Tag: ಯುನಿವರ್ಸಿಟಿ

  • ಮಹಿಳಾ ಶಿಕ್ಷಣಕ್ಕೆ ನಿಷೇಧ – ವಿದ್ಯಾರ್ಥಿನಿಯರಿಗೆ ಯುನಿವರ್ಸಿಟಿ ಪ್ರವೇಶ ಪರೀಕ್ಷೆಗೆ ಅವಕಾಶವಿಲ್ಲ ಎಂದ ತಾಲಿಬಾನ್

    ಮಹಿಳಾ ಶಿಕ್ಷಣಕ್ಕೆ ನಿಷೇಧ – ವಿದ್ಯಾರ್ಥಿನಿಯರಿಗೆ ಯುನಿವರ್ಸಿಟಿ ಪ್ರವೇಶ ಪರೀಕ್ಷೆಗೆ ಅವಕಾಶವಿಲ್ಲ ಎಂದ ತಾಲಿಬಾನ್

    ಕಾಬೂಲ್: ಮಹಿಳಾ ಶಿಕ್ಷಣಕ್ಕೆ (Women’s Education) ನಿಷೇಧ ಹೇರಿರುವ ತಾಲಿಬಾನ್ (Taliban) ಸರ್ಕಾರ ಇದೀಗ ಅಘ್ಘಾನಿಸ್ತಾನದಲ್ಲಿ (Afghanistan) ವಿಶ್ವವಿದ್ಯಾಲಯದ (University) ಪ್ರವೇಶ ಪರೀಕ್ಷೆಗೆ (Entrance Exam) ವಿದ್ಯಾರ್ಥಿನಿಯರು (Female Students) ಹಾಜರಾಗದಂತೆ ಸೂಚಿಸಿದೆ.

    ಫೆಬ್ರವರಿ ತಿಂಗಳಲ್ಲಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ. ಈ ನಡುವೆ ಇದೀಗ ವಿದ್ಯಾರ್ಥಿನಿಯರು ಯುನಿವರ್ಸಿಟಿ ಪ್ರವೇಶ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ತಾಲಿಬಾನ್ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಪ್ರಬಲ ಭೂಕಂಪ – 7 ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ

    ತಾಲಿಬಾನ್ ಶಿಕ್ಷಣ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ಸರ್ಕಾರ ಆದೇಶ ಹೊರಡಿಸುವವರೆಗೆ ಮಹಿಳಾ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಬರೆಯುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: `ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಶೈಲಿಯಲ್ಲಿ ಪತ್ನಿ ಕೊಲೆ – ಆರೋಪಿ ಪತಿಯಿಂದ ರೋಚಕ ರಹಸ್ಯ ಬಯಲು

    ಡಿಸೆಂಬರ್‌ನಲ್ಲಿ ತಾಲಿಬಾನ್ ಸರ್ಕಾರ ಮುಂದಿನ ಸೂಚನೆ ಬರುವವರೆಗೆ ಎಲ್ಲಾ ಮಹಿಳೆಯರಿಗೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಹಾಜರಾಗುವುದನ್ನು ನಿಷೇಧಿಸಿತ್ತು. ಅಫ್ಘಾನಿಸ್ತಾನದಲ್ಲಿ 6ನೇ ತರಗತಿಯ ನಂತರ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿನಿಯರ ಮೇಲೆ ಸಂಪೂರ್ಣ ನಿಷೇಧಕ್ಕೆ ತಾಲಿಬಾನ್ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನೆಗಳು ನಡೆದಿತ್ತು. ವಿದ್ಯಾರ್ಥಿನಿಯರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದರು.

    ತಾಲಿಬಾನ್‍ನ ಉನ್ನತ ಶಿಕ್ಷಣ ಸಚಿವಾಲಯ ಮಹಿಳಾ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಮೇಲೆ ಇತ್ತೀಚೆಗೆ ದಬ್ಬಾಳಿಕೆಯನ್ನು ಹೆಚ್ಚಿಸುತ್ತಿದ್ದು, ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣದ ಮೇಲೆ ನಿಷೇಧವನ್ನು ಹೇರಿದೆ. ಇದು ಅಂತಾರಾಷ್ಟ್ರೀಯವಾಗಿ ಭಾರೀ ಟೀಕೆಗೆ ಕಾರಣವಾಗಿದೆ. 2021ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಇಸ್ಲಾಮಿಕ್ ಕಾನೂನಿನ ಕಟ್ಟುನಿಟ್ಟಿನ ಕ್ರಮಗಳನ್ನು ವ್ಯಾಪಕವಾಗಿ ಜಾರಿಗೆ ತಂದಿದೆ. ಪ್ರಾರಂಭದಲ್ಲಿ ಮಧ್ಯಮ ಹಾಗೂ ಪ್ರೌಢಶಾಲೆಯಿಂದ ಹುಡುಗಿಯರನ್ನು ನಿಷೇಧಿಸಲಾಗಿತ್ತು. ಬಳಿಕ ಉದ್ಯೋಗದಿಂದ ಮಹಿಳೆಯರನ್ನು ನಿರ್ಬಂಧಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗಳೂರು ವಿವಿಯಲ್ಲಿ ಹೊಡೆದಾಟ- ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

    ಬೆಂಗಳೂರು ವಿವಿಯಲ್ಲಿ ಹೊಡೆದಾಟ- ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

    ಬೆಂಗಳೂರು: ಶುಕ್ರವಾರ ತಡರಾತ್ರಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಪಿಜಿ 2 ಹಾಸ್ಟೆಲ್ ನಲ್ಲಿ ಹುಟ್ಟುಹಬ್ಬದ ಕೇಕ್ ಕಟ್ ಮಾಡುವ ವೇಳೆ ಹೊಡೆದಾಡಿಕೊಂಡಿದ್ದು, ಹಲ್ಲೆ ಮಾಡಿದ ಪಿಹೆಚ್‍ಡಿ ಸೀನಿಯರ್ಸ್‍ಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಸ್ಟೆಲ್ ಮುಂದೆ ಉರಿ ಬಿಸಿಲಿನಲ್ಲೇ ಪ್ರತಿಭಟನೆ ನಡೆಸಿದ್ದಾರೆ.

    ಹಾಸ್ಟೆಲ್ ರೂಮ್ ನಲ್ಲಿ ಹುಟ್ಟುಹಬ್ಬ ಸೆಲಬ್ರೇಷನ್ ವೇಳೆ, ಸೀನಿಯರ್ಸ್ ಗುಂಪು ನೇರವಾಗಿ ನಮ್ಮ ರೂಮ್‍ಗೆ ನುಗ್ಗಿ ರಾಡ್ ನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಸೀನಿಯರ್ ಗಳ ಆಟಾಟೋಪ ಹೆಚ್ಚಾಗಿದೆ. ಯೂನಿವರ್ಸಿಟಿ ಕ್ಯಾಂಪಸ್‍ಗೆ ಕುಡಿದು ಬಂದು ಜೂನಿಯರ್ಸ್ ಗಳನ್ನು ಅವಾಚ್ಯ ಪದಗಳಿಂದ ನಿಂದಿಸುತ್ತಾರೆ ಎಂದು ಪಿಹೆಚ್‍ಡಿ ವಿದ್ಯಾರ್ಥಿಗಳ ಮೇಲೆ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

    ಘಟನೆ ಸಂಬಂಧ ಎರಡು ಬಣದ 8 ವಿದ್ಯಾರ್ಥಿಗಳನ್ನು ಜ್ಞಾನ ಭಾರತಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಪಿಜಿ ಹಾಸ್ಟೆಲ್ 2 ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆಯ ಸ್ವರೂಪ ಹೆಚ್ಚಾಗ್ತಿದ್ದಂತೆ ಸ್ಥಳಕ್ಕೆ ಬೆಂಗಳೂರು ವಿವಿಯ ಕುಲಪತಿ ವೇಣುಗೋಪಾಲ್ ಭೇಟಿ ನೀಡಿ, ವಿದ್ಯಾರ್ಥಿಗಳ ಮನವೊಲಿಕೆಗೆ ಪ್ರಯತ್ನಿಸಿದ್ರು. ಇದಕ್ಕೆ ಸೊಪ್ಪು ಹಾಕದ ವಿದ್ಯಾರ್ಥಿಗಳು ಕೂಗಾಟ ನಡೆದರು.

    ಘಟನೆಯ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ವಿವಿ ಕುಲಪತಿ, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ತೇವೆ ಎಂದು ಭರವಸೆ ನೀಡಿದರು. ಇದೇ ವೇಳೆ ಹಾಸ್ಟೆಲ್‍ನ ಊಟದಲ್ಲಿ ಹಲ್ಲಿ ಬಿದ್ದಿದೆ ಎಂದು ವಿದ್ಯಾರ್ಥಿಗಳು ಊಟವನ್ನು ಹೊರಗಿಟ್ಟು ಪ್ರತಿಭಟಿಸಿದರು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಫ್ರೀ ಕಾಶ್ಮೀರ ಪ್ಲೇಕಾರ್ಡ್ ಪ್ರದರ್ಶಿಸಿದವರ ಮೇಲೆ ದೂರು ದಾಖಲು

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಫ್ರೀ ಕಾಶ್ಮೀರ ಪ್ಲೇಕಾರ್ಡ್ ಪ್ರದರ್ಶಿಸಿದವರ ಮೇಲೆ ದೂರು ದಾಖಲು

    ಮೈಸೂರು: ಮೈಸೂರು ವಿವಿಯಲ್ಲಿ ಫ್ರೀ ಕಾಶ್ಮಿರ ಪ್ಲೇಕಾರ್ಡ್ ಪ್ರದರ್ಶನ ವಿಚಾರವಾಗಿ ಪಬ್ಲಿಕ್ ಟಿವಿ ವರದಿ ಬಿತ್ತರಿಸಿದ ನಂತರ ಮೈಸೂರು ಪೊಲೀಸರು ಎಚ್ಚೆತ್ತಿದ್ದಾರೆ. ಘಟನೆ ಬಗ್ಗೆ ಸ್ವಯಂ ಪ್ರೇರಿತ ದೂರು ದಾಖಲಗೆ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಸೂಚನೆ ನೀಡಿದ್ದಾರೆ.

    ಘಟನೆ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುತ್ತಿದ್ದಾರೆ. ಪ್ಲೇಕಾರ್ಡ್ ಪ್ರದರ್ಶನ ವಿಚಾರವಾಗಿ ಪ್ರತಿಭಟನೆ ಆಯೋಜಕರ ಮೇಲೆ ಈ ದೂರು ದಾಖಲಾಗಿದೆ. ಯಾವ ಸಂಘಟನೆಯ ಪ್ರತಿಭಟನೆಗೆ ಕರೆ ಕೊಡಲಾಗಿತ್ತು ಆ ಸಂಘಟನೆಯ ಮುಖ್ಯಸ್ಥರು ಹಾಗೂ ಸದಸ್ಯರ ಮೇಲೆ ದೂರು ದಾಖಲಾಗಿದೆ. ಜೊತೆಗೆ ಪ್ರತಿಭಟನೆಯಲ್ಲಿ ಭಾಗಿಯಾದವರ ಗುರುತು ಪತ್ತೆಗೆ ತನಿಖೆ ಆರಂಭಿಸಲಾಗಿದೆ.

    ಘಟನೆ ಸಂಪೂರ್ಣ ಮಾಹಿತಿ ಪಡೆದು ಪ್ಲೇಕಾರ್ಡ್ ಹಿಡಿದವರ ಗುರುತು ಪತ್ತೆಗೂ ಪೊಲೀಸರು ಮುಂದಾಗಿದ್ದಾರೆ. ಪ್ರತಿಭಟನೆಗೆ ಪೊಲೀಸ್ ಠಾಣೆಯಿಂದ ಆಯೋಜಕರು ಅನುಮತಿಯನ್ನೇ ಪಡೆದಿರಲಿಲ್ಲ. ಜಯಲಕ್ಷೀಪುರಂ ಠಾಣೆಯಲ್ಲಿ ನಿನ್ನೆಯ ಪ್ರತಿಭಟನೆಗೆ ಯಾವುದೇ ಅನುಮತಿ ಪಡೆದಿರಲಿಲ್ಲ. ಈ ಬಗ್ಗೆಯೂ ವಿವಿ ಕುಲಪತಿಗಳಿಂದ ಮಾಹಿತಿ ಪಡೆಯುತ್ತಿದ್ದೇವೆ. ಎಲ್ಲ ಮಾಹಿತಿ ಪಡೆದು ತನಿಖೆ ನಡೆಸುತ್ತೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ತಿಳಿಸಿದ್ದಾರೆ.

  • ಮೈಸೂರು ವಿವಿ ಕ್ಯಾಂಪಸ್‍ನಲ್ಲೂ ಪ್ರತ್ಯೇಕ ಕಾಶ್ಮೀರ ಕೂಗು

    ಮೈಸೂರು ವಿವಿ ಕ್ಯಾಂಪಸ್‍ನಲ್ಲೂ ಪ್ರತ್ಯೇಕ ಕಾಶ್ಮೀರ ಕೂಗು

    ಮೈಸೂರು: ಇಲ್ಲಿನ ವಿಶ್ವವಿದ್ಯಾನಿಲಯ ಮತ್ತೊಂದು ಜೆಎನ್‍ಯು ಆಗಲಿದೆಯಾ? ಇಂತಹದೊಂದು ಪ್ರಶ್ನೆ ಈಗ ಕಾಡುತ್ತಿದೆ. ಕಾರಣ ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನಾ ಮೆರವಣಿಗೆ ವೇಳೆ ಫ್ರೀ ಕಾಶ್ಮೀರ್ ಪೋಸ್ಟರ್ ಗಳು ರಾರಾಜಿಸಿವೆ.

    ಜೆಎನ್‍ಯುನಲ್ಲಿ ನಡೆದ ಹಲ್ಲೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಕಾಶ್ಮೀರ ಪ್ರತ್ಯೇಕತೆ ಬಗ್ಗೆ ವಿದ್ಯಾರ್ಥಿಗಳು ದನಿ ಎತ್ತಿದ್ದಾರೆ. ಪ್ರತಿಭಟನೆಯ ಮೂಲ ಉದ್ದೇಶ ಬಿಟ್ಟು ಫ್ರೀ ಕಾಶ್ಮೀರ್ ಬಗ್ಗೆ ವಿದ್ಯಾರ್ಥಿಗಳಿಂದ ಪೋಸ್ಟರ್ ಪ್ರದರ್ಶನದ ಹಿಂದೆ ಯಾರ ಕೈವಾಡವಿದೆ ಎಂಬ ಪ್ರಶ್ನೆ ಎದುರಾಗಿದೆ. ಮೈಸೂರು ವಿವಿಯ ವಿದ್ಯಾರ್ಥಿಗಳು ಜೆಎನ್‍ಯು ಮಾದರಿ ಅನುಸರಿಸುವುದಕ್ಕೆ ಮುಂದಾಗಿದ್ದಾರಾ ಎಂಬ ಪ್ರಶ್ನೆ ಕೂಡ ಮೂಡಿಸಿದೆ.

    ಜೆಎನ್‍ಯು ವಿವಿಯ ವಿದ್ಯಾರ್ಥಿಗಳ ಮೇಲಿನ ಖಂಡಿಸಿ ಎಬಿವಿಪಿ ವಿರುದ್ಧ ಪಂಜಿನ ಮೆರವಣಿಗೆ ನಡೆಸಲಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿಗಳ ಒಕ್ಕೂಟ, ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ಬಹುಜನ ವಿದ್ಯಾರ್ಥಿ ಸಂಘದಿಂದ ಈ ಪ್ರತಿಭಟನಾ ಮೆರವಣಿಗೆ ನಡೆದಿತ್ತು. ಎಬಿವಿಪಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

    ಮೈಸೂರು ವಿವಿ ಮಾನಸಗಂಗೋತ್ರಿಯ ಕ್ಲಾಕ್ ಟವರ್ ಬಳಿಯಿಂದ ಕುವೆಂಪು ಪ್ರತಿಮೆವರೆಗೆ ಪಂಜಿನ ಮೆರವಣಿಗೆ ನಡೆಯಿತು. ವಿವಿಗೆ ನುಗ್ಗಿ ದಾಂಧಲೆ ನಡೆಸಲಾಗಿದೆ. ಜೆಎನ್‍ಯು ವಿದ್ಯಾರ್ಥಿಗಳಲ್ಲದೇ ಉಪಧ್ಯಾಯರ ಮೇಲೂ ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದರು. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು. ಈ ಕೂಗಿನ ನಡುವೆ ಫ್ರೀ ಕಾಶ್ಮೀರ ಪೋಸ್ಟರ್ ಗಳನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪ್ರದರ್ಶಿಸಿರೋದು ಈಗ ಚರ್ಚೆಗೆ ಗ್ರಾಸವಾಗಿದೆ.