Tag: ಯುಗಪುರುಷ

  • ಮಹಾತ್ಮ ಗಾಂಧಿ ‘ಮಹಾಪುರುಷ’, ಪ್ರಧಾನಿ ಮೋದಿ ‘ಯುಗಪುರುಷ’: ಉಪ ರಾಷ್ಟ್ರಪತಿ ಬಣ್ಣನೆ

    ಮಹಾತ್ಮ ಗಾಂಧಿ ‘ಮಹಾಪುರುಷ’, ಪ್ರಧಾನಿ ಮೋದಿ ‘ಯುಗಪುರುಷ’: ಉಪ ರಾಷ್ಟ್ರಪತಿ ಬಣ್ಣನೆ

    ಮುಂಬೈ: ಕಳೆದ ಶತಮಾನದ ‘ಮಹಾಪುರುಷ’ ಮಹಾತ್ಮ ಗಾಂಧಿ, ಈ ಶತಮಾನದ ‘ಯುಗಪುರುಷ’ ಪ್ರಧಾನಿ ನರೇಂದ್ರ ಮೋದಿ ಎಂದು ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಬಣ್ಣಿಸಿದ್ದಾರೆ.

    ಮಹಾತ್ಮ ಗಾಂಧಿಯವರು ಸತ್ಯಾಗ್ರಹ ಮತ್ತು ಅಹಿಂಸೆಯ ಮೂಲಕ ನಮ್ಮನ್ನು ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತಗೊಳಿಸಿದರು. ಭಾರತದ ಯಶಸ್ವಿ ಪ್ರಧಾನಿ ನರೇಂದ್ರ ಮೋದಿ ಅವರು ನಾವು ಯಾವಾಗಲೂ ಇರಬೇಕೆಂದು ಬಯಸಿದ ಹಾದಿಗೆ ನಮ್ಮನ್ನು ಕೊಂಡೊಯ್ದಿದ್ದಾರೆ ಎಂದು ಹೇಳಿದ್ದಾರೆ.

    ಜೈನ ಧರ್ಮಗುರು ಹಾಗೂ ತತ್ವಜ್ಞಾನಿ ಶ್ರೀಮದ್ ರಾಜಚಂದ್ರಜೀ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ನಿಮಗೆ ಒಂದು ವಿಷಯ ಹೇಳಲು ಬಯಸುತ್ತೇನೆ. ಕಳೆದ ಶತಮಾನದ ಮಹಾಪುರುಷ ಮಹಾತ್ಮಾ ಗಾಂಧಿ. ನರೇಂದ್ರ ಮೋದಿ ಈ ಶತಮಾನದ ಯುಗಪುರುಷ ಎಂದು ಹಾಡಿ ಹೊಗಳಿದ್ದಾರೆ.

    1867 ರಲ್ಲಿ ಗುಜರಾತ್‌ನಲ್ಲಿ ರಾಜ್‌ಚಂದ್ರಜಿ ಜನಿಸಿದರು. 1901 ರಲ್ಲಿ ನಿಧನರಾದರು. ಜೈನ ಧರ್ಮದ ಬೋಧನೆಗಳು ಮತ್ತು ಮಹಾತ್ಮ ಗಾಂಧಿಯವರಿಗೆ ಅವರ ಆಧ್ಯಾತ್ಮಿಕ ಮಾರ್ಗದರ್ಶನಕ್ಕಾಗಿ ಹೆಸರುವಾಸಿಯಾಗಿದ್ದಾರೆ ಎಂದು ಧನಕರ್‌ ಸ್ಮರಿಸಿದ್ದಾರೆ.

    ಇಬ್ಬರು ಮಹಾನ್ ವ್ಯಕ್ತಿಗಳಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಡುವೆ ಒಂದು ವಿಷಯ ಸಾಮಾನ್ಯವಾಗಿದೆ. ಅವರು ಶ್ರೀಮದ್ ರಾಜ್‌ಚಂದ್ರಜಿ ಅವರನ್ನು ಗೌರವದಿಂದ ಪ್ರತಿಬಿಂಬಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಈ ರಾಷ್ಟ್ರದ ಬೆಳವಣಿಗೆಯನ್ನು ವಿರೋಧಿಸುವ ಶಕ್ತಿಗಳು, ಈ ದೇಶದ ಉದಯವನ್ನು ಅರಗಿಸಿಕೊಳ್ಳದ ಶಕ್ತಿಗಳು ಒಂದಾಗುತ್ತಿವೆ. ದೇಶದಲ್ಲಿ ಏನಾದರೂ ಒಳ್ಳೆಯ ಘಟನೆಗಳು ನಡೆದಾಗ, ಅವರು ವಿಭಿನ್ನ ಕ್ರಮಕ್ಕೆ ಬರುತ್ತಾರೆ. ಇದು ಸಂಭವಿಸಬಾರದು ಎಂದು ಹೇಳಿಕೆ ನೀಡಿದ್ದಾರೆ.

    ಅಪಾಯ ತುಂಬಾ ದೊಡ್ಡದು. ನೀವು (ನಮ್ಮ) ಸುತ್ತಲೂ ನೋಡುವ ದೇಶಗಳು, ಅವರ ಇತಿಹಾಸಗಳು 300-500 ಅಥವಾ 700 ವರ್ಷಗಳಷ್ಟು ಹಳೆಯವು. (ಆದರೆ) ನಮ್ಮ ಇತಿಹಾಸವು 5,000 ವರ್ಷಗಳಷ್ಟು ಹಳೆಯದು ಎಂದಿದ್ದಾರೆ.

  • ಸ್ಯಾಂಡಲ್‍ವುಡ್ ನಟನನ್ನು ಕೊಲ್ಲಲು ಸುಪಾರಿ- ಠಾಣೆಗೆ ದೂರು ನೀಡಿದ ನಟ ಅರ್ಜುನ್ ದೇವ್

    ಸ್ಯಾಂಡಲ್‍ವುಡ್ ನಟನನ್ನು ಕೊಲ್ಲಲು ಸುಪಾರಿ- ಠಾಣೆಗೆ ದೂರು ನೀಡಿದ ನಟ ಅರ್ಜುನ್ ದೇವ್

    ಬೆಂಗಳೂರು: ಸ್ಯಾಂಡಲ್‍ವುಡ್ ನ `ಯುಗಪುರುಷ’ ಚಿತ್ರದ ನಾಯಕ ನಟನನ್ನು ಕೊಲ್ಲಲು ಸುಪಾರಿ ನೀಡಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಆಗಿರುವ ನಟ ಅರ್ಜುನ್ ದೇವ್ ರನ್ನು ಕೊಲ್ಲಲು ಕಾಶೀಫ್ ಎಂಬಾತ ಸುಪಾರಿ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಮನೆ ಮುಂದೆ ಕೊಲ್ಲಲು ಹೊಂಚು ಹಾಕಿ ಹೋಗಿದ್ದಾರೆ. ಹೀಗಾಗಿ ದಯವಿಟ್ಟು ನನಗೆ ರಕ್ಷಣೆ ನೀಡಿ ಅಂತ ಇದೀಗ ನಟ ಅರ್ಜುನ್ ದೇವ್ ರಕ್ಷಣೆ ಕೋರಿ ಪೊಲೀಸ್ ಠಾಣೆ ಮಟ್ಟಿಲೇರಿದ್ದಾರೆ. ಆದ್ರೆ ಯಾರು ಸುಪಾರಿ ಕೊಟ್ಟರು, ಯಾಕಾಗಿ ಸುಪಾರಿ ಕೊಟ್ಟರು ಅನ್ನೋದನ್ನು ನಟ ತಿಳಿಸಿಲ್ಲ. ಇದನ್ನೂ ಓದಿ: `ಯುಗಪುರುಷ’ ಚಿತ್ರದ ನಟನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಯತ್ನ

    ಈ ಹಿಂದೆ ಅರ್ಜುನ್ ದೇವ್ ಮೇಲೆ ಹಲ್ಲೆ ನಡೆದಿತ್ತು. ರಾಮನಗರ ತಾಲೂಕಿನ ಮಾಯಗಾನಹಳ್ಳಿ ಸಮೀಪ ಪಿತ್ರಾರ್ಜಿತ ಆಸ್ತಿ ವ್ಯಾಜ್ಯ ಸಂಬಂಧ ನ್ಯಾಯಾಲದ ವಿಚಾರಣೆಗೆ ನಟ ಅರ್ಜುನ್ ದೇವ್ ಬೆಂಗಳೂರಿನಿಂದ ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹೊರಟಿದ್ದರು. ಬೆಂಗಳೂರು-ಮೈಸೂರು ಹೆದ್ದಾರಿಯ ಎಸ್‍ಬಿಐ ಬ್ಯಾಂಕ್ ಪಕ್ಕದ ಕೋರ್ಟ್‍ನ ಮುಂಭಾಗದ ಗೇಟ್ ಸಮೀಪ ಕಾರು ನಿಲ್ಲಿಸುತ್ತಿದ್ದಂತೆ ಎರಡು ಬೈಕ್‍ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ತಂಡ ರಾಡ್‍ನಿಂದ ಹಲ್ಲೆಗೆ ಮುಂದಾಗಿದ್ದರು.

    ಸದ್ಯ ಕೊಲೆಗೆ ಸುಪಾರಿ ನೀಡಿದ ಪ್ರಕರಣ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • `ಯುಗಪುರುಷ’ ಚಿತ್ರದ ನಟನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಯತ್ನ

    `ಯುಗಪುರುಷ’ ಚಿತ್ರದ ನಟನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಯತ್ನ

    ರಾಮನಗರ: ಸ್ಯಾಂಡಲ್‍ವುಡ್‍ನ `ಯುಗಪುರುಷ’ ಚಿತ್ರದ ನಟ ಅರ್ಜುನ್ ದೇವ್ ಮೇಲೆ ದುಷ್ಕರ್ಮಿಗಳು ಹಲ್ಲೆಗೆ ಯತ್ನಸಿರುವ ಘಟನೆ ಇಂದು ರಾಮನಗರದಲ್ಲಿ ನಡೆದಿದೆ.

    ಜಮೀನು ವ್ಯಾಜ್ಯ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಹೊರಟಿದ್ದ ಸಂದರ್ಭದಲ್ಲಿ ನಟನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

    ರಾಮನಗರ ತಾಲೂಕಿನ ಮಾಯಗಾನಹಳ್ಳಿ ಸಮೀಪ ಪಿತ್ರಾರ್ಜಿತ ಆಸ್ತಿ ವ್ಯಾಜ್ಯ ಸಂಬಂಧ ಇಂದು ನ್ಯಾಯಾಲದ ವಿಚಾರಣೆಗೆ ನಟ ಅರ್ಜುನ್ ದೇವ್ ಬೆಂಗಳೂರಿನಿಂದ ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹೊರಟಿದ್ರು. ಬೆಂಗಳೂರು-ಮೈಸೂರು ಹೆದ್ದಾರಿಯ ಎಸ್‍ಬಿಐ ಬ್ಯಾಂಕ್ ಪಕ್ಕದ ಕೋರ್ಟ್‍ನ ಮುಂಭಾಗದ ಗೇಟ್ ಸಮೀಪ ಕಾರು ನಿಲ್ಲಿಸುತ್ತಿದ್ದಂತೆ ಎರಡು ಬೈಕ್‍ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳ ತಂಡ ರಾಡ್‍ನಿಂದ ಹಲ್ಲೆಗೆ ಮುಂದಾಗಿದ್ದಾರೆ.

    ಕಾರಿನ ಮುಂಭಾಗದ ಗ್ಲಾಸ್‍ಗೆ ರಾಡ್‍ನಿಂದ ಹೊಡೆದಿದ್ದು ಗ್ಲಾಸ್ ಜಖಂಗೊಂಡಿದೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ದುಷ್ಕರ್ಮಿಗಳನ್ನು ಹಿಡಿಯಲು ಮುಂದಾದಾಗ ಸ್ಥಳದಿಂದ ಪರಾರಿಯಾಗಿದ್ದಾರೆ. ಮತ್ತೋರ್ವ ದುಷ್ಕರ್ಮಿ ಲಾಂಗ್ ಹಿಡಿದಿದ್ದ ಎನ್ನಲಾಗ್ತಿದೆ.

    ಘಟನೆ ಸಂಬಂಧ ರಾಮನಗರದ ಐಜೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಟ ಅರ್ಜುನ್ ದೇವ್ ಅವರ ವಿಚಾರಣೆ ಮಾಡ್ತಿದ್ದಾರೆ.