Tag: ಯಶವಂತ್

  • ಹಾಸನದ ಸೊಗಡಿನ ‘ಗೌರಿ ಶಂಕರ’: ಧಾರಾವಾಹಿಯಲ್ಲಿದೆ ಬೆಂಕಿ ಬಿರುಗಾಳಿಯ ಕಥೆ

    ಹಾಸನದ ಸೊಗಡಿನ ‘ಗೌರಿ ಶಂಕರ’: ಧಾರಾವಾಹಿಯಲ್ಲಿದೆ ಬೆಂಕಿ ಬಿರುಗಾಳಿಯ ಕಥೆ

    ನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಪ್ರಸ್ತುತ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಕಾರ್ಯಕ್ರಮಗಳು ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಕಥೆ ಗೌರಿಶಂಕರ.

    ಕರ್ನಾಟಕದ ಸುಂದರ ತಾಣ ಹಾಸನಾಂಬೆಯ ತವರೂರಾದ ಹಾಸನದಲ್ಲಿ ಈ ಕತೆಯು ಕೇಂದ್ರೀಕೃತವಾಗಿರುತ್ತದೆ. ಈ ಧಾರಾವಾಹಿಯ ನಾಯಕಿ ‘ಗೌರಿ’ ಸಮಾಜದಲ್ಲಿ ಘನತೆ ಗೌರವವನ್ನು ಹೊಂದಿರುವ ಪರಿವಾರದಲ್ಲಿ ಬೆಳೆದಿರುವ ಈಕೆ ಯಾರನ್ನೂ ನೋಯಿಸದ ಮುಗ್ದ ಮನಸ್ಸಿನ ಕಣ್ಮಣಿ. ಆದರೆ ಸಮಯ ಬಂದರೆ ತನ್ನ ನಿಲುವನ್ನು ಸ್ಪಷ್ಟವಾಗಿ ಮಾತನಾಡಬಲ್ಲ ಧೈರ್ಯವಂತೆ ಕೂಡ. ಜೊತೆಗೆ ತಂದೆಯಂತೆ ತಾನು ಪ್ರೊಫೆಸರ್ ಆಗಬೇಕೆಂಬ ಕನಸನ್ನು ಹೊತ್ತಿರೋಳು. ಇನ್ನು ಕಥಾ ನಾಯಕ ‘ಶಂಕರ’ ಅಲಿಯಾಸ್ ಜೋಗಿ, ಹೆಣ್ಣು ಮಕ್ಳು ಅಂದ್ರೆ ನಾಲ್ಕುಗೋಡೆ ಮಧ್ಯೆ ಇರ್ಬೇಕು ಅಂತ ನಂಬಿರೋ ಮನೆತನದಲ್ಲಿ ಬೆಳೆದವ. ಈತ ನೋಡೋಕೆ ರಫ್‌ ಆದ್ರೆ ಮಗುವಿನಂತ ಮನಸ್ಸು. ತನಗನಿಸಿದ್ದನ್ನು ಮಾಡಲೇಬೇಕು ಅನ್ನೋ ಹಠವಾದಿ.

    ಒಂದು ಕಡೆ ಶಾಂತಿ, ಸಹನೆ, ತಾಳ್ಮೆಯಿಂದ ಕೂಡಿದ ಗೌರಿ ಪರಿವಾರ. ಮತ್ತೊಂದೆಡೆ ಅಧಿಕಾರ, ದರ್ಪ, ಹಣ ತುಂಬಿರೋ ಶಂಕರನ ಪರಿವಾರ. ಈ ಎರಡೂ ತದ್ವಿರುದ್ಧ ಭಾವಗಳನ್ನು ಹೊಂದಿರುವ ಇವರಿಬ್ಬರ ನಡುವೆ ನಡೆಯುವ ಘರ್ಷಣೆ, ಸಂಧಾನ, ಪ್ರೇಮಾಂಕುರವೇ ಈ ಧಾರಾವಾಹಿಯ ಮುಖ್ಯಕಥಾ ಹಂದರ.

    ಗೌರಿಶಂಕರ (Gauri Shankar) ಧಾರಾವಾಹಿಯಲ್ಲಿ ನಾಯಕನಾಗಿ ಯಶವಂತ್ (Yashwant), ನಾಯಕಿಯಾಗಿ ಕೌಸ್ತುಭಮಣಿ (Kaustubhamani) ನಟಿಸುತ್ತಿದ್ದಾರೆ. ಜೊತೆಗೆ ಜನಪ್ರಿಯ ಕಲಾವಿದರಾದ ವಿದ್ಯಾಮೂರ್ತಿ, ಮೋಹನ್ (Mohan), ಕೀರ್ತಿ ಭಾನು ಸೇರಿದಂತೆ ಇನ್ನು ಹಲವಾರು ಕಲಾವಿದರು ಅಭಿನಯಿಸುತ್ತಿದ್ದಾರೆ. ನವೆಂಬರ್ 13, ಸೋಮವಾರದಿಂದ ರಾತ್ರಿ 7 ಗಂಟೆಗೆ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಪ್ರಸಾರವಾಗಲಿದೆ.

  • ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್

    ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್

    ಬೆಂಗಳೂರು: ಭಾರೀ ವಿವಾದ ಎಬ್ಬಿಸಿದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಲು ರಾಜ್ಯ ಹೈಕೋರ್ಟ್ ನೀಡಿದ ಆದೇಶದ ಬೆನ್ನಲ್ಲೇ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಖಜಾಂಚಿ ಯಶವಂತ್ ಕಣ್ಣೀರಿಟ್ಟಿದ್ದಾರೆ.

    ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ರಾಜಕೀಯ ಷಡ್ಯಂತ್ರ ಮಾಡಲಾಗುತ್ತಿದೆ. ಸೆ.23ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ. ಮುಂದಿನ ದಿನಗಳಲ್ಲಿ ನಮಗೆ ಜಯ ಸಿಗುತ್ತೆ ಅನ್ನೋ ಭರವಸೆಯಿದೆ. ಗಣೇಶೋತ್ಸವಕ್ಕೆ ಅವಕಾಶ ಸಿಗುತ್ತೆ ಅಂದುಕೊಂಡಿದ್ದೆವು. ನಾವು ಇದುವರೆಗೂ ಮುಸ್ಲಿಮರಿಗೆ ತೊಂದರೆ ಕೊಟ್ಟಿಲ್ಲ. ಆದರೆ ನಮ್ಮ ಗಣೇಶೋತ್ಸವಕ್ಕೆ ಯಾಕೆ ಇಷ್ಟೊಂದು ತೊಂದರೆ ಕೊಡುತ್ತಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕಿಲ್ಲ ಅವಕಾಶ – ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಆದೇಶ

    ಗಲಭೆ ಎಬ್ಬಿಸೋಕೆ ಅವರೇ ಹೀಗೆ ಮಾಡುತ್ತಿದ್ದಾರೆ. ಅವರು ಹಬ್ಬ ಮಾಡಿದಾಗ ನಾವು ಏನಾದ್ರೂ ತೊಂದರೆ ಮಾಡಿದ್ವಾ..? ನಮ್ಮ ಆಚರಣೆಗಳಿಗೆ ಯಾಕೆ ತೊಂದ್ರೆ ಕೊಡುತ್ತಿದ್ದಾರೆ. ದಾಖಲೆಗಳಿಲ್ಲದಿದ್ದರೂ ವಕ್ಫ್ ಬೋರ್ಡ್ ಮತ್ತೆ ಕೇಸ್ ಹಾಕಿದ್ದಾರೆ. ನಮಗೆ ಜಯ ಸಿಕ್ಕೇ ಸಿಗುತ್ತೆ. ಮೈದಾನ ವಿಚಾರವಾಗಿ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ ಎಂದು ಕಣ್ಣೀರಿಟ್ಟರು.

    Live Tv
    [brid partner=56869869 player=32851 video=960834 autoplay=true]

  • ‘ವಿಕಿಪೀಡಿಯ’ ಹೆಸರಿನಲ್ಲೊಂದು ಸಿನಿಮಾ: ಕಿರುತೆರೆಯಿಂದ ಬೆಳ್ಳಿತೆರೆಗೆ ಯಶವಂತ್ ಎಂಟ್ರಿ

    ‘ವಿಕಿಪೀಡಿಯ’ ಹೆಸರಿನಲ್ಲೊಂದು ಸಿನಿಮಾ: ಕಿರುತೆರೆಯಿಂದ ಬೆಳ್ಳಿತೆರೆಗೆ ಯಶವಂತ್ ಎಂಟ್ರಿ

    ಮಾಹಿತಿಯ ಜ್ಞಾನಕೋಶ‌ ಅಂತಾಲೇ ಕರೆಸಿಕೊಳ್ಳುವ ಜಾಲತಾಣ ವಿಕಿಪೀಡಿಯ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೇ ವಿಕಿಪೀಡಿಯ ಎಂಬ ಹೆಸರಿನಲ್ಲಿ ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಗೆ ಸಜ್ಜಾಗಿದೆ.

    ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ‌ ಮೋಹಿನಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಯಶವಂತ್ ವಿಕಿಪೀಡಿಯ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದ್ದಾರೆ. ವಿಕಾಸ್ ಎಂಬ ಪಾತ್ರದಲ್ಲಿ ಯಶವಂತ್ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಆಶಿಕಾ ಸೋಮಶೇಖರ್ ನಟಿಸಿದ್ದಾರೆ. ಇದನ್ನೂ ಓದಿ:ಚಿಕ್ಕಣ್ಣನ ಮದುವೆ ಮುಂದಿನ ವರ್ಷ ಫಿಕ್ಸ್: ಕುಟುಂಬದ ಒತ್ತಡಕ್ಕೆ ಕೊನೆಗೂ ಮಣಿದ ನಟ

    ಈಗಾಗಲೇ ಮೋಷನ್ ಪೋಸ್ಟರ್ ಹಾಗೂ ತನು ಮನ ಹಾಡಿನ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ವಿಕಿಪೀಡಿಯ ಸಿನಿಮಾಗೆ ಸೋಮು ಹೊಯ್ಸಳ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಡ್ರಾಮಾ, ಎಮೋಷನಲ್, ಲವ್, ಸೆಂಟಿಮೆಂಟ್ ಎಲ್ಲದರ ಮಿಶ್ರಣ ವಿಕಿಪೀಡಿಯ ಚಿತ್ರಕ್ಕೆ ಚಿದಾನಂದ್ ಹೆಚ್ ಕೆ ಕ್ಯಾಮೆರಾ, ರಾಕೇಶ್ ಮತ್ತು ನಿಲೀಮ ರಾವ್ ಸಂಗೀತ, ರವಿಚಂದ್ರನ್ ಸಿ ಸಂಕಲನ ಸಿನಿಮಾಕ್ಕಿದೆ. ರಫ್ ಕಟ್ ಪ್ರೊಡಕ್ಷನ್ ನಡಿ ನಿರ್ಮಾಣವಾಗಿರುವ ಸಿನಿಮಾಗೆ ಯು/ಎ ಸರ್ಟಿಫಿಕೇಟ್ ಸಿಕ್ಕಿದ್ದು, ಶೀರ್ಘದಲ್ಲಿಯೇ ಚಿತ್ರ ತೆರೆಗೆ ಬರಲಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ಮೋದಿ ಜೊತೆಯ ಸಂವಾದಕ್ಕೆ ಗ್ರಾಮೀಣ ಪ್ರತಿಭೆ ವಿದ್ಯಾರ್ಥಿ ಆಯ್ಕೆ

    ಪ್ರಧಾನಿ ಮೋದಿ ಜೊತೆಯ ಸಂವಾದಕ್ಕೆ ಗ್ರಾಮೀಣ ಪ್ರತಿಭೆ ವಿದ್ಯಾರ್ಥಿ ಆಯ್ಕೆ

    ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಆತ್ಮಸ್ಥೆರ್ಯ ಹಾಗೂ ಪರೀಕ್ಷಾ ಭಯವನ್ನು ದೂರಗೊಳಿಸುವ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಗ್ರಾಮೀಣ ಪ್ರತಿಭೆ ವಿದ್ಯಾರ್ಥಿಯೊಬ್ಬ ಆಯ್ಕೆಯಾಗಿದ್ದಾನೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಗ್ರಾಮ ಭೈರನಾಯ್ಕನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ಯಶವಂತ್, ಈ ಸಂವಾದಕ್ಕೆ ಆಯ್ಕೆಯಾಗಿದ್ದಾನೆ. ಪರೀಕ್ಷೆಗಳ ಪ್ರಾಶಾಸ್ತ್ಯ ಮತ್ತು ಮಹತ್ವದ ಕುರಿತು ಯಶವಂತ ಬರೆದಿದ್ದ ಕನ್ನಡ ಪ್ರಬಂಧ ಪ್ರಧಾನಿ ನರೇಂದ್ರ ಮೋದಿಯವರ ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾಗುವಂತೆ ಮಾಡಿದೆ.

    ಶಾಲೆಯ ವಿದ್ಯಾರ್ಥಿ ಕನ್ನಡದಲ್ಲಿ ಬರೆದಿದ್ದ ಪ್ರಬಂಧವನ್ನು ಶಾಲೆಯ ಮುಖ್ಯ ಶಿಕ್ಷಕರು ಇಂಗ್ಲಿಷ್‍ನಲ್ಲಿ ತರ್ಜುಮೆ ಮಾಡಿ ಕಳುಹಿಸಿದ್ದರು. ಒಟ್ಟಾರೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಯ ಪರಿಶ್ರಮದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಯೊಬ್ಬ ಪ್ರಧಾನಿಗಳ ಸಂವಾದಕ್ಕೆ ಆಯ್ಕೆಯಾಗಿದ್ದಾನೆ. ದೆಹಲಿಗೆ ತೆರಳಲು ಶಿಕ್ಷಕರು ಎಲ್ಲಾ ತಯಾರಿಯನ್ನು ನಡೆಸುತ್ತಿದ್ದಾರೆ.

    ಯಶವಂತ್ ಕಡು ಬಡತನದ ಕುಟುಂಬದ ವಿದ್ಯಾರ್ಥಿ. ತಂದೆ ಡ್ರೈವಿಂಗ್ ಕೆಲಸ ಮಾಡುತ್ತಿದ್ದರೆ, ತಾಯಿ ಮನೆ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಶಿಕ್ಷಕರ ಹಾಗೂ ಸಹಪಾಠಿಗಳ ಸಹಯೋಗದಿಂದ ಶಿಕ್ಷಣದ ಆಸಕ್ತಿಗೆ ಇಂದು ಒಂದು ದಾರಿ ಸಿಕ್ಕ ಆಗಿದೆ. ಈ ಖುಷಿಯಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಯಶವಂತ್‍ಗೆ ಸನ್ಮಾನಿಸಿ ಗೌರವಿಸಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಯಶವಂತ್ ಸಂತಸವನ್ನು ವ್ಯಕ್ತಪಡಿಸಿ, ಈ ಪರಿಶ್ರಮಕ್ಕೆ ನನ್ನ ತಂದೆ-ತಾಯಿ, ಪರಿಶ್ರಮ, ಮುಖ್ಯವಾಗಿ ನನ್ನ ಮೆಚ್ಚಿನ ಗುರುಗಳು, ಹೀಗಾಗಿ ಪ್ರಧಾನಿಯವರ ಕಾರ್ಯಕ್ರಮ ಹಾಗೂ ಅವರನ್ನು ನೇರವಾಗಿ ನೋಡುವ ಅವಕಾಶ ಸಿಕ್ಕಿದೆ. ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾನೆ.