Tag: ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್

  • ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ನೀಡಿದೆ: ಸಿಎಂ

    ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ನೀಡಿದೆ: ಸಿಎಂ

    ಬೆಂಗಳೂರು: ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಎಕ್ಸ್ ಖಾತೆಯಲ್ಲಿ ಗೆಲುವಿನ ಸಂಭ್ರಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

    ಸಿಎಂ ಪೋಸ್ಟ್‌ನಲ್ಲಿ ಏನಿದೆ?
    ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು (Sanduru) ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.

    ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ.ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಇದನ್ನೂ ಓದಿ: ಸಿಪಿವೈ ಶಾಸಕರಾಗಿರಬಹುದು, ಬಿಜೆಪಿಯಲ್ಲೇ ಇದ್ದಿದ್ರೆ ಲೀಡರ್ ಆಗಿರುತ್ತಿದ್ರು: ಅಶ್ವಥ್ ನಾರಾಯಣ್

    ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಇದನ್ನೂ ಓದಿ: ಯಡಿಯೂರಪ್ಪ, ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ: ಯತ್ನಾಳ್‌ ವಾಗ್ದಾಳಿ

    ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ & ಗ್ಯಾಂಗ್ ವಿರುದ್ಧ 1200 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ

  • ಸ್ವಂತ ಕಾರಿಲ್ಲ, ಸಾಲ ಇಲ್ಲ – ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಆಸ್ತಿ ಎಷ್ಟಿದೆ?

    ಸ್ವಂತ ಕಾರಿಲ್ಲ, ಸಾಲ ಇಲ್ಲ – ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಆಸ್ತಿ ಎಷ್ಟಿದೆ?

    ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌ ತಮ್ಮ ಆಸ್ತಿ ವಿವರ ಘೋಷಿಸಿಕೊಂಡಿದ್ದಾರೆ.

    ಚುನಾವಣಾಧಿಕಾರಿಗೆ ನಾಮಪತ್ರದೊಂದಿಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕುಟುಂಬದ ಆಸ್ತಿ ಘೋಷಣೆ ಮಾಡಿದ್ದಾರೆ. ಯಾಸಿರ್‌ ಅವರು ಒಟ್ಟು 3.04 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. 85 ಸಾವಿರ ನಗದು, 4.27 ಲಕ್ಷ ಮೌಲ್ಯದ 60 ಗ್ರಾಂ ಚಿನ್ನಾಭರಣ ಸೇರಿದಂತೆ 6.02 ಲಕ್ಷ ರೂ. ಮೌಲ್ಯದ ಚರಾಸ್ತಿಯಿದೆ.

    ಹಾನಗಲ್ಲ ತಾಲೂಕು ಬಾದಾಮಗಟ್ಟಿ, ಬೊಮ್ಮನಹಳ್ಳಿ, ನೆಲ್ಲಿಕೊಪ್ಪ, ಶಿಗ್ಗಾಂವಿ ತಾಲೂಕು ಹುಲಗೂರು ಗ್ರಾಮಗಳಲ್ಲಿ 14.35 ಲಕ್ಷ ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ 10,098 ಚದರಡಿ ವಿಸ್ತೀರ್ಣದ 28 ಲಕ್ಷ ಮೌಲ್ಯದ ಕೃಷಿಯೇತರ ಭೂಮಿ ಸೇರಿದಂತೆ 42.35 ಲಕ್ಷ ಮೌಲ್ಯದ ಸ್ಥಿರಾಸ್ತಿಯಿದೆ.

    ಕಾಂಗ್ರೆಸ್‌ ಅಭ್ಯರ್ಥಿ ಬಳಿ ಯಾವುದೇ ವಾಹನಗಳಿಲ್ಲ. ಸಾಲವನ್ನೂ ಹೊಂದಿಲ್ಲ. ಯಾಸಿರ್‌ ಅವರ ಪತ್ನಿ ಬಳಿ 3 ಲಕ್ಷ ನಗದು, 35.60 ಲಕ್ಷ ಮೌಲ್ಯದ 500 ಗ್ರಾಂ ಚಿನ್ನಾಭರಣ ಸೇರಿದಂತೆ 38.86 ಲಕ್ಷ ಮೌಲ್ಯದ ಚರಾಸ್ತಿಯಿದೆ. ಇವರು 24 ಲಕ್ಷ ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. ಇವರ ಬಳಿ 1.93 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಸೇರಿದಂತೆ 2.17 ಕೋಟಿ ಮೌಲ್ಯದ ಸ್ಥಿರಾಸ್ತಿಯಿದೆ. ದಂಪತಿಗೆ ಮೂವರು ಗಂಡು ಮಕ್ಕಳು ಮತ್ತು ಒಬ್ಬಳು ಹೆಣ್ಣುಮಗಳಿದ್ದಾಳೆ. ಅವರ ಹೆಸರಿನಲ್ಲಿ ಯಾವುದೇ ಆಸ್ತಿಯಿಲ್ಲ.