Tag: ಯುಪಿಎ ಸರ್ಕಾರ

  • ಯುಪಿಎ ಅವಧಿಯಲ್ಲಿ ಸಿಲಿಂಡರ್‌ನ ಬೆಲೆ ಜಾಸ್ತಿ ಇತ್ತು – ನಿಖಿಲ್ ಕುಮಾರಸ್ವಾಮಿ

    ಯುಪಿಎ ಅವಧಿಯಲ್ಲಿ ಸಿಲಿಂಡರ್‌ನ ಬೆಲೆ ಜಾಸ್ತಿ ಇತ್ತು – ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಯುಪಿಎ (UPA) ಸರ್ಕಾರದ ಅವಧಿಯಲ್ಲಿ ಗ್ಯಾಸ್ ಬೆಲೆ ಎಷ್ಟು ಇತ್ತು ಎಂದು ಕಾಂಗ್ರೆಸ್ (Congress) ಸ್ನೇಹಿತರು ಮೊದಲು ನೋಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿರುಗೇಟು ನೀಡಿದರು.ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಹಗರಣ – ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅರೆಸ್ಟ್

    ಗ್ಯಾಸ್ ಬೆಲೆ 50 ರೂ. ಹೆಚ್ಚಳಕ್ಕೆ ಕಾಂಗ್ರೆಸ್ ವಿರೋಧ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 2004ರಿಂದ 2014ರವರೆಗೆ ಕಾಂಗ್ರೆಸ್‌ನ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಸ್ನೇಹಿತರು ಗಣಿತ ಸರಿಯಾಗಿ ಓದಿಲ್ಲ ಅನ್ನಿಸುತ್ತದೆ. ಯುಪಿಎ ಅಧಿಕಾರದಲ್ಲಿದ್ದಾಗ ಒಂದು ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,241 ರೂ. ಇತ್ತು. ಈಗ ನರೇಂದ್ರ ಮೋದಿ (Narendra Modi) ಸರ್ಕಾರದಲ್ಲಿ 854 ರೂ. ಇದೆ. 50 ರೂ. ಜಾಸ್ತಿ ಮಾಡಿದ ಮೇಲೆಯೂ ಗ್ಯಾಸ್ ಬೆಲೆ 850 ರೂ. ಮಾತ್ರ ಇದೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಲಾರಿ, ಬೈಕ್, ಅಂಬುಲೆನ್ಸ್ ನಡುವೆ ಸರಣಿ ಅಪಘಾತ – ಬಿಎಸ್‌ಎಫ್ ಯೋಧ ಸ್ಥಳದಲ್ಲೇ ಸಾವು

  • ಆರ್‍ಎಸ್‍ಎಸ್ ಮುಖ್ಯಸ್ಥರಿಗೆ ಭಯೋತ್ಪಾದಕ ಹಣೆಪಟ್ಟಿ- ಬಾಂಬ್ ಸ್ಫೋಟದಲ್ಲಿ ಸಿಲುಕಿಸಲು ಹುನ್ನಾರ

    ಆರ್‍ಎಸ್‍ಎಸ್ ಮುಖ್ಯಸ್ಥರಿಗೆ ಭಯೋತ್ಪಾದಕ ಹಣೆಪಟ್ಟಿ- ಬಾಂಬ್ ಸ್ಫೋಟದಲ್ಲಿ ಸಿಲುಕಿಸಲು ಹುನ್ನಾರ

    ನವದೆಹಲಿ: ಆರ್‍ಎಸ್‍ಎಸ್ ಸಂಘಚಾಲಕ ಮೋಹನ್ ಭಾಗ್ವತ್ ಅವ್ರನ್ನ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಿಲುಕಿಸಲು 2014ರಲ್ಲಿ ಯುಪಿಎ ಸರ್ಕಾರ ರಾಷ್ಟ್ರೀಯ ತನಿಖಾ ತಂಡದ ಮೇಲೆ ಒತ್ತಡ ಹಾಕಿತ್ತು ಎಂದು ತಿಳಿದುಬಂದಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

     

    ಅಜ್ಮೀರ್ ಹಾಗೂ ಮೆಲೆಗಾಂವ್ ಬ್ಲಾಸ್ಟ್ ಬಳಿಕ ಹಿಂದೂ ಉಗ್ರರು ಎಂಬ ಪದವನ್ನ ಬಳಸಿದ್ದ ಯುಪಿಎ ಸರ್ಕಾರ, ಭಾಗವತ್ ಅವ್ರನ್ನ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸುವಂತೆ ಒತ್ತಡ ಹಾಕಿತ್ತು ಎನ್ನಲಾಗಿದೆ. 2014ರ ಫೆಬ್ರವರಿಯಲ್ಲಿ ಕಾರವಾನ್ ಮ್ಯಾಗಜೀನ್‍ಗೆ ಸಂದರ್ಶನ ನೀಡಿದ್ದ ಬಾಂಬ್ ಸ್ಫೋಟದ ಆರೋಪಿ ಸ್ವಾಮಿ ಅಸೀಮಾನಂದ, ಬಾಂಬ್ ಸ್ಫೋಟ ನಡೆಸಲು ಭಾಗವತ್ ಮುಖ್ಯ ಪ್ರಚೋದಕರು ಅಂತ ಹೇಳಿದ್ದರು.

     

    ಹೀಗಾಗಿ ಅಂದು ಗೃಹ ಸಚಿವರಾಗಿದ್ದ ಸುಶೀಲ್ ಕುಮಾರ್ ಶಿಂಧೆ ಹಾಗೂ ಕೆಲ ಕೆಂದ್ರ ಸಚಿವರು ಭಾಗವತ್ ಅವ್ರನ್ನ ಅಜ್ಮೀರ್ ಹಾಗೂ ಮಲೆಗಾಂವ್ ಬಾಂಬ್ ಸ್ಫೋಟದ ಪ್ರಕರಣದಲ್ಲಿ ವಿಚಾರಣೆ ನಡೆಸುವಂತೆ ಎನ್‍ಐಎ ಮೇಲೆ ಒತ್ತಡ ಹಾಕಿತ್ತು. ಆದ್ರೆ ಯುಪಿಎ ಸರ್ಕಾರದ ಒತ್ತಡಕ್ಕೆ ಮಣಿಯದಿದ್ದ ಎನ್‍ಐಎ, ಭಾಗವತ್ ವಿರುದ್ಧ ಯಾವುದೇ ಸಾಕ್ಷಿ ಇಲ್ಲದೇ ಇರೋದ್ರಿಂದ ಅವ್ರನ್ನ ವಿಚಾರಣೆ ನಡೆಸಲು ನಿರಾಕರಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಬಹಿರಂಗವಾಗಿರೋ ಮಾಹಿತಿಯನ್ನ ಒಪ್ಪುತ್ತೇನೆ. ಎಲ್ಲಾ ಮಾಹಿತಿಗಳು ಹೊರಗೆ ಬರಬೇಕು ಅಂತ ಹೇಳಿದ್ದಾರೆ.