Tag: ಯಶಸ್ವಿನಿ ಆನೆ

  • ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಾಜಮಾರ್ಗದಲ್ಲಿ ಭಕ್ತ ಸಾಗರ

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಾಜಮಾರ್ಗದಲ್ಲಿ ಭಕ್ತ ಸಾಗರ

    ಮಂಗಳೂರು: ದಕ್ಷಿಣ ಕನ್ನಡದ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ದೇವಳದ ರಾಜಮಾರ್ಗದಲ್ಲಿ ಯಶಸ್ವಿನಿ ಆನೆಯೊಂದಿಗೆ ರಥೋತ್ಸವ ಸಂಭ್ರಮ ನಡೆಯಿತು.

    ಕೋಟ್ಯಂತರ ಭಕ್ತರ ಆರಾಧ್ಯದೈವ ಸುಬ್ರಹ್ಮಣ್ಯ ಕೊನೆಯ ಬಾರಿಗೆ 400 ವರ್ಷಗಳ ಹಿಂದಿನ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದಾನೆ. ಈ ಅಪರೂಪದ ಕ್ಷಣಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಿದ್ದಾರೆ. ಮುಂಜಾನೆ 6.41 ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು.

    ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಮೊದಲು ಉಮಾಮಹೇಶ್ವರ ದೇವರ ಸಣ್ಣ ರಥ ಮುಂದೆ ಸಾಗಿದರೆ, ಅದರ ಹಿಂದೆ ಸುಬ್ರಹ್ಮಣ್ಯ ಬ್ರಹ್ಮರಥ ದಲ್ಲಿ ಸಾಗಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ. 400 ವರ್ಷಕ್ಕೂ ಹಳೆಯ ಬ್ರಹ್ಮರಥದಲ್ಲಿ ಕೊನೆಯ ಬಾರಿ ರಥೋತ್ಸವ ನಡೆದಿದ್ದು, ಮುಂದಿನ ಏಪ್ರಿಲ್ ತಿಂಗಳಿನಲ್ಲಿ ಉದ್ಯಮಿ ಮುತ್ತಪ್ಪ ರೈ ಎರಡು ಕೋಟಿ ವೆಚ್ಚದಲ್ಲಿ ನೂತನ ಬ್ರಹ್ಮರಥ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಲಿದ್ದಾರೆ.

    ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv