Tag: ಯುಎಸ್‌ ಅಪಘಾತ

  • ಅಮೆರಿಕದಲ್ಲಿ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ದುರಂತ ಸಾವು

    ಅಮೆರಿಕದಲ್ಲಿ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ದುರಂತ ಸಾವು

    ವಾಷಿಂಗ್ಟನ್‌: ನ್ಯೂಯಾರ್ಕ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಕಾನ್ಸುಲೇಟ್ ಮಂಗಳವಾರ ತಿಳಿಸಿದೆ.

    ವಿದ್ಯಾರ್ಥಿಗಳನ್ನು 20 ವರ್ಷದ ಮಾನವ್ ಪಟೇಲ್ ಮತ್ತು 23 ವರ್ಷದ ಸೌರವ್ ಪ್ರಭಾಕರ್ ಎಂದು ಗುರುತಿಸಲಾಗಿದೆ ಎಂದು ಗುರುತಿಸಲಾಗಿದೆ.

    ಲ್ಯಾಂಕಾಸ್ಟರ್ ಕೌಂಟಿ ಕರೋನರ್ ಕಚೇರಿಯ ಪ್ರಕಾರ, ಮೇ 10 ರಂದು ಪೂರ್ವ ಕೊಕಾಲಿಕೊ ಟೌನ್‌ಶಿಪ್‌ನಲ್ಲಿ ಅಪಘಾತ ಸಂಭವಿಸಿದಾಗ ಪ್ರಭಾಕರ್ ಕಾರು ಚಾಲನೆ ಮಾಡುತ್ತಿದ್ದರು. ಪ್ರಭಾಕರ್ ಮತ್ತು ಪಟೇಲ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಮುಂದಿನ ಸೀಟಿನಲ್ಲಿ ಕುಳಿತಿದ್ದ ಮತ್ತೊಬ್ಬ ಪ್ರಯಾಣಿಕ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ವಾಹನವು ರಸ್ತೆಯಿಂದ ಹೊರಟು ಮರಕ್ಕೆ ಡಿಕ್ಕಿ ಹೊಡೆದು ನಂತರ ಸೇತುವೆಗೆ ಡಿಕ್ಕಿ ಹೊಡೆದಿರುವುದು ಕಂಡುಬಂದಿದೆ.

    ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳ ದುರಂತ ಸಾವಿಗೆ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ತೀವ್ರ ದುಃಖ ವ್ಯಕ್ತಪಡಿಸಿದೆ.

  • ಅಮೆರಿಕದಲ್ಲಿ ಭೀಕರ ಅಪಘಾತಕ್ಕೆ ಕೋಮಾ ಸ್ಥಿತಿಯಲ್ಲಿ ಭಾರತೀಯ ವಿದ್ಯಾರ್ಥಿನಿ

    ಅಮೆರಿಕದಲ್ಲಿ ಭೀಕರ ಅಪಘಾತಕ್ಕೆ ಕೋಮಾ ಸ್ಥಿತಿಯಲ್ಲಿ ಭಾರತೀಯ ವಿದ್ಯಾರ್ಥಿನಿ

    – ಭಾರತದ ತುರ್ತು ವೀಸಾ ಮನವಿಗೆ ಯುಎಸ್‌ ಒಪ್ಪಿಗೆ

    ಮುಂಬೈ: ಅಪಘಾತದಿಂದ ಕೋಮಾ ಸ್ಥಿತಿಯಲ್ಲಿರುವ ಭಾರತೀಯ ಮೂಲದ ವಿದ್ಯಾರ್ಥಿನಿಗೆ ತುರ್ತು ವೀಸಾ ನೀಡಲು ಅಮೆರಿಕ ಒಪ್ಪಿಗೆ ಸೂಚಿಸಿದೆ.

    ಇದೇ ಫೆ.14 ರಂದು ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 35 ವರ್ಷದ ನೀಲಂ ಶಿಂಧೆ ಸ್ಥಿತಿ ಗಂಭೀರವಾಗಿದೆ. ಕೋಮಾ ಸ್ಥಿತಿಯಲ್ಲಿರುವ ಆಕೆಯನ್ನು ಭಾರತಕ್ಕೆ ವಾಪಸ್‌ ಕರೆತರಲು ಮಹಾರಾಷ್ಟ್ರದ ಸತಾರದಲ್ಲಿರುವ ಆಕೆಯ ತಂದೆ ಅಂದಿನಿಂದ ವೀಸಾ ಪಡೆಯಲು ಪ್ರಯತ್ನಿಸುತ್ತಿದ್ದರು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

    ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನೀಲಂ ಶಿಂಧೆ ಅವರ ಎದೆ ಮತ್ತು ತಲೆ ಭಾಗಕ್ಕೆ ತೀವ್ರ ಪೆಟ್ಟಾಗಿತ್ತು. ಎರಡು ದಿನಗಳ ನಂತರ ಅಪಘಾತದ ಬಗ್ಗೆ ಅವರ ಕುಟುಂಬಕ್ಕೆ ತಿಳಿದುಬಂದಿದೆ. ಕುಟುಂಬದವರ ಪ್ರಕಾರ, ಆಸ್ಪತ್ರೆಯು ಅವರ ಮೆದುಳಿನ ಶಸ್ತ್ರಚಿಕಿತ್ಸೆಗೆ ಅನುಮತಿ ಕೋರಿದೆ ಎನ್ನಲಾಗಿದೆ.

    ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಪ್ರಯಾಣ ಪರವಾನಗಿಗಳನ್ನು ಸಾಮಾನ್ಯವಾಗಿ ತ್ವರಿತವಾಗಿ ನೀಡಲಾಗುತ್ತದೆ. ಆದರೆ, ಈ ಪ್ರಕರಣದಲ್ಲಿ ವಿಳಂಬಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ ಎಂದು ಮೂಲಗಳು ತಿಳಿಸಿವೆ.