Tag: ಯುಎಪಿಎ

  • ಕಾಶ್ಮೀರದಲ್ಲಿ ದೇಶವಿರೋಧಿ ಕೃತ್ಯಕ್ಕೆ ಸಾಥ್‌ – ತೆಹ್ರೀಕ್-ಎ-ಹುರಿಯತ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

    ಕಾಶ್ಮೀರದಲ್ಲಿ ದೇಶವಿರೋಧಿ ಕೃತ್ಯಕ್ಕೆ ಸಾಥ್‌ – ತೆಹ್ರೀಕ್-ಎ-ಹುರಿಯತ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

    ನವದೆಹಲಿ: ಜಮ್ಮು ಕಾಶ್ಮೀರದ (Jammu Kashmir) ತೆಹ್ರೀಕ್-ಎ-ಹುರಿಯತ್ (Tehreek-e-Hurriyat)  ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

    ಈ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿ ಕಾನೂನುಬಾಹಿರ ಸಂಘಟನೆ ಎಂದು ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

    ಕೇಂದ್ರ ಸರ್ಕಾರದ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ ಅಮಿತ್‌ ಶಾ ಅವರು,ತೆಹ್ರೀಕ್-ಎ-ಹುರಿಯತ್ ಸಂಘಟನೆ ಭಾರತದಿಂದ ಜಮ್ಮು ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಈ ಗುಂಪು ಭಾರತ-ವಿರೋಧಿ ಪ್ರಚಾರವನ್ನು ಹರಡುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಿ, ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

    ಪ್ರಧಾನಿ ನರೇಂದ್ರಮೋದಿ ಅವರು ಭಯೋತ್ಪಾದನೆಯ ವಿರುದ್ಧ ಶೂನ್ಯ-ಸಹಿಷ್ಣು ನೀತಿಯನ್ನು ಪಾಲಿಸುತ್ತಿದ್ದಾರೆ. ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ತಕ್ಷಣವೇ ತಡೆಯುತ್ತೇವೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಜ.14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ಮೋದಿ ಕರೆ

    ಭಾನುವಾರ ಗೃಹ ಸಚಿವಾಲಯದ ಗೆಜೆಟೆಡ್ ಅಧಿಸೂಚನೆಯಲ್ಲಿ ಹೊರಡಿಸಿ ಈ ನಿರ್ಧಾರ ಕೈಗೊಂಡಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ನಿರಂತರ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಪಾಕಿಸ್ತಾನ ಮತ್ತು ವಿವಿಧ ಇತರ ಮೂಲಗಳಿಂದ ಹಣವನ್ನು ತೆಹ್ರೀಕ್-ಎ-ಹುರಿಯತ್ ಸಂಘಟನೆಯ ನಾಯಕರು ಮತ್ತು ಸದಸ್ಯರು ತೊಡಗಿಸಿಕೊಂಡಿದ್ದಾರೆ. ಈ ಸಂಘಟನೆಯ ಸದಸ್ಯರು ಸಾಂವಿಧಾನಿಕ ಸ್ಥಾಪನೆಗೆ ಸಂಪೂರ್ಣ ಅಗೌರವವನ್ನು ತೋರಿಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಸೈಯ್ಯದ್‌ ಶಾ ಗಿಲಾನಿ (Syed Ali Shah Geelani)ಅವರು ಆಗಸ್ಟ್‌ 07, 2004ರಂದು ತೆಹ್ರೀಕ್-ಎ-ಹುರಿಯತ್ ಸಂಘಟನೆ ಸ್ಥಾಪಿಸಿದ್ದರು.

  • ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

    ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

    ನವದೆಹಲಿ: ಸಂಸತ್‌ನಲ್ಲಿ (Parliament) ಬುಧವಾರ ನಡೆದ ಭದ್ರತಾ ಉಲ್ಲಂಘನೆಗೆ (Security Breach) ಸಂಬಂಧಿಸಿಂತೆ ಒಟ್ಟು 5 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಲೋಕಸಭೆಯಲ್ಲಿ (Lok Sabha) ನಡೆದ ಸ್ಮೋಕ್ ಬಾಂಬ್ ಪ್ರಕರಣದಲ್ಲಿ ಒಟ್ಟು 6 ಮಂದಿ ಭಾಗಿಯಾಗಿದ್ದು, ಮೈಸೂರಿನ ನಿವಾಸಿ ಮನೋರಂಜನ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ. ಮೈಸೂರಿನ ವಿಜಯನಗರ ನಿವಾಸಿ ಎಂಜಿನಿಯರಿಂಗ್ ಪದವೀಧರ ಮನೋರಂಜನ್, ಲಕ್ನೋದ ಸಾಗರ್ ಶರ್ಮಾ, ಹರಿಯಾಣದ ಹಿಸಾರ್‌ನ ನೀಲಂ, ಮಹಾರಾಷ್ಟ್ರದ ಲಾತೂರ್‌ನ ಅಮೋಲ್ ಶಿಂಧೆ ಹಾಗೂ ವಿಶಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿಗಾಗಿ ಶೋಧ ಮುಂದುವರೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆದೇಶಿಸಿದ್ದಾರೆ. ಇದನ್ನೂ ಓದಿ: ಅಲಹಾಬಾದ್ ವಿವಿ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟಗೊಂಡು ವಿದ್ಯಾರ್ಥಿಗೆ ಗಾಯ

    ಘಟನೆಯಲ್ಲಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಸಂಸತ್‌ನ ಒಳಗೆ ಹಳದಿ ಸ್ಮೋಕ್ ಬಾಂಬ್ ಸಿಡಿಸಿದರೆ ಸಂಸತ್ತಿನ ಹೊರಗೆ ನೀಲಂ ಮತ್ತು ಅಮೋಲ್ ಶಿಂಧೆ ಕೆಂಪು ಮತ್ತು ಹಳದಿ ಸ್ಮೋಕ್ ಬಾಂಬ್ ಸಿಡಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ವಿಶಾಲ್ ಮತ್ತು ಲಲಿತ್ ಝಾ ಗುರ್ಗಾಂವ್ ಮೂಲದವರು. ಲಲಿತ್ ಝಾ ತಮ್ಮ ಮೊಬೈಲ್‌ನಲ್ಲಿ ಘಟನೆಯ ದೃಶ್ಯಾವಳಿಗಳನ್ನು ಸೆರೆಹಿಡಿದು ಮೊಬೈಲ್ ಜೊತೆಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಇನ್ನು ವಿಶಾಲ್ ಇತರೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: 45 ನಿಮಿಷಗಳ ಪಾಸ್‌ ಪಡೆದು 2 ಗಂಟೆ ಗ್ಯಾಲರಿಯಲ್ಲಿ ಕುಳಿತಿದ್ರು!

    ದೆಹಲಿ ಪೊಲೀಸರ ಈವರೆಗಿನ ತನಿಖೆಯಲ್ಲಿ ಎಲ್ಲಾ ಆರೋಪಿಗಳು ಭಗತ್ ಸಿಂಗ್ ಫ್ಯಾನ್ಸ್ ಕ್ಲಬ್ ಎಂಬ ಗ್ರೂಪ್‌ನಲ್ಲಿ ಸಂಪರ್ಕ ಹೊಂದಿದ್ದು, ಒಂದೂವರೆ ವರ್ಷಗಳ ಹಿಂದೆಯೇ ಮೈಸೂರಿನಲ್ಲಿ ಭೇಟಿಯಾಗಿ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

    ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದಂತಹ ಸಮಸ್ಯೆಯಿಂದ ನಾವು ಬೇಸತ್ತಿದ್ದೇವೆ. ಈ ಕಾರಣಕ್ಕೆ ಕೃತ್ಯವನ್ನು ನಡೆಸಿದ್ದೇವೆ ಎಂದು ಆರೋಪಿ ಅಮೋಲ್ ಶಿಂಧೆ ವಿಚಾರಣಾ ಸಮಯದಲ್ಲಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ. ಇನ್ನೋರ್ವ ಆರೋಪಿ ಮಹಿಳೆ ನೀಲಂ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಭಾರತ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ನಾವು ನಮ್ಮ ಹಕ್ಕುಗಳಿಗೆ ಧ್ವನಿ ಎತ್ತಿದಾಗ ನಮ್ಮನ್ನು ಜೈಲಿಗೆ ಹಾಕುತ್ತಾರೆ. ಹೀಗೆ ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಯಾವುದೇ ಸಂಸ್ಥೆಗೆ ಸೇರಿಲ್ಲ. ನಾವು ನಿರುದ್ಯೋಗಿಗಳು ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

  • ಭಾರತ ಸೋತಿದ್ದಕ್ಕೆ ಸಂಭ್ರಮಾಚರಣೆ- 7 ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ UAPA ಅಡಿ ಕೇಸ್‌

    ಭಾರತ ಸೋತಿದ್ದಕ್ಕೆ ಸಂಭ್ರಮಾಚರಣೆ- 7 ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ UAPA ಅಡಿ ಕೇಸ್‌

    ಶ್ರೀನಗರ: ವಿಶ್ವಕಪ್‌ ಕ್ರಿಕೆಟ್‌ನಲ್ಲಿ (World Cup Cricket) ಭಾರತ ಸೋತ ನಂತರ ಸಂಭ್ರಮಾಚರಣೆ ನಡೆಸಿದ 7 ಮಂದಿ ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ (Kashmir University Students) ವಿರುದ್ಧ ಯುಎಪಿಎ (UAPA) ಅಡಿ ಕೇಸ್‌ ದಾಖಲಾಗಿದೆ.

    ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ 7 ಮಂದಿ ವಿದ್ಯಾರ್ಥಿಗಳು ಭಾರತ ಸೋತ ನಂತರ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ್ದರು. ವಿಶ್ವವಿದ್ಯಾನಿಲಯದಲ್ಲಿ ಬಿವಿಎಸ್‌ಸಿ ಕೋರ್ಸ್ ಓದುತ್ತಿರುವ ಪಂಜಾಬ್ ನಿವಾಸಿ ಸಚಿನ್ ಬೈನ್ಸ್ ಅವರ ದೂರಿನ ಮೇರೆಗೆ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: 50 ವರ್ಷ ದಾಟಿದೆ, ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು – ರಾಗಾ ಬಗ್ಗೆ ಓವೈಸಿ ವ್ಯಂಗ್ಯ

     

    ಆಗಸ್ಟ್ 17ರಂದು ಭಾರತ ಸೋತ ನಂತರ ಪಾಕ್‌ ಪರ ಘೋಷಣೆ ಕೂಗಿದರು. ನಮ್ಮ ದೇಶದ ಬೆಂಬಲಿಗ ಎಂದು ಹೇಳಿ ನನ್ನನ್ನು ಗುರಿಯಾಗಿಸಿ ನಿಂದಿಸಲು ಪ್ರಾರಂಭಿಸಿದರು. ಪ್ರಶ್ನೆ ಮಾಡಿದ್ದಕ್ಕೆ ಸುಮ್ಮನಿರುವಂತೆ ಹೇಳಿದರು. ಸುಮ್ಮನಿರದಿದ್ದರೆ ಗುಂಡಿಕ್ಕಿ ಕೊಲ್ಲುತ್ತೇವೆ ಎಂದು ಬೆದರಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಕಾಶ್ಮೀರ ಮೂಲದ ಏಳು ವಿದ್ಯಾರ್ಥಿಗಳ ಮೇಲೆ ಯುಎಪಿಎ ಸೆಕ್ಷನ್ 13 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 ಮತ್ತು 506 ಅಡಿಯಲ್ಲಿ ಗಂಡರ್‌ಬಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

     

  • ದೇಶದಲ್ಲಿ ಫಸ್ಟ್‌ – ಶಂಕಿತ ಉಗ್ರರ ಕಾಲಿಗೆ ಜಿಪಿಎಸ್‌ ಬಳೆ

    ದೇಶದಲ್ಲಿ ಫಸ್ಟ್‌ – ಶಂಕಿತ ಉಗ್ರರ ಕಾಲಿಗೆ ಜಿಪಿಎಸ್‌ ಬಳೆ

    ಶ್ರೀನಗರ: ಜಾಮೀನಿನ (Bail) ಮೇಲೆ ಬಿಡುಗಡೆಯಾದ ಶಂಕಿತ ಉಗ್ರರ ಮೇಲೆ ನಿಗಾ ಇಡಲು ಅವರ ಕಾಲಿಗೆ ಜಿಪಿಎಸ್ ಆಧಾರಿತ ಬಳೆಯನ್ನು (GPS Anklet) ಜಮ್ಮು ಕಾಶ್ಮೀರ ಪೊಲೀಸರು (Jammu Kashmir) ಪರಿಚಯಿಸಿದ್ದಾರೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿ ಬಂಧನಕ್ಕೆ ಒಳಗಾದ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ ದೇಶದ ಮೊದಲ ಪೊಲೀಸ್‌ ಪಡೆ ಎಂಬ ಹೆಗ್ಗಳಿಗೆ ಜಮ್ಮು ಕಾಶ್ಮೀರ ಪೊಲೀಸರು ಪಾತ್ರರಾಗಿದ್ದಾರೆ.

    ಜಿಪಿಎಸ್‌ ಟ್ರ್ಯಾಕರ್ ಆಂಕ್ಲೆಟ್ ವ್ಯಕ್ತಿಯ ಪಾದದ ಸುತ್ತಲೂ ಧರಿಸಬಹುದಾದ ಸಾಧನವಾಗಿದ್ದು, ಮೇಲ್ವಿಚಾರಣೆ ಮಾಡಲು ಮತ್ತು ಅವರ ಚಲನೆಯನ್ನು ಟ್ರ್ಯಾಕ್ ಮಾಡುತ್ತದೆ. ಜಾಮೀನು, ಪೆರೋಲ್ ಮತ್ತು ಗೃಹಬಂಧನದಲ್ಲಿರುವ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಲು ಮತ್ತು ಜೈಲುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಈ ಸಾಧನವನ್ನು ಈಗಾಗಲೇ ಅಮೆರಿಕ, ಯುನೈಟೆಡ್‌ ಕಿಂಗ್‌ಡಮ್‌, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಬಳಸಲಾಗುತ್ತಿದೆ.  ಇದನ್ನೂ ಓದಿ: ಕಾಂಗ್ರೆಸ್‍ನವರು ಮಹದೇವನ ಹೆಸರನ್ನೂ ಬಿಟ್ಟಿಲ್ಲ- ಮೋದಿ ವಾಗ್ದಾಳಿ

    ಹಲವು ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಗುಲಾಂ ಮೊಹಮ್ಮದ್‌ ಭಟ್‌ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಈತನ ಜಾಮೀನು ಅರ್ಜಿಯನ್ನು ಆಲಿಸಿದ ಜಮ್ಮು ಕಾಶ್ಮೀರದಲ್ಲಿರುವ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ (NIA) ಪೊಲೀಸರಿಗೆ ಜಿಪಿಎಸ್ ಆಧಾರಿತ ಸಾಧನ ಅಳವಡಿಸಲು ಸೂಚಿಸಿ ಜಾಮೀನು ಮಂಜೂರು ಮಾಡಿತು. ಪ್ರಸ್ತುತ ಈ ಸಾಧನವನ್ನು ದೇಶದ್ರೋಹ ಪ್ರಕರಣದಡಿ ಬಂಧಿತರಾಗುವ ಆರೋಪಿಗಳಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ.

    ಆರೋಪಿ ಗುಲಾಂ ಮೊಹಮ್ಮದ್‌ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್‌ನ ಆಜ್ಞೆಯ ಮೇರೆಗೆ ಭಯೋತ್ಪಾದನಾ ಸಂಘಟನೆಗೆ ಹಣಕಾಸಿನ ನೆರವು ನೀಡುವಲ್ಲಿ ತೊಡಗಿಸಿಕೊಂಡಿದ್ದ. ಉಗ್ರರಿಗೆ 2.5 ಲಕ್ಷ ರೂ. ಹಣವನ್ನು ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಆತನನ್ನು ಬಂಧಿಸಲಾಗಿತ್ತು.

     

  • ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್

    ದಾಂತೇವಾಡ ಸ್ಫೋಟ ಪ್ರಕರಣ- ಮಾಸ್ಟರ್‌ಮೈಂಡ್‌ ಫೋಟೋ ರಿಲೀಸ್

    – ಸಹಚರರ ಮಾಹಿತಿ ಕೊಟ್ಟವ್ರಿಗೆ ನಗದು ಬಹುಮಾನ ಘೋಷಣೆ

    ರೈಪುರ್: ದಾಂತೇವಾಡ (Dantewada) ಸ್ಫೋಟದ ತನಿಖೆ ಕೈಗೊಂಡಿರುವ ಬಸ್ತಾರ್ ಪೊಲೀಸರು ಕೃತ್ಯದ ಮಾಸ್ಟರ್‌ಮೈಂಡ್‌ ( Mastermind) ಫೋಟೋ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಆತನ ಹಾಗೂ ಸಹಚರರ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಪೊಲೀಸ್ ಇಲಾಖೆ ಘೋಷಿಸಿದೆ.

    ಸ್ಫೋಟದ ಮಾಸ್ಟರ್ ಮೈಂಡ್‍ನನ್ನು ಜಗದೀಶ್ ಎಂದು ಗುರುತಿಸಲಾಗಿದೆ. ಜಗದೀಶ್‍ನ ಪತ್ನಿ ಸುಕ್ಮಾ ಜಿಲ್ಲೆಯ ಹೇಮ್ಲಾ ಕೂಡ ನಕ್ಸಲ್ ಸಂಘಟನೆಯ ದರ್ಭಾ ವಿಭಾಗದಲ್ಲಿ ಕಮಾಂಡರ್ ಆಗಿದ್ದಾಳೆ. ಅಲ್ಲದೇ ಜಗದೀಶ್‍ನ ಮಾವ ವಿನೋದ್ ಹೇಮ್ಲಾ, ಕಾಂಗೇರ್ ಘಾಟಿ ಪ್ರದೇಶದ ನಕ್ಸಲ್ ಸಮಿತಿಯ ಉಸ್ತುವಾರಿಯಾಗಿ ಸಕ್ರಿಯರಾಗಿದ್ದಾನೆ. ಗುಪ್ತಚರ ಮಾಹಿತಿಯ ಪ್ರಕಾರ ದರ್ಭಾ (Darbha) ವಿಭಾಗದ ಸಿಪಿಐ (CPI Maoist) ಸ್ಫೋಟದಲ್ಲಿ ಭಾಗಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್‍ಖೈದಾ ಜೊತೆ ನಂಟು ಶಂಕೆ – ಶಂಕಿತ ಭಯೋತ್ಪಾದಕನ ಸೆರೆ

    10 ಡಿಎಫ್‍ಜಿ (District Reserve Guard) ಸಿಬ್ಬಂದಿ ಮತ್ತು ಚಾಲಕನ ಜೀವವನ್ನು ಬಲಿ ಪಡೆದ ಸುಧಾರಿತ ಸ್ಫೋಟಕವನ್ನು (IED) ಎರಡು ತಿಂಗಳ ಹಿಂದೆಯೇ ಭೂಮಿಯಲ್ಲಿ ಹುದುಗಿಸಿಟ್ಟಿರುವ ಕುರುಹುಗಳಿವೆ. ಫಾಕ್ಸ್‌ಹೋಲ್‌ ತಂತ್ರಜ್ಞಾನವನ್ನು (Foxhole Mechanism) ಬಳಸಿ ಸುರಂಗ ತೆಗೆದು ಇರಿಸಿದ್ದರು. ಇದರಿಂದ ಅದು ಪತ್ತೆಯಾಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗುಪ್ತಚರ ಮಾಹಿತಿಯ ಆಧಾರದ ಮೇಲೆ ಚೈತು, ದೇವಾ, ಮಂಗ್ಟು, ರಾನ್ಸಾಯಿ, ಜೈಲಾಲ್, ಬಮನ್, ಸೋಮ, ರಾಕೇಶ್, ಭೀಮಾ ಮತ್ತು ಇತರ ಮಾವೋವಾದಿಗಳ ವಿರುದ್ಧ ಸೆಕ್ಷನ್ 147 ಗಲಭೆ, 149 ಕಾನೂನು ಬಾಹಿರ ಚಟುವಟಿಕೆ, 307 ಕೊಲೆ ಯತ್ನ, 302 ಕೊಲೆ ಅಲ್ಲದೆ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಯುಎಪಿಎ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಛತ್ತೀಸ್‍ಗಢದ (Chhattisgarh) ದಾಂತೇವಾಡದಲ್ಲಿ ಜಿಲ್ಲಾ ಮೀಸಲು ಪಡೆ ಸಿಬ್ಬಂದಿಯ ಮೇಲೆ ಮಾವೋವಾದಿಗಳ ದಾಳಿಯ ನಂತರದ ಕ್ಷಣಗಳನ್ನು ತೋರಿಸುವ ವೀಡಿಯೋವೊಂದು ಪತ್ತೆಯಾಗಿದೆ. ಇದರಲ್ಲಿ ಮಾವೋವಾದಿಯೊಬ್ಬ ಪೊಲೀಸರ ಮೇಲೆ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏ.26 ರಂದು ಛತ್ತೀಸ್‍ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ್ದ ಐಇಡಿ ಸ್ಫೋಟದಲ್ಲಿ 10 ಜಿಲ್ಲಾ ಮೀಸಲು ಪಡೆಯ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದ್ದರು. ಇದನ್ನೂ ಓದಿ: ನಕ್ಸಲರ ಅಟ್ಟಹಾಸ- IED ಬ್ಲಾಸ್ಟ್‌ಗೆ 11 ಯೋಧರು ಹುತಾತ್ಮ

  • ಪಿಎಫ್ಐ ಬ್ಯಾನ್‌ – ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

    ಪಿಎಫ್ಐ ಬ್ಯಾನ್‌ – ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

    ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(UAPA) ಅಡಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಹೈಕೋರ್ಟ್‌(High Court) ತೀರ್ಪು ಕಾಯ್ದಿರಿಸಿದೆ.

    ಕರ್ನಾಟಕದ ಪಿಎಫ್ಐ ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ. ತಕ್ಷಣ ನಿಷೇಧಕ್ಕೆ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿದ್ದರು. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ- ಪತಿಯನ್ನು ತುಂಡರಿಸಿ ಫ್ರಿಜ್‌ನಲ್ಲಿಟ್ಟ ಪತ್ನಿ!

    ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ಪಿಎಫ್ಐ ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆ ನಡೆಯುತ್ತಿದ್ದು, ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಸಂಘಟನೆಯ ಕಾರ್ಯಕರ್ತರು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸಕಾರಣವಾಗಿಯೇ ಪಿಎಫ್ಐ ನಿರ್ಬಂಧಿಸಲಾಗಿದೆ ಎಂದು ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • PFI ಹೆಸರಲ್ಲಿ ಸಭೆ ನಡೆಸಿದ್ರೆ ಬೀಳುತ್ತೆ ಕೇಸ್‌- ಶಂಕೆ ಬಂದರೆ ಅರೆಸ್ಟ್‌

    PFI ಹೆಸರಲ್ಲಿ ಸಭೆ ನಡೆಸಿದ್ರೆ ಬೀಳುತ್ತೆ ಕೇಸ್‌- ಶಂಕೆ ಬಂದರೆ ಅರೆಸ್ಟ್‌

    ಬೆಂಗಳೂರು: ಇನ್ನು ಮುಂದೆ ದೇಶದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಸಂಘಟನೆ ಹೆಸರನ್ನು ಬಳಸಿಕೊಂಡು ಯಾವುದೇ ಕೆಲಸ ಮಾಡುವಂತಿಲ್ಲ.

    ಸಂಘಟನೆಯ ಉದ್ದೇಶವೇ ಕಾನೂನು ಬಾಹಿರ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಕೃತವಾಗಿ ತಿಳಿಸಿದ ಹಿನ್ನೆಲೆಯಲ್ಲಿ ಪಿಎಫ್‌ಐ ಅಡಿ ಏನೇ ಕೆಲಸ ಮಾಡಿದರೂ ಕಾನೂನುಬಾಹಿರ ಚಟುವಟಿಕೆಗಳ (ನಿರ್ಬಂಧ) ಕಾಯ್ದೆ (UAPA)ಅಡಿ ಪ್ರಕರಣ ದಾಖಲಾಗುತ್ತದೆ.

    ಯಾವ ಹೊಸ ಕಾರ್ಯಕರ್ತರೂ ಈ ಸಂಘಟನೆಯನ್ನು ಸೇರುವಂತಿಲ್ಲ. ಹಾಗೇನಾದರೂ ಸಂಘಟನೆಗೆ ಸೇರುವ ಪ್ರಯತ್ನ ಮಾಡಿದರೆ ಅವರ ವಿರುದ್ಧ ಯುಎಪಿಎ ಅಡಿ ಕೇಸ್‌ ಹಾಕಿ ಬಂಧನ ಮಾಡಲಾಗುತ್ತದೆ. ಇದನ್ನೂ ಓದಿ: ಸಂಪೂರ್ಣ ನಿಷೇಧವಾಗುತ್ತಾ PFI – ಕೇಂದ್ರ ಸರ್ಕಾರದ ಮುಂದಿನ ಪ್ಲ್ಯಾನ್ ಏನು?

    ಈಗಾಗಲೇ ಸಂಘಟನೆ ಸೇರಿರುವ ಉಳಿದ ಮುಖಂಡರು ಪಿಎಫ್‌ಐ ಹೆಸರಲ್ಲಿ ಯಾವುದೇ ಕಾರ್ಯಕ್ರಮ, ಪ್ರತಿಭಟನೆ, ಹಣ ಸಂಗ್ರಹಣೆ ಮಾಡುವಂತಿಲ್ಲ. ಪಿಎಫ್‌ಐ ಹೆಸರೇಳಿದರೆ ಅವರ ವಿರುದ್ಧ ಕೇಸ್‌ ಹಾಕಲಾಗುತ್ತದೆ. ಪಿಎಫ್ಐ ಹೆಸರಲ್ಲಿ ಮನೆಯಲ್ಲಿ ನಾಲ್ಕು ಜನ ಸಭೆ ಮಾಡಿದರೂ ಕೇಸ್‌ ದಾಖಲಾಗುತ್ತದೆ.


    ಪಿಎಫ್ಐಗೆ ಸೇರಿದ ಬ್ಯಾಂಕುಗಳ ಈಗಾಗಲೇ ಜಪ್ತಿಯಾಗಿದ್ದು, ಕಚೇರಿಗಳಿಗೆ ಬೀಗಮುದ್ರೆ ಬೀಳಲಿದೆ. ಸಂಘಟನೆ ಹೆಸರಿನಲ್ಲಿ ಅಥವಾ ಇನ್ಯಾವುದೇ ಸ್ವರೂಪದ ಕಾರ್ಯಕ್ರಮಗಳ ಮೇಲೆ ಪೊಲೀಸ್‌ ಮತ್ತು ಗುಪ್ತಚರ ಇಲಾಖೆ ನಿಗಾ ಇಡಲಿದೆ. ಯುಎಪಿಎ ಅಡಿಯಲ್ಲಿ ನಿಷೇಧ ಆದ್ದರಿಂದ ಸಂಘಟನೆಯಲ್ಲಿ ಗುರುತಿಸಿಕೊಂಡವರಿಗೆ ಸಂಕಷ್ಟವಾಗಲಿದೆ. ಸಣ್ಣ ಮಟ್ಟದ ಶಂಕೆ ಬಂದರೂ ಅವರು ಬಂಧನಕ್ಕೆ ಒಳಗಾಗಬಹುದು. ಸಂಘಟನೆಗೆ ಸಹಾನುಭೂತಿ ತೋರಿಸುವುದು ಬೆಂಬಲಿಸುವುದು ಕೂಡ ಅಪರಾಧ ಎಂದೇ ಪರಿಗಣಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಮತ್ತೆ ವಿಷ ಚಿಮ್ಮಿದ ಶಾಹಿದ್ ಅಫ್ರಿದಿ

    ಮತ್ತೆ ವಿಷ ಚಿಮ್ಮಿದ ಶಾಹಿದ್ ಅಫ್ರಿದಿ

    ಇಸ್ಲಾಮಾಬಾದ್: ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಪರ ಪಾಕಿಸ್ತಾನದ ಮಾಜಿ ಆಲ್‍ರೌಂಡರ್ ಆಟಗಾರ ಶಾಹಿದ್ ಅಫ್ರಿದಿ ಬ್ಯಾಟಿಂಗ್ ನಡೆಸಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಅಫ್ರಿದಿ, ಮಾನವ ಹಕ್ಕುಗಳ ದುರುಪಯೋಗದ ವಿರುದ್ಧ ವಿಮರ್ಶಾತ್ಮಕ ಧ್ವನಿಗಳನ್ನು ಮೌನಗೊಳಿಸಲು ಭಾರತದ ನಿರಂತರ ಪ್ರಯತ್ನಗಳು ನಿಷ್ಪ್ರಯೋಜಕವಾಗಿದೆ. ಯಾಸಿನ್ ಮಲಿಕ್ ವಿರುದ್ಧದ ಆರೋಪಗಳು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಅಡ್ಡಿಯಾಗದಿರಲಿ. ಕಾಶ್ಮೀರ ನಾಯಕರ ವಿರುದ್ಧ ಅನ್ಯಾಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ನಿಗಾ ಇಡುವಂತೆ ಯುಎನ್‍ (ವಿಶ್ವಸಂಸ್ಥೆ) ಗೆ ಒತ್ತಾಯಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳು ಯಾಸಿನ್ ಮಲಿಕ್ ಮೇಲೆ ದಾಖಲಾಗಿತ್ತು. ತನ್ನ ಮೇಲೆ ದಾಖಲಾದ ಆರೋಪಗಳ ಸಂಬಂಧ ಮೇ 10 ರಂದು ಕೋರ್ಟ್‍ನಲ್ಲಿ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಲಿಕ್‍ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಕೋರ್ಟ್‍ಗೆ ಮನವಿ ಮಾಡಿತ್ತು. ಈ ಬಗ್ಗೆ ವಿಚಾರಣೆ ಪೂರ್ಣಗೊಳಿಸಿ ಇಂದು ರಾಷ್ಟ್ರೀಯ ತನಿಖಾದಳದ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,00,000 ರೂ. ದಂಡ ವಿಧಿಸಿದೆ. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    https://twitter.com/SAfridiOfficial/status/1529357436733337600

    ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರಿ ಭದ್ರತೆಯಲ್ಲಿದ್ದ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಅಪರಾಧ ಸಂಚು) ಮತ್ತು 124 (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿದೆ.