Tag: ಯಲಬುರ್ಗಾ

  • ಕೇರಳ ಮಾದರಿಯಂತೆ ಕೊಪ್ಪಳದ ಶಾಲೆಯೊಂದರಲ್ಲಿ ಲಾಸ್ಟ್ ಬೆಂಚ್‌ಗೆ ಕೊಕ್

    ಕೇರಳ ಮಾದರಿಯಂತೆ ಕೊಪ್ಪಳದ ಶಾಲೆಯೊಂದರಲ್ಲಿ ಲಾಸ್ಟ್ ಬೆಂಚ್‌ಗೆ ಕೊಕ್

    ಕೊಪ್ಪಳ: ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಲಾಸ್ಟ್ ಬೆಂಚ್ (Last Bench) ಮಾದರಿಯನ್ನು ತೆಗೆದು ಯು ಆಕಾರದ ಮಾದರಿಯಲ್ಲಿ ಡೆಸ್ಕ್ ಹಾಕಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ.ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸ್‌ ಇಲಾಖೆ ಒಳಗಿನ ರಾಜಕೀಯ ಕಾರಣ.. ಕೊಹ್ಲಿ ಬಲಿಪಶು ಆಗಿದ್ದಾರೆ: ಮಾಜಿ DySP ಅನುಪಮಾ ಶೆಣೈ

    ಇತ್ತೀಚೆಗೆ ಕೇರಳ (Kerala) ಶಾಲೆಯೊಂದರಲ್ಲಿ ಲಾಸ್ಟ್ ಬೆಂಚ್ ಮಾದರಿ ತೆಗೆದುಹಾಕಿ ಯು ಆಕಾರ ಮಾದರಿಯಲ್ಲಿ ಬೆಂಚ್ ಹಾಕಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸದ್ಯ ಇದೇ ಮಾದರಿಯನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಂಡಿಹಾಳ ಸರ್ಕಾರಿ ಶಾಲೆಯೊಂದು ಅಳವಡಿಸಿಕೊಂಡಿದೆ.

    ಮಕ್ಕಳ ನಡುವೆ ಫಸ್ಟ್ ಬೆಂಚ್, ಲಾಸ್ಟ್ ಬೆಂಚ್ ಎನ್ನುವ ಬೇಧ ಬೇಡವೆಂದು ಯು ಮಾದರಿಯಲ್ಲಿ ಬೆಂಚ್ ಹಾಕಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ.ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಮಳೆ ಅವಾಂತರ – ಫ್ಲೈಓವರ್, ರಸ್ತೆಗಳು ಮುಳುಗಡೆ

  • ಡಿವೈಡರ್‌ಗೆ ಲಾರಿ ಡಿಕ್ಕಿ – ಚೆಲ್ಲಾಪಿಲ್ಲಿಯಾದ ಔಷಧ ಬಾಕ್ಸ್‌ಗಳು

    ಡಿವೈಡರ್‌ಗೆ ಲಾರಿ ಡಿಕ್ಕಿ – ಚೆಲ್ಲಾಪಿಲ್ಲಿಯಾದ ಔಷಧ ಬಾಕ್ಸ್‌ಗಳು

    ಕೊಪ್ಪಳ: ನಿದ್ದೆ ಮಂಪರಿನಲ್ಲಿ ಚಾಲಕ ಡಿವೈಡರ್‌ಗೆ ಗುದ್ದಿದ ಪರಿಣಾಮ ಲಾರಿ ಪಲ್ಟಿಯಾಗಿ ಲಕ್ಷಾಂತರ ಮೌಲ್ಯದ ಔಷಧಿ ಮಣ್ಣುಪಾಲಾಗಿರುವ ಘಟನೆ ಯಲಬುರ್ಗಾ (Yalaburga) ತಾಲೂಕಿನ ಮಾಟಲದಿನ್ನಿ ಗ್ರಾಮದ ಬಳಿಯಿರುವ 50ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಇದನ್ನೂ ಓದಿ: ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಬಲಿಯಾಗಿರುವ ಘಟನೆ ತಲೆತಗ್ಗಿಸುವಂಥದ್ದು: ಪರಮೇಶ್ವರ್

    ಔಷಧಿ ತುಂಬಿದ ಲಾರಿ ಗುಜರಾತ್‌ನ ಅಹಮಾಬಾದ್‌ನಿಂದ ಬೆಂಗಳೂರಿಗೆ ಹೊರಟಿತ್ತು. ಈ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿ ಲಾರಿ ಚಲಾಯಿಸುತ್ತಿದ್ದು, ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಲಾರಿ ಪಲ್ಟಿಯಾಗಿದ್ದು, ಔಷಧ ತುಂಬಿದ್ದ ಬಾಕ್ಸ್‌ಗಳು ಚೆಲ್ಲಾಪಿಲ್ಲಿಯಾಗಿದೆ. ಲಕ್ಷಾಂತರ ಮೌಲ್ಯದ ಔಷಧ ಮಣ್ಣುಪಾಲಾಗಿದೆ.

    ಅಪಘಾತದಲ್ಲಿ ಚಾಲಕರಾದ ಮೊಹಮ್ಮದ್ ಜಾಕಿರ್ ಹುಸೇನ್ ಹಾಗೂ ಮೊಹಮ್ಮದ್ ಪಾಷಾ ಗಾಯಗೊಂಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೇವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಫಸ್ಟ್‌ ಟೈಮ್‌ ಕನ್ನಡ ಚಿತ್ರರಂಗದಲ್ಲಿ ಪೋಸ್ಟರ್‌ ಬ್ಯಾನ್‌

  • ಅಪ್ರಾಪ್ತ ಆಟೋ ಚಲಾಯಿಸಿ ಅಪಘಾತ, ವ್ಯಕ್ತಿ ಬಲಿ – 4 ವರ್ಷಗಳ ಬಳಿಕ ಮಾಲೀಕನಿಗೆ 1.41 ಕೋಟಿ ದಂಡ

    ಅಪ್ರಾಪ್ತ ಆಟೋ ಚಲಾಯಿಸಿ ಅಪಘಾತ, ವ್ಯಕ್ತಿ ಬಲಿ – 4 ವರ್ಷಗಳ ಬಳಿಕ ಮಾಲೀಕನಿಗೆ 1.41 ಕೋಟಿ ದಂಡ

    ಕೊಪ್ಪಳ: ಅಪ್ರಾಪ್ತನಿಗೆ ಆಟೋ ಚಲಾಯಿಸಲು ಕೊಟ್ಟ ಪರಿಣಾಮ ಅಪಘಾತ ಮಾಡಿ, ವ್ಯಕ್ತಿ ಸಾವನ್ನಪ್ಪಿದ್ದಾನೆ. ಹೀಗಾಗಿ ಆಟೋ ಮಾಲೀಕನಿಗೆ 1,41,61,580 ರೂ. ದಂಡ ವಿಧಿಸಿ ಗಂಗಾವತಿ (Gangavathi) ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ.ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ, ಇಂತಹ ಉಗ್ರ ಸಂಘಟನೆಗಳನ್ನು ಸದೆಬಡೆಯಬೇಕು – ಡಿಕೆಶಿ

    2021ರ ಮಾ.10ರಂದು ಯಲಬುರ್ಗಾ ಪಟ್ಟಣದಲ್ಲಿ ಆಟೋ ಮಾಲೀಕನೊಬ್ಬ 12 ವರ್ಷದ ಅಪ್ರಾಪ್ತನ ಕೈಗೆ ಆಟೋ ಚಲಾಯಿಸಲು ಕೊಟ್ಟಿದ್ದರ ಪರಿಣಾಮ ಅಪಘಾತ ನಡೆದಿತ್ತು. ಅಂಗಡಿಯೊಂದರ ಬಳಿ ಮೊಬೈಲ್‌ನಲ್ಲಿ ಮಾತನಾಡುತ್ತಾ ನಿಂತಿದ್ದ ವ್ಯಕ್ತಿಗೆ ಅಪ್ತಾಪ್ರ ಆಟೋದಿಂದ ಡಿಕ್ಕಿ ಹೊಡೆದಿದ್ದ. ಅಪಘಾತದಲ್ಲಿ ಕೊಪ್ಪಳದ ಯಲಬುರ್ಗಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಗಂಗಾವತಿ ನಿವಾಸಿ ರಾಜಶೇಖರ ಪಾಟೀಲ್ ಸಾವನ್ನಪ್ಪಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಎಸ್.ಗಾಣಿಗೇರ ಅಪ್ರಾಪ್ತನಿಗೆ ಆಟೋ ಚಲಾಯಿಸಲು ನೀಡಿದ್ದ ಮಾಲೀಕನಿಗೆ 1,41,61,580 ರೂ. ದಂಡ ವಿಧಿಸಿದ್ದಾರೆ. ದಂಡ ಮೊತ್ತವನ್ನು ರಾಜಶೇಖರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆ ಸೂಚಿಸಿದ್ದಾರೆ. ಅಪ್ರಾಪ್ತರ ಕೈಗೆ ವಾಹನ ನೀಡುವ ಮುನ್ನ ಎಚ್ಚರ ವಹಿಸಬೇಕೆಂದು ಪ್ರಕರಣದ ಮೂಲಕ ಎಚ್ಚರಿಕೆ ಸಂದೇಶ ನೀಡಿದ್ದಾರೆ.ಇದನ್ನೂ ಓದಿ: ಸೌದಿಯಿಂದ ಬರೋವಾಗ ಪಾಕ್ ವಾಯುಸೀಮೆ ಬಳಸದೇ ದೆಹಲಿಗೆ ಬಂದ ಮೋದಿ

  • ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು – ಮುಖ್ಯಶಿಕ್ಷಕ ಸೇರಿ 6 ಶಿಕ್ಷಕರು ಅಮಾನತು

    ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು – ಮುಖ್ಯಶಿಕ್ಷಕ ಸೇರಿ 6 ಶಿಕ್ಷಕರು ಅಮಾನತು

    ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.

    ಮೃತ ವಿದ್ಯಾರ್ಥಿಯನ್ನು ನಿರುಪಾದಿ ಹರಿಜನ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಛತ್ತೀಸ್‌ಗಢ: ಸರಕು ಸಾಗಣೆ ವಾಹನ ಪಲ್ಟಿಯಾಗಿ 5 ಮಂದಿ ಸಾವು

    ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾ (Yalaburga) ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಸೇರಿ ಆರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಕೊಪ್ಪಳ ಡಿಡಿಪಿಐ ಶ್ರೀಶೈಲ್ ಬಿರಾದಾರ್ ಆದೇಶ ಹೊರಡಿಸಿದ್ದಾರೆ.

    ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದ. ಘಟನೆಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ ಎಂದು ಅಮಾನತು ಮಾಡಿ ಆದೇಶಿಸಿದ್ದಾರೆ.ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಸಿಗರೇಟ್‌ನಿಂದ ಮರ್ಮಾಂಗ ಸುಟ್ಟು ಸ್ನೇಹಿತನ ಹತ್ಯೆ!

  • ಸಚಿವ ಹಾಲಪ್ಪ ಆಚಾರ್ ಸೀರೆ ಹಂಚಿಕೆ – ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

    ಸಚಿವ ಹಾಲಪ್ಪ ಆಚಾರ್ ಸೀರೆ ಹಂಚಿಕೆ – ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

    ಕೊಪ್ಪಳ: ಸಚಿವ ಹಾಲಪ್ಪ ಆಚಾರ್ (Halappa Achar) ಅಳಿಯ ಗೌರಾ ಬಸವರಾಜ (Goura Basavaraj) ನೇತೃತ್ವದಲ್ಲಿ ಬಿಜೆಪಿ (BJP) ಕಾರ್ಯಕರ್ತರು ಯಲಬುರ್ಗಾದಲ್ಲಿ (Yalaburga) ಸೀರೆ ಹಂಚಿಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ (Congress) ಕಾರ್ಯಕರ್ತರು ಆರೋಪಿಸಿದ್ದಾರೆ.

    ಸಚಿವ ಹಾಲಪ್ಪ ಆಚಾರ್ ಫೋಟೋ ಇರುವ ಚೀಲದಲ್ಲಿ ಕ್ಷೇತ್ರದ ಗ್ರಾಮಗಳ ಮಹಿಳೆಯರಿಗೆ ಸೀರೆ ಹಂಚಿಕೆ ಮಾಡಲಾಗುತ್ತಿದೆ. ಚೀಲದ ಮೇಲೆ ಅಳಿಯ ಗೌರಾ ಬಸವರಾಜ ಅವರ ಹೆಸರನ್ನು ಸಂಕ್ಷಿಪ್ತವಾಗಿ ಗೌರಾ ಎಂದು ಬರೆಯಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ವಿಜಯೇಂದ್ರ ಏನಾದ್ರೂ ಮಾತಾಡಲಿ, ಅವರಿಗೆ ದೇವರು ಒಳ್ಳೆಯದನ್ನೇ ಮಾಡಲಿ: ಸೋಮಣ್ಣ

    ಚುನಾವಣೆ ಹಿನ್ನೆಲೆಯಲ್ಲಿ ಅಳಿಯ ಹಾಗೂ ಮಾವ ಸೇರಿ ಕೇವಲ 60 ರೂ. ಸೀರೆ ಹಂಚಿ ಮತ ಸೆಳೆಯುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ (Election) ಟೀ ಶರ್ಟ್ ಹಂಚಿದ್ದರು ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

    ಈ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಜಿಲ್ಲಾ ಚುನಾವಣಾ ಅಧಿಕಾರಿಗಳು ಸೀರೆ ಸೀಜ್ ಮಾಡಿದ್ದಾರೆ ಎನ್ನಲಾಗಿದೆ. ಮುಂದುವರೆದು ಕಾಂಗ್ರೆಸ್ ಪಡೆ ಸೀರೆ ಹಂಚಿಕೆ ವಿರೋಧಿಸಿ ಮಾರ್ಚ್ 17ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿದೆ. ಇದನ್ನೂ ಓದಿ: 20 ವರ್ಷದ ಯುವಕನನ್ನು 100ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಂದು ಪೊದೆಗೆ ಎಸೆದ!

  • ದಲಿತರಿಗೆ ಕ್ಷೌರ ಮಾಡಲ್ಲ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕರು

    ದಲಿತರಿಗೆ ಕ್ಷೌರ ಮಾಡಲ್ಲ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕರು

    ಕೊಪ್ಪಳ: ದಲಿತರಿಗೆ ಕ್ಷೌರ ಮಾಡುವುದಿಲ್ಲ ಎಂದು ಕ್ಷೌರಿಕರು ಹೇಳಿದ್ದಕ್ಕೆ ಮನನೊಂದು ಯುವಕರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಯಲಬುರ್ಗಾ ತಾಲೂಕಿನ ಹೊಸಳ್ಳಿಯಲ್ಲಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಕ್ಷೌರಿಕರು ಜಗಳ ಮಾಡಿದ್ದಾರೆ. ಇದರಿಂದ ನೊಂದ ದಲಿತ ಯುವಕರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂಬಂಧ 16 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.

    ಹೊಸಳ್ಳಿಯಲ್ಲಿ ಜೂ. 6 ರಂದು ಗ್ರಾಮದ ಸಣ್ಣ ಹನುಮಂತ ಹಾಗೂ ಬಸವರಾಜ ಎಂಬವರು ಕ್ಷೌರ ಮಾಡಿಸಲು ಹೋಗಿದ್ದರು. ಆಗ ಕ್ಷೌರಿಕರು ದಲಿತರಿಗೆ ಕ್ಷೌರ ಮಾಡಲು ನಿರಾಕರಣೆ ಮಾಡಿದ್ದಾರೆ. ನಮಗೆ ಯಾಕೆ ಕ್ಷೌರ ಮಾಡುವುದಿಲ್ಲ ಎಂದು ದಲಿತರು ಪ್ರಶ್ನಿಸಿದ್ದು ನಂತರ ಎಂದು ವಾಗ್ವಾದ ನಡೆದಿದೆ. ಇದನ್ನು ಓದಿ: ಹಿಂದೂ ಧಾರ್ಮಿಕ ದತ್ತಿಯಿಂದ ಮಸೀದಿ, ಮದರಸಾಗಳಿಗೆ ತಸ್ತಿಕ್ ಭತ್ತೆ ನೀಡಲು ನಿರ್ಧಾರ- ವಿಹೆಚ್‍ಪಿ ವಿರೋಧ

    ಇದೇ ಸಂದರ್ಭದಲ್ಲಿ ಸ್ಥಳೀಯ ಸವರ್ಣೀಯರು ಸೇರಿಕೊಂಡು ಕ್ಷೌರ ಮಾಡಿಸಿಕೊಳ್ಳಲು ಬಂದವರ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಗಲಾಟೆಯ ನಂತರ ಇಬ್ಬರು ಯುವಕರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಯಲಬುರ್ಗಾ ಆಸ್ಪತ್ರೆಗೆ ಸೇರಿಸಲಾಗಿದೆ.

    ಈ ಘಟನೆಯ ಬಳಿಕ ಇಬ್ಬರು ಕ್ಷೌರಿಕರು ಹಾಗೂ ಸ್ಥಳೀಯ 14 ಜನರ ಮೇಲೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೊಪ್ಪಳ ಡಿವೈಎಸ್‍ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಇದನ್ನು ಓದಿ: ವೆಂಟಿಲೇಟರ್ ಕದ್ದು ಪರಾರಿಯಾದ ಖತರ್ನಾಕ್ ಕಳ್ಳರು

  • ಬ್ಯಾಂಕ್ ದರೋಡೆ- 1.50 ಕೋಟಿ ರೂ. ಆಭರಣ, ನಗದು ದೋಚಿದ ಕಳ್ಳರು

    ಬ್ಯಾಂಕ್ ದರೋಡೆ- 1.50 ಕೋಟಿ ರೂ. ಆಭರಣ, ನಗದು ದೋಚಿದ ಕಳ್ಳರು

    ಕೊಪ್ಪಳ: ಕರ್ನಾಟಕ ಗ್ರಾಮೀಣ ಬ್ಯಾಂಕ್‍ಗೆ ಕನ್ನ ಹಾಕಿರುವ ಕಳ್ಳರು ಸುಮಾರು ಒಂದು ಕೋಟಿಗೂ ಅಧಿಕ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರ ಗ್ರಾಮದಲ್ಲಿ ನಡೆದಿದೆ.

    ಬೇವೂರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್‍ನ ಶಟರ್ಸ್ ಕಟ್ ಮಾಡಿ ದುಷ್ಕರ್ಮಿಗಳು ದರೋಡೆ ಮಾಡಿದ್ದು, ಕೃತ್ಯಕ್ಕೆ ಗ್ಯಾಸ್ ಕಟರ್ ಬಳಕೆ ಮಾಡಿದ್ದಾರೆ. ಬ್ಯಾಂಕ್‍ನಲ್ಲಿ ಎಷ್ಟು ದರೋಡೆ ನಡೆದಿದೆ ಎಂಬ ಬಗ್ಗೆ ಪರಿಶೀಲನೆ ಬಳಿಕವೇ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಸದ್ಯ 1.50 ಕೋಟಿ ರೂ. ಅಧಿಕ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ, ಹಣವನ್ನು ಕಳ್ಳತನ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

    ಬುಧವಾರ ರಾತ್ರಿ ಘಟನೆ ನಡೆದಿದೆ. ಗ್ಯಾಸ್ ಕಟರ್ ಬಳಸಿ ಶಟರ್ಸ್ ಮುರಿದು ಬ್ಯಾಂಕ್ ಒಳಗೆ ನುಗ್ಗಿರುವ ಕಳ್ಳರು ಹಣದೊಂದಿಗೆ ಬ್ಯಾಂಕ್‍ನಲ್ಲಿದ್ದ ಸಿ.ಸಿ.ಕ್ಯಾಮೆರಾದ ಹಾರ್ಡ್ ಡಿಸ್ಕನ್ನು ಕದ್ದು ಪರಾರಿಯಾಗಿದ್ದಾರೆ. ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಕೆಲಸಕ್ಕೆ ಹಾಜರಾದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.

    ಬ್ಯಾಂಕಿನ ಕಬ್ಬಿಣದ ರಾಡ್ ಕತ್ತರಿಸಿ ಹಣ, ಆಭರಣ ದೋಚಿದ್ದಾರೆ ಎಂದು ಸಿಪಿಐ ನಾಗರೆಡ್ಡಿ ಮಾಹಿತಿ ನೀಡಿದ್ದಾರೆ. ಕಳೆದ ಕೆಲ ವರ್ಷಗಳಲ್ಲಿ ಅತೀ ದೊಡ್ಡ ಕಳ್ಳತನ ಇದು ಎನ್ನಲಾಗಿದ್ದು, ಸ್ಥಳಕ್ಕೆ ಕೊಪ್ಪಳ ಎಸ್.ಪಿ.ಜಿ ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಬ್ಯಾಂಕ್ ಅಧಿಕಾರಿಗಳ ಬಳಿಯೂ ಮಾಹಿತಿ ಸಂಗ್ರಹಿಸಿದ್ದಾರೆ.

  • ಮೂವರು ಮಕ್ಕಳು ಸೇರಿ 22 ಮಂದಿಗೆ ಕೊರೊನಾ ಸೋಂಕು

    ಮೂವರು ಮಕ್ಕಳು ಸೇರಿ 22 ಮಂದಿಗೆ ಕೊರೊನಾ ಸೋಂಕು

    – ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇಲ್ಲ

    ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಇಂದು ರಣಕೇಕೆ ಹಾಕಿದೆ. ಮೂವರು ಮಕ್ಕಳು ಸೇರಿದಂತೆ ಬರೋಬ್ಬರಿ 22 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೊಪ್ಪಳ ಡಿಸಿ ಸುನೀಲ್ ಕುಮಾರ್ ಹೇಳಿದ್ದಾರೆ.

    ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲೇ ಐದು ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. 19 ವರ್ಷದ ಯುವತಿ, 18 ವರ್ಷದ ಯುವಕ, 6 ವರ್ಷದ ಮಗು, 45 ಮತ್ತು 37 ವರ್ಷದ ಪುರುಷರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಶ್ರೀರಾಮನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

    ಗಂಗಾವತಿ ತಾಲೂಕಿನ ಅಡವಿಭಾವಿ ಗ್ರಾಮದ 42 ವರ್ಷದ ಮಹಿಳೆ, ಗಂಗಾವತಿ ನಗರದ 18 ವರ್ಷದ ಯುವತಿಗೆ ಕೊರೊನಾ ದೃಢಪಟ್ಟಿದೆ. ತಾಲೂಕಿನ ಮರಳಿ ಗ್ರಾಮದ 56 ವರ್ಷದ ವ್ಯಕ್ತಿಗೂ ಹಾಗೂ ಕಾರಟಗಿಯ 23 ವರ್ಷದ ಮಹಿಳೆಗೆ ಸೋಂಕು ಖಚಿತವಾಗಿದೆ. ಅಲ್ಲದೇ ಕುಷ್ಟಗಿ ತಾಲೂಕಿನ ನಂದಾಪುರ ಗ್ರಾಮದಲ್ಲಿ 2 ಕೊರೊನಾ ಪ್ರಕರಣ ಪತ್ತೆಯಾಗಿದ್ದು, 32 ವರ್ಷದ ವ್ಯಕ್ತಿ ಹಾಗೂ 40 ವರ್ಷದ ಮಹಿಳಿಗೆ ಸೋಂಕು ತಗುಲಿದೆ. ಕುಷ್ಟಗಿ ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ 3 ವರ್ಷದ ಬಾಲಕನಿಗೆ ಕೊರೊನಾ ದೃಢಪಟ್ಟಿದೆ. ಪರಿಣಾಮ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.

    ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮಕ್ಕೆ ಕೊರೊನಾ ಪ್ರವೇಶ ನೀಡಿದ್ದು, ಇಂದು 34 ವರ್ಷದದ ವ್ಯಕ್ತಿಯ ವರದಿ ಪಾಸಿಟಿವ್ ಬಂದಿದೆ. ತಾಲೂಕಿನ ಚಿಕ್ಕೇನಕೊಪ್ಪ ಗ್ರಾಮದಲ್ಲಿ 25 ವರ್ಷದ ಯುವಕನಿಗೆ ಮತ್ತು ಗೋರ್ಲೇಕೊಪ್ಪ ಗ್ರಾಮದ 12 ವರ್ಷದ ಬಾಲಕನಿಗೆ ಮತ್ತು ಯರಡೋಣಿ ಗ್ರಾಮದ 55 ವರ್ಷದ ವ್ಯಕ್ತಿಗೂ ಸೋಂಕು ತಗುಲಿದೆ. ಪರಿಣಾಮ ಯಲಬುರ್ಗಾ ತಾಲೂಕಿನ ಗ್ರಾಮಗಳಿಗೂ ಕೊರೊನಾ ಎಂಟ್ರಿ ಕೊಟ್ಟಿರುವುದಿಂದ ತಾಲೂಕಿನ ಜನರಲ್ಲಿ ಆತಂಕ ಮನೆ ಮಾಡಿದೆ.

    ಕೊಪ್ಪಳ ತಾಲೂಕಿನಲ್ಲೂ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ತಾಲೂಕಿನ ಹಿರೇಬಗನಾಳ ಗ್ರಾಮದ 31 ವರ್ಷದ ವ್ಯಕ್ತಿಗೆ, ಗೊಬ್ಬೂರ ಗ್ರಾಮದಲ್ಲಿ 2 ವರ್ಷದ ಮಗೂ ಸೇರಿದಂತೆ 25 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿದೆ. ಇನ್ನು ಹುಲಗಿ ಗ್ರಾಮದಲ್ಲಿ ಇಬ್ಬರು ಮಹಿಳೆಯರಿಗೆ, ಹೊಸಲಿಂಗಾಪುರ ಗ್ರಾಮದಲ್ಲಿ ಒಬ್ಬರಿಗೆ ಕೊರೊನಾ ದೃಢ ಪಟ್ಟಿದೆ. ಇದು ಜಿಲ್ಲೆಯನ್ನೇ ಬೆಚ್ಚಿ ಬೀಳುವಂತೆ ಮಾಡಿದೆ.

    ಇಂದು ಪ್ರಕಟಗೊಂಡ ಕೊರೊನಾ ದೃಢಪಟ್ಟ ಪ್ರಕರಣಗಳಲ್ಲಿ ಸೋಂಕಿನ ರೋಗ ಲಕ್ಷಣಗಳೇ ಇಲ್ಲದಿರುವುದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಪರಿಣಾಮ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಸಾಮಾಜಿಕ ಅಂತರ ಮತ್ತು ಕಡ್ಡಾಯವಾಗಿ ಮಾಸ್ಕ್ ಬಳಸುವಂತೆ ಮನವಿ ಮಾಡಿಕೊಂಡಿದೆ.

  • ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ, ಅಭಿಮಾನಿಗಳ ಪ್ರತಿಭಟನೆ

    ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ, ಅಭಿಮಾನಿಗಳ ಪ್ರತಿಭಟನೆ

    ಕೊಪ್ಪಳ: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ ಮಾಡಿರುವ ಘಟನೆ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ. ಇದರಿಂದ ಆಕ್ರೋಶಗೊಂಡ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

    ಯಲಬುರ್ಗಾ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿರುವ ಟಿಪ್ಪು ಸುಲ್ತಾನ್‍ರ ಕಟೌಟ್‍ಗೆ ಕೆಲ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಆಕ್ರೋಶಗೊಂಡ ಜನರು ಟಿಪ್ಪು ಸುಲ್ತಾನ ವೃತ್ತದಿಂದ ತಹಶೀಲ್ದಾರ್ ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾಗಿದ್ದರು. ಆದರೆ ಪ್ರತಿಭಟನಾ ಮೆರವಣಿಗೆ ನಡೆಸಲು ಪೊಲೀಸರು ಒಪ್ಪಿಗೆ ನೀಡದಕ್ಕೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯ ಕಲೆ ಸಮಯ ಮಾತಿನ ಚಕಮಕಿ ಸಹ ನಡೆಯಿತು.

    ಪ್ರತಿಭಟನೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಸ್ಥಳದಲ್ಲಿ ಟಿಪ್ಪುಸುಲ್ತಾನ ಅಭಿಮಾನಿಗಳು ಧರಣಿ ನಡೆಸುತ್ತಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ.