Tag: ಯುಪಿ ಸರ್ಕಾರ

  • ಹೆಲ್ಮೆಟ್ ಹಾಕದಿದ್ರೆ ಪೆಟ್ರೋಲ್ ಇಲ್ಲ; ಸಾವು-ನೋವು ತಡೆಗೆ ಯುಪಿ ಸರ್ಕಾರ ಸಜ್ಜು

    ಹೆಲ್ಮೆಟ್ ಹಾಕದಿದ್ರೆ ಪೆಟ್ರೋಲ್ ಇಲ್ಲ; ಸಾವು-ನೋವು ತಡೆಗೆ ಯುಪಿ ಸರ್ಕಾರ ಸಜ್ಜು

    ಲಕ್ನೋ: ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ ಅಂತ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಸರ್ಕಾರ ಹೊಸ ರೂಲ್ಸ್ ಜಾರಿ ಮಾಡಿದೆ.

    ರಸ್ತೆ ಅಪಘಾತ ಕಡಿಮೆ ಮಾಡುವ ಮತ್ತು ದ್ವಿಚಕ್ರ ವಾಹನಗಳ ಅಪಘಾತದಿಂದ ಸಂಭವಿಸುವ ಸಾವು-ನೋವಿನ ಪ್ರಮಾಣ ಕಡಿಮೆ ಮಾಡಲು ಸಾರಿಗೆ ಇಲಾಖೆ ಈ ನೂತನ ಕ್ರಮ ಕೈಗೊಂಡಿದೆ.

    ಬೈಕ್ ಸವಾರ ಮಾತ್ರವಲ್ಲ, ಹಿಂಬದಿ ಸವಾರರೂ ಹೆಲ್ಮೆಟ್ ಧರಿಸಿರಬೇಕು. ಇಲ್ಲದಿದ್ದರೆ ಪೆಟ್ರೋಲ್ ಹಾಕಬೇಡಿ ಅಂತ ಉತ್ತರ ಪ್ರದೇಶದ ಎಲ್ಲಾ ಪೆಟ್ರೋಲ್ ಬಂಕ್‌ಗಳಿಗೆ ಸಾರಿಗೆ ಇಲಾಖೆ ಪತ್ರ ಬರೆದಿದೆ. ಅಲ್ಲದೇ, 75 ಡಿಸಿಗಳಿಗೆ ಈ ಬಗ್ಗೆ ನಿಗಾವಹಿಸುವಂತೆ ಆದೇಶಿಸಿದೆ.

    ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಪರಿಶೀಲನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ನಿರ್ದೇಶನಗಳನ್ನು ಇದು ಎತ್ತಿ ತೋರಿಸುತ್ತದೆ.

    ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 25,000-26,000 ಜೀವಗಳು ಬಲಿಯಾಗುತ್ತಿವೆ ಎಂದು ಮುಖ್ಯಮಂತ್ರಿ ಗಮನಿಸಿದ್ದರು.

  • ಶಿವ ಭಕ್ತರ ಮೇಲೆ ಹೂಮಳೆ ಸುರಿಸುತ್ತೀರಿ, ಮುಸ್ಲಿಮರ ಮನೆಗಳಿಗೆ ಬುಲ್ಡೋಜರ್‌ ಬಿಡ್ತೀರಿ: ಯುಪಿ ಸರ್ಕಾರದ ವಿರುದ್ಧ ಓವೈಸಿ ಕಿಡಿ

    ಶಿವ ಭಕ್ತರ ಮೇಲೆ ಹೂಮಳೆ ಸುರಿಸುತ್ತೀರಿ, ಮುಸ್ಲಿಮರ ಮನೆಗಳಿಗೆ ಬುಲ್ಡೋಜರ್‌ ಬಿಡ್ತೀರಿ: ಯುಪಿ ಸರ್ಕಾರದ ವಿರುದ್ಧ ಓವೈಸಿ ಕಿಡಿ

    ನವದೆಹಲಿ: ಶಿವ ಭಕ್ತರ (ಕನ್ವಾರಿಯಾಗಳಿಗೆ) ಮೇಲೆ ಹೆಲಿಕಾಪ್ಟರ್‌ಗಳಿಂದ ಹೂಮಳೆ ಸುರಿಸುತ್ತೀರಿ. ಆದರೆ ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ ಮನೆ ಕೆಡವುತ್ತೀರಿ ಎಂದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರದ ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ.

    ಸಂಸತ್‌ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ ಮಾಡಲು ತೆರಿಗೆದಾರರ ಹಣವನ್ನು ಬಳಸುತ್ತಿದ್ದೀರಿ. ತುಂಬಾ ಒಳ್ಳೆಯದು. ನಮ್ಮ ಮೇಲೂ ಸ್ವಲ್ಪ ಕರುಣೆ ತೋರಿ, ನಮ್ಮನ್ನೂ ಸಮಾನವಾಗಿ ಕಾಣಿ ಎಂದು ಹೇಳುತ್ತಿದ್ದೇವೆ. ಅವರ ಮೇಲೆ ಪುಷ್ಪವೃಷ್ಟಿ ಮಾಡುತ್ತೀರಿ. ನಮ್ಮ ಮನೆಗಳನ್ನು ಧ್ವಂಸ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಿಎಂಎಲ್‌ಎ ಅಡಿ ಬಂಧನ ಮಾಡಬಹುದು – ಇಡಿಗೆ ಸುಪ್ರೀಂನಿಂದ ಸಿಕ್ತು ಪರಮಾಧಿಕಾರ

    ಮೀರತ್‌ನ ಪೊಲೀಸ್ ಮುಖ್ಯಸ್ಥರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಶಿವ ಭಕ್ತರ ಮೇಲೆ ಹೂವಿನ ದಳಗಳನ್ನು ಸುರಿಸುವ ದೃಶ್ಯ ಹಾಗೂ ಹಾಪುರ್‌ನಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಕನ್ವಾರಿಯಾದ (ಶಿವ ಭಕ್ತರು) ಕಾಲುಗಳಿಗೆ ನೋವು ನಿವಾರಕ ತೈಲ ಹಚ್ಚುತ್ತಿರುವ ವೈರಲ್‌ ದೃಶ್ಯಗಳ ಬಗ್ಗೆ ಈ ವೇಳೆ ಓವೈಸಿ ಮಾತನಾಡಿದರು.

    ನೀವು ಅವರ ಪಾದಗಳಿಗೆ ಮಸಾಜ್ ಮಾಡುತ್ತಿರುವುದು ಒಳ್ಳೆಯದು. ಆದರೆ ನೀವು ಸಹರಾನ್‌ಪುರದಲ್ಲಿ ಮುಸ್ಲಿಂ ಯುವಕನನ್ನು ಕರೆದುಕೊಂಡು ಹೋಗಿ ಹೊಡೆಯುತ್ತೀರಿ. ತಾರತಮ್ಯ ಮಾಡಬೇಡಿ. ಸಂವಿಧಾನ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಮೂವರು ಸಹೋದರಿಯರು ಸಾವು

    Live Tv
    [brid partner=56869869 player=32851 video=960834 autoplay=true]

  • ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    ಎಲ್ಲ ಮದರಸಾಗಳಲ್ಲಿ ಯೋಗ ದಿನ ಆಚರಿಸಬೇಕು: ಯುಪಿ ಸರ್ಕಾರ ಆದೇಶ

    ಲಕ್ನೋ: ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಮದರಸಾ ಮಂಡಳಿಯೂ ರಾಜ್ಯದಲ್ಲಿ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು ಆದೇಶ ಪ್ರಕಟಿಸಿತ್ತು.

    ಈ ಆದೇಶವನ್ನು ಸೋಮವಾರ ಹೊರಡಿಸಲಾಗಿತ್ತು. ಆದೇಶದ ಪ್ರಕಾರ, ಮದರಸಾಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಗದ ಜ್ಞಾನವನ್ನು ನೀಡಲು ಜೂನ್ 21 ರಂದು ರಾಜ್ಯದ ಎಲ್ಲ ಮದರಸಾಗಳಲ್ಲಿ ಯೋಗ ಆಚರಿಸಬೇಕು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಅಗತ್ಯವಿರುವ ವ್ಯವಸ್ಥೆಗಳನ್ನು ನೋಡಿ ಸಹಕರಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ತಂದೆಯೊಂದಿಗಿನ ಸಂಬಂಧ ಕಡಿದುಕೊಳ್ಳಲು ಸಿದ್ಧವಾದ ಮಸ್ಕ್ ತೃತೀಯ ಲಿಂಗಿ ಮಗಳು

    Yogi wants madrasas in UP to record August 15 celebrations on camera -  India News

    ಯೋಗ ದಿನವನ್ನು ಗ್ರಾಮ ಪಂಚಾಯತ್‍ಗಳಿಂದ ಹಿಡಿದು ಜಿಲ್ಲಾ ಕೇಂದ್ರಗಳವರೆಗೆ ಎಲ್ಲ ಹಂತಗಳಲ್ಲಿ ಆಚರಿಸಲು ವ್ಯವಸ್ಥೆ ಮಾಡಲು ಯುಪಿ ಸರ್ಕಾರವು ಆಡಳಿತಕ್ಕೆ ಆದೇಶ ನೀಡಿತ್ತು.

    ಪ್ರಾರಂಭವಾಗಿದ್ದು ಹೇಗೆ?
    ಯೋಗದ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ‘ಅಂತರರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲಾಗುತ್ತಿದೆ. ಸೆಪ್ಟೆಂಬರ್ 2014 ರಲ್ಲಿ, ವಿಶ್ವಸಂಸ್ಥೆಯ 69ನೇ ಅಧಿವೇಶನದಲ್ಲಿ ಯೋಗ ದಿನವನ್ನು ಆಚರಿಸುವ ಪ್ರಸ್ತಾಪವನ್ನು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಿದರು. ನಂತರ 2014ರ ಡಿಸೆಂಬರ್ 11 ರಂದು, ಯುಎಸ್‍ಜಿಎ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲು ಘೋಷಿಸಿತು. ಇದನ್ನೂ ಓದಿ: ಅಂತರಾಷ್ಟ್ರೀಯ ಯೋಗ ದಿನ: ನಾಡಿನ ಜನತೆಗೆ ಯೋಗದ ಪ್ರಾಮುಖ್ಯತೆ ಸಾರಿದ ಗಣ್ಯರು 

    ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನದ ಧ್ಯೇಯವಾಕ್ಯ ‘ಯೋಗ ಫಾರ್ ಹ್ಯುಮಾನಿಟಿ’.

    Live Tv

  • ಕೆಎಸ್‍ಎಂಬಿ ಬ್ರಾಂಚ್‍ಗೆ ಜಾಗ ಗುರುತಿಸಿದ ಯುಪಿ ಸರ್ಕಾರ

    ಕೆಎಸ್‍ಎಂಬಿ ಬ್ರಾಂಚ್‍ಗೆ ಜಾಗ ಗುರುತಿಸಿದ ಯುಪಿ ಸರ್ಕಾರ

    ವಾರಣಾಸಿ: ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಸ್ಥಾಪನೆಗೆ ರೇಷ್ಮೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸರ್ಕಾರ ತಕ್ಷಣವೇ ಸ್ಪಂದಿಸಿದೆ.

    ವಾರಣಾಸಿಯ ಸಾರಂಗ್ ತಲಾಬ್ ಪ್ರದೇಶದಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಶಾಖೆ ತೆರೆಯಲು ಯುಪಿ ಸರ್ಕಾರ ಜಾಗ ನೀಡಲು ಒಪ್ಪಿದೆ. ಸಾರಂಗ್ ತಲಾಬ್ ಪ್ರದೇಶದಲ್ಲಿ ಕೆಎಸ್‍ಎಂಬಿ ಶಾಖೆ ತೆರೆಯಲು ಒಪ್ಪಿಗೆ ನೀಡಲಾಗಿದ್ದು, ಕಟ್ಟಡದ ಜಾಗಕ್ಕೆ ನಾರಾಯಣಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಬಟ್ಟೆ ಬಿಚ್ಚಿ ತಿರುಗುವವರಿಗೇನ್‌ ಗೊತ್ತು ಗಾಂಧಿ ಮೌಲ್ಯ: ಕಂಗನಾ ವಿರುದ್ಧ ರಮೇಶ್‌ ಕುಮಾರ್‌ ಕಿಡಿ

    ಕೆಎಸ್‍ಎಂಬಿ ಕಚೇರಿ ಹಾಗೂ ಗೋದಾಮಿಗೆ ನೀಡಲು ಉದ್ದೇಶಿತ ಕಟ್ಟಡ ಪರಿಶೀಲನೆ ನಡೆಸಿ, ಶೀಘ್ರವೇ ಯುಪಿ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಂಡು, ಕೂಡಲೇ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಇದನ್ನೂ ಓದಿ: ನಿಮ್ಮ ತಟ್ಟೆಯಲ್ಲಿ ಬಿದ್ದಿರುವ ಕತ್ತೆಯನ್ನು ತೆಗೆಯಿರಿ – ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

  • ಯುಪಿಯಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ

    ಯುಪಿಯಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿ

    – ಸಂಪುಟ ಸಭೆಯಲ್ಲಿ ನಿರ್ಧರಿಸಿ ಸುಗ್ರೀವಾಜ್ಞೆ

    ಲಕ್ನೋ: ಲವ್ ಜಿಹಾದ್ ಕುರಿತು ಹೆಚ್ಚು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತಂದಿದ್ದು, ಒಂದು ವೇಳೆ ಆರೋಪ ಸಾಬೀತಾದಲ್ಲಿ 5 ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸುವಂತೆ ಕಾನೂನು ರೂಪಿಸಲಾಗಿದೆ.

    ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಕೇಂದ್ರ ಕಾನೂನು ಸಚಿವಾಲಯದ ಬಳಿ ಈ ಕುರಿತು ಯುಪಿ ಸರ್ಕಾರ ಚರ್ಚಿಸಿತ್ತು. ಇದೀಗ ಸುಗ್ರೀವಾಜ್ಞೆ ಹೊರಡಿಸಿ ‘ಲವ್ ಜಿಹಾದ್’ ಕಾನೂನನ್ನು  ಜಾರಿಗೆ ತರಲಾಗಿದೆ.

    ಸುಗ್ರೀವಾಜ್ಞೆ ಹೊರಡಿಸುವ ಮುನ್ನ ಉತ್ತರ ಪ್ರದೇಶ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಿದ್ದು, ಸುಗ್ರೀವಾಜ್ಞೆ ಹೊರಡಿಸುವುದಕ್ಕೂ ಮುನ್ನ ನಾವು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ಪರೀಕ್ಷೆ ಮಾಡಿದ್ದೇವೆ. ಬಳಿಕ ಕಾನೂನು ಜಾರಿಗೆ ತಂದಿದ್ದೇವೆ. ವಿವಾಹಕ್ಕಾಗಿ ಬಲವಂತವಾಗಿ ಮತಾಂತರ ನಡೆಸಿದರೆ ಅಪರಾಧಿಗಳಿಗೆ ಒಂದರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಕಾನೂನಿನಲ್ಲಿ ತಿಳಿಸಿದೆ.

    ಮುಂದಿನ ವಿಧಾನ ಸಭೆ ಅಧಿವೇಶನದಲ್ಲಿ ‘ಲವ್ ಜಿಹಾದ್’ ಎದುರಿಸಲು ಕಾನೂನು ರೂಪಿಸಲಿದ್ದೇವೆ ಎಂಬ ಆಡಳಿತ ಪಕ್ಷದ ಹೇಳಿಕೆಗೆ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಲವ್ ಜಿಹಾದ್ ಬಿಜೆಪಿಯವರೇ ಹುಟ್ಟು ಹಾಕಿರುವ ಪದ ಎಂದು ವಾಗ್ದಾಳಿ ನಡೆಸಿದ್ದವು.

    ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಬಿಜೆಪಿ ನಾಯಕ ಕೈಲಾಶ್ ವಿಜಯ್‍ವರ್ಗಿಯಾ, ಲವ್ ಜಿಹಾದ್‍ನ ಅರ್ಥವನ್ನು ನಾವು ಅರಿಯಬೇಕಿದೆ. ಅಂತರ್ ಧರ್ಮ ವಿವಾಹಗಳ ಹಿಂದಿನ ಪಿತೂರಿಯನ್ನು ಅರಿತು ಕಾನೂನು ರೂಪಿಸಲಾಗಿದೆ. ಪ್ರೀತಿ, ಪ್ರೇಮ ಹಿಂದಿನಿಂದಲೂ ಇದೆ. ಅದು ಧರ್ಮ ಅಥವಾ ಜಾತಿಯನ್ನು ನೋಡುವುದಿಲ್ಲ. ಆದರೆ ಯಾರಾದರೂ ಮತಾಂತರದ ಉದ್ದೇಶದಿಂದ ಮತ್ತೊಬ್ಬರನ್ನು ಪ್ರೀತಿಸಿ ಮದುವೆಯಾದರೆ ಅದು ತಪ್ಪು. ಇದಕ್ಕಾಗಿ ಕಾನೂನು ರೂಪಿಸಲಾಗಿದೆ ಎಂದು ವಿವರಿಸಿದ್ದಾರೆ.

  • ವಲಸೆ ಕಾರ್ಮಿಕರ ಸ್ಥಳಾಂತರ – ಮುಂದುವರಿದ ‘ಕೈ-ಕಮಲ’ ತಿಕ್ಕಾಟ

    ವಲಸೆ ಕಾರ್ಮಿಕರ ಸ್ಥಳಾಂತರ – ಮುಂದುವರಿದ ‘ಕೈ-ಕಮಲ’ ತಿಕ್ಕಾಟ

    – ಸಾವಿರ ಬಸ್ಸುಗಳಿಗೆ ಅವಕಾಶ ನೀಡದ ಯುಪಿ ಸರ್ಕಾರ
    – ಕಾಂಗ್ರೆಸ್‍ನಿಂದ 4 ಕೋಟಿ 80 ಲಕ್ಷ ಖರ್ಚು

    ನವದೆಹಲಿ: ವಲಸೆ ಕಾರ್ಮಿಕರ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ತಿಕ್ಕಾಟ ಮುಂದುವರಿದಿದೆ. ವಲಸೆ ಕಾರ್ಮಿಕರ ಕರೆತರಲು ಕಾಂಗ್ರೆಸ್ ನಿಯೋಜಿಸಿರುವ 1,000 ಬಸ್ಸುಗಳಿಗೆ ಉತ್ತರ ಪ್ರದೇಶ ಸರ್ಕಾರ ಪರವಾನಿಗೆ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

    ಗಡಿ ಭಾಗದಲ್ಲಿ ಬಸ್ಸುಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಮಂಗಳವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಯುಪಿ ಸರ್ಕಾರ ಕೂಡಾ ಒಪ್ಪಿಗೆ ಸೂಚಿಸಿತ್ತು, ಆದರೆ ಇಂದು ಗಡಿ ಭಾಗದಲ್ಲಿ ಮಾತ್ರ ಉತ್ತರಪ್ರದೇಶ ಪೋಲಿಸರು ಬಸ್ಸುಗಳಿಗೆ ದಾಖಲೆಗಳಿಲ್ಲದ ಕಾರಣ ಗಡಿ ಪ್ರವೇಶಕ್ಕೆ ಅವಕಾಶ ನೀಡಿಲ್ಲ.

    ಬಸ್ಸುಗಳಿಗೆ ಅನುಮತಿ ನೀಡಿ ಎಂದು ಗಡಿಭಾಗದಲ್ಲಿ ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಅವರನ್ನು ಎಳೆದೊಯ್ದು ಘಟನೆಯೂ ನಡೆಯಿತು. ಈ ಬಗ್ಗೆಯೂ ಪ್ರಿಯಾಂಕಾ ಗಾಂಧಿಯ ಕಾರ್ಯದರ್ಶಿ ಸಂದೀಪ್ ಸಿಂಗ್ ಖಂಡಿಸಿದ್ದಾರೆ. ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಟೀಕಿಸಿದ್ದಾರೆ.

    ಉತ್ತರಪ್ರದೇಶ ಸರ್ಕಾರದ ಧೋರಣೆಗೆ ಎಐಸಿಸಿ ಕಾರ್ಯದರ್ಶಿ ರೋಹಿತ್ ಚೌದ್ರಿ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತಿದಿನ ಬಸ್‍ವೊಂದಕ್ಕೆ 16 ಸಾವಿರ ಬಾಡಿಗೆ ನೀಡಲಾಗುತ್ತಿದೆ. ಗಡಿ ದಾಟಲಾಗದೇ 1,000 ಬಸ್ಸುಗಳು ನಿಂತಲ್ಲೇ ನಿಂತಿದ್ದು, ಕಾಂಗ್ರೆಸ್ ಈವರೆಗೂ 4 ಕೋಟಿ 80 ಲಕ್ಷ ಹಣ ಖರ್ಚು ಮಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

    ಕಾಂಗ್ರೆಸ್ ಜನರಿಗೆ ಆಹಾರ ಮತ್ತು ಬಸ್ಸುಗಳ ವ್ಯವಸ್ಥೆ ಮಾಡುತ್ತಿದೆ. ಇದನ್ನು ಎಲ್ಲಾ ಸರ್ಕಾರಗಳು ಸ್ವಾಗತಿಸಬೇಕು ಮತ್ತು ಗಡಿಯಲ್ಲಿ ಅನುಮತಿಸಬೇಕು, ಅದನ್ನು ಬಿಟ್ಟು ನಾಯಕರನ್ನು ಬಂಧಿಸುವ ಕೀಳು ಮಟ್ಟದ ರಾಜಕೀಯ ಮಾಡಬಾರದು ಎಂದು ರಾಜಸ್ಥಾನ ಡಿಸಿಎಂ ಸಚಿನ್ ಪೈಲಟ್ ಯುಪಿ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.

  • ಸರ್ಕಾರಿ ಅಧಿಕಾರಿಗಳು ಯಾರಿಂದಲೂ ಗಿಫ್ಟ್ ಪಡೆಯುವಂತಿಲ್ಲ: ಯೋಗಿ ಆದಿತ್ಯನಾಥ್

    ಸರ್ಕಾರಿ ಅಧಿಕಾರಿಗಳು ಯಾರಿಂದಲೂ ಗಿಫ್ಟ್ ಪಡೆಯುವಂತಿಲ್ಲ: ಯೋಗಿ ಆದಿತ್ಯನಾಥ್

    ಲಕ್ನೋ: ರಾಜ್ಯ ಸರ್ಕಾರದ ಯಾವುದೇ ಅಧಿಕಾರಿ ಯಾರಿಂದಲೂ ಉಡುಗೊರೆಗಳನ್ನು ಪಡೆಯುವಂತಿಲ್ಲ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

    ಸಚಿವ ಸಂಪುಟ ಸಭೆಗಳಲ್ಲಿ ಮೊಬೈಲ್ ನಿಷೇಧ, ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ಹಾಜರಾಗುವುದು ಸೇರಿದಂತೆ ವಿವಿಧ ನಿಯಮಗಳನ್ನು ಅಧಿಕಾರಿಗಳ ಮೇಲೆ ಹೇರಿದ್ದರು. ಇದೀಗ ಯಾರಿಂದಲೂ, ಯಾವುದೇ ರೀತಿಯ ಉಡುಗೊರೆಗಳನ್ನು ಪಡೆಯುವಂತಿಲ್ಲ ಎಂದು ಯುಪಿ ಸರ್ಕಾರದ ಅಧೀನ ಕಾರ್ಯದರ್ಶಿ ಮಹೇಶ್ ಗುಪ್ತಾ ಸುತ್ತೋಲೆ ಹೊರಡಿಸಿದ್ದಾರೆ.

    ಉಡುಗೊರೆಗಳೊಂದಿಗೆ ಯಾವುದೇ ಸರ್ಕಾರಿ ವ್ಯಕ್ತಿ ಕಾರ್ಯದರ್ಶಿಗಳ ಕಚೇರಿಯನ್ನು ಪ್ರವೇಶಿಸುವಂತಿಲ್ಲ. ಅಲ್ಲದೆ, ಉನ್ನತ ಅಧಿಕಾರಿಗಳ ಅನುಮತಿ ಇಲ್ಲದೆ, ಯಾವುದೇ ಉಡುಗೊರೆಗಳನ್ನು ಸ್ವೀಕರಿಸುವಂತಿಲ್ಲ ಎಂದು ಸುತ್ತೋಲೆಯಲ್ಲಿ ಆದೇಶಿಸಲಾಗಿದೆ.

    ಐಎಎಸ್ ಅಧಿಕಾರಿಗಳು ಉಡುಗೊರೆಗಳನ್ನು ತಮ್ಮ ಮನೆಗೆ ಸಾಗಿಸುತ್ತಾರೆ, ಸಿಹಿಯನ್ನು ಕಚೇರಿಯಲ್ಲಿ ಪಡೆಯುತ್ತಾರೆ. ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದು, ದುಬಾರಿ ಬೆಲೆ ಬಾಳುವ ವಸ್ತುಗಳು ಅಧಿಕಾರಿಗಳ ಮನೆ ತಲುಪಿದರೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಹಲವು ವರ್ಷಗಳಿಂದ ಸರ್ಕಾರದ ಅಧಿಕಾರಿಗಳು ಲಂಚದ ರೂಪದಲ್ಲಿ ಗಿಫ್ಟ್ ಗಳನ್ನು ಪಡೆಯುತ್ತಿದ್ದರು. ಹೊಸ ವರ್ಷದ ಸಂದರ್ಭದಲ್ಲಿ ಕ್ಯಾಲೆಂಡರ್, ಸ್ವೀಟ್ ಹಾಗೂ ದೀಪಾವಳಿ, ಹೋಳಿಯಂತಹ ಹಬ್ಬ ಹರಿದಿನಗಳ ಸಂದರ್ಭದಲ್ಲಿ, ಅಲ್ಲದೆ, ಮದುವೆ ಸಂದರ್ಭದಲ್ಲಿ ಬೆಲೆ ಬಾಳುವ ಗಿಫ್ಟ್ ಗಳನ್ನು ಪಡೆಯುತ್ತಿದ್ದರು. ಇದೀಗ ಕಾರ್ಯದರ್ಶಿಗಳ ಕಚೇರಿಯಲ್ಲಿ ಯಾವುದೇ ರೀತಿಯ ಗಿಫ್ಟ್ ಗಳನ್ನು ನಿಷೇಧಿಸಲಾಗಿದೆ.

    ಈ ಹಿಂದೆ ಸರ್ಕಾರಿ ಕಚೇರಿ ಆವರಣದಲ್ಲಿ ಬಂದೂಕುಗಳನ್ನು ತರದಂತೆ ಹಾಗೂ ಭದ್ರತಾ ಸಿಬ್ಬಂದಿಗಳು ತಮ್ಮ ಆಯುಧವನ್ನು ಗೇಟ್ ಬಳಿಯೇ ಇಡುವಂತೆ ಆದೇಶಿಸಿದ್ದರು. ಅಲ್ಲದೆ, ಸರ್ಕಾರಿ ಕಚೇರಿ ಅವರಣದಲ್ಲಿ ಅಧಿಕಾರಿಗಳು ಗುಟ್ಕಾ, ಪಾನ್ ಜಗಿಯುವುದನ್ನು ನಿಷೇಧಿಸಿದ್ದರು. ನಿಯಮ ಉಲ್ಲಂಘನೆಯಾದಲ್ಲಿ 500 ರೂ. ದಂಡ ವಿಧಿಸುವಂತೆ ಸುತ್ತೋಲೆ ಹೊರಡಿಸಲಾಗಿತ್ತು.

    ಈ ಹಿಂದೆ ಅಧಿಕೃತ ಸಭೆಯಲ್ಲಿ ಮೊಬೈಲ್ ಫೋನ್ ಬಳಸದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿವರಿಗೆ ಸೂಚನೆ ನೀಡಿದ್ದಾರೆ. ಚರ್ಚೆಯಲ್ಲಿ ಸಚಿವರು ಭಾಗಿಯಾಗುತ್ತಿದ್ದಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಮೊಬೈಲ್‍ನಿಂದ ಉಂಟಾಗುವ ಅಡಚಣೆ ತಡೆಯುವ ನಿಟ್ಟಿಯಲ್ಲಿ ಯೋಗಿ ಆದಿತ್ಯನಾಥ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಈ ಆದೇಶವು ಕ್ಯಾಬಿನೆಟ್ ಸಭೆಗೂ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿಗಳ ಹಿರಿಯ ಕಾರ್ಯದರ್ಶಿಯೊಬ್ಬರು ತಿಳಿಸಿದ್ದರು.

    ಈ ಮೊದಲು ಸಭೆಗೆ ಮೊಬೈಲ್ ಫೋನ್ ತರಲು ಮಂತ್ರಿಗಳಿಗೆ ಅವಕಾಶವಿತ್ತು. ಆದರೆ ಸೈಲೆಂಟ್ ಮೂಡ್‍ನಲ್ಲಿ ಇಡಬೇಕು, ಇಲ್ಲವೆ ಸ್ವಿಚ್‍ಆಫ್ ಮಾಡಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ ಈಗ ಸಭೆಗೂ ಮುನ್ನ ಕೌಂಟರ್ ನಲ್ಲಿ ಮೊಬೈಲ್ ಇಟ್ಟು ಟೋಕನ್ ಪಡೆಯಬೇಕು. ಸಭೆಯ ಬಳಿಕ ಟೋಕನ್ ನೀಡಿ ತಮ್ಮ ತಮ್ಮ ಮೊಬೈಲ್ ಪಡೆಬೇಕು ಎನ್ನುವ ಸೂಚನೆಯನ್ನು ಯೋಗಿ ಆದಿತ್ಯನಾಥ್ ನೀಡಿದ್ದಾರೆ ಎನ್ನಲಾಗಿದೆ.