆಟ್ರೋ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ

    ಕೇನ್‌ನ ಮುಂಭಾಗದಲ್ಲಿರುವ ಆಯಿಲ್ ಮತ್ತು ವೈರ್‌ನಿಂದ ಬೆಂಕಿಯ ಪ್ರಮಾಣ ಹೆಚ್ಚಾಗಿದೆ. ತಕ್ಷಣ ಸ್ಥಳೀಯರು, ಪೊಲೀಸರಿಂದ ಅಗ್ನಿಶಾಮಕ ದಳಕ್ಕೆ ಮಾಹಿತಿ ದೊರೆತಿದೆ. ತಕ್ಷಣ ಸ್ಥಳಕ್ಕೆ ಬಂದ 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ.

    ಬೆಂಕಿ ಹೊತ್ತಿಕೊಂಡ ಸ್ಥಳದ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಕೂಡಾ ಇತ್ತು. ಅದೃಷ್ಟವಶಾತ್ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ – ವರ್ತಕರು, ಬಿಜೆಪಿ ಮುಖಂಡರು ವಿರೋಧ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಉದ್ಘಾಟನೆ

    ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಉದ್ಘಾಟನೆ

    ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು.
    ಇಂದು ದಕ್ಷಿಣ ಭಾರತದ ಮೊದಲ ಹಂತದ ನಮ್ಮ ಮೆಟ್ರೋವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಂಜೆ 6 ಗಂಟೆಗೆ ಉದ್ಘಾಟನೆ ಮಾಡಿದ್ದಾರೆ. ನಾಳೆ ಬೆಳೆಗ್ಗೆ 6 ಗಂಟೆಯಿಂದ ಸಾರ್ವಜನಿಕರ ಓಡಾಟಕ್ಕೆ ಮೊದಲ ಹಂತದ ನಮ್ಮ ಮೆಟ್ರೋ ಮಾರ್ಗ ಮುಕ್ತವಾಗಲಿದೆ.

    ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲಾ, ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು, ಕೆ.ಬಿ. ಕೋಳಿವಾಡ, ಬಿ.ಕೆ. ಶಂಕರಮೂರ್ತಿ, ಮೇಯರ ಪದ್ಮಾವತಿ, ಕೇಂದ್ರ ಸಚಿವರಾದ ಅನಂತಕುಮಾರ ಮತ್ತು ಸದಾನಂದ ಗೌಡ ಸೇರಿದಂತೆ ಅನೇಕ ಗಣ್ಯವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ಸಮಯ ಬದಲಾವಣೆ: ಮಹತ್ವದ ನಿರ್ಧಾರವೊಂದರಲ್ಲಿ ಮೆಟ್ರೋ ನಿಗಮ ರೈಲುಗಳ ಓಡಾಟದ ಸಮಯದಲ್ಲಿ ಬದಲಾವಣೆ ಮಾಡಿದೆ. ಸೋಮವಾರದಿಂದ ಹೊಸ ವೇಳಾಪಟ್ಟಿ ಅನ್ವಯವಾಗಲಿದೆ. ಈಗಿರುವ 6 ಗಂಟೆಗೆ ಬದಲು ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ರೈಲು ತನ್ನ ಸಂಚಾರ ಆರಂಭಿಸಲಿದೆ. ರಾತ್ರಿ 10 ಗಂಟೆ ಬದಲು 11 ಗಂಟೆಯವರೆಗೂ ಸಂಚಾರ ಇರಲಿದೆ. ಕೆಂಪೇಗೌಡ ರೈಲು ನಿಲ್ದಾಣದಿಂದ ನಾಲ್ಕು ಟರ್ಮಿನಲ್ ನಿಲ್ದಾಣಗಳ ಕಡೆಗೆ ರಾತ್ರಿ 11.25ಕ್ಕೆ ಕಡೆಯ ರೈಲು ಸಂಚರಿಸಲಿದೆ. ನಾಗಸಂದ್ರ ಟರ್ಮಿನಲ್‍ಗೆ ರಾತ್ರಿ 10.50ಕ್ಕೆ ಕೊನೆಯ ರೈಲು, ಯಲೇಚಲನಹಳ್ಳಿ ಟರ್ಮಿನಲ್‍ಗೆ 11 ಗಂಟೆಗೆ, ಮೈಸೂರು ರಸ್ತೆಗೆ 11.05ಕ್ಕೆ ಕೊನೆಯ ರೈಲು ಹೊರಡಲಿದೆ.

    ಭಾನುವಾರ ಒಂದು ದಿನ ಮಾತ್ರ ಬೆಳಗ್ಗೆ 5.30ಕ್ಕೆ ರೈಲುಗಳ ಓಡಾಟ ಆರಂಭವಾಗಲಿದೆ. ಇನ್ನು ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಅವಧಿಯಲ್ಲಿ ಪ್ರತಿ ನಾಲ್ಕು ನಿಮಿಷಕ್ಕೊಮ್ಮೆ ರೈಲುಗಳ ಓಡಾಟ ಇರಲಿದೆ. ಕಡಿಮೆ ಇರುವ ಅವಧಿಯಲ್ಲಿ ಪ್ರತಿ 20 ನಿಮಿಷಕ್ಕೊಮ್ಮೆ ರೈಲುಗಳು ಓಡಲಿವೆ. ಸಾಮಾನ್ಯ ಅವಧಿಯಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ಸಂಚರಿಸಲಿವೆ ಎಂದು ಬಿಎಂಆರ್‍ಸಿಎಲ್ ತಿಳಿಸಿದೆ.

    ಮೆಟ್ರೋ ರೈಲಿನ ಅಧಿಕೃತ ಕೆಲಸ ಆರಂಭವಾಗಿದ್ದು ಏಪ್ರಿಲ್ 15 2007 ರಂದು. ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ಯೋಜನೆಗೆ ಚಾಲನೆ ನೀಡಿದ್ರು. ಬಿಎಂಆರ್‍ಸಿಎಲ್ ಈ ಯೋಜನೆಯನ್ನ 2005 ರಲ್ಲೆ ಆರಂಭ ಮಾಡಲು ಯೋಜನೆ ರೂಪಿಸಿಕೊಂಡಿತ್ತು. ಆದ್ರೆ ಸರ್ಕಾರದಲ್ಲಿ ಆದ ಬದಲಾವಣೆಯಿಂದ ಮೆಟ್ರೋ ಕಾಮಗಾರಿಗೆ ಒಪ್ಪಿಗೆ ದೊರೆಯಲು ನಿಧಾನವಾಯ್ತು. ಆದ್ರೆ 2006 ರಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ಅನುಮೋದನೆ ಪಡೆದು ಆ ನಂತರ ಬಿಎಂಆರ್‍ಸಿಎಲ್ ತನ್ನ ಕೆಲಸ ಆರಂಭಿಸಿತು.

    ನಮ್ಮ ಮೆಟ್ರೋ ಮೊದಲ ಹಂತ ಎಲ್ಲಿಂದ ಎಲ್ಲಿಗೆ ಓಡುತ್ತೆ ಎಷ್ಟು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೆಟ್ರೋ ಸಂಚಾರ ಮಾಡುತ್ತೆ ಅನ್ನೋದನ್ನ ನೊಡೋದಾದ್ರೆ
    * ಬೈಯಪ್ಪನಹಳ್ಳಿ ಟು ನಾಯಂಡಹಳ್ಳಿ
    * ಯಲೇಚನಹಳ್ಳಿ ಟು ನಾಗಸಂದ್ರ
    * ಮೆಟ್ರೋ ಸಂಚಾರದ ಒಟ್ಟು ದೂರ: 42.3 ಕಿ.ಮೀ
    * ಸುರಂಗ ಮಾರ್ಗದ ಒಟ್ಟು ದೂರ: 8.8 ಕಿ.ಮೀ
    * ಎತ್ತರಿಸಿದ ಮಾರ್ಗದ ಒಟ್ಟು ದೂರ: 33.42 ಕಿ.ಮೀ
    * ಒಟ್ಟು ನಿಲ್ದಾಣ: 40
    * ಒಟ್ಟು ವೆಚ್ಚ: 14,291 ಕೋಟಿ ರೂಪಾಯಿ

    ಒಟ್ಟು 42.3 ಕೀಲೋ ಮೀಟರ್ ದೂರ ಮೆಟ್ರೋ ಸಂಚರಿಸಲಿದೆ. ಇದ್ರಲ್ಲಿ 8.8 ಕಿಲೋ ಮೀಟರ್ ದೂರದವರೆಗೆ ಸುರಂಗ ಮಾರ್ಗವಿದ್ರೆ, 33.42 ಕಿಲೋ ಮೀಟರ್ ದೂರದವರೆಗೆ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ. ಒಟ್ಟು 40 ಮೆಟ್ರೋ ನಿಲ್ದಾಣಗಳಿದ್ದು, ಈ ಎಲ್ಲಾ ಪ್ರಾಜೆಕ್ಟ್‍ಗೆ ಇದೂವರೆಗೂ ತಗುಲಿದ ಒಟ್ಟು ವೆಚ್ಚ 14,291 ಕೋಟಿ ರೂಪಾಯಿ.

    ಇನ್ನು ನಮ್ಮ ಮೆಟ್ರೋನ ಪ್ರಮುಖ ಆಕರ್ಷಣೆ ಅಂದ್ರೆ ಅದು ಮೆಜೆಸ್ಟಿಕ್ ನಿಲ್ದಾಣ. ಸುಮಾರು 6 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರೋ ಈ ನಿಲ್ದಾಣದಲ್ಲಿ ಒಂದೇ ಸಮಯದಲ್ಲಿ 70 ಸಾವಿರ ಪ್ರಯಾಣಿಕರು ಬರಬಹುದು. ಸಿಟಿ ರೈಲ್ವೇ ನಿಲ್ದಾಣ, ಬಿಎಂಟಿಸಿ ನಿಲ್ದಾಣ. ಮತ್ತು ಕೆಎಸ್‍ಆರ್‍ಟಿಸಿ ನಿಲ್ದಾಣ ದಿಂದ ನೇರವಾಗಿ ಮೆಜೆಸ್ಟಿಕ್‍ನ ಈ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಕರು ಬರಬಹುದಾದಂತಹ ಸೌಲಭ್ಯವನ್ನು ಇಲ್ಲಿ ಕಲ್ಪಿಸಲಾಗಿದೆ.

    ನಮ್ಮ ಮೆಟ್ರೋ ಮೊದಲ ಹಂತ ಮುಗಿಸಲು 10 ವರ್ಷಗಳ ಸುದೀರ್ಘ ಅವಧಿಯನ್ನು ತಗೆದುಕೊಂಡ ಅಧಿಕಾರಿಗಳು ಎರಡನೇ ಹಂತ ಮತ್ತು 3 ನೇ ಹಂತವನ್ನು 2022ರ ಒಳಗೆ ಮುಗಿಸುತ್ತೇವೆ ಅನ್ನೋ ಭರವಸೆ ನೀಡಿದ್ದಾರೆ.

  • ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಇಂದು ಉದ್ಘಾಟನೆ

    ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಇಂದು ಉದ್ಘಾಟನೆ

    – ಮೆಟ್ರೋ ಓಡಾಟದ ಸಮಯ ಬದಲಾವಣೆ

    ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.

    ಹೀಗೊಂದು ಸಿಟಿ ಮಧ್ಯನೇ ರೈಲು ಓಡಾಡುತ್ತೆ, ನಾವು ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಕೇವಲ 30 ನಿಮಿಷದಲ್ಲಿ ಪ್ರಯಾಣ ಮಾಡಬಹುದು ಅನ್ನೋ ಕಲ್ಪನೆಯೂ ಕೂಡ ಬೆಂಗಳೂರಿನ ಜನ ಮಾಡಿರಲಿಲ್ಲ. ಆದ್ರೆ ಆ ಎಲ್ಲಾ ಕಲ್ಪನೆ ಈಗ ವಾಸ್ತವಕ್ಕೆ ಬಂದಿದೆ. ಇಂದು ದಕ್ಷಿಣ ಭಾರತದ ಮೊದಲ ಹಂತದ ನಮ್ಮ ಮೆಟ್ರೋವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಂಜೆ 6 ಗಂಟೆಗೆ ಉದ್ಘಾಟನೆ ಮಾಡಲಿದ್ದು, ನಾಳೆ ಬೆಳೆಗ್ಗೆ 6 ಗಂಟೆಯಿಂದ ಸಾರ್ವಜನಿಕರ ಓಡಾಟಕ್ಕೆ ಮೊದಲ ಹಂತದ ನಮ್ಮ ಮೆಟ್ರೋ ಮಾರ್ಗ ಮುಕ್ತವಾಗಲಿದೆ.

    ಸಮಯ ಬದಲಾವಣೆ: ಮಹತ್ವದ ನಿರ್ಧಾರವೊಂದರಲ್ಲಿ ಮೆಟ್ರೋ ನಿಗಮ ರೈಲುಗಳ ಓಡಾಟದ ಸಮಯದಲ್ಲಿ ಬದಲಾವಣೆ ಮಾಡಿದೆ. ಸೋಮವಾರದಿಂದ ಹೊಸ ವೇಳಾಪಟ್ಟಿ ಅನ್ವಯವಾಗಲಿದೆ. ಈಗಿರುವ 6 ಗಂಟೆಗೆ ಬದಲು ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ರೈಲು ತನ್ನ ಸಂಚಾರ ಆರಂಭಿಸಲಿದೆ. ರಾತ್ರಿ 10 ಗಂಟೆ ಬದಲು 11 ಗಂಟೆಯವರೆಗೂ ಸಂಚಾರ ಇರಲಿದೆ. ಕೆಂಪೇಗೌಡ ರೈಲು ನಿಲ್ದಾಣದಿಂದ ನಾಲ್ಕು ಟರ್ಮಿನಲ್ ನಿಲ್ದಾಣಗಳ ಕಡೆಗೆ ರಾತ್ರಿ 11.25ಕ್ಕೆ ಕಡೆಯ ರೈಲು ಸಂಚರಿಸಲಿದೆ. ನಾಗಸಂದ್ರ ಟರ್ಮಿನಲ್‍ಗೆ ರಾತ್ರಿ 10.50ಕ್ಕೆ ಕೊನೆಯ ರೈಲು, ಯಲೇಚಲನಹಳ್ಳಿ ಟರ್ಮಿನಲ್‍ಗೆ 11 ಗಂಟೆಗೆ, ಮೈಸೂರು ರಸ್ತೆಗೆ 11.05ಕ್ಕೆ ಕೊನೆಯ ರೈಲು ಹೊರಡಲಿದೆ.

    ಭಾನುವಾರ ಒಂದು ದಿನ ಮಾತ್ರ ಬೆಳಗ್ಗೆ 5.30ಕ್ಕೆ ರೈಲುಗಳ ಓಡಾಟ ಆರಂಭವಾಗಲಿದೆ. ಇನ್ನು ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಅವಧಿಯಲ್ಲಿ ಪ್ರತಿ ನಾಲ್ಕು ನಿಮಿಷಕ್ಕೊಮ್ಮೆ ರೈಲುಗಳ ಓಡಾಟ ಇರಲಿದೆ. ಕಡಿಮೆ ಇರುವ ಅವಧಿಯಲ್ಲಿ ಪ್ರತಿ 20 ನಿಮಿಷಕ್ಕೊಮ್ಮೆ ರೈಲುಗಳು ಓಡಲಿವೆ. ಸಾಮಾನ್ಯ ಅವಧಿಯಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ಸಂಚರಿಸಲಿವೆ ಎಂದು ಬಿಎಂಆರ್‍ಸಿಎಲ್ ತಿಳಿಸಿದೆ.

    ಮೆಟ್ರೋ ರೈಲಿನ ಅಧಿಕೃತ ಕೆಲಸ ಆರಂಭವಾಗಿದ್ದು ಏಪ್ರಿಲ್ 15 2007 ರಂದು. ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ಯೋಜನೆಗೆ ಚಾಲನೆ ನೀಡಿದ್ರು. ಬಿಎಂಆರ್‍ಸಿಎಲ್ ಈ ಯೋಜನೆಯನ್ನ 2005 ರಲ್ಲೆ ಆರಂಭ ಮಾಡಲು ಯೋಜನೆ ರೂಪಿಸಿಕೊಂಡಿತ್ತು. ಆದ್ರೆ ಸರ್ಕಾರದಲ್ಲಿ ಆದ ಬದಲಾವಣೆಯಿಂದ ಮೆಟ್ರೋ ಕಾಮಗಾರಿಗೆ ಒಪ್ಪಿಗೆ ದೊರೆಯಲು ನಿಧಾನವಾಯ್ತು. ಆದ್ರೆ 2006 ರಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ಅನುಮೋದನೆ ಪಡೆದು ಆ ನಂತರ ಬಿಎಂಆರ್‍ಸಿಎಲ್ ತನ್ನ ಕೆಲಸ ಆರಂಭಿಸಿತು.

    ನಮ್ಮ ಮೆಟ್ರೋ ಮೊದಲ ಹಂತ ಎಲ್ಲಿಂದ ಎಲ್ಲಿಗೆ ಓಡುತ್ತೆ, ಎಷ್ಟು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೆಟ್ರೋ ಸಂಚಾರ ಮಾಡುತ್ತೆ ಅನ್ನೋದನ್ನ ನೊಡೋದಾದ್ರೆ: 
    * ಬೈಯಪ್ಪನಹಳ್ಳಿ ಟು ನಾಯಂಡಹಳ್ಳಿ
    * ಯಲೇಚನಹಳ್ಳಿ ಟು ನಾಗಸಂದ್ರ
    * ಮೆಟ್ರೋ ಸಂಚಾರದ ಒಟ್ಟು ದೂರ: 42.3 ಕಿ.ಮೀ
    * ಸುರಂಗ ಮಾರ್ಗದ ಒಟ್ಟು ದೂರ: 8.8 ಕಿ.ಮೀ
    * ಎತ್ತರಿಸಿದ ಮಾರ್ಗದ ಒಟ್ಟು ದೂರ: 33.42 ಕಿ.ಮೀ
    * ಒಟ್ಟು ನಿಲ್ದಾಣ: 40
    * ಒಟ್ಟು ವೆಚ್ಚ: 14,291 ಕೋಟಿ ರೂಪಾಯಿ

    ಒಟ್ಟು 42.3 ಕೀಲೋ ಮೀಟರ್ ದೂರ ಮೆಟ್ರೋ ಸಂಚರಿಸಲಿದೆ. ಇದ್ರಲ್ಲಿ 8.8 ಕಿಲೋ ಮೀಟರ್ ದೂರದವರೆಗೆ ಸುರಂಗ ಮಾರ್ಗವಿದ್ರೆ, 33.42 ಕಿಲೋ ಮೀಟರ್ ದೂರದವರೆಗೆ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ. ಒಟ್ಟು 40 ಮೆಟ್ರೋ ನಿಲ್ದಾಣಗಳಿದ್ದು, ಈ ಎಲ್ಲಾ ಪ್ರಾಜೆಕ್ಟ್ ಗೆ ಇದೂವರೆಗೂ ತಗುಲಿದ ಒಟ್ಟು ವೆಚ್ಚ 14,291 ಕೋಟಿ ರೂಪಾಯಿ.

    ಇನ್ನು ನಮ್ಮ ಮೆಟ್ರೋನ ಪ್ರಮುಖ ಆಕರ್ಷಣೆ ಅಂದ್ರೆ ಅದು ಮೆಜೆಸ್ಟಿಕ್ ನಿಲ್ದಾಣ. ಸುಮಾರು 6 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರೋ ಈ ನಿಲ್ದಾಣದಲ್ಲಿ ಒಂದೇ ಸಮಯದಲ್ಲಿ 70 ಸಾವಿರ ಪ್ರಯಾಣಿಕರು ಬರಬಹುದು. ಸಿಟಿ ರೈಲ್ವೇ ನಿಲ್ದಾಣ, ಬಿಎಂಟಿಸಿ ನಿಲ್ದಾಣ ಮತ್ತು ಕೆಎಸ್‍ಆರ್‍ಟಿಸಿ ನಿಲ್ದಾಣ ದಿಂದ ನೇರವಾಗಿ ಮೆಜೆಸ್ಟಿಕ್‍ನ ಈ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಕರು ಬರಬಹುದಾದಂತಹ ಸೌಲಭ್ಯವನ್ನು ಇಲ್ಲಿ ಕಲ್ಪಿಸಲಾಗಿದೆ.

    ನಮ್ಮ ಮೆಟ್ರೋ ಮೊದಲ ಹಂತ ಮುಗಿಸಲು 10 ವರ್ಷಗಳ ಸುದೀರ್ಘ ಅವಧಿಯನ್ನು ತಗೆದುಕೊಂಡ ಅಧಿಕಾರಿಗಳು ಎರಡನೇ ಹಂತ ಮತ್ತು 3 ನೇ ಹಂತವನ್ನು 2022ರ ಒಳಗೆ ಮುಗಿಸುತ್ತೇವೆ ಅನ್ನೋ ಭರವಸೆ ನೀಡಿದ್ದಾರೆ.